ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ಮೊಬೈಲ್‌ಗ‌ಳಿಗೆ ಅ. 12ರಂದು ಬರಲಿದೆ ಬೀಪ್‌ ಶಬ್ದ- ಭಯ ಬೇಡ

Posted by Vidyamaana on 2023-10-12 01:26:40 |

Share: | | | | |


ಮೊಬೈಲ್‌ಗ‌ಳಿಗೆ ಅ. 12ರಂದು ಬರಲಿದೆ ಬೀಪ್‌ ಶಬ್ದ- ಭಯ ಬೇಡ

ಬೆಂಗಳೂರು: ಮುಂಬರುವ ದಿನದಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಟೆಲಿಕಮ್ಯುನಿಕೇಶನ್‌ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಹಯೋಗದಲ್ಲಿ ಸಕಾಲಿಕ ಮುನ್ನೆಚ್ಚರಿಕೆ (ವಿಭಿನ್ನ ಧ್ವನಿ ಮತ್ತು ಕಂಪನ) ನೀಡಲು ಮುಂದಾಗಿದೆ. ಅದರ ಭಾಗವಾಗಿ ರಾಜ್ಯದಲ್ಲಿ ಅ. 12ರಂದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ.ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್‌) ಸೆಲ್‌ ಬ್ರಾಡ್‌ ಕಾಸ್ಟಿಂಗ್‌ ಮೂಲಕ ಸ್ಮಾರ್ಟ್‌ಫೋನ್‌ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ. ಈಗಾಗಲೇ ಮೊಬೈಲ್‌ ಬಳಕೆದಾರರಿಗೆ ಸಂದೇಶಗಳು ರವಾನೆಯಾಗಿದೆ. ಫೋನ್‌ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್‌ ಶಬ್ದದೊಂದಿಗೆ ಸಂದೇಶ ಫ್ಲಾಶ್‌ ಆಗಲಿದೆ. ಬಳಕೆದಾರರು ಸರಿ ಎಂದು ಒತ್ತುವವರೆಗೂ ಈ ಬೀಪ್‌ ಬರುತ್ತಲೇ ಇರುತ್ತದೆ. ಇದು ಎಚ್ಚರಿಕೆ ಸಂದೇಶವನ್ನು ಓದಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಆ ಮೂಲಕ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷೆ ನಡೆಯಲಿದೆ.

ಸಂದೇಶದಲ್ಲಿ ಏನಿರಲಿದೆ?

ಸಂದೇಶದಲ್ಲಿ ದೂರಸಂಪರ್ಕ ಇಲಾಖೆಯ ಸೆಲ್‌ ಬ್ರಾಡ್‌ಕಾಸ್ಟಿಂಗ್‌ ಸಿಸ್ಟಮ್‌ ಮೂಲಕ ಕಳುಹಿಸಿದ ಸ್ಯಾಂಪಲ್‌ ಪರೀಕ್ಷಾ ಸಂದೇಶವಾಗಿದ್ದು, ಇದನ್ನು ನಿರ್ಲಕ್ಷಿಸಿ. ನೀವು ಯಾವುದೇ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಈ ಸಂದೇಶವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರವು ಜಾರಿಗೆ ತರುತ್ತಿರುವ ಪ್ಯಾನ್‌ – ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸುವ ಸಲುವಾಗಿ ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ಮತ್ತು ತುರ್ತು ಸಂದರ್ಭಗಳಲ್ಲಿ ಸಮಯೋಚಿತ ಎಚ್ಚರಿಕೆಗಳನ್ನು ನೀಡುವ ಗುರಿಯನ್ನು ಹೊಂದಿದೆ ಎನ್ನುವುದಾಗಿ ಉಲ್ಲೇಖವಾಗಲಿದೆ.


ಪ್ರಯೋಜನ ಏನು?

ಭೂಕಂಪ, ಸುನಾಮಿ, ಅಗ್ನಿ ದುರಂತ ಮತ್ತು ಹಠಾತ್‌ ಪ್ರವಾಹ, ಯುದ್ಧಗಳಂತಹ ವಿಪತ್ತುಗಳ ಸಂದರ್ಭಗಳಲ್ಲಿ ವಿಪತ್ತು ನಿರ್ವಹಣ ಪ್ರಾಧಿಕಾರವನ್ನು ಸನ್ನದ್ಧರಾಗಿಸಲು ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಈ ವ್ಯವಸ್ಥೆ ಸಹಕಾರ ನೀಡಲಿದೆ. ಮುಂದಿನ ದಿನದಲ್ಲಿ ವಿಕೋಪಗಳು ಸಂಭವಿಸಬಹುದಾದ ಸ್ಥಳಗಳಲ್ಲಿನ ಮೊಬೈಲ್‌ ಬಳಕೆದಾರರಿಗೆ ಈ ಫ್ಲಾಶ್‌ ಸಂದೇಶದ ಮೂಲಕ ಎಚ್ಚರಿಸಲಾಗುತ್ತದೆ.


ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ಅ. 12ರಂದು ರಾಜ್ಯದಲ್ಲಿ ನಡೆಯಲಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಮುಂದಿನ ದಿನದಲ್ಲಿ ವಿಕೋಪವನ್ನು ಮುಂಚಿತವಾಗಿ ಗ್ರಹಿಸಿ, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಅನುಕೂಲವಾಗಲಿದೆ. ಪ್ರವಾಹಗಳಂತ ವಿಕೋಪ ಘಟಿಸುವ ಮುನ್ಸೂಚನೆ ನೀಡಲಿದೆ.

– ರಾಜಕುಮಾರ್‌, ಸಹಾಯಕ ನಿರ್ದೇಶಕ (ಟೆಕ್ನಾಲಜಿ), ದೂರಸಂಪರ್ಕ ಇಲಾಖೆ.

ಬಸವನಗೌಡ ಪಾಟೀಲ್ ಯತ್ನಾಳ್ ಅವರ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ - ಯು ಟಿ ಖಾದರ್

Posted by Vidyamaana on 2023-07-19 16:33:48 |

Share: | | | | |


ಬಸವನಗೌಡ ಪಾಟೀಲ್ ಯತ್ನಾಳ್ ಅವರ ಆರೋಗ್ಯ ವಿಚಾರಿಸಿದ  ಸಿದ್ದರಾಮಯ್ಯ - ಯು ಟಿ ಖಾದರ್

ಬೆಂಗಳೂರು ;- ಸದನದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.


ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸ್ಪೀಕರ್ ಯು ಟಿ ಖಾದರ್  ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಅವರ ಆರೋಗ್ಯ ವಿಚಾರಿಸಿದರು.ಈ ಹಿನ್ನೆಲೆ ಪೀಠಕ್ಕೆ ಅಗೌರವ ತೋರಿಸಿದ ಹಿನ್ನೆಲೆಯಲ್ಲಿ ವಿಧಾನಸಭೆ ಅಧಿವೇಶನದಿಂದ 10 ಬಿಜೆಪಿ ಶಾಸಕರನ್ನು ಸ್ಪೀಕರ್ ಯು.ಟಿ.ಖಾದರ್ ಅಮಾನತು ಮಾಡಿ ಆದೇಶಿಸಿದ್ದಾರೆ


ಇನ್ನು ಈ ವೇಳೆ ಪ್ರತಿಭಟನಾ ನಿರತ ಬಿಜೆಪಿ ಸದಸ್ಯರನ್ನು ಮಾರ್ಷಲ್​ಗಳು ಹೊತ್ತೊಯ್ದಿದ್ದಾರೆ. ಮತ್ತೊಂದು ಕಡೆ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಅಸ್ವಸ್ಥಗೊಂಡು ಕುಸಿದು ಬಿದ್ದ ಪ್ರಕರಣವೂ ನಡೆಯಿತು

ಕಾರವಾರ ; ಜ್ಯೋತಿಷಿ ಸಲಹೆ, ಮೊದಲ ಬಾರಿಗೆ ಗೋಕರ್ಣದಲ್ಲಿ ಪಿತೃಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬ

Posted by Vidyamaana on 2023-10-07 18:44:40 |

Share: | | | | |


ಕಾರವಾರ ; ಜ್ಯೋತಿಷಿ ಸಲಹೆ,  ಮೊದಲ ಬಾರಿಗೆ ಗೋಕರ್ಣದಲ್ಲಿ ಪಿತೃಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬ

ಕಾರವಾರ: ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ಪಿತೃಕಾರ್ಯ ನೆರವೇರಿಸಲಾಗುತ್ತದೆ. ಆದರೆ ಮುಸ್ಲಿಂ ಕುಟುಂಬವೊಂದು ಗೋಕರ್ಣದಲ್ಲಿ ಪಿತೃಪಕ್ಷದ ಪರ್ವಕಾಲದಲ್ಲಿ ಪಿತೃಕಾರ್ಯ ನೆರವೇರಿಸಿದೆ. ಧಾರವಾಡ ಧಾನೇಶ್ವರಿ ನಗರದ ಶಂಸಾದ್ ಎಂಬುವರು ಜ್ಯೋತಿಷಿಯೊಬ್ಬರ ಸಲಹೆ ಮೇರೆಗೆ ನಾರಾಯಣ ಬಲಿ, ತ್ರಿಪಿಂಡಿ ಶ್ರಾದ್ಧ ಮತ್ತು ತಿಲಹವನವನ್ನು ಇಲ್ಲಿನ ಪಿತೃಶಾಲೆಯಲ್ಲಿ ಪೂರೈಸಿದರು.


ಹಾರ್ಟ್ ಅಟ್ಯಾಕ್ - ಹಾರ್ಟ್ ಫೈಲ್ಯೂರ್ - ಕಾರ್ಡಿಯಾಕ್ ಅರೆಸ್ಟ್: ಏನಿದೆ ವ್ಯತ್ಯಾಸ?


ಈ ಬಗ್ಗೆ ಪ್ರತಿಕ್ರಿಯಿಸಿರುವ ಶಂಸಾದ್​, ನಾವು ಮೊದಲಿನಿಂದಲೂ ಕುಂಡಲೀ, ಜಾತಕ, ಹಿಂದೂ ಸಂಪ್ರದಾಯದ ಮೇಲೆ ನಂಬಿಕೆ ಉಳ್ಳವರು. ನಮ್ಮ ತಂದೆ ಗದಗಿನ ವೀರನಾರಾಯಣ ದೇವಸ್ಥಾನದ ಹತ್ತಿರ ಬ್ರಾಹ್ಮಣ ಮತ್ತು ಲಿಂಗಾಯತ ಸಮುದಾಯದವರ ಜೊತೆಯಲ್ಲಿಯೇ ಬೆಳೆದವರು. ತಮ್ಮನಿಗೆ ಮದುವೆ ಸಂಬಂಧ ಸರಿಯಾಗಿ ಹೆಣ್ಣು ಸಿಗದೇ ಇದ್ದಾಗ ಜ್ಯೋತಿಷಿಯ ಬಳಿ ಹೋಗಿದ್ದೆವು. ಅವರು ತಿಳಿಸಿದಂತೆ ತಮ್ಮನ ಮದುವೆ, ಮಾನಸಿಕ ಶಾಂತಿ ಹಾಗೂ ಉದ್ಯೋಗದಲ್ಲಿ ಏಳ್ಗೆ ಸಿಗಲಿ ಎಂಬ ಉದ್ದೇಶದಿಂದ ಈ ಪಿತೃ ಕಾರ್ಯ ಮಾಡಿಸಿದ್ದೇವೆ ಎಂದು ತಿಳಿಸಿದ್ದಾರೆ.


ಜ್ಯೋತಿಷಿಗಳ ಮಾರ್ಗದರ್ಶನದಂತೆ ಗೋಕರ್ಣಕ್ಕೆ ಬಂದು ಕ್ಷೇತ್ರ ಪುರೋಹಿತರಾದ ನಾಗರಾಜ ಭಟ್ ಗುರ್ಲಿಂಗ್ ಹಾಗೂ ಸುಬ್ರಹಣ್ಯ ಚಿತ್ರಿಗೆಮಠ ಇವರ ನೇತೃತ್ವದಲ್ಲಿ ಎಲ್ಲಾ ಪೂಜಾ ಕಾರ್ಯ ನೆರವೇರಿಸಿದ್ದಾರೆ. ಗೋಕರ್ಣದಲ್ಲಿ ಕ್ರಿಶ್ಚಿಯನ್ ಸಮುದಾಯದವರು, ವಿದೇಶಿಗರು ಇಂತಹ ಪಿತೃ ಕಾರ್ಯ ನೆರವೇರಿಸಿದ ಅನೇಕ ಉದಾಹರಣೆಗಳಿವೆ. ಆದರೆ ಮುಸ್ಲಿಂ ಕುಟುಂಬವೊಂದು ಪಿತೃಕಾರ್ಯ ನೆರವೇರಿಸಿದ್ದು, ಇದೇ ಮೊದಲು ಎಂದು ಹೇಳಲಾಗಿದೆ.

ಪ್ರಮಾಣವಚನ ಸ್ವೀಕಾರ ಸಮಾರಂಭ

Posted by Vidyamaana on 2023-05-20 04:04:58 |

Share: | | | | |


ಪ್ರಮಾಣವಚನ ಸ್ವೀಕಾರ ಸಮಾರಂಭ

ಬೆಂಗಳೂರು : ಇಂದು ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ  ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇಂದು ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಲಿದ್ದಾರೆ. ಇಂದು ಮಧ್ಯಾಹ್ನ 12.30 ಕ್ಕೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ.

ಚುನಾವಣಾ ನೀತಿ ಸಂಹಿತೆ ಹಿನ್ನಲೆ : ಸಾಮಾಜಿಕ ಜಾಲ ತಾಣಗಳ ಮೇಲೆ ಪೊಲೀಸ್ ಹದ್ದಿನ ಕಣ್ಣು:ಎಸ್ ಪಿ

Posted by Vidyamaana on 2023-04-07 22:41:25 |

Share: | | | | |


ಚುನಾವಣಾ ನೀತಿ ಸಂಹಿತೆ ಹಿನ್ನಲೆ : ಸಾಮಾಜಿಕ ಜಾಲ ತಾಣಗಳ ಮೇಲೆ ಪೊಲೀಸ್ ಹದ್ದಿನ ಕಣ್ಣು:ಎಸ್ ಪಿ

ಮಂಗಳೂರು : ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುವ ಆಕ್ಷೇಪಾರ್ಹ ಪೋಸ್ಟ್ ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು “ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್” ಸ್ಥಾಪಿಸಿ ಸೂಕ್ತ ಕ್ರಮಕ್ಕೆ ಮುಂದಾಗಿದೆ. 

ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ಸ್ವೀಕರಿಸಿದ ಪ್ರಧಾನಿ ಮೋದಿ

Posted by Vidyamaana on 2024-03-22 22:08:17 |

Share: | | | | |


ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ಸ್ವೀಕರಿಸಿದ ಪ್ರಧಾನಿ ಮೋದಿ

ಥಿಂಪು ಮಾರ್ಚ್ 22: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ ಭೂತಾನ್‌ನ (Bhutan) ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋವನ್ನು (Order of the Druk Gyalpo) ಸ್ವೀಕರಿಸಿದ್ದು, ಈ ಗೌರವವನ್ನು ಪಡೆದ ಮೊದಲ ಭೂತನ್ ದೇಶದ ಹೊರಗಿನ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಿ ಮೋದಿ ಭೂತಾನ್‌ನ ಪ್ರತಿಷ್ಠಿತ ನಾಗರಿಕ ಗೌರವವನ್ನು ಪಡೆದ ಮೊದಲ ವಿದೇಶಿ ಸರ್ಕಾರದ ಮುಖ್ಯಸ್ಥರಾಗಿದ್ದಾರೆ. ಉಭಯ ನಾಯಕರು ರಾಜಧಾನಿಯಲ್ಲಿ ಭೇಟಿಯಾದ ನಂತರ ಭೂತಾನ್‌ನ ರಾಜ ಜಿಗ್ಮೆ ಅವರು ಪಿಎಂ ಮೋದಿಯವರಿಗೆ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ಪ್ರಶಸ್ತಿಯನ್ನು ನೀಡಿದರು. ಸ್ಥಾಪಿತವಾದ ಶ್ರೇಯಾಂಕ ಮತ್ತು ಪ್ರಾಶಸ್ತ್ಯದ ಪ್ರಕಾರ, ಆರ್ಡರ್ ಆಫ್ ದ ಡ್ರುಕ್ ಗ್ಯಾಲ್ಪೋ ಅನ್ನು ಜೀವಮಾನದ ಸಾಧನೆಗಾಗಿ ನೀಡುವ ಪ್ರಶಸ್ತಿಯಾಗಿ ಸ್ಥಾಪಿಸಲಾಯಿತು. ಇದು ಭೂತಾನ್‌ನಲ್ಲಿ ಅತ್ಯುನ್ನತ ಗೌರವವಾಗಿದೆ.

New Categories
Recent News
Popular News


Leave a Comment: