ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ - ಇಂದು ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ

ಸುದ್ದಿಗಳು News

Posted by vidyamaana on 2024-07-09 08:24:41 |

Share: | | | | |


ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ - ಇಂದು ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ

ಪುತ್ತೂರು: ಅಂತರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಹರಾ ಅರ್ಥಮೂವರ್ ಮತ್ತು ಬೋರ್ ವೆಲ್ ಮಾಲಕ ಪಿ.ಎಂ ಅಶ್ರಫ್, ಕಾರ್ಯದರ್ಶಿಯಾಗಿ ಕೊಂಕಣ್ ಗ್ಯಾಸ್ ನಲ್ಲಿ 22 ವರ್ಷ ಸೀನಿಯರ್ ಎಕೌಂಟೆಂಟ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ವಸಂತ್ ಶಂಕರ್, ಕೋಶಾಧಿಕಾರಿಯಾಗಿ ಯುನೈಟೆಡ್ ಇನ್ಸೂರೆನ್ನ ನಿವೃತ್ತ ಉದ್ಯೋಗಿ ನವೀನ್‌ಚಂದ್ರ  ರವರು ಆಯ್ಕೆಯಾಗಿದ್ದಾರೆ.

ಉಳಿದಂತೆ ಜೊತೆ ಕಾರ್ಯದರ್ಶಿ ಯಾಗಿ ನವ್ಯಶ್ರೀ , ನಿಯೋಜಿತ ಅಧ್ಯಕ್ಷರಾಗಿ ಚಂದ್ರಹಾಸ ರೈ ಬಿ, ಉಪಾಧ್ಯಕ್ಷರಾಗಿ ಪ್ರದೀಪ್‌ ಪೂಜಾರಿ, ನಿಕಟಪೂರ್ವ ಅಧ್ಯಕ್ಷರಾಗಿ ಡಾ.ರಾಜೇಶ್ ಬೆಜ್ಜಂಗಳ, ಕ್ಲಬ್ ಸರ್ವಿಸ್ ನಿರ್ದೇಶಕರಾಗಿ ಜಯಪ್ರಕಾಶ್ ಎ.ಎಲ್, ಕಮ್ಯೂನಿಟಿ ಸರ್ವಿಸ್ ನಿರ್ದೇಶಕರಾಗಿ ಬಿ.ಟಿ ಮಹೇಶ್ಚಂದ್ರ ಸಾಲಿಯಾನ್, ವೊಕೇಶನಲ್ ಸರ್ವಿಸ್ ನಿರ್ದೇಶಕರಾಗಿ ಲೋಕೇಶ್

ಎಂ.ಎಚ್, ಇಂಟರ್‌ನ್ಯಾಷನಲ್ ಸರ್ವಿಸ್ ನಿರ್ದೇತಕರಾಗಿ ಸನತ್ ರೈ, ಯೂತ್ ಸರ್ವಿಸ್ ನಿರ್ದೇಶಕರಾಗಿ ಜಗನ್ನಾಥ್ ಆರಿಯಡ್ಕ, ಸಾರ್ಜಂಟ್ ಎಟ್ ಆರ್ಮ್ಸ್ ಶಿವರಾಂ ಎಂ.ಎಸ್. ಚೀರ್‌ಮ್ಯಾನ್‌ಗಳಾಗಿ ಡಾ.ರಾಮಚಂದ್ರ ಕೆ(ವೆಬ್), ಡಾ.ನಮಿತಾ(ಪೋಲಿಯೋ ಪ್ಲಸ್),ಭಾರತಿ ಎಸ್.ರೈ(ಟೀಚ್), ಜಯಪ್ರಕಾಶ್ಅಮೈ(ಟಿಆ‌ರ್ ಎಫ್), ಲಾವಣ್ಯ  (ಮೆಂಬರ್‌ಶಿಪ್ ಡೆವಲಪ್‌ಮೆಂಟ್). ಪದ್ಮನಾಭ ಶೆಟ್ಟಿ(ಜಿಲ್ಲಾ ಪ್ರಾಜೆಕ್ಟ್), ಸಂತೋಷ್ ಶೆಟ್ಟಿ(ಕ್ರೀಡೆ), ಪ್ರಮೋದ್ ಕುಮಾರ್ ಕೆ.ಕೆ(ಸಾಂಸ್ಕೃತಿಕ), ಪ್ರದೀಪ್ ಬೊಳ್ಳಾರ್ (ಫೆಲೋಶಿಪ್), ಶಾಂತಕುಮಾರ್(ಹಾಜರಾತಿ ಸಮಿತಿ), ಮೊಹಮ್ಮದ್ ರಫೀಕ್ ದರ್ಜೆ (ಸಿಎಲ್‌ಸಿಸಿ), ಅಮಿತಾ ಶೆಟ್ಟಿ(ಎಥಿಕ್ಸ್), ಸಂತೋಷ್ ಶೆಟ್ಟಿ(ಕ್ಲಬ್ ಫೆಸಿಲಿಟೇಟರ್ )ರವರು ಆಯ್ಕೆಯಾಗಿದ್ದಾರೆ.

ಇಂದು ಪದ ಪ್ರದಾನ: ಜು.9 ರಂದು ಪರ್ಲಡ್ಕ-ಬೈಪಾಸ್ ಆಫ್ರಿ ಕಂಫರ್ಟ್‌ನಲ್ಲಿ ಕ್ಲಬ್‌ನ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ ಜರಗಲಿದ್ದು, ರೋಟರಿ ಜಿಲ್ಲೆ 3181 ಇದರ ಪಿಡಿಜಿ ರಂಗನಾಥ್ ಭಟ್ ರವರು ನೂತನ ಪದಾಧಿಕಾರಿಗಳಿಗೆ ಪದ ಪ್ರದಾನವನ್ನು ನೆರವೇರಿಸಲಿದ್ದಾರೆ. ವಲಯ ಐದರ ಅಸಿಸ್ಟಂಟ್ ಗವರ್ನರ್ ಸೂರ್ಯನಾಥ ಆಳ್ವ, ವಲಯ ಸೇನಾನಿ ಮೊಹಮದ್ ರಫೀಕ್ ದರ್ಬೆ, ಮಾತೃಸಂಸ್ಥೆ ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಅಧ್ಯಕ್ಷ ಸುರೇಶ್ ಪಿ.ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 Share: | | | | |


ಪೊಲೀಸ್ ಕ್ವಾಟ್ರಸ್ ನಲ್ಲೇ ನೇಣಿಗೆ ಶರಣಾದ ಮಹಿಳಾ ಕಾನ್‌ಸ್ಟೇಬಲ್ ಜ್ಯೋತಿ

Posted by Vidyamaana on 2024-03-30 21:14:18 |

Share: | | | | |


ಪೊಲೀಸ್ ಕ್ವಾಟ್ರಸ್ ನಲ್ಲೇ ನೇಣಿಗೆ ಶರಣಾದ ಮಹಿಳಾ ಕಾನ್‌ಸ್ಟೇಬಲ್ ಜ್ಯೋತಿ

ಉಡುಪಿ : ಪೊಲೀಸ್ ಕ್ವಾಟ್ರಸ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಕಾನ್‌ಸ್ಟೇಬಲ್ ಪತ್ತೆಯಾಗಿದ್ದಾರೆ.ಜ್ಯೋತಿ (29) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಮಹಿಳಾ ಪೇದೆ.

ಜ್ಯೋತಿ ಅವರು ಉಡುಪಿ ಜಿಲ್ಲೆ ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. 

ಸೌಜನ್ಯ ಪ್ರಕರಣ: ಮರುತನಿಖೆಗೆ ಇಳಂತಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮನವಿ

Posted by Vidyamaana on 2023-08-24 07:53:44 |

Share: | | | | |


ಸೌಜನ್ಯ ಪ್ರಕರಣ: ಮರುತನಿಖೆಗೆ ಇಳಂತಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮನವಿ

ಇಳಂತಿಲ: ಸೌಜನ್ಯ ಹತ್ಯೆಯ ಮರುತನಿಖೆಗೆ ಇಳಂತಿಲ ಒಕ್ಕಲಿಗ ಗ್ರಾಮ ಸಮಿತಿಯಿಂದ ಆ.24ರಂದು ಆಡಳಿತಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಒಕ್ಕಲಿಗ ಗ್ರಾಮ ಸಮಿತಿ ಇಳಂತಿಲ ಇದರ ಅಧ್ಯಕ್ಷ ಪುರಂಧರ ಗೌಡ ತುಂಬ, ಪ್ರಧಾನ ಕಾರ್ಯದರ್ಶಿ ವಿಜೇತ್ ಕುಮಾರ್ ನೇಜಿಕಾರ್ ಹಾಗೂ ಊರ ಪ್ರಮುಖರಾದ ಜಾರಪ್ಪ ಗೌಡ ದಂಡುಗ, ಕಡಿಗೇರಿ ಬಾಲಕ್ರಷ್ಣ ಗೌಡ, ಪೂವಪ್ಪ ಗೌಡ ಅರ್ಬಿ, ನಾರಾಯಣ ಗೌಡ ಕುಮೇರ್ಜಾಲ್, ತಿಮ್ಮಪ್ಪ ಗೌಡ ಬೊಬ್ಬೆ, ದಾಸಪ್ಪ ಗೌಡ ಕೋಡಿಯಡ್ಕ ಹಾಗೂ ಸಮಿತಿಯ ಪಧಾದಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು.

ಪ್ರೀತಿ ನಿರಾಕರಿಸಿದ ವಿದ್ಯಾರ್ಥಿನಿಯ ಕೊಲೆಗೈದು ರೈಲಿಗೆ ತಲೆಕೊಟ್ಟ ಶರತ್

Posted by Vidyamaana on 2024-03-05 21:27:17 |

Share: | | | | |


ಪ್ರೀತಿ ನಿರಾಕರಿಸಿದ  ವಿದ್ಯಾರ್ಥಿನಿಯ ಕೊಲೆಗೈದು ರೈಲಿಗೆ ತಲೆಕೊಟ್ಟ ಶರತ್

ಹಾಸನ : ಪ್ರೀತಿ ನಿರಾಕರಿಸಿದ ಶಾಲಾ ಬಾಲಕಿಯನ್ನು ಕೊಂದು ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೇ ಈ ಘಟನೆ ನಡೆದಿದೆ. ಅರಸೀಕೆರೆ ತಾಲೂಕಿನ ಬೆಳಗುಂಬ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಭೂಮಿಕಾ ಕೊಲೆಯಾದ ಬಾಲಕಿಯಾಗಿದ್ದು, ಶರತ್‌ (23) ಕೊಲೆ ಮಾಡಿದ ಆರೋಪಿಯಾಗಿದ್ದಾನೆ.ತನ್ನ ಪ್ರೀತಿಯನ್ನು ನಿರಾಕರಿಸಿದಳೆಂದು  ಭೂಮಿಕಾಳ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ ಶರತ್ ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ವಿದ್ಯಾರ್ಥಿನಿ ಭೂಮಿಕಾ ಶಾಲೆ ಮುಗಿಸಿ ಮನೆಗೆ ಹೋಗುವಾಗ ತೋಟದಲ್ಲಿ ಆಕೆಯನ್ನು ಅಡ್ಡಗಟ್ಟಿದ ಶರತ್‌ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾನೆ.


ಕೊಲೆ ಮಾಡಿದ ಬಳಿಕ ಅರಸೀಕೆರೆ ಸಮೀಪ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಒಮ್ಮೆಯೂ ಸಂಸತ್ ಚರ್ಚೆಯಲ್ಲಿ ಭಾಗವಹಿಸದ ಕರ್ನಾಟಕದ 4 ಸಂಸದರು..

Posted by Vidyamaana on 2024-02-14 21:33:12 |

Share: | | | | |


ಒಮ್ಮೆಯೂ ಸಂಸತ್ ಚರ್ಚೆಯಲ್ಲಿ ಭಾಗವಹಿಸದ ಕರ್ನಾಟಕದ 4 ಸಂಸದರು..

ನವದೆಹಲಿ(ಫೆ.14): ಕರ್ನಾಟಕದ 28 ಲೋಕಸಭಾ ಸದಸ್ಯರ ಪೈಕಿ ನಾಲ್ವರು ತಮ್ಮ ಐದು ವರ್ಷಗಳ ಅವಧಿಯಲ್ಲಿ ಒಮ್ಮೆಯೂ ಲೋಕಸಭೆಯ ಒಂದೂ ಚರ್ಚೆಯಲ್ಲಿ ಪಾಲ್ಗೊಂಡಿಲ್ಲ ಎಂಬ ಸಂಗತಿ ಬೆಳಕಿಗೆ ಬಂದಿದೆ.ಶನಿವಾರವಷ್ಟೇ 17ನೇ ಲೋಕಸಭೆಯ ಕೊನೆಯ ಅಧಿವೇಶನ ಮುಗಿದಿದೆ. ಇದರ ಬೆನ್ನಲ್ಲೇ ಲೋಕಸಭೆಯ ಅಧಿಕೃತ ಅಂಕಿ-ಅಂಶ ಆಧರಿಸಿ ಪಿಆರ್‌ಎಸ್‌ ಲೆಜಿಸ್ಲೇಟಿವ್‌ ಸಂಸ್ಥೆ ಬಿಡುಗಡೆ ವರದಿಯೊಂದನ್ನು ಬಿಡುಗಡೆ ಮಾಡಿದೆ.ಅದರ ಪ್ರಕಾರ, ರಾಜ್ಯದ ಅನಂತಕುಮಾರ ಹೆಗಡೆ (ಉತ್ತರ ಕನ್ನಡ), ರಮೇಶ ಜಿಗಜಿಣಗಿ (ವಿಜಯಪುರ), ಬಿ.ಎನ್‌. ಬಚ್ಚೇಗೌಡ (ಚಿಕ್ಕಬಳ್ಳಾಪುರ) ಹಾಗೂ ವಿ. ಶ್ರೀನಿವಾಸ ಪ್ರಸಾದ್‌ (ಚಾಮರಾಜನಗರ) ಕಳೆದ 5 ವರ್ಷದಲ್ಲಿ ಸದನದಲ್ಲಿ ನಡೆದ ಒಂದೂ ಚರ್ಚೆಯಲ್ಲಿ ಪಾಲ್ಗೊಂಡಿಲ್ಲ ಎಂಬ ಮಾಹಿತಿ ಲಭಿಸಿದೆ.

ಕ್ಷೇತ್ರದ ಅಭಿವೃದ್ದಿ ವಿಚಾರ ಮುಖ್ಯಮಂತ್ರಿಗಳ ಜೊತೆ ಶಾಸಕರ ಮಾತುಕತೆ

Posted by Vidyamaana on 2023-08-16 14:25:11 |

Share: | | | | |


ಕ್ಷೇತ್ರದ ಅಭಿವೃದ್ದಿ ವಿಚಾರ ಮುಖ್ಯಮಂತ್ರಿಗಳ ಜೊತೆ ಶಾಸಕರ ಮಾತುಕತೆ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈಯವರು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಜೊತೆ ಮಾತುಕತೆ ನಡೆಸಿ ಪುತ್ತೂರು ಕ್ಷೇತ್ರದ ಅಭಿವೃದ್ದಿಗೆ ಸಂಬಂದಿಸಿದಂತೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಿದ್ದಾರೆ.

ಪ್ರಮುಖವಾಗಿ ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡಿಸುವ ಮೂಲಕ ಪುತ್ತೂರಿನ ಜನತೆಯ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ಕಾಲೇಜು ಮಂಜೂರು ಮಾಡುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡರು. ಮಂಗಳೂರಿನಲ್ಲಿರುವ ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವ ಬಗ್ಗೆ ಕೆಲವೊಂದು ಪ್ರಕ್ರಿಯೆಗಳು ಪೂರ್ಣಗೊಂಡಿದ್ದು ಎಸ್ ಪಿ ಕಚೇರಿಯನ್ನು ಶೀಘ್ರವೇ ಪುತ್ತೂರಿಗೆ ಸ್ಥಳಾಂತರ ಮಾಡುವ ಬಗ್ಗೆ ವಿನಂತಿಸಿಕೊಂಡಿದ್ದಾರೆ. ಪುತ್ತೂರು ಕ್ಷೇತ್ರದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಈಗಾಗಲೇ ಅರ್ಧದಷ್ಟು ಅನುದಾನ ಮಂಜೂರಾಗಿದ್ದು ಯೋಜನೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸುವ ಮೂಲಕ ಕ್ಷೇತ್ರದ ಜನತೆಯ ಕುಡಿಯುವ ನೀರಿನ ಬೇಡಿಕೆಯನ್ನು ಈಡೇರಿಸುವಂತೆ ಮನವಿ ಮಾಡಲಾಗಿದೆ. ಕೊಯಿಲ ಪಶು ಸಂಗೋಪನಾ ಇಲಾಖೆಯಲ್ಲಿ ಖಾಸಗಿಯವರಿಗೆ ಉದ್ಯಮಕ್ಕೆ ಅವಕಾಶ ನೀಡುವ ಕುರಿತು ಈಗಾಗಲೇ ಸರಕಾರಕ್ಕೆ ಸಚಿವರ ಮೂಲಕ ಮನವಿ ಸಲ್ಲಿಸಲಾಗಿದ್ದು ಈ ಯೋಜನೆಗೆ ಅಸ್ತು ನೀಡುವಂತೆ ಕೇಳಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಹೊಸ ಕಟ್ಟಡಕ್ಕೆ ೩೨ ಕೋಟಿ ರೂ ಅನುದಾನ ಬೇಕಾಗಿದ್ದು ಅದನ್ನು ಬಿಡುಗಡೆ ಮಾಡುವಂತೆ ಶಾಸಕರು ಮುಖ್ಯಮಂತ್ರಿಗಳ ಮನವಿ ಮಾಡಿದರು.


ಪುತ್ತೂರು ದೇವಳಕ್ಕೆ ೨೫ ಕೋಟಿ

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ ೨೫ ಕೋಟಿ ರೂ ಅನುದಾನ ನೀಡುವಂತೆ ಮುಖ್ಯಮಂತ್ರಿಗಳ ಬಳಿ ಶಾಸಕರು ಮನವಿ ಮಾಡಿದರು. ದೇವಳದಲ್ಲಿ ಅನೇಕ ಕಾಮಗಾರಿಗಳು ನಡೆಯಬೇಕಿದ್ದು ಕ್ಷೇತ್ರದ ಒಟ್ಟು ಅಭಿವೃದ್ದಿಗೆ ೨೫ ಕೋಟಿ ಅನುದಾನವನ್ನು ನೀಡುವಂತೆ ಕೇಳಿಕೊಂಡಿದ್ದಾರೆ. ಶಾಸಕರ ಬೇಡಿಕೆಯನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು ಬೇಡಿಕೆ ಈಡೇರಿಸುವ ಭರವಸೆಯನ್ನು ನೀಡಿದ್ದಾರೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ದ ಕ ಜಿಲ್ಲಾ ಉಸ್ತುವಾರಿ ಸಚಿವರಾದದಿನೇಶ್ ಗುಂಡೂರಾವ್, ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್‌ಕುಮಾರ್ ಉಪಸ್ಥಿತರಿದ್ದರು.

ಎಲೆಕ್ಷನ್‌ಗೆ ನಿಂತುಕೊಳ್ಳೋಕೆ ನನ್ನತ್ರ ದುಡ್ಡಿಲ್ಲ ಎಂದ ಹಣಕಾಸು ಸಚಿವೆ! ಇದು ನಿಜನಾ? ಇವರ ಒಟ್ಟು ಆಸ್ತಿ ಎಷ್ಟು

Posted by Vidyamaana on 2024-03-28 17:11:08 |

Share: | | | | |


ಎಲೆಕ್ಷನ್‌ಗೆ ನಿಂತುಕೊಳ್ಳೋಕೆ ನನ್ನತ್ರ ದುಡ್ಡಿಲ್ಲ ಎಂದ ಹಣಕಾಸು ಸಚಿವೆ! ಇದು ನಿಜನಾ? ಇವರ ಒಟ್ಟು ಆಸ್ತಿ ಎಷ್ಟು

ನವದೆಹಲಿ: ಕೇಂದ್ರ ಹಣಕಾಸು ಸಚಿವೆಯೇ (Finance Minister Nirmala Sitharaman) ತನ್ನ ಬಳಿ ಹಣ ಇಲ್ಲದ ಕಾರಣ ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ಹೇಳಿಕೆ ನೀಡಿರುವುದು ಎಲ್ಲರ ಹುಬ್ಬೇರಿಸಿದೆ. ಚುನಾವಣೆಗೆ ಬೇಕಾದಷ್ಟು ಹಣ ಇಲ್ಲದ ಕಾರಣ ನಾನು ಈ ಬಾರಿ ಚುನಾವಣೆಗೆ ನಿಲ್ಲುತ್ತಿಲ್ಲ ಎಂದು ಸಚಿವೆ ನಿರ್ಮಲಾ ಸೀತಾರಾಮನ್​​ ಟೈಮ್ಸ್ ನೌ ಶೃಂಗಸಭೆ 2024ರಲ್ಲಿ ಹೇಳಿಕೆ ನೀಡಿದ್ದಾರೆ.ಬಿಜೆಪಿ ಅಧ್ಯಕ್ಷ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವ ಆಯ್ಕೆಯನ್ನು ನೀಡಿದ್ದರು. ನಾನು ಸುಮಾರ 10 ದಿನಗಳ ಕಾಲ ಯೋಚಿಸಿ ಕೊನೆಗೆ ಸ್ಪರ್ಧಿಸೋಲ್ಲ ಎಂದು ತಿಳಿಸಿದೆ. ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ. ಇನ್ನು ಚುನಾವಣೆಗೆ ನಿಲ್ಲಲು ಆಂಧ್ರಪ್ರದೇಶ ಅಥವಾ ತಮಿಳುನಾಡು ಎರಡೂ ಕಡೆ ನನಗೆ ಸಮಸ್ಯೆ ಇದೆ. ನೀವು ಯಾವ ಸಮುದಾಯದವರು ಅಥವಾ ನಿಮ್ಮ ಧರ್ಮ ಯಾವುದು ಎಂಬೆಲ್ಲಾ ವಿಷಯಗಳು ಚುನಾವಣೆಯಲ್ಲಿ ಮಾನದಂಡವಾಗುತ್ತೆ. ಅವುಗಳನ್ನು ನಾನು ಎದುರಿಸಿ ನಿಭಾಯಿಸಬಲ್ಲೆ ಎಂಬ ಭರವಸೆ ಇಲ್ಲ. ಹಾಗಾಗಿ ನಾನು ಚುನಾವಣೆಗೆ ಸ್ಪರ್ಧಿಸುವ ಪ್ರಸ್ತಾಪವನ್ನು ತಿರಸ್ಕರಿಸಿದೆ. ನನ್ನ ವಾದವನ್ನು ಪಕ್ಷ ಕೂಡ ಒಪ್ಪಿಕೊಂಡಿದೆ ಎಂದು ಸಚಿವೆ ತಿಳಿಸಿದ್ದಾರೆ.ಭಾರತದ ಹಣ ನನ್ನದಲ್ಲ


Recent News


Leave a Comment: