ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಮುಸ್ಲಿಂ ಮೀಸಲಾತಿ ರದ್ಧತಿ: ಪುತ್ತೂರು ಎಸ್‌ಡಿಪಿಐ ಖಂಡನೆ, ಪ್ರತಿಭಟನೆ

Posted by Vidyamaana on 2023-03-28 07:49:59 |

Share: | | | | |


ಮುಸ್ಲಿಂ ಮೀಸಲಾತಿ ರದ್ಧತಿ: ಪುತ್ತೂರು ಎಸ್‌ಡಿಪಿಐ ಖಂಡನೆ, ಪ್ರತಿಭಟನೆ

ಪುತ್ತೂರು: ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಇದ್ದ ಮೀಸಲಾತಿಯನ್ನು ರದ್ದು ಮಾಡಿದ ನಿರ್ಣಯವನ್ನು ಖಂಡಿಸಿ ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಮಾ.28ರಂದು ಪುತ್ತೂರು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನೆ ನಡೆಯಿತು.

ಮುಸ್ಲಿಂಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದು ಮಾಡಿರುವುದು ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡಿರುವ ಉದ್ದೇಶಿತ ದಾಳಿಯಾಗಿದೆ. ಇದು ಸರ್ಕಾರದ ಅಸಂವಿಧಾನಿಕ ತೀರ್ಮಾನವಾಗಿದೆ. ಮುಸ್ಲಿಮರ ವಿರುದ್ಧ ಸರ್ಕಾರ ನಡೆಸುವ ಷಡ್ಯಂತ್ರ ಇದಾಗಿದ್ದು, ಬಿಜೆಪಿ ತನ್ನ ಕೋಮುವಾದಿತನವನ್ನು ಪದೇ ಪದೇ ಪ್ರದರ್ಶಿಸುತ್ತಲೇ ಇದೆ. ಬರುವ ಚುನಾವಣೆಯಲ್ಲಿ ಇದರ ಪರಿಣಾಮ ಬಿಜೆಪಿ ಎದುರಿಸಬೇಕಾದಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೋರಾಟದ ಮೂಲಕ ನ್ಯಾಯಾಲಯದಲ್ಲ ಪ್ರಶ್ನಿಸಲಿದ್ದೇವೆ:ಅಬ್ದುಲ್ ಮಜೀದ್ ಖಾನ್ 

ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಅಬ್ದುಲ್ ಮಜೀದ್ ಖಾನ್ ಅವರು ಮಾತನಾಡಿ ವಿವಿಧ ಆಯೋಗ ಕೂಡ ಮುಸ್ಲಿಂಮರನ್ನು ಹಿಂದುಳಿದ ವರ್ಗಗಳಿಗೆ ಸೇರಿಸಿರುವುದನ್ನು ನಾವು ಕಾಣಬಹುದು. ವಾಸ್ತವಾಂಶ ಹೀಗಿದ್ದರೂ ಸಹ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ತಡೆಯೊಡ್ಡುವ ಹಾಗೂ ಮುಖ್ಯವಾಹಿನಿಗೆ ಬರದಂತೆ ನೋಡಿಕೊಳ್ಳುವ ಕುತಂತ್ರ ಮುಂದುವರಿದ ಭಾಗವಾಗಿ 2ಬಿ ಮೀಸಲಾತಿ ರದ್ದುಪಡಿಸಿರುವುದು ದೃಢವಾಗಿದೆ. ಧರ್ಮವನ್ನು ಗುರಿ ಮಾಡಿ ರಾಜಕೀಯ ಬೇಳೆ ಬೆಯಿಸಲು ನಾವು ಬಿಡುವುದಿಲ್ಲ. ಟಿಪ್ಪು ಮತ್ತು ಅಸ್ಮತ್ತುಲ್ಲಾ ಖಾನ್ ಅವರ ಸಂತತಿಯಾಗಿರುವ ನಾವು ಹೋರಾಟದ ಮೂಲಕ ನ್ಯಾಯಾಲಯದಲ್ಲಿ, ಹೈಕೋರ್ಟ್, ಸುಪ್ರೀಮ್ ಕೋರ್ಟ್‌ನಲ್ಲಿ ಪ್ರಶ್ನಿಸಲಿದ್ದೇವೆ ಎಂದರು.

ಮೀಸಲಾತಿ ಕೊಡದಿದ್ದರೆ ವಿಧಾನಸಭಾ ಚಲೋ ಚಳುವಳಿ ಎಚ್ಚರಿಕೆ:ಇಬ್ರಾಹಿಂ ಸಾಗರ್ 

ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಇಬ್ರಾಹಿಂ ಸಾಗರ್ ಅವರು ಮಾತನಾಡಿ ಬಿಜೆಪಿ ಸರಕಾರ ಬಂದ ಬಳಿಕ ಮುಸಲ್ಮಾನರ ಮೇಲೆ ನಿರಂತರ ದಬ್ಬಾಳಿಕೆ ಮಾಡಿಕೊಂಡು ಬಂದಿದೆ. ಮುಸಲ್ಮಾನರಿಗೆ ಶೈಕ್ಷಣಿಕ, ಉದ್ಯೋಗದಲ್ಲಿ ಸೌಲಭ್ಯವನ್ನು ಸರಕಾರ ಕಿತ್ತುಕೊಳ್ಳುವ ಮೂಲಕ ಸಾಮಾಜಿಕ, ರಾಜಕೀಯ, ಆರ್ಥಿಕವಾಗಿ ಮುಸಲ್ಮಾನರನ್ನು ಇಲ್ಲದಂತೆ ಮಾಡುವ ಹುನ್ನಾರವನ್ನು ಕೋಮುವಾದಿ ಸರಕಾರ ಮಾಡುತ್ತಿದೆ. ಮೀಸಲಾತಿ ಪುನಃ ಕೊಡದಿದ್ದರೆ ವಿಧಾನಸಭಾ ಚಲೋ ಚಳುವಳಿ ಮಾಡಲಿದ್ದೇವೆ ಎಂದು ಎಚ್ಚರಿಕೆ ನೀಡಿದರು.

ಹಸಿವು, ಭಯಮುಕ್ತ ಸಮಾಜವನ್ನು ಪಡೆದೇ ಪಡೆಯುತ್ತೇವೆ:ಅಬ್ದುಲ್ ಹಮೀದ್ ಸಾಲ್ಮರ 

ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷ ಅಬ್ದುಲ್ ಹಮೀದ್ ಸಾಲ್ಮರ ಅವರು ಮಾತನಾಡಿ ಬೇತಾಳ ಶವವನ್ನು ಎತ್ತಿಕೊಂಡು ಹೋಗುವ ಕಥೆಯಂತೆ ಬಿಜೆಪಿಗೂ ತನ್ನ ಕೊನೆ ಹಂತದ ಪರಿಸ್ಥಿತಿ ಬರಲಿದೆ. ರಾಜ್ಯದಲ್ಲಿ ಹಸಿವು ಮುಕ್ತ, ಭಯಮುಕ್ತ ಸಮಾಜವನ್ನು ನಾವು ಪಡೆದೇ ಪಡೆಯುತ್ತೇವೆ ಎಂದರು.


ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಮುಖಂಡರಾದ ಅಶ್ರಫ್ ಬಾವು, ಪ್ರಧಾನ ಕಾರ್ಯದರ್ಶಿ ರಹೀಮ್, ಕಬಕ ಗ್ರಾ.ಪಂ ಸದಸ್ಯ ಪಾರೂಕ್ ಕಬಕ, ಉಪ್ಪಿನಂಗಡಿ ಗ್ರಾ.ಪಂ ಸದಸ್ಯ ರಶೀದ್ ಪುಣ್ಚಪ್ಪಾಡಿ, ವಿಶ್ವನಾಥ್ ಪುಣ್ಚತ್ತಾರ್, ಪಿಬಿಕೆ ಮಹಮ್ಮದ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

ಪ್ರತಿಭಟ‌ನೆ ಬಳಿಕ ಸಹಾಯಕ ಆಯುಕ್ತರ ಕಚೇರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಪುತ್ತೂರು: ಪ್ರೋ ಕಬಡ್ಡಿ ಪಾಟ್ನಾ ಪೈರಟ್ಸ್ ತಂಡದ ತರಬೇತುದಾರನಾಗಿ ಪ್ರಶಾಂತ್ ರೈ ಕೈಕಾರ ಆಯ್ಕೆ

Posted by Vidyamaana on 2024-08-15 04:48:01 |

Share: | | | | |


ಪುತ್ತೂರು: ಪ್ರೋ ಕಬಡ್ಡಿ ಪಾಟ್ನಾ ಪೈರಟ್ಸ್ ತಂಡದ ತರಬೇತುದಾರನಾಗಿ ಪ್ರಶಾಂತ್ ರೈ ಕೈಕಾರ ಆಯ್ಕೆ

ಪುತ್ತೂರು: ಪ್ರೋ‌ ಕಬಡ್ಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿದ್ದು ಹನ್ನೊಂದನೇ ಆವೃತ್ತಿಗೆ ಕ್ರೀಡಾಭಿಮಾನಿಗಳು ಕಾಯುತ್ತಿದ್ದಾರೆ. ಅದರಂತೆ ಪುತ್ತೂರಿನಿಂದ ಮಂಗಳೂರು ವಿಶ್ವವಿದ್ಯಾನಿಲಯ ಕಬಡ್ಡಿ ಆಟಗಾರನಾಗಿ ವಿಜಯ ಬ್ಯಾಂಕ್ ಉದ್ಯೋಗಿಯಾಗಿ ನಂತರ ಪ್ರೋ ಕಬಡ್ಡಿಗೆ ಆಯ್ಕೆಯಾಗಿದ್ದ ಪುತ್ತೂರಿನ ಪ್ರಶಾಂತ್ ರೈ ಬೇರೆ ಬೇರೆ ‌ತಂಡಗಳಿಗೆ ಆಡಿದ ಅನುಭವಿ ಆಟಗಾರನಾಗಿದ್ದರು ಈ ಬಾರಿ ಅಸಿಸ್ಟೆಂಟ್ ಕೋಚ್ ಆಗಿ ಆಯ್ಕೆಯಾಗಿದ್ದಾರೆ

ಪೂನಂ ಪುಣ ಆತಿಜಲಿಗೆ.. ಸತ್ತಳೆಂದು ನಂಬಿದ್ದ ಪೂನಂ ಪಾಂಡೆ ಕೊಟ್ರು ಶಾಕಿಂಗ್ ನ್ಯೂಸ್

Posted by Vidyamaana on 2024-02-03 13:35:15 |

Share: | | | | |


ಪೂನಂ ಪುಣ ಆತಿಜಲಿಗೆ.. ಸತ್ತಳೆಂದು ನಂಬಿದ್ದ ಪೂನಂ ಪಾಂಡೆ ಕೊಟ್ರು ಶಾಕಿಂಗ್ ನ್ಯೂಸ್

ಮುಂಬೈ : ಬಾಲಿವುಡ್​ ನಟಿ, ಮಾದಕ ಚೆಲುವೆ ಪೂನಂ ಪಾಂಡೆ ಸತ್ತಿಲ್ಲ ಬದುಕಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ರಿವೀಲ್​ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿರುವ ನಟಿ ಪೂನಂ ಪಾಂಡೆ ನಾನು ಜೀವಂತವಾಗಿದ್ದೇನೆ. ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಈ ರೀತಿ ಮಾಡಿದ್ದಾಗಿ ತಿಳಿಸಿದ್ದಾರೆ.ನಿಮ್ಮೆಲ್ಲರೊಂದಿಗೆ ಮಹತ್ವದ ವಿಷಯವನ್ನು ಹಂಚಿಕೊಳ್ಳಲು ಬಯಸಿದ್ದು, ನಾನು ಜೀವಂತವಾಗಿದ್ದೇನೆ. ಗರ್ಭಕಂಠದ ಕ್ಯಾನ್ಸರ್​ನಿಂದ ನಾನು ಬಳಲುತ್ತಿಲ್ಲ. ಆದರೆ, ದುರಂತವೆಂದರೆ ಈ ರೋಗವನ್ನು ಹೇಗೆ ಎದುರಿಸಬೇಕೆಂಬುದರ ಬಗ್ಗೆ ಜ್ಞಾನದ ಕೊರತೆಯಿಂದ ಸಾವಿರಾರು ಮಹಿಳೆಯರ ಜೀವವನ್ನು ಈ ರೋಗ ಬಲಿ ಪಡೆದುಕೊಂಡಿದೆ.


ಇತರ ಕೆಲವು ಕ್ಯಾನ್ಸರ್‌ಗಳಿಗಿಂತ ಭಿನ್ನವಾಗಿ, ಗರ್ಭಕಂಠದ ಕ್ಯಾನ್ಸರ್ ಸಂಪೂರ್ಣವಾಗಿ ತಡೆಗಟ್ಟಬಲ್ಲದು. HPV ಲಸಿಕೆ ಮತ್ತು ಆರಂಭಿಕ ಪತ್ತೆ ಪರೀಕ್ಷೆಗಳು ಪ್ರಮುಖವಾಗಿದ್ದು, ಈ ಕಾಯಿಲೆಯಿಂದ ಯಾರೂ ತಮ್ಮ ಪ್ರಾಣ ಕಳೆದುಕೊಳ್ಳದಂತೆ ನೋಡಿಕೊಳ್ಳಲು ನಾವು ಎಚ್ಚರದಿಂದಿರಬೇಕು. ವಿಮರ್ಶಾತ್ಮಕ ಅರಿವಿನೊಂದಿಗೆ ಒಬ್ಬರಿಗೊಬ್ಬರು ಜಾಗೃತಿ ಮೂಡಿಸೋಣ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಮಹಿಳೆಯರಿಗೆ ತಿಳಿಸೋಣ ಏನು ಮಾಡಬಹುದೆಂಬುದನ್ನು ಒಟ್ಟಾಗಿ, ರೋಗದ ವಿನಾಶಕಾರಿ ಪರಿಣಾಮವನ್ನು ಕೊನೆಗೊಳಿಸಲು ಶ್ರಮಿಸೋಣ ಎಂದು ಹೇಳಿದ್ದಾರೆ.

ಮುಕ್ಕೂರು : ಎಎಸ್ ಐ ದಿ.ಸುಂದರ ಕಾನಾವುಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Posted by Vidyamaana on 2024-08-03 17:31:29 |

Share: | | | | |


ಮುಕ್ಕೂರು : ಎಎಸ್ ಐ ದಿ.ಸುಂದರ ಕಾನಾವುಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

ಮುಕ್ಕೂರು: ಕಡು ಬಡತನದ ನಡುವೆ ಕೂಲಿ ಕೆಲಸ ನಿರ್ವಹಿಸುತ್ತಿದ್ದ ಸುಂದರ ಕಾನಾವು ತನ್ನ ಪರಿಶ್ರಮದಿಂದಲೇ ಪೊಲೀಸ್ ಇಲಾಖೆಗೆ ಸೇರಿ ವೃತ್ತಿ ನಿಷ್ಠೆಯಿಂದ ಎಎಸ್‍ಐ ಹಂತಕ್ಕೆ ತಲುಪಿದ್ದರು. ಅವರು ವೃತ್ತಿ, ವೈಯಕ್ತಿಕ ಬದುಕಿನಲ್ಲಿ ಇನ್ನಷ್ಟು ಉನ್ನತ್ತಿ ಕಾಣುವ ಹೊತ್ತಲ್ಲಿ ಅಕಾಲಿಕವಾಗಿ ನಮ್ಮನ್ನಗಳಿರುವುದು ದುಃಖಕರ ಸಂಗತಿ ಎಂದು ಕಾನಾವು ಕ್ಲಿನಿಕ್ ವೈದ್ಯ, ಪುತ್ತೂರು ಐಎಂಎ ಘಟಕದ ಅಧ್ಯಕ್ಷ ಡಾ| ನರಸಿಂಹ ಶರ್ಮಾ ಕಾನಾವು ಹೇಳಿದರು.

ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮುಕ್ಕೂರು ನ್ಯಾಯಬೆಲೆ ಅಂಗಡಿಯ ಸಭಾಂಗಣದಲ್ಲಿ ಆ.3 ರಂದು ನಡೆದ ಪುತ್ತೂರು ನಗರ ಠಾಣಾ ಎಎಸ್‍ಐ ಆಗಿದ್ದ ದಿ.ಸುಂದರ ಕಾನಾವು ಅವರ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ನುಡಿನಮನ ಸಲ್ಲಿಸಿದರು. ಕಷ್ಟಗಳು ದೂರವಾಗಿ ಬದುಕು ಅರಳುತ್ತಿದ್ದ ಹೊತ್ತಲ್ಲಿ ಸುಂದರ ಅವರು ಅಗಲಿ ಹೋದರು. ಸಣ್ಣ ವಯಸ್ಸಿನಲ್ಲಿ ಅವರ ಹಠಾತ್ ನಿರ್ಗಮನ ಇಡೀ ಕುಟುಂಬಕ್ಕೆ, ಊರಿಗೆ ಆಘಾತವನ್ನು ಉಂಟು ಮಾಡಿದೆ. ಆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡುವ ಜತೆಗೆ ಸುಂದರ ಅವರ ನೆನಪು ಶಾಶ್ವತವಾಗಿರಲಿ ಎಂದರು.

ಪೆರುವಾಜೆ ಗ್ರಾ.ಪಂ. ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಮಾತನಾಡಿ, ಸುಂದರ ಕಾನಾವು ಅವರು ಕೂಲಿ ಕೆಲಸ ಮಾಡುತ್ತಿದ್ದ ಹೊತ್ತಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಲು ಸಾಕಷ್ಟು ಪ್ರಯತ್ನ ನಡೆಸಿದ್ದರು. ದಿ. ಕಾನಾವು ಗೋಪಾಲಕೃಷ್ಣ ಭಟ್ ಅವರು ಇದಕ್ಕೆ ಪ್ರೋತ್ಸಾಹ ನೀಡಿದ್ದರು. ಸತತ ಪ್ರಯತ್ನದ ಫಲವಾಗಿ ಅವರಿಗೆ ಸರಕಾರಿ ಕೆಲಸ ಸಿಕ್ಕಿತ್ತು. ಆದರೆ ಬದುಕಿನ ಸುಖ ಅನುಭವಿಸುವ ಹೊತ್ತಿಗೆ ಅವರ ನಿರ್ಗಮನ ಎಲ್ಲರನ್ನೂ ಶೂನ್ಯವನ್ನಾಗಿಸಿದೆ ಎಂದರು.

ಕಡಬ ತಿಮರಡ್ಡಿ ನಿವಾಸಿ ಅಝರ್ ಆತ್ಮಹತ್ಯೆ

Posted by Vidyamaana on 2024-07-21 06:51:40 |

Share: | | | | |


ಕಡಬ ತಿಮರಡ್ಡಿ ನಿವಾಸಿ ಅಝರ್ ಆತ್ಮಹತ್ಯೆ

ಕಡಬ, ಜು.21. ಜೀವನದಲ್ಲಿ ಜಿಗುಪ್ಪೆಗೊಂಡು ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಕಡಬದಲ್ಲಿ ನಡೆದಿದೆ.

ನಾಳೆ ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್‌

Posted by Vidyamaana on 2023-12-08 08:11:30 |

Share: | | | | |


ನಾಳೆ ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್‌

ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಡಿ.9ರಂದು ರಾಜ್ಯ ವ್ಯಾಪಿ ರಾಷ್ಟ್ರೀಯ ಲೋಕ ಅದಾಲತ್‌ (ಜನತಾ ನ್ಯಾಯಾಲಯ) ಆಯೋಜನೆ ಮಾಡಿದೆ. ಇದು ಈ ವರ್ಷದ ನಾಲ್ಕನೇ ಲೋಕ ಅದಾಲತ್‌ ಆಗಿದೆ. ವ್ಯಾಜ್ಯ ಮುಕ್ತ, ಸೌಹಾರ್ದಯುತ ಸಮಾಜ ನಿರ್ಮಾಣದ ಉದ್ದೇಶದಿಂದ ಈ ಅದಾಲತ್ ಮಾಡಲಾಗುತ್ತಿದೆ.


ಡಿ.9ರಂದು ಹೈಕೋರ್ಟ್‌ನ ಬೆಂಗಳೂರು, ಧಾರವಾಡ, ಕಲಬುರಗಿ ಪೀಠಗಳು ಸಹಿತ ರಾಜ್ಯದ ಎಲ್ಲ ಜಿಲ್ಲಾ ನ್ಯಾಯಾಲಯ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಏಕಕಾಲಕ್ಕೆ ಸಾವಿರಕ್ಕೂ ಅಧಿಕ ವಿಚಾರಣ ಪೀಠಗಳಲ್ಲಿ ಲೋಕ್‌ ಅದಾಲತ್‌ ಕಲಾಪಗಳು ನಡೆಯಲಿವೆ.


ರಾಜ್ಯದ ಎಲ್ಲ ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ 19.93 ಲಕ್ಷ ಪ್ರಕರಣಗಳ ಪೈಕಿ 2.60 ಲಕ್ಷ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಲು ಉದ್ದೇಶಿಸಲಾಗಿದೆ. ಪ್ರಕರಣಗಳನ್ನು ಗುರುತಿಸುವ ಪ್ರಕ್ರಿಯೆ ಇನ್ನೂ ಚಾಲ್ತಿಯಲ್ಲಿದ್ದು, ಈ ಸಂಖ್ಯೆ ಏರಿಕೆಯಾಗಬಹುದು.


ಕರ್ನಾಟಕ ಹೈಕೋರ್ಟ್‌ನ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರ ಸಭಾ ಭವನದಲ್ಲಿ ಗ ಸುದ್ದಿಗೋಷ್ಠಿಯಲ್ಲಿ ಪ್ರಾಧಿಕಾರದ ನೂತನ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಪಿ.ಎಸ್‌. ದಿನೇಶ್‌ ಕುಮಾರ್‌ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್‌, ಉಪ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್‌ ಜೊತೆಗೆ ಇದ್ದರು.

Recent News


Leave a Comment: