ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಸುದ್ದಿಗಳು News

Posted by vidyamaana on 2024-07-24 16:19:59 |

Share: | | | | |


ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಶಿವಮೊಗ್ಗ, ಜುಲೈ.24: ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ (Love) ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ (Murder) ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ಸೌಮ್ಯ ಮದುವೆಯಾಗುವಂತೆ ಸೃಜನ್​ನನ್ನು ಪೀಡಿಸುತ್ತಿದ್ದಳು. ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆ ಕೋಪಗೊಂಡ ಸೃಜನ್ ಪ್ರಿಯತಮೆಯ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಇನ್ನು ಸೃಜನ್ ಕೊಲೆ ಮಾಡಿ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದು ವಿಚಾರ ಬೆಳಕಿಗೆ ಬಂದಿದೆ.


ತೀರ್ಥಹಳ್ಳಿಯಲ್ಲಿ ಫೈನಾನ್ಸ್ ವೊಂದರಲ್ಲಿ ಕೆಲಸ ಮಾಡ್ತಿದ್ದ ಸೃಜನ್​ ಕೊಪ್ಪಗೆ ಹಣ ವಸೂಲಿಗೆ ಹೋಗುತ್ತಿದ್ದ. ಈ ವೇಳೆ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯಾಳ ಪರಿಚಯವಾಗಿತು. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರದ್ದು ಬೇರೆ ಬೇರೆ ಸಮುದಾಯವಾಗಿದ್ದರಿಂದ ಸೃಜನ್ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದರು. ಇದೇ ವೇಳೆ ಯುವತಿ ಸೌಮ್ಯ ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಮನೆಯಲ್ಲಿ ಹೇಳಿ ಜುಲೈ 2 ರಂದು‌ ಕೊಪ್ಪದಿಂದ ತೀರ್ಥಹಳ್ಳಿಗೆ ಬಂದಿದ್ದಳು.

ಬಳಿಕ ತನ್ನ ಪ್ರಿಯತಮನನ್ನು ಭೇಟಿ ಮಾಡಿ ಮನೆಗೆ ‌ಕರೆದುಕೊಂಡು‌ ಹೋಗುವಂತೆ ‌ಒತ್ತಡ ಹಾಕಿದ್ದಾಳೆ.


ನಮ್ಮ ಮನೆಗೆ ಈಗ ಬರಬೇಡ, ನಿಮ್ಮ ಮನೆಗೆ ವಾಪಸ್ ಹೋಗು ಎಂದು ಸೃಜನ್ ಮನವೊಲಿಸಲು ಪ್ರಯತ್ನಿಸಿದ್ದಾನೆ. ತೀರ್ಥಹಳ್ಳಿಯಿಂದ ಹೆದ್ದಾರಿಪುರಕ್ಕೆ ಕರೆದುಕೊಂಡು ಬಂದು ಸಮಾಧಾನದ ಮಾತುಗಳನ್ನಾಡಿದ್ದಾನೆ. ಇದರಿಂದ ಅನುಮಾನಗೊಂಡ ಸೌಮ್ಯ ನನ್ನನ್ನು ದೂರ ಮಾಡುತ್ತಿದ್ದಾನೆ. ಮೋಸ ಮಾಡುತ್ತಿದ್ದಾನೆ ಎಂದು ಭಾವಿಸಿ ವಾದ ಮಾಡಿದ್ದಾಳೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದ್ದು ಕೋಪಗೊಂಡ ಸೃಜನ್ ಸೌಮ್ಯ ಮೇಲೆ ಹಲ್ಲೆ ಮಾಡಿದ್ದಾನೆ. ಕತ್ತು ಹಿಸುಕಿ ಹಲ್ಲೆ ಮಾಡಿದ ಪರಿಣಾಮ ಯುವತಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾಳೆ.ಇದರಿಂದ ಗಾಬರಿಗೊಂಡ ಆರೋಪಿ ಸೃಜನ್ ಮುಂಬಾಳು ಬಳಿ ಶವವನ್ನು ಹೂತಿಟ್ಟಿದ್ದಾನೆ. ಮತ್ತೊಂದೆಡೆ ಮಗಳು ಮನೆಗೆ ಬರದಿದ್ದಕ್ಕೆ ಟೆನ್ಷನ್ ಆಗ ಪೋಷಕರು ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಕೊಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಯುವಕನನ್ನು ಹುಡುಕಿಕೊಂಡು ಸಾಗರಕ್ಕೆ ‌ಬಂದಿದ್ದು ಯುವತಿಯನ್ನು ಕೊಂದು ಹೂತಿಟ್ಟ ರಹಸ್ಯವನ್ನು ಸೃಜನ್ ಪೊಲೀಸರ ಎದುರು ಬಿಚ್ಚಿಟ್ಟಿದ್ದಾನೆ. ಇಂದು ಎಸಿ ಸಮ್ಮುಖದಲ್ಲಿ ಯುವತಿಯ ಶವ ಹೊರಗೆ ತೆಗೆಯಲು ಸಿದ್ದತೆ ನಡೆಯುತ್ತಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಂ ಹೂಡಿದ್ದಾರೆ.

 Share: | | | | |


ಸೀತಾ ಪರಿವಾರ- ಪುತ್ತಿಲರ ಹಿಂದುತ್ವದ ದಿಗ್ವಿಜಯಕ್ಕೆ ನಾರಿ ಶಕ್ತಿಯ ಬಲ

Posted by Vidyamaana on 2023-04-28 13:03:17 |

Share: | | | | |


ಸೀತಾ ಪರಿವಾರ- ಪುತ್ತಿಲರ ಹಿಂದುತ್ವದ ದಿಗ್ವಿಜಯಕ್ಕೆ ನಾರಿ ಶಕ್ತಿಯ ಬಲ

ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ಪರವಾಗಿ ಮಹಿಳಾ ಸಮಾವೇಶ ‘ಸೀತಾ ಪರಿವಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

ನಿಫಾ ವೈರಸ್ ಎಂದರೇನು? ಲಕ್ಷಣಗಳೇನು ಗೊತ್ತಾ? ಈ ಸೋಂಕಿಗೆ ಚಿಕಿತ್ಸೆ ಇಲ್ಲವೇ?

Posted by Vidyamaana on 2023-09-14 16:49:44 |

Share: | | | | |


ನಿಫಾ ವೈರಸ್ ಎಂದರೇನು? ಲಕ್ಷಣಗಳೇನು ಗೊತ್ತಾ? ಈ ಸೋಂಕಿಗೆ ಚಿಕಿತ್ಸೆ ಇಲ್ಲವೇ?

1998ರಲ್ಲಿ ಮಲೇಷ್ಯಾದ ಕಾಂಪುಂಗ್ ಸುಂಗಾತ್ ನಿಫಾ ವಲಯದಲ್ಲಿ ಕಾಣಿಸಿಕೊಂಡ ಮಾರಕ ಜ್ವರಕ್ಕೆ ಕಾರಣವಾದ ವೈರಸನ್ನು ನಿಫಾ ವೈರಸ್ ಎಂದು ಕರೆಯುತ್ತಾರೆ. ನಿಫಾ ವೈರಸ್ ಬಾವಲಿಗಳ ಮೂಲಕ ಹರಡುತ್ತದೆ. ಈ ಕ್ಷಣದವರೆಗೆ ಈ ರೋಗಕ್ಕೆ ಔಷಧಿ ಕಂಡುಹಿಡಿದಿಲ್ಲ. ಹೀಗಾಗಿ ನಿಫಾ ವೈರಸ್ ಮಾರಣಾಂತಿಕ ಎಂದೇ ಕುಖ್ಯಾತಿ ಪಡೆದಿದೆ.ಈ ವೈರಸ್ ಪತ್ತೆಯಾದರೆ ಶೇ.74ರಷ್ಟು ಸಾವು ಖಚಿತ ಎನ್ನಲಾಗಿದೆ


ವೈರಸ್ ಹೇಗೆ ಹರಡುತ್ತದೆ?: ಸೋಂಕಿರುವ ಬಾವಲಿ ಕಚ್ಚಿದ ಹಣ್ಣನ್ನು ತಿನ್ನವುದರಿಂದ ವೈರಸ್‌ ಹರಡುವ ಸಾಧ್ಯತೆಗಳಿವೆ. ಅಲ್ಲದೆ ಇದೊಂದು ಸಾಂಕ್ರಾಮಿಕ ಕಾಯಿಲೆಯಾದ್ರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಹೀಗಾಗಿ ಬಾವಲಿಗಳು ಕಚ್ಚಿದ ಸಾಧ್ಯತೆಯಿರುವ ಹಣ್ಣುಗಳನ್ನು ತಿನ್ನಲೇಬೇಡಿ.


ನಿಫಾ ವೈರಸ್ ಲಕ್ಷಣಗಳೇನು?

* ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ

* ಕೆಲವರಲ್ಲಿ ಅಪಸ್ಮಾರದ ಲಕ್ಷಣಗಳು ಕಾಣಿಸುತ್ತವೆ

* ಈ ಲಕ್ಷಣಗಳು ಸಾಮಾನ್ಯವಾಗಿ 10ರಿಂದ 12 ದಿನ ಕಾಣಿಸುತ್ತದೆ

* ಬಳಿಕ ಪ್ರಜ್ಞಾಹೀನರಾಗುತ್ತಾರೆ

* ನಂತರ ಈ ಜ್ವರ ತೀವ್ರವಾಗಿ ಮೆದುಳಿಗೆ ವ್ಯಾಪಿಸುತ್ತದೆ

* ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದರೆ ಸಾವು ಸಂಭವಿಸಬಹುದು

ನಿಫಾ ವೈರಸ್ ವಿಶ್ವದ ಯಾವೆಲ್ಲಾ ಭಾಗಗಳಲ್ಲಿ

ಹರಡಿತ್ತು?

ನಿಫಾ ವೈರಸ್ ಮೊದಲು ಕಾಣಿಸಿಕೊಂಡಿದ್ದು, 1998ರಲ್ಲಿ.. ಮಲೇಷ್ಯಾ ಹಾಗೂ ಸಿಂಗಪುರ ದೇಶಗಳಲ್ಲಿ ನೂರಾರು ಜನರನ್ನು ಈ ಮಹಾಮಾರಿ ಬಲಿ ತೆಗೆದಿಕೊಂಡಿತ್ತು. 300ಕ್ಕೂ ಹೆಚ್ಚು ಮಂದಿ ಸೋಂಕಿತರಾಗಿದ್ದರು. ಒಟ್ಟು ಸೋಂಕಿತರ ಪೈಕಿ ಶೇ. 70 ರಿಂದ 86ರಷ್ಟು ಮಂದಿ ಸಾವನ್ನಪ್ಪಿದ್ದರು. 1998 ರಿಂದ 2015ರವರೆಗೆ ವಿಶ್ವಾದ್ಯಂತ ಒಟ್ಟು 600ಕ್ಕೂ ಹೆಚ್ಚು ನಿಫಾ ಪ್ರಕರಣಗಳು ವರದಿಯಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ತೆ ಹೇಳಿದೆ. 2001ರಲ್ಲಿ ಭಾರತ ಹಾಗೂ ಬಾಂಗ್ಲಾ ದೇಶಗಳಲ್ಲಿ ಒಟ್ಟು 91 ಮಂದಿ ನಿಫಾ ವೈರಸ್ ಸೋಂಕಿಗೆ ತುತ್ತಾಗಿದ್ದರು. ಈ ಪೈಕಿ 62 ಮಂದಿ ಸಾವನ್ನಪ್ಪಿದ್ದರು. 2018ರಲ್ಲಿ


ಕೇರಳದಲ್ಲಿ 21 ಮಂದಿ ನಿಫಾ ಮಾರಿಗೆ600ಕ್ಕೂ ಹೆಚ್ಚು ನಿಫಾ ಪ್ರಕರಣಗಳು ವರದಿಯಾಗಿವ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. 2001ರಲ್ಲಿ ಭಾರತ ಹಾಗೂ ಬಾಂಗ್ಲಾ ದೇಶಗಳಲ್ಲಿ ಒಟ್ಟು 91 ಮಂದಿ ನಿಫಾ ವೈರಸ್ ಸೋಂಕಿಗೆ ತುತ್ತಾಗಿದ್ದರು. ಈ ಪೈಕಿ 62 ಮಂದಿ ಸಾವನ್ನಪ್ಪಿದ್ದರು. 2018ರಲ್ಲಿ ಕೇರಳದಲ್ಲಿ 21 ಮಂದಿ ನಿಫಾ ಮಾರಿಗೆ ಬಲಿಯಾಗಿದ್ದರು. 2019 ಹಾಗೂ 2021ರಲ್ಲೂ ಕೇರಳದಲ್ಲಿ ಕಾಣಿಸಿಕೊಂಡಿದ್ದ ನಿಫಾ, ಇದೀಗ ಮತ್ತೆ ಕೇರಳದಲ್ಲಿ ತಲೆ ಎತ್ತಿದೆ.

ಶಿರೂರು ಗುಡ್ಡ ಕುಸಿತ ಪ್ರಕರಣ: ಸಮುದ್ರದಲ್ಲಿ ಮೃತದೇಹ ಪತ್ತೆ, ಲಾರಿ ಚಾಲಕ ಅರ್ಜುನ್ ಎಂಬ ಶಂಕೆ

Posted by Vidyamaana on 2024-08-07 12:46:25 |

Share: | | | | |


ಶಿರೂರು ಗುಡ್ಡ ಕುಸಿತ ಪ್ರಕರಣ: ಸಮುದ್ರದಲ್ಲಿ ಮೃತದೇಹ ಪತ್ತೆ, ಲಾರಿ ಚಾಲಕ ಅರ್ಜುನ್ ಎಂಬ ಶಂಕೆ

ಉತ್ತರ ಕನ್ನಡ: ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಈ ನಡುವಲ್ಲೇ ಗುಡ್ಡ ಕುಸಿತಗೊಂಡ ಸ್ಥಳದಿಂದ 25 ಕಿಮೀ ದೂರದಲ್ಲಿನ ಹೊನ್ನಾವರ ಸಮುದ್ರದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ.

ಈ ಶವ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋದ ಲಾರಿ ಚಾಲಕ ಅರ್ಜುನ್​ (30) ಅವರದ್ದು ಎಂದು ಶಂಕಿಸಲಾಗಿದೆ. ಮೃತದೇಹ ಯಾರದ್ದು ಎಂಬುದು ಇನ್ನೂ ದೃಢವಾಗಿಲ್ಲ.

ಸದ್ಯ ಕರಾವಳಿ ಪೊಲೀಸರು ಮೃತದೇಹವನ್ನು ದಡಕ್ಕೆ ತಂದು, ಡಿಎನ್​ಎ ಪರೀಕ್ಷೆಗೆ ಕಳುಹಿಸಿದ್ದಾರೆ. ಡಿಎನ್​ಎ ಪರೀಕ್ಷೆಗಾಗಿ ಅರ್ಜುನ್​ ಸಹೋದರ ಅಭಿಜಿತ್​​ನ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ನಮ್ಮಪ್ಪ ಕುಪ್ಪುಸ್ವಾಮಿ, ಕರುಣಾನಿಧಿ ಅಲ್ಲ! ನಾವು ಗೆಲ್ಲೋಕೆ ಸ್ವಲ್ಪ ಟೈಮ್ ಬೇಕು: ಅಣ್ಣಾಮಲೈ

Posted by Vidyamaana on 2024-06-06 09:34:00 |

Share: | | | | |


ನಮ್ಮಪ್ಪ ಕುಪ್ಪುಸ್ವಾಮಿ, ಕರುಣಾನಿಧಿ ಅಲ್ಲ! ನಾವು ಗೆಲ್ಲೋಕೆ ಸ್ವಲ್ಪ ಟೈಮ್ ಬೇಕು: ಅಣ್ಣಾಮಲೈ

ಚೆನ್ನೈ: ಸಾಕಷ್ಟು ನಿರೀಕ್ಷೆಗಳೊಂದಿಗೆ ತಮಿಳುನಾಡಿನಲ್ಲಿ ಚುನಾವಣೆ ಎದುರಿಸಿದ್ದ ಬಿಜೆಪಿಗೆ ನಿರಾಸೆಯಾಗಿದೆ. ಪಕ್ಷದ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ, ನಮ್ಮಪ್ಪ ಕುಪ್ಪುಸ್ವಾಮಿ, ಕರುಣಾನಿಧಿ ಅಲ್ಲ. ನಾವು ಗೆಲ್ಲೋಕೆ ಸ್ವಲ್ಪ ಟೈಮ್ ಬೇಕು ಎಂದು ಹೇಳುವ ಮೂಲಕ ರಾಜ್ಯದಲ್ಲಿನ ಕುಟುಂಬ ರಾಜಕಾರಣವನ್ನು ಟೀಕಿಸಿದರು.

ಆಡಳಿತಾರೂಢ ಡಿಎಂಕೆ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದರು.


ನಮ್ಮ ಅಪ್ಪ ಕುಪ್ಪಾಸ್ವಾಮಿ, ನಾನು ಒಬ್ಬ ರೈತನ ಮಗನಾಗಿದ್ದೇನೆ. ಏನು ಮಾಡೋದು ನಮ್ಮ ಅಪ್ಪ ಕರುಣಾನಿಧಿಯಲ್ಲ, ದೊಡ್ಡ ರಾಜಕೀಯ ನಾಯಕನೂ ಅಲ್ಲ. ನಾನು ಕರುಣಾನಿಧಿ ಮಗನಾಗಿದ್ದರೆ ಚುನಾವಣೆಯಲ್ಲಿ ಗೆದ್ದು ಬಿಡುತ್ತಿದ್ದೆ. ಹಾಗಾಗಿ ನಾನು ಗೆಲ್ಲಲು ಸಮಯ ಹಿಡಿಯುತ್ತೆ. ನನ್ನಂತವರು ಒಂದೊಂದೇ ಮೆಟ್ಟಿಲು ಹತ್ತಿ ಗೆಲುವನ್ನು ಕಾಣಬೇಕಾಗುತ್ತದೆ. ನನ್ನ ತಂದೆ ಕುಪ್ಪಾಸ್ವಾಮಿ ನನಗೆ ಅದನ್ನೇ ಹೇಳಿಕೊಟ್ಟಿದ್ದಾರೆ. ನಿಧಾನಕ್ಕೆ ಹೋಗು, ಒಂದೊಂದೇ ಮೆಟ್ಟಿಲು ಹತ್ತು, ನ್ಯಾಯವಾದ ದಾರಿಯಲ್ಲಿ ನಡಿ ಎಂದು ಹೇಳಿಕೊಟ್ಟಿದ್ದಾರೆ ಎಂದು ಅಣ್ಣಾಮಲೈ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಹಿಂದೂ ನಂಬಿಕೆಯ ತಳಹದಿಯಲ್ಲಿ ಕಣ್ಣೀರೊರೆಸುವ ಕಾರ್ಯ

Posted by Vidyamaana on 2024-04-12 07:14:19 |

Share: | | | | |


ಹಿಂದೂ ನಂಬಿಕೆಯ ತಳಹದಿಯಲ್ಲಿ ಕಣ್ಣೀರೊರೆಸುವ ಕಾರ್ಯ

ಸುಳ್ಯ: ನಾನೋರ್ವ ಹಿಂದೂ. ನನ್ನ ಧರ್ಮದ ತಳಹದಿಯಲ್ಲಿ ಕೆಲಸ ಮಾಡುತ್ತಾ, ಅನೇಕ ಮಂದಿಯ ಕಣ್ಣೀರೊರೆಸುವ ಕೆಲಸ ಮಾಡಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು.


ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿಂತಿಕಲ್ಲಿನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು.


ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿಯಾಗಿ, ಕೋಶಾಧಿಕಾರಿಯಾಗಿ 28 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದೇನೆ. ಇದರ ಜೊತೆಗೆ ಸಾಮಾಜಿಕ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇನೆ. ತಾನು ಬೆಳೆದು ಬಂದ ಧರ್ಮ ತನಗೆ ಎಲ್ಲಾ ಧರ್ಮವನ್ನು ಸಮಾನವಾಗಿ ಕಾಣಲು ತಿಳಿಸಿದೆ. ಅದರ ಪ್ರಕಾರ, ಧರ್ಮದ ಕಾರ್ಯ ನಡೆಸಿದ್ದೇನೆ ಎಂದ ಅವರು, ನಮ್ಮ ಸಂವಿಧಾನದ ಆಶಯದಂತೆ ನಾವೆಲ್ಲರೂ ಒಂದೇ ಎಂಬ ಭಾವನೆಯೊಂದಿಗೆ ಬಾಳಲು ಬೇಕಾದ ವಾತಾವರಣವನ್ನು ಕಲ್ಪಿಸಿಕೊಡಲು ಶ್ರಮಿಸಲಾಗುವುದು ಎಂದರು.

ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

Posted by Vidyamaana on 2024-07-25 19:32:58 |

Share: | | | | |


ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿದ್ದಾರೆ. 

 ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ

Recent News


Leave a Comment: