ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಿ ಸದನದಲ್ಲಿ ತುಳುವಿನಲ್ಲೇ ವಿಚಾರಮಂಡಿಸಿದ ಶಾಸಕ ಅಶೋಕ್ ರೈ

ಸುದ್ದಿಗಳು News

Posted by vidyamaana on 2024-07-24 16:44:22 |

Share: | | | | |


ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಿ ಸದನದಲ್ಲಿ ತುಳುವಿನಲ್ಲೇ ವಿಚಾರಮಂಡಿಸಿದ ಶಾಸಕ ಅಶೋಕ್ ರೈ

ಪುತ್ತೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಸೇರಿಸಬೇಕು ಎಂದು ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ತುಳು ಭಾಷೆಯಲ್ಲೇ ವಿಧಾನಸಭಾ ಅಧಿವೇಶನದಲ್ಲಿ ವಿಚಾರವನ್ನು ಮಂಡಿಸಿದ್ದು , ಶಾಸಕರ ಬೇಡಿಕೆಗೆ ಸರಕಾರದಿಂದ ಗಟ್ಟಿ ಭರವಸೆ ದೊರೆತಿದ್ದು ಮುಂದಿನ ದಿನಗಳಲ್ಲಿ ನಿಮ್ಮ ಬೇಡಿಕೆ ಈಡೇರಲಿದೆ ಎಂದು ಸರಕಾರ ಭರವಸೆಯನ್ನು ನೀಡಿದೆ.

ತುಳುವಿಗೆ ೨೦೦೦ ವರ್ಷದ ಇತಿಹಾಸವಿದೆ

ತುಳುಭಾಷೆಗೆ ಎರಡು ಸಾವಿರ ವರ್ಷದ ಇತಿಹಾಸವಿದೆ. ತುಳು ಮಾತನಾಡುವ ಮಂದಿ ವಿಶ್ವದೆಲ್ಲೆಡೆ ಇದ್ದಾರೆ. ತುಳು ಭಾಷೆಗೆ ಮಾನ್ಯತೆ ಸಿಗಬೇಕು ಎಂದು ಅನೇಕ ವರ್ಷಗಳಿಂದ ಹೋರಾಟಗಳು ನಡೆಯುತ್ತಿದೆ. ಎಟಂನೇ ಪರಿಚ್ಚೇಧಕ್ಕೆ ಸೇರ್ಪಡೆ ಮಾಡಬೇಕು ಎಂಬ ಬೇಡಿಕೆ ಇನ್ನೊಂದು ಕಡೆ ಇದೆ ಇದೆಲ್ಲದರ ನಡುವೆ ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂಬ ಆಗ್ರಹವನ್ನು ಶಾಸಕನಾಗಿ ಕಳೆದ ಒಂದು ವರ್ಷದಿಂದ ಮಾಡುತ್ತಿದ್ದೇನೆ.

೧೯೯೪ ರಲ್ಲಿ ವೀರಪ್ಪ ಮೊಯಿಲಿಯವರು ಮುಖ್ಯಮಂತ್ರಿಯಾಗಿದ್ದ ವೇಳೆ ತುಳು ಅಕಾಡೆಮಿಯನ್ನು ಸ್ಥಾಪನೆ ಮಾಡಿದ್ದಾರೆ, ೨೦೦೭ ರಲ್ಲಿ ಕೇರಳ ಸರಕಾರ ತುಳು ಅಕಾಡೆಮಿಯನ್ನು ಸ್ಥಾಪನೆ ಮಾಡಿದೆ, ಆಕಾಶವಾಣಿಯಲ್ಲಿ ೧೯೭೬ ರಿಂದ ಆಕಾಶವಾಣಿಯಲ್ಲಿ ತುಳು ಕಾರ್ಯಕ್ರಮ ಪ್ರಸಾರವಾಗುತ್ತಿದೆ, ಅಮೇರಿಕಾದಲ್ಲಿ ಸಿಆರ್ ಎಕ್ಸಾಮ್‌ಗೆ ಅರ್ಜಿ ನಮೂನೆಯಲ್ಲೂ ವಿಶ್ವದ ೧೨೨ ಭಾಷೆಯ ಜೊತೆಗೆ ತುಳುವಿಗೆ ಮಾನ್ಯತೆ ನೀಡಲಾಗಿದೆ, ಗೂಗಲ್ ಸಂಸ್ಥೆಯವರು ತರ್ಜುಮೆ ಮಾಡಬಲ್ಲ ಭಾಷೆಗಳ ಪಟ್ಟಿಯಲ್ಲಿ ತುಳುವನ್ನು ಸೇರ್ಪಡೆ ಮಾಡಿದ್ದಾರೆ. ಇಷ್ಟೆಲ್ಲಾ ಇರುವಾಗ ನಮ್ಮ ರಾಜ್ಯದಲ್ಲಿ ತುಳುವನ್ನು ಅದಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು.

ಮೂರು ರಾಜ್ಯಗಳಿಗೆ ಅಧ್ಯಯನ ತಂಡ ಕಳಿಸಿದ್ದೇನೆ

ಬಿಹಾರ, ಪಶ್ಚಿಮಬಂಗಾಳ ಮತ್ತು ಆಂದ್ರಕ್ಕೆ ವಿಶೇಷ ಪ್ರತಿನಿಧಿಯನ್ನು ತನ್ನ ಸ್ವಂತ ಖರ್ಚಿನಲ್ಲಿ ಕಳಿಸಿದ್ದೇನೆ. ಈ ಮೂರು ರಾಜ್ಯಗಳಲ್ಲಿ ಸ್ಥಳೀಯ ಭಾಷೆಯನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಯಾವ ಆಧಾರದಲ್ಲಿ ಘೋಷಣೆ ಮಾಡಿದ್ದಾರೆ ಎಂಬುದನ್ನು ಅಧ್ಯಯನ ನಡೆಲಲಾಗಿದೆ. ಆಂದ್ರದಿಂದ ವರದಿಯನ್ನು ತರಿಸಿದ್ದೇನೆ.. ಈ ವರದಿಯನ್ನು ಸರಕಾರದ ಮುಂದೆ ಇಡಲಿದ್ದು ಅದರ ಆಧಾರದಲ್ಲಿ ಕರ್ನಾಟಕದಲ್ಲಿ ತುಳುವನ್ನು ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಲು ಸಹಕಾರಿಯಾಗಲಿದೆ ಎಂಬ ಕಾರಣಕ್ಕೆ ನಾನು ಸ್ವಂತ ಖರ್ಚಿನಲ್ಲೇ ಅಧ್ಯಯನ ತಂಡವನ್ನು ಮೂರು ರಾಜ್ಯಗಳಿಗೆ ಕಳಿಸಿದ್ದೇನೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.

ವಿಶ್ವದಲ್ಲೇ ತುಳವರಿದ್ದಾರೆ, ತುಳುವರು ಎಲ್ಲರನ್ನೂ ಪ್ರೀತಿಯಿಂದ ಕಾಣುತ್ತಾರೆ.


ನಿಕ್ಲು ಗಲಾಟೆ ಮಲ್ಪೊಡ್ಚಿ ಕುಲ್ಲುಲೆ ಮಾರ್ರೆ

ಪುತ್ತೂರು ಶಾಸಕ ಅಶೋಕ್ ರೈಯವರು ಸದನದಲ್ಲಿ ತುಳು ಭಾಷೆಯಲ್ಲಿ ಮಾತನಾಡುವ ವೇಳೆ ಮಧ್ಯದಲ್ಲಿ ಮಾತನಾಡಿದ ಮಂಗಳೂರು ಶಾಸಕ ವೇದವ್ಯಾಸ ಕಾಮತ್‌ರಲ್ಲಿ ಈರ್ ಬೊಕ್ಕ ಪಾತೆರ‍್ಲೆ , ಇತ್ತೆ ಯಾನ್ ಪಾತರೊಂದುಲ್ಲೆ ಎಂದು ಶಾಸಕ ಅಶೋಕ್ ರೈ ವೇದವ್ಯಾಸ ಕಾಮತರಿಗೆ ಹೇಳಿದಾಗ ಮಧ್ಯಪ್ರವೇಶ ಮಾಡಿದ ಸಭಾಪತಿ ಯು ಟಿ ಖಾದರ್ ನಿಕ್ಲು ಗಲಾಟೆ ಮಲ್ಪೊಡ್ಚಿ ಮಾರ್ರೆ ಈರ್ ಕುಲ್ಲುಲೆ ಎಂದು ಶಾಸಕ ವೇದವ್ಯಾಸ ಕಾಮತರಿಗೆ ಕುಳಿತುಕೊಳ್ಳಲು ಹೇಳಿದರು.

 ಇದೇನು ಮಂಗಳೂರು ಅಧಿವೇಶನವಾ: ಆರ್ ಅಶೋಕ್

ಸದನದಲ್ಲಿ ಶಾಸಕ ಅಶೋಕ್ ರೈ ಮತ್ತು ಸಭಾಪತಿ ಯು ಟಿ ಖಾದರ್ ರವರು ತುಳುವಿನಲ್ಲಿ ಮಾತನಾಡುತ್ತಿದ್ದ ವೇಳೆ ಎದ್ದು ನಿಂತ ವಿರೋಧ ಪಕ್ಷದ ನಾಯಕ ಆರ್ ಆಶೋಕ್ ಇದೇನು ಮಂಗಳೂರು ಅಧಿವೇಶಧನವಾ? ಎಂದು ನಗುತ್ತಲೇ ಹೇಳಿದರು. ಈ ವೇಳೆ ಮಾತನಾಡಿದ ಶಾಸಕ ಅಶೋಕ್ ರೈಯವರು ವಿರೋಧ ಪಕ್ಷದ ನಾಯಕರಾದ ಆರ್ ಆಶೋಕ್ ರವರೇ ನಾವು ತುಳುವಿನಲ್ಲಿ ಮಾತನಾಡಿದ್ದನ್ನು ಕನ್ನಡದಲ್ಲಿ ಹೇಳುತ್ತೇನೆ. ನೀವು ನಮ್ಮ ಹೋರಾಟಕ್ಕೆ , ನಮ್ಮ ಬೇಡಿಕೆಗೆ ಬೆಂಬಲವನ್ನು ನೀಡಬೇಕು, ಇಡೀ ಸದನ ನಮ್ಮ ನಿಲುವಿಗೆ ಬೆಂಬಲ ನೀಡಬೇಕು ಅ ಮೂಲಕ ತುಳು ಭಾಷೆಗೆ ಸರಕಾರದಿಂದ ಮಾನ್ಯತೆ ದೊರೆಯುವಂತಾಗಲಿ ಇದಕ್ಕೆ ಎಲ್ಲರ ಸಹಕಾರವನ್ನು ಕೋರಿದರು. ತುಳುವಿಗೆ ಲಿಪಿ ಇದೆ, ವಿಶ್ವದಲ್ಲೆಡೆ ತುಳು ಮಾತನಾಡುವ ಮಂದಿ ಇದ್ದಾರೆ ಎಂದು ಹೇಳಿದ ಶಾಸಕ ಅಶೋಕ್ ರೈಯವರು ಸಭಾಧ್ಯಕ್ಷೆರೇ ಈರ್ ಸಪೋರ್ಟು ಮಲ್ಪೊಡು, ಈರ್‌ನ ಸಹಕಾರ ಎಂಕ್ಲೆಗ್ ಬೋಡು ಎಂದು ಮನವಿ ಮಾಡಿದರು.

ಅಶೋಕ್ ರೈಗೆ ಅಭಿನಂದನೆ ಸಲ್ಲಿಸಿದ ವೇದವ್ಯಾಸ ಕಾಮತ್

ಸದನದಲ್ಲಿ ಮಾತನಾಡಿದ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ತುಳು ವಿಚಾರದಲ್ಲಿ ಪ್ರಾರಂಭದಿಂದಲೇ ಸರಕರದ ಗಮನಸೆಳೆದ ಪುತ್ತೂರು ಶಾಸಕರಾದ ಅಶೋಕ್ ರೈಯವರಿಗೆ ಅಭಿನಂದನೆ ಸಲ್ಲಿಸುವುದಾಗಿ ಸಭೆಯಲ್ಲಿ ತಿಳಿಸಿದರು.

ನಿಮ್ಮ ಕಾಳಜಿಗೆ ಅಭಿನಂದನೆ; ಸಚಿವ ಖರ್ಗೆ

ತನ್ನ ಸ್ವಂತ ಖರ್ಚಿನಲ್ಲಿ ಅಧ್ಯಯನ ತಂಢವನ್ನು ಮೂರು ರಾಜ್ಯಕ್ಕೆ ಕಳುಹಿಸುವ ಮೂಲಕ ತನ್ನ ಊರಿನ ಮಾತೃಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಡಬೇಕು ಎನ್ನುವ ನಿಮ್ಮ ಕಾಳಜಿಗೆ ಅಭಿನಂದನೆ ಸಲ್ಲಿಸುವುದಾಗಿ ಸಚಿವ ಪ್ರಿಯಾಂಕ ಖರ್ಗೆ ಶಾಸಕ ಅಶೋಕ್ ರೈಯವರಿಗೆ ಅಭಿನಂದನೆ ಸಲ್ಲಿಸಿದರು. ಮಾತೃಭಷೆಯ ಮೇಲೆ ಎಲ್ಲರಿಗೂ ಪ್ರೀತಿ ಇರುತ್ತದೆ ಆದರಲ್ಲೂ ಅಶೋಕ್ ರೈಯವರು ಈವಿಚಾರದಲ್ಲಿ ಒಂದು ಹಜ್ಜೆ ಮುಂದೆ ಇದ್ದಾರೆ ಇದು ಅಭಿನಂದನಾರ್ಹ ಎಂದು ಸಚಿವರು ಸಭೆಯಲ್ಲಿ ಹೇಳಿದರು.

 ಖಂಡಿತವಾಗಿಯೂ ಬೇಡಿಕೆ ಈಡೇರಲಿದೆ: ಪ್ರಿಯಾಂಕ ಖರ್ಗೆ

ಡಾ. ಮೋಹನ್ ಆಳ್ವರ ನೇತೃತ್ವದ ಸಮಿತಿಯ ವರದಿಯಲ್ಲಿ ಸಾಧ್ಯವಿದೆ ಎಂಬುದರ ಬಗ್ಗೆ ವರದಿ ನೀಡಲಾಗಿದೆ.. ತನ್ನ ಸ್ವಂತ ಖರ್ಚಿನಲ್ಲಿ ತಂಡವನ್ನು ಕಳುಹಿಸಿ ಅಧ್ಯಯನ ನಡೆಸಿದ ಶಾಸಕ ಅಶೋಕ್ ರೈಯವರ ಕಾಳಜಿಯನ್ನು ಮೆಚ್ಚಲೇಬೇಕು. ತುಳು ಭಾಷೆ, ಅದರ ಸಂಸ್ಕೃತಿ, ಅದರ ಸೌಂದರ್ಯ, ಪ್ರಾಚೀನತೆ, ಎಲ್ಲವೂ ಗೌರವದಿಂದ ಕೂಡಿದೆ. ಸರಕಾರದ ಮುಂದೆ ಈ ಪ್ರಸ್ತಾಪ ಇದೆ. ತುಳುವಿಗೆ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವಲ್ಲಿ ಸರಕಾರಕ್ಕೆ ಮುತುವರ್ಜಿ ಇದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಪರವಾಗಿ ಮಾತನಾಡಿದ ಸಚಿವ ಪ್ರಿಯಾಂಕ ಖರ್ಗೆ ಸಭೆಗೆ ತಿಳಿಸಿದರು. ವೈಯುಕ್ತಿಕವಾಗಿಯೂ ಈ ಪ್ರಸ್ತಾಪಕ್ಕೆ ನನ್ನ ಬೆಂಬಲ ಇದೆ ಎಂದು ಸಚಿವರು ಹೇಳಿದರು.

ಸಚಿವರ ಸಭೆ ಕರೆದು ತೀರ್ಮಾನಿಸಿ: ಸಭಾಪತಿ

ಈ ವಿಚಾರದಲ್ಲಿ ಸರಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಸಚಿವರನ್ನೊಳಗೊಂಡಂತೆ ಆ ಭಾಗದ ಶಾಸಕರ ಸಭೆಯನ್ನು ಕರೆದು ತೀರ್ಮಾನ ಕೈಗೊಳ್ಳುವಂತೆ ಸಭಾಪತಿ ಯು ಟಿ ಖಾದರ್ ರವರು ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಸೂಚನೆಯನ್ನು ನೀಡಿದರು.

ಎರಡನೇ ಬಾರಿಗೆ ತುಳುವಿನಲ್ಲಿ ಮಾತು

ಶಾಸಕ ಅಶೋಕ್ ರೈಯವರು ತಾನು ಶಾಸಕನಾಗಿ ಮೊದಲ ಅಧಿವೇಶನದಲ್ಲೇ ತುಳುವಿನಲ್ಲಿ ಮಾತನಾಡಿದ್ದರು. ಈ ವಿಚಾರ ಅತೀ ಹೆಚ್ಚು ವೈರಲ್ ಆಗಿತ್ತು. ಅಧಿವೇಶನದ ಇತಿಹಾಸದಲ್ಲೇ ಮೊದಲ ಬಾರಿಗೆ ತುಳುವಿನಲ್ಲಿ ಮಾತನಾಡುವ ಮೂಲಕ ತುಳುವನ್ನು ವಿಶ್ವಕ್ಕೆ ಪರಿಚಯಿಸುವ ಕೆಲಸವನ್ನು ಮಾಡಿದ್ದರು. ಇದೀಗ ಎರಡನೇ ಬಾರಿಗೆ ತುಳುವಿನಲ್ಲಿ ಅಧಿವೇಶನದಲ್ಲಿ ಮಾತನಾಡಿರುವುದು ತುಳು ಭಾಷೆಗೆ ಸಿಕ್ಕ ಮಾನ್ಯತೆ ಎಂದೇ ಹೇಳಬಹುದು

 Share: | | | | |


ವರದಕ್ಷಿಣೆ ದುರಾಸೆಯಿಂದ ಗರ್ಭಿಣಿ ಪತ್ನಿಯನ್ನು ಹೊಡೆದು ಕೊಂದ ಪತಿ ಅರೆಸ್ಟ್

Posted by Vidyamaana on 2024-01-08 06:28:17 |

Share: | | | | |


ವರದಕ್ಷಿಣೆ ದುರಾಸೆಯಿಂದ ಗರ್ಭಿಣಿ ಪತ್ನಿಯನ್ನು ಹೊಡೆದು ಕೊಂದ ಪತಿ ಅರೆಸ್ಟ್

ದವಣಗೆರೆ :ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಪತಿ ಮಹಾಶಯ ಪತ್ನಿಯನ್ನು ಹೆಮೆಟ್ ನಿಂದ ಹೊಡೆದು ಕೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.ಜ.4ರಂದು ದಾವಣಗೆರೆಯ ಚನ್ನಗಿರಿ ತಾಲೂಕಿನ ನುಗ್ಗಿಹಳ್ಳಿ ಕ್ರಾಸ್ ಬಳಿ ಮೂರು ತಿಂಗಳ ಗರ್ಭಿಣಿಯನ್ನು ಪತಿಯೇ ಕೊಲೆಗೈದು ಬಳಿಕ ಅಪಘಾತ ಎಂದು ಬಿಂಬಿಸುವ ನಾಟಕವಾಡಿದ್ದ.


23 ವರ್ಷದ ಯಸೋಧಾ ಮೃತ ಮಹಿಳೆ. ಆರೋಪಿ ಪತಿ ತಿಪ್ಪೇಶ್ (28) ನನ್ನು ಪೊಲೀಸರು ಬಂಧಿಸಿದ್ದಾರೆ.


ಯಶೋಧಾ ಹಾಗೂ ತಿಪ್ಪೇಶ್ ಸಂಬಂಧಿಗಳೇ ಆಗಿದ್ದು, ಪ್ರೀತಿಸಿ ಆರುತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ತಿಪ್ಪೇಶ್ ಬಗ್ಗೆ ಯಶೋಧಾ ಮನೆಯವರಿಗೆ ಒಳ್ಳೆ ಅಭಿಪ್ರಾಯವಿರಲಿಲ್ಲ. ಹಾಗಾಗಿ ಮದುವೆಗೆ ಒಪ್ಪಿರಲಿಲ್ಲ. ಆದರೂ ಜೋಡಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಮದುವೆಯಾದ ಕೆಲ ತಿಂಗಳಲ್ಲೇ ತಿಪ್ಪೇಶ್ ವರದಕ್ಷಿಣೆಗಾಗಿ ಕಿರುಕುಳ ನೀಡಲಾರಂಭಿಸಿದ್ದ. ಅಲ್ಲದೇ ಯಶೋಧಾ ಮೂರು ತಿಂಗಳ ಗರ್ಭಿಣಿಯಾಗಿದ್ದಳು. ತವರಿಗೆ ಬಂದಿದ್ದ ಪತ್ನಿಯನ್ನು ತಿಪ್ಪೇಶ್ ವಾಪಾಸ್ ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಜ.4ರಂದು ಅಪಘಾತದಲ್ಲಿ ಯಶೋಧಾ ಸಾವನ್ನಪ್ಪಿದ್ದಾಳೆ ಎಂದು ನಾಟಕವಾಡಿದ್ದ. ಮಗಳ ಮೃತದೇಹ ಕಂಡು ಅನುಮಾನಗೊಂಡ ಯಶೋಧಾ ತಂದೆ ಚಂದ್ರಪ್ಪ, ಇದು ಅಪಘಾತವಲ್ಲ, ಕೊಲೆ ಎಂದು ದೂರು ದಾಖಲಿಸಿದ್ದರು.


ಆರೋಪಿ ಪತಿ ತಿಪ್ಪೇಶ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತನೇ ಹೆಲ್ಮೆಟ್ ನಿಂದ ಹೊಡೆದು ಪತ್ನಿಯನ್ನು ಕೊಲೆಗೈದಿದ್ದು, ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ ಎಂದು ಬಿಂಬಿಸಲು ಹೊರಟಿದ್ದಾಗಿ ಬಾಯ್ಬಿಟ್ಟಿದ್ದಾನೆ.

ಪುತ್ತೂರು : ಅನಾರೋಗ್ಯದಿಂದಿದ್ದ ಉರ್ಲಾಂಡಿ ನಿವಾಸಿ ಮಹೇಶ್ ಭಂಡಾರಿ ನಿಧನ..

Posted by Vidyamaana on 2023-09-19 06:49:32 |

Share: | | | | |


ಪುತ್ತೂರು : ಅನಾರೋಗ್ಯದಿಂದಿದ್ದ ಉರ್ಲಾಂಡಿ ನಿವಾಸಿ ಮಹೇಶ್ ಭಂಡಾರಿ ನಿಧನ..

ಪುತ್ತೂರು: ಪುತ್ತೂರು ಉರ್ಲಾಂಡಿ ನಿವಾಸಿ ಮಹೇಶ್ ಭಂಡಾರಿ (37.ವ) ಅಲ್ಪಕಾಲದ ಅನಾರೋಗ್ಯದಿಂದ ಸೆ.18ರಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಸಂಜೆ ನಿಧನರಾದರು.ಮಹೇಶ್‌ರವರು ಪುತ್ತೂರಿನ ಪ್ರತಿಷ್ಠಿತ ಜವಳಿ ಅಂಗಡಿಯಲ್ಲಿ ಹಲವಾರು ವರ್ಷಗಳಿಂದ ಸೇಲ್ಸ್ ಮೆನ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ನಂತರ ಫ್ಯಾನ್ಸಿ ಅಂಗಡಿಯನ್ನು ತೆರೆದಿದ್ದರು. ಮೃತರು ತಾಯಿ ರೇವತಿ, ಸಹೋದರಿಯರಾದ ವಿಜಯ, ಜ್ಯೋತಿರವರನ್ನು ಅಗಲಿದ್ದಾರೆ.

ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್ ಉಸ್ತುವಾರಿ

Posted by Vidyamaana on 2023-06-09 08:52:56 |

Share: | | | | |


ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್ ಉಸ್ತುವಾರಿ

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

BREAKING : ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭ : ದೆಹಲಿಗೆ ಆಗಮಿಸಿದ ಮಾಲ್ಮೀಮ್ಸ್ ಅಧ್ಯಕ್ಷ ಮೊಹಮ್ಮದ್ ಮುವೈಝ

Posted by Vidyamaana on 2024-06-09 15:02:46 |

Share: | | | | |


BREAKING : ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭ : ದೆಹಲಿಗೆ ಆಗಮಿಸಿದ ಮಾಲ್ಮೀಮ್ಸ್ ಅಧ್ಯಕ್ಷ ಮೊಹಮ್ಮದ್ ಮುವೈಝ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುವೈಝು ನವದೆಹಲಿಗೆ ಆಗಮಿಸಿದ್ದಾರೆ.

ತಲಪಾಡಿ ಗ್ರಾಪಂ ಅಧ್ಯಕ್ಷ ಚುನಾವಣೆಯಲ್ಲಿ ಎಸ್ಡಿಪಿಐಗೆ ಬೆಂಬಲ

Posted by Vidyamaana on 2023-08-11 16:23:55 |

Share: | | | | |


ತಲಪಾಡಿ ಗ್ರಾಪಂ ಅಧ್ಯಕ್ಷ ಚುನಾವಣೆಯಲ್ಲಿ ಎಸ್ಡಿಪಿಐಗೆ ಬೆಂಬಲ

ಉಳ್ಳಾಲ: ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಎಸ್ಡಿಪಿಐ ಗೆಲುವಿಗೆ ಕಾರಣರಾದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಸೂಚನೆ ಮೇರೆಗೆ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ. 


ತಲಪಾಡಿ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿಗೆ ಬಹುಮತ ಇದ್ದ ಕಾರಣ ಸತ್ಯರಾಜ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ನಿಲ್ಲಿಸಲಾಗಿತ್ತು. ಆದರೆ ಬಿಜೆಪಿ ಬೆಂಬಲಿತ ಸದಸ್ಯರಾದ ಮಹಮ್ಮದ್ ಫಯಾಝ್ ಮತ್ತು ಮಹಮ್ಮದ್ ಅವರು ಎಸ್ ಡಿಪಿಐ ನಾಯಕರ ಆಸೆ, ಆಮಿಷ, ಒತ್ತಡದಿಂದ ಅಡ್ಡ ಮತದಾನ ಮಾಡಿ ಎಸ್ ಡಿಪಿಐ ಗೆಲುವಿಗೆ ಕಾರಣರಾಗಿದ್ದು ತಪ್ಪೊಪ್ಪಿಕೊಂಡಿದ್ದಾರೆ. ಆದರೂ ಅವರು ಪಕ್ಷಕ್ಕೆ ದ್ರೋಹ ಬಗೆದ ಕಾರಣ ಕ್ರಮ‌ ಕೈಗೊಳ್ಳಲಾಗಿದೆ ಎಂದು ಬಿಜೆಪಿ ಮಂಡಲಾಧ್ಯಕ್ಷ ಚಂದ್ರಹಾಸ ಪಂಡಿತೌಸ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 




ಬಿಜೆಪಿ ಅಧಿಕಾರಕ್ಕಾಗಿ ಇರುವ ಪಕ್ಷವಲ್ಲ, ಎಸ್ ಡಿಪಿಐಗೆ ಬೆಂಬಲ ನೀಡುವ ಅಗತ್ಯವೂ ಇಲ್ಲ. ಗ್ರಾಮ ಪಂಚಾಯತ್ ನಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ ಮೀಸಲಾತಿ ಬಂದಿದ್ದು ಬಿಜೆಪಿಯಲ್ಲಿ ಪುಷ್ಪಲತಾ ಶೆಟ್ಟಿ ಮಾತ್ರ ಇದ್ದ ಕಾರಣ ಅವಿರೋಧವಾಗಿ ಉಪಾಧ್ಯಕ್ಷರಾಗಿದ್ದಾರೆ. ಎಸ್ ಡಿಪಿಐಗೆ ಬೆಂಬಲ, ಸಹಕಾರ ನೀಡಿಲ್ಲ, ಈ ಬಗ್ಗೆ ತಪ್ಪು ಸಂದೇಶ ಹೋಗಿದ್ದು ಕಾರ್ಯಕರ್ತರು ಗೊಂದಲಕ್ಕೀಡಾಗಬಾರದು ಎಂದು ತಿಳಿಸಿದರು. 


ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ, ಕಾರ್ಯದರ್ಶಿಗಳಾದ ಸತೀಶ್ ಕುಂಪಲ, ಜಯಶ್ರೀ ಕರ್ಕೇರ, ಮುಖಂಡರಾದ ಕಸ್ತೂರಿ ಪಂಜ, ರಣದೀಪ್ ಕಾಂಚನ್, ನವೀನ್ ಪಾದಲ್ಪಾಡಿ, ಜಿತೇಂದ್ರ ಶೆಟ್ಟಿ ತಲಪಾಡಿಗುತ್ತು, ಪುಷ್ಪಲತಾ ಶೆಟ್ಟಿ, ಹೇಮಂತ್ ಶೆಟ್ಟಿ ದೇರಳಕಟ್ಟೆ ಸುದ್ದಿಗೋಷ್ಠಿಯಲ್ಲಿದ್ದರು.

ಮಾ :4 ರಮಾನಾಥ ರೈ ಸಾರಥ್ಯದಲ್ಲಿ 12ನೇ ವರ್ಷದ ಮೂಡೂರು ಪಡೂರು ಬಯಲು ಕಂಬಳ ಉದ್ಘಾಟನೆ.

Posted by Vidyamaana on 2023-03-04 07:28:20 |

Share: | | | | |


ಮಾ :4 ರಮಾನಾಥ ರೈ ಸಾರಥ್ಯದಲ್ಲಿ 12ನೇ ವರ್ಷದ ಮೂಡೂರು ಪಡೂರು ಬಯಲು ಕಂಬಳ ಉದ್ಘಾಟನೆ.

ಬಂಟ್ವಾಳ :  ಕೂಡಿ ಬಾಳುವ ಮಹತ್ತರ ಉದ್ದೇಶ ಇಟ್ಟುಕೊಂಡು ಜಾನಪದ ಕ್ರೀಡೆಯಾಗಿರುವ ಕಂಬಳವನ್ನು ಮತ್ತೆ ಮುಂದುವರಿಸಲಾಗಿದೆ ಎಂದು ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ಮಾಜಿ ಸಚಿವ ಬಿ ರಮಾನಾಥ ರೈ ಹೇಳಿದರು. 

 ಕೆಪಿಸಿಸಿ ಸದಸ್ಯ ಪಿಯೂಸ್ ಎಲ್ ರೋಡ್ರಿಗಸ್ ಅವರ ಅಧ್ಯಕ್ಷತೆಯ ಕಂಬಳ ಸಮಿತಿಯ ಆಶ್ರಯದಲ್ಲಿನಡೆಯುವ ಬಂಟ್ವಾಳ ಸಮೀಪದ ನಾವೂರು ಗ್ರಾಮದ ಕೂಡಿಬೈಲಿನಲ್ಲಿ 12ನೇ ವರ್ಷದ ಮೂಡೂರು-ಪಡೂರು ಬಂಟ್ವಾಳ ಕಂಬಳಕ್ಕೆ ಮಾ :4 ರಂದು ಸಂಭ್ರಮದ ಚಾಲನೆ ನೀಡಿ ಬಳಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾಜಿ ಸಚಿವರಾದ ರಮಾನಾಥ ರೈ ಮಾತನಾಡಿದರು.ಅಲ್ಲಿಪಾದೆ ಸಂತ ಅಂಥೋನಿ ಚರ್ಚ್ ಧರ್ಮಗುರು ವಂದನೀಯ ಫೆಡ್ರಿಕ್ , ಶ್ರೀ ಕ್ಷೇತ್ರ ಕಾರಿಂಜ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪಿ ಜಿನರಾಜ ಅರಿಗ, ಮಂಗಳೂರು ಶಾಸಕ ಜೆ ಆರ್ ಲೋಬೋ, ಬಂಟ್ವಾಳ ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ, ಉಪಾಧ್ಯಕ್ಷೆ ಜೆಸಿಂತಾ ಡಿಸೋಜ, ಸದಸ್ಯರುಗಳಾದ ಲೋಲಾಕ್ಷ ಶೆಟ್ಟಿ, ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಜನಾರ್ದನ ಚೆಂಡ್ತಿಮಾರ್, ರಚನಾ ಪ್ರಶಸ್ತಿ ಪುರಸ್ಕೃತ ಪ್ರಗತಿಪರ ಕೃಷಿಕ ಲಿಯೋ ಫೆರ್ನಾಂಡಿಸ್ ಸರಪಾಡಿ, ನಾವೂರು ಗ್ರಾ ಪಂ ಅಧ್ಯಕ್ಷ ಬಿ ಉಮೇಶ್ ಕುಲಾಲ್, ಉಪಾಧ್ಯಕ್ಷೆ ಲವೀನಾ ವಿಲ್ಮಾ ಮೊರಾಸ್, ಜಿ ಪಂ ಮಾಜಿ ಸದಸ್ಯರಾದ ಬಿ ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ ಎಸ್ ಮುಹಮ್ಮದ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಅಕ್ರಮ-ಸಕ್ರಮ ಸಮಿತಿಯ ಮಾಜಿ ಅಧ್ಯಕ್ಷ ಕೆ ಮಾಯಿಲಪ್ಪ ಸಾಲ್ಯಾನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ತಾ ಪಂ ಮಾಜಿ ಸದಸ್ಯೆ ಫ್ಲೋಸಿ ಡಿಸೋಜ, ಬುಡಾ ಮಾಜಿ ಅಧ್ಯಕ್ಷಸ ದಾಶಿವ ಬಂಗೇರ, ಬಂಟ್ವಾಳ ತಾ ಪಂ ಮಾಜಿ ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಎಪಿಎಂಸಿ ಮಾಜಿ ಅಧ್ಯಕ್ಷ ಕೆ ಪದ್ಮನಾಭ ರೈ, ನ್ಯಾಯವಾದಿ ಚಂದ್ರಶೇಖರ ಪೂಜಾರಿ, ಇಂಟಕ್ ಜಿಲ್ಲಾಧ್ಯಕ್ಷ  ಚಿತ್ತರಂಜನ್ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷರುಗಳಾದ ಇಬ್ರಾಹಿಂ ನವಾಝ್ ಬಡಕಬೈಲು, ಸುರೇಶ್ ಪೂಜಾರಿ ಜೋರಾ,  ಪ್ರಮುಖರಾದ ಅವಿಲ್ ಮೆನೇಜಸ್, ಫಿಲಿಪ್ ಫ್ರಾಂಕ್, ಎಡ್ತೂರು ರಾಜೀವ್ ಶೆಟ್ಟಿ, ದೇವಿಪ್ರಸಾದ್ ಪೂಂಜಾ, ಸ್ಟೀವನ್ ಡಿಸೋಜ, ಪರಮೇಶ್ವರ, ಅಬ್ದುಲ್ ಕರೀಂ ಬೊಳ್ಳಾಯಿ, ಮಲ್ಲಿಕಾ ಶೆಟ್ಟಿ, ಸಂಪತ್ ಕುಮಾರ್ ಶೆಟ್ಟಿ, ಮಹಾಬಲ ಆಳ್ವ, ಮೆಲ್ವಿನ್ ಡಯಾಸ್, ಜಗದೀಶ್ ಕೊಯಿಲ, ನಾರಾಯಣ ನಾಯ್ಕ, ಶಬೀರ್ ಸಿದ್ದಕಟ್ಟೆ, ಡೆಂಝಿಲ್ ನೊರೊನ್ಹಾ, ತಿಲಕ್ ಮಂಚಿ, ಸಂಜಿತ್ ಪೂಜಾರಿ, ವೆಂಕಪ್ಪ ಪೂಜಾರಿ, ರಮೇಶ್ ಪಣೋಲಿಬೈಲು, ಮೊದಲಾದವರು ಭಾಹವಹಿಸಿದ್ದರು.

Recent News


Leave a Comment: