ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಡಾ. ವೀರೇಂದ್ರ ಹೆಗ್ಗಡೆ ಕಾರ್ಯವೈಖರಿಗೆ ಪ್ರಧಾನಿ ಮೋದಿ ಮೆಚ್ಚುಗೆ

Posted by Vidyamaana on 2024-08-11 14:29:53 |

Share: | | | | |


ಡಾ. ವೀರೇಂದ್ರ ಹೆಗ್ಗಡೆ ಕಾರ್ಯವೈಖರಿಗೆ ಪ್ರಧಾನಿ ಮೋದಿ ಮೆಚ್ಚುಗೆ

ಬೀದರ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ಡಾ.ಡಿ. ವೀರೇಂದ್ರ ಹೆಗ್ಗಡೆ ಸಂಸದ್ ಭವನದ ಪ್ರಧಾನಿ ಕಚೇರಿಯಲ್ಲಿ ಭೇಟಿಯಾಗಿ, ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾಗಿರುವುದಕ್ಕೆ ಶುಭ ಹಾರೈಸಿದರು. ಶ್ರೀಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದ ನೀಡಿ, ದೇಶಕ್ಕೆ ಇನ್ನಷ್ಟು ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಆಶೀರ್ವದಿಸಿದರು.ರಾಜ್ಯಸಭಾ ಸಂಸದರ ನಿಧಿಯನ್ನು ಬೀದರ್​ನಲ್ಲಿ ವಿನೂತನವಾಗಿ ವಿನಿಯೋಗಿಸಿ ಕ್ಷೀರಕ್ರಾಂತಿಗೆ ನಾಂದಿ ಹಾಡಿರುವ ಬಗ್ಗೆ ಪ್ರಧಾನಿಗೆ ಡಾ.ಹೆಗ್ಗಡೆ ಅವರು ವಿವರಿಸಿದರು.

ಇದು ಒಂದು ಸಂಸದರ ನಿಧಿಯ ಮಾದರಿ ಸದ್ವಿನಿಯೋಗ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.ರಾಜ್ಯಾದ್ಯಂತ ಗ್ರಾಮಾಭಿವೃದ್ಧಿ ಯೋಜನ ಯಿಂದ ನಿರ್ವಹಿಸಲ್ಪಡುತ್ತಿರುವ 10 ಸಾವಿರ ಸಿಎಸ್​ಸಿ ಕೇಂದ್ರಗಳ ಮೂಲಕ ಕೇಂದ್ರ ಸರ್ಕಾರದ ಹಾಗೂ ಸಿಎಸ್​ಸಿಯ ಪ್ರಮುಖ ಸೇವೆಗಳನ್ನು ಗ್ರಾಮೀಣ ಜನತೆಯ ಮನೆ ಬಾಗಿಲಿಗೆ ತಲುಪಿಸುತ್ತಿರುವುದನ್ನು ಡಾ.ಹೆಗ್ಗಡೆ ಅವರು ವಿವರಿಸಿದರು. ಇಲ್ಲಿಯವರೆಗೆ 3 ಕೋಟಿ ಸಿಎಸ್​ಸಿ ಸೇವೆಗಳು ಯೋಜನೆ ಮೂಲಕ ಜನಸಾಮಾನ್ಯರಿಗೆ ತಲುಪಿರುವ ಬಗ್ಗೆ ಪ್ರಧಾನಿ ಅಚ್ಚರಿ ವ್ಯಕ್ತಪಡಿಸಿದರು. ಡಾ.ಹೆಗ್ಗಡೆ ಅವರ ಈ ಎಲ್ಲ ಸೇವೆಗಳ ಚಿಂತನೆ ದೇಶಕ್ಕೆ ಮಾದರಿ ಎಂದರು.

ಪುತ್ತಿಲ ಪರ ವಿಶ್ವಕರ್ಮ ಸಮುದಾಯದಿಂದ ವಿಶ್ವ ಸಂಕಲ್ಪ

Posted by Vidyamaana on 2023-04-29 12:21:46 |

Share: | | | | |


ಪುತ್ತಿಲ ಪರ ವಿಶ್ವಕರ್ಮ ಸಮುದಾಯದಿಂದ ವಿಶ್ವ ಸಂಕಲ್ಪ

ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ಅಭಿಮಾನಿ ಬಳಗದಿಂದ ‘ವಿಶ್ವ ಸಂಕಲ್ಪ’ ಕಾರ್ಯಕ್ರಮ ಬೈಪಾಸ್ ರಸ್ತೆಯ ಆಶ್ಮಿ ಕಂಫರ್ಟ್ ನಲ್ಲಿ ನಡೆಯುತ್ತಿದ್ದು, ಹಲವಾರು ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆಮಹಿಳೆಯರು, ಕಾರ್ಯಕರ್ತರು ಹಾಗೂ ಪುತ್ತಿಲ ಅಭಿಮಾನಿ ಬಳಗದವರು ‘ವಿಶ್ವ ಸಂಕಲ್ಪ’ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.ಅರುಣ್ ಕುಮಾರ್ ಪುತ್ತಿಲ ರವರು ಈ ಬಾರಿ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕೇನ್ನುವುದು ಕಾರ್ಯಕರ್ತರ ಆಶಯವಾಗಿತ್ತು. ಅದೇ ರೀತಿ ಅವರು ಚುನಾವಣಾ ಕಣಕ್ಕಿಳಿದಿದ್ದು, ಅವರು ಜಯಗಳಿಸಬೇಕೆನ್ನುವ ನಿಟ್ಟಿನಲ್ಲಿ ಕಾರ್ಯಕರ್ತರು ಹಗಲು ರಾತ್ರಿ ಶ್ರಮಿಸುತ್ತಿದ್ದು, ಮತಯಾಚನೆಗಾಗಿ ಹಲವು ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ..

ಐಷಾರಾಮಿ ಕಾರಿನಲ್ಲಿ ಬಂದು ಗುರುತು ಸಿಗದಂತೆ ಮಂಕಿ ಕ್ಯಾಪ್ ಧರಿಸಿ ಗೋವು ಕಳ್ಳತನ

Posted by Vidyamaana on 2024-01-13 21:14:55 |

Share: | | | | |


ಐಷಾರಾಮಿ ಕಾರಿನಲ್ಲಿ ಬಂದು ಗುರುತು ಸಿಗದಂತೆ ಮಂಕಿ ಕ್ಯಾಪ್ ಧರಿಸಿ ಗೋವು ಕಳ್ಳತನ

ಚಿಕ್ಕಮಗಳೂರು, ಜನವರಿ 13: ಐಷಾರಾಮಿ ಕಾರಿನಲ್ಲಿ ಬಂದು ಗುರುತು ಸಿಗದಂತೆ ಮಂಕಿ ಕ್ಯಾಪ್ (Monkry Cap) ಧರಿಸಿ ಗೋವು (Cow) ಕಳ್ಳತನ ಮಾಡಿರುವ ಘಟನೆ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗೋವು ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೂಡಿಗೆರೆ ಪಟ್ಟಣದಲ್ಲಿ ಮಧ್ಯರಾತ್ರಿ ರಸ್ತೆ ಬದಿ ಮಲಗಿದ್ದ ಗೋವನ್ನು ಕದ್ದೊಯ್ದಿದ್ದಾರೆ. ಕಾರಿನಲ್ಲಿ ಒಂದು ಗೋವನ್ನು ತುಂಬಿಕೊಳ್ಳುತ್ತಿದ್ದಂತೆ ಮತ್ತೊಂದು ಗೋವು ಕಾರಿನ ಹಿಂದೆಯೇ ಓಡಿದೆ. ಆ ಗೋವನ್ನು ರಕ್ಷಿಸಲು ಯತ್ನಿಸಿದೆ. ಈ ಎಲ್ಲ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.ಇನ್ನು ಕಳೆದ ವರ್ಷ ಮೇ ತಿಂಗಳಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಎನ್​.ಆರ್​ ಪುರ‌ ತಾಲೂಕಿನ ಮಾಗುಂಡಿ ಗ್ರಾಮದ ಸೇತುವೆ ಕೆಳಭಾಗದಲ್ಲಿ ಗೋವಿನ ಎರಡು ತಲೆ‌, ಎಂಟು ಕಾಲುಗಳು ಪತ್ತೆ ಆಗಿದ್ದವು. ಅಲ್ಲದೇ ಚಿಕ್ಕಮಗಳೂರು, ಶೃಂಗೇರಿ, ಮೂಡಿಗೆರೆ, ಎನ್​.ಆರ್​ ಪುರ ತಾಲೂಕಿನಲ್ಲಿ ನಿರಂತರವಾಗಿ ಗೋಮಾಂಸ ದಂಧೆ ನಡೆಯುತ್ತಿದೆ ಎಂಬ ಮಾತು ಕೇಳಿಬಂದಿತ್ತು. ಕೊಟ್ಟಿಗೆಯಲ್ಲಿ ಕಟ್ಟಿದ್ದ ಗೋವುಗಳನ್ನು ದಂಧೆಕೋರರು ಕಳ್ಳತನ ಮಾಡುತ್ತಿದ್ದರು.

ನಾನೆಂದಿಗೂ ಹಿಂದು- ಮುಸ್ಲಿಂ ಭೇದ ಮಾಡಿಲ್ಲ -ಇವತ್ತಿಗೂ ನನ್ನ ಅನೇಕ ಗೆಳೆಯರು ಮುಸ್ಲಿಮರಿದ್ದಾರೆ: ಪ್ರಧಾನಿ ನರೇಂದ್ರ ಮೋದಿ

Posted by Vidyamaana on 2024-05-16 07:36:18 |

Share: | | | | |


ನಾನೆಂದಿಗೂ ಹಿಂದು- ಮುಸ್ಲಿಂ ಭೇದ ಮಾಡಿಲ್ಲ -ಇವತ್ತಿಗೂ ನನ್ನ ಅನೇಕ ಗೆಳೆಯರು ಮುಸ್ಲಿಮರಿದ್ದಾರೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಮೇ.16: ನಾನು ಯಾವತ್ತೂ ಹಿಂದು- ಮುಸ್ಲಿಂ ಅಂತ ಭೇದ ಮಾಡಿಲ್ಲ. ಹಾಗೊಂದ್ವೇಳೆ, ಹಿಂದು – ಮುಸ್ಲಿಂ ಭೇದ ಮಾಡಿದರೆ, ಸಾರ್ವಜನಿಕ ಜೀವನದಲ್ಲಿ ಇರುವುದಕ್ಕೆ ಯೋಗ್ಯನಲ್ಲ ಎಂದು ಭಾವಿಸುತ್ತೇನೆ. ಇದು ನನ್ನ ಸಂಕಲ್ಪ ಎಂದು ಪ್ರಧಾನಿ ನರೇಂದ್ರ ಮೋದಿ ಸಂದರ್ಶನ ಒಂದರಲ್ಲಿ ಹೇಳಿರುವ ವಿಡಿಯೋವನ್ನು ಮೋದಿ ತನ್ನ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ರಾಜಸ್ಥಾನದ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಜನರ ಬಳಿಯಿರುವ ಚಿನ್ನದ ಸಂಪತ್ತನ್ನು ಹೆಚ್ಚು ಮಕ್ಕಳಿದ್ದವರಿಗೆ ಹಂಚುತ್ತದೆ ಎಂದು ಹೇಳಿರುವುದು ಮೋದಿ ಮುಸ್ಲಿಮರನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ರೀತಿ ಬಿಂಬಿತವಾಗಿತ್ತು. ಮಂಗಳವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಇತ್ತೀಚೆಗೆ ನ್ಯೂಸ್ 18 ವಾಹಿನಿಗೆ ನೀಡಿದ್ದ ಸಂದರ್ಶನದ ತುಣುಕನ್ನು ಮೋದಿ ತನ್ನ ಟ್ವಿಟರ್ ನಲ್ಲಿ ಹಂಚಿದ್ದು, ಅದರಲ್ಲಿ ನಾನೆಂದೂ ಹಿಂದು –ಮುಸ್ಲಿಂ ಎಂದು ಭೇದ ಮಾಡಿಲ್ಲ. ನಾನೆಂದಿಗೂ ತುಷ್ಟೀಕರಣ ರಾಜಕೀಯ ಮಾಡಲ್ಲ. ಸಬ್ ಕಾ ಸಾಥ್, ಸಬ್ ಕಾ ವಿಶ್ವಾಸ್ ಎನ್ನುವುದೇ ನನ್ನ ನಂಬಿಕೆ ಎಂದು ಹೇಳಿದ್ದಾರೆ.

ಉಡುಪಿಯ ಗ್ಯಾಂಗ್‌ವಾರ್ ಪ್ರಕರಣ; ಗಾಯಾಳು ಆರೋಪಿಗೆ ಚಿಕಿತ್ಸೆ ನೀಡಿದ ವೈದ್ಯರ ವಿರುದ್ಧ FIR

Posted by Vidyamaana on 2024-05-29 05:40:08 |

Share: | | | | |


ಉಡುಪಿಯ ಗ್ಯಾಂಗ್‌ವಾರ್ ಪ್ರಕರಣ; ಗಾಯಾಳು ಆರೋಪಿಗೆ ಚಿಕಿತ್ಸೆ ನೀಡಿದ ವೈದ್ಯರ ವಿರುದ್ಧ FIR

ಉಡುಪಿಯ ಗ್ಯಾಂಗ್‌ವಾ‌ರ್ ಪ್ರಕರಣದಲ್ಲಿ ಗಾಯಗೊಂಡ ಗಾಯಾಳು ಆರೋಪಿಗೆ ಚಿಕಿತ್ಸೆ ನೀಡಿದ ಡಾಕ್ಟರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಮೇ 18ರಂದು ನಸುಕಿನ ವೇಳೆ ನಡೆದ ಗ್ಯಾಂಗ್‌ವಾರ್‌ನಲ್ಲಿ ಕಾರು ಢಿಕ್ಕಿ ಹೊಡೆದು ರಸ್ತೆಗೆ ಬಿದ್ದ ಶರೀಫ್‌ನ ಮೇಲೆ ದುಷ್ಕರ್ಮಿಗಳು ತಲವಾರಿನಿಂದ ದಾಳಿ ನಡೆಸಿದ್ದರು.ಇದರಿಂದ ಶರೀಫ್‌ನ ಎಡಕಾಲು, ಬಲ ಕಿವಿ ಹಿಂಬದಿ, ಬಲಕೈಗೆ ಗಾಯವಾಗಿತ್ತು.ನಂತರ ಶರೀಫ್‌ನನ್ನು ಇತರೆ ಆರೋಪಿಗಳಾದ ಅಲ್ಪಾಝ್, ಮಜೀದ್ ಚಿಕಿತ್ಸೆಗಾಗಿ ಪಡುಬಿದ್ರಿಯಲ್ಲಿರುವ ಸಿದ್ದಿ ವಿನಾಯಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.

ಸುಳ್ಯದ ಲೊಕೇಶ್ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ

Posted by Vidyamaana on 2023-03-24 03:03:56 |

Share: | | | | |


ಸುಳ್ಯದ ಲೊಕೇಶ್ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ

ಸುಳ್ಯ: ತಾಲೂಕಿನ ಕಲ್ಮಕಾರು ಗ್ರಾಮದ ಯುವಕನೋರ್ವ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.22ರಂದು ವರದಿಯಾಗಿದೆ. ಕಲ್ಮಕಾರು ಗ್ರಾಮದ ಮೆಂಟೆಕಜೆ ತೇಜಕುಮಾರ್ ಅವರ ಪುತ್ರ ಲೋಕೇಶ (25) ಆತ್ಮಹತ್ಯೆ ಮಾಡಿಕೊಂಡ ಯುವಕ.

ಈತ ಚಿಕ್ಕಮಗಳೂರಿನಲ್ಲಿ ಜಿಯೋ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದು, ತನ್ನ ರೂಮಿನಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ಲೋಕೇಶ್ ತಂದೆ, ತಾಯಿ ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.

Recent News


Leave a Comment: