ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಸುದ್ದಿಗಳು News

Posted by vidyamaana on 2024-07-24 19:54:18 |

Share: | | | | |


ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಇದೀಗ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ.

ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲ್ಟ್ರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ ವೇಳೆ ನಿನ್ನೆಯವರೆಗೆ 8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ. ಟಿಂಬರ್ ಲಾರಿ ನದಿಯಲ್ಲಿ ಪತ್ತೆ ಆಗಿರುವ ಸ್ಥಿತಿಯಲ್ಲಿ ಇದೆ.ಕೇರಳ ಮೂಲದ ಲಾರಿ ನದಿಯಲ್ಲಿ ಇದೀಗ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ ಅರ್ಜುನ್ ನಾಪತ್ತೆಯಾಗಿದ್ದರು. ಲಾರಿ ಪತ್ತೆಯಾದ ಸ್ಥಳಕ್ಕೆ ಡಿಸಿ ಲಕ್ಷ್ಮಿಪ್ರಿಯ ಭೇಟಿ ನೀಡಿದ್ದಾರೆ. ಕಾರವಾರದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣದ ಬಗ್ಗೆ ಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ

 Share: | | | | |


ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Posted by Vidyamaana on 2024-05-26 06:37:52 |

Share: | | | | |


ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ಐದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು, ತುಮಕೂರು, ಕೊಡುಗು ಜಿಲ್ಲೆಗಳ ಧಾರಾಕಾರ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಟೈಲರ್‌ ಜತ್ತಪ್ಪ ಗೌಡ ನಿಧನ.

Posted by Vidyamaana on 2023-06-05 01:21:48 |

Share: | | | | |


ಟೈಲರ್‌ ಜತ್ತಪ್ಪ ಗೌಡ ನಿಧನ.

ಪುತ್ತೂರು: ನೈತ್ತಾಡಿ ನಿವಾಸಿ ಮುಕ್ವೆಯಲ್ಲಿ ಟೈಲರ್ ವೃತ್ತಿ ಮಾಡುತ್ತಿದ್ದ ಜತ್ತಪ್ಪ ಗೌಡ(57ವ.)ರವರು ಜೂ.4ರಂದು ಮಂಗಳೂರು ಆಸತ್ರೆಯಲ್ಲಿ ನಿಧನರಾದರು.

ನೈತ್ತಾಡಿ ನಿವಾಸಿ ಗಣೇಶ್ ನೈತ್ತಾಡಿ ಅವರ ಸಹೋದರರಾಗಿರುವ ಜತ್ತಪ್ಪ ಗೌಡ ಅವರು ಇತ್ತೀಚೆಗೆ ಮನೆಯಲ್ಲಿ ಕುಸಿದು ಬಿದಿದ್ದರು. ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಟೈಲರ್ ವೃತ್ತಿ ಮಾಡಿಕೊಂಡಿದ್ದ ಜತ್ತಪ್ಪ ಗೌಡ ಅವರು ಕೋವಿಡ್ ಬಳಿಕ ಮನೆಯಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದರು. ಮೃತರು ತಾಯಿ ದುಗ್ಗಮ್ಮ, ಪತ್ನಿ ಬೇಬಿ, ಇಬ್ಬರು ಪುತ್ರರು, ಸಹೋದರ ಗಣೇಶ್‌ ನೈತಾಡಿ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

ಅಪರಾಧ ತಡೆ ಮಾಸಾಚಾರಣೆ, ಜಾಗೃತಿ ಜಾಥಾ | ರೋಟರಿ, ಇಂಟರ್ಯಾಕ್ಟ್, ಪೊಲೀಸ್, ಶ್ರೀ ರಾಮಕೃಷ್ಣ ಪ್ರೌಢಶಾಲೆಯಿಂದ ಜಾಥಾ

Posted by Vidyamaana on 2022-12-29 06:41:59 |

Share: | | | | |


ಅಪರಾಧ ತಡೆ ಮಾಸಾಚಾರಣೆ, ಜಾಗೃತಿ ಜಾಥಾ | ರೋಟರಿ, ಇಂಟರ್ಯಾಕ್ಟ್, ಪೊಲೀಸ್, ಶ್ರೀ ರಾಮಕೃಷ್ಣ ಪ್ರೌಢಶಾಲೆಯಿಂದ ಜಾಥಾ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ, ಇಂಟರ್ಯಾಕ್ಟ್ ಕ್ಲಬ್ ರಾಮಕೃಷ್ಣ ಯುವ, ದ.ಕ. ಜಿಲ್ಲಾ ಪೊಲೀಸ್, ಪುತ್ತೂರು ನಗರ ಪೊಲೀಸ್ ಠಾಣೆ, ಪುತ್ತೂರು ಸಂಚಾರ ಪೊಲೀಸ್ ಠಾಣೆ ಆಶ್ರಯದಲ್ಲಿ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳೊಂದಿಗೆ ಡಿ. 28ರಂದು ಅಪರಾಧ ತಡೆ ಮಾಸಾಚರಣೆ ಜಾಗೃತಿ ಜಾಥಾ ನಡೆಯಿತು.


ಕೊಂಬೆಟ್ಟಿನಿಂದ ಆರಂಭಗೊಂಡ ಜಾಗೃತಿ ಜಾಥಾ, ಗಾಂಧಿಕಟ್ಟೆಯಲ್ಲಿ ಸಮಾರೋಪಗೊಂಡಿತು.

ಸಿಎಂ-ಡಿಸಿಎಂ ನೋಡಿದ್ರೆ ಒಂದು ವರ್ಷ ಯಾರೂ ಅನುದಾನ ಕೇಳ್ಬೇಡಿ ಹೇಳ್ತಿದ್ದಾರೆ

Posted by Vidyamaana on 2024-03-21 20:48:00 |

Share: | | | | |


ಸಿಎಂ-ಡಿಸಿಎಂ ನೋಡಿದ್ರೆ ಒಂದು ವರ್ಷ ಯಾರೂ ಅನುದಾನ ಕೇಳ್ಬೇಡಿ ಹೇಳ್ತಿದ್ದಾರೆ

ಪುತ್ತೂರು: ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆದು ಸುಮಾರು 300 ದಿವಸಗಳು ಆಗಿದ್ದು ಈ ಸಮಯದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ತಾವು ಚುನಾವಣೆ ಸಂದರ್ಭ ಘೋಷಿಸಿದ ಗ್ಯಾರಂಟಿಗಳಿಗೋಸ್ಕರ ಒಂದು ವರ್ಷದ ಅವಧಿಗೆ ಯಾವುದೇ ಅಭಿವೃದ್ಧಿ ಅನುದಾನ 2023-24ರ ಅವಧಿಗೆ ದೊರೆಯುವುದಿಲ್ಲ ಎಂದಿದ್ದಾರೆ. ಆದ್ದರಿಂದ ರಾಜ್ಯದ ಎಲ್ಲಾ ಶಾಸಕರು ಸಹಕಾರ ಮಾಡಬೇಕು ಎಂದು ವಿನಂತಿಸಿರುವ ಈ ಸಂದರ್ಭದಲ್ಲಿ ಬಹಳಷ್ಟು ಕಾಂಗ್ರೇಸ್ ಪಾರ್ಟಿಯ ಶಾಸಕರು ಅಪಸ್ವರ ಎಬ್ಬಿಸಿರುವ ವರದಿಯನ್ನು ಪತ್ರಿಕೆಗಳಲ್ಲಿ ನೋಡಿದ್ದೇವೆ. ಆದರೆ ಪುತ್ತೂರಿನ ಶಾಸಕರು, ಪುತ್ತೂರಿಗೆ ಹಣದ ಹೊಳೆಯೇ ಹರಿದು ಬಂದಿದೆ. ಶಿಲಾನ್ಯಾಸ ಮಾಡಲು ಸಮಯ ಇಲ್ಲದಷ್ಟು ಅನುದಾನ ಬಂದಿದೆ ಎಂದು ಹೇಳುತ್ತಾ ಪುತ್ತೂರಿನ ಪ್ರಜ್ಞಾವಂತ ಮತದಾರರನ್ನು ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.

ಪುತ್ತೂರಿಗೆ 1474.29 ಕೋಟಿ ಅನುದಾನ ಬಂದಿದೆ ಎಂದು ಬ್ಯಾನ‌ರ್ ಬರೆದು ಬಿಜೆಪಿ ಕಾರ್ಯಕರ್ತನ ಮನೆಗೆ ಚೆಂಡೆಯ ಶಬ್ದದೊಂದಿಗೆ ನುಗ್ಗಿ ದಾಂಧಲೆ ಎಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಹಾಲಿ ಶಾಸಕರು ಪ್ರಕಟಿಸಿರುವ ಬ್ಯಾನರ್‌ನಲ್ಲಿ ಮತ್ತು ಅವರು ಭಾಷಣಗಳಲ್ಲಿ ಘೋಷಿಸುವ ಅನುದಾನಗಳು ಪ್ರಸ್ತುತ ಅವರ ಅವಧಿಯಲ್ಲಿ ಬಿಡುಗಡೆಗೊಂಡ ಅನುದಾನಗಳ ಮೊತ್ತ ಎಷ್ಟು? ಹಿಂದಿನ ಭಾಜಪಾ ಸರಕಾರ ಇದ್ದಾಗ ಬಿಡುಗಡೆಗೊಂಡ ಅನುದಾನಗಳು ಎಷ್ಟು? ಎಂಬುದನ್ನು ಮರೆತು ಎಲ್ಲವೂ ನಮ್ಮದೇ ಸರಕಾರ, ನಾನೇ ಮಾಡಿದೆ ಎನ್ನುವ ರೀತಿಯಲ್ಲಿ ಪ್ರಕಟಿಸಿದ್ದಾರೆ. ಅವರು ಬ್ಯಾನರ್ ನಲ್ಲಿ ಹಾಕಿರುವ ಅನುದಾನ ಯಾವ ವರ್ಷ? ಯಾವ ಸರಕಾರ? ಯಾವ ಶಾಸಕರ ಅವಧಿಯಲ್ಲಿಲ್ಲಿ ಬಂತು ಎಂಬುದರ ವಿವರವನ್ನು ದಾಖಲೆ ಸಮೇತವಾಗಿ ಈ ಮೂಲಕ ನೀಡುತ್ತಿದ್ದೇವೆ ಎಂದ ಅವರು ಸುಳ್ಳು ಹೇಳುತ್ತಿರುವ ರೂ.1474.29 ಕೋಟಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸೇರಿ ರೂ.1219 ಕೋಟಿ ನಮ್ಮ ಸರಕಾರದ ಯೋಜನೆಗಳು. ಅಲ್ಲದೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಡದ ನಮ್ಮ ಬಿಜೆಪಿ ಶಾಸಕರಿಂಸ ಸುಳ್ಯ ಕ್ಷೇತ್ರದ ಕೊಯಿಲಾ ಪಶು ವೈದ್ಯಕೀಯ ಕಾಲೇಜು, ನೀರಿನ ಸರಬರಾಜು ಮತ್ತು ಕೊಯಿಲಾ ಸಬ್ ಸ್ಟೇಷನ್ ಸೇರಿ 483 ಕೋಟಿಯ ಯೋಜನೆಯನ್ನು ಸೇರಿಸಿರುತ್ತಾರೆ.ಇದು ನಮ್ಮ ಹಿಂದಿನ ಸರಕಾರದ ಸಾಧನೆ. ಇವೆರಡನ್ನು ಕಾಂಗ್ರೆಸ್ ನ ದಾಸಕರ ಪ್ರಕಟಿಸಿರುವ ಅನುದಾನಗಳಲ್ಲಿ ಕಡಿತಗೊಳಿಸಿದರೆ ಕೇವಲ 104 ಕೋಟಿ ಇವರ ಅವಧಿಯದ್ದು ಕಾಣಬಹುದು. ಆದರೆ ಇದು ಅವರ ಬರೀ ಆಶ್ವಾಸನೆಯೂ ಎಂಬುದನ್ನು ಕಾಲವೇ ಉತ್ತರಿಸಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ ಉಪಸ್ಥಿತರಿದ್ದರು.

ಇದು ನನ್ನ ಕೊನೆಯ ಚುನಾವಣೆ: ವಿನಯ್ ಕುಮಾರ್ ಸೊರಕೆ

Posted by Vidyamaana on 2023-03-04 09:24:18 |

Share: | | | | |


 ಇದು ನನ್ನ ಕೊನೆಯ ಚುನಾವಣೆ: ವಿನಯ್ ಕುಮಾರ್ ಸೊರಕೆ

ಉದ್ಯಾವರ: ಈ ವಿಧಾನಸಭಾ ಚುನಾವಣೆ ನನ್ನ ರಾಜಕೀಯ ಜೀವನದ ಕೊನೆಯ ಚುನಾವಣೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.

ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನನ್ನ ರಾಜಕೀಯ ಜೀವನದಲ್ಲಿ ಇದುವರೆಗೂ ಕಪ್ಪುಚುಕ್ಕೆ ಬಂದಿಲ್ಲ. ಅಧಿಕಾರ ಇದ್ದಾಗಲೂ, ಇಲ್ಲದಿದ್ದಾಗಲೂ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಇಂದೂ ಕೂಡಾ ಜನ ನನ್ನ ಬಳಿ ಸಮಸ್ಯೆ ಹೇಳಿಕೊಂಡು ಬರ್ತಾರೆ. ನಾನು ವೈಯಕ್ತಿಕ ಸಹಾಯವನ್ನೂ ಮಾಡುತ್ತಿದ್ದೇನೆ. ಮುಂಬರುವ ಚುನಾವಣೆ ನನ್ನ ಕೊನೆಯ ಚುನಾವಣೆ. ಮತದಾರರು ನನ್ನನ್ನು ಆಶೀರ್ವದಿಸುತ್ತಾರೆಂದು ನಂಬಿದ್ದೇನೆ ಎಂದರು.

ದೇವಾಲಯಗಳ ಸುತ್ತಮುತ್ತ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ - ರಾಜ್ಯ ಸರ್ಕಾರ ಆದೇಶ

Posted by Vidyamaana on 2023-09-14 15:34:50 |

Share: | | | | |


ದೇವಾಲಯಗಳ ಸುತ್ತಮುತ್ತ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ - ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಜನತೆಗೆ ಐದು ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿರುವಂತ ಕಾಂಗ್ರೆಸ್ ಸರ್ಕಾರವು, ಈಗ ದೈವ ಭಕ್ತರ ಭಾವನೆ ಗೌರವಿಸಲು ಮುಜರಾಯಿ ಇಲಾಖೆಯಿಂದ ಮಹತ್ವದ ನಿರ್ಧಾರ ಎನ್ನುವಂತೆ, ದೇವಸ್ಥಾನಗಳ ಸುತ್ತಮುತ್ತಾ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ.ಈ ಕುರಿತಂತೆ ಕಾಂಗ್ರೆಸ್ ಪಕ್ಷದಿಂದ ಎಕ್ಸ್ ಮಾಡಲಾಗಿದ್ದು, ಧರ್ಮ ಎಂದರೆ ಮನುಷ್ಯನಿಗೆ ಅಧ್ಯಾತ್ಮಿಕ ಅನುಭೂತಿ ನೀಡುವ ಮಾರ್ಗ ಮಾತ್ರ. ಆಧ್ಯಾತ್ಮಿಕ ಅನುಭೂತಿಯನ್ನು ನೀಡುವ ದೇವಾಲಯಗಳಲ್ಲಿ ಸ್ವಚ್ಛತೆ, ಪ್ರಶಾಂತತೆ ಇರಬೇಕಾಗುತ್ತದೆ ಎಂದು ಹೇಳಿದೆ.


ಮುಜರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ನಮ್ಮ ಸರ್ಕಾರ ಎಂದು ತಿಳಿಸಿದೆ.


ಧರ್ಮ ಎಂದರೆ ಮನುಷ್ಯನಿಗೆ ಅಧ್ಯಾತ್ಮಿಕ ಅನುಭೂತಿ ನೀಡುವ ಮಾರ್ಗ ಮಾತ್ರ.

ಆಧ್ಯಾತ್ಮಿಕ ಅನುಭೂತಿಯನ್ನು ನೀಡುವ ದೇವಾಲಯಗಳಲ್ಲಿ ಸ್ವಚ್ಛತೆ, ಪ್ರಶಾಂತತೆ ಇರಬೇಕಾಗುತ್ತದೆ.


ಮುಜರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಕಟ್ಟುನಿಟ್ಟಿನ.ಮುಜುರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವಂತ ದೇವಾಲಯಗಳ ಸುತ್ತಾಮುತ್ತ ಬೀಡಿ, ಸಿಗರೇಟ್, ಗುಟ್ಕಾ, ಪಾನ್ ಮಸಾಲಗಳಂತಹ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಶ್ರೀಘ್ರವೇ ಬ್ರೇಕ್ ಬೀಳಲಿದೆ. ಈ ಸಂಬಂಧ ಅಧಿಕೃತ ಆದೇಶವನ್ನು ಇಲಾಖೆ ಹೊರಡಿಸಿದೆ.


ಈ ನಿಯಮ ಇಲಾಖೆ ವ್ಯಾಪ್ತಿಯಲ್ಲಿ ಇರುವಂತ 33 ಸಾವಿರ ದೇವಾಲಯಗಳಿಗೂ ಅನ್ವಯ ಆಗಲಿದೆ. ದೇವಾಲಯದ ಹೊರ ಭಾಗದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹೆಚ್ಚಾಗಿದ್ದು, ಗುಟ್ಕಾ ತಿಂದು ಕಾಂಪೌಂಡ್ ಸುತ್ತಮುತ್ತ ಉಗಿಯುತ್ತಿರೋದು, ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟ್ ಬಳಕೆಗೆ ನಿಷೇಧ ವಿದ್ಧರೂ ನಿಯಮ ಅನುಸರಿಸದ ಕಾರಣ, ಸರ್ಕಾರ ಈ ನಿಯಮ ಜಾರಿಗೆ ನಿರ್ಧಾರ ಕೈಗೊಂಡಿದೆ.


ಈಗಾಗಲೇ ಶಾಲಾ-ಕಾಲೇಜು ಆವರಣ ವ್ಯಾಪ್ತಿಯ ನೂರು ಮೀಟರ್ ಗಳಲ್ಲಿ ಯಾವುದೇ ಅಂಗಡಿಗಳಲ್ಲಿ ಬೀಡಿ, ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನ ಮಾರಾಟ ಮಾಡುವಂತಿಲ್ಲ ಎಂಬ ಆದೇಶ ಮಾಡಲಾಗಿದೆ

Recent News


Leave a Comment: