ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


26 ವರ್ಷಗಳಿಂದ ಗ್ರಾಹಕರ ಪಾದ ರಕ್ಷಣೆ ಯಲ್ಲಿ ಸಾರ್ಥಕ ವ್ಯವಹಾರಕ್ಕೆ ಹೊಸ ರೂಪ

Posted by Vidyamaana on 2024-03-06 21:40:11 |

Share: | | | | |


26 ವರ್ಷಗಳಿಂದ ಗ್ರಾಹಕರ ಪಾದ ರಕ್ಷಣೆ ಯಲ್ಲಿ ಸಾರ್ಥಕ ವ್ಯವಹಾರಕ್ಕೆ ಹೊಸ ರೂಪ

ಪುತ್ತೂರು: ನಯಾ ಚಪ್ಪಲ್ ಬಜಾರ್ನ ನವೀಕೃತ ಮಳಿಗೆಯ ಉದ್ಘಾಟನೆ ಮಾರ್ಚ್ 7ರಂದು ಬೆಳಿಗ್ಗೆ 10ಕ್ಕೆ ದರ್ಬೆ ಬುಶ್ರಾ ಟವರ್ನಲ್ಲಿ ನಡೆಯಲಿದೆ.

1998ರಲ್ಲಿ ಆಗಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಎದುರುಗಡೆ ಇದ್ದ ಎ.ಎಂ. ಕಾಂಪ್ಲೆಕ್ಸ್ನಲ್ಲಿ ನಯಾ ಚಪ್ಪಲ್ ಬಜಾರ್ ಕಾರ್ಯಾಚರಣೆ ಆರಂಭಿಸಿತು. ಬಳಿಕ ದರ್ಬೆಯ ಬುಶ್ರಾ ಟವರ್ಗೆ ಸ್ಥಳಾಂತರಗೊಂಡಿತು. ಸುಮಾರು 26 ವರ್ಷಗಳ ಸುದೀರ್ಘ ಪಯಣದಲ್ಲಿ  ಗ್ರಾಹಕರ ಮನಸೂರೆಗೊಂಡಿರುವ ರಫೀಕ್ ಎಂ.ಜಿ. ಮಾಲಕತ್ವದ ನಯಾ ಚಪ್ಪಲ್ ಬಜಾರ್ ಇದೀಗ ಆಧುನಿಕತೆಗೆ ತಕ್ಕಂತೆ ನವೀಕೃತಗೊಂಡು ಶುಭಾರಂಭಗೊಳ್ಳುತ್ತಿದೆ.


ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಬ್ಬ ಅವರು ನವೀಕೃತ ಮಳಿಗೆಯನ್ನು ಉದ್ಘಾಟಿಸುವರು. ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿರುವರು. ದರ್ಬೆ ಬುಶ್ರಾ ಟವರ್ನ ಮಾಲಕ ಅಬ್ದುಲ್ ಅಜೀಜ್ ಅವರು ಪ್ರಥಮ ಗ್ರಾಹಕರಾಗಿ ಉಪಸ್ಥಿತರಿರುವರು.

ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ವಾಮನ್ ಪೈ, ಪುತ್ತೂರು ಸಂಯುಕ್ತ ಜಮಾಅತ್ ಕಮಿಟಿ ಅಧ್ಯಕ್ಷ ಮೊಹಮ್ಮದ್ ಹಾಜಿ ಕೆ.ಪಿ., ಮಹಾವೀರ ಮೆಡಿಕಲ್ ಸೆಂಟರಿನ ಡಾ. ಅಶೋಕ್ ಪಡಿವಾಳ್,  ದರ್ಬೆ ಬಿಓಬಿಯ ಸೀನಿಯರ್ ಮ್ಯಾನೇಜರ್ ಸಾದೀಕ್ ಎಸ್.ಎಂ., ಲಿಯೋ ಜಿಲ್ಲಾ ಅಧ್ಯಕ್ಷೆ ಡಾ. ರಂಜಿತಾ ಎಚ್. ಶೆಟ್ಟಿ, ಕ್ರಿಸ್ಟೋಫರ್ ಕಾಂಪ್ಲೆಕ್ಸಿನ ವಲೇರಿಯನ್ ಡಯಾಸ್, ಡಾ. ಜಸ್ಪ್ರಿತ್ ಸಿಂಗ್ ದಿಲ್, ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ಜಯರಾಜ್ ಭಂಡಾರಿ, ಪುತ್ತೂರು ಅಗ್ರಝೋನ್, ಸಿಝ್ಲರ್ನ ಪಿ.ಎನ್. ಪ್ರಸನ್ನ ಕುಮಾರ್ ಶೆಟ್ಟಿ, ಮದರ್ ಇಂಡಿಯಾದ ಎಂ.ಜಿ. ರಜಾಕ್ ಅತಿಥಿಗಳಾಗಿರುವರು ಎಂದು ಪ್ರಕಟಣೆ ತಿಳಿಸಿದೆ.

ರಸ್ತೆ ಬದಿ ನಡೆದುಕೊಂಡು ಹೋಗ್ತಿದ್ದ ಯುವತಿಗೆ ಕಾರು ಡಿಕ್ಕಿ – ಹಸೆಮಣೆ ಏರಬೇಕಾಗಿದ್ದಾಕೆ ದುರ್ಮರಣ

Posted by Vidyamaana on 2023-12-29 13:43:53 |

Share: | | | | |


ರಸ್ತೆ ಬದಿ ನಡೆದುಕೊಂಡು ಹೋಗ್ತಿದ್ದ ಯುವತಿಗೆ ಕಾರು ಡಿಕ್ಕಿ – ಹಸೆಮಣೆ ಏರಬೇಕಾಗಿದ್ದಾಕೆ ದುರ್ಮರಣ

ಬಂಟ್ವಾಳ, ಡಿ.29: ರಸ್ತೆ ಬದಿ ನಡೆದು ಹೋಗುತ್ತಿದ್ದ ಯುವತಿಯೊಬ್ಬಳು ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬಿ.ಸಿ‌.ರೋಡ್ ಕೈಕಂಬದಲ್ಲಿ ನಿನ್ನೆ ರಾತ್ರಿ ನಡೆದಿದೆ. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ತಡರಾತ್ರಿ ಸಾವನ್ನಪ್ಪಿದ್ದಾಳೆ. 


ಬಿಸಿರೋಡಿನ ಕೈಕಂಬ ‌ಸಮೀಪದ ಪಚ್ಚಿನಡ್ಕ ಎಂಬಲ್ಲಿ ನಿನ್ನೆ ರಾತ್ರಿ ಅಪಘಾತ ನಡೆದಿದ್ದು ಸ್ಥಳೀಯ ‌ನಿವಾಸಿ ಚೈತ್ರಾ (22 ) ಮೃತಪಟ್ಟ ಯುವತಿ. ಮಂಗಳೂರಿನ ಬಟ್ಟೆ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಚೈತ್ರಾ ಸಂಜೆ ವೇಳೆ ಬಸ್ಸಿನಲ್ಲಿ ಬಿಸಿ ರೋಡ್ ಬಂದಿದ್ದು ಬಳಿಕ ತಾಯಿ ಜೊತೆಗೆ ಸ್ನೇಹಿತೆಯ ಮನೆ ಕಡೆಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ.  


ಸ್ನೇಹಿತೆಯ ರೋಸ್ ಕಾರ್ಯಕ್ರಮಕ್ಕೆಂದು ತಾಯಿ ಜೊತೆ ರಸ್ತೆ ಬದಿ ನಡೆದು ಹೋಗುತ್ತಿದ್ದರು ಎನ್ನಲಾಗಿದ್ದು ಕಾರಿನ ಅತೀ ವೇಗ ಮತ್ತು ಅಜಾಗರೂಕತೆಯಿಂದ ಅಪಘಾತ ಉಂಟಾಗಿದೆ‌. ಯುವತಿ ಗಂಭೀರ ಗಾಯಗೊಂಡಿದ್ದರು. ಇದೇ ವೇಳೆ, ಖಾಸಗಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಟ್ರಾಫಿಕ್ ಎ.ಎಸ್.ಐ.ಸುರೇಶ್ ಪಡಾರ್ ಹಾಗೂ ಹೆಚ್.ಸಿ.ರಮೇಶ್ ತಮ್ಮ ವಾಹನದಲ್ಲಿ ಯುವತಿಯನ್ನು ಮಂಗಳೂರು ‌ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಮಧ್ಯರಾತ್ರಿ ಸುಮಾರು 1 ಗಂಟೆಗೆ ಈಕೆ ಮೃತಪಟ್ಟ ಬಗ್ಗೆ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಯುವತಿಗೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರು ಬಳಿಕ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಲ್ಲದೆ, ಮನೆಯ ಕಾಂಪೌಂಡ್ ಗೋಡೆಗೆ ಡಿಕ್ಕಿಯಾಗಿ ನಿಂತಿತ್ತು. ಘಟನೆ ಬೆನ್ನಲ್ಲೇ ಕಾರನ್ನು ಬಿಟ್ಟು ಅದರಲ್ಲಿದ್ದ ಮೂವರು ಯುವಕರು ಪರಾರಿಯಾಗಿದ್ದಾರೆ. ಮೆಲ್ಕಾರ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ‌ಭೇಟಿ ನೀಡಿ ಕಾರನ್ನು ವಶಕ್ಕೆ ಪಡೆದಿದ್ದಾರೆ. 


ಯುವತಿಗೆ ಮದುವೆ ನಿಶ್ಚಿತಾರ್ಥ 


‌‌‌ಚೈತ್ರಾ ಮೇಕಪ್ ಕಲಾವಿದರಾಗಿದ್ದ ದಿ. ಭಾಸ್ಕರ್ ಆಚಾರ್ಯ ಅವರ ಮಗಳಾಗಿದ್ದು ಮಂಗಳೂರಿನ‌ ಪ್ರಸಿದ್ದ ಬಟ್ಟೆ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದಳು. ಚೈತ್ರಾಗೆ ಮದುವೆ ನಿಶ್ಚಿತಾರ್ಥ ನಡೆದಿದ್ದು ಮುಂದಿನ ಮಾರ್ಚ್ 3ರಂದು ಕೊಡ್ಯಡ್ಕದ ಯುವಕನ ಜೊತೆ ಮದುವೆ ನಿಗದಿಯಾಗಿತ್ತು. ಯುವಕರು ಕಾರನ್ನು ಅತಿ ವೇಗ ಮತ್ತು ನಿರ್ಲಕ್ಷ್ಯದಿಂದ ಚಲಾಯಿಸಿದ್ದು ಅಪಘಾತಕ್ಕೆ ಕಾರಣವಾಗಿತ್ತು. ಮಾದಕ ದ್ರವ್ಯ ಸೇವಿಸಿದ್ದರಿಂದ ಈ ರೀತಿ ಘಟನೆ ಆಗಿತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಳಿಯೂರುಕಟ್ಟೆ ಸರಕಾರಿ ಪ ಪೂ ಕಾಲೇಜು ವಾರ್ಷಿಕೋತ್ಸವ

Posted by Vidyamaana on 2023-12-18 12:23:08 |

Share: | | | | |


ಬೆಳಿಯೂರುಕಟ್ಟೆ ಸರಕಾರಿ  ಪ ಪೂ ಕಾಲೇಜು ವಾರ್ಷಿಕೋತ್ಸವ

ಪುತ್ತೂರು: ಮಕ್ಕಳನ್ನು ತಿದ್ದುವ ಮತ್ತು ಅವರಿಗೆ ಉತ್ತಮ ದಾರಿ ತೋರಿಸುವ ಕೆಲಸ ಕೇವಲ ಶಿಕ್ಷಕರು‌ಮಾತ್ರವಲ್ಲ ಪೋಷಕರಿಂದಲೂ ಆಗಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ಬೆಳಿಯೂರು ಕಟ್ಟೆ ಸರಕಾರಿ ಪ ಪೂ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸರಕಾರಿ ಶಾಲೆಯಲ್ಲಿ ಶಿಸ್ತು ಕಡಿಮೆ ಎಂದು ಕೆಲವರು ಆಪಾದನೆ ಮಾಡುತ್ತಾರೆ. ಸರಕಾರಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ. ಶಿಸ್ತು ಪಾಲನೆ ಮಾಡಬೇಕಾದರೆ ಪೋಷಕರ ಸಹಕಾರ ಅತೀ ಅಗತ್ಯವಾಗಿದೆ.

ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆ ಮಾಡುವ ಕನಸು ಕಾಣಬೇಕು. ಕನಸೇ ಕಾಣದಿದ್ದರೆ ನನಸು ಮಾಡುವುದಾದರೂ ಏನನ್ನಯ ಎಂಬುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ವಿದ್ಯೆ ಕಲಿತು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಬೇಕು,ದುಶ್ಚಟಗಳಿಗೆ ಯಾರೂ ಬಲಿಯಾಗಬಾರದು. ತಂದೆ ತಾಯಿಯ ಹೆಸರನ್ನು ಕೆಡಿಸುವ ಕರಲಸವನ್ನು ಎಂದೂ ಮಾಡಬೇಡಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.


ಎರಡು ಗ್ರಾಮಕ್ಕೊಂದು ಕೆಪಿಎಸ್ ಸ್ಕೂಲ್


ಎರಡು ಗ್ರಾಮಕ್ಕೊಂದು ಕೆಪಿಎಸ್ ಸ್ಕೂಲ್ ಆರಂಭ ಮಾಡುವ ಉದ್ದೇಶ ಸರಕಾರಕ್ಕಿದ್ದು ,ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳನ್ನು ಮುಖ್ಯ ಶಾಲೆಗೆ ಮರ್ಜಿ ಮಾಡಲಾಗುವುದು ಎಂದು ಹೇಳಿದರು.


15 ತಿಂಗಳಲ್ಲಿ 24 ಗಂಟೆಯೂ ನೀರು

ಮುಂದಿನ 15 ತಿಂಗಳೊಳಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ದಿನದ 24 ಗಂಟೆ ನೀರು ವಿತರಣೆಯಾಗಲಿದೆ ಎಂದು ಶಾಸಕರು ತಿಳಿಸಿದರು.

ಚಾರ್ಮಾಡಿ ಘಾಟ್ ಇಳಿಯುತ್ತಿದ್ದ ಬಸ್ಸಿನ ಬ್ರೇಕ್ ಫೇಲ್ – ಸಮಯ ಪ್ರಜ್ಞೆ ಮೆರೆದ ಚಾಲಕ ಸಂತೋಷ್ ಮಾಡಿದ್ದೇನು?

Posted by Vidyamaana on 2024-03-09 08:55:21 |

Share: | | | | |


ಚಾರ್ಮಾಡಿ ಘಾಟ್ ಇಳಿಯುತ್ತಿದ್ದ ಬಸ್ಸಿನ ಬ್ರೇಕ್ ಫೇಲ್ – ಸಮಯ ಪ್ರಜ್ಞೆ ಮೆರೆದ ಚಾಲಕ ಸಂತೋಷ್ ಮಾಡಿದ್ದೇನು?


ಮೂಡಿಗೆರೆ: ಸದಾ ಅಪಘಾತಗಳು ಸಂಭವಿಸುತ್ತಿರುವ ಚಾರ್ಮಾಡಿ ಘಾಟ್‌ನಲ್ಲಿ ಶುಕ್ರವಾರ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರಿ ಅನಾಹುತ ತಪ್ಪಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಒಂದು ಚಾರ್ಮಾಡಿ ಘಾಟ್‌ನಲ್ಲಿ ಬ್ರೇಕ್‌ ಫೇಲ್ ಆಗಿತ್ತು.


ಕಡಿದಾದ ರಸ್ತೆ ಹಾಗೂ ತಿರುವುಗಳಿರುವ ಈ ರಸ್ತೆಯಲ್ಲಿ ಬ್ರೇಕ್ ಫೇಲ್ ಆಗಿದ್ದ ಬಸ್‌ ನಿಯಂತ್ರಿಸೋದು ಕಷ್ಟವಾಗಿತ್ತು. ಆದ್ರೆ, ಬ್ರೇಕ್‌ ಫೇಲ್ ಆಗಿರೋದು ಗಮನಕ್ಕೆ ಬರುತ್ತಿದ್ದಂತೆ ಚಾಲಕ ಸಮಯ ಪ್ರಜ್ಞೆ ಮೆರೆದಿದ್ದಾರೆ. ಬಸ್ ನಿಲ್ಲಿಸಲು ಕೇವಲ ಯಾವುದಾದರು ತಡೆಗೋಡೆಗೆ ಗುದ್ದುವುದೇ ಸೂಕ್ತ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.


ಹೀಗಾಗಿ ಬಸ್ ಬ್ರೇಕ್‌ ಫೇಲ್ ಆಗಿರುವ ವಿಚಾರವನ್ನು ಪ್ರಯಾಣಿಕರ ಗಮನಕ್ಕೆ ತಂದು ಯಾರೂ ಆತಂಕ ಪಡಬೇಡಿ ಎಂದು ಧೈರ್ಯ ತುಂಬಿದ್ದಾರೆ. ಎಲ್ಲರಿಗೂ ಗಟ್ಟಿಯಾಗಿ ಕುಳಿತುಕೊಳ್ಳುವಂತೆ ಸೂಚನೆ ನೀಡಿ ರಸ್ತೆಯಲ್ಲಿ ಸಿಗುವ ಯಾವುದಾದರೂ ಕಿರು ಸೇತುವೆಯ ತಡೆ ಗೋಡೆಗೆ ಡಿಕ್ಕಿ ಹೊಡೆಯುವುದಾಗಿ ಹೇಳಿದ್ದಾರೆ.


ಚಾರ್ಮಾಡಿ ಘಾಟ್‌ನ 6 ನೇ ತಿರುವು ಬಳಿ ಸ್ವಲ್ಪ ನೇರವಾಗಿರುವ ರಸ್ತೆಯಲ್ಲಿ ಇದ್ದ ಕಿರು ಸೇತುವೆಗೆ ಬಸ್ ಡಿಕ್ಕಿ ಹೊಡೆಸಿ ನಿಲ್ಲಿಸಿದ್ದಾರೆ. ಚಾರ್ಮಾಡಿ ಘಾಟ್‌ನಂತಹ ರಸ್ತೆಯಲ್ಲಿ ಬ್ರೇಕ್‌ ಫೇಲ್‌ ಆದ್ರೆ, ಕೈಕಾಲು ಬಿಡುವ ಚಾಲಕರ ನಡುವೆ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಸಂತೋಷ್‌ ಅವರ ಸಮಯ ಪ್ರಜ್ಞೆ ನಿಜಕ್ಕೂ ಮೆಚ್ಚತಕ್ಕದು.


ಪ್ರಯಾಣಿಕರೂ ಕೂಡಾ ಚಾಲಕ ಸಂತೋಷ್ ಅವರಿಗೆ ಅಭಿನಂದನೆ ಸಲ್ಲಿಸಿದ್ದು, ಸಮಯ ಪ್ರಜ್ಞೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪೆರ್ಲಂಪಾಡಿ: ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

Posted by Vidyamaana on 2023-04-27 07:37:52 |

Share: | | | | |


ಪೆರ್ಲಂಪಾಡಿ: ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ಜಾರಿಗೆ ತಂದು ಭೂಮಿಯಿಲ್ಲದ ಬಡವನನ್ನು ಭೂಮಿಯ ಒಡೆಯನನ್ನಾಗಿ ಮಾಡಿದ್ದು ಕಾಂಗ್ರೆಸ್‌ನ ಇಂದಿರಾಗಾಂಧಿ ಅದೇ ರೀತಿ ಕರ್ನಾಟಕದಲ್ಲಿ ಕೃಷಿಗೆ ಉಚಿತ ವಿದ್ಯುತ್ ನೀಡುವ ಮೂಲಕ ಕೃಷಿಕರ ಬದುಕನ್ನು ಹಸನಾಗಿಸಿದ್ದೂ ಕಾಂಗ್ರೆಸ್ ಸರಕಾರವೇ ಆಗಿದೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.

ನಾಳೆ (ಜೂನ್ 3)ಪುತ್ತೂರು ಕಿಲ್ಲೆ ಮೈದಾನದ ಸಂತೆಗೆ ಹಿಂಬಾಗಿಲಿನಿಂದ ಪ್ರವೇಶಿಸಿ- ತಹಸೀಲ್ದಾ‌ರ್ ಕುಂಞ ಅಹಮ್ಮದ್

Posted by Vidyamaana on 2024-06-02 23:35:39 |

Share: | | | | |


ನಾಳೆ (ಜೂನ್ 3)ಪುತ್ತೂರು ಕಿಲ್ಲೆ ಮೈದಾನದ ಸಂತೆಗೆ ಹಿಂಬಾಗಿಲಿನಿಂದ ಪ್ರವೇಶಿಸಿ- ತಹಸೀಲ್ದಾ‌ರ್ ಕುಂಞ ಅಹಮ್ಮದ್

ಪುತ್ತೂರು: ಕರ್ನಾಟಕ ವಿಧಾನಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿ ಮತಗಟ್ಟೆ ಸಮೀಪ ಪುತ್ತೂರು ಕಿಲ್ಲೆ ಮೈದಾನದ ಸೋಮವಾರದ ಸಂತೆ ನಡೆಯಲಿರುವ ಹಿನ್ನೆಲೆಯಲ್ಲಿ ಸಂತೆಯನ್ನು ರದ್ದುಗೊಳಿಸದೆ ಸಂತೆಯ ಪ್ರವೇಶದ ಮುಖ್ಯ ದ್ವಾರವನ್ನು ಬಂದ್ ಮಾಡಲಾಗುವುದು.

ಹಿಂಬಂದಿಯ ಗೇಟಿನ ಮೂಲಕ ಸಾರ್ವಜನಿಕರಿಗೆ ಸಂತೆಗೆ ಆಗಮಿಸಲು ಅವಕಾಶ ಮಾಡಲಾಗಿದೆ ಎಂದು ಪುತ್ತೂರು ತಹಸೀಲ್ದಾರ್ ಕುಂಞ ಅಹಮ್ಮದ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮತದಾನ ಪ್ರಕ್ರಿಯೆ ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಮುಕ್ತ ಹಾಗು ನ್ಯಾಯೋಚಿತ ನಿಷ್ಪಕ್ಷವಾಗಿ ಚುನಾವಣೆಯನ್ನು ನಡೆಸುವ ಸಲುವಾಗಿ ಜಿಲ್ಲಾಧಿಕಾರಿಗಳ ಆದೇಶದಂತೆ ಕಿಲ್ಲೆ ಮೈದಾನದ ಸೋಮವಾರ ಸಂತೆಯು ಕೂಡಾ ಚುನಾವಣೆ ಸಂದರ್ಭದಲ್ಲಿ ನಡೆಯುತ್ತದೆ.

Recent News


Leave a Comment: