KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಸುದ್ದಿಗಳು News

Posted by vidyamaana on 2024-07-24 17:11:55 |

Share: | | | | |


KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪ ಸವಳಂಗ ಚಿನ್ನಿಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಕೆಎಸ್‌ಆರ್‌ಟಿಸಿ ಬಸ್ಸು ಹಾನಗಲ್‌ನಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತುಎನ್ನಲಾಗಿದೆ.

ಕ್ರೈಸ್ತ ಧರ್ಮಗುರು ಇದ್ದ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು. ಚಿನ್ನಿಕಟ್ಟೆ ಬಳಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶಿಕಾರಿಪುರ ಧರ್ಮಕೇಂದ್ರದ ಧರ್ಮಗುರು ಆಂಥೋಣಿ ಪೀಟರ್‌ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ನ್ಯಾಮತಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

 Share: | | | | |


ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ. 6ರಂದು ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

Posted by Vidyamaana on 2024-05-05 16:14:09 |

Share: | | | | |


ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ. 6ರಂದು ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ. 6ರಂದು ನಡೆಯಲಿರುವ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮೇ. 5ರಂದು ಹಸಿರು ಹೊರೆ ಕಾಣಿಕೆ ಸಮರ್ಪಣೆ ಮತ್ತು ತುಲಾಭಾರ ಸೇವೆ ನಡೆಯಿತು.‌ ಮೇ. 5ರಂದು ಬೆಳಿಗ್ಗೆ ದೇವಳದಲ್ಲಿ ನಿತ್ಯ ಮಹಾಪೂಜೆ ನಡೆಯಿತು. ನಂತರ ಶಾಂತಿನಗರ ಪೂಜಾ ಮೈದಾನದಿಂದ ಭಜನೆಯೊಂದಿಗೆ ಮೆರವಣಿಗೆ ಮೂಲಕ ಸಾಗಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ ಸಮರ್ಪಿಸಲಾಯಿತು. ಬಳಿಕ ತುಲಾಭಾರ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಪ್ರಸಾದ ವಿತರಣೆ ನಡೆಯಿತು. ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ಆಡಳಿತ ಮೊಕ್ತೇಸರ ರಾಜೇಶ್ ಶಾಂತಿನಗರ, ನಿಕಟಪೂರ್ವ ಆಡಳಿತ ಮೊಕ್ತೇಸರ ಯು‌.ಜಿ.ರಾಧ, ಕೋಡಿಂಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಸಹಿತ ಹಲವರು ಭಾಗವಹಿಸಿದ್ದರು.‌ 

60ರ ಹರೆಯದ ಮಹಿಳೆ ಮೇಲೆ ಪದೇ ಪದೇ ಅತ್ಯಾಚಾರ ಆರೋಪ: ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲು

Posted by Vidyamaana on 2024-05-11 10:16:42 |

Share: | | | | |


60ರ ಹರೆಯದ ಮಹಿಳೆ ಮೇಲೆ ಪದೇ ಪದೇ ಅತ್ಯಾಚಾರ ಆರೋಪ: ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲು

ಮೈಸೂರು:ಮೈಸೂರಿನ ಕೆ.ಆರ್.ನಗರದ ವೃದ್ಧೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮೂರನೇ ಪ್ರಕರಣ ದಾಖಲಾಗಿದೆ.

ಮೈಸೂರಿನ ಹುಣಸೂರು ತಾಲೂಕಿನ ಕಾಳೇನಹಳ್ಳಿಯ ತೋಟದ ಮನೆಯಲ್ಲಿ ಯುವತಿಯ ಅಪಹರಣಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ ರೇವಣ್ಣ ಅವರ ತಂದೆ ಹಾಗೂ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಈಗಾಗಲೇ ಬಂಧಿಸಲಾಗಿದೆ.

ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋರವರಿಗೆ ಡಾಕ್ಟರೇಟ್ ಪದವಿ

Posted by Vidyamaana on 2024-02-20 07:33:57 |

Share: | | | | |


ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋರವರಿಗೆ ಡಾಕ್ಟರೇಟ್ ಪದವಿ

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋರವರಿಗೆ ರಾಜಸ್ಥಾನ ಜೆ.ಜೆ.ಟಿ ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೊರವರು ಡಾ.ಬಾಪು ನರಸಿಂಗ ಚೌಗುಲೆರವರ ಮಾರ್ಗದರ್ಶನದಲ್ಲಿ ದ.ಕ ಜಿಲ್ಲೆಯ ಜನರ ಮನರಂಜನಾ ಚಟುವಟಿಕೆಗಳು ಮತ್ತು ಕೋವಿಡ್ 19 ಸಾಂಕ್ರಾಮಿಕ ಸಮಯದಲ್ಲಿ ಅವರ ಬಿಡುವಿನ ವೇಳೆಯ ಚಟುವಟಿಕೆಗಳು (A Study on the Recreational Activities of People In Dakshina Kann

non

a District and their leisure time activities during Covid-19 Pandamic)"ಕುರಿತಾಗಿ ಮಂಡಿಸಿದ ಮಹಾ ಅಧ್ಯಯನ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಲಭಿಸಿದೆ. ಎಲ್ಯಾಸ್ ಪಿಂಟೋರವರು ಅಣ್ಣಾಮಲೈ ವಿಶ್ವವಿದ್ಯಾಲಯದಲ್ಲಿ ಎಂ.ಫಿಲ್ ಪದವಿಯನ್ನು, ಮೈಸೂರು ವಿಶ್ವವಿದ್ಯಾಲಯದಲ್ಲಿ ದ್ವಿತೀಯ ರ್ಯಾಂಕಿನೊಂದಿಗೆ ಎಂ.ಪಿ.ಎಡ್ ಪದವಿಯನ್ನು ಗಳಿಸಿದ್ದು ಮಾತ್ರವಲ್ಲ ಪ್ರತಿಷ್ಠಿತ ಕೆ.ಎಸ್.ಇ.ಟಿ ಪರೀಕ್ಷೆಯನ್ನು ಪೂರ್ಣಗೊಳಿಸಿರುತ್ತಾರೆ. ಎಲ್ಯಾಸ್ ಪಿಂಟೋರವರು ಯೋಗದ ಆಯಾಮಗಳು ಮತ್ತು ಆರೋಗ್ಯಕರ ಜೀವನ ಎಂಬ ಬಗ್ಗೆ ಪುಸ್ತಕವನ್ನು ಬರೆದಿದ್ದಾರೆ ಜೊತೆಗೆ ಖಿನ್ನತೆಗೆ ಯೋಗ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಯೋಗ ಎಂಬ ಪುಸ್ತಕವೂ ಪ್ರಕಟವಾಗಿದೆ. ಇದರೊಂದಿಗೆ 3 ಅಂತರಾಷ್ಟ್ರೀಯ ಸೆಮಿನಾರ್ ಗಳು 4 ರಾಷ್ಟ್ರೀಯ ವಿಚಾರ ಸಂಕಿರಣಗಳು, ಹಲವಾರು ಕಾರ್ಯಾಗಾರಗಳಲ್ಲಿ ಭಾಗವಹಿಸಿರುತ್ತಾರೆ.


ಎಲ್ಯಾಸ್ ಪಿಂಟೋರವರು ಪೂರ್ವ ಮತ್ತು ಪಾಶ್ಚಿಮಾತ್ಯ ನೃತ್ಯ ಸ್ಪರ್ಧೆಯಲ್ಲಿ 5 ಬಾರಿ ರಾಜ್ಯ ಮಟ್ಟದ ವಿಜೇತರಾಗಿ, ಜಿಲ್ಲಾ ಮಟ್ಟದ ಫಿಲ್ಮ ಡ್ಯಾನ್ಸ್ ಸ್ಪರ್ಧೆಯಲ್ಲಿ 10 ಬಾರಿ ವಿಜೇತರಾಗಿ, ಜಿಲ್ಲೆಯಲ್ಲಿ 1990 ರಿಂದ 2000ರ ವರಗೆ ನಂಬರ್‌ವನ್ ಡ್ಯಾನ್ಸ್ ಗ್ರೂಪ್ ಪಿಂಟೋ ಬ್ರದರ್ಸ್ ಇದರ ಸಂಯೋಜಕರಾಗಿ ಮನ ಸೆಳೆದಿದ್ದರು.

ಪುತ್ತೂರಿನಲ್ಲಿ ಬಿಜೆಪಿ ಗೆಲುವಿನ ಆಶೆಗೆ ಬಲ ತುಂಬಿದ ಯೋಗಿ ಭೇಟಿ

Posted by Vidyamaana on 2023-05-06 10:27:51 |

Share: | | | | |


ಪುತ್ತೂರಿನಲ್ಲಿ ಬಿಜೆಪಿ ಗೆಲುವಿನ ಆಶೆಗೆ ಬಲ ತುಂಬಿದ ಯೋಗಿ ಭೇಟಿ

ಪುತ್ತೂರು : ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುತ್ತೂರಿಗೆ ಆಗಮಿಸಿದ್ದು, ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ. ದೇವಸ್ಥಾನದ ಬಳಿಯಿಂದ ರೋಡ್‌ ಶೋ ಆರಂಭಗೊಳಿಸಿದರು.ಮೊಟ್ಟೆತ್ತಡ್ಕ ಹೆಲಿಪ್ಯಾಡ್‌ ನಿಂದ ವಾಹನದ ಮೂಲಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಯೋಗಿ ಆದಿತ್ಯನಾಥ್‌ ಆಗಮಿಸಿ ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.ದೇವಳದ ಬಳಿ ಮತ್ತು ರಸ್ತೆ ಇಕ್ಕೆಲಗಳಲ್ಲಿ ಯೋಗಿ ನೋಡಲು ಜನ ಸಲು ಗಟ್ಟಿ ನಿಂತಿದ್ದು, ಯೋಗಿ ಜನತೆಯತ್ತ ಕೈ ಬೀಸಿ ಸಂಭ್ರಮಿಸಿದ್ದಾರೆ

ಪಾಣಾಜೆ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಪುಸ್ತಕ ಯೂನಿಫಾರಂ ವಿತರಣೆ

Posted by Vidyamaana on 2023-05-31 14:38:38 |

Share: | | | | |


ಪಾಣಾಜೆ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್  ಪುಸ್ತಕ  ಯೂನಿಫಾರಂ ವಿತರಣೆ

ಪುತ್ತೂರು: ಗಡಿಗ್ರಾಮದ ಸರಕಾರಿ ಶಾಲೆಗಳ ಅಭಿವೃದ್ದಿಗೆ ವಿಶೆಷ ಒತ್ತು ನೀಡಲಾಗುವುದು ಮತ್ತು ಗಡಿಗ್ರಾಮದ ಸರಕಾರಿ ಶಾಲೆಗಳನ್ನು ಉಳಿಸುವಲ್ಲಿ , ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ಪಾಣಾಜೆ ಸರಕಾರಿ ಹಿ ಪ್ರಾ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ದಾನಿಯೊಬ್ಬರು ನೀಡಿದ ಶಾಲಾ ಬ್ಯಾಗ್ ಮತ್ತು ಸರಕಾರದಿಂದ ನೀಡಲಾಗುವ ಯುನಿಫಾರಂ ಅನ್ನು ವಿತರಿಸಿ ಮಾತನಾಡಿದರು.

ಪಾಣಾಜೆ ಶಾಲೆ ಶತಮಾನವನ್ನು ಕಂಡಿದ್ದು ಇಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿಲ್ಲ. ಶಾಲಾ ಕಟ್ಟಡದ ಕೊರತೆ ಮತ್ತು ಶೌಚಾಲಯದ ಕೊರತೆ ಇರುವ ಬಗ್ಗೆ ಪೋಷಕರು ಶಾಸಕರ ಗಮನಕ್ಕೆ ತಂದರು. ಪೀಠೋಪಕರಣಗಳ ಕೊರತೆ ಮತ್ತು ಹಾಲ್‌ಗಳ ಕೊರತೆಯಿಂದ ಮಕ್ಕಳಿಗೆ ಊಟ ಮಾಡಲು ಸೂಕ್ತ ಸ್ಥಳವಕಾಶದ ಕೊರತೆಯಿರುವ ಬಗ್ಗೆಯೂ ಶಾಸಕರಲ್ಲಿ ಪೋಷಕರು ತಿಳಿಸಿದರು. ಸರಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವ ಕಾರಣಕ್ಕೆ ಪುತ್ತೂರಿನ ಹಾರಾಡಿ, ಕೆಯ್ಯೂರು ಕೆಪಿಎಸ್ ಸ್ಕೂಲ್, ಕುಂಬ್ರ ಕೆಪಿಎಸ್ ಸ್ಕೂಲ್ ಸೇರಿದಂತೆ ತಾಲೂಕಿನ ವಿವಿಧ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ ಎಂದು ಹೇಳಿದ ಶಾಸಕರು ಮಕ್ಕಳನ್ನು ಸರಕಾರಿ ಶಾಲೆಗೆ ಕಳುಹಿಸುವ ಮೂಲಕ ಶಾಲೆಯನ್ನು ಉಳಿಸಿಕೊಳ್ಳುವ ಕೆಲಸವನ್ನು ನಾವು ಮಾಡಬೇಕಿದೆ ಎಂದು ಹೇಳಿದರು.

ವಿಶೇಷ ಅನುದಾನ

ಪಾಣಾಜೆ ಶಾಲೆಯಲ್ಲಿ ಅನೇಕ ಕೊರತೆಗಳಿದ್ದು ಅವುಗಳನ್ನು ನೀಗಿಸುವ ನಿಟ್ಟಿನಲ್ಲಿ ವಿಶೇಷ ಅನುದಾನವನ್ನು ನೀಡಲು ತನು ಬದ್ದನಾಗಿದ್ದೇನೆ ಎಂದು ಶಾಸಕರು ತಿಳಿಸಿದರು. ಇಲ್ಲಿರುವ ಹಳೆಯಕಾಲದ ಕಟ್ಟಡವನ್ನು ಕೆಡವು ಹೊಸ ಕಟ್ಟಡವನ್ನು ನಿರ್ಮಾಣ ಮಾಡುವಲ್ಲಿ ಮುತುವರ್ಜಿವಹಿಸುವುದಾಗಿ ಹೇಳಿದ ಸಾಸಕರು ಹಂತಹಂತವಾಗಿ ಇಲ್ಲಿಗೆ ನಾಲ್ಕು ಕೊಠಡಿಗಳನ್ನು ಮಂಜೂರು ಮಾಡುವುದಾಗಿ ಭರವಸೆ ನೀಡಿದರು.ಶಿಕ್ಷಕರ ಕೊರತೆ ಇರುವ ಕಾರಣ ಇಲ್ಲಿಗೆ ಎರಡು ಅತಿಥಿ ಶಿಕ್ಷಕರನ್ನು ನೇಮಕಮಾಡಲಾಗಿದೆ, ಧೈಹಿಕ ಶಿಕ್ಷಕರ ನೇಮಕಾತಿಯೂ ಶೀಘ್ರದಲ್ಲಿ ನಡೆಯಲಿದೆ ಎಂದು ಹೇಳಿದರು. ಶಾಲೆಗೆ ಕಳೆದ ಹಲವು ವರ್ಷಗಳಿಂದ ಯಾವುದೇ ರೀತಿಯ ಅನುದಾನ ಬಂದಿಲ್ಲ ಎಂದು ಪೋಷಕರು ತಿಳಿಸಿದ ಕಾರಣ ಶಾಸಕರು ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಸ್ಥಳದಿಂದಲೇ ಕರೆ ಮಾಡಿ ಮಾಹಿತಿ ಪಡೆದುಕೊಂಡರು.

ಶಾಸಕರಿಗೆ ಸನ್ಮಾನ

ಶಾಲಾ ಎಸ್‌ಡಿಎಂಸಿ ವತಿಯಿಂದ ಶಾಸಕರಿಗೆ ಸನ್ಮಾನ ಕಾರ್ಯ ನಡೆಯಿತು. ಶಾಲು ಹೊದಿಸಿ ಹೂಗುಚ್ಚ ನೀಡಿ ಎಸ್‌ಡಿಎಂಸಿ ಅಧ್ಯಕ್ಷೆ ಸೀತಾಭಟ್ ಸನ್ಮಾನಿಸಿದರು. ಬಾಳೆ ಮೂಲೆ ಪಟ್ಟೆಮನೆ ಉದ್ಯಮಿ ರಾಂಪ್ರಸಾದ್ ರೈಯವರು ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್ ಕೊಡುಗೆಯಾಗಿ ನೀಡಿದರು. ವೇದಿಕೆಯಲ್ಲಿ ಗ್ರಾಪಂ ಸದಸ್ಯೆ ವಿಮಲಾ, ನಾರಾಯಣ್ ನಾಯಕ್, ಮೈಮೂನತುಲ್ ಮೆಹ್ರಾ, ಕೃಷ್ಣಪ್ಪ ಪೂಜಾರಿ, ಪೋಷಕರಾದ ಅಬ್ದುಲ್ ರಹಿಮಾನ್ , ಉದ್ಯಮಿ ಪಟ್ಟೆಮನೆ ರಾಂಪ್ರಸಾದ್ ರೈ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶೀಲಾವತಿ ಸ್ವಾಗತಿಸಿದರು. ಎಸ್‌ಡಿಎಂಸಿ ಉಪಾಧ್ಯಕ್ಷರಾದ ಹಾಜಿ ಅಬೂಬಕ್ಕರ್ ಆರ್ಲಪದವು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಸೀತಾರಾಂ ಭಟ್ ವಂದಿಸಿದರು. ಶಿಕ್ಷಕ ಮಾಂಕುಮೂಲ್ಯ ಕಾರ್ಯಕ್ರಮ ನಿರೂಪಿಸಿದರು.

142 ಕೋಟಿ ಜನಸಂಖ್ಯೆಯೊಂದಿಗೆ ಚೀನಾವನ್ನು ಹಿಂದಿಕ್ಕಿದ ಭಾರತ

Posted by Vidyamaana on 2023-04-19 08:33:01 |

Share: | | | | |


142 ಕೋಟಿ ಜನಸಂಖ್ಯೆಯೊಂದಿಗೆ ಚೀನಾವನ್ನು ಹಿಂದಿಕ್ಕಿದ ಭಾರತ

ಹೊಸದಿಲ್ಲಿ: ಭಾರತವು 142.86 ಕೋಟಿ ಜನಸಂಖ್ಯೆಯೊಂದಿಗೆ ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿದೆ ಎಂದು ವಿಶ್ವಸಂಸ್ಥೆ ಇಂದು ಬಿಡುಗಡೆ ಮಾಡಿರುವ  ಅಂಕಿ-ಅಂಶಗಳಿಂದ ತಿಳಿದುಬಂದಿದೆ.

1960ರಲ್ಲಿ ಮಾಜಿ ನಾಯಕ ಮಾವೋ ಝೆಡಾಂಗ್ ಅವರ ವಿನಾಶಕಾರಿ ಕೃಷಿ ನೀತಿಗಳ ಅಡಿಯಲ್ಲಿ ಲಕ್ಷಾಂತರ ಜನರು ಹಸಿವಿನಿಂದ ಸತ್ತ ನಂತರ ಮೊದಲ ಬಾರಿಗೆ ಚೀನಾದಲ್ಲಿ ಜನರ ಸಂಖ್ಯೆ ಕಳೆದ ವರ್ಷ ಕುಸಿತ ಕಂಡಿತ್ತು.

Recent News


Leave a Comment: