ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ಸುದ್ದಿಗಳು News

Posted by vidyamaana on 2024-07-24 17:19:41 |

Share: | | | | |


ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ರಾಜ್ಯದ ಸರಕಾರಿ ಶಾಲೆ ಮತ್ತು ಕಾಲೇಜು ಕ್ಯಾಂಪಸ್‌ ಗಳಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ಶೈಕ್ಷಣಿಕೇತರ ಚಟುವಟಿಕೆ ನಡೆಸದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಇದು ಭಾರೀ ಸಂಚಲನವನ್ನೇ ಹುಟ್ಟುಹಾಕಿದೆ. ಇದರಿಂದ ಸಾರ್ವಜನಿಕ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಣೆಯ ಸಂಘಟಕರು ಗೊಂದಲದಲ್ಲಿದ್ದಾರೆ.

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ 2013ರ ಫೆ.7 ರಂದು ಮತ್ತು 2023ರ ಡಿ.1ರಂದು ರಾಜ್ಯದ ಎಲ್ಲ ಡಿಡಿಪಿಐ ಕಚೇರಿಗಳಿಗೆ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಕಟ್ಟಡ ಅಥವಾ ಶಾಲಾ ಮೈದಾನ ಅನುಮತಿ ನೀಡಬಾರದೆಂದು ಸುತ್ತೋಲೆ ಬಂದಿತ್ತು. ಈ ಆಧಾರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡಿಡಿಪಿಐ ವೆಂಕಟೇಶ್ ಪಟಗಾರ ಅವರು ಜು.16ರಂದು ಜ್ಞಾಪನಾ ಪತ್ರವನ್ನು ಎಲ್ಲ ಬಿಇಒಗಳಿಗೆ ರವಾನಿಸಿದ್ದಾರೆ.

ಜ್ಞಾಪನಾ ಪತ್ರದಲ್ಲಿ ಏನಿದೆ?

ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ, ಶಾಲಾ ಮೈದಾನ ಅಥವಾ ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನು ನೀಡಬಾರದೆಂದು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆಯಾಗುತ್ತಾರೆ ಎಂದು ಜ್ಞಾಪನಾ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಬಿಜೆಪಿಯಿಂದ ಹೋರಾಟ :

ರಾಜ್ಯಾದ್ಯಂತ ಹಲವು ದಶಕಗಳಿಂದ ಶಾಲೆಯ ಕ್ಯಾಂಪಸ್, ಶಾಲಾ ಕಟ್ಟಡದಲ್ಲಿ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ರಾಜಕೀಯ ಮಾಡಲು ಹೊರಟಿದ್ದು, ಶಾಲಾ ವಠಾರದಲ್ಲಿ ಧಾರ್ಮಿಕ ಆಚರಣೆ ನಡೆಸದಂತೆ ಆದೇಶ ಹೊರಡಿಸಿದೆ. ಇದು ಖಂಡನೀಯವಾಗಿದ್ದು, ಈ ಹಿಂದೆ ನಿಗದಿತ ಸ್ಥಳದಲ್ಲೇ ಕಾರ್ಯಕ್ರಮ ಆಯೋಜಿಸುತ್ತೇವೆ. ಇದನ್ನು ತಡೆಯಲು ಬಂದರೆ ಸುಮ್ಮನಿರಲ್ಲ ಎಂದು ಬಿಜೆಪಿ ತಾಕೀತು ಮಾಡಿದೆ. ಇದೇ ರೀತಿ ಜಿಲ್ಲಾದ್ಯಂತ ಹೋರಾಟ ನಡೆಯುತ್ತಿದೆ.

ಬಿಜೆಪಿ ಸರಕಾರದಲ್ಲೇ ಆದೇಶ :

2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಶಿಕ್ಷಣೇತರ ಚಟುವಟಿಕೆ ನಡೆಸದಂತೆ ಆದೇಶ ಹೊರಡಿಸಿತ್ತು ಆದೇ ಆದೇಶದಡಿ ನಿಯಮದಂತೆ ದಕ್ಷಿಣ ಕನ್ನಡ ಶಿಕ್ಷಣಾಧಿಕಾರಿಯವರು ಬಿಇಒ ಮೂಲಕ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಆದೇಶ ಹೊರಡಿಸಿದ್ದ ಬಿಜೆಪಿಯವರೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಈ ವಿವಾದವೂ ಜಿಲ್ಲೆಯಲ್ಲಿ ದಿನ ಹೋದಂತೆ ರಾಜಕೀಯ ಬಣ್ಣ ಪಡೆದು ಕಾವೇರತೊಡಗಿದೆ.

 Share: | | | | |


BREAKING : ಪೋಕೋ ಪ್ರಕರಣದಲ್ಲಿ ಬಿಎಸ್‌ವೈಗೆ ಬಂಧನದ ಭೀತಿ : ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್

Posted by Vidyamaana on 2024-06-13 17:16:18 |

Share: | | | | |


BREAKING : ಪೋಕೋ ಪ್ರಕರಣದಲ್ಲಿ ಬಿಎಸ್‌ವೈಗೆ ಬಂಧನದ ಭೀತಿ : ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್

ಬೆಂಗಳೂರು : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಇದೀಗ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ ಬೆಂಗಳೂರಿನ ಒಂದನೇ ತ್ವರಿತಗತಿ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ.

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್​ ತಿಂಗಳಲ್ಲಿ ಎಫ್​ಐಆರ್ ದಾಖಲಾಗಿತ್ತು.

ಎಸ್.ಡಿ.ಪಿ.ಐ ಉಪ್ಪಿನಂಗಡಿ ಬ್ಲಾಕ್ ಕಾರ್ಯಕರ್ತರ ಸಭೆ*

Posted by Vidyamaana on 2023-04-09 10:24:06 |

Share: | | | | |


ಎಸ್.ಡಿ.ಪಿ.ಐ ಉಪ್ಪಿನಂಗಡಿ ಬ್ಲಾಕ್ ಕಾರ್ಯಕರ್ತರ ಸಭೆ*

ಉಪ್ಪಿನಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಪ್ಪಿನಂಗಡಿ ಬ್ಲಾಕ್ ಸಮಿತಿ ವತಿಯಿಂದ ಎಚ್.ಎಂ ಹಾಲ್ ನಲ್ಲಿ ಏ 09 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಪಿ‌.ಐ ಉಪ್ಪಿನಂಗಡಿ ಬ್ಲಾಕ್ ಸಮಿತಿ ಅಧ್ಯಕ್ಷರಾದ ಮುಸ್ತಫಾ ಲತೀಫಿ ವಹಿಸಿದರು. ಎಸ್.ಡಿ.ಪಿ.ಐ ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿ ಅದ್ಯಕ್ಷರಾದ ಇಬ್ರಾಹಿಮ್ ಸಾಗರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಚುನಾವಣ ಉಸ್ತುವಾರಿಯಾದ ಸಿದ್ದೀಕ್ ಕೆ‌ಎ ಚುನಾವಣ ರಣತಂತ್ರಗಳ ಬಗ್ಗೆ ವಿವರಿಸಿದರು. ಝಕರಿಯಾ ಕೊಡಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

ಪುತ್ತೂರು :ಎಪಿಎಂಸಿ ಸಹಾಯಕ ಕಾರ್ಯದರ್ಶಿ ರಾಮಚಂದ್ರ ಸೇವೆಯಿಂದ ಅಮಾನತು

Posted by Vidyamaana on 2024-05-04 20:42:20 |

Share: | | | | |


ಪುತ್ತೂರು :ಎಪಿಎಂಸಿ ಸಹಾಯಕ ಕಾರ್ಯದರ್ಶಿ ರಾಮಚಂದ್ರ ಸೇವೆಯಿಂದ ಅಮಾನತು

ಪುತ್ತೂರು ಮೇ 04 : ವರ್ಗಾವಣೆ ಆದೇಶಕ್ಕೆ ಕೆಎಟಿಯಿಂದ ತಡೆಯಾಜ್ಞೆ ತಂದು ಮತ್ತೆ ಕೆಲಸಕ್ಕೆ ಸೇರಿದ ದಿನವೇ ಮತ್ತೆ ಅಮಾನಾತಾದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಪುತ್ತೂರಿನ ಎಪಿಎಂಸಿಯಲ್ಲಿ ಸಹಾಯಕ ಕಾರ್ಯದರ್ಶಿಯಾಗಿದ್ದ ರಾಮಚಂದ್ರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕರ್ನಾಟಕ ಕೃಷಿ ಮಾರಾಟ ಇಲಾಖೆ ನಿರ್ದೇಶಕ ಎಂ.ಗಂಗಾಧರ ಸ್ವಾಮಿ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.ವರ್ಗಾವಣೆ ವಿರುದ್ಧ ಕೆಎಟಿಯಿಂದ ತಡೆಯಾಜ್ಞೆ ತಂದು ಗುರುವಾರ ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ರಾಮಚಂದ್ರ ಅವರಿಗೆ ಮಧ್ಯಾಹ್ನ ವೇಳೆ ಅಮಾನತು ಆದೇಶ ನೀಡಲಾಗಿದೆ.

ರಾಮಚಂದ್ರ ಅವರು ತರಕಾರಿ ವ್ಯಾಪಾರಸ್ಥರಿಗೆ ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ. ತರಕಾರಿ ವಾಹನಗಳ ಒಳಪ್ರವೇಶವನ್ನು ನಿರಾಕರಿಸುತ್ತಿದ್ದು, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ನಿಗದಿತ ಸಮಯಕ್ಕೆ ಸರಿಯಾಗಿ ಪರವಾನಗಿ ನೀಡದೆ ಇರುವುದರಿಂದ ವ್ಯಾಪಾರದಲ್ಲಿ ನಷ್ಟ ಆಗಿದೆ ಎಂದು ಎಪಿಎಂಸಿ ಪ್ರಾಂಗಣದ ತರಕಾರಿ ವ್ಯಾಪಾರಸ್ಥರು ಜನವರಿ 4ರಂದು ಕೃಷಿ ಮಾರಾಟ ಇಲಾಖೆ ನಿರ್ದೇಶಕರಿಗೆ ದೂರು ಸಲ್ಲಿಸಿದ್ದರು.

ಶ್ರೀ ಅನಂತಪುರದಲ್ಲಿ ಪೂರ್ಣ ದರ್ಶನ ತೋರಿದ ಬಬಿಯಾ

Posted by Vidyamaana on 2024-06-16 08:13:42 |

Share: | | | | |


ಶ್ರೀ ಅನಂತಪುರದಲ್ಲಿ ಪೂರ್ಣ ದರ್ಶನ ತೋರಿದ ಬಬಿಯಾ

ಕುಂಬಳೆ : ಸರೋವರ ಕ್ಷೇತ್ರವೆಂದೇ ಖ್ಯಾತಿ ಪಡೆದ ಶ್ರೀ ಅನಂತಪುರದಲ್ಲಿ ತಿಂಗಳುಗಳ ಹಿಂದೆ ಪ್ರತ್ಯಕ್ಷಗೊಂಡ ನೂತನ ಮೊಸಳೆ ಮರಿ (ಬಬಿಯಾ – 3) ಇದೇ ಮೊದಲ ಬಾರಿಗೆ ಶುಕ್ರವಾರ ಸಂಜೆ ಕ್ಷೇತ್ರ ಪ್ರಾಂಗಣ ಏರುವ ಮೂಲಕ ತನ್ನ ಪೂರ್ಣ ದರ್ಶನ ತೋರಿದೆ.

ಸುಮಾರು 80 ವರ್ಷಗಳಿಂದ ಕ್ಷೇತ್ರದ ಕೊಳದಲ್ಲಿ ನೆಲೆಸಿದ್ದ ಮೊಸಳೆಯು 2022ರ ಅಕ್ಟೋಬರ್‌ 9ರಂದು ರಾತ್ರಿ ಈ ಹಿಂದೆ ಇದ್ದ ಮೊಸಳೆ (ಬಬಿಯಾ) ಮೃತಪಟ್ಟಿತ್ತು

5,8,9ನೇ ತರಗತಿ ಪಬ್ಲಿಕ್ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Posted by Vidyamaana on 2023-12-26 21:58:49 |

Share: | | | | |


5,8,9ನೇ ತರಗತಿ ಪಬ್ಲಿಕ್ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023-24ನೇ ಸಾಲಿನ 5,8 ಮತ್ತಿ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲಾತ್ಮಕ ಮೌಲ್ಯಂಕನ (ಎಸ್‌ಎ-2)ದ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಂಕನ ಮತ್ತು ಅಂಗೀಕರಣ ಪರಿಷತ್ತು ಪ್ರಕಟಿಸಿದೆ. ಮಾ.11ರಿಂದ 18ರ ವರೆಗೆ ಪರೀಕ್ಷೆಗಳು ನಡೆಯಲಿವೆ.

5ನೇ ತರಗತಿಗೆ: 

ಮಾ.11ರಿಂದ 14ರವರೆಗೆ ಪರೀಕ್ಷೆ ನಡೆಯಲಿದೆ. ಮಾ.11- ಪ್ರಥಮ ಭಾಷೆ ಕನ್ನಡ, ಮಾ.12 ದ್ವಿತೀಯ ಭಾಷೆ ಇಂಗ್ಲಿಷ್, ಮಾ.13 ಪರಿಷರ ಅಧ್ಯಯನ ಮತ್ತು ಮಾ.14ರಂದು ಗಣಿತ ಪರೀಕ್ಷೆ ನಡೆಯಲಿದೆ. ಎಲ್ಲ ಪರೀಕ್ಷೆಗಳು ಮಧ್ಯಾಹ್ನ 2.30ರಿಂದ 4.30ರ ವರೆಗೆ ನಡೆಯಲಿವೆ.

8 ಮತ್ತು 9ನೇ ತರಗತಿ:

ಮಾ.11 ಪ್ರಥಮ ಭಾಷೆ ಕನ್ನಡ, ಮಾ.12 ದ್ವಿತೀಯ ಭಾಷೆ ಇಂಗ್ಲಿಷ್, ಮಾ.13 ತೃತೀಯ ಭಾಷೆ ಹಿಂದಿ, ಮಾ.14 ಗಣಿತ, ಮಾ.15 ವಿಜ್ಞಾನ, ಮಾ.16 ಸಮಾಜ ವಿಜ್ಞಾನ ಮತ್ತು ಮಾ.18ರಂದು ದೈಹಿಕ ಶಿಕ್ಷಣ ಪರೀಕ್ಷೆಗಳು ನಡೆಯಲಿವೆ. ಮಧ್ಯಾಹ್ನ 2.30ರಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಮಂಡಳಿ ಪ್ರಕಟಣೆ ಹೊರಡಿಸಿದೆ.


ಎಲ್ಲ ವಿದ್ಯಾರ್ಥಿಗಳಿಗೆ ಆಯಾ ಶಾಲಾ ಹಂತದಲ್ಲಿಯೇ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ತಾಲ್ಲೂಕು ಹಂತದಲ್ಲಿ ಮೌಲ್ಯಮಾಪನ ನಡೆಸಲಾಗುತ್ತದೆ.

ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಪುತ್ತೂರು ಬನ್ನೂರು ನಿವಾಸಿ ಸಫ್ವಾನ್ ಅರೆಸ್ಟ್

Posted by Vidyamaana on 2024-07-07 09:34:59 |

Share: | | | | |


ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಪುತ್ತೂರು ಬನ್ನೂರು ನಿವಾಸಿ  ಸಫ್ವಾನ್ ಅರೆಸ್ಟ್

ಮಂಗಳೂರು : ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಪುತ್ತೂರಿನ ಬನ್ನೂರು ಗ್ರಾಮದ ಸಫ್ವಾನ್‌ (32) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

Recent News


Leave a Comment: