ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ಸುದ್ದಿಗಳು News

Posted by vidyamaana on 2024-07-24 17:19:41 |

Share: | | | | |


ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ರಾಜ್ಯದ ಸರಕಾರಿ ಶಾಲೆ ಮತ್ತು ಕಾಲೇಜು ಕ್ಯಾಂಪಸ್‌ ಗಳಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ಶೈಕ್ಷಣಿಕೇತರ ಚಟುವಟಿಕೆ ನಡೆಸದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಇದು ಭಾರೀ ಸಂಚಲನವನ್ನೇ ಹುಟ್ಟುಹಾಕಿದೆ. ಇದರಿಂದ ಸಾರ್ವಜನಿಕ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಣೆಯ ಸಂಘಟಕರು ಗೊಂದಲದಲ್ಲಿದ್ದಾರೆ.

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ 2013ರ ಫೆ.7 ರಂದು ಮತ್ತು 2023ರ ಡಿ.1ರಂದು ರಾಜ್ಯದ ಎಲ್ಲ ಡಿಡಿಪಿಐ ಕಚೇರಿಗಳಿಗೆ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಕಟ್ಟಡ ಅಥವಾ ಶಾಲಾ ಮೈದಾನ ಅನುಮತಿ ನೀಡಬಾರದೆಂದು ಸುತ್ತೋಲೆ ಬಂದಿತ್ತು. ಈ ಆಧಾರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡಿಡಿಪಿಐ ವೆಂಕಟೇಶ್ ಪಟಗಾರ ಅವರು ಜು.16ರಂದು ಜ್ಞಾಪನಾ ಪತ್ರವನ್ನು ಎಲ್ಲ ಬಿಇಒಗಳಿಗೆ ರವಾನಿಸಿದ್ದಾರೆ.

ಜ್ಞಾಪನಾ ಪತ್ರದಲ್ಲಿ ಏನಿದೆ?

ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ, ಶಾಲಾ ಮೈದಾನ ಅಥವಾ ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನು ನೀಡಬಾರದೆಂದು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆಯಾಗುತ್ತಾರೆ ಎಂದು ಜ್ಞಾಪನಾ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಬಿಜೆಪಿಯಿಂದ ಹೋರಾಟ :

ರಾಜ್ಯಾದ್ಯಂತ ಹಲವು ದಶಕಗಳಿಂದ ಶಾಲೆಯ ಕ್ಯಾಂಪಸ್, ಶಾಲಾ ಕಟ್ಟಡದಲ್ಲಿ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ರಾಜಕೀಯ ಮಾಡಲು ಹೊರಟಿದ್ದು, ಶಾಲಾ ವಠಾರದಲ್ಲಿ ಧಾರ್ಮಿಕ ಆಚರಣೆ ನಡೆಸದಂತೆ ಆದೇಶ ಹೊರಡಿಸಿದೆ. ಇದು ಖಂಡನೀಯವಾಗಿದ್ದು, ಈ ಹಿಂದೆ ನಿಗದಿತ ಸ್ಥಳದಲ್ಲೇ ಕಾರ್ಯಕ್ರಮ ಆಯೋಜಿಸುತ್ತೇವೆ. ಇದನ್ನು ತಡೆಯಲು ಬಂದರೆ ಸುಮ್ಮನಿರಲ್ಲ ಎಂದು ಬಿಜೆಪಿ ತಾಕೀತು ಮಾಡಿದೆ. ಇದೇ ರೀತಿ ಜಿಲ್ಲಾದ್ಯಂತ ಹೋರಾಟ ನಡೆಯುತ್ತಿದೆ.

ಬಿಜೆಪಿ ಸರಕಾರದಲ್ಲೇ ಆದೇಶ :

2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಶಿಕ್ಷಣೇತರ ಚಟುವಟಿಕೆ ನಡೆಸದಂತೆ ಆದೇಶ ಹೊರಡಿಸಿತ್ತು ಆದೇ ಆದೇಶದಡಿ ನಿಯಮದಂತೆ ದಕ್ಷಿಣ ಕನ್ನಡ ಶಿಕ್ಷಣಾಧಿಕಾರಿಯವರು ಬಿಇಒ ಮೂಲಕ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಆದೇಶ ಹೊರಡಿಸಿದ್ದ ಬಿಜೆಪಿಯವರೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಈ ವಿವಾದವೂ ಜಿಲ್ಲೆಯಲ್ಲಿ ದಿನ ಹೋದಂತೆ ರಾಜಕೀಯ ಬಣ್ಣ ಪಡೆದು ಕಾವೇರತೊಡಗಿದೆ.

 Share: | | | | |


ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆ

Posted by Vidyamaana on 2024-07-12 10:23:20 |

Share: | | | | |


ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆ

ಕೋಲಾರ: ಪ್ರೀತಿಸಿ ಮದುವೆಯಾಗಿದ್ದ ದಂಪತಿ ಊರ ಹೊರಗಿನ ಮರವೊಂದಕ್ಕೆ ಒಂದೇ ಹಗ್ಗದಲ್ಲಿ ನೇಣುಬಿಗಿದುಕೊಂಡು ತಾಲೂಕಿನ ಕಲ್ವಮಂಜಲಿಗ್ರಾಮದಲ್ಲಿಆತ್ಮಹತ್ಯೆಗೆ ಶರಣಾಗಿದ್ದಾರೆ. ಅನ್ಯೋನ್ಯವಾಗಿದ್ದ ಕುಟುಂಬಕ್ಕೆ ದಿಢೀರ್​ ಏನಾಯ್ತು ಎಂದು ಬಂದಿದ್ದವರು ತಾವೇ ಪ್ರಶ್ನೆ ಮಾಡಿಕೊಳ್ಳುತ್ತಿದ್ದರು.

ಲಕ್ಷ್ಮಣ್​ ಹಾಗೂ ಮಾಲಶ್ರೀ ಕಳೆದ ಹದಿಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಪ್ರೀತಿಯಿಂದ ಸಂಸಾರ ಮಾಡುತ್ತಿದ್ದ ಅವರಿಗೆ ಒಂದು ಹೆಣ್ಣು ಒಂದು ಗಂಡು ಮಕ್ಕಳಿದ್ದರು. ಪ್ರೀತಿಸಿ ಮದುವೆಯಾಗಿದ್ದ ಕುಟುಂಬ ಕಷ್ಟ ಪಟ್ಟು ದುಡಿಯುತ್ತಿದ್ದರು. ಲಕ್ಷ್ಮಣ್​ ಆಟೋ ಓಡಿಸುತ್ತಿದ್ದರೆ, ಮಾಲಾಶ್ರೀ ಕಲ್ವಮಂಜಲಿ ಗ್ರಾಮದಲ್ಲೇ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ದೀಪಿಕಾ ಸುಳ್ಯದಲ್ಲಿ ಪತ್ತೆ

Posted by Vidyamaana on 2024-05-10 07:20:16 |

Share: | | | | |


ನಾಪತ್ತೆಯಾಗಿದ್ದ ವಿದ್ಯಾರ್ಥಿನಿ  ದೀಪಿಕಾ ಸುಳ್ಯದಲ್ಲಿ ಪತ್ತೆ

ಮಂಗಳೂರು, ಮೇ 9: ರೋಶನಿ ನಿಲಯದಲ್ಲಿ ಎಂಎಸ್ಸಿ ಕಲಿಯುತ್ತಿದ್ದು ಪರೀಕ್ಷೆ ಹಾಲ್ ನಿಂದಲೇ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜ್ ಅವರನ್ನು ಪೊಲೀಸರು ಸುಳ್ಯದಲ್ಲಿ ಪತ್ತೆ ಮಾಡಿದ್ದಾರೆ.

ಕ್ರಿಮಿನಾಲಜಿ ಮತ್ತು ಫಾರೆನ್ಸಿಕ್ ಸೈನ್ಸ್ ವಿಷಯದಲ್ಲಿ ಮೊದಲನೇ ವರ್ಷದ ಎಂಎಸ್ಸಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಮೇ 7ರಂದು ಎರಡನೇ ಸೆಮಿಸ್ಟರ್ ಪರೀಕ್ಷೆ ಮುಗಿಸಿ ಹೊರಗೆ ಬಂದವಳು ನಾಪತ್ತೆಯಾಗಿದ್ದಳು. ಮನೆಯವರು ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಪುಸ್ತಕ ಮತ್ತು ಮೊಬೈಲನ್ನು ಕಾಲೇಜಿನಲ್ಲಿಯೇ ಬಿಟ್ಟು ತೆರಳಿದ್ದರಿಂದ ಭಾರೀ ಕುತೂಹಲ ಉಂಟಾಗಿತ್ತು.

ಬನ್ನೂರಿನ ಮನೆಗೆ ಪೊಲೀಸ್ ದಾಳಿ: ಇಬ್ಬರು ಮಹಿಳೆಯರು ಪೊಲೀಶ್ ವಶ!!

Posted by Vidyamaana on 2024-08-29 19:07:13 |

Share: | | | | |


ಬನ್ನೂರಿನ ಮನೆಗೆ ಪೊಲೀಸ್ ದಾಳಿ: ಇಬ್ಬರು ಮಹಿಳೆಯರು ಪೊಲೀಶ್ ವಶ!!

ಪುತ್ತೂರು: ಬನ್ನೂರಿನ ಕರ್ಮಲದ ಮನೆಗೆ ನಗರ ಠಾಣಾ ಪೊಲೀಸರು ದಾಳಿ ನಡೆಸಿದ್ದು, ಇಬ್ಬರು ಮಹಿಳೆಯರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸರ್ಕಾರಿ ಬಸ್​ ಕದ್ದ ಖತರ್ನಾಕ್ ಕಳ್ಳ ರಾಜು ಟಿಕೆಟ್ ಹೆಸರಲ್ಲಿ ಜನರಿಂದ ಹಣ ಪಡೆದು ಮಾರ್ಗಮಧ್ಯೆ ಬಸ್​ ನಿಲ್ಲಿಸಿ ಎಸ್ಕೇಪ್

Posted by Vidyamaana on 2023-09-13 07:32:26 |

Share: | | | | |


ಸರ್ಕಾರಿ ಬಸ್​ ಕದ್ದ ಖತರ್ನಾಕ್ ಕಳ್ಳ ರಾಜು ಟಿಕೆಟ್ ಹೆಸರಲ್ಲಿ ಜನರಿಂದ ಹಣ ಪಡೆದು ಮಾರ್ಗಮಧ್ಯೆ ಬಸ್​ ನಿಲ್ಲಿಸಿ ಎಸ್ಕೇಪ್

ಹೈದರಾಬಾದ್: ತೆಲಂಗಾಣದ (Telangana) ಸಿದ್ದಿಪೇಟೆಯಲ್ಲಿ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಸರ್ಕಾರಿ ಬಸ್ (Government Bus)​ ಕದ್ದ ಕಳ್ಳನೊಬ್ಬ ಚಾಲಕನಂತೆ ಪೋಸ್ ಕೊಟ್ಟು, ಪ್ರಯಾಣಿಕರನ್ನ (Passangers) ಹತ್ತಿಸಿಕೊಂಡು, ಅವರಿಂದ ಟಿಕೆಟ್ ಕೊಡದೇ ದುಡ್ಡು ವಸೂಲಿ ಮಾಡಿದ್ದಾನೆ.ಆದರೆ ದಾರಿ ಮಧ್ಯೆ ಬಸ್​ ನಿಲ್ಲಿಸಿ ಪರಾರಿಯಾಗಿದ್ದಾನೆ. ಸಿದ್ದಿಪೇಟೆ (Siddipet) ಜಿಲ್ಲೆಯಲ್ಲಿ ಸೋಮವಾರ ಈ ಘಟನೆ ನಡೆದಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯನ್ನ ಬಂಧಿಸಲಾಗಿ. ಬೈಕ್, ಕಾರು ಕದಿಯುವುದು ಸಾಮಾನ್ಯ ಸಂಗತಿ, ಆದರೆ ಬಸ್​ ಕದ್ದಿದ್ದಲ್ಲದೆ, ಪ್ರಯಾಣಿಕರನ್ನು ಯಾಮಾರಿಸಿದ ಹಣವನ್ನು ವಸೂಲಿ ಮಾಡಿರುವ ಈ ಘಟನೆ ಸಖತ್ ವೈರಲ್ ಆಗುತ್ತಿದೆ. ಊಟಕ್ಕೆ ಬಸ್ ನಿಲ್ಲಿಸಿದಾಗ ಕಳ್ಳತನ


ಸಿದ್ದಿಪೇಟೆ ಜಿಲ್ಲೆಯ ಸ್ವಾಮಿ ಎಂಬಾತ ಆರ್‌ಟಿಸಿಯಲ್ಲಿ ಚಾಲಕರಾಗಿ ಬಸ್​ ಓಡಿಸುತ್ತಾರೆ. ಭಾನುವಾರ ರಾತ್ರಿ ಬಸ್ ಚಾಲಕ ಸಿದ್ದಿಪೇಟ್​ ಬಸ್​ ನಿಲ್ದಾಣದಲ್ಲಿ ಬಸ್​ ನಿಲ್ಲಿಸಿ ಊಟಕ್ಕೆ ತೆರಳಿದ್ದಾರೆ. ಆಸದರೆ ಬೀಗ ಹಾಕುವುದನ್ನ ಮರೆತು ಹೋಗೊದ್ದಾರೆ. ಇದನ್ನ ಗಮನಿಸಿದ ಬಂದೇಲ ರಾಜು ಎಂಬಾತ ಡ್ರೈವರ್​ ಸೀಟ್​ನಲ್ಲಿ ಕುಳಿತು ಬಸ್​ಅನ್ನು ವೇಮುಲವಾಡಕ್ಕೆ ತೆಗೆದುಕೊಂಡು ಹೋಗಿದ್ದಾನೆ.ಟಿಕೆಟ್​ ಹೆಸರಲ್ಲಿ ಹಣ ವಸೂಲಿ


ಇಷ್ಟೇ ಅಲ್ಲದೆ ಆತ ದಾರಿಯುದ್ದಕ್ಕೂ ಕಂಡ ಎಲ್ಲಾ ಪ್ರಯಾಣಿಕರನ್ನು ಹೈದರಾಬಾದ್​ಗೆ ಹೋಗುವುದಾಗಿ ಹತ್ತಿಸಿಕೊಂಡು ಟಿಕೆಟ್ ಹೆಸರಿನಲ್ಲಿ ಹಣ ವಸೂಲಿ ಮಾಡಿದ್ದಾನೆ. ನಂತರ ಟಿಕೆಟ್ ನೀಡುವುದಾಗಿ ಹೇಳಿದ್ದಾನೆ. ಆರ್‌ಟಿಸಿ ಬಸ್‌ ಆಗಿದ್ದರಿಂದ ಪ್ರಯಾಣಿಕರಿಗೆ ಈತನ ವರ್ತನೆ ಬಗ್ಗೆ ಅನುಮಾನ ಬಂದಿರಲಿಲ್ಲ. ಈ ಮಧ್ಯೆ ಸಾರಂಪಲ್ಲಿ-ನೆರೆಲ್ಲಾ ಮಾರ್ಗದ ತಂಗಲಪಲ್ಲಿಯಲ್ಲಿ ಎರ್ರಾಬಿರ್ರಿ ಬಸ್​ ಹೋಡಿಸಿದ್ದಾನೆ. ಮಾರ್ಗ ಮಧ್ಯೆ ಬಸ್​ ನಿಲ್ಲಿಸಿ ಡೀಸೆಲ್ ತೆಗೆದುಕೊಂಡು ಬರುವುದಾಗಿ ಹೇಳಿದ ಕಳ್ಳ ಬಸ್​ನಿಂದ ಇಳಿದಿದ್ದಾನೆ. ಪ್ರಯಾಣಿಕರಿಗೆ ಆತನ ನಿಜವಾದ ಕಳ್ಳ ಎಂದು ತಿಳಿಯುವ ವೇಳೆಗೆ ಆತನ ಅಲ್ಲಿಂದ ಪರಾರಿಯಾಗಿದ್ದಾನೆ.

ಆರೋಪಿ ಬಂಧನ 

ರಸ್ತೆಯಲ್ಲಿ ಬಸ್ ನಿಂತಿರುವುದನ್ನು ಗಮನಿಸಿದ ಇತರ ಆರ್ ಟಿಸಿ ಬಸ್ ಚಾಲಕರು ನಿಯಂತ್ರಕರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ನಿಯಂತ್ರಕರು ಬಸ್ ಸ್ಥಳಕ್ಕೆ ಹೋಗಿ ಬಸ್ ವಶಪಡಿಸಿಕೊಂಡಿದ್ದಾರೆ. ಬಳಿಕ ಸಿದ್ದಿಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಪ್ರಯಾಣಿಕರು ತೆಗೆದ ಛಾಯಾಚಿತ್ರಗಳ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿ ರಾಜುನನ್ನು ಗುರುತಿಸಿ ಬಂಧಿಸಿದ್ದಾರೆ.https://twitter.com/KP_Aashish/status/1701467405690802289?ref_src=twsrc%5Etfw%7Ctwcamp%5Etweetembed%7Ctwterm%5E1701467405690802289%7Ctwgr%5E34584e61c6a798a4f69cd195485fde790cd9b32d%7Ctwcon%5Es1_c10&ref_url=http%3A%2F%2Fapi-news.dailyhunt.in%2F

ಅನುಮತಿ ಪಡೆಯದೆ ಭರ್ತಿ ಮಾಡಿದ ಹುದ್ದೆಗಳಿಗೆ ವೇತನ ಇಲ್ಲ: ಸರ್ಕಾರ ನಿರ್ಧಾರ

Posted by Vidyamaana on 2024-01-05 15:03:39 |

Share: | | | | |


ಅನುಮತಿ ಪಡೆಯದೆ ಭರ್ತಿ ಮಾಡಿದ ಹುದ್ದೆಗಳಿಗೆ ವೇತನ ಇಲ್ಲ: ಸರ್ಕಾರ ನಿರ್ಧಾರ

ಬೆಂಗಳೂರು : ಆರ್ಥಿಕ ಇಲಾಖೆಯ ಅನುಮತಿ ಪಡೆದುಕೊಳ್ಳದೆ ರಾಜ್ಯದಲ್ಲಿನ ವಿಶ್ವವಿದ್ಯಾಲಯಗಳಲ್ಲಿ ಭರ್ತಿ ಮಾಡಿರುವ ಹುದ್ದೆಗಳಿಗೆ ವೇತನಾನುದಾನ ನೀಡದಿರಲು ಸರ್ಕಾರ ನಿರ್ಧರಿಸಿದೆ.ರಾಜ್ಯದಲ್ಲಿ 41 ಸರ್ಕಾರಿ ವಿವಿಗಳಿದ್ದು, ಕೆಲವು ವಿವಿಗಳ ಕುಲಪತಿಗಳು ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದುಕೊಳ್ಳದೆ ತಮ್ಮ ನಿವೃತ್ತಿ ಅವಧಿಯ ಕೊನೆ ಕ್ಷಣದಲ್ಲಿ ಭರ್ತಿ ಮಾಡಿದ ಪ್ರಕರಣಗಳಿವೆ.ಆರ್ಥಿಕ ಇಲಾಖೆ ಈ ಮೊದಲೇ ಎಚ್ಚರಿಕೆ ನೀಡಿದ್ದರೂ ನೇಮಕಾತಿ ಮಾಡಿಕೊಳ್ಳಲಾಗಿದೆ.


ಅನುಮತಿ ಪಡೆದುಕೊಳ್ಳದೆ ಭರ್ತಿ ಮಾಡಿದ ಹುದ್ದೆಗಳನ್ನು ಮಂಜೂರಾದ ಹುದ್ದೆಗಳೆಂದು ಪರಿಗಣಿಸಲಾಗುವುದಿಲ್ಲ. ಈ ಹುದ್ದೆಗಳ ಭರ್ತಿಗೆ ಸಹಮತ ನೀಡುವುದಿಲ್ಲವೆಂದು ಆರ್ಥಿಕ ಇಲಾಖೆಯಿಂದ ವಿವಿಗಳಿಗೆ ಸೂಚನೆ ನೀಡಲಾಗಿದೆ. ಈ ಹುದ್ದೆಗಳಿಗೆ ವಿವಿಯ ಆರ್ಥಿಕ ಸಂಪನ್ಮೂಲದಿಂದ ಮಾತ್ರ ವೇತನ ನೀಡಬೇಕಾಗುತ್ತದೆ. ಆರ್ಥಿಕ ಇಲಾಖೆ ನೀಡುವ ವೇತನಾನುನುದಾನ ಬಳಕೆ ಸಾಧ್ಯವಿರುವುದಿಲ್ಲ.


ಆರ್ಥಿಕ ಇಲಾಖೆ ಅನುಮತಿ ಪಡೆದುಕೊಳ್ಳದೆ ಭರ್ತಿ ಮಾಡಿದ ಹುದ್ದೆಗಳಿಗೆ ವೇತನಾನುದಾನ ನೀಡಲು ವಿವಿಗಳು ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಆರ್ಥಿಕ ಇಲಾಖೆ ಪರಿಶೀಲಿಸಿದಾಗ ಅನುಮತಿ ಪಡೆದುಕೊಳ್ಳದೆ ನೇಮಕಾತಿ ನಡೆಸಿರುವುದು ಕಂಡುಬಂದಿದೆ.ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಎಲ್ಲಾ ಸಾಮಾನ್ಯ ವಿವಿ, ವೈದ್ಯಕೀಯ ವಿವಿ, ಕೃಷಿ ವಿವಿಗಳು ಆಡಳಿತ ಮಂಡಳಿಯ ಅನುಮೋದನೆ ಪಡೆದು ತಮ್ಮ ಹಂತದಲ್ಲಿ ಅನುಮೋದನೆ ಪಡೆದುಕೊಂಡ ಹುದ್ದೆಗಳ ವಿವರ, ಸರ್ಕಾರದ ಆದೇಶ ನೀಡಿರುವ ಕುರಿತಾದ ಮಾಹಿತಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಕಮಲ ಬಿಟ್ಟು ಡಿವಿಎಸ್ ಕೈ ಹಿಡಿಯೋದು ಫಿಕ್ಸ್

Posted by Vidyamaana on 2024-03-19 16:51:09 |

Share: | | | | |


ಕಮಲ ಬಿಟ್ಟು ಡಿವಿಎಸ್ ಕೈ ಹಿಡಿಯೋದು ಫಿಕ್ಸ್

ಬೆಂಗಳೂರು, ಮಾ.19: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡ(DV S

non

ananda Gowda) ಅವರು ಕಾಂಗ್ರೆಸ್ (Congress) ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಸಂಪರ್ಕದಲ್ಲಿರುವುದನ್ನು ಗೌಡ್ರು ಹೇಳಿದ್ದಾರೆ. ಇಂದು ಒಕ್ಕಲಿಗರ ಸಂಘದೊಂದಿಗೆ ಸಭೆ ನಡೆಸಿದ ಸದಾನಂದಗೌಡ, ಸುದೀರ್ಘ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಸದಾನಂದ ಗೌಡ ಅವರ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ ಎಂದು ಸಂಘದ ಅಧ್ಯಕ್ಷರು ಘೋಷಿಸಿದ್ದಾರೆ.

ನಾಳೆ ಸುದ್ದಿಗೋಷ್ಠಿ ನಡೆಸಿ ಎಲ್ಲಾ ವಿಚಾರಗಳನ್ನು ಹೇಳುತ್ತೇನೆ ಎಂದು ಹೇಳಿದ ಸದಾನಂದಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷರು, ನಿರ್ದೇಶಕರ ಜತೆ ಸಭೆ ನಡೆಸಿದ್ದೇನೆ. ಒಂದಷ್ಟು ವಿಚಾರಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಈಗ ಯಾವುದನ್ನೂ ನಾನು ಹೇಳುವುದಿಲ್ಲ. ಎಲ್ಲವನ್ನೂ ನಾಳೆ ಹೇಳುತ್ತೇನೆ ಎಂದರು.ಸದಾನಂದಗೌಡ ನಿರ್ಧಾರಕ್ಕೆ ಒಕ್ಕಲಿಗರ ಸಂಘದ ಬೆಂಬಲ

ಸಭೆ ಬಳಿಕ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ, ಸದಾನಂದಗೌಡರು ಏನೇ ನಿರ್ಧಾರ ತೆಗೆದುಕೊಂಡರೂ ನಮ್ಮ ಬೆಂಬಲವಿದೆ. ನಾಳೆ ಅವರೇ ಸುದ್ದಿಗೋಷ್ಠಿ ಮಾಡಿ ಎಲ್ಲಾ ಹೇಳುತ್ತಾರೆ ಎಂದರು.ಒಕ್ಕಲಿಗ ಸಮುದಾಯಕ್ಕೆ ಮೂರು ಪಕ್ಷಗಳಲ್ಲೂ ಅನ್ಯಾಯ ಆಗಿದೆ. ಬಿಜೆಪಿಯಲ್ಲಿ ಲಿಂಗಾಯತ ಸಮುದಾಯಕ್ಕೆ 8 ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯದ ಇಬ್ಬರಿಗೆ ಮಾತ್ರ ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯಕ್ಕೂ ಎಂಟು ಕಡೆ ಟಿಕೆಟ್ ಕೊಡಬೇಕು. ಬಿಜೆಪಿಯಲ್ಲಿ ಸಿ.ಟಿ.ರವಿ, ಪ್ರತಾಪ್ ​ಸಿಂಹಗೆ ಟಿಕೆಟ್ ಕೊಟ್ಟಿಲ್ಲ. ನಮ್ಮ ಸಮುದಾಯಕ್ಕೆ ಅನ್ಯಾಯವಾದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

Recent News


Leave a Comment: