ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಹಿಂದು ಕಾರ್ಯಕರ್ತರ ಮೇಲೆ ಖಾಕಿ ದರ್ಪ

Posted by Vidyamaana on 2023-05-23 11:53:32 |

Share: | | | | |


ಹಿಂದು ಕಾರ್ಯಕರ್ತರ ಮೇಲೆ ಖಾಕಿ ದರ್ಪ

ಪುತ್ತೂರು : ಪೊಲೀಸ್ ದೌರ್ಜನ್ಯ ಸಂದರ್ಭ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವರದಿ ಹೊರಗಿದ್ದಿದೆ.  ಈ ಬಗ್ಗೆ ಸ್ಕ್ಯಾನಿಂಗ್ ಪೋಟೋಗಳು ವೈರಲ್ ಆಗುತ್ತಿವೆ. ವರದಿ ಹೊರ ಬರುತಿದ್ದಂತೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಎಸ್ಪಿಯನ್ನು ಭೇಟಿಯಾಗಿದ್ದಾರೆ. 

ಬಿಜೆಪಿ ರಾಜ್ಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರಿಗೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಬ್ಯಾನರ್ ಹಾಕಿದ್ದಾರೆ ಎಂದು ಒಟ್ಟು 11 ಜನರನ್ನು ಬಂಧಿಸಿ ಪೊಲೀಸರು ದೌರ್ಜನ್ಯ ನಡೆಸಿದರು ಎಂದು ವ್ಯಾಪಕ ಪ್ರಚಾರ ಪಡೆದುಕೊಂಡ ಪ್ರಕರಣ ಮತ್ತಷ್ಟು ತೀವ್ರ ಸ್ವರೂಪ ಪಡೆಯುವ ಲಕ್ಷಣ ಕಾಣುತ್ತಿದೆ.  

ಡಿವೈಎಸ್ಪಿ ಗೆ ಒತ್ತಡ ಹಾಕಿಸಿ ಬಿಜೆಪಿಯ ಕಾರ್ಯಕರ್ತರ ಮೇಲೆಯೇ ಡಿವೈಎಸ್ಪಿ ಕಚೇರಿಯಲ್ಲೇ ತೀವ್ರ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿತು. 

ಮೇ.15 ರ  ಮಧ್ಯರಾತ್ರಿ  ಅರುಣ್ ಪುತ್ತಿಲ ಡಿವೈಎಸ್ಪಿ ಕಚೇರಿಗೆ ಹೋಗಿ ಹಲ್ಲೆಗೊಳಗಾದವರ ಮುಚ್ಚಲಿಕೆ ಬರೆದು ಬಿಡುಗಡೆಗೊಳಿಸಿಕೊಂಡು ಬಂದಿದ್ದರು. ನಂತರ ಹಲ್ಲೆಗೊಳಗಾದವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಮತ್ತೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. 


ಘಟನೆ ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಪುತ್ತೂರಿನ ಡಿವೈಎಸ್ಪಿ, ಸಂಪ್ಯ ಎಸ್ಐ , ಪುತ್ತೂರಿನ ಪೊಲೀಸ್ ಕಾನ್ಸ್ಟೆಬಲ್ ರ ಮೇಲೆ ಪ್ರಕರಣ ದಾಖಲು ನಡೆಸಿ,  ಎಸ್ಐ ಮತ್ತು ಪಿಸಿಯನ್ನು ಅಮಾನತು ಮಾಡಿ, ಡಿವೈಎಸ್ಪಿಯನ್ನು ರಜೆಯಲ್ಲಿ ಕಳುಹಿಸಲಾಗಿದೆ.  

ತೀವ್ರ ಗಾಯಗೊಂಡ ಅವಿನಾಶ್ ರ ಕಿವಿ ನೋವು ಕಡಿಮೆಯಾಗದ ಕಾರಣ ಕಿವಿಯ ಸ್ಕ್ಯಾನಿಂಗ್ ಮಾಡಿದಾಗ ತಮಟೆ ಹರಿದ ಬಗ್ಗೆ ವೈದ್ಯಕೀಯ ವರದಿಯಲ್ಲಿ ಹೊರ ಬಂದಿದೆ. ಕೂಡಲೇ ದಕ್ಷಿಣ ಕನ್ನಡ ಎಸ್ಪಿ ವಿಕ್ರಂ ಅಮಾಟೆಯನ್ನು ಭೇಟಿಯಾದ ಅರುಣ್ ಕುಮಾರ್ ಪುತ್ತಿಲ ಎರಡು ದಿನದಲ್ಲಿ ಡಿವೈಎಸ್ಪಿಯನ್ನು ಅಮಾನತು ಮಾಡಬೇಕು ಮತ್ತು ಸಂತ್ರಸ್ತರಿಗೆ 5 ಲಕ್ಷದಂತೆ ಪರಿಹಾರ ನೀಡಬೇಕು  ಎಂದು ಒತ್ತಾಯಿಸಿದರು. ಕ್ರಮ ಆಗದಿದ್ದರೆ  ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಮಾಡ್ಯುಲರ್ ಆಪರೇಷನ್ ಥಿಯೇಟರಿನಲ್ಲಿ ಮೊದಲ ಯಶಸ್ವಿ ಶಸ್ತ್ರಚಿಕಿತ್ಸೆ

Posted by Vidyamaana on 2023-02-20 06:19:00 |

Share: | | | | |


ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಮಾಡ್ಯುಲರ್ ಆಪರೇಷನ್ ಥಿಯೇಟರಿನಲ್ಲಿ ಮೊದಲ ಯಶಸ್ವಿ ಶಸ್ತ್ರಚಿಕಿತ್ಸೆ

ಪುತ್ತೂರು: ಬೆಂಗಳೂರು, ಮಂಗಳೂರಿನಲ್ಲಿ ಲಭ್ಯವಿರುವ ಅತ್ಯಾಧುನಿಕ ಶಸ್ತ್ರಚಿಕಿತ್ಸೆಯ ಮಾದರಿಯ ಶಸ್ತ್ರಚಿಕಿತ್ಸೆಯನ್ನು ಪುತ್ತೂರಿನ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫೆ. 25ರ ಮಹಾಶಿವರಾತ್ರಿಯ ಶುಭಗಳಿಗೆಯಲ್ಲಿ ನೆರವೇರಿಸಲಾಯಿತು.

ಉತ್ತಮ, ಅತ್ಯಾಧುನಿಕ ಪರಿಕರಗಳನ್ನು ಒಳಗೊಂಡ ಮಾಡ್ಯುಲರ್ ಆಪರೇಷನ್ ಥಿಯೇಟರ್ ಇತ್ತೀಚೆಗಷ್ಟೇ ಪುತ್ತೂರಿನ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿತ್ತು.ಜಿಲ್ಲಾ ಕೇಂದ್ರದ ಸಿದ್ಧತೆಯಲ್ಲಿರುವ ಪುತ್ತೂರಿಗೆ ಮಾಡ್ಯುಲರ್ ಆಪರೇಷನ್ ಥಿಯೇಟರ್ ಪ್ರಮುಖ ಆದ್ಯತೆಗಳಲ್ಲೊಂದು. ರೋಗಿಗಳ ದೇಹಸೂಕ್ಷ್ಮತೆಗೆ ಅನುಗುಣವಾಗಿ ಆಪರೇಷನ್ ಥಿಯೇಟರ್ ಅನ್ನು ರಚಿಸಲಾಗಿರುತ್ತದೆ. ಅತ್ಯಾಧುನಿಕ ಯಂತ್ರೋಪಕರಣಗಳ ಮೂಲಕ ಆಪರೇಷನ್ ನಡೆಸುವುದು ಇಲ್ಲಿನ ವಿಶೇಷತೆ

ಮೈಸೂರಿಂದ ಬಿಜೆಪಿ ಟಿಕೆಟ್ ಘೋಷಣೆ: ಯದುವೀರ್ ಮೊದಲ ಪ್ರತಿಕ್ರಿಯೆ

Posted by Vidyamaana on 2024-03-14 04:53:09 |

Share: | | | | |


ಮೈಸೂರಿಂದ ಬಿಜೆಪಿ ಟಿಕೆಟ್ ಘೋಷಣೆ: ಯದುವೀರ್ ಮೊದಲ ಪ್ರತಿಕ್ರಿಯೆ

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ. ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗಿದೆ ಎಂದು ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಟಿಕೆಟ್‌ ಘೋಷಣೆ ಬಳಿಕ ಫೇಸ್‌ಬುಕ್‌ನ ತಮ್ಮ ಖಾತೆಯಲ್ಲಿ ಪೋಸ್ಟ್ ಹಾಕಿರುವ ಅವರು, ಒಂಬತ್ತು ವರ್ಷಗಳಿಂದ ನಾನು ನಮ್ಮ ಕ್ಷೇತ್ರದ ಹಾಗೂ ರಾಜ್ಯದ ಸಾರ್ವಜನಿಕ ಜೀವನದ ಭಾಗವಾಗಿದ್ದೇನೆ. ಅನೇಕ ಪ್ರಜಾಬಾಂಧವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದೆ. ನನ್ನನ್ನು ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಆತಿಥ್ಯವನ್ನು ನೀಡಿದ್ದೀರಿ. ಈಗ ಆ ಋಣವನ್ನು ತೀರಿಸಲು ಅವಕಾಶ ಕೇಳುತ್ತಿದ್ದೇನೆ ಎಂದು ಕೋರಿದ್ದಾರೆ.


ನಿಮ್ಮೆಲ್ಲರ ಬೆಂಬಲ ಮತ್ತು ಆಶೀರ್ವಾದದಿಂದ ಮೈಸೂರು ಮತ್ತು ಕೊಡಗಿನ ಸರ್ವಾಂಗೀಣ ಏಳಿಗೆ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡಲು ನಾನು ಆಶಿಸುತ್ತಿದ್ದೇನೆ. ಜನರ ಶುಭ ಹಾರೈಕೆ ಮತ್ತು ಬೆಂಬಲವನ್ನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.


ಚುನಾವಣೆಯಲ್ಲಿ ಪಕ್ಷವನ್ನು ಪ್ರತಿನಿಧಿಸಲು ತಮ್ಮ ಮೇಲೆ ನಂಬಿಕೆ ಇಟ್ಟ ಪ್ರಧಾನಿ ನರೇಂದ್ರ ಮೋದಿ ಅವರಿಂದಹಿಡಿದು ‍ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೆಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.

ಎರಡು ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ್ದಕ್ಕಾಗಿ ಪ್ರತಾಪ ಸಿಂಹ ಅವರನ್ನು ಅಭಿನಂದಿಸುತ್ತೇನೆ. ಈ ಕ್ಷೇತ್ರದ ಅಭಿವೃದ್ಧಿಗೆ ಅವರ ಬದ್ಧತೆ ನಮ್ಮೆಲ್ಲರ ಭವಿಷ್ಯದ ಆಕಾಂಕ್ಷೆಗಳಿಗೆ ಭದ್ರ ಅಡಿಪಾಯ ಹಾಕಿಕೊಟ್ಟಿದೆ ಎಂದು ಶ್ಲಾಘಿಸಿದ್ದಾರೆ.

ಉಡುಪಿ: ವಾರದ ಬಳಿಕ ಪತ್ತೆಯಾಯ್ತು ಅರಶಿನಗುಂಡಿ ಜಲಪಾತಕ್ಕೆ ಬಿದ್ದ ಶರತ್ ಮೃತದೇಹ

Posted by Vidyamaana on 2023-07-30 07:59:14 |

Share: | | | | |


ಉಡುಪಿ: ವಾರದ ಬಳಿಕ ಪತ್ತೆಯಾಯ್ತು ಅರಶಿನಗುಂಡಿ ಜಲಪಾತಕ್ಕೆ ಬಿದ್ದ ಶರತ್ ಮೃತದೇಹ

ಕುಂದಾಪುರ: ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಮೃತದೇಹ ವಾರದ ಬಳಿಕ ಪತ್ತೆಯಾಗಿದೆ.

ಜುಲೈ 23ರಂದು ಕೊಲ್ಲೂರು ಸಮೀಪದ ಅರಣ್ಯ ಪ್ರದೇಶದಲ್ಲಿರುವ ಅರಶಿನ ಗುಂಡಿ ಜಲಪಾತ ನೋಡಲು 23 ವರ್ಷದ ಶರತ್ ಕುಮಾರ್ ಸ್ನೇಹಿತನೊಂದಿಗೆ ಹೋಗಿದ್ದರು. ಜಲಪಾತದ ಪಕ್ಕದ ಬಂಡೆ ಕಲ್ಲಿನ ಮೇಲೆ ನಿಂತಿದ್ದು ಅವರು ಜಾರಿ ನೀರಿಗೆ ಬಿದ್ದಿದ್ದರು.


ಶರತ್ ಹುಡುಕಾಟಕ್ಕೆ ಹಲವು ತಂಡಗಳು ವಾರಗಳ ಕಾಲ ಶ್ರಮ ವಹಿಸಿದ್ದವು. ಆದರೆ ತೀವ್ರ ಮಳೆ ಮತ್ತು ನೀರಿನ ರಭಸದ ಕಾರಣದಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿತ್ತು. ಇದೀಗ ವಾರದ ಬಳಿಕ ಜುಲೈ 30ರಂದು ಬಿದ್ದ ಜಾಗದಿಂದ ಹತ್ತು ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ.


ಕೊಲ್ಲೂರು ಪೊಲೀಸರು, ರಾಜ್ಯ ವಿಪತ್ತು ನಿರ್ವಹಣ ತಂಡ (ಎಸ್‌ಡಿಆರ್‌ಎಫ್‌), ಅರಣ್ಯ ಇಲಾಖೆ ಸಿಬಂದಿ, ಅಗ್ನಿ ಶಾಮಕ ದಳದ ಸಿಬಂದಿ, ಸ್ಥಳೀಯರು, ಶರತ್‌ ಅವರ ಸ್ನೇಹಿತರು, ಸಂಬಂಧಿಕರು ಪ್ರತೀ ದಿನ ಹಗಲಿಡೀ ನಿರಂತರ ಹುಡುಕಾಟ ನಡೆಸಿದ್ದರು. ಈಶ್ವರ್ ಮಲ್ಪೆ, ಜ್ಯೋತಿರಾಜ್ ತಂಡವೂ ಹುಡುಕಾಟ ನಡೆಸಿತ್ತುಶರತ್‌ ಪತ್ತೆಗಾಗಿ ಜಲಪಾತ ಹರಿದು ಬರುವ ಬೇರೆ ಬೇರೆ ಕಡೆಗಳಲ್ಲಿ ಸಾಗರ ಬಾರಕೂರು ಅವರ ನೇತೃತ್ವದಲ್ಲಿ ಡ್ರೋನ್‌ ಕೆಮರಾದ ಮೂಲಕ ಹುಡುಕುವ ಪ್ರಯತ್ನ ಮಾಡಲಾಗಿತ್ತು

ಕಳಸ: ನೆರೆ ನೀರಿನಿಂದ ಮುಳುಗಡೆಯಾಗಿದ್ದ ಸೇತುವೆ ಮೇಲೆ ಜೀಪ್ ಓಡಿಸಿದ ಆರೋಪ; ಚಾಲಕ ಪವನ್ ಕುಮಾರ್ ಪೊಲೀಸ್ ವಶಕ್ಕೆ

Posted by Vidyamaana on 2024-07-27 08:14:41 |

Share: | | | | |


ಕಳಸ: ನೆರೆ ನೀರಿನಿಂದ ಮುಳುಗಡೆಯಾಗಿದ್ದ ಸೇತುವೆ ಮೇಲೆ ಜೀಪ್ ಓಡಿಸಿದ ಆರೋಪ; ಚಾಲಕ ಪವನ್ ಕುಮಾರ್ ಪೊಲೀಸ್ ವಶಕ್ಕೆ

ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಮುಳುಗಡೆಯಾಗಿದ್ದ ಸೇತುವೆ ಮೇಲೆ ವಾಹನಗಳ ಸಂಚಾರ ನಿಷೇಧಿಸಿದ್ದರೂ ಇದನ್ನು ಲೆಕ್ಕಿಸದೇ ಸೇತುವೆ ಮೇಲೆ ಜೀಪ್ ಓಡಿಸಿ ಹುಚ್ಚಾಟ ಮೆರೆದು ಕೂದಲೆಳೆಯ ಅಂತರದಿಂದ ಪ್ರಾಣಾಪಾಯದಿಂದ ಪಾರಾಗಿದ್ದ ಜೀಪ್ ಚಾಲಕನನ್ನು ಕಳಸ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪವನ್ ಕುಮಾರ್ (30)ಬಂಧಿತ ಜೀಪ್‌ ಚಾಲಕನಾಗಿದ್ದು, ಜೀಪ್ ಅನ್ನೂ ವಶಕ್ಕೆ ಪಡೆಯಲಾಗಿದೆ. ಈತ ಕಳೆದ ಗುರುವಾರ ಭದ್ರಾ ನದಿ ತುಂಬಿ ಹರಿದ ಪರಿಣಾಮ ಮುಳುಗಡೆಯಾಗಿದ್ದ ಹೆಬ್ಬಾಳೆ ಸೇತುವೆ ಮೇಲೆ ಜೀಪ್ ಓಡಿಸಿದ್ದ ಎಂದು ತಿಳಿದು ಬಂದಿದೆ.

ಬೈಂದೂರು: ಯುವತಿ ನಾಪತ್ತೆ

Posted by Vidyamaana on 2023-09-22 16:21:57 |

Share: | | | | |


ಬೈಂದೂರು: ಯುವತಿ ನಾಪತ್ತೆ

ಉಡುಪಿ: ಬೈಂದೂರು ತಾಲೂಕು ಹಾಲ್ಕಲ್, ಜಡ್ಕಲ್ ಗ್ರಾಮದ ತುಂಬೆ ಮಕ್ಕಿ ನಿವಾಸಿ ಮೈತ್ರಿ (23) ಎಂಬವರು ಸೆಪ್ಟಂಬರ್ 20 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.


5 ಅಡಿ 3 ಇಂಚು ಎತ್ತರ, ದುಂಡು ಮುಖ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ.9480805434, ಕಂಟ್ರೋಲ್ ರೂಂ : 100, ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Recent News


Leave a Comment: