ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಸುದ್ದಿಗಳು News

Posted by vidyamaana on 2024-07-24 18:06:21 | Last Updated by Vidyamaana on 2024-07-24 18:06:21

Share: | | | | |


ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಕಾರವಾರ: ಉತ್ತರ ಕನ್ನಡದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಕೋಝಿಕ್ಕೋಡ್ ಮೂಲದ ಅರ್ಜುನ್ ಅವರ ಲಾರಿ ಎಂದು ನಂಬಲಾದ ಟ್ರಕ್ ನದಿಯ ಆಳದಲ್ಲಿ ಇರುವ ಸುಳಿವು ಲಭ್ಯವಾಗಿದೆ. ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದನ್ನು ಖಚಿತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಚಿವರು ಮಾಹಿತಿ ನೀಡಿದ್ದಾರೆ.

ನದಿಯ ಕೆಳಭಾಗದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು ಅದಕ್ಕಾಗಿ ಶೋಧ ನಡೆಯುತ್ತಿದೆ.

ಶಿರೂರಿನಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಒಂಬತ್ತನೇ ದಿನದಂದು, ಲಾರಿಯ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಪಡೆಯಲಾಗಿದೆ. ಇಂದು ಬೆಳಗ್ಗೆ ಬೂಮ್ ಲೆಂಗ್ತ್ ಕ್ರೇನ್ ಬಂದಿದ್ದು, ತಪಾಸಣೆ ಪುನರಾರಂಭವಾಗಿದೆ. ಈ ಯಂತ್ರವು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ.

ಈ ಕುರಿತು ಕೃಷ್ಣ ಬೈರೇಗೌಡ Xನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ X ಖಾತೆಯಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.ಜುಲೈ 16 ರಂದು ಬೆಳಿಗ್ಗೆ ಕೋಝಿಕ್ಕೋಡ್‌ನ ಕಂಡ್ಯಕ್ಕಲ್ ಮೂಲದ ಅರ್ಜುನ್ (30) ಕರ್ನಾಟಕ-ಗೋವಾ ಗಡಿಯಲ್ಲಿ ಹಾದು ಹೋಗುವ ಪನ್ವೇಲ್-ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಭೂಕುಸಿತದಲ್ಲಿ ಟೀ ಅಂಗಡಿ ಮಾಲೀಕ ಸೇರಿದಂತೆ 10 ಜನರು ಸಾವನ್ನಪ್ಪಿದ ಸ್ಥಳದಲ್ಲಿ ಲಾರಿಯ ಜಿಪಿಎಸ್ ಸ್ಥಳವನ್ನು ಕೊನೆಯದಾಗಿ ಪತ್ತೆ ಹಚ್ಚಲಾಯಿತು.

 Share: | | | | |


25ನೇ ವಯಸ್ಸಿಗೆ ಅಪ್ರತಿಮ ಸಾಧನೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಹಳೆ ವಿದ್ಯಾರ್ಥಿ ಅನಿಲ್ ಸಿಕ್ವೇರಾ ಕರ್ನಾಟಕದ ಅತ್ಯಂತ ಕಿರಿಯ ನ್ಯಾಯಾಧೀಶ

Posted by Vidyamaana on 2024-02-24 07:21:34 |

Share: | | | | |


25ನೇ ವಯಸ್ಸಿಗೆ ಅಪ್ರತಿಮ ಸಾಧನೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಹಳೆ ವಿದ್ಯಾರ್ಥಿ ಅನಿಲ್ ಸಿಕ್ವೇರಾ ಕರ್ನಾಟಕದ ಅತ್ಯಂತ ಕಿರಿಯ ನ್ಯಾಯಾಧೀಶ

ಮಂಗಳೂರು, ಫೆ.24: ಬಂಟ್ವಾಳ ತಾಲೂಕಿನ ಬೊರಿಮಾರು ಮೂಲದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೇರಾ 2023ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್ ಮಾಡಿದ್ದು, ಆಮೂಲಕ ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಿದ ಅತಿ ಕಿರಿಯ ವ್ಯಕ್ತಿ ಎನ್ನುವ ಶ್ರೇಯಕ್ಕೆ ಪಾತ್ರರಾಗಿದ್ದಾರೆ.


ಮಂಗಳೂರಿನ ಎಸ್ ಡಿಎಂ ಕಾನೂನು ಕಾಲೇಜಿನಲ್ಲಿ ಬಿಬಿಎ ಮತ್ತು ಎಲ್ಎಲ್ ಬಿ ಪೂರೈಸಿದ್ದ ಅನಿಲ್ ಜಾನ್ ಸಿಕ್ವೇರಾ ಕಾಲೇಜು ದಿನಗಳಲ್ಲಿಯೇ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು. ಬಂಟ್ವಾಳದ ಬೊರಿಮಾರಿನ ಸೈಂಟ್ ಜೋಸೆಫ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಮಾಣಿ ಕರ್ನಾಟಕ ಹೈಸ್ಕೂಲ್ ನಲ್ಲಿ ಪ್ರೌಢ ಶಿಕ್ಷಣ, ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದರು.


ಕಾನೂನು ಪದವಿಯ ಬಳಿಕ ಮಂಗಳೂರಿನಲ್ಲಿ ಬಾರ್ ಅಸೋಸಿಯೇಶನ್ ಸದಸ್ಯರಾಗಿ ಪ್ರಾಕ್ಟೀಸ್ ಆರಂಭಿಸಿದ್ದರು. ಮಂಗಳೂರಿನ ವಕೀಲರಾದ ದೀಪಕ್ ಡಿಸೋಜ ಮತ್ತು ನವೀನ್ ಪಾಯಸ್ ಜೊತೆಗೆ ವೃತ್ತಿ ನಡೆಸುತ್ತಿದ್ದರು. ಕಾಲೇಜು ದಿನಗಳಲ್ಲಿಯೇ ನಾಯಕತ್ವ ಬೆಳೆಸಿಕೊಂಡಿದ್ದ ಅನಿಲ್ ಸಿಕ್ವೇರಾ 2022ರಲ್ಲಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಇಂಡಿಯನ್ ಕೆಥೋಲಿಕ್ ಯೂತ್ ಮೂಮೆಂಟ್ ಸಂಘಟನೆಯ ಅಧ್ಯಕ್ಷರಾಗಿದ್ದರು. ಅನಿಲ್ ಸಿಕ್ವೇರಾ ಅವರು ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಎರಡೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದು ಪ್ರಿಲಿಮಿನರಿ, ಮೈನ್ಸ್ ಮತ್ತು ಇಂಟರ್ವ್ಯೂ ಪಾಸ್ ಮಾಡುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ.

ಲೋಕಸಭಾ ಚುನಾವಣೆ: ಪೂರ್ವಸಿದ್ದತಾ ಪರಿಶೀಲನೆ ನಡೆಸಿದ ಡಿಸಿ, ಪೊಲೀಸ್ ಕಮೀಷನರ್, ಎಸ್ಪಿ

Posted by Vidyamaana on 2024-03-13 17:46:21 |

Share: | | | | |


ಲೋಕಸಭಾ ಚುನಾವಣೆ: ಪೂರ್ವಸಿದ್ದತಾ ಪರಿಶೀಲನೆ ನಡೆಸಿದ ಡಿಸಿ, ಪೊಲೀಸ್ ಕಮೀಷನರ್, ಎಸ್ಪಿ

ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇ.ವಿ.ಎಂ ಭದ್ರತಾ ಕೇಂದ್ರವಾದ ಸುರತ್ಕಲ್ ಎನ್.ಐ.ಟಿ.ಕೆ  ಇಂಜಿನಿಯರಿಂಗ್ ಕಾಲೇಜಿನಲ್ಲಿ ಪೂರ್ವಸಿದ್ದತಾ ಪರಿಶೀಲನೆಯನ್ನು ಮಾ. 13ರಂದು ನಡೆಸಲಾಯಿತು.

 ಜಿಲ್ಲಾಧಿಕಾರಿ ಎಂ.ಪಿ ಮುಲೈ ಮುಹಿಲನ್,  ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್‌ ಅಗ್ರವಾಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ ರಿಷ್ಯಂತ್ ಪರಿಶೀಲನೆ ನಡೆಸಿದರು.

ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ ಎಂದು ನಂಬಿ: ಕಾಂಗ್ರೆಸ್ ಮನವಿ

Posted by Vidyamaana on 2023-11-11 08:25:04 |

Share: | | | | |


ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ ಎಂದು ನಂಬಿ: ಕಾಂಗ್ರೆಸ್ ಮನವಿ

ಬೆಂಗಳೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ, ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಆಯ್ಕೆಗೊಂಡಿದ್ದಕ್ಕೆ ಕಾಂಗ್ರೆಸ್ ಪ್ರತಿಕ್ರಿಯಿಸಿದೆ. ವಿಡಂಬನೆಯಿಂದ ಕೂಡಿದ ಆ ಪ್ರತಿಕ್ರಿಯೆ ನಾಡಿನ ಗಮನ ಸೆಳೆದಿದೆ.ಯಡಿಯೂರಪ್ಪನವರ ಮಗ’ ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ‘ಯಡಿಯೂರಪ್ಪನವರ ಮಗ’ನಿಗೆ ಅಭಿನಂದನೆಗಳು ಎಂದು ಕರ್ನಾಟಕ ಕಾಂಗ್ರೆಸ್​ನ ಸೋಷಿಯಲ್ ಮೀಡಿಯಾದಲ್ಲಿ ಶುಭ ಹಾರೈಸಿದೆ.


ಮಾತ್ರವಲ್ಲ, ‘ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ’ ಎಂಬ ಸುಳ್ಳನ್ನು ನಂಬಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇವೆ ಎಂಬುದಾಗಿಯೂ ಹೇಳಿಕೊಂಡಿದೆ.ಕಾಂಗ್ರೆಸ್​ನ ಪ್ರತಿಕ್ರಿಯೆಗೆ ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ.

ಪುತ್ತಿಲರವರಿಗೆ ಸಿಂಹ ಬಲ - ವೇದಿಕೆಯ ಹಿಂಭಾಗದಿಂದ ಮುಂಭಾಗಕ್ಕೆ ಪ್ರಮೋಷನ್

Posted by Vidyamaana on 2024-04-03 12:48:23 |

Share: | | | | |


ಪುತ್ತಿಲರವರಿಗೆ ಸಿಂಹ  ಬಲ - ವೇದಿಕೆಯ ಹಿಂಭಾಗದಿಂದ ಮುಂಭಾಗಕ್ಕೆ ಪ್ರಮೋಷನ್

ಪುತ್ತೂರು : ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪ್ರಚಾರ ಕಾರ್ಯ ಹಿನ್ನೆಲೆ ಕಾರ್ಯಕರ್ತರ ಸಮಾವೇಶ ಪುತ್ತೂರಿನಲ್ಲಿ ನಡೆದಿದ್ದು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಆಗಮಿಸಿದ್ದರು.ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಹ ವೇದಿಕೆ ಬದಿಯಲ್ಲಿದ್ದ ಬಿಜೆಪಿ ಮುಖಂಡ ಅರುಣ್ ಪುತ್ತಿಲರನ್ನು ಕರೆದು ಎದುರಿನ ಸಾಲಿನ ತನ್ನ ಹತ್ತಿರದಲ್ಲೇ ಕೂರಿಸಿಕೊಂಡ ವೀಡಿಯೋ ಭಾರಿ ವೈರಲ್ ಆಗಿತ್ತು.

ಉಪ್ಪಿನಂಗಡಿ:ಮೇ 1 (ಇಂದು)ರ ಸಂಜೆ SDPIಯಿಂದ ಪಾದಯಾತ್ರೆ, ಮತಯಾಚನೆ.

Posted by Vidyamaana on 2023-05-01 06:54:06 |

Share: | | | | |


ಉಪ್ಪಿನಂಗಡಿ:ಮೇ 1 (ಇಂದು)ರ ಸಂಜೆ SDPIಯಿಂದ ಪಾದಯಾತ್ರೆ, ಮತಯಾಚನೆ.

ಪುತ್ತೂರು: SDPI ಅಭ್ಯರ್ಥಿ ಶಾಫಿ ಬೆಳ್ಳಾರೆ ಅವರ ಪಕ್ಷದ ಉಪ್ಪಿನಂಗಡಿ ಬ್ಲಾಕ್ ವತಿಯಿಂದ ಮೇ 1ರಂದು ಸಂಜೆ 4.30ಕ್ಕೆ ಉಪ್ಪಿನಂಗಡಿಯಲ್ಲಿ ಪಾದಯಾತ್ರೆ ಹಾಗೂ ಮತಯಾಚನೆ ನಡೆಯಲಿದೆ.

ಹಸಿವು ಮುಕ್ತ ಸ್ವಾತಂತ್ರ್ಯ ಹಾಗೂ ಭಯ ಮುಕ್ತ ಸ್ವಾತಂತ್ರ್ಯ ಧ್ಯೇಯ ವಾಕ್ಯದಡಿ ಕಾರ್ಯನಿರ್ವಹಿಸುತ್ತಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಓ್ ಇಂಡಿಯಾದ ಉಪ್ಪಿನಂಗಡಿ ಬ್ಲಾಕ್ ಸಮಿತಿ ನೇತೃತ್ವದಲ್ಲಿ ಪಾದಯಾತ್ರೆ ಆಯೋಜಿಸಲಾಗಿದೆ.

 ಶಾಫಿ ಬೆಳ್ಳಾರೆ ಅವರು ಆಟೋ ರಿಕ್ಷಾ ಚಿಹ್ನೆಯಡಿ ಸ್ಪರ್ಧಿಸುತ್ತಿದ್ದಾರೆ ಎಂದು SDPI ಪ್ರಕಟಣೆಯಲ್ಲಿ ತಿಳಿಸಿದೆ.

ಉಪ್ಪಳ : ಹಾಡಹಗಲೇ ವಾಹನದ ಗಾಜು ಒಡೆದು ಎಟಿಎಂಗೆ ತುಂಬಲು ತಂದಿದ್ದ ಹಣ ಕಳವು

Posted by Vidyamaana on 2024-03-27 17:16:13 |

Share: | | | | |


ಉಪ್ಪಳ : ಹಾಡಹಗಲೇ ವಾಹನದ ಗಾಜು ಒಡೆದು ಎಟಿಎಂಗೆ ತುಂಬಲು ತಂದಿದ್ದ ಹಣ ಕಳವು

ಕಾಸರಗೋಡು, ಮಾ.27: ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆಗೈದ ಘಟನೆ ಉಪ್ಪಳಪೇಟೆಯಲ್ಲಿ ನಡೆದಿದೆ.


ವಾಹನದ ಗಾಜನ್ನು ಒಡೆದು ಹಣ ದರೋಡೆ ಮಾಡಿದ್ದಾರೆ. ಉಪ್ಪಳ ಪೇಟೆಯಲ್ಲಿರುವ ಆಕ್ಸಿಸ್ ಬ್ಯಾಂಕ್ ನ ಎ ಟಿ ಎಂ ಮೆಷಿನ್ ಗೆ ಹಣ ತುಂಬಿಸಲು ಬಂದಿದ್ದ ಸಂದರ್ಭ ಈ ಘಟನೆ ನಡೆದಿದೆ.


ವಾಹನದಲ್ಲಿದ್ದ ನೌಕರರು ವಾಹನ ನಿಲ್ಲಿಸಿ ಎಟಿಎಂ ಮೆಷಿನ್ ತೆರೆದು ವಾಹನದಲ್ಲಿದ್ದ ಹಣದ ಬಾಕ್ಸನ್ನು ತೆಗೆದುಕೊಂಡು ಹೋಗಲು ಮರಳಿ ಬಂದಾಗ ವಾಹನದ ಗಾಜು ಹುಡಿಯಾದ ಸ್ಥಿತಿಯಲ್ಲಿ ಕಂಡುಬಂದಿದೆ. ಪರಿಶೀಲಿಸಿದಾಗ 50 ಲಕ್ಷ ರೂ. ಇದ್ದ ಬಾಕ್ಸ್ ನಾಪತ್ತೆಯಾಗಿತ್ತು. ಖಾಸಗಿ ಏಜೆನ್ಸಿಯ ವಾಹನದಲ್ಲಿ ಹಣವನ್ನು ತಂದು ಎಟಿಎಂ ಗೆ ತುಂಬಿಸಲಾಗುತ್ತಿತ್ತು. ವಾಹನದ ಗಾಜನ್ನು ಒಡೆದು ಕೃತ್ಯ ನಡೆಸಲಾಗಿದೆ.


ಮಂಜೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದು , ವಾಹನದ ಚಾಲಕ ಮತ್ತು ನೌಕರನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸಮೀಪದ ಸಿಸಿಟಿವಿ ಕ್ಯಾಮರಾ ಮೂಲಕ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Recent News


Leave a Comment: