ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಸುದ್ದಿಗಳು News

Posted by vidyamaana on 2024-07-24 18:06:21 | Last Updated by Vidyamaana on 2024-07-24 18:06:21

Share: | | | | |


ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಕಾರವಾರ: ಉತ್ತರ ಕನ್ನಡದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಕೋಝಿಕ್ಕೋಡ್ ಮೂಲದ ಅರ್ಜುನ್ ಅವರ ಲಾರಿ ಎಂದು ನಂಬಲಾದ ಟ್ರಕ್ ನದಿಯ ಆಳದಲ್ಲಿ ಇರುವ ಸುಳಿವು ಲಭ್ಯವಾಗಿದೆ. ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದನ್ನು ಖಚಿತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಚಿವರು ಮಾಹಿತಿ ನೀಡಿದ್ದಾರೆ.

ನದಿಯ ಕೆಳಭಾಗದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು ಅದಕ್ಕಾಗಿ ಶೋಧ ನಡೆಯುತ್ತಿದೆ.

ಶಿರೂರಿನಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಒಂಬತ್ತನೇ ದಿನದಂದು, ಲಾರಿಯ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಪಡೆಯಲಾಗಿದೆ. ಇಂದು ಬೆಳಗ್ಗೆ ಬೂಮ್ ಲೆಂಗ್ತ್ ಕ್ರೇನ್ ಬಂದಿದ್ದು, ತಪಾಸಣೆ ಪುನರಾರಂಭವಾಗಿದೆ. ಈ ಯಂತ್ರವು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ.

ಈ ಕುರಿತು ಕೃಷ್ಣ ಬೈರೇಗೌಡ Xನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ X ಖಾತೆಯಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.ಜುಲೈ 16 ರಂದು ಬೆಳಿಗ್ಗೆ ಕೋಝಿಕ್ಕೋಡ್‌ನ ಕಂಡ್ಯಕ್ಕಲ್ ಮೂಲದ ಅರ್ಜುನ್ (30) ಕರ್ನಾಟಕ-ಗೋವಾ ಗಡಿಯಲ್ಲಿ ಹಾದು ಹೋಗುವ ಪನ್ವೇಲ್-ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಭೂಕುಸಿತದಲ್ಲಿ ಟೀ ಅಂಗಡಿ ಮಾಲೀಕ ಸೇರಿದಂತೆ 10 ಜನರು ಸಾವನ್ನಪ್ಪಿದ ಸ್ಥಳದಲ್ಲಿ ಲಾರಿಯ ಜಿಪಿಎಸ್ ಸ್ಥಳವನ್ನು ಕೊನೆಯದಾಗಿ ಪತ್ತೆ ಹಚ್ಚಲಾಯಿತು.

 Share: | | | | |


ಕರ್ತವ್ಯದ ಜೊತೆ ಸೇವಾ ಮನೋಭಾವ ಇರಲಿ: ಕಂದಾಯ ದಿನಾಚರಣೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ

Posted by Vidyamaana on 2023-07-01 12:04:21 |

Share: | | | | |


ಕರ್ತವ್ಯದ ಜೊತೆ ಸೇವಾ ಮನೋಭಾವ ಇರಲಿ: ಕಂದಾಯ ದಿನಾಚರಣೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಒಂದಕ್ಕೊಂದು ಕೊಂಡಿಯಂತೆ ಕೆಲಸ ಮಾಡಿದಾಗ ಜನರಿಗೆ ಉತ್ತಮ ಸೇವೆ ದೊರೆಯುತ್ತದೆ. ಈ ನಿಟ್ಟಿನಲ್ಲಿ ಇಲಾಖೆಯಲ್ಲಿ ಕರ್ತವ್ಯ ಮತ್ತು ಸೇವೆ ಜೊತೆಯಲ್ಲಿ ಹೋದಲ್ಲಿ ಮಾತ್ರ ಬಡವರಿಗೆ ನ್ಯಾಯ ಸಿಗುವ ಕೆಲಸ ಆಗುತ್ತದೆ. ಕರ್ತವ್ಯದ ಜೊತೆ ಸೇವಾ ಮನೋಭಾವ ಇರಲಿ ಎಂದು ಶಾಸಕ ಅಶೋಕ್ ಕುಮಾರ್ ರೈ ಅವರು ಹೇಳಿದರು.

ಅವರು ಶನಿವಾರ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ನಡೆದ ಕಂದಾಯ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಕಂದಾಯ ದಿನಾಚರಣೆಗೆ ಉತ್ತಮ ಅರ್ಥವಿದೆ. ಭೂಮಿಯನ್ನು ರಕ್ಷಣೆ ಪೊಲೀಸ್ ಮಾಡಿದರೆ. ಅದರ ನಿರ್ವಹಣೆ ಕಂದಾಯದ ಮೇಲಿದೆ. ಇಲ್ಲಿ ಕರ್ತವ್ಯದ ಜೊತೆಗೆ ಸೇವಾ ಮನೋಭಾವನೆ ಇರಲಿ. ಬಡವರು ಬಂದರೆ ತಡ ಮಾಡದೆ ಸೇವೆ ನೀಡಿ. ಅಲ್ಲಿ ಕಾನೂನಿನ ಅಡಚಣೆ ಇದ್ದರೆ. ಅದಕ್ಕೆ ಪರಿಹಾರ ಬೇರೆ ರೀತಿಯಲ್ಲೂ ಇದೆ. ಜನಪರವಾಗಿ ನಾವು ಜನ ಸೇವೆ ಮಾಡಬೇಕು. ಅಧಿಕಾರಿಗಳ ಸ್ಪಂಧನೆ ಸಿಗದಿದ್ದಾಗ ಜನಪ್ರತಿನಿಧಿಗಳು ಏನು ಮಾಡಲು ಆಗುವುದಿಲ್ಲ. ನಾನು ಅಧಿಕಾರಿಗಳ ವಿರೋಧಿ ಅಲ್ಲ. ಅಧಿಕಾರಿಗಳು ನಮ್ಮ ಶಕ್ತಿ. ಕರ್ತವ್ಯ ಮತ್ತು ಸೇವೆ ಜೊತೆಯಲ್ಲಿ ಇರಲಿ ಎಂದ ಅವರು ಕಂದಾಯ ಇಲಾಖೆಯ ಹೊಸ ವರ್ಷದಲ್ಲಿ ಹಳೆ ಕಡತ ಯಾವುದು ಕೂಡಾ ಇಲ್ಲ ಎಂದು ಭಾವಿಸಿದ್ದೇನೆ. ಮುಂದಿನ ದಿನ ನಿಮ್ಮೆಲ್ಲರ ಸಹಕಾರ ಬೇಕೆಂದರು

ಅಧ್ಯಕ್ಷತೆ ವಹಿಸಿದ್ದ ಸಹಾಯಕ ಕಮೀಷನರ್ ಗಿರೀಶ್ ನಂದನ್ ಮಾತನಾಡಿ, ನಮ್ಮ ಇಲಾಖೆಯಲ್ಲಿ ಒಬ್ಬ ವ್ಯಕ್ತಿಯ ಜನನದಿಂದ ಮರಣದ ತನಕ ಎಲ್ಲಾ ಸೇವೆಗೆ ಅವಕಾಶವಿದೆ. ಇದು ನಮ್ಮ ಪುಣ್ಯ. ಜನರಿಗೆ ಸ್ಪಂಧಿಸಿ ಸೇವೆ ಮಾಡುವುದು ನಮ್ಮ ಕರ್ತವ್ಯ. ಈ ನಿಟ್ಟಿನಲ್ಲಿ ಶಾಸಕರು ಹೇಳಿದಂತೆ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಜೊತೆಯಲ್ಲಿ ಕೆಲಸ ಮಾಡಬೇಕಾಗಿದ್ದು ನಮ್ಮ ಕಾರ್ಯಾಂಗ ವ್ಯವ್ಯಸ್ಥೆಯಲ್ಲಿ ಬಹಳಷ್ಟು ಮುಖ್ಯವಾಗಿದೆ ಎಂದರು. ತಹಶೀಲ್ದಾರ್ ಜೆ.ಶಿವಶಂಕರ್, ಭೂಮಾಪನ ಇಲಾಖೆಯ ಸೂಪರ್‌ವೈಸರ್ ಮಹೇಶ್ ಕುಮಾರ್, ಉಪಖಜಾನೆಯ ಸಹಾಯಕ ನಿರ್ದೇಶಕ ಮಹೇಶ್ ಎಸ್, ಉಪನೋಂದನಾಧಿಕಾರಿ ಸತ್ಯೇಶ್ ಪಿ ಮಾತನಾಡಿದರು.

ಇಲಾಖೆಯಲ್ಲಿ ಉತ್ತಮ ಕಾರ್ಯನಿರ್ವಹಿಸುತ್ತಿರುವ ಪಡ್ನೂರು ಗ್ರಾಮ ಸಹಾಯಕ ಬಾಲಕೃಷ್ಣ ಗೌಡ, ಗ್ರೂಪ್ ಡಿ ಸಿಬ್ಬಂದಿ ರಾಧಾಕೃಷ್ಣ, ಕಬಕ ಗ್ರಾಮ ಆಡಳಿತ ಅಧಿಕಾರಿ ಜಂಗಪ್ಪ, ತಾಲೂಕು ಕಚೇರಿಯ ಸಿಬ್ಬಂದಿ ಚೈತ್ರ ಡಿ ನಾಯಕ್ ಕಾರ್ಕಳ, ಸಹಾಯಕ ಆಯುಕ್ತರ ಕಚೇರಿಯಲ್ಲಿರುವ ಪ್ರತಿಕ್ಷಾ  ಪಿ ಎಸ್, ಭೂಮಾಪನಾ ಇಲಾಖೆಯ ಮಂಜುನಾಥ ಟಿ ಎಸ್ ಅವರಿಗೆ ಪ್ರಶಂಸ ಪತ್ರ ನೀಡಿ ಅಭಿನಂದಿಸಲಾಯಿತು. ಕಂದಾಯ ಅಧಿಕಾರಿ ದಯಾನಂದ ಅಭಿನಂದನಾ ಕಾರ್ಯಕ್ರಮ ನಿರ್ವಹಿಸಿದರು. ಕಂದಾಯ ಅಧಿಕಾರಿ ದಯಾನಂದ, ಉಪತಹಸೀಲ್ದಾರ್ ಚೆನ್ನಪ್ಪ, ಕಂದಾಯ ನಿರೀಕ್ಷಕ ಗೋಪಾಲ್, ರಮೇಶ್, ಮರಿಯಪ್ಪ, ರಾಧಾಕೃಷ್ಣ ಅತಿಥಿಗಳನ್ನು ಗೌರವಿಸಿದರು. ತಾಲೂಕು ಕಚೇರಿಯ ಚೈತ್ರ ಪ್ರಾರ್ಥಿಸಿದರು. ಗ್ರೇಡ್ 2 ತಹಸೀಲ್ದಾರ್ ಲೋಕೇಶ್ ಸ್ವಾಗತಿಸಿದರು. ಕಂದಾಯ ನಿರೀಕ್ಷಕ ಗೋಪಾಲ್ ಅವರು ವಂದಿಸಿದರು. ಉಪತಹಸೀಲ್ದಾರ್ ಸುಲೋಚನಾ ಕಾರ್ಯಕ್ರಮ ನಿರೂಪಿಸಿದರು.

ಜೂ 28 :ಸೌದಿ ಅರೇಬಿಯಾದಲ್ಲಿ ಈದುಲ್ ಅಝ್ಹಾ ಆಚರಣೆ.

Posted by Vidyamaana on 2023-06-18 23:19:00 |

Share: | | | | |


ಜೂ 28 :ಸೌದಿ ಅರೇಬಿಯಾದಲ್ಲಿ  ಈದುಲ್ ಅಝ್ಹಾ ಆಚರಣೆ.

ಜಿದ್ದಾ: ರವಿವಾರ ರಾತ್ರಿ ದುಲ್ ಹಜ್ ಮಾಸದ ಆರಂಭವನ್ನು ಸೂಚಿಸುವ ಅರ್ಧಚಂದ್ರಾಕಾರ ಕಂಡುಬಂದ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ಈದ್ ಅಲ್ ಅಝ್ಹಾ ಹಬ್ಬವನ್ನು ಜೂನ್ 28 ರಂದು ಆಚರಿಸಲಿದೆ.

ಇಸ್ಲಾಮಿಕ್ ಕ್ಯಾಲೆಂಡರ್‌ನಲ್ಲಿನ ದುಲ್ ಹಜ್ ಮಾಸ ಜೂನ್ 19 ರಂದು ಸೋಮವಾರ ಪ್ರಾರಂಭವಾಗಲಿರುವುದರಿಂದ ಅರಾಫಾದ

ದಿನವು ಮಂಗಳವಾರ ಜೂನ್ 27 ರಂದು ನಡೆಯಲಿದೆ. ಈದ್ ಅಲ್ ಅಝ್ಹಾ ಜೂನ್ 28 ರಂದು ಆಚರಿಸಲಾಗುವುದು ಎಂದು ಸೌದಿ ಅರೇಬಿಯಾದ ಸುಪ್ರೀಂ ಕೋರ್ಟ್ ಪ್ರಕಟಿಸಿದೆ.

ಈದುಲ್ ಅಝ್ಹಾ ಹಬ್ಬವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಜಗತ್ತಿನೆಲ್ಲೆಡೆ ಆಚರಿಸಲಾಗುತ್ತದೆ. ಈ ಹಬ್ಬವನ್ನು ಮುಸ್ಲಿಂ ಬಾಂಧವರು ಇಸ್ಲಾಮಿಕ್ ಕ್ಯಾಲೆಂಡರ್‌ನ ಕೊನೆಯ ಮಾಸ ದುಲ್ ಹಜ್‌ನ ಹತ್ತನೆಯ ದಿನದಂದು ಆಚರಿಸುತ್ತಾರೆ.

ಶಾಸಕ ಹರೀಶ್ ಪೂಂಜಾ ಪ್ರಕರಣ - ಶಾಸಕನಾದ್ರೆ ಪೊಲೀಸರ ಜೊತೆ ಗಲಾಟೆ ಮಾಡಬಹುದಾ :ಸಿಎಂ ಸಿದ್ದರಾಮಯ್ಯ

Posted by Vidyamaana on 2024-05-25 21:02:40 |

Share: | | | | |


ಶಾಸಕ ಹರೀಶ್ ಪೂಂಜಾ ಪ್ರಕರಣ - ಶಾಸಕನಾದ್ರೆ ಪೊಲೀಸರ ಜೊತೆ ಗಲಾಟೆ ಮಾಡಬಹುದಾ :ಸಿಎಂ ಸಿದ್ದರಾಮಯ್ಯ

ಮಂಗಳೂರು: ಶಾಸಕ ಹರೀಶ್ ಪೂಂಜಾ ಠಾಣೆಯಲ್ಲೇ ಪ್ರತಿಭಟನೆ ನಡೆಸಿ ಪೊಲೀಸರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕನಾದ್ರೆ ಪೊಲೀಸರ ಜೊತೆ ಗಲಾಟೆ ಮಾಡಬಹುದಾ ಎಂದು ಕಿಡಿಕಾರಿದ್ದಾರೆ.

ಸುರತ್ಕಲ್: ಇನಾಯತ್ ಆಲಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆ

Posted by Vidyamaana on 2024-04-24 07:21:32 |

Share: | | | | |


ಸುರತ್ಕಲ್: ಇನಾಯತ್ ಆಲಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆ

ಮಂಗಳೂರು, ಎ.23: ನಾನೂ ಒಬ್ಬ ಹಿಂದು. ಹಿಂದೂ ಧರ್ಮದ ಆಚಾರ - ವಿಚಾರಗಳನ್ನು ಶಿರಸಾ ವಹಿಸಿ ಪಾಲಿಸುತ್ತಿದ್ದೇನೆ‌. ಹಿಂದೂ ಧರ್ಮ ನನಗೆ ಸಾಮರಸ್ಯದ ಬದುಕನ್ನು ಹೇಳಿಕೊಟ್ಟಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೈಕಂಪಾಡಿ ಎಪಿಎಂಸಿ ಮುಂಭಾಗ ಮಂಗಳವಾರ ಸಂಜೆ ಇನಾಯತ್ ಆಲಿ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ತುಳುನಾಡಿನ ಸಂಸ್ಕೃತಿ, ಗ್ರಾಮೀಣ ಸೊಗಡಿನ ಆಟಗಳು ಇವುಗಳ ಜೊತೆಗೆ ಈ ತುಳುನಾಡಿನಲ್ಲಿ ಮೆಡಿಕಲ್ ಹಬ್, ಶಿಕ್ಷಣ ಹಬ್ ಮಾಡಲು ಸಾಧ್ಯ. ಪ್ರವಾಸೋದ್ಯಮ ಬೆಳೆಸಲು ವಿಫುಲ ಅವಕಾಶಗಳಿವೆ. ಇದರಿಂದ ಉದ್ಯೋಗ ಸೃಷ್ಟಿ, ಜಿಲ್ಲೆಯ ಅಭಿವೃದ್ಧಿ ಸಾಧ್ಯ. ಯುವಕರು ನಮ್ಮೂರಲ್ಲೇ ಉದ್ಯೋಗ ಪಡೆಯಲು ಸಾಧ್ಯ. ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗುವ ಬದಲು ಮಕ್ಕಳ ಜೊತೆಗಿದ್ದು ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಡಬಹುದು. ಅಭಿವೃದ್ಧಿಯ ಜೊತೆ ಹೆತ್ತವರ ಕನಸೂ ಈಡೇರಲಿದೆ. ಮನೆ ಮನೆಗಳು ಗಟ್ಟಿಯಾದರೆ, ದೇಶ ಸಮೃದ್ಧವಾಗಲಿದೆ ಎಂದರು.


ಕಾಂಗ್ರೆಸ್ ಗೆಲ್ಲುವುದು ನಿಶ್ಚಯವಾಗುತ್ತಿದ್ದಂತೆ ಅಪಪ್ರಚಾರದ ಕೆಲಸ ನಡೆಯುತ್ತಿದೆ. ಇದಕ್ಕೆ ಕಿವಿ ಕೊಡಬೇಡಿ. ನೀವು ತಲೆತಗ್ಗಿಸುವ ಕೆಲಸವನ್ನು ತಾನೆಂದೂ ಮಾಡುವುದಿಲ್ಲ. ನೀವು ಪಟ್ಟ ಶ್ರಮ ವ್ಯರ್ಥವಾಗಬಾರದು. ಆದ್ದರಿಂದ ಮುಂದಿರುವ ಕೆಲವು ಗಂಟೆಗಳಷ್ಟು ಸಮಯ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ. ತುಳುನಾಡಿನ ಸಾಮರಸ್ಯದ ಗತವೈಭವ ಮರುಕಳಿಸಲಿದೆ ಎಂದರು.


ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಬೈಕಂಪಾಡಿಯಲ್ಲಿ ನಡೆದಿರುವ ಪ್ರಚಾರ ಸಭೆ ಕಾಂಗ್ರೆಸ್ ಗೆಲುವಿನ ದಿಕ್ಸೂಚಿ. ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲುವ ಸೂಚನೆ ಸಿಕ್ಕಿದೆ. ದಕ್ಷಿಣ ಕನ್ನಡದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪ್ರಾಮಾಣಿಕ, ಸಮರ್ಥ ಅಭ್ಯರ್ಥಿ. ಯಾವುದೇ ಕಳಂಕ ರಹಿತ ವ್ಯಕ್ತಿತ್ವ ಅವರದ್ದು. ಮತದಾನದ ಕೊನೆಕ್ಷಣದ ವರೆಗೂ ಕೆಲಸ ಮಾಡಿ, ಪದ್ಮರಾಜ್ ಆರ್. ಪೂಜಾರಿ ಅವರನ್ನು ಗೆಲ್ಲಿಸಿ ಎಂದರು

ಪರಶುರಾಮ ಥೀಂ ಪಾರ್ಕ್ ಹಗರಣ ಸಿಐಡಿ ತನಿಖೆಗೆ ಸಿದ್ದರಾಮಯ್ಯ ಆದೇಶ; ಬಿಜೆಪಿ ಶಾಸಕನಿಗೆ ಎದುರಾಗುತ್ತಾ ಸಂಕಷ್ಟ?

Posted by Vidyamaana on 2024-02-09 07:41:42 |

Share: | | | | |


ಪರಶುರಾಮ ಥೀಂ ಪಾರ್ಕ್ ಹಗರಣ ಸಿಐಡಿ ತನಿಖೆಗೆ ಸಿದ್ದರಾಮಯ್ಯ ಆದೇಶ; ಬಿಜೆಪಿ ಶಾಸಕನಿಗೆ ಎದುರಾಗುತ್ತಾ ಸಂಕಷ್ಟ?

ಉಡುಪಿ : ಕಾರ್ಕಳದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ಅಕ್ರಮ ಕಾಮಗಾರಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.


ಪರಶುರಾಮ‌ ಥೀಮ್‌ ಪಾರ್ಕ್‌ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ, ಜೊತೆಗೆ ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರವಾಗಿರುವ ಸಂಬಂಧ ಸಾರ್ವಜನಿಕರಿಂದ ದೂರು ಕೇಳಿ ಬಂದಿತ್ತು.


ಆದೇಶದಲ್ಲೇನಿದೆ..!??


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಫೆ.2 ರಂದು ಬರೆದ ಪತ್ರದಲ್ಲಿ ಪರಶುರಾಮ ಥೀಂ ಪಾರ್ಕ್‌ ಕಾಮಗಾರಿಯಲ್ಲಿ ಭ್ರಷ್ಟಾಚಾರ ಹಾಗೂ ಕಳಪೆ ಕಾಮಗಾರಿ ನಡೆದ ಹಾಗೂ ಜನರ ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ಕುರಿತು ದೃಶ್ಯ ಮಾಧ್ಯಮ ಮತ್ತು ದಿನ ಪತ್ರಿಕೆಗಳು ವರದಿ ಮಾಡಿರುವುದು ತಿಳಿದುಬಂದಿದೆ. ಈ ಕುರಿತು ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಲು ಸಿಒಡಿ ಅಥವಾ ಉನ್ನತ ಮಟ್ಟದ ತನಿಖೆ ನಡೆದಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿನಂತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಒಡಿ ತನಿಖೆಗೆ ಆದೇಶಿಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಡಿಸಿರುವ ಆದೇಶದಲ್ಲಿ ಹೇಳಲಾಗಿದೆ.

ಶಾಸಕರ ಇಂದಿನ ಕಾರ್ಯಕ್ರಮ(ಜೂ.5)

Posted by Vidyamaana on 2023-06-04 23:14:37 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ(ಜೂ.5)

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ಜೂನ್ 5ರಂದು ಬೆಳಿಗ್ಗೆ 9.30ಕ್ಕೆ ಉಪ್ಪಿನಂಗಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಳಾಭಿಷೇಕ ನೆರವೇರಿಸಲಿದ್ದಾರೆ.

ನಂತರ 10.30ಕ್ಕೆ ಪುತ್ತೂರು ಬಾಲವನದಲ್ಲಿ ವಿಶ್ವ ಪರಿಸರ ದಿನಾಚರಣೆಯಲ್ಲಿ ಭಾಗಿಯಾಗುವರು.

ಬೆಳಿಗ್ಗೆ 11.15ಕ್ಕೆ ಕುಂಬ್ರ ಕರ್ನಾಟಕ ಇಸ್ಲಾಮಿಕ್ ಅಕಾಡೆಮಿಯಲ್ಲಿ ಶಾಸಕರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.

Recent News


Leave a Comment: