KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಸುದ್ದಿಗಳು News

Posted by vidyamaana on 2024-07-24 17:11:55 |

Share: | | | | |


KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪ ಸವಳಂಗ ಚಿನ್ನಿಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಕೆಎಸ್‌ಆರ್‌ಟಿಸಿ ಬಸ್ಸು ಹಾನಗಲ್‌ನಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತುಎನ್ನಲಾಗಿದೆ.

ಕ್ರೈಸ್ತ ಧರ್ಮಗುರು ಇದ್ದ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು. ಚಿನ್ನಿಕಟ್ಟೆ ಬಳಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶಿಕಾರಿಪುರ ಧರ್ಮಕೇಂದ್ರದ ಧರ್ಮಗುರು ಆಂಥೋಣಿ ಪೀಟರ್‌ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ನ್ಯಾಮತಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

 Share: | | | | |


ಪುತ್ತೂರು ನಗರ ಠಾಣಾ ಪೊಲೀಸರ ಭರ್ಜರಿ ಬೇಟೆ

Posted by Vidyamaana on 2024-03-23 19:42:29 |

Share: | | | | |


ಪುತ್ತೂರು ನಗರ ಠಾಣಾ ಪೊಲೀಸರ ಭರ್ಜರಿ ಬೇಟೆ

ಪುತ್ತೂರು :ನಗರ ಠಾಣಾ ಪೊಲೀಸರು ತಮಿಳುನಾಡು ಮೂಲದ ಅಂತರ್ ರಾಜ್ಯ ಕಳ್ಳಿಯನ್ನು ಬಂಧಿಸಿದ್ದು, ಅಕೆಯಿಂದ ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ.


ಪೆ. 12ರಂದು ಪುತ್ತೂರು ನಗರದ KSRTC ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಈ ಪ್ರಕರಣವನ್ನು ಪುತ್ತೂರು ನಗರ ಠಾಣಾ ಪೊಲೀಸರು ವಿವಿಧ ಆಯಾಮಗಳಿಂದ ತನಿಖೆ ನಡೆಸಿದ್ದು, ಪ್ರಕರಣದ ಆರೋಪಿ ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿ ಈಸ್ಟರಿ (45) ಎಂಬಾಕೆಯನ್ನು ವಶಕ್ಕೆ ತೆಗೆದುಕೊಳ್ಳಲಾಯಿತು. ಆಕೆಯ ಬಳಿಯಿದ್ದ ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಸ್ವಾಧಿನಪಡಿಸಿಕೊಳ್ಳಲಾಗಿದೆ.


ಈ ಪ್ರಕರಣವನ್ನು ಬೇದಿಸುವಲ್ಲಿ ದ ಕ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ ಬಿ ರಿಷ್ಯತ್ ಮತ್ತು ದ ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎಮ್ ಎನ್ ರವರ ನಿರ್ದೇಶನದಲ್ಲಿ ಪುತ್ತೂರು ಉಪವಿಭಾಗದ ಉಪಾಧೀಕ್ಷಕ ಅರುಣ್ ನಾಗೇಗೌಡ ಅವರ ಮಾರ್ಗದರ್ಶನದಲ್ಲಿ, ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ಸತೀಶ್ ಜಿ ಜೆ, ರವರ ಸಾರಥ್ಯದಲ್ಲಿ ಪುತ್ತೂರು ನಗರ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ನಂದಕುಮಾರ್ ಎಮ್ ಎಮ್ ಹಾಗೂ ಸುಬ್ರಹ್ಮಣ್ಯ ಹೆಚ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹೆಚ್ ಸಿ ಸ್ಕರಿಯ ಎಮ್ ಎ. ಹೆಚ್ ಸಿ ಕೆ ಬಸವರಾಜ, ಹೆಚ್ ಸಿ ಜಗದೀಶ್, ಹೆಚ್ ಸಿ ಸುಬ್ರಹ್ಮಣ್ಯ, ಪಿಸಿ ವಿನಾಯಕ ಎಸ್ ಬಾರ್ಕಿ, ಪಿಸಿ ಶರಣಪ್ಪ ಪಾಟೀಲ್, ಮಪಿಸಿ ರೇವತಿ ಹಾಗೂ ದ.ಕ ಜಿಲ್ಲಾ ಗಣಕ ಯಂತ್ರ ವಿಭಾಗದ ಎಹೆಚ್ ಸಿ ಸಂಪತ್ ಮತ್ತು ಸಿಪಿಸಿ ದಿವಾಕರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

ಸುಳ್ಯ; ಐಸ್ ಕ್ರೀಂ ಉದ್ಯಮಿ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣ

Posted by Vidyamaana on 2023-11-09 10:19:08 |

Share: | | | | |


ಸುಳ್ಯ; ಐಸ್ ಕ್ರೀಂ ಉದ್ಯಮಿ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣ

ಸುಳ್ಯ; ಐಸ್ ಕ್ರೀಂ ಉದ್ಯಮಿ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳಿಗೆ ಬೆಂಗಳೂರಿನ ಸಿಟಿ ಏಳನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.


ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಶ್ವರ್ಯಾ ಮಾವ ಗಿರಿಯರಪ್ಪ ಗೌಡ ಕಾಪಿಲ, ಅತ್ತೆ,ಸೀತಮ್ಮ ಗಂಡ ರಾಜೇಶ್, ಮೈದುನ ವಿಜಯ್, ಮೈದುನನ ಪತ್ನಿ ತಸ್ಮಯ್ ಅವರನ್ನು ಪೊಲೀಸರು ಗೋವಾದಲ್ಲಿ ಬಂಧಿಸಿದ್ದರು. ಇನ್ನುಳಿದ ಆರೋಪಿಗಳಾದ ಐಶ್ವರ್ಯ ತಂದೆಯ ಅಕ್ಕ ಗೀತಾ, ಅವರ ಪತಿ ರವೀಂದ್ರನಾಥ ಕೇವಳ ಹಾಗೂ ಅವರ ಪುತ್ರಿ ಲಿಪಿ ಅವರು ತಲೆಮರೆಸಿಕೊಂಡಿದ್ದರು. ಇದೀಗ ಅವರಿಗೆ ನಿರೀಕ್ಷಣಾ ಜಾಮೀನು ಲಭಿಸಿದೆ.ಆರೋಪಿಗಳ ಪರವಾಗಿ ನ್ಯಾಯವಾದಿ ರಾಜೇಶ್ ಕೆ.ಎಸ್.ಎನ್. ವಾದಿಸಿದ್ದರು

ಚೀನಾದ ನ್ಯೂಮೋನೀಯ ಪರಿಣಾಮ : ಆಸ್ಪತ್ರೆಗಳ ಸನ್ನದ್ಧತೆಯನ್ನು ಪರಿಶೀಲಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಲಹೆ

Posted by Vidyamaana on 2023-11-26 20:08:05 |

Share: | | | | |


ಚೀನಾದ ನ್ಯೂಮೋನೀಯ ಪರಿಣಾಮ : ಆಸ್ಪತ್ರೆಗಳ ಸನ್ನದ್ಧತೆಯನ್ನು ಪರಿಶೀಲಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಲಹೆ

ದೆಹಲಿ : ಚೀನಾದಲ್ಲಿ ನ್ಯುಮೋನಿಯಾ ಪ್ರಕರಣಗಳು ಹೆಚ್ಚಾಗುತ್ತಿರುವ ಮಧ್ಯೆ ಸಾರ್ವಜನಿಕ ಆರೋಗ್ಯ ಮತ್ತು ಆಸ್ಪತ್ರೆಗಳ ಸನ್ನದ್ಧತೆಯ ಕ್ರಮಗಳನ್ನು ತತ್ ಕ್ಷಣವೇ ಪರಿಶೀಲಿಸುವಂತೆ ಕೇಂದ್ರ ಸರಕಾರ ಇಂದು ರಾಜ್ಯ ಸರಕಾರಗಳಿಗೆ ಸೂಚನೆ ನೀಡಿದೆ. ಚೀನಾದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಕೇಂದ್ರ ಸರಕಾರ ಹೇಳಿದ್ದು, ಸದ್ಯಕ್ಕೆ ಯಾವುದೇ ಎಚ್ಚರಿಕೆಗೆ ಯಾವುದೇ ಕಾರಣವಿಲ್ಲ" ಎಂದು ಒತ್ತಿ ಹೇಳಿದೆ.ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ಪತ್ರ ಬರೆದಿದ್ದು, ಆಸ್ಪತ್ರೆಗಳಲ್ಲಿ ಹಾಸಿಗೆಗಳು, ಔಷಧಗಳು ಮತ್ತು ಇನ್ಫ್ಲುಯೆನ್ಸಕ್ಕೆ ಲಸಿಕೆಗಳು, ವೈದ್ಯಕೀಯ ಆಮ್ಲಜನಕ, ಪ್ರತಿಜೀವಕಗಳು, ವೈಯಕ್ತಿಕ ರಕ್ಷಣ ಸಾಧನಗಳು, ಆಮ್ಲಜನಕ ಸ್ಥಾವರಗಳು ಮತ್ತು ವೆಂಟಿಲೇಟರ್‌ಗಳ ಕಾರ್ಯವೈಖರಿ, ಆರೋಗ್ಯ ಸೌಲಭ್ಯಗಳಲ್ಲಿನ ಸೋಂಕು ನಿಯಂತ್ರಣ ಅಭ್ಯಾಸಗಳು,ಪರೀಕ್ಷಾ ಕಿಟ್‌ಗಳಂತಹ ವೈದ್ಯಕೀಯ ಮೂಲಸೌಕರ್ಯಗಳನ್ನು ಹೆಚ್ಚಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶಿಸಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ನೀಡಿದೆ. ಸಣ್ಣ ಮಕ್ಕಳಲ್ಲಿ ಮೈಕ್ರೋಪ್ಲಾಸ್ಮಾ ನ್ಯುಮೋನಿಯಾ(ವಾಕಿಂಗ್‌ ನ್ಯುಮೋನಿಯಾ) ಸಾಮಾನ್ಯ ಬ್ಯಾಕ್ಟೀರಿಯಾ ಆಧಾರಿತ ಸಮಸ್ಯೆ ಚೀನಾದಲ್ಲಿ ಕಾಣಿಸಿಕೊಂಡ ಬಳಿಕ ಬೀಜಿಂಗ್‌ ಮತ್ತು ಲಿಯನಾನಿಂಗ್‌ ಪ್ರಾಂತ್ಯಗಳ ಆಸ್ಪತ್ರೆಗಳಲ್ಲಿ ಮಕ್ಕಳು ಚಿಕಿತ್ಸೆಗೆ ಆಗಮಿಸುವ ಸಂಖ್ಯೆ ಹೆಚ್ಚಾಗಿದೆ. ಆದರೆ, ಹೊಸ ಸಮಸ್ಯೆಗೆ ಕಾರಣ ಏನು ಎಂಬ ಬಗ್ಗೆ ಅಲ್ಲಿನ ಸರಕಾರ ಸ್ಪಷ್ಟನೆ ನೀಡಿಲ್ಲವಾಗಿದೆ.

ಯಾವುದೇ ಸಮಸ್ಯೆಯಾದರೂ ನನಗೆ ಅಥವಾ ನನ್ನ‌ಕಚೇರಿಗೆ ಮಾಹಿತಿ ಕೊಡಿ: ಶಾಸಕ ಅಶೋಕ್ ರೈ ಮನವಿ

Posted by Vidyamaana on 2024-06-27 21:21:41 |

Share: | | | | |


ಯಾವುದೇ ಸಮಸ್ಯೆಯಾದರೂ ನನಗೆ ಅಥವಾ ನನ್ನ‌ಕಚೇರಿಗೆ ಮಾಹಿತಿ ಕೊಡಿ: ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಮಳೆ ಧಾರಾಕಾರವಾಗಿ ಸುರಿಯುತ್ತಿದೆ. ಅಲ್ಲಲ್ಲಿ ಮಳೆಯ ಕಾರಣಕ್ಕೆ ಅವಘಡಗಳು ಸಂಭವಿಸುತ್ತಲೇ ಇದೆ. ಸಾರ್ವಜನಿಕರು ಬಹಳ ಎಚ್ಚರದಿಂದ ಇರಬೇಕು. ಮಕ್ಕಳನ್ನು ಮನೆಯಿಂದ ಹೊರಗಡೆ ಕಳುಹಿಸಬೇಡಿ. ಹೊಳೆ,ಕೆರೆ,ಭಾವಿಯ ಕಡೆ ಮಕ್ಕಳು ತೆರಳದಂತೆ ಎಚ್ಚರವಹಿಸಿ. ವಿದ್ಯುತ್ ಕಂಬ, ಮನೆಯ ವಿದ್ಯುತ್ ಮೀಟರ್, ಟ್ರಾನ್ಸ್ ಫಾರ್ಮರ್ ,ವಿದ್ಯುತ್ ಕಂಬ ಮುಟ್ಟಲು ಹೋಗಬೇಡಿ. ಬಾವಿ ಕುಸಿಯುತ್ತಿರುವ ಘಟನೆಗಳು ನಡೆದಿದ್ದು ಬಾವಿಯಿಂದ ದೂರ ಇರಿ. ಮನೆಯ ಬಳಿ ಧರೆ ಇದ್ದರೆ ಅದಕ್ಕೆ ಪ್ಲಾಸ್ಡಿಕ್ ಹೊದಿಕೆ ಹಾಕಿ ನೀರು ಇಂಗದಂತೆ ನೋಡಿಕೊಳ್ಳಿ. ಧರೆ ಕುಸಿಯುವ ಭೀತಿಯಲ್ಲಿದ್ದರೆ ತಕ್ಷಣ ನನಗೆ ಅಥವಾ ನನ್ನ ಕಚೇರಿಗೆ ಕರೆ ಮಾಡಿ ತಿಳಿಸಿ. 

ಆ 21-ಪುತ್ತೂರು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ

Posted by Vidyamaana on 2024-08-15 05:26:05 |

Share: | | | | |


ಆ 21-ಪುತ್ತೂರು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ ಆಂಜನೇಯ ರೆಡ್ಡಿಯವರ ಮುಂದಾಳತ್ವದಲ್ಲಿ ಕೊಂಬೆಟ್ಟು ಪ.ಪೂ ಕಾಲೇಜು ಪ್ರೌಢಶಾಲಾ ವಿಭಾಗದ ಸಹಯೋಗದಲ್ಲಿ ಪುತ್ತೂರು ತಾಲೂಕಿನ ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ರಸಪ್ರಶ್ನೆಯನ್ನು ಆಯೋಜಿಸಲಾಗಿದ್ದು, ಈ ಸ್ಪರ್ಧೆಗೆ ಶಾಲೆಗಳಿಂದ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದೆ.

ಒಡಿಶಾ ರೈಲು ದುರಂತದ ಬಗ್ಗೆ ಟ್ವಿಟ್ ಮಾಡಲು ಹೋಗಿ ಯಡವಟ್ಟು ಮಾಡಿಕೊಂಡ ನಳೀನ್ ಕುಮಾರ್ ಕಟೀಲ್

Posted by Vidyamaana on 2023-06-03 23:22:27 |

Share: | | | | |


ಒಡಿಶಾ ರೈಲು ದುರಂತದ ಬಗ್ಗೆ ಟ್ವಿಟ್ ಮಾಡಲು ಹೋಗಿ ಯಡವಟ್ಟು ಮಾಡಿಕೊಂಡ ನಳೀನ್ ಕುಮಾರ್ ಕಟೀಲ್

ಬೆಂಗಳೂರು: ಒಡಿಶಾ ರೈಲು ದುರಂತದ ಬಗ್ಗೆ ಟ್ವಿಟ್ ಮಾಡಲು ಹೋಗಿ ನಳೀನ್ ಕುಮಾರ್ ಕಟೀಲ್ ಯಡವಟ್ಟು ಮಾಡಿಕೊಂಡಿದ್ದಾರೆ.ಟ್ವಿಟ್ ನಲ್ಲಿ ರೈಲು ಬೋಗಿಗಳು ಹೊತ್ತಿ ಉರಿಯುತ್ತಿರುವಂತ ಯಾವುದೋ ಪೋಟೋ ಹಾಕಿ, ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇಂದು ಈ ಘಟನೆ ಸಂಬಂಧ ಟ್ವಿಟ್ ಮಾಡಿದ್ದಂತ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು, ಒಡಿಶಾದಲ್ಲಿ ಸರಣಿ ರೈಲು ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ನಾಗರಿಕ ಬಂಧುಗಳ ಆತ್ಮಕ್ಕೆ ಸದ್ಗತಿ ಕೋರುತ್ತಾ ಗಾಯಗೊಂಡಿರುವ ಪ್ರಯಾಣಿಕರು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥನೆ ಎಂದಿದ್ದರು. ಆದ್ರೇ ಹೀಗೆ ಟ್ವಿಟ್ ಗೆ ಹಾಕಿದ್ದಂತ ಪೋಟೋ ನಿನ್ನೆಯ ಘಟನೆ ಪೋಟೋ ಆಗಿರಲಿಲ್ಲ.

ಈ ಬಗ್ಗೆ ಅನೇಕರು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಮಾಡಿದ್ದಂತ ಟ್ವಿಟ್ಟರ್ ವಿಷಯದ ಪೋಟೋ ಕಂಡು ಹೌಹಾರಿದ್ದರು. ಜೊತೆಗೆ ಅಚ್ಚರಿಯನ್ನು ವ್ಯಕ್ತಪಡಿಸಿ, ಇದು ಒಡಿಶಾದಲ್ಲಿನ ರೈಲುಗಳ ಅಪಘಾತದ ಪೋಟೋವಲ್ಲ. ಬದಲಾಗಿ ವಿದೇಶದಲ್ಲಿ ನಡೆದಿದ್ದಂತ ರೈಲುಗಳ ಮುಖಾಮುಖಿ ಡಿಕ್ಕಿಯ ಪೋಟೋ ಇರಬೇಕು ಎಂಬುದಾಗಿ ಕಮೆಂಟ್ ಮಾಡಿದ್ದರು. ಕೊನೆಗೆ ಎಚ್ಚೆತ್ತುಕೊಂಡು ಫೋಟೋ ಬದಲಾಯಿಸಿದ್ದಾರೆ.

Recent News


Leave a Comment: