ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ಸುದ್ದಿಗಳು News

Posted by vidyamaana on 2024-07-24 16:52:02 |

Share: | | | | |


ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ವದೆಹಲಿ : ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯಿಸಿದರು.


ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲಿನ ಸಂಚಾರವನ್ನು ನಿಲ್ಲಿಸಲಾಗಿತ್ತು. ಆನಂತರ, ಬ್ರಾಡ್ ಗೇಜ್ ಹಳಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂದು ಓಡುತ್ತಿದ್ದ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ- ಪುತ್ತೂರು ನಡುವೆ ಓಡಾಟ ನಡೆಸುತ್ತಿದ್ದು, ಅದನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಣೆ ಮಾಡಬೇಕು.

ಮಂಗಳೂರು – ಸುಬ್ರಹ್ಮಣ್ಯ ಮಧ್ಯೆ ರೈಲು ಓಡಾಟವಾದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ಹೋಗುವವರಿಗೆ ಉಪಯೋಗವಾಗಲಿದೆ. ಗ್ರಾಮಾಂತರ ಪ್ರದೇಶವಾದ ಸುಳ್ಯದಿಂದ ಮಂಗಳೂರಿಗೆ ಪ್ರತಿದಿನ ಓಡಾಟ ಮಾಡುವವರಿದ್ದಾರೆ. ಅವರಿಗೂ ಉಪಯುಕ್ತ ಆಗಲಿದೆ. ಇದು ಸೌತ್ ವೆಸ್ಟರ್ನ್ ರೈಲ್ವೇ ವಿಭಾಗದಲ್ಲಿದ್ದು, ನಮ್ಮ ಜಿಲ್ಲೆಯ ಒಳಗೆ ಸಂಚರಿಸುವ ಏಕೈಕ ಪ್ಯಾಸೆಂಜರ್ ರೈಲಾಗಿದೆ.


ಜನಸಾಮಾನ್ಯರ ಹಿತದೃಷ್ಟಿಯಿಂದ ಈ ರೈಲನ್ನು ಸುಬ್ರಹ್ಮಣ್ಯದವರೆಗೂ ವಿಸ್ತರಣೆ ಮಾಡಬೇಕು ಎಂದು ರೈಲ್ವೇ ಸಚಿವರನ್ನು ಮನವಿ ಮಾಡಿದ್ದಾರೆ. ಇದಕ್ಕುತ್ತರಿಸಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಸೇನೆಯಿಂದ ನಿವೃತ್ತಿ ಪಡೆದು ಸಂಸದರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಗ್ಗೆ ಗೌರವ ಹೊಂದಿದ್ದು, ರೈಲ್ವೇ ವಿಚಾರಗಳ ಬಗ್ಗೆ ಯಾವುದೇ ಮನವಿಯಿದ್ದರೂ ನನ್ನ ಕಚೇರಿಗೆ ಬಂದು ವೈಯಕ್ತಿಕವಾಗಿ ಚರ್ಚಿಸಬಹುದು. ಪರಿಹರಿಸಲು ಮುಕ್ತನಿದ್ದೇನೆ ಎಂದು ಹೇಳಿದರು.

 Share: | | | | |


ವಿದ್ಯಾರ್ಥಿಸ್ನೇಹಿ ಸಿಎಂ ಎಂದು ಪತ್ರ ಬರೆದು ಧನ್ಯವಾದ ತಿಳಿಸಿದ್ದ ಧಾರವಾಡ ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

Posted by Vidyamaana on 2023-09-09 15:59:26 |

Share: | | | | |


ವಿದ್ಯಾರ್ಥಿಸ್ನೇಹಿ ಸಿಎಂ ಎಂದು ಪತ್ರ ಬರೆದು ಧನ್ಯವಾದ ತಿಳಿಸಿದ್ದ ಧಾರವಾಡ ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ,  ರಾಜ್ಯ ಸರಕಾರದ(State Government) ಮೊಟ್ಟೆ, ಹಾಲು ವಿತರಣೆ ಯೋಜನೆ ಬಗ್ಗೆ ಶ್ಲಾಘಿಸಿ ವಿದ್ಯಾರ್ಥಿಸ್ನೇಹಿ ಸಿಎಂ ಎಂದು ಪತ್ರ ಬರೆದಿದ್ದ ಆಶಾ ನೆಹರು ಪಾಟೀಲ್ ಎಂಬ ವಿದ್ಯಾರ್ಥಿನಿಯನ್ನು ಸಿಎಂ ಸಿದ್ದರಾಮಯ್ಯ(Siddaramaiah) ಭೇಟಿ ಮಾಡಿದ್ದಾರೆ. ಇಂದು ಧಾರವಾಡ ಜಿಲ್ಲೆಗೆ ಸಿಎಂ ಭೇಟಿ ಹಿನ್ನೆಲೆ ವಿಮಾನ ನಿಲ್ದಾಣಕ್ಕೆ ಆಶಾ ಕೂಡ ಆಗಮಿಸಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯನವರು ಆಶಾಗೆ ಶೇಕ್ ಹ್ಯಾಂಡ್ ನೀಡಿ ಅಭಿನಂದಿಸಿದ್ದರು. 9, 10ನೇ ತರಗತಿ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯನವರು ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ನೀಡುವ ಯೋಜನೆ ವಿಸ್ತರಣೆ ಮಾಡಿದ್ದರು. ಇದರಿಂದ ಸಂತಸಗೊಂಡು ಸಿಎಂ ಸಿದ್ದರಾಮಯ್ಯರಿಗೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಮಳಲಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಆಶಾ ನೆಹರು ಪಾಟೀಲ್ ಪತ್ರ ಬರೆದು ಸಿಎಂಗೆ ಅಭಿನಂದನೆ ಸಲ್ಲಿಸಿದ್ದರು. ಜೊತೆಗೆ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಅಂತ ಮನವಿ ಮಾಡಿದ್ದರು. ಆಶಾಳ ಪತ್ರವನ್ನು ಟ್ವಿಟರ್ ನಲ್ಲಿ ಹಂಚಿಕೊಂಡು ಸಿದ್ದರಾಮಯ್ಯನವರು ಅಭಿನಂದನೆ ತಿಳಿಸಿದ್ದರು.2021ರಲ್ಲಿ ಸರ್ಕಾರ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿನ ಒಂದರಿಂದ ಎಂಟನೇ ತರಗತಿಯವರೆಗಿನ ಶಾಲೆ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ಮಾಡುತ್ತಿತ್ತು. ಬಳಿಕ ಸರ್ಕಾರ ಒಂದು ಸಮೀಕ್ಷೆಯನ್ನು ಮಾಡಿದ ಮೇಲೆ ಶೇಕಡಾ 70 ರಷ್ಟು ಮಕ್ಕಳು ಮೊಟ್ಟೆ ಬೇಕು ಎಂದು ತಿಳಿಸಿದ್ದರು. ಇದಾದ ಮೇಲೆ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಾರದ ಎರಡು ದಿನ ಮೊಟ್ಟೆ ವಿತರಣೆ ಮಾಡಲು ಸೂಚಿಸಲಾಯಿತು.ಬಳಿಕ ಪೋಷಕರು ಒಂಭತ್ತು ಮತ್ತು ಹತ್ತನೇ ತರಗತಿ ವಿದ್ಯಾರ್ಥಿಗಳಿಗೂ ಮೊಟ್ಟೆ ನೀಡುವಂತೆ ಮನವಿ ಮಾಡಿತ್ತು. ಅದರಂತೆ ಸರ್ಕಾರ ಒಂದರಿಂದ ಹತ್ತನೇ ತರಗತಿಯವರೆಗೂ ಮೊಟ್ಟೆ ವಿತರಣೆ ವಿಸ್ತರಿಸಿತು. ಇದೀಗ ಸರ್ಕಾರದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಧಾರವಾಡ ವಿದ್ಯಾರ್ಥಿನಿ ಆಶಾ ಸಿಎಂ ಸಿದ್ದರಾಮಯ್ಯರಿಗೆ ಅಭಿನಂದನೆ ತಿಳಿಸಿದ್ದಳು. ಸದ್ಯ ಇಂದು ಧಾರವಾಡ ಭೇಟಿ ವೇಳೆ ಸಿಎಂ ಸಿದ್ದರಾಮಯ್ಯನವರು ವಿಮಾನ ನಿಲ್ದಾಣದಲ್ಲಿ ಆಶಾಳಿಗೆ ಶೇಕ್ ಹ್ಯಾಂಡ್ ನೀಡಿ ಅಭಿನಂದಿಸಿದರು.

538 ಕೋಟಿ ರೂ. ವಂಚನೆ: ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅರೆಸ್ಟ್

Posted by Vidyamaana on 2023-09-02 02:04:57 |

Share: | | | | |


538 ಕೋಟಿ ರೂ. ವಂಚನೆ: ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅರೆಸ್ಟ್

ಮುಂಬೈ : 538 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.ಕೆನರಾ ಬ್ಯಾಂಕ್ ಗೆ 538 ಕೋಟಿ ರೂ. ವಂಚನೆ ಪ್ರಕರಣದಲ್ಲಿ ನರೇಶ್ ಗೋಯಲ್ ಅವರನ್ನು ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ ಶುಕ್ರವಾರ ರಾತ್ರಿ ಬಂಧಿಸಿದೆ.ಕಳೆದ ಮೇ ನಲ್ಲಿ ಸಿಬಿಐ ದಾಖಲಿಸಿದ್ದ ಎಫ್‌ಐಆರ್ ಆಧರಿಸಿ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.


ಗೋಯಲ್ ಅವರ ವಿರುದ್ಧ ವಂಚನೆ, ಕ್ರಿಮಿನಲ್ ಪ್ರೀತೂರಿ ಪ್ರಕರಣ ದಾಖಲಿಸಲಾಗಿತ್ತು. ಈ ಹಿಂದೆ ಸಿಬಿಐ ಅಧಿಕಾರಿಗಳು ನರೇಶ್ ಗೊಯಲ್ ಅವರ ನಿವಾಸ, ಕಚೇರಿ ಸೇರಿ ಮುಂಬೈನ 7 ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದರು. ಈ ನಡುವೆ ಗೋಯಲ್ ಎರಡು ಬಾರಿ ಸಮನ್ಸ್ ಸ್ವೀಕರಿಸಿರಲಿಲ್ಲ. ಕೆನರಾ ಬ್ಯಾಂಕ್ ನಿಂದ 848 ಕೋಟಿ ರೂ. ಸಾಲ ಪಡೆದಿದ್ದ ಜೆಟ್ ವೇಸ್ ನ ನರೇಶ್ ಗೋಯಲ್ 538 ಕೋಟಿ ರೂ. ಸಾಲ ಮರುಪಾವತಿಸಿರಲಿಲ್ಲ. ಈ ಹಣವನ್ನು ಬೇರೆಡೆಗೆ ವರ್ಗಾಯಿಸಿದ್ದರು. ಈ ಸಂಬಂಧ ಕೆನರಾ ಬ್ಯಾಂಕ್ ಸಿಬಿಐಗೆ ದೂರು ನೀಡಿತ್ತು.

ಇಂದು (ಏ.20) ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ನಾಮಪತ್ರ ಸಲ್ಲಿಕೆ

Posted by Vidyamaana on 2023-04-19 19:26:30 |

Share: | | | | |


ಇಂದು (ಏ.20) ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ನಾಮಪತ್ರ ಸಲ್ಲಿಕೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಏ.20 ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಮಾಧ್ಯಮ ಪ್ರಮುಖ್ ಚಂದ್ರಶೇಖರ ರಾವ್ ಬಪ್ಪಳಿಗೆ ತಿಳಿಸಿದ್ದಾರೆ.

ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಒಂದು ಅಭೂತಪೂರ್ವ ಕಾರ್ಯಕ್ರಮವಾಗಲಿದ್ದು, ಗ್ರಾಮ ಮಟ್ಟದಿಂದ ಸುಮಾರು 10 ರಿಂದ 15 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳಲಿದ್ದು, ನಾಮಪತ್ರ ಪ್ರಕ್ರಿಯೆಗೆ ಸಾಕ್ಷಿಯಾಗಲಿದ್ದಾರೆ ಎಂದು ತಿಳಿಸಿದರು.

ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ ಅಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು. ಬಳಿಕ ಅಂಚ ಕಚೇರಿ ಬಳಿಯಿಂದ  ಬಸ್ ನಿಲ್ದಾಣದ ತನಕ  ಸಾಗಿ ಕೋರ್ಟ್‍ ರಸ್ತೆಯಾಗಿ ಕಿಲ್ಲೇ ಮೈದಾನದ ತನಕ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಕಿಲ್ಲೆ ಮೈದಾನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು,  ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಹಾಗೂ ಚಲನಚಿತ್ರ ನಟಿ ಶೃತಿ ಪಾಲ್ಗೊಳ್ಳಲಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ   ಚುನಾವಣಾ ಕಾರ್ಯಾಲಯ ವಿಭಾಗದ ರಾಮದಾಸ್ ಹಾರಾಡಿ, ಚುನಾವಣಾ ನಿರ್ವಹಣಾ ಸಮಿತಿಯ ರಾಧಾಕೃಷ್ಣ ಬೋರ್ಕರ್, ಪ್ರಚಾರ ವಿಭಾಗದ ಪ್ರಮುಖರಾದ ಶಿವಕುಮಾರ್, ಪುನಿತ್ ಮಾಡತ್ತಾರು ಉಪಸ್ಥಿತರಿದ್ದರು.

ಮಣಿಪುರದಲ್ಲಿ ಕ್ರೈಸ್ತ ಸಮುದಾಯವನ್ನು ಗುರಿಯಾಗಿಸಿ ಹಿಂಸಾಚಾರ ನಡೆಯುತ್ತಿದೆ :ಪುತ್ತೂರು ಕ್ರಿಶ್ಚಿಯನ್ಸ್ ಯೂನಿಯನ್

Posted by Vidyamaana on 2023-07-06 02:40:12 |

Share: | | | | |


ಮಣಿಪುರದಲ್ಲಿ ಕ್ರೈಸ್ತ  ಸಮುದಾಯವನ್ನು ಗುರಿಯಾಗಿಸಿ ಹಿಂಸಾಚಾರ ನಡೆಯುತ್ತಿದೆ :ಪುತ್ತೂರು ಕ್ರಿಶ್ಚಿಯನ್ಸ್ ಯೂನಿಯನ್

ಪುತ್ತೂರು : ಮಣಿಪುರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ವರ್ಷವಾಗುತ್ತಲೇ ಜನಾಂಗೀಯ ಹಿಂಸಾಚಾರ ಮುಗಿಲು ಮುಟ್ಟಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಹಿಂಸಾಚಾರ ನಡೆಯುತ್ತಿದ್ದರೂ ದೇಶದ ಪ್ರಧಾನಿಗಳು ಮೌನಕ್ಕೆ ಶರಣಾಗಿದ್ದಾರೆ.


ಅದರೇ ಇದೆ ವೇಳೆ ಕರ್ನಾಟಕ ಚುನಾವಣಾ ಸಂದರ್ಭ ರಾಜ್ಯಕ್ಕೆ ಹಲವು ಬಾರಿ ಭೇಟಿ ನೀಡಿದ ಪ್ರಧಾನಿಗಳು ಮಣಿಪುರಕ್ಕೆ ಬಾರಿಯೂ ಭೇಟಿ ನೀಡಿಲ್ಲ. ಈಶಾನ್ಯ ರಾಜ್ಯದಲ್ಲಿ ಮತ್ತೆ ಶಾಂತಿ ಸುವ್ಯಸ್ಥೆ ನೆಲೆಸುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ತಕ್ಷಣ ಕೈಗೊಳ್ಳಬೇಕು ಎಂದು ಪುತ್ತೂರು ಕ್ರಿಶ್ಚಿಯನ್ಸ್ ಯೂನಿಯನ್ ಅಧ್ಯಕ್ಷ ಮೌರೀಸ್ ಮಸ್ಕರೇನಿಯಸ್ ಹೇಳಿದರು.ರಾಜ್ಯದಲ್ಲಿರುವ ಕ್ರೈಸ್ತರನ್ನು ಗುರಿಯಾಗಿಸಿ ದಾಳಿಗಳನ್ನು ನಡೆಸಲಾಗುತ್ತಿದ್ದೂ ಚರ್ಚ್ ಗಳಿಗೆ ಅಗಾಧ ಪ್ರಮಾಣದಲ್ಲಿ ಹಾನಿ ಮಾಡಲಾಗಿದೆ. ಮಣಿಪುರದ ಮೈತೇಯಿ ಬಂಡುಕೋರರು ಪೊಲೀಸ್‌ ಠಾಣೆಗಳಿಗೆ ದಾಳಿ ನಡೆಸಿ ಶಸ್ತ್ರಗಾರದಿಂದ 3500 ಶಸ್ತ್ರಾಸ್ತ್ರಗಳನ್ನು ಕೊಂಡೊಯ್ದ ಗಂಭೀರ ಪ್ರಕರಣ ನಡೆದಿದೆ. ಆದರೆ ಅಲ್ಲಿಗೆ ಇತ್ತೀಚೆಗೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಆ ಬಂಡುಕೋರರ ಮೇಲೆ ನಿರ್ಧಾಕ್ಷಿಣ್ಯ ಕ್ರಮೈಗೊಳ್ಳುವುದು ಬಿಟ್ಟೂ ಶಸ್ತ್ರಾಸ್ತ್ರಗಳನ್ನು ವಾಪಾಸು ಮಾಡುವಂತೆ ಬಂಡುಕೋರರಲ್ಲಿ ಮನವಿ ಮಾಡಿದ್ದಾರೆ. ಇದರಿಂದಲೇ ಈ ಬಂಡುಕೋರರ ಹಿಂದೆ ಇರುವ ಶಕ್ತಿ ಯಾವುದು ತಿಳಿಯುತ್ತದೆ ಎಂದು ಬುಧವಾರ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಮಣಿಪುರದಲ್ಲಿ ಜನರು ಬೀದಿಯ ಹೆಣವಾಗುತ್ತಿದ್ದರೂ, ಮಾನವ ಹಕ್ಕು ಮತ್ತು ದೇಶದ ಕಾನೂನು ವ್ಯವಸ್ಥೆ ಮೌನವಾಗಿದೆ. ರಾಷ್ಟ್ರಪತಿಗಳು ತಕ್ಷಣ ಮಧ್ಯಪ್ರವೇಶಿಸಿ ಮಣಿಪುರದಲ್ಲಿ ಶಾಂತಿ ನೆಲೆಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕು. ತಪ್ಪುತಸ್ಥರಿಗೆ ಶಿಕ್ಷೆ ವಿಧಿಸುವ ಜತೆಗೆ, ಪ್ರಾಣ ಕಳೆದುಕೊಂಡವರಿಗೆ ಹಾಗೂ ಹಾನಿಗೊಳಗಾದವರಿಗೆ ಸೂಕ್ತ ಪರಿಹಾರ


ನೀಡಬೇಕೆಂದು ಆಗ್ರಹಿಸಿದರು.ಪದಾಧಿಕಾರಿಗಳಾದ ವಲರೇಯನ್ ಡಯಾಸ್, ವಾಲ್ಟರ್ ಸೀಕ್ಟೇರ, ವಿಕ್ಟರ್ ಪೈಸ್, ಜೆರೋಮಿಯಾಸ್ ಪೈಸ್, ಕಾನ್ಯೂಟ್ ಮಸ್ಕರೇನಿಯಸ್ ಉಪಸ್ಥಿತರಿದ್ದರು

ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ರೈಲು ಇದು ಇತಿಹಾಸದಲ್ಲೇ ಮೊದಲು ಎಲ್ಲಿ? ಇಲ್ಲಿದೆ ಮಾಹಿತಿ

Posted by Vidyamaana on 2023-09-28 20:36:20 |

Share: | | | | |


ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ರೈಲು ಇದು ಇತಿಹಾಸದಲ್ಲೇ ಮೊದಲು ಎಲ್ಲಿ? ಇಲ್ಲಿದೆ ಮಾಹಿತಿ

ಮಥುರಾ: ಸೆ 28: ರೈಲೊಂದು ತಡರಾತ್ರಿ ಟ್ರ್ಯಾಕ್‌ ಬಿಟ್ಟು ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಘಟನೆ ಉತ್ತರ ಪ್ರದೇಶದ ಮಥುರಾ ರೈಲು ನಿಲ್ದಾಣದಲ್ಲಿ ನಡೆದಿದೆ.ಎಲೆಕ್ಟ್ರಿಕ್‌ ಮಲ್ಟಿಪಲ್‌ ಯೂನಿಟ್‌ ರೈಲೊಂದು ಏಕಾಏಕಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಘಟನೆ ಮಥುರಾ ಜಂಕ್ಷನ್‌ನಲ್ಲಿ ತಡರಾತ್ರಿ ನಡೆದಿದೆ.ರೈಲು ಶಕುರ್ ಬಸ್ತಿಯಿಂದ ಮಂಗಳವಾರ ರಾತ್ರಿ 10:49ಕ್ಕೆ ಮಥುರಾ ನಿಲ್ದಾಣಕ್ಕೆ ಬಂದಿದ್ದು, ಎಲ್ಲಾ ಪ್ರಯಾಣಿಕರು ರೈಲಿನಿಂದ ಇಳಿದ ಕೆಲವೇ ಕ್ಷಣಗಳಲ್ಲಿ ಇದ್ದಕ್ಕಿದ್ದಂತೆ ರೈಲು ಪ್ಲಾಟ್‌ಫಾರ್ಮ್‌ಗೆ ನುಗ್ಗಿದೆ. ಈ ವೇಳೆ ತಕ್ಷಣ ಪ್ರಯಾಣಿಕರು ರೈಲಿನಿಂದ ಇಳಿದಿದ್ದರಿಂದ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.ಇನ್ನು ಘಟನೆ ಸಂಬಂಧ ಪ್ರತಿಕ್ರಿಯಿಸಿದ ಮಥುರಾ ರೈಲು ನಿಲ್ದಾಣದ ನಿರ್ದೇಶಕ ಎಸ್‌.ಕೆ ಶ್ರೀವಾಸ್ತವ, "ಮಹಿಳೆಯೊಬ್ಬರು ವಿದ್ಯುತ್ ಆಘಾತಕ್ಕೆ ಒಳಗಾಗಿದ್ದಾರೆ. ಇದನ್ನು ಬಿಟ್ಟರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದೇವೆ. ಇತರೆ ರೈಲುಗಳ ಸಂಚಾರಕ್ಕೆ ಅಡಚಣೆ ಆಗಿದೆ" ಎಂದು ತಿಳಿಸಿದ್ದಾರೆ ಅಂತಾ ಪಿಟಿಐ ವರದಿ ಮಾಡಿದೆ. ಮತ್ತೊಂದೆಡೆ ರೈಲು ಅಪಘಾತದ ವಿಡಿಯೋ ಎನ್‌ಎನ್‌ಐ ಟ್ವೀಟ್‌ನಲ್ಲಿ ಹಂಚಿಕೆಯಾಗಿದೆ.

ಮಹಿಳೆಗೆ ಸಣ್ಣಪುಟ್ಟ ಗಾಯ

ಮಥುರಾ ಜಂಕ್ಷನ್ ರೈಲು ನಿಲ್ದಾಣದಲ್ಲಿ ಸ್ಥಳೀಯ ರೈಲು ಪ್ಲಾಟ್‌ಫಾರ್ಮ್‌ಗೆ ಹತ್ತಿದ ಪರಿಣಾಮ ಝಾನ್ಸಿ ಮೂಲದ ಉಷಾದೇವಿ (39) ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಆಕೆಯನ್ನು ಝಾನ್ಸಿಗೆ ಕಳುಹಿಸಲಾಯಿತು ಎಂದು ಹೇಳಿದರು. ಅಲ್ಲದೆ ಈ ಕುರಿತು ಉನ್ನತ ಮಟ್ಟದ ತನಿಖೆಗೆ ರೈಲ್ವೇ ಇಲಾಖೆ ಆದೇಶಿಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.ಆಗ್ರಾ ವಿಭಾಗದ ಅಧಿಕಾರಿಯ ಪ್ರಕಾರ, ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್ ರೈಲು ಮಂಗಳವಾರ ರಾತ್ರಿ 10.50ಕ್ಕೆ ಶಕುರ್ ಬಸ್ತಿಯಿಂದ ಪ್ಲಾಟ್‌ಫಾರ್ಮ್ 2ಎಗೆ ಆಗಮಿಸಿತು. ಸಿಬ್ಬಂದಿ ಸೇರಿದಂತೆ ಎಲ್ಲಾ ಪ್ರಯಾಣಿಕರು ಡಿಬೋರ್ಡ್ ಮಾಡಿದ ನಂತರ, ರೈಲು ಹಳಿ ತಪ್ಪಿದೆ. ನಂತರ ನಿಲ್ದಾಣಕ್ಕೆ ಬರುವ ಮೊದಲು ರೈಲು ಪ್ಲಾಟ್‌ಫಾರ್ಮ್‌ಗೆ ನುಗ್ಗಿತು ಎನ್ನುವ ಮಾಹಿತಿಯನ್ನು ನೀಡಿದ್ದಾರೆ. ಇನ್ನು 2ಎ ಹೊರತುಪಡಿಸಿ ಎಲ್ಲಾ ಪ್ಲಾಟ್‌ಫಾರ್ಮ್‌ಗಳಲ್ಲಿ ರೈಲುಗಳ ಸಂಚಾರ ಸಾಮಾನ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್: ಸೆಪ್ಟೆಂಬ‌ರ್ ನಿಂದ ಲ್ಯಾಂಡ್ ಬೀಟ್ ಆಯಪ್ ಆಧರಿಸಿ ತೆರವು

Posted by Vidyamaana on 2024-08-12 20:17:43 |

Share: | | | | |


ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್: ಸೆಪ್ಟೆಂಬ‌ರ್ ನಿಂದ ಲ್ಯಾಂಡ್ ಬೀಟ್ ಆಯಪ್ ಆಧರಿಸಿ ತೆರವು

ಬೆಂಗಳೂರು : ರಾಜ್ಯಾಧ್ಯಂತ ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ ಎನ್ನುವಂತೆ ಸೆಪ್ಟೆಂಬರ್ ನಿಂದ ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸರ್ಕಾರ ನಡೆಸಲಿದೆ.ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ಹಂಚಿಕೊಂಡಂತ ಕಂದಾಯ ಸಚಿವ ಕೃಷ್ಣಭೈರೇಗೌಡ, ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಸೆಪ್ಟೆಂಬರ್‌ ತಿಂಗಳಿನಿಂದ ರಾಜ್ಯಾದ್ಯಂತ ಸರ್ಕಾರ ಭೂ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

Recent News


Leave a Comment: