ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


8ನೇ ಸುತ್ತಿನ ಫಲಿತಾಂಶ ಮುನ್ನಡೆಯಲ್ಲಿ ಪುತ್ತಿಲ ರೈಗೆ ಪ್ರಬಲ ಪೈಪೋಟಿ ನೀಡುತ್ತಿರುವ ಪುತ್ತಿಲ

Posted by Vidyamaana on 2023-05-13 05:59:37 |

Share: | | | | |


8ನೇ ಸುತ್ತಿನ ಫಲಿತಾಂಶ  ಮುನ್ನಡೆಯಲ್ಲಿ ಪುತ್ತಿಲ  ರೈಗೆ ಪ್ರಬಲ ಪೈಪೋಟಿ ನೀಡುತ್ತಿರುವ ಪುತ್ತಿಲ

ಪುತ್ತೂರು : ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ – 31670, ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ – 32,226 ಮತ ಪಡೆದಿದ್ದಾರೆ.


ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ ಪಡೆದಿದ್ದಾರೆ.


ಅಶೋಕ್ ರೈ – 31670 ಮತಗಳು


ಆಶಾ ತಿಮ್ಮಪ್ಪ ಗೌಡ – 20,126 ಮತಗಳು


ಅರುಣ್ ಕುಮಾರ್ ಪುತ್ತಿಲ – 32,226 ಮತಗಳು

ಎಂ.ಸಂಜೀವ ಶೆಟ್ಟಿ ಸಿಲ್ಟ್, ರೆಡಿಮೇಡ್ಸ್ ನೂತನ ಶಾಖೆ MSS ALL EXCLUSIVE ಮಾ.24ರಂದು ಶುಭಾರಂಭ

Posted by Vidyamaana on 2023-03-23 16:02:19 |

Share: | | | | |


ಎಂ.ಸಂಜೀವ ಶೆಟ್ಟಿ ಸಿಲ್ಟ್, ರೆಡಿಮೇಡ್ಸ್ ನೂತನ ಶಾಖೆ MSS ALL EXCLUSIVE ಮಾ.24ರಂದು ಶುಭಾರಂಭ

ಪತ್ತೂರು: ಸುಮಾರು 79 ವರ್ಷಗಳ ವಸ್ತ್ರ ಪರಂಪರೆಯನ್ನು ಹೊಂದಿರುವ, ಎಲ್ಲಾ ಪೀಳಿಗೆಯ ಗ್ರಾಹಕರ ಮನಗೆದ್ದ, ಮದುವೆ ಜವಳಿಗೆಂದೇ ಪ್ರಸಿದ್ದಿ ಪಡೆದ ಎಂ.ಸಂಜೀವ ಶೆಟ್ಟಿ ಮಳಿಗೆಯ ನೂತನ ಶಾಖೆ MSS ALL EXCLUSIVE ಮಾ.24ರಂದು ಬೆಳಿಗ್ಗೆ ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಎಂ. ಸಂಜೀವ ಶೆಟ್ಟಿ ಹಳೆಯ ಜವಳಿ ಮಳಿಗೆಯ ಎದುರುಗಡೆ ಶುಭಾರಂಭಗೊಳ್ಳಲಿದೆ.

1944ರಲ್ಲಿ ಪುತ್ತೂರಿನಲ್ಲಿ ಬಟ್ಟೆ ವ್ಯಾಪಾರದಲ್ಲಿ ತೊಡಗಿಸಿಕೊಂಡಿರುವ ಎಂ.ಸಂಜೀವ ಶೆಟ್ಟಿ ವಸ್ತ್ರವ್ಯಾಪಾರ ಮಳಿಗೆ ಪ್ರಾರಂಭಿಸಿದೆ.

2017ರಲ್ಲಿ ಜಿಲ್ಲೆಯಲ್ಲೇ ಬಹುದೊಡ್ಡ 3 ಅಂತಸ್ತಿನವಸ್ತ್ರವ್ಯಾಪಾರ ಮಳಿಗೆ ಪ್ರಾರಂಭಿಸಿದೆ.ಹತ್ತು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಎಂ.ಸಂಜೀವ ಶೆಟ್ಟಿ ಶಾಖಾ ಶೋ ರೂಮ್ ಹೊಂದಿದೆ. ಗ್ರಾಹಕರ ಇನ್ನೂ ಹೆಚ್ಚಿನ ವೈವಿಧ್ಯಮಯ ಆಯ್ಕೆಗಾಗಿ ಇದೀಗ ವಿನೂತನ ವ್ಯವಹಾರಕ್ಕೆ ಕೈ ಹಾಕಿರುವ ಎಂ.ಸಂಜೀವ ಶೆಟ್ಟಿ ಸಂಸ್ಥೆಯವರು, ತಮ್ಮ ಮೊದಲಿನ ಶೋರೂಂ ನಲ್ಲಿ MSS ALL EXCLUSIVE ನ್ನು ಪ್ರಾರಂಭಿಸಿದ್ದಾರೆ.

ಗ್ರಾಹಕರಿಗೆ ಎಲ್ಲಾ ಬ್ರಾಂಡೆಡ್ ವಸ್ತುಗಳು ಒಂದೇ ಸೂರಿನಡಿ ಸಿಗಬೇಕೆನ್ನುವ ನಿಲುವಿನಿಂದ ಹಳೆಯ ಶೋರೂಂನ್ನೇ ಈ ಶೋರೂಂ ಆಗಿ ಬದಲಿಸಲಾಗಿದೆ.

ವೈಶಿಷ್ಟ್ಯತೆಗಳು: ಸಂಸ್ಥೆಯ ನೆಲಅಂತಸ್ತಿನಲ್ಲಿ ಕಾಸ್ಟೆಟಿಕ್ಸ್, ಪ್ಯಾಡ್ ಬ್ಯಾಗ್, ನ್ಯೂಬಾರ್ನ್ ಡೈಸನ್ಸ್, ಹಾಗೂ ಟಾಯ್ಸ್ ಲಭ್ಯವಿದೆ. ಪ್ರಥಮ ಮಹಡಿಯಲ್ಲಿ ಲೇಡಿಸ್ ಎಕ್ನಿಕ್ ವೇರ್, ಮನ್ಸ್ ಫಾರ್ಮಲ್, ಕ್ಯಾಸುವಲ್ ವೇರ್, ಎರಡನೇ ಮಹಡಿಯಲ್ಲಿ ಮನ ಎಕ್ನಿಕ್ ವೇರ್, ಟ್ರಾವಲ್ ಬ್ಯಾಗ್ ಮತ್ತು ಗೃಹಾಲಂಕಾರಿಕಾ ವಸ್ತುಗಳು ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಬಿಜೆಪಿ ಅಧ್ಯಕ್ಷೆಯಾಗಿ ಶೋಭಾ ಕರಂದ್ಲಾಜೆ ನೇಮಕ? ವಿಪಕ್ಷ ನಾಯಕನ ಹೆಸರೂ ಕೂಡ ಫೈನಲ್!

Posted by Vidyamaana on 2023-10-20 15:48:41 |

Share: | | | | |


ಕರ್ನಾಟಕ ಬಿಜೆಪಿ ಅಧ್ಯಕ್ಷೆಯಾಗಿ ಶೋಭಾ ಕರಂದ್ಲಾಜೆ ನೇಮಕ? ವಿಪಕ್ಷ ನಾಯಕನ ಹೆಸರೂ ಕೂಡ ಫೈನಲ್!

ಬೆಂಗಳೂರು :ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ರಾಜ್ಯ ರಾಜಕೀಯದಲ್ಲಿ ಈ ಸುದ್ದಿ ಹೊಸ ಸಂಚಲನ ಮೂಡಿಸಿದೆ, ಶೋಭಾ ಕರಂದ್ಲಾಜೆ ನೇಮಕವಾದರೆ ಮೊದಲ ಬಾರಿಗೆ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಮಹಿಳೆಯೊಬ್ಬರು ಅಧಿಕಾರ ವಹಿಸಿಕೊಂಡಂತಾಗುತ್ತದೆ.


ರಾಜ್ಯಾಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಹೈಕಮಾಂಡ್ ಈಗಾಗಲೇ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದು, ಶೀಘ್ರದಲ್ಲೇ ನಿರ್ಧಾರ ಮಾಡುವ ಸಾಧ್ಯತೆ ಇದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿರುವ ಬಿ.ವೈ. ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಬಿಎಸ್‌ವೈ ಅವರ ಇಚ್ಛೆಯಾಗಿತ್ತು.


ವಿಜಯೇಂದ್ರ ಪರ ಬಿಎಸ್‌ವೈ ಬ್ಯಾಟಿಂಗ್


ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಬೇಕೆಂದರೆ ಬಿಎಸ್ ಯಡಿಯೂರಪ್ಪ ಪಾತ್ರ ಮುಖ್ಯವಾಗುತ್ತದೆ. ಪಕ್ಷ ಸಂಘಟನೆ ದೃಷ್ಟಿಯಿಂದ ಬಿವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಲು ಪರಿಗಣಿಸುವಂತೆ ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ರಾಷ್ಟ್ರೀಯಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.


ಎಲ್ಲಾ ರೀತಿಯಿಂದಲೂ ಚಿಂತನೆ ಮಾಡಿರುವ ಬಿಜೆಪಿ ಹೈಕಮಾಂಡ್ ಶೋಭಾ ಕರಂದ್ಲಾಜೆ ನೇಮಿಸಿದರೆ ಹೆಚ್ಚಿನ ವಿರೋಧ ಇರುವುದಿಲ್ಲ ಎನ್ನುವ ಲೆಕ್ಕಾಚಾರಕ್ಕೆ ಬಂದಿದೆ. ಬಿಎಸ್‌ವೈ ಕೂಡ ಶೋಭಾ ಅವರ ನೇಮಕಕ್ಕೆ ಒಮ್ಮತ ಮೂಡಬಹುದು ಎನ್ನಲಾಗಿದೆ.ವಿಪಕ್ಷ ನಾಯಕನ ಆಯ್ಕೆ


ಅಲ್ಲದೆ ಕಳೆದ 5 ತಿಂಗಳಿನಿಂದ ಖಾಲಿ ಇರುವ ವಿಪಕ್ಷ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ವಿಪಕ್ಷ ನಾಯಕರನ್ನಾಗಿ ಮಾಡಲು ಆಸಕ್ತಿ ಹೊಂದಿದೆ ಎಂದು ವರದಿಗಳು ಹೇಳಿವೆ.


ಇನ್ನು ಕೆಲವು ವರದಿಗಳ ಪ್ರಕಾರ, ಸದ್ಯ ಬಸವರಾಜ ಬೊಮ್ಮಾಯಿ ಅವರು ಶಸ್ತ್ರಚಿಕಿತ್ಸೆಗ ಒಳಗಾಗಿದ್ದು, ಅವರು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ ವಿಪಕ್ಷ ನಾಯಕ ಆಯ್ಕೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದೆ.


ಒಕ್ಕಲಿಗರ ಮತ ಸೆಳೆಯಲು ತಂತ್ರ


ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರ್ನಾಟಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿದ್ದಾರೆ. ಇವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರು. ಕರ್ನಾಟಕ ವಿಧಾನಸಭಾಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಒಕ್ಕಲಿಗ ಸಮುದಾಯದ ಮತಗಳು ಪ್ರಮುಖ ಪಾತ್ರ ವಹಿಸಿದ್ದವು.


ಅದೇ ಒಕ್ಕಲಿಗ ಸಮುದಾಯಕ್ಕೆ ಸೇರಿದ ಕೇಂದ್ರ ಸಚಿವೆ ಶೋಭಾ ಅವರನ್ನು ಕರ್ನಾಟಕ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಕ್ಕಲಿಗರ ಮತಗಳು ಸಿಗಬಹುದು ಎನ್ನುವ ಲೆಕ್ಕಾಚಾರ ಹೈಕಮಾಂಡ್‌ದ್ದಾಗಿದೆ ಎಂದು ಹೇಳಲಾಗಿದೆ. ಜೆಡಿಎಸ್ ಕೂಡ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣ ಒಕ್ಕಲಿಗರ ಮತಗಳನ್ನು ಸೆಳೆಯುವುದು ಸುಲಭವಾಗಲಿದೆ ಎಂದು ಹೇಳಲಾಗಿದೆ

ಪ್ರಾಣಿ ಸಾಕಾಣೆದಾರರಿಗೆ ಗುಡ್ ನ್ಯೂಸ್ – ತಾಲೂಕಿಗೆ ಬಂತು ಪಶು ಸಂಜೀವಿನಿ ಆಂಬುಲೆನ್ಸ್

Posted by Vidyamaana on 2023-08-06 15:16:43 |

Share: | | | | |


ಪ್ರಾಣಿ ಸಾಕಾಣೆದಾರರಿಗೆ ಗುಡ್ ನ್ಯೂಸ್ – ತಾಲೂಕಿಗೆ ಬಂತು ಪಶು ಸಂಜೀವಿನಿ ಆಂಬುಲೆನ್ಸ್

ಪುತ್ತೂರು: ಪಶುಗಳಿಗೆ ಸೇರಿದಂತೆ ಯಾವುದೇ ಪ್ರಾಣಿಗಳಿಗೆ ತೊಂದರೆಯಾದಲ್ಲಿ ವೈದ್ಯರು ಸ್ಥಳಕ್ಕೆ ತೆರಳಿ ಚಿಕಿತ್ಸೆ ನೀಡಿ ಮೂಕಪ್ರಾಣಿಗಳನ್ನು ಸಲಹುವ ವ್ಯವಸ್ಥೆಗೆ ರಾಜ್ಯದ ಕಾಂಗ್ರೆಸ್ ಸರಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 10 ಪಶು ಸಂಜೀವಿನಿ ಆಂಬುಲೆನ್ಸ್ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು ಇದರಿಂದ ಪಶು ಸಾಕಾಣಿಕೆದಾರರಿಗೆ ಪ್ರಯೋಜನವಾಗಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.


ಪುತ್ತೂರಿಗೆ ಆಗಮಿಸಿದ ಅಂಬುಲೆನ್ಸ್ ವ್ಯವಸ್ಥೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ‘ಮೂಕ ಪ್ರಾಣಿಗಳಿಗೆ ಚಿಕಿತ್ಸೆ ನೀಡುವ ಏಕೈಕ ಉದ್ದೇಶದಿಂದ ಈ ವ್ಯವಸ್ಥೆಯನ್ನು ಸರಕಾರ ಜಾರಿಗೆ ತಂದಿದೆ. ಪ್ರಾಣಿಗಳಿಗೆ ಅನಾರೋಗ್ಯ ಕಂಡುಬಂದಲ್ಲಿ ಟೋಲ್ ಫ್ರೀ ನಂಬರಿಗೆ ಕರೆ ಮಾಡಿದರೆ ಸ್ಥಳಕ್ಕೆ ಬಂದು ನಿಮ್ಮ ಪ್ರಾಣಿಗಳನ್ನು ಆಂಬುಲೆನ್ಸ್ ಮೂಲಕ ಕರೆದೊಯ್ಯಲಾಗುತ್ತದೆ ಬಳಿಕ ಅದಕ್ಕೆ ಸೂಕ್ತ ಚಿಕಿತ್ಸೆ ನೀಡಿ ಅವುಗಳನ್ನು ನಿಮ್ಮ ಮನೆ ಬಾಗಿಲಿಗೆ ಒಪ್ಪಿಸಲಾಗುತ್ತದೆ.


ಮನುಷ್ಯರ ಹಾಗೇ ಪ್ರಾಣಿಗಳು ಎಂಬ ಭಾವನೆ ನಮ್ಮಲ್ಲಿರಬೇಕು, ಪ್ರಾಣಿಗಳಿಗೆ ಅನಾರೋಗ್ಯ ಕಂಡು ಬಂದಲ್ಲಿ ಅವುಗಳಿಗೆ ಎಲ್ಲಾ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆಯನ್ನು ಸರಕಾರದ ವತಿಯಿಂದ ನೀಡಲಾಗುತ್ತಿದೆ ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.


ಈ ಸಂದರ್ಭದಲ್ಲಿ ಇಂಟಕ್ ಅಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಉದ್ಯಮಿಗಳಾದ ರಿತೇಶ್ ಶೆಟ್ಟಿ, ನಗರ ಯುವ ಕಾಂಗ್ರೆಸ್ ಕಾರ್ಯದರ್ಶಿ ಅಖಿಲ್ ಸಾಮೆತ್ತಡ್ಕ, ಉದ್ಯಮಿ ನಿಹಾಲ್ ಶೆಟ್ಟಿ, ಪ್ರಗತಿಪರ ಕೃಷಿಕರಾದ ರಾಕೇಶ್ ಬಡಗನ್ನೂರು, ಅಶ್ವಿನ್ ಬಡಗನ್ನೂರು ಮತ್ತಿತರರು ಉಪಸ್ತಿತರಿದ್ದರು.

ಉಡುಪಿ ವೀಡಿಯೋ ಪ್ರಕರಣ:

Posted by Vidyamaana on 2023-07-28 09:10:24 |

Share: | | | | |


ಉಡುಪಿ ವೀಡಿಯೋ ಪ್ರಕರಣ:

ಉಡುಪಿ: ಉಡುಪಿ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಉಡುಪಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಖುದ್ದಾಗಿ ಹಾಜರಾಗಿದ್ದಾರೆ.

ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿದೆ.


ಒಂದನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಂ ಪ್ರಕಾಶ್ ಅವರು ತೀರ್ಪು ನೀಡಿದ್ದಾರೆ. ಮೂವರು ವಿದ್ಯಾರ್ಥಿನಿಯರ ಪರವಾಗಿ ನ್ಯಾಯವಾದಿ ಅಸದುಲ್ಲ ವಾದಿಸಿದರು.


ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ಮುಸ್ಲಿಂ ವಿದ್ಯಾರ್ಥಿನಿಯರಿಂದ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಬಿಜೆಪಿಯಿಂದ ‘ಬೃಹತ್ ಪ್ರತಿಭಟನೆ ಮತ್ತು ಸಮಗ್ರ ತನಿಖೆಗೆ ಹಕ್ಕೊತ್ತಾಯ ಪೊಲೀಸ್ ಭದ್ರತೆಯ ನಡುವೆ ಶುಕ್ರವಾರ ಆರಂಭವಾಗಿದೆ.

ಇಬ್ಬರು ಪುರುಷರೊಂದಿಗಿದ್ದ ಪತ್ನಿ; ಹೋಟೆಲ್ ಗೆ ನುಗ್ಗಿ ಚಪ್ಪಲಿಯಲ್ಲಿ ಥಳಿಸಿದ ಪತಿ

Posted by Vidyamaana on 2024-05-14 07:21:10 |

Share: | | | | |


ಇಬ್ಬರು ಪುರುಷರೊಂದಿಗಿದ್ದ ಪತ್ನಿ; ಹೋಟೆಲ್ ಗೆ ನುಗ್ಗಿ ಚಪ್ಪಲಿಯಲ್ಲಿ ಥಳಿಸಿದ ಪತಿ

ಉತ್ತರ ಪ್ರದೇಶ: ವೈದ್ಯರೊಬ್ಬರು ತನ್ನ ಪತ್ನಿಯನ್ನು ಹೋಟೆಲ್‌ ರೂಮ್ ನಲ್ಲಿ ಇತರ ಇಬ್ಬರು ಪುರುಷರೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿದ್ದ ವೇಳೆ ದಾಲ್ ನಡೆಸಿ ಹಿಡಿದು ಕೆಂಡಾಮಂಡಲವಾಗಿ ಬಡಿದಾಡಿಕೊಂಡ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಎರಡು ಕಡೆಯವರ ನಡುವೆ ನಡೆದ ತೀವ್ರ ವಾಗ್ವಾದ ಮತ್ತು ಘರ್ಷಣೆ ನಡೆದಿದ್ದು ಕೆಮರಾದಲ್ಲಿ ಸೆರೆಯಾಗಿದೆ.

ಪತ್ನಿಯ ಚಟುವಟಿಕೆಯಿಂದ ಅನುಮಾನಗೊಂಡ ವೈದ್ಯ ಇತರರೊಂದಿಗೆ ಗುರುವಾರ ರಾತ್ರಿ ಹೊಟೇಲ್ ಕೋಣೆಗೆ ನುಗ್ಗಿದ್ದು, ಹೆಂಡತಿಯೊಂದಿಗೆ ಇಬ್ಬರು ಪುರುಷರನ್ನು ಆಕ್ಷೇಪಾರ್ಹ ಪರಿಸ್ಥಿತಿಯಲ್ಲಿ ಕಂಡಿದ್ದಾರೆ. ಈ ವೇಳೆ ಕುಟುಂಬ ಸದಸ್ಯರು ಮತ್ತು ಇಬ್ಬರು ಪುರುಷರ ನಡುವೆ ದೈಹಿಕ ಘರ್ಷಣೆ ನಡೆದು ಹೈಡ್ರಾಮಾ ನಡೆದಿದೆ. ಘಟನೆ ಈಗ ಬಟಾಬಯಲಾಗಿದೆ.

Recent News


Leave a Comment: