ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಸುದ್ದಿಗಳು News

Posted by vidyamaana on 2024-07-03 16:20:08 |

Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು

ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.

ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್   ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.

 Share: | | | | |


ಪುತ್ತೂರು ನಗರ ಸಭೆ ರಾಜಕೀಯಕ್ಕೆ ಪುತ್ತಿಲ ಪರಿವಾರ ಎಂಟ್ರಿ

Posted by Vidyamaana on 2023-12-14 20:46:26 |

Share: | | | | |


ಪುತ್ತೂರು ನಗರ ಸಭೆ ರಾಜಕೀಯಕ್ಕೆ ಪುತ್ತಿಲ ಪರಿವಾರ ಎಂಟ್ರಿ

ಪುತ್ತೂರು :  ಪುತ್ತೂರು ನಗರಸಭೆಯ ಎರಡು ಕ್ಷೇತ್ರಗಳಿಗೆ ನಡೆಯವ ಉಪಚುನಾವಣೆಗೆ ಪುತ್ತಿಲ ಪರಿವಾರದ ವತಿಯಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.


ಬೆಳಿಗ್ಗೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತಿಲ ಪರಿವಾರದ ಪ್ರಮುಖರು ಹಾಗೂ ಕಾರ್ಯಕರ್ತರೊಂದಿಗೆ ಪ್ರಾರ್ಥನೆ ಸಲ್ಲಿಸಿ, ನಂತರ ಮೆರವಣಿಗೆ ಮೂಲಕ ಸಾಗಿ ನಗರಸಭೆಯಲ್ಲಿ ನಾಮಪತ್ರ ಸಲ್ಲಿಸಲಾಯಿತು.  


ವಾರ್ಡ್ ನಂ.1 ಕ್ಕೆ ಪುತ್ತಿಲ ಪರಿವಾರದ ಅಭ್ಯರ್ಥಿಯಾಗಿ ಅನ್ನಪೂರ್ಣ ಎಸ್.ಕೆ ರಾವ್ ಹಾಗೂ ವಾರ್ಡ್ ನಂ.11 ಕ್ಕೆ ಚಿಂತನ್ ಪಿ ಅವರು ನಾಮಪತ್ರ ಸಲ್ಲಿಸಿದ್ದಾರೆ.  ಅರುಣ್ ಕುಮಾರ್ ಪುತ್ತಿಲ,  ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಮಾರ್ತಾ, ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು,  ನಗರಾಧ್ಯಕ್ಷ ಅನಿಲ್ ತೆಂಕಿಲ ಸಹಿತ ಹಲವರು ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. 


ಅನ್ನಪೂರ್ಣ ರಾವ್ ರವರು, ನೆಹರುನಗರದ ಶೇವಿರೆ ನಿವಾಸಿಯಾಗಿದ್ದಾರೆ. ಇವರ ಪತಿ ಮಂಜಲ್ಪಡ್ಪು ರಕ್ತೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದಾರೆ.


ಅನ್ನಪೂರ್ಣ ರಾವ್ ರವರು ಮಹಾಲಿಂಗೇಶ್ವರ ಯಕ್ಷಗಾನ ಕಲಾಸಂಘದ ಅಧ್ಯಕ್ಷೆಯಾಗಿ ಕಲಾವಿದರಾಗಿದ್ದಾರೆ. ಬೊಳುವಾರು  ವೈಷ್ಣವಿ ವೈದೇಹಿ ಭಜನಾ ಮಂಡಳಿ ಸದಸ್ಯೆ, ಪುತ್ತೂರು ಲಯನೆಸ್ ಸಂಘದ ಮಾಜಿ ಅಧ್ಯಕ್ಷರಾಗಿದ್ದಾರೆ. ತುಳು ಹಾಗೂ ಕನ್ನಡ ಸಿನಿಮಾದಲ್ಲಿ  ಹಾಗೂ ನಾಟಕದಲ್ಲಿ ಅಭಿನಯಿಸಿ ಹವ್ಯಾಸಿ ಕಲಾವಿದೆಯಾಗಿದ್ದಾರೆ. ರಕ್ತೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸದಸ್ಯೆಯಾಗಿದ್ದಾರೆ. 



ವಾರ್ಡ್ ನಂ.11 ರ ಚಿಂತನ್ ಪಿ ರವರು ಚಿಕ್ಕಪುತ್ತೂರು ನಿವಾಸಿಯಾಗಿದ್ದು,  ಡಿಪ್ಲೋಮಾ ಐಟಿಐ ಪದವಿಧರರಾಗಿದ್ದಾರೆ. 


ಪುತ್ತೂರಿನಲ್ಲಿ ಎಸಿ ಬಿಡಿ ಭಾಗಗಳ ವ್ಯಾಪಾರಿಯಾಗಿದ್ದಾರೆ. ಪುತ್ತೂರಿನ ಅಭಿರಾಮ್ ಫ್ರೆಂಡ್ಸ್  ಸಕ್ರಿಯ ಸದಸ್ಯರಾಗಿದ್ದಾರೆ. 


ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ದೇಶವೇ ಯುವ ನಾಯಕತ್ವಕ್ಕೆ ಮಣೆ ಹಾಕುತ್ತಿರುವಾಗ ನಾವು ಕೂಡ ಯುವ ನಾಯಕನಿಗೆ ಹಾಗೂ ಸಾಮಾನ್ಯ ಸ್ವಯಂಸೇವಕನಿಗೆ ಅವಕಾಶ ನೀಡಿದ್ದೇವೆ.


ನಾರಿ ಶಕ್ತಿ ಭಾರತದ ಶಕ್ತಿ ರಾಜಕೀಯದಲ್ಲೂ ಮಹಿಳೆಯರಿಗೆ ಸಮಾನತೆ ಇದೆ ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರಿಗೆ ಸಮಾನ ಅವಕಾಶ ಸಿಗಬೇಕು ಎನ್ನುವ ಉದ್ದೇಶದಿಂದ ನಾವು ವಾರ್ಡ್ ನಂ.1 ಕಬಕರಲ್ಲಿ  ಅನ್ನಪೂರ್ಣರವರಿಗೆ  ಈ ಬಾರಿ ಅವಕಾಶ ನೀಡಿದ್ದೇವೆ. ಅತ್ಯಧಿಕ ಮತದಿಂದ ಗೆಲ್ಲಿಸಬೇಕೆಂದು ಮತದಾರರಲ್ಲಿ ವಿನಂತಿಸುತ್ತೇವೆ ಎಂದರು.

BREAKING : ಗುಂಡು ಹಾರಿಸಿಕೊಂಡು ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್ ಪ್ರಕಾಶ್ ಕಪಾಡೆ ಆತ್ಮಹತ್ಯೆ

Posted by Vidyamaana on 2024-05-15 21:00:12 |

Share: | | | | |


BREAKING : ಗುಂಡು ಹಾರಿಸಿಕೊಂಡು ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್ ಪ್ರಕಾಶ್ ಕಪಾಡೆ ಆತ್ಮಹತ್ಯೆ

ಜಾಮ್ನರ್ : ರಜೆ ಕಳೆಯಲು ಮನೆಗೆ ಬಂದಿದ್ದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್ `ಪ್ರಕಾಶ್ ಕಪಾಡೆ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ರಾತ್ರಿ ಜಾಮ್ನರ್ ನಲ್ಲಿ ಈ ಘಟನೆ ನಡೆದಿದೆ.ಜಾಮ್ನರ್ ಗಣಪತಿ ನಗರ ನಿವಾಸಿ ಪ್ರಕಾಶ್ ಗೋವಿಂದ ಕಪ್ಡೆ (37).

ಸೋಮವಾರ ಮಧ್ಯಾಹ್ನದ ಬಳಿಕ ಪುತ್ತೂರಿನ ಶಾಲೆ- ಕಾಲೇಜುಗಳಿಗೆ ರಜೆ

Posted by Vidyamaana on 2023-07-24 08:36:45 |

Share: | | | | |


ಸೋಮವಾರ ಮಧ್ಯಾಹ್ನದ ಬಳಿಕ ಪುತ್ತೂರಿನ ಶಾಲೆ- ಕಾಲೇಜುಗಳಿಗೆ ರಜೆ


ಪುತ್ತೂರು: ಭಾರೀ ಮಳೆ ಕಾರಣದಿಂದ ಪುತ್ತೂರು ತಾಲೂಕಿನ ಶಾಲಾ - ಕಾಲೇಜುಗಳಿಗೆ ಸೋಮವಾರ ಮಧ್ಯಾಹ್ನದ ಬಳಿಕ ರಜೆ ನೀಡಲಾಗಿದೆ.

ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆಯಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. 

ನಾಳೆ ಅಂದರೆ ಮಂಗಳವಾರದ ಮಳೆ ಪರಿಸ್ಥಿತಿ ನೋಡಿ ನಿರ್ಧಾರ ಮಾಡುವಂತೆಯೂ ಶಾಸಕರು‌ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಮಾ.10 : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆ ಸಭೆ

Posted by Vidyamaana on 2024-03-07 18:06:31 |

Share: | | | | |


ಮಾ.10 : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆ ಸಭೆ

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವವು ಜ.15 ರಿಂದ 21 ರ ತನಕ ಭಕ್ತವೃಂದದ ಪೂರ್ಣ ಸಹಕಾರದೊಂದಿಗೆ ಅತ್ಯಂತ ವಿಜೃಂಭಣೆಯಿಂದ ನಡೆದಿರುವುದು ನಿಮ್ಮೆಲ್ಲರಿಗೂ ತಿಳಿದ ವಿಚಾರ. ಶ್ರೀ ಕ್ಷೇತ್ರದ ವಾರ್ಷಿಕ ಜಾತ್ರೆ, ಬ್ರಹ್ಮರಥೋತ್ಸವದ ಲೆಕ್ಕಪತ್ರದ ಮಂಡನೆಯು‌10-03-2024 ರಂದು ಬೆಳಿಗ್ಗೆ 9 ಕ್ಕೆ ಶ್ರೀ ಕ್ಷೇತ್ರದಲ್ಲಿ ನಡೆಯಲಿದ್ದು ಈ ಸಂದರ್ಭ ಎಲ್ಲ ಭಗವದ್ಭಕ್ತರು ಪಾಲ್ಗೊಳ್ಳಬೇಕಾಗಿ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿ‌ ಮಾಜಿ‌ ಅಧ್ಯಕ್ಷ ಪಿ.ಪದ್ಮನಾಭ ಶೆಟ್ಟಿ ತಿಳಿಸಿದ್ದಾರೆ.

ಮಂಗಳೂರು: ಟಿಕೆಟ್ ಕೈತಪ್ಪುವ ಸುಳಿವು ದೊರೆತ ಕೂಡಲೇ ಭಾವುಕರಾಗಿ ಮಾತನಾಡಿದ ನಳಿನ್ ಕುಮಾರ್ ಕಟೀಲ್

Posted by Vidyamaana on 2024-03-12 12:31:42 |

Share: | | | | |


ಮಂಗಳೂರು: ಟಿಕೆಟ್ ಕೈತಪ್ಪುವ ಸುಳಿವು ದೊರೆತ ಕೂಡಲೇ ಭಾವುಕರಾಗಿ ಮಾತನಾಡಿದ ನಳಿನ್ ಕುಮಾರ್ ಕಟೀಲ್

ಮಂಗಳೂರು, ಮಾರ್ಚ್​ 12: ಲೋಕಸಭೆ ಚುನಾವಣೆಯಲ್ಲಿ (Lok Sabha Election) ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್​ಗೆ (Nalin Kumar Kateel) ಬಿಜೆಪಿ (BJP) ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂದು ವರದಿಗಳಾಗಿವೆ. ಆ ಕುರಿತು ಮಂಗಳೂರಿನಲ್ಲಿ ಪ್ರತಿಕ್ರಿಯಸಿರುವ ಸಂಸದರು, ಭಾವುಕರಾರದರು. ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸುವುದು ನಮ್ಮ ಪಕ್ಷದ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲಾ ಯೋಚನೆ ಮಾಡಿ ಆಯ್ಕೆ ಮಾಡುತ್ತಾರೆ. ಅವರ ಆಯ್ಕೆಯನ್ನು ಸ್ವಾಗತಿಸುತ್ತೇನೆ ಎಂದರು.ಪಕ್ಷವು ನಿಂತ ನೀರಾಗಬಾರದು: ನಳಿನ್

ಪಕ್ಷವು ನಿಂತ ನೀರಾಗಬಾರದು. ಹೊಸಬರು ಬರುತ್ತಾ ಇರಬೇಕು. ಚಲಾವಣೆ ಆಗುತ್ತಾ ಇರಬೇಕು. ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾವೆಲ್ಲಾ ಬದ್ಧರಾಗಿರುತ್ತೇವೆ. ಯಾರೇ ಅಭ್ಯರ್ಥಿ ಆದರೂ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಗುರಿ. ರಾಷ್ಟ್ರೀಯ ನಾಯಕರ ಯೋಚನೆಗಳಿಗೆ ಬದ್ಧರಾಗಿ ಕೆಲಸ ಮಾಡುವವರು ನಾವು ಎಂದು ನಳಿನ್ ಹೇಳಿದರು.


ಪಕ್ಷ ಹೇಳಿದ ಕೆಲಸ ಮಾಡುತ್ತೇವೆ: ಕಟೀಲ್

ನಾವು ಪಕ್ಷ ಏನೇ ಹೇಳಿದರೂ ಮಾಡುತ್ತೇವೆ. ಪಕ್ಷದವರು ನಮ್ಮ ಬಳಿ ಗುಡಿಸು ಎಂದರೆ ಗುಡಿಸುತ್ತೇವೆ. ಒರೆಸು ಎಂದು ಹೇಳಿದರೆ ಒರೆಸುತ್ತೇವೆ. ನಮಗೆ ಅಧಿಕಾರವೇ ಪ್ರಾಮುಖ್ಯ ಅಲ್ಲ. ಏನು ಬದಲಾವಣೆ ಮಾಡಬೇಕೋ ಅದನ್ನು ರಾಷ್ಟ್ರೀಯ ನಾಯಕರು ಮಾಡುತ್ತಾರೆ. ಸಾಮಾಜಿಕ ಜಾಲತಾಣಗಳ ಚರ್ಚೆ ಬಗ್ಗೆ ನಾನು ಹೆಚ್ಚು ತಲೆಕಡಿಸಿಕೊಳ್ಳುವುದಿಲ್ಲ. ನಾವು ಕಾರ್ಯವನ್ನು ನಂಬಿರುವಂಥವರು. ಕಾರ್ಯಕರ್ತರ ಆಧಾರದಲ್ಲಿ ಬೆಳೆದವರು ಎಂದು ಹೇಳಿದರು.ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಮಾತನಾಡಿರುವುದನ್ನು ರಾತ್ರಿ ನೋಡಿದೆ. ರಾಷ್ಟ್ರೀಯ ನಾಯಕರು ಯಾವ ತೀರ್ಮಾನ ತಗೊಂಡರೂ ಅದು ಪಾರ್ಟಿಯ ತೀರ್ಮಾನ. ಆ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ. ನನಗೂ ಮೂರು ಬಾರಿ‌ ಅವಕಾಶ ನೀಡಿದ್ದಾರೆ. ಹದಿನೈದು ವರ್ಷ ಕೆಲಸ ಮಾಡಿದ್ದೇನೆ. ಪಕ್ಷ ಈ ಬಗ್ಗೆ ನಿರ್ಧಾರ ಮಾಡುತ್ತದೆ. ನಮ್ಮ ಪಾರ್ಟಿಯಲ್ಲಿ ತುಳಿಯುವ ಕೆಲಸ ಆಗಲ್ಲ. ಅದರ ಬದಲಿಗೆ ಬೆಳೆಸುವ ಕೆಲಸ ಕಾರ್ಯ ಆಗುತ್ತದೆ. ನಾನು ಸಾಮಾನ್ಯ ಕಾರ್ಯಕರ್ತನಾಗಿ ಬೆಳೆದು ಬಂದವನು. ಸಂಘದ ಕಾರ್ಯಕ್ಕೋಸ್ಕರ ಬಂದಿದ್ದು. ಬಿಜೆಪಿ ಕೆಲಸ ಮಾಡು ಎಂದಾಗ ಮಾಡಿದೆ. ಲೋಕಸಭೆ ಚುನಾವಣೆಗೆ ನಿಲ್ಲು ಎಂದರು, ಸ್ಪರ್ಧಿಸಿದೆ. ಆ ಬಳಿಕ ರಾಜ್ಯಾಧ್ಯಕ್ಷನೂ ಆದೆ. ಯಾವ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತ ರಾಜ್ಯಾಧ್ಯಕ್ಷ ಆಗುತ್ತಾರೆ ಎಂದು ನಳಿನ್ ಪ್ರಶ್ನಿಸಿದರು.ಬಿಜೆಪಿಯಲ್ಲಿ ಯಾರನ್ನೂ ತುಳಿಯುವುದಿಲ್ಲ. ಅವಕಾಶ ಸಿಕ್ಕಾಗ ನನಗೆ ನ್ಯಾಯ ಸಿಕ್ಕಿದೆ. ಅವಕಾಶ ಸಿಕ್ಕಿಲ್ಲ ಅಂದಾಗ ಅನ್ಯಾಯ ಆಗಿದೆ ಎಂದು ಹೇಳುವ ಹಕ್ಕು ನಮಗಿಲ್ಲ. ಎಲ್ಲರನ್ನೂ ಪಾರ್ಟಿ ಬೆಳೆಸಿದೆ. ಟಿಕೆಟ್ ಸಿಕ್ಕಿಲ್ಲ ಎಂದ ಕೂಡಲೇ ಅಂಥವರನ್ನು ಕೈಬಿಟ್ಟಿದೆ ಎಂದು ಅರ್ಥ ಅಲ್ಲ. ಮುಂದಕ್ಕೆ ಬಹಳಷ್ಟು ಅವಕಾಶ ಸಿಗಬಹುದು. ಪಕ್ಷದ ಕೆಲಸ ಮಾಡೋದಕ್ಕೂ ಜನ ಬೇಕಲ್ಲ. ಈ ಬಗ್ಗೆ ಯೋಚನೆ ಮಾಡಿಕೊಂಡೇ ರಾಷ್ಟ್ರೀಯ ನಾಯಕರು ಪಟ್ಟಿ ಘೋಷಣೆ ಮಾಡುತ್ತಾರೆ. ನಾವು ಸಂಘಟನೆ ಕಾರ್ಯ ಮಾಡುವವರು, ಹೀಗಾಗಿ ಯಾವುದೇ ಅಸಮಾಧಾನ ಇಲ್ಲ ಎಂದು ಕಟೀಲ್ ಹೇಳಿದರು

ಪಡಿತರ ಚೀಟಿ ತಿದ್ದುಪಡಿ-ಪರಿಷ್ಕೃತ ದಿನಾಂಕ ಪ್ರಕಟ

Posted by Vidyamaana on 2023-09-06 07:05:24 |

Share: | | | | |


ಪಡಿತರ ಚೀಟಿ ತಿದ್ದುಪಡಿ-ಪರಿಷ್ಕೃತ ದಿನಾಂಕ ಪ್ರಕಟ

ಪುತ್ತೂರು : ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜಿಲ್ಲಾವಾರು ಬದಲಾವಣೆ ಮಾಡಿ ಆಹಾರ ಇಲಾಖೆ ಆದೇಶ ಹೊರಡಿಸಿದೆ.


ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಸಹಿತ ವಿವಿಧ ಜಿಲ್ಲೆಗಳಲ್ಲಿ ಸೆ. 12ರಿಂದ ಸೆ. 14ರ ವರೆಗೆ ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಈ ಮೊದಲು ಸೆ.1 ರಿಂದ ಸೆ. 10ರ ವರೆಗೆ ಪಡಿತರ ಚೀಟಿ ತಿದ್ದುಪಡಿಗೆ ನಿಗದಿಪಡಿಸಿದ್ದ ಆದೇಶವನ್ನು ಇಲಾಖೆ ಹಿಂಪಡೆದಿದೆ. ಪಡಿತರ ಚೀಟಿ ತಿದ್ದುಪಡಿಗೆ ಭರಪೂರ ಅರ್ಜಿ ಸಲ್ಲಿಕೆಯಾಗುತ್ತಿರುವ ಕಾರಣದಿಂದ ಆಹಾರ ಇಲಾಖೆಯ ಸರ್ವ‌್ರನಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ 1 ಗಂಟೆಯಲ್ಲಿ ಸುಮಾರು 500ಕ್ಕೂ ಅಧಿಕ ಅರ್ಜಿ ಸಲ್ಲಿಕೆಯಾಗುತ್ತಿರುವ ಕಾರಣದಿಂದ ಸರ್ವರ್ ಸಮಸ್ಯೆ ಎದುರಾಗಿತ್ತು. ಇದರಿಂದಾಗಿ ಜನರು ಪಡಿತರ ಚೀಟಿ ತಿದ್ದುಪಡಿಗೆ ವಿವಿಧ ಕೇಂದ್ರಗಳನ್ನು ಸಂಪರ್ಕಿಸಿದರೂ ತಿದ್ದುಪಡಿ ಆಗುತ್ತಿರಲಿಲ್ಲ. ಈ ಸಮಸ್ಯೆಯನ್ನು ಗಮನಿಸಿದ ಆಹಾರ ಇಲಾಖೆ ಸರ್ವರ್ ನಿಭಾಯಿಸಲು ಇದೀಗ ಜಿಲ್ಲಾವಾರು ದಿನಾಂಕವನ್ನು ನಿಗದಿಪಡಿಸಿದೆ. ಅದರಂತೆ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಸಹಿತ ವಿವಿಧ ಜಿಲ್ಲೆಗಳಲ್ಲಿ ಸೆ. 12ರಿಂದ ಸೆ. 14ರ ವರೆಗೆ ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ಅವಕಾಶ ಮಾಡಲಾಗಿದೆ.



Leave a Comment: