ಎಫ್‌ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸುದ್ದಿಗಳು News

Posted by vidyamaana on 2024-07-05 17:03:24 |

Share: | | | | |


ಎಫ್‌ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ಇಂದು ವಜಾಗೊಳಿಸಿದೆ.

ಎರಡು ಪ್ರಕರಣವನ್ನು ರದ್ದು ಕೋರಿ ಹಾಕಿದ ಅರ್ಜಿಯ ಬಗ್ಗೆ ಜೂ. 5 ರಂದು(ಇಂದು) ಬೆಂಗಳೂರಿನ ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಕೋರ್ಟ್ ಎರಡು ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ ಹಾಗೂ ಈ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಪ್ರದೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

 Share: | | | | |


ಲೈಂಗಿಕ ಕಿರುಕುಳ ಆರೋಪ : ಚರ್ಚ್ ಪಾದ್ರಿ ವಿರುದ್ಧ ಎಫ್‍ಐಆರ್

Posted by Vidyamaana on 2023-08-24 01:44:18 |

Share: | | | | |


ಲೈಂಗಿಕ ಕಿರುಕುಳ ಆರೋಪ : ಚರ್ಚ್ ಪಾದ್ರಿ ವಿರುದ್ಧ ಎಫ್‍ಐಆರ್

ಬೆಂಗಳೂರು: ಚರ್ಚ್ ಪಾದ್ರಿ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.


ಕಮ್ಮನಹಳ್ಳಿಯ ಸೆಂಟ್ ಪಿಯೂಸ್ ಚರ್ಚ್ ಪಾದ್ರಿ ಜಯಕರನ್ ವಿರುದ್ಧ ಲೈಂಗಿಕ ಕಿರುಕುಳ ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದು, ಎಫ್‍ಐಆರ್ ದಾಖಲಾಗಿದೆ.


ಲೈಂಗಿಕ ಕಿರುಕುಳ ನೀಡಿ ಹಲ್ಲೆ ಮಾಡಿದ್ದಾರೆಂದು ಮಹಿಳೆ ದೂರು ದಾಖಲಿಸಿದ್ದಾರೆ. ಪಾದ್ರಿ ಜಯಕರನ್ ಅನುಯಾಯಿಗಳಿಂದಲೂ ತನಗೆ ಬೆದರಿಕೆ ಕರೆಗಳು ಬರುತ್ತಿದೆ ಎಂದು ಸಂತ್ರಸ್ತ ಮಹಿಳೆ ಆರೋಪ ಮಾಡಿದ್ದಾರೆ. ಘಟನೆ ಬಗ್ಗೆ ಚರ್ಚ್‍ನ ಆಂತರಿಕ ಸಮಿತಿಗೂ ದೂರು ನೀಡಿದ್ದರೂ ಕ್ರಮ ಕೈಗೊಳ್ಳಲಿಲ್ಲ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.


ಮಹಿಳೆ ವಿರುದ್ಧ ಚರ್ಚ್ ಪಾದ್ರಿ ಕೂಡ ಪ್ರತಿ ದೂರು ದಾಖಲಿಸಿದ್ದು, ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಚರ್ಚ್ ಹಣಕಾಸಿನ ವಿಚಾರಕ್ಕೆ ಸುಳ್ಳು ಆರೋಪ ಮಾಡಿದ್ದಾರೆಂದು ಮಹಿಳೆ ಸೇರಿದಂತೆ 9 ಮಂದಿ ವಿರುದ್ಧ ಪಾದ್ರಿ ಜಯಕರನ್ ದೂರು ಸಲ್ಲಿಸಿದ್ದಾರೆ. ತಾನು ಚರ್ಚ್ ಪಾದ್ರಿ ಆಗಿ ಅಧಿಕಾರ ವಹಿಸಿಕೊಳ್ಳದಂತೆ ಕಿರುಕುಳ ನೀಡಿದರು. ಆರೋಪಿಗಳು ಚರ್ಚ್ ಹಣ ದುರುಪಯೋಗ ಮಾಡಿಕೊಂಡಿದ್ದಾರೆ.


ಹಣದ ಲೆಕ್ಕ ಕೇಳಿದ್ದಕ್ಕೆ ಈ ರೀತಿ ಸುಳ್ಳು ಆರೋಪ ಮಾಡಿ ನನ್ನ ವಿರುದ್ಧ ದೂರು ನೀಡಿದ್ದಾರೆಂದು ಪಾದ್ರಿ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪುತ್ತೂರು: ಅಕ್ರಮ ಗೋಸಾಟ – ತಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು. ನೂತನ ಕಾಯ್ದೆಯಂತೆ ಮೂವರ ವಿರುದ್ಧ ಪ್ರಕರಣ ದಾಖಲು

Posted by Vidyamaana on 2023-02-13 02:54:01 |

Share: | | | | |


ಪುತ್ತೂರು: ಅಕ್ರಮ ಗೋಸಾಟ – ತಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು.  ನೂತನ ಕಾಯ್ದೆಯಂತೆ ಮೂವರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಅಕ್ರಮ ಗೋ ಸಾಗಾಟವನ್ನು ತಡೆದ ಹಿಂದೂ ಕಾರ್ಯಕರ್ತರು ಜಾನುವಾರುಗಳನ್ನು ಪೊಲೀಸರಿಗೊಪ್ಪಿಸಿದ ಘಟನೆ ಕರ್ನಾಟಕ ಕೇರಳ ಗಡಿಭಾಗದ ಆರ್ಲಪದವಿನಲ್ಲಿ ನಡೆದಿದೆ. ಕೂಡಲೇ ಸ್ಥಳಕ್ಕೆ ತೆರಳಿದ ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ (Arun Kumar Putthila) ನೂತನ ಕಾಯ್ದೆಯಂತೆ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ನೂತನ ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಕೇರಳ ನೊಂದಾಣಿಯ ವಾಹನದಲ್ಲಿ ದನ ಹಾಗೂ ಗಂಡು ಕರುವನ್ನು ಅಕ್ರಮವಾಗಿ ಕೇರಳಕ್ಕೆ ಸಾಗಾಟ ಮಾಡುತ್ತಿದ್ದು, ಈ ಬಗ್ಗೆ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ವಾಹನವನ್ನು ತಡೆದಿದ್ದಾರೆ.

ಕಾರ್ಯಕರ್ತರು ಈ ಬಗ್ಗೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಪಂದಿಸಿದ ಅರುಣ್ ಕುಮಾರ್ ಪುತ್ತಿಲ ರವರು ಸ್ಥಳಕ್ಕೆ ಆಗಮಿಸಿ ಪೊಲೀಸರೊಂದಿಗೆ ಮಾತುಕತೆ ನಡೆಸಿ, ದನಗಳನ್ನು ಪೊಲೀಸರಿಗೊಪ್ಪಿಸಿದ್ದು, ಮುಂದೆ ಈ ಸ್ಥಳದಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.ದನ ಸಾಗಾಟದ ಬಗ್ಗೆ ನರಿಮೊಗರು ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ನೀಡಲಾದ ಒಪ್ಪಿಗೆ ಪತ್ರವೊಂದಿದ್ದು ಜಾನುವಾರುಗಳನ್ನು ಸಾಕಲು ತೆಗೆದುಕೊಂಡು ಹೋಗುವುದಾದರೆ ಪಶು ವೈದ್ಯರ ಸಹಿ ಆಗಬೇಕಿತ್ತು. ಆದರೇ ಅಕ್ರಮ ಗೋ ಸಾಗಾಟಕ್ಕೆ ಕುಮ್ಮಕ್ಕು ನೀಡಲು ನರಿಮೊಗರು ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಕೃಷ್ಣರಾಜ್ ಎಂಬವರು ಪರ್ಮಿಷನ್ ಕೊಟ್ಟು ಅಧಿಕಾರದ ದುರುಪಯೋಗ ಮಾಡಿರುವುದಾಗಿ ಹಾಗೂ ಗೋ ಹತ್ಯೆಗೆ ಪ್ರಚೋದನೆ ಕೊಟ್ಟದಕ್ಕಾಗಿ ಅವರ ಮೇಲೆ ಎಫ್.ಐ.ಆರ್ ಮಾಡಬೇಕು ಎಂದು ಸಾರ್ವಜನಿಕರು ಮತ್ತು ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಪ್ರಕರಣ ದಾಖಲು: ಪುತ್ತೂರು ತಾಲೂಕು ಪಾಣಾಜೆ ಗ್ರಾಮದ ನೆಲ್ಲಿತ್ತಿಮಾರ್ ಎಂಬಲ್ಲಿ ಅಶೋಕ್‌ ಲೇಲ್ಯಾಂಡ್‌ ಮಿನಿ ಗೂಡ್ಸ್‌ ವಾಹನವೊಂದರಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದಾಗ ಪುತ್ತೂರು ಗ್ರಾಮಾಂತರ ಠಾಣಾ ಸಬ್ ಇನ್ಸ್ ಪೆಕ್ಟರ್ ಶ್ರೀನಾಥ ರೆಡ್ಡಿ ನೇತೃತ್ವದ ತಂಡ ಪರಿಶೀಲಿಸಲಾಗಿ ಜಾನುವಾರು ಸಾಗಾಟಕ್ಕೆ ಯಾವುದೇ ಪರವಾನಿಗೆ ಅಥವಾ ಪಶು ವೈದ್ಯಾಧಿಕಾರಿಯವರ ಪ್ರಮಾಣಪತ್ರ ಇಲ್ಲದೇ ಒಂದು ಹಸು ಮತ್ತು ಒಂದು ಗಂಡು ಕರುವನ್ನು ಸಾಗಿಸುತ್ತಿರುವುದು ಕಂಡುಬಂದಿದೆ.

ಈ ಬಗ್ಗೆ ಕೃತ್ಯದಲ್ಲಿ ತೊಡಗಿದ್ದ ವಿಲ್ಲಿ ಲೂಯಿಸ್ ಡಿ ಸೋಜಾ, ಸಂತೋಷ್ ಡಿ ಸೋಜಾ, ಸಿಲ್ವೆಸ್ಟರ್ ಡಿ ಸೋಜಾ ಎಂಬವರುಗಳನ್ನು ದಸ್ತಗಿರಿ ಮಾಡಿ, ಸದ್ರಿ ವಾಹನ ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆಯಲಾಗಿದೆ.

ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 013-2023 ಕಲಂ:- 5, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020ಯಂತೆ ಪ್ರಕರಣ ದಾಖಲಿಸಲಾಗಿದೆ.

ನಮ್ಮ ಮೆಟ್ರೋಗೆ ಬಲಿಯಾದ ಯುವಕ ಯಾರು?

Posted by Vidyamaana on 2024-03-21 20:21:00 |

Share: | | | | |


ನಮ್ಮ ಮೆಟ್ರೋಗೆ ಬಲಿಯಾದ ಯುವಕ ಯಾರು?

ಬೆಂಗಳೂರು, (ಮಾರ್ಚ್ 21): ಇತ್ತೀಚೆಗೆ ನಮ್ಮ ಮೆಟ್ರೋ (Namma Metro )ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದೆ. ಈ ಹಿಂದೆ ಮೆಟ್ರೋ ಹಳಿಗೆ ಹಾರಿದ ಪ್ರಕರಣಗಳು ನಡೆದಿದ್ದವು. ಆದ್ರೆ, ಯಾವುದೇ ಸಾವು-ನೋವು ಸಂಭವಿಸಿರಲಿಲ್ಲ. ಆದ್ರೆ, ಇಂದು (ಮಾರ್ಚ್ .21) ಮಧ್ಯಾಹ್ನ 2:10ರ ಸುಮಾರಿಗೆ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ (Athiguppe Metro) ರೈಲು ಬರುವಾಗ ಯುವಕ ಹಳಿಗೆ ಜಿಗಿದಿದ್ದಾನೆ. ಪರಿಣಾಮ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಿಂದ ಸುಮಾರು ಎಂಟು ಅಡಿ ದೂರದಲ್ಲಿ ಯುವಕನ ದೇಹವನ್ನು ರೈಲು ಎಳೆದೊಯ್ದಿದೆ. ಇದರಿಂದ ಯುವಕನ ದೇಹ ಎರಡು ತುಂಡಾಗಿದೆ. ಸದ್ಯ ಯುವಕನ ಮೃತದೇಹವನ್ನು ಹೊರಗೆ ತೆಗೆದು ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಆತ್ಮಹತ್ಯೆ ಮಾಡಿಕೊಂಡ ಯುವಕನನನ್ನು ಧ್ರುವ್ ಟಕ್ಕರ್ ಎಂದು ಗುರುತಿಸಲಾಗಿದ್ದು, ಆತನ ಕುಟುಂಬಕ್ಕೆ ಮತ್ತು ಕಾಲೇಜಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ.ಮಟ್ರೋ ರೈಲು ಬರುವ ಹಲವು ನಿಮಿಷಗಳ ಕಾಲ ಮೊದಲೇ ಧ್ರುವ್ ಟಕ್ಕರ್ ಅತ್ತಿಗುಪ್ಪೆ ನಿಲ್ದಾಣಕ್ಕೆ ಬಂದಿದ್ದ. ನಂತರ ನಿಲ್ದಾಣದ ಬಲ ಭಾಗದ ತುದಿಗೆ ಹೋಗಿ ನಿಂತಿದ್ದ. ಧ್ರುವ್ ಟಕ್ಕರ್ ಜೊತೆಗೆ ಒರ್ವ ಯುವತಿ ಹಾಗೂ ಮತ್ತೊರ್ವ ಯುವಕ ಇದ್ದ. ಹಾಗೇ ಮೂವರು ಮಾತನಾಡುತ್ತಾ ಮಾತನಾಡುತ್ತಾ ನಿಂತಿದ್ದರು. ನಂತರ ರೈಲು ಬರುವ ಸಮಯದಲ್ಲಿ . ಧ್ರುವ್ ಟ್ರಾಕ್ ಮೇಲೆ ಹಾರಿದ್ದಾನೆ. ಜೊತೆಗಿದ್ದವರು ಎಳೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಆದ್ರೆ ರೈಲು ಹತ್ತಿರ ಬಂದಾಗ ಸ್ಥಳದಿಂದ ಓಡಿ ಹೋಗಿದ್ದಾರೆ. ಪರಿಣಾಮ ರೈಲು ಸ್ವಲ್ಪ ದೂರ ಎಳೆದೊಯ್ದಿದ್ದು, ರುಂಡ-ಮುಂಡ ಬೇರೆ-ಬೇರೆಯಾಗಿದೆ. ರೈಲಿನ ಕೆಳಗೆ ಸಿಲುಕಿದ್ದ ಮೃತದೇಹವನ್ನು ಹೊರಗೆ ತೆಗೆದು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.ಡಿಸಿಪಿ ಎಸ್‌.ಗಿರೀಶ್‌ ಹೇಳಿದ್ದಿಷ್ಟು

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಎಸ್‌.ಗಿರೀಶ್‌ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, 19 ರಿಂದ 20 ವರ್ಷದ ಹುಡುಗನ ಸಾವಾಗಿದೆ. ಮೃತ ಧ್ರುವ್ ಟಕ್ಕರ್ ಮಹಾರಾಷ್ಟ್ರದ ಮುಂಬೈ ಮೂಲದವನು. ಈತ ನ್ಯಾಷನಲ್ ಲಾ ಕಾಲೇಜ್ ಫಸ್ಟ್ ಇಯರ್ ವಿದ್ಯಾರ್ಥಿ ಎಂದು ಮಾಹಿತಿ ನೀಡಿದರು.

ಸದ್ಯ ವಿದ್ಯಾರ್ಥಿ ಸಾವಿನ ಬಗ್ಗೆ ಕಾಲೇಜು ಮತ್ತು ಆತನ ಕುಟುಂಬಕ್ಕೆ ಪೊಲೀಸರು ಮಾಹಿತಿ ರವಾನಿಸಿದ್ದು, ಧ್ರುವ್ ಟಕ್ಕರ್ ಏಕೆ ಆತ್ಮಹತ್ಯೆ ಮಾಡಿಕೊಂಡ? ಆತ್ಮಹತ್ಯೆಗೆ ಕಾರಣವೇನು? ಎನ್ನುವುದರ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇನ್ನು ಸ್ಥಗಿತಗೊಂಡಿದ್ದ ಮೆಟ್ರೋ ಸಂಚಾರ ಮತ್ತೆ ಪುನಾರಂಭವಾಗಿದೆ.

ಪುತ್ತೂರು: ಕುರಿಯ ಜಾಗದ ತಕರಾರು ಅಕ್ರಮ ಪ್ರವೇಶ ಮನೆ ಧ್ವಂಸ ಲಕ್ಷಾಂತರ ರೂ. ನಷ್ಟ ದೂರು ದಾಖಲು

Posted by Vidyamaana on 2024-03-10 15:42:26 |

Share: | | | | |


ಪುತ್ತೂರು: ಕುರಿಯ ಜಾಗದ ತಕರಾರು ಅಕ್ರಮ ಪ್ರವೇಶ ಮನೆ ಧ್ವಂಸ ಲಕ್ಷಾಂತರ ರೂ. ನಷ್ಟ ದೂರು ದಾಖಲು

ಪುತ್ತೂರು:ಸಂಬಂಧಿಸಿದ ಯಾರೂ ಇಲ್ಲದ ಸಮಯ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಜೆಸಿಬಿಯಿಂದ ಹೆಂಚಿನ ಮಾಡಿನ ಮನೆಯೊಂದನ್ನು ಕೆಡವಿ ನಷ್ಟ ಉಂಟು ಮಾಡಿದ ಘಟನೆ ಮಾ.9ರ ಮಧ್ಯಾಹ್ನ ಕುರಿಯದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಪುತ್ತೂರು ಆದರ್ಶ ಆಸ್ಪತ್ರೆ ಬಳಿಯಿರುವ ಹೊಟೇಲ್ ಶ್ರೀಲಕ್ಷ್ಮೀ ಇದರ ಮಾಲಕ, ಕುರಿಯ ಹೊಸಮಾರು ನಿವಾಸಿ ವಸಂತ ಪೂಜಾರಿ ಎಂಬವರು ಘಟನೆ ಕುರಿತು ಸಂಪ್ಯ ಪೊಲೀಸರಿಗೆ ದೂರು ನೀಡಿ. ನಮ್ಮ ಸ್ವಾಧೀನದಲ್ಲಿರುವ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆಯೊಳಗೆ ಜೆಸಿಬಿ ನುಗ್ಗಿಸಿ ಮನೆಯನ್ನು ಕೆಡವಿ ಮನೆಯ ವಸ್ತುಗಳನ್ನೆಲ್ಲಾ ನಾಶ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.ಶಶಿಕಲಾ ರೈ,ಮತ್ತವರ ಮಗ ಉಜ್ವಲ್ ರೈ ಹಾಗೂ ಜೆಸಿಬಿ ಆಪರೇಟರ್ ವಿರುದ್ಧ ಅವರು ದೂರು ನೀಡಿದ್ದಾರೆ.ಪೊಲೀಸರು ಕಲಂ 447,448,427,34 ಐಪಿಸಿಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಾಳೆ ಬೆಂಗಳೂರು ಬಂದ್​ಗೆ ಅವಕಾಶ ಇಲ್ಲ​- ಪೊಲೀಸ್ ಆಯುಕ್ತ

Posted by Vidyamaana on 2023-09-25 18:31:43 |

Share: | | | | |


ನಾಳೆ ಬೆಂಗಳೂರು ಬಂದ್​ಗೆ ಅವಕಾಶ ಇಲ್ಲ​- ಪೊಲೀಸ್ ಆಯುಕ್ತ

ಬೆಂಗಳೂರು: ಸೆ.26ರಂದು ಕಾವೇರಿ ವಿಚಾರವಾಗಿ ಬೆಂಗಳೂರು ಬಂದ್‌ಗೆ ಅವಕಾಶವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ತಿಳಿಸಿದ್ದಾರೆ.


ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ನಾಳೆ ಬಂದ್ ಗೆ ಅವಕಾಶ ಇಲ್ಲ, ಅನುಮತಿ ಕೊಡಲ್ಲ ಎಂದು ಸಂಘಟಕರಿಗೆ ಸೂಚಿಸಿದ್ದೇವೆ. ನಾಳೆ ಒತ್ತಾಯ ಪೂರ್ವಕ ಬಂದ್ ಮಾಡಿಸಿದರೆ ಕ್ರಮ ಖಚಿತ ಎಂದಿ ಎಚ್ಚರಿಸಿದರು.


ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತದೆ. ಸೆ.25ರ ಮಧ್ಯರಾತ್ರಿಯಿಂದ 26ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಇರಲಿದೆ” ಎಂದು ತಿಳಿಸಿದರು.


”2016 ರಲ್ಲಿ ನಡೆದ ಘಟನೆ ಮತ್ತೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಬಸ್ ಗಳಿಗೆ ಭದ್ರತೆ ನೀಡೋದರ ಬಗ್ಗೆಯೂ ಚರ್ಚೆ ಮಾಡಲಾಗ್ತಾ ಇದೆ, ತಮಿಳುನಾಡು ಬಸ್ ಗಳಿಗೂ ಭದ್ರತೆ ಬೇಕು ಅಂದ್ರೆ ಕೊಡುತ್ತೇವೆ” ಎಂದು ಹೇಳಿದರು.

ರಾಮಕೃಷ್ಣ ಕೊಲೆ ಪ್ರಕರಣ: ಡಾ| ರೇಣುಕಾ ಪ್ರಸಾದ್ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

Posted by Vidyamaana on 2023-10-05 16:32:42 |

Share: | | | | |


 ರಾಮಕೃಷ್ಣ ಕೊಲೆ ಪ್ರಕರಣ: ಡಾ| ರೇಣುಕಾ ಪ್ರಸಾದ್ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಸುಳ್ಯದ ಕೆವಿಜಿ ಪಾಲಿಟೆಕ್ನಿಟ್ ಪ್ರಾಂಶುಪಾಲರಾಗಿದ್ದ ಎ.ಎಸ್. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಕುರುಂಜಿ ವೆಂಕಟರಮಣ ಗೌಡರ ಪುತ್ರ ಡಾ| ರೇಣುಕಾ ಪ್ರಸಾದ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶಿಸಿದೆ.


ಮಂಗಳೂರಿನ ಜಿಲ್ಲಾ ನ್ಯಾಯಾಲಯದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಹೈ ಕೋರ್ಟ್ ನ್ಯಾಯಧೀಶರಾದ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ಬಸವರಾಜ ಅವರನ್ನೊಳಗೊಂಡ ವಿಭಾಗೀಯ ಪೀಠದಿಂದ ಶಿಕ್ಷೆ ಪ್ರಮಾಣ ಪ್ರಕಟವಾಗಿದೆ.


ಕೆಲ ದಿನಗಳ ಹಿಂದೆ ರೇಣುಕಾ ಪ್ರಸಾದ್ ಸೇರಿ ಆರು ಮಂದಿ ದೋಷಿಗಳೆಂದು ಹೈಕೋರ್ಟ್ ತೀರ್ಪು ನೀಡಿತ್ತು. ಅಪರಾಧಿಗಳಲ್ಲಿ ಓರ್ವನಾದ ಶರಣ್ ಪೂಜಾರಿ ಗೈರಾದ ಹಿನ್ನೆಲೆಯಲ್ಲಿ ಐವರಿಗೆ ಜೀವಾವಧಿ ಶಿಕ್ಷೆ ನೀಡಿದೆ.


ಖುಲಾಸೆಯಾಗಿದ್ದರು: ಪ್ರಕರಣದಲ್ಲಿ ಹತ್ಯೆಗೀಡಾದ ಎ.ಎಸ್‌. ರಾಮಕೃಷ್ಣ ಅವರ ಸಹೋದರ ಡಾ| ರೇಣುಕಾಪ್ರಸಾದ್‌ ಸೇರಿದಂತೆ ಏಳು ಆರೋಪಿಗಳನ್ನು ಖುಲಾಸೆಗೊಳಿಸಿ ಪುತ್ತೂರಿನ 5ನೇ ಹೆಚ್ಚುವರಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶ ಹೊರಡಿಸಿತ್ತು. ಇದನ್ನು ರದ್ದುಪಡಿಸುವಂತೆ ಕೋರಿ ರಾಜ್ಯ ಸರಕಾರದ ಪರವಾಗಿ ಪುತ್ತೂರು ಉಪವಿಭಾಗದ ಸಹಾಯಕ ಪೊಲೀಸ್‌ ವರಿಷ್ಠಾಧಿಕಾರಿ ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಆರು ಜನರನ್ನು ದೋಷಿ ಎಂದು ಆದೇಶ ಹೊರಡಿಸಿತ್ತು.

Recent News


Leave a Comment: