ಉಳಾಯಿಬೆಟ್ಟು ದರೋಡೆ ಪ್ರಕರಣ ; ಕೋಟ್ಯಾನ್ ಲಾರಿ ಚಾಲಕ ವಸಂತ ಸೂತ್ರಧಾರ, ಕೇರಳದ ತಂಡ ಸೇರಿ ಹತ್ತು ಮಂದಿ ಅರೆಸ್ಟ್

ಸುದ್ದಿಗಳು News

Posted by vidyamaana on 2024-07-05 07:31:37 |

Share: | | | | |


ಉಳಾಯಿಬೆಟ್ಟು ದರೋಡೆ ಪ್ರಕರಣ  ; ಕೋಟ್ಯಾನ್ ಲಾರಿ ಚಾಲಕ ವಸಂತ ಸೂತ್ರಧಾರ,  ಕೇರಳದ ತಂಡ ಸೇರಿ ಹತ್ತು ಮಂದಿ ಅರೆಸ್ಟ್

ಮಂಗಳೂರು: ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಹೊರವಲಯದ ಪೆರ್ಮಂಕಿ ಪರಿಸರದಲ್ಲಿ ಉದ್ಯಮಿ ಹಾಗೂ ಸಾಮಾಜಿಕ ಮುಖಂಡ ಪದ್ಮನಾಭ ಕೋಟ್ಯಾನ್ ಮನೆ ದರೋಡೆ ನಡೆಸಿದ ಆರೋಪದಲ್ಲಿ ಮಂಗಳೂರು ಪೊಲೀಸರು 10 ಮಂದಿಯನ್ನು ಸೆರೆಹಿಡಿದಿದ್ದಾರೆ. ಇವರಲ್ಲಿ ಉದ್ಯಮಿಯ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ನೀರಮಾರ್ಗ ಗ್ರಾಮ ನಿವಾಸಿ ವಸಂತಕುಮಾರ್ (42) ಒಳಗೊಂಡಿದ್ದಾನೆ.

ಮಾಧ್ಯಮಗಳೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಬಂಧಿತರನ್ನು ನೀರಮಾರ್ಗದ ವಸಂತಕುಮಾರ್ (42), ನೀರಮಾರ್ಗದ ರಮೇಶ್ (42), ಬಂಟ್ವಾಳದ ಬಾಲಕೃಷ್ಣ ರೇಮಂಡ್ ಡಿಸೋಜಾ (47) ಎಂದು ಗುರುತಿಸಲಾಗಿದೆ. ಕಾಸರಗೋಡಿನಿಂದ (48), ತ್ರಿಶೂರಿನ ಜಾಕೀರ್ ಹುಸೇನ್ (56), ತ್ರಿಶೂರ್‌ನಿಂದ ವಿನೋಜ್ (38), ತ್ರಿಶೂರ್‌ನಿಂದ ಸಜೀಶ್ ಎಂಎಂ (32), ತಿರುವನಂತಪುರದಿಂದ ಬಿಜು ಜಿ (41), ತ್ರಿಶೂರ್‌ನಿಂದ ಸತೀಶ್ ಬಾಬು (44), ಮತ್ತು ಶಿಜೋ ದೇವಸಿ (38) ಇದರಲ್ಲಿ 7 ಮಂದಿ ಕೇರಳ ಮೂಲದವರಾಗಿದ್ದಾರೆ.

ಮಂಗಳೂರು ನಗರದ ಉಳಾಯಿಬೆಟ್ಟು ಪೆರ್ಮಂಕಿ ನಿವಾಸಿ ಉದ್ಯಮಿ ಪದ್ಮನಾಭ ಕೋಟ್ಯಾನ್ ಅವರು ಜೂನ್ 21ರಂದು ಸಂಜೆ ಸುಮಾರು 7.45ಕ್ಕೆ ಮನೆಯಲ್ಲಿದ್ದ ವೇಳೆ ಸುಮಾರು 10ರಿಂದ 12 ಮಂದಿ ಆರೋಪಿಗಳು ಆಗಮಿಸಿ, ಚೂರಿಯಿಂದ ಪದ್ಮನಾಭ ಕೋಟ್ಯಾನ್ ಮೇಲೆ ಹಲ್ಲೆ ನಡೆಸಿ, ನಂತರ, ಅವರ ಪತ್ನಿ ಮತ್ತು ಮಗನನ್ನು ಕಟ್ಟಿಹಾಕಿ, ನಗದು, ಹಣ, ಒಡವೆ ಸೇರಿ ಬೆಲೆಬಾಳುವ ಸೊತ್ತುಗಳನ್ನು ದರೋಡೆ ಮಾಡಿದ್ದರು.


ಘಟನೆಯಲ್ಲಿ ವಸಂತಕುಮಾರ್, ಉದ್ಯಮಿಯ ವ್ಯವಹಾರ ಮತ್ತು ಮನೆಯ ಮಾಹಿತಿಯನ್ನು ಇನ್ನೋರ್ವ ಆರೋಪಿ ರಮೇಶ್ ಪೂಜಾರಿಗೆ ನೀಡಿದ್ದು, ಆರೋಪಿ ರಮೇಶ್ ಪೂಜಾರಿ ಮತ್ತು ರೇಮಂಡ್ ಡಿಸೋಜಾ ಇನ್ನೋರ್ವ ಆರೋಪಿ ಬಾಲಕೃಷ್ಣ ಶೆಟ್ಟಿಗೆ ಉದ್ಯಮಿಯ ಮನೆಯ ಹಾಗೂ ವ್ಯವಹಾರದ ಮಾಹಿತಿ ನೀಡಿದ್ದಾರೆ. ಅದರಂತೆ ಬಾಲಕೃಷ್ಣ ಶೆಟ್ಟಿ ತನ್ನ ಸ್ನೇಹಿತ ಕೇರಳದ ವ್ಯಕ್ತಿಯೊಂದಿಗೆ ದರೋಡೆ ನಡೆಸಲು ಸಂಚು ರೂಪಿಸಿ,ಮನೆಯ ಮಾಹಿತಿಯನ್ನು ನೀಡಿ, ಆರೋಪಿಗಳನ್ನು ಮಂಗಳೂರಿಗೆ ಕರೆಯಿಸಿಕೊಂಡು ದರೋಡೆ ನಡೆಸಿದ್ದಾಗಿ ತಿಳಿದುಬಂದಿದೆ ಎಂದು ಕಮೀಷನರ್ ಹೇಳಿದ್ದಾರೆ.ಕೃತ್ಯದಲ್ಲಿ 15ಕ್ಕೂ ಅಧಿಕ ಆರೋಪಿಗಳು ಭಾಗಿಯಾಗಿರುವುದು ತನಿಖೆಯಿಂದ ಕಂಡುಬಂದಿದೆ. ಆರೋಪಿಗಳ ಪೈಕಿ ಬಿಜು ಹಾಗೂ ಸತೀಶ್ ಬಾಬು ಎರಡು ತಂಡ ಗಳನ್ನು ಮಂಗಳೂರಿಗೆ ಕಳಿಸಿ, ದರೋಡೆಗೆ ಸಂಚು ರೂಪಿಸಿ ದರೋಡೆ ಕೃತ್ಯ ನಡೆಸಿದ್ದಾರೆ.

ಮೊದಲೇ ಕೇಸ್ ಇತ್ತು

ಆರೋಪಿಗಳ ಪೈಕಿ ವಸಂತ ಕುಮಾರ್ ವಿರುದ್ಧ 2011ನೇ ಇಸವಿಯಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಾಗಿದ್ದರೆ, ಜಾಕೀರ್ ಎಂಬಾತನ ವಿರುದ್ಧ ಕೇರಳದಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ. ಸತೀಶ್ ಬಾಬು ವಿರುದ್ಧ ತ್ರಿಶೂರ್ ಜಿಲ್ಲೆಯಲ್ಲಿ ಶಾಜಿ ಎಂಬಾತನ ಕೊಲೆ ಪ್ರಕರಣ ದಾಖಲಾಗಿದೆ. ಬಿಜು ವಿರುದ್ಧ ಅಬಕಾರಿ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿವೆ.

ಜೂನ್ 21ರಂದು ಎಂಟರಿಂದ ಒಂಬತ್ತು ಮಂದಿ ಮುಸುಕುಧಾರಿಗಳು ಮನೆಗೆ ನುಗ್ಗಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ರವರನ್ನು ಕಟ್ಟಿ ಹಾಕಿ ಥಳಿಸಿದ್ದು ಹಾಗೂ ಪತ್ನಿ, ಮಕ್ಕಳನ್ನು ಬೆದರಿಸಿ 9 ಲಕ್ಷ ಮೌಲ್ಯದ ನಗದು ಹಾಗೂ ಚಿನ್ನಾಭರಣ ದೋಚಿ ಮನೆಯ ವಾಹನದಲ್ಲೇ ಅಲ್ಪ ದೂರದ ವರೆಗೆ ಪ್ರಯಾಣಿಸಿ ನಂತರ ಅವರ ವಾಹನವನ್ನು ಮಧ್ಯದಲ್ಲೇ ಬಿಟ್ಟು ಇನ್ನೋವಾದಲ್ಲಿ ಪರಾರಿಯಾಗಿದರು. ನಾಲ್ವರು ಸ್ಥಳೀಯ ಆರೋಪಿಗಳಾದ ವಸಂತ್, ರಮೇಶ್, ರೇಮಂಡ್ ಮತ್ತು ಬಾಲಕೃಷ್ಣ ದರೋಡೆಗೆ ಯೋಜನೆ ರೂಪಿಸಿದ್ದರು. ಬಾಲಕೃಷ್ಣ ನಂತರ ಜಾನ್ ಬಾಸ್ಕೋ ನೇತೃತ್ವದ ಕೇರಳ ತಂಡದೊಂದಿಗೆ ಸಂಪರ್ಕ ಹೊಂದಿದ್ದರು.

ಎಂಟು ತಿಂಗಳ ಹಿಂದೆಯೇ ಯೋಜನೆ ರೂಪಿಸಲಾಗಿತ್ತು. ಕೇರಳದ ತಂಡ ಮಂಗಳೂರಿಗೆ ಭೇಟಿ ನೀಡಿದ್ದು, ದರೋಡೆಗೆ ಪ್ರದೇಶದ ಸ್ಕೆಚ್ ಮತ್ತು ನಕ್ಷೆಯನ್ನು ಸಿದ್ಧಪಡಿಸುವಂತೆ ರಮೇಶ್ ಮತ್ತು ವಸಂತ್ ಅವರನ್ನು ಕೇಳಿದ್ದರು ಅದರಂತೆಯೇ ಗುತ್ತಿಗೆದಾರನ ಬಳಿ 100 ರಿಂದ 300 ಕೋಟಿ ರೂ.ಗೂ ಹೆಚ್ಚು ಹಣವಿದೆ ಎಂದು ಸ್ಥಳೀಯ ಆರೋಪಿಗಳು ಕೇರಳ ತಂಡಕ್ಕೆ ತಿಳಿಸಿದ್ದು ಲೂಟಿಹೊಡೆಯಲು ಎಲ್ಲಾ ರೀತಿಯ ಸ್ಕೆಚ್ ತಯಾರಿಸಿದ್ದರು.

ಈ ಪ್ರಕರಣದಲ್ಲಿ ಇನ್ನೂ 4-5 ಮಂದಿಯನ್ನು ಬಂಧಿಸಬೇಕಿದ್ದು 100ರಿಂದ 300 ಕೋಟಿ ಲೂಟಿ ಮಾಡಬಹುದೆಂದು ನಂಬಿಸಿ ಮಾಸ್ಟರ್‌ ಬೆಡ್‌ರೂಮ್‌ನ ಟೈಲ್ಸ್‌ ತೆಗೆಯಲು 20ಕ್ಕೂ ಹೆಚ್ಚು ಗೋಣಿ ಚೀಲಗಳು ಮತ್ತು ಸಲಕರಣೆಗಳನ್ನು ತಂದಿದ್ದರು. ಒಂದೇ ಒಂದು ಸುಳಿವೇ ಇಲ್ಲದ ಕುರುಡು ಪ್ರಕರಣವಾಗಿರುವುದರಿಂದ ಆರೋಪಿಗಳ ಪತ್ತೆಗೆ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದರು. ಕಳೆದ 15 ದಿನಗಳಿಂದ ಈ ಪ್ರಕರಣವನ್ನು ಭೇದಿಸಲು ಅವಿರತವಾಗಿ ಶ್ರಮಿಸಿದ ಡಿಸಿಪಿ, ಎಸಿಪಿ ಮತ್ತು ಸಿಸಿಬಿ ಸಿಬ್ಬಂದಿಯನ್ನು ನಾನು ಅಭಿನಂದಿಸುತ್ತೇನೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

 Share: | | | | |


ನಾಯಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ; 30 ವರ್ಷದ ವಾಚ್‌ಮೆನ್ ವಿರುದ್ಧ ಎಫ್‌ಐಆರ್

Posted by Vidyamaana on 2023-10-08 08:38:13 |

Share: | | | | |


ನಾಯಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ; 30 ವರ್ಷದ ವಾಚ್‌ಮೆನ್ ವಿರುದ್ಧ ಎಫ್‌ಐಆರ್

 ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ನಗರದಲ್ಲಿ ನಾಯಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ 30 ವರ್ಷದ ವಾಚ್ಮೆನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಅಸಿಡಿಟಿಯ ಎದೆ ಉರಿಯನ್ನು ಮತ್ತು ಎದೆ ನೋವಿನ ಉರಿಯನ್ನು ಐಡೆಂಟಿಫೈ ಮಾಡೋದು ತುಂಬಾ ಸುಲಭ: ಡಾ. ಜೆ ಸಿ ಅಡಿಗ

ಸೊಸೈಟಿಯ ಸದಸ್ಯರೊಬ್ಬರು ನೀಡಿದ ದೂರಿನ ಮೇರೆಗೆ ವಸತಿ ಸಮುಚ್ಚಯದಲ್ಲಿ ಕೆಲಸ ಮಾಡುವ ವಾಚ್ಮೆನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧಗಳು) ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಅಕ್ಟೋಬರ್ 5ರ ರಾತ್ರಿ ಭದ್ರತಾ ಕ್ಯಾಬಿನ್ನಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಮತ್ತು ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಲಬುರಗಿ ಮಗಳ ಎದುರೇ ಅನೈತಿಕ ಸಂಬಂಧ: ಪ್ರಕರಣ ದಾಖಲು

Posted by Vidyamaana on 2023-12-31 19:10:51 |

Share: | | | | |


ಕಲಬುರಗಿ ಮಗಳ ಎದುರೇ ಅನೈತಿಕ ಸಂಬಂಧ: ಪ್ರಕರಣ ದಾಖಲು

ಕಲಬುರಗಿ: ಬೆಳಗಾವಿ ಜಿಲ್ಲೆಯ ಹಾಸ್ಟೆಲ್‌ನಲ್ಲಿ ವಾರ್ಡನ್ ಆಗಿರುವ ಮಹಿಳೆಯೊಬ್ಬಳು ಕೆಎಎಸ್ ಅಧಿಕಾರಿಯಾಗಿರುವ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು, ಇದನ್ನು ನೋಡಿದ್ದಕ್ಕೆ ತನ್ನ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಆರೋಪಿಸಿ 9 ವರ್ಷದ ಮಗಳು ಇಲ್ಲಿನ ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.ಘಟನೆ ಬೈಲಹೊಂಗಲದಲ್ಲಿ ನಡೆದಿದ್ದರಿಂದ ನಗರದ ಪೋಕ್ಸೊ ನ್ಯಾಯಾಲಯದ ಸೂಚನೆ ಮೇರೆಗೆ ಪ್ರಕರಣವನ್ನು ಬೈಲಹೊಂಗಲ ಠಾಣೆಗೆ ಶುಕ್ರವಾರ ವರ್ಗಾಯಿಸಲಾಗಿದೆ.


9 ವರ್ಷದ ಬಾಲಕಿ ನೀಡಿದ ದೂರಿನ ಅನ್ವಯ ಆಕೆಯ ತಾಯಿ ಹಾಗೂ ಕೆಎಎಸ್ ಅಧಿಕಾರಿ ರಾಮನಗೌಡ ಕನ್ನೊಳ್ಳಿ ಎಂಬುವವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.


ಕಲಬುರಗಿಯ ಸರಸ್ವತಿ ಗೋದಾಮು ಬಳಿಯ ನಿವಾಸಿಯಾಗಿದ್ದ ಬಾಲಕಿಯ ತಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಆ ಬಳಿಕ ತಾಯಿಯ ಸ್ವಂತ ಊರಾದ ಬೆಳಗಾವಿ ಜಿಲ್ಲೆಯ ಪಟ್ಟಣವೊಂದರಲ್ಲಿ ವಾಸವಾಗಿದ್ದಳು. ಈ ಸಂದರ್ಭದಲ್ಲಿ ಹಾಸ್ಟೆಲ್ ವಾರ್ಡನ್ ಆಗಿರುವ ತಾಯಿ ತನ್ನ ಹಿರಿಯ ಅಧಿಕಾರಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. ಹಲವು ಬಾರಿ ಖಾಸಗಿ ಕ್ಷಣಗಳನ್ನು ನನ್ನ ಎದುರೇ ಕಳೆದಿದ್ದರು. ಯಾರ ಬಳಿಯೂ ಹೇಳದಂತೆ ಸಾಕಷ್ಟು ದೈಹಿಕ, ಮಾನಸಿಕ ಹಿಂಸೆ ನೀಡಿದ್ದರು ಎಂದುಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.


ನಮ್ಮ ಸಂಬಂಧಕ್ಕೆ ಮಗಳು ಅಡ್ಡಿಯಾಗುತ್ತಾಳೆ. ಹೀಗಾಗಿ, ಆಕೆಯನ್ನು ಸಾಯಿಸಿ ಬಿಡುತ್ತೇನೆ ಎಂದೂ ತಾಯಿ ಹಲವು ಬಾರಿ ಹೇಳಿದ್ದಳು. ಆಕ್ಷೇಪಾರ್ಹ ಭಂಗಿಯಲ್ಲಿ ಇದ್ದುದನ್ನು ನೋಡಿದ್ದೇನೆ. ಹೀಗಾಗಿ, ನನ್ನ ಮೇಲೆ ಬಿಸಿ ನೀರನ್ನು ಎರಚಿ ದೈಹಿಕ ಹಿಂಸೆ ನೀಡಿದ್ದಾಳೆ. ಹೊಡೆತದಿಂದ ಗಾಯವಾದರೂ ಆಸ್ಪತ್ರೆಗೆ ಸೇರಿಸಿಲ್ಲ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.


ಎರಡನೇ ಆರೋಪಿಯಾಗಿರುವ ರಾಮನಗೌಡ ವಿಜಯಪುರದ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾಗಿ ಕೆಲಸ ನಿರ್ವಹಿಸಿದ್ದರು.

ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ರವರ ಪತ್ನಿ ಶುಭಲಕ್ಷ್ಮಿ ನಿಧನ

Posted by Vidyamaana on 2024-01-17 21:00:50 |

Share: | | | | |


ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ರವರ ಪತ್ನಿ ಶುಭಲಕ್ಷ್ಮಿ ನಿಧನ

ಪುತ್ತೂರು, ಜ.17:  ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿ ಶುಭಲಕ್ಷ್ಮಿ(50) ಅಸಹಜ ರೀತಿಯಲ್ಲಿ ನೀರಿ‌ನ ತೊಟ್ಟಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. 


ಒಳಮೊಗ್ರು ಗ್ರಾಮದ ಕೈಕಾರದಲ್ಲಿ ಇವರ ಮನೆಯಿದ್ದು ಬುಧವಾರ ಮಧ್ಯಾಹ್ನ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮನೆಯ ಗುಡ್ಡದ ಮೇಲೆ ಮಣ್ಣಿನ ಟ್ಯಾಂಕಿ ನಿರ್ಮಿಸಿದ್ದು ಅದಕ್ಕೆ ಟಾರ್ಪಾಲು ಹಾಕಿ ನೀರು ನಿಲ್ಲಿಸಲಾಗಿತ್ತು. ಬೆಳಗ್ಗೆ ಹನ್ನೊಂದು ಗಂಟೆ ವರೆಗೆ ಪ್ರಕಾಶ್ಚಂದ್ರ ರೈ ಮನೆಯಲ್ಲಿದ್ದು ಆನಂತರ ಹೊರಗೆ ತೆರಳಿದ್ದರು. ಮಧ್ಯಾಹ್ನ ಒಂದೂವರೆ ಗಂಟೆ ವೇಳೆಗೆ ಹೋಗಿ ನೋಡಿದಾಗ ಪತ್ನಿ ಇರಲಿಲ್ಲ. ಹುಡುಕಾಟದ ವೇಳೆ ತೊಟ್ಟಿಯಲ್ಲಿ ಶವ ಪತ್ತೆಯಾಗಿದೆ. ಮಗಳು ಕಾಲೇಜಿಗೆ ಹೋಗಿದ್ದು ಮನೆಯಲ್ಲಿ ಕೆಲಸದವರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಕಾಲುಜಾರಿ ನೀರಿನ ತೊಟ್ಟಿಗೆ ಬಿದ್ದಿದ್ದು, ಆ ಸಂದರ್ಭದಲ್ಲಿ ಯಾರೂ ಇಲ್ಲದ ಕಾರಣ ಅಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪತಿ ಪ್ರಕಾಶ್ಚಂದ್ರ ರೈ ಗ್ರಾಮಾಂತರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ‌ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ  ಗೋಪಾಲಕೃಷ್ಣ ಹೇರಳೆ, ಸಾಜ ರಾಧಾಕೃಷ್ಣ ಆಳ್ವ, ಶಶಿಕುಮಾರ್ ರೈ ಬಾಲ್ಯೊಟ್ಟು ಮತ್ತಿತರರು ಭೇಟಿ ನೀಡಿದ್ದರು.‌

ರಾಧಾಸ್ ಜವಳಿ ಮಳಿಗೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳ ಆಹ್ವಾನ

Posted by Vidyamaana on 2024-02-20 12:56:38 |

Share: | | | | |


ರಾಧಾಸ್ ಜವಳಿ ಮಳಿಗೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳ ಆಹ್ವಾನ

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಯಲ್ಲಿರುವ ಪ್ರತಿಷ್ಠಿತ ಜವಳಿ ಮಳಿಗೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ.

ರಾಧಾಸ್ ಸಿಲ್ಕ್ಸ್, ಟೆಕ್ಸ್ ಟೈಲ್, ರೆಡಿಮೇಡ್ ಸಂಸ್ಥೆಗೆ ಬಿಲ್ಲಿಂಗ್, ಸೇಲ್ಸ್ ಹಾಗೂ ಟೈಲರ್ ಬೇಕಾಗಿದ್ದಾರೆ. ಅನುಭವಸ್ಥ ಹಾಗೂ ಸ್ಥಳೀಯರಿಗೆ ಆದ್ಯತೆ. ಉತ್ತಮ ವೇತನ ನೀಡಲಾಗುವುದು. ಆಸಕ್ತರು ಸಂಸ್ಥೆಯ ಕಚೇರಿಗೆ ಭೇಟಿ ನೀಡುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ಬಿದ್ದು ಮಹಿಳೆ ಮೃತ್ಯು

Posted by Vidyamaana on 2023-12-07 04:27:34 |

Share: | | | | |


ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ಬಿದ್ದು ಮಹಿಳೆ ಮೃತ್ಯು

ವಿಟ್ಲ: ಸಾಲೆತ್ತೂರಿನ ತೋಟವೊಂದರಲ್ಲಿ ಮಹಿಳೆಯೊಬ್ಬರು ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ಅಡಿಕೆ ಮರ ಮುರಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.


ಗುಲಾಬಿ(48) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.


ಇವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರವೊಂದು ಆಕಸ್ಮಿಕವಾಗಿ ಮುರಿದು ಬಿದಿದ್ದು, ಇದರಿಂದ ತಲೆಗೆ ತೀವ್ರ ಪೆಟ್ಟಾಗಿದೆ. ಮಹಿಳೆಯನ್ನು ಕೂಡಲೇ ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆಯೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.


ಪ್ರಕರಣದ ಕುರಿತು ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆ: ಪುತ್ತೂರು ತಹಸೀಲ್ದಾರ್ ವರ್ಗ

Posted by Vidyamaana on 2024-03-16 21:57:52 |

Share: | | | | |


ಲೋಕಸಭಾ ಚುನಾವಣೆ ಹಿನ್ನೆಲೆ: ಪುತ್ತೂರು ತಹಸೀಲ್ದಾರ್ ವರ್ಗ

ಪುತ್ತೂರು: ಚುನಾವಣಾ ಹಿನ್ನೆಲೆಯಲ್ಲಿ ತಹಸೀಲ್ದಾರ್ ವರ್ಗಾವಣೆಗೊಂಡಿದ್ದು, ಹೊಸ ತಹಸೀಲ್ದಾರ್ ಆಗಿ ಕುಂಞ ಅಹಮದ್ ಎನ್.ಎ. ನೇಮಕಗೊಂಡಿದ್ದಾರೆ.

ಈ ಮೊದಲು ಸುಳ್ಯ ತಾಲೂಕು ತಹಸೀಲ್ದಾರ್ ಆಗಿದ್ದ ಇವರು, ತಮ್ಮ ಕಾರ್ಯವೈಖರಿಯಿಂದ ಜನಮನ್ನಣೆ ಪಡೆದುಕೊಂಡಿದ್ದರು. ಉತ್ತಮ ಅಧಿಕಾರಿ ಎಂದು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದರು.

ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದಲೇ ಆದೇಶ ಜಾರಿಗೆ ಬರುವಂತೆ ತಿಳಿಸಲಾಗಿದೆ.

Recent News


Leave a Comment: