ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಬೊಂಡ ಕುಡಿಯಿರಿ ಈ ಎಲ್ಲ ಪ್ರಯೋಜನಗಳನ್ನು ಪಡೆಯಿರಿ

Posted by Vidyamaana on 2024-02-25 15:29:49 |

Share: | | | | |


ಬೊಂಡ ಕುಡಿಯಿರಿ ಈ ಎಲ್ಲ ಪ್ರಯೋಜನಗಳನ್ನು ಪಡೆಯಿರಿ

ತೆಂಗಿನ ನೀರುನ್ನು ಆರೋಗ್ಯಕರವೆಂದು ಪರಿಗಣಿಸಲಾಗುತ್ತದೆ. ತೆಂಗಿನ ನೀರಿನಲ್ಲಿ ಅನೇಕ ಪ್ರಮುಖ ಪೋಷಕಾಂಶಗಳು ಇರುತ್ತವೆ. ಇದರಲ್ಲಿ ಆಂಟಿಆಕ್ಸಿಡೆಂಟ್‌ಗಳು, ಅಮೈನೋ ಆಮ್ಲಗಳು, ಕಿಣ್ವಗಳು, ವಿಟಮಿನ್ ಸಿ ಕಂಡುಬರುತ್ತವೆ, ಇದು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ತೆಂಗಿನ ನೀರು ಸೇವನೆಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಆಯಾಸ ಮತ್ತು ದೌರ್ಬಲ್ಯವನ್ನು ತೆಗೆದುಹಾಕುತ್ತದೆ.ಇದಲ್ಲದೆ, ಇದು ಮಧುಮೇಹದಂತಹ ಕಾಯಿಲೆಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ತೆಂಗಿನ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯೋಣ.


ತೆಂಗಿನ ನೀರು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳು

1. ಆಯಾಸ

ತೆಂಗಿನ ನೀರು ಕಡಿಮೆ ಕ್ಯಾಲೋರಿ ಮತ್ತು ಹೆಚ್ಚು ಪೌಷ್ಟಿಕಾಂಶವನ್ನು ಹೊಂದಿದೆ. ಇದರಲ್ಲಿರುವ ಆಯಂಟಿಆಕ್ಸಿಡೆಂಟ್‌ಗಳು ನಿಮಗೆ ಆಯಾಸವಾಗಲು ಬಿಡುವುದಿಲ್ಲ. ಪ್ರತಿದಿನ ಬೆಳಿಗ್ಗೆ ತೆಂಗಿನ ನೀರನ್ನು ಕುಡಿಯುವುದರಿಂದ ಆಯಾಸ ಮತ್ತು ದೌರ್ಬಲ್ಯವನ್ನು ನಿವಾರಿಸಬಹುದು. ಇದರಿಂದ ತ್ವರಿತ ಶಕ್ತಿಯೂ ದೊರೆಯುತ್ತದೆ.

2. ರೋಗ ನಿರೋಧಕ

ತೆಂಗಿನ ನೀರಿನಲ್ಲಿ ಜೀವಸತ್ವಗಳು, ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇವೆಲ್ಲವೂ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ತೆಂಗಿನಕಾಯಿ ನೀರನ್ನು ಪ್ರತಿದಿನ ಕುಡಿದರೆ, ರೋಗನಿರೋಧಕ ಶಕ್ತಿಯನ್ನು ಬಲಪಡಿಸಬಹುದು ಮತ್ತು ಅನೇಕ ರೋಗಗಳನ್ನು ದೂರವಿಡಬಹುದು.

3. ಬೊಜ್ಜು

ತೂಕ ಇಳಿಸಿಕೊಳ್ಳಲು ತೆಂಗಿನ ನೀರಿಗೆ ಪರ್ಯಾಯವಿಲ್ಲ. ತೆಂಗಿನ ನೀರು ಕುಡಿಯುವುದರಿಂದ ದೇಹಕ್ಕೆ ಅಗತ್ಯವಿರುವ ಎಲ್ಲಾ ಅಂಶಗಳನ್ನು ಪೂರೈಸುತ್ತದೆ. ಇದರ ನೀರು ದೀರ್ಘಕಾಲದವರೆಗೆ ಹೊಟ್ಟೆಯನ್ನು ತುಂಬಿರುತ್ತದೆ ಮತ್ತು ನೀವು ಅತಿಯಾಗಿ ತಿನ್ನುವುದನ್ನು ತಪ್ಪಿಸಬಹುದು. ಈ ಕಾರಣದಿಂದಾಗಿ, ತೂಕವನ್ನು ತ್ವರಿತವಾಗಿ ಕಡಿಮೆ ಮಾಡಬಹುದು.

4. ತಲೆನೋವು

ಬಲವಾದ ಸೂರ್ಯನ ಬೆಳಕು ಮತ್ತು ಶಾಖದಿಂದಾಗಿ, ಕೆಲವೊಮ್ಮೆ ನಿರ್ಜಲೀಕರಣದ ಸಮಸ್ಯೆ ಮತ್ತು ಇದ್ದಕ್ಕಿದ್ದಂತೆ ತೀವ್ರ ತಲೆನೋವು ಪ್ರಾರಂಭವಾಗುತ್ತದೆ. ಇದರ ಹಿಂದಿನ ಕಾರಣ ನಿರ್ಜಲೀಕರಣವಾಗಿರಬಹುದು. ಅಂತಹ ಪರಿಸ್ಥಿತಿಯಲ್ಲಿ, ತೆಂಗಿನ ನೀರನ್ನು ಕುಡಿಯುವುದರಿಂದ ದೇಹಕ್ಕೆ ಎಲೆಕ್ಟ್ರೋಲೈಟ್‌ಗಳು ತಕ್ಷಣವೇ ದೊರೆಯುತ್ತವೆ. ಇದರಿಂದ ನೀರಿನ ಕೊರತೆಯನ್ನು ನಿಯಂತ್ರಿಸಲಾಗುತ್ತದೆ ಮತ್ತು ತಲೆನೋವಿನ ಸಮಸ್ಯೆಯನ್ನು ಗುಣಪಡಿಸಬಹುದು.

5. ಮಧುಮೇಹ

ಮಧುಮೇಹ ರೋಗಿಗಳಿಗೆ ತೆಂಗಿನ ನೀರನ್ನು ಅತ್ಯಂತ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ವಾಸ್ತವವಾಗಿ, ಇನ್ಸುಲಿನ್ ಕೊರತೆಯು ಮಧುಮೇಹಕ್ಕೆ ಕಾರಣವಾಗುತ್ತದೆ. ತೆಂಗಿನ ನೀರು ಇನ್ಸುಲಿನ್ ಹೆಚ್ಚಿಸಲು ಕೆಲಸ ಮಾಡುತ್ತದೆ. ಆದ್ದರಿಂದ ಇದನ್ನು ಮಧುಮೇಹಿಗಳಿಗೆ ಒಳ್ಳೆಯದು ಎಂದು ಪರಿಗಣಿಸಲಾಗಿದೆ.

6. ಒತ್ತಡ

ಕೆಲಸದ ಹೊರೆ ಮತ್ತು ಬಿಡುವಿಲ್ಲದ ವೇಳಾಪಟ್ಟಿಯಿಂದ ಒತ್ತಡವು ಮೇಲುಗೈ ಸಾಧಿಸಿದರೆ, ತೆಂಗಿನಕಾಯಿ ನೀರನ್ನು ಕುಡಿಯಬೇಕು. ಇದು ಚಯಾಪಚಯವನ್ನು ಸುಧಾರಿಸುವ ಮೂಲಕ ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದನ್ನು ಕುಡಿಯುವುದರಿಂದ ಮಾನಸಿಕ ಆರೋಗ್ಯವೂ ಸುಧಾರಿಸುತ್ತದೆ.

ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ಸಹಾಯವಾಣಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

Posted by Vidyamaana on 2023-10-08 21:18:37 |

Share: | | | | |


ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ಸಹಾಯವಾಣಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ಇಸ್ರೇಲ್ ವಿರುದ್ಧ ಹಮಾಸ್ ಬಂಡುಕೋರರು ಮತ್ತೆ ಯುದ್ಧ ಸಾರಿಸಿದ್ದಾರೆ. ಪ್ಯಾಲೆಸ್ತೀನ್​ನ ಹಮಾಸ್​​ ಬಂಡುಕೋರರು ನಿನ್ನೆ(ಅ.07) ದಿಢೀರ್​​ ದಾಳಿ ನಡೆಸಿದ್ದು, ಈ ಯುದ್ಧದಲ್ಲಿ ಇದುವರೆಗೆ 300 ಇಸ್ರೇಲಿಯನ್ನರು ಸಾವನ್ನಪ್ಪಿದ್ದಾರೆ. ಮತ್ತು 1750 ಜನರು ಗಾಯಗೊಂಡಿದ್ದಾರೆ.ಈ ನಡುವೆ ಇಸ್ರೇಲ್‌ನಲ್ಲಿ ನಲೆಸಿರುವ ಸಾವಿರಾರು ಭಾರತೀಯರು ನೆಲೆಸಿದ್ದು, ಅದರಲ್ಲೂ ಕನ್ನಡಿಗರು ಸಹ ಇದ್ದಾರೆ. ಸಂಕಷ್ಟಕ್ಕೆ ಸಿಲುಕಿರುವ ಜನರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಅದಕ್ಕಾಗಿಯೇ ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಿದೆ.


ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಪ್ರಸ್ತುತ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಇಸ್ರೇಲ್‌ನಲ್ಲಿ ನಲೆಸಿರುವ ಎಲ್ಲ ಭಾರತೀಯರು ಸುರಕ್ಷಾ ಮತ್ತು ಜಾಗರೂಕರಾಗಿರುವಂತೆ ತಿಳಿಸಿದ್ದಾರೆ. ಜನನಿಬಿಡ ಪ್ರದೇಶಗಳ ಮೇಲೆ ರಾಕೆಟ್ ದಾಳಿ ಮುಂದುವರಿದಿದ್ದು, ಇನ್ನೊಂದೆಡೆ ಇಸ್ರೇಲ್ ಪ್ರವೇಶಿಸಿರುವ ಹಮಾಸ್ ಉಗ್ರರು ಇಸ್ರೇಲಿ ಪ್ರಜೆಗಳನ್ನು ಅಪಹರಿಸುತ್ತಿರುವ ವಿಡಿಯೋ ವೈರಲ್ ಆಗಿರುವ ಹಿನ್ನೆಲೆ ಮನೆಯಿಂದ ಆಚೆ ಬರದಂತೆ ಸೂಚಿಸಲಾಗಿದೆ. ದೇಶದ ಜನರು ಅದರಲ್ಲೂ ಕನ್ನಡಿಗರು ಸಹ ಸ್ಥಳೀಯ ಅಧಿಕಾರಿಗಳ ಸೂಚನೆ ಮತ್ತು ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ವಿನಂತಿಸಿಕೊಂಡಿದ್ದಾರೆ.ಅನಗತ್ಯ ಪ್ರಯಾಣಗಳನ್ನು ತಪ್ಪಿಸಬೇಕು ಮತ್ತು ಸುರಕ್ಷತಾ ಅಶ್ರಯಗಳ ಹತ್ತಿರ ಇರುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಇಸ್ರೇಲಿ ಹೋಮ್ ಫ್ರಂಟ್ ಕಮಾಂಡ್ ವೆಬ್‌ಸೈಟ್ (https://www.oref.org.il/en) ಅಥವಾ ಅವರ ಸಿದ್ಧತೆ ಕರಪತ್ರವನ್ನು ನೋಡಿ. ಯಾವುದೇ ಹೆಚ್ಚಿನ ಮಾರ್ಗದರ್ಶನಕ್ಕಾಗಿ ರಾಯಭಾರ ಕಚೇರಿಯ ಸಿಬ್ಬಂದಿಯನ್ನು ಸಂಪರ್ಕಿಸುವಂತೆ ಹೇಳಲಾಗಿದೆ.


ಸಹಾಯವಾಣಿ ತುರ್ತು ಸಂದರ್ಭದಲ್ಲಿ +97235226748 ನಲ್ಲಿ ಸಂಪರ್ಕಿಸಿ ಅಥವಾ consl.tel[email protected] ನಲ್ಲಿ e-ಮೇಲ್ ಸಂದೇಶವನ್ನು ಕಳುಹಿಸುವಂತೆ ತಿಳಿಸಲಾಗಿದೆ.


ಅಸಿಡಿಟಿಯ ಎದೆ ಉರಿಯನ್ನು ಮತ್ತು ಎದೆ ನೋವಿನ ಉರಿಯನ್ನು ಐಡೆಂಟಿಫೈ ಮಾಡೋದು ತುಂಬಾ ಸುಲಭ: ಡಾ. ಜೆ ಸಿ ಅಡಿಗ


ಅಗತ್ಯವಿರುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ: 080222340676, 08022253707 ಎಂದು ಸರ್ಕಾರ ಸಹಾಯವಾಣಿ ಬಿಡುಗಡೆ ಮಾಡಿದೆ.

ಅಂಕೋಲಾ : ರಿಕ್ಷಾ ಢಿಕ್ಕಿಯಾಗಿ ಗರ್ಭಿಣಿ ಶೋಭಾ ಮೃತ್ಯು

Posted by Vidyamaana on 2023-04-13 06:15:49 |

Share: | | | | |


ಅಂಕೋಲಾ : ರಿಕ್ಷಾ ಢಿಕ್ಕಿಯಾಗಿ ಗರ್ಭಿಣಿ ಶೋಭಾ ಮೃತ್ಯು

ಅಂಕೋಲಾ : ಗರ್ಭಿಣಿ ಮಹಿಳೆಯೋರ್ವಳಿಗೆ ರಿಕ್ಷಾ ಬಡಿದು ಸ್ಥಳದಲ್ಲೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಭಾವಿಕೇರಿಯಲ್ಲಿ ಸಂಭವಿಸಿದೆ. ಶೋಭಾ ಗೋಪಾಲ ನಾಯಕ (28) ಮೃತ ದುರ್ದೈವಿ ಮಹಿಳೆಯಾಗಿದ್ದಾಳೆ.


ಸುಮಾರು 3-4 ತಿಂಗಳ ಗರ್ಭಿಣಿಯಾಗಿದ್ದ ಈಕೆ ತನ್ನ ಮನೆ ಮುಂದಿನ ಟಾರ ರಸ್ತೆ ಪಕ್ಕದ ಕಚ್ಚಾ ಮಣ್ಣಿನ ರಸ್ತೆಯಲ್ಲಿ ತನ್ನ ಗಂಡ ವೈಭವ ನಾಯಕ ಈತನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಜವರಾಯನಂತೆ ಬಂದ ರಿಕ್ಷಾ ಚಾಲಕ ಅತಿ ವೇಗ ಹಾಗೂ ನಿರ್ಲಕ್ಷದಿಂದ ತನ್ನ ವಾಹನವನ್ನು ಚಲಾಯಿಸಿ, ಮಹಿಳೆಗೆ ಜೋರಾಗಿ ಡಿಕ್ಕಿಪಡಿಸಿದ ಪರಿಣಾಮ, ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಅಪಘಾತದ ರಭಸಕ್ಕೆ ಗರ್ಭಿಣಿ ಮಹಿಳೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾಳೆ. ಪಟ್ಟಣದ ಲಕ್ಷೇಶ್ವರ – ಕುಂಬಾರಕೇರಿ ವ್ಯಾಪ್ತಿಯ ಚಾಲಕ ಗರ್ಭಿಣಿ ಮಹಿಳೆಗೆ ಅಪಘಾತಪಡಿಸಿ ತಾನು ಚಲಾಯಿಸುತ್ತಿದ್ದ ರಿಕ್ಷಾ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ..ಅಪಘಾತ ಪಡಿಸಿದ ರಿಕ್ಷಾಕ್ಕೆ ಆತನೇ ಮಾಲಕನೇ ಅಥವಾ ತನ್ನ ಸಂಬಂಧಿಗಳ ರಿಕ್ಷಾವನ್ನು ಈತ ಚಾಲನೆ ಮಾಡುತ್ತಿದ್ದನೇ ಎಂಬ ಅನುಮಾನದ ಮಾತುಗಳು ಕೇಳಿ ಬರುತ್ತಿದ್ದು ಈ ಕುರಿತು ಪೊಲೀಸ್ ತನಿಖೆ ಮುಂದುವರೆದಿದೆ

ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ಅಂಡರ್ ಪಾಸ್ ವೇಶ್ಯಾವಾಟಿಕೆಯ ಅಡ್ಡೆ

Posted by Vidyamaana on 2023-11-02 16:40:48 |

Share: | | | | |


ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ಅಂಡರ್ ಪಾಸ್ ವೇಶ್ಯಾವಾಟಿಕೆಯ ಅಡ್ಡೆ

ಬೆಂಗಳೂರು: ಬೆಂಗಳೂರಿನ ಹೃದಯಭಾಗ ಹಾಗೂ ಅತ್ಯಂತ ಜನನಿಬಿಡ ಪ್ರದೇಶವಾದ ಮೆಜೆಸ್ಟಿಕ್‌ನ ಅಂಡರ್‌ಪಾಸ್‌ನಲ್ಲಿ ನಡೆಯುವ ವೇಶ್ಯಾವಾಟಿಕೆ ದಂಧೆಯ ಕುರಿತು ಯೂಟ್ಯೂಬರ್‌ ವಿಕಾಸ್‌ಗೌಡ ವಿಡಿಯೋ ಮಾಡಿದ್ದಾನೆ.

ವಿಡಿಯೋ ಮಾಡುವಾಗ ಸಿಕ್ಕಿಬಿದ್ದ ಆತನ ಪಾಡು ನಿವೇ ನೋಡಿ...ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್‌ ಅಂಡರ್‌ಪಾಸ್‌ನಲ್ಲಿ ವೇಶ್ಯಾವಾಟಿಕೆ (Bengaluru Majestic Underpass) ನಡೆಯತ್ತದೆ ಎಂದು ಹಲವು ಪ್ರಯಾಣಿಕರು ಹೇಳುತ್ತಾರೆ. ಇನ್ನು ಹಳ್ಳಿಗಳಿಂದ ಬಂದು ಬೆಂಗಳೂರಿನ ಮೆಜೆಸ್ಟಿಕ್‌ ಅಂಡರ್‌ಪಾಸ್‌ ಹಾದುಹೋದ ಎಲ್ಲರ ಬಾಯಲ್ಲಿಯೂ ಇದೇ ಸುದ್ದು ಹರಿದಾಡುತ್ತದೆ.

ಕ್ಲಿಕ್ ಮಾಡಿ 👇

ಮೆಜೆಸ್ಟಿಕ್‌ ಅಂಡರ್‌ಪಾಸ್‌ನಲ್ಲಿ ವೇಶ್ಯಾವಾಟಿಕೆ ದಂಧೆ ದೃಶ್ಯ


ಇನ್ನು ಬೆಂಗಳೂರಿಗರು ಇದನ್ನು ನೋಡಿಯೂ ನೋಡದಂತೆ ದಿನನಿತ್ಯ ಓಡಾಡುತ್ತಿದ್ದಾರೆ. ಇದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ವರದಿ ಮಾಡಿದಾಗ ಪೊಲೀಸರು ಒಂದು ವಾರ ಸಿಬ್ಬಂದಿ ನಿಯೋಜನೆ ಮಾಡಿ ಕ್ರಮ ಕೈಗೊಳ್ಳುತ್ತಾರೆ. ನಂತರ ಅದೇ ಹಾಡು.. ಅದೇ ರಾಗ ಎನ್ನುವಂತೆ ಲೈಂಗಿಕ ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಪುರುಷರನ್ನು ಅಡ್ಡಹಾಕಿ ವೇಶ್ಯಾವಾಟಿಕೆಗೆ ಪುಸಲಾಯಿಸುವ ಘಟನೆಗಳಿ ಕಂಡುಬರುತ್ತವೆ.


ಈಗ ವಿಕಾಸ್‌ಗೌಡ ಎನ್ನುವ ಯೂಟ್ಯೂಬರ್‌ ಮೆಜೆಸ್ಟಿಕ್‌ ಅಂಡರ್‌ಪಾಸ್‌ನಲ್ಲಿ ವಿಡಿಯೋ ಮಾಡಿದ್ದು, ಆತನಿಗೆ ದಂಧೆ ಮಾಡುವವರು ಕೊಟ್ಟ ಕಿರುಕುಳವನ್ನು ನಿವೇ ಕಣ್ಣಾರೆ ನೋಡಬಹುದು.ಪೊಲೀಸ್‌ ಇಲಾಖೆಯಿಂದ ರಾಜ್ಯಾದ್ಯಂತ ಎಲ್ಲೇ ವೇಶ್ಯಾವಾಟಿಕೆ ದಂಧೆ ನಡೆದರೂ ಅವರನ್ನು ಮುಲಾಜಿಲ್ಲದೇ ಬಂಧಿಸಿ ಕಠಿಣ ಕ್ರಮವನ್ನು ಕೈಗೊಳ್ಳಲಾಗುತ್ತದೆ. ಇನ್ನು ಲೈಂಗಿಕ ಅಲ್ಪ ಸಂಖ್ಯಾತರು ಕೂಡ ದಂಧೆ ನಡೆಸದಂತೆ ಕಠಿಣ ಕ್ರಮ ಕೈಗೊಂಡಿದ್ದಾರೆ. ಆದರೆ, ರಾಜ್ಯ ರಾಜಧಾನಿ ಬೆಂಗಳೂರಿನ ಹೃದಯಭಾಗ ಮೆಜೆಸ್ಟಿಕ್‌ನ ಅಂಡರ್‌ಪಾಸ್‌ನಲ್ಲಿ (ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಿಂದ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಅಂಡರ್‌ಪಾಸ್‌) ವೇಶ್ಯಾವಾಟಿಕೆ ದಂಧೆ ಮಾಡಲಾಗುತ್ತಿದೆ ಎಂದರೆ ನಾಚಿಕೆಗೇಡಿನ ವಿಚಾರವಾಗಿದೆ.ವಿಡಿಯೋ ಮಾಡುತ್ತಿದ್ದವನನ್ನು ತಡೆದು ಡಿಲೀಟ್‌ ಮಾಡಿಸಿದ್ರು: ಮೆಜೆಸ್ಟಿಕ್‌ ಅಂಡರ್‌ಪಾಸ್‌ನಲ್ಲಿ ಯೂಟ್ಯೂಬರ್‌ ವಿಕಾಸ್‌ಗೌಡ ಸೆಲ್ಫಿ ವಿಡಿಯೋ ಮಾಡುತ್ತಾ ನಡೆದುಕೊಂಡು ಹೋಗುತ್ತಾನೆ. ಆಗ ಪಕ್ಕದಲ್ಲಿಯೇ ಮಹಿಳೆಯೊಬ್ಬರು ವ್ಯಕ್ತಿಯನ್ನು ನಿಲ್ಲಿಸಿಕೊಂಡು ವ್ಯವಹಾರ ಕುದುರಿಸುತ್ತಿರುವ ವಿಡಿಯೋ ಕೂಡ ಸೆರೆಯಾಗಿದೆ. ಜೊತೆಗೆ, ಮುಂದಕ್ಕೆ ಹೋಗುತ್ತಿದ್ದಂತೆ ಐದಾರು ಜನರು ಸೇರಿಕೊಂಡು ಯ್ಯೂಟೂಬರ್‌ನನ್ನು ಪ್ರಶ್ನೆ ಮಾಡಿ ವಿಡಿಯೋ ಮಾಡದಂತೆ ಹೇಳಿದ್ದಾರೆ. ನಂತರ, ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದ ಎಲ್ಲ ವಿಡಿಯೋ ಡಿಲೀಟ್‌ ಮಾಡಿಸಿದ್ದಾರೆ. ನಂತರ, ಅವರ ಎಲ್ಲ ಮಾಹಿತಿಯನ್ನು ಪಡೆದುಕೊಂಡು ಅಲ್ಲಿಂದ ಕಳಿಸಿದ್ದಾರೆ. ಕೊನೆಗೆ ಒಬ್ಬ ಮಹಿಳೆ ಯ್ಯೂಟೂಬರ್‌ನನ್ನು ದಂಧೆಗೆ ಪುಸಲಾಯಿಸಿದ ಘಟನೆ ಕೂಡ ನಡೆದಿದೆ.


ಕಾಲೇಜು ಹುಡುಗರು, ಅಂಕಲ್‌ಗಳು ಯಾರೇ ವ್ಯಕ್ತಿಗಳು ಇದ್ದರೂ ಜನಸಾಮಾನ್ಯರನ್ನು ತಮ್ಮ ವೇಶ್ಯಾವಾಟಿಕೆಗೆ ಕರೆದು ಮುಜುಗರ ಉಂಟುಮಾಡುತ್ತಿದ್ದಾರೆ. ಇದಕ್ಕೆ ಪೊಲೀಸರು ಕ್ರಮ ಕೈಗೊಳ್ಳಬೇಕು. ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆದು ನಿಂತಿರುವ ಬೆಂಗಳೂರಿನ ಹೃದಯ ಭಾಗದಲ್ಲಿಯೇ ಇಂತಹ ಘಟನೆಗಳು ನಡೆಯುತತಿರುವುದರಿಂದ ಬೆಂಗಳೂರು ಸುರಕ್ಷಿತ ತಾಣವಲ್ಲ ಎಂಬ ಭಾವನೆಯೂ ಬರುತ್ತದೆ. ಆದ್ದರಿಂದ ಮೆಜೆಸ್ಟಿಕ್‌ ಅಂಡರ್‌ಪಾಸ್‌ನಲ್ಲಿ ಪ್ರಯಾಣಿಕರಿಗೆ ಸುರಕ್ಷೆ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಯ್ಯೂಟೂಬರ್‌ ಬ್ಲಾಗರ್‌ ಮನವಿ ಮಾಡಿಕೊಂಡಿದ್ದಾನೆ

ಸೌಜನ್ಯ ಪ್ರಕರಣ: ಮರುತನಿಖೆಗೆ ಇಳಂತಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮನವಿ

Posted by Vidyamaana on 2023-08-24 07:53:44 |

Share: | | | | |


ಸೌಜನ್ಯ ಪ್ರಕರಣ: ಮರುತನಿಖೆಗೆ ಇಳಂತಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮನವಿ

ಇಳಂತಿಲ: ಸೌಜನ್ಯ ಹತ್ಯೆಯ ಮರುತನಿಖೆಗೆ ಇಳಂತಿಲ ಒಕ್ಕಲಿಗ ಗ್ರಾಮ ಸಮಿತಿಯಿಂದ ಆ.24ರಂದು ಆಡಳಿತಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಒಕ್ಕಲಿಗ ಗ್ರಾಮ ಸಮಿತಿ ಇಳಂತಿಲ ಇದರ ಅಧ್ಯಕ್ಷ ಪುರಂಧರ ಗೌಡ ತುಂಬ, ಪ್ರಧಾನ ಕಾರ್ಯದರ್ಶಿ ವಿಜೇತ್ ಕುಮಾರ್ ನೇಜಿಕಾರ್ ಹಾಗೂ ಊರ ಪ್ರಮುಖರಾದ ಜಾರಪ್ಪ ಗೌಡ ದಂಡುಗ, ಕಡಿಗೇರಿ ಬಾಲಕ್ರಷ್ಣ ಗೌಡ, ಪೂವಪ್ಪ ಗೌಡ ಅರ್ಬಿ, ನಾರಾಯಣ ಗೌಡ ಕುಮೇರ್ಜಾಲ್, ತಿಮ್ಮಪ್ಪ ಗೌಡ ಬೊಬ್ಬೆ, ದಾಸಪ್ಪ ಗೌಡ ಕೋಡಿಯಡ್ಕ ಹಾಗೂ ಸಮಿತಿಯ ಪಧಾದಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು.

ಪ್ರೇಮಿಗಳ ದಿನಾಚರಣೆ: ಶಾಸ್ರ್ತೋಕ್ತವಾಗಿ ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್!‌

Posted by Vidyamaana on 2024-02-14 20:38:30 |

Share: | | | | |


ಪ್ರೇಮಿಗಳ ದಿನಾಚರಣೆ: ಶಾಸ್ರ್ತೋಕ್ತವಾಗಿ ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್!‌

ಬೆಂಗಳೂರು : ಇಂದು ಪ್ರೇಮಿಗಳ ದಿನಾಚರಣೆ ಹಿನ್ನೆಲೆ ವಾಟಾಳ್ ನಾಗರಾಜ್ ವಿಶೇಷ ರೀತಿಯಲ್ಲಿ ಆಚರಣೆ‌ ಮಾಡಿದ್ದು ಕತ್ತೆಗಳಿಗೆ ಮದುವೆ ಮಾಡಿಸಿ ಪ್ರೇಮಿಗಳ ದಿನದ ಶುಭಕೋರಿದ್ದಾರೆ.ಒಂದು ಕತ್ತೆಗೆ ಸೀರೆ, ಮತ್ತೊಂದು ಕತ್ತೆ ಪಂಚೆ ತೊಡಿಸಿ ಮದುವೆ ನಗರದ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ನಡೆದ ವಿನೂತನ ಮದುವೆ ಹಣ್ಣು, ತಾಂಬೂಲ ಸೇರಿದಂತೆ ಶಾಸ್ರ್ತೋಕ್ತವಾಗಿ ಕತ್ತೆಗಳಿಗೆ ಮದುವೆ ಕತ್ತೆಗೆ ತಾಳಿ ಹಾಕಿ ಮದುವೆ ಮಾಡಿಸಿದ ಕನ್ನಡ ಪಕ್ಷದ ವಾಟಾಳ್ ವಿಶ್ವದೆಲ್ಲಡೆ ಇಂದು ಪ್ರೇಮಿಗಳು ಅವರ ದಿನ ಆಚರಣೆ ಮಾಡುತ್ತಿದ್ದಾರೆ ಅವರಿಗೆಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಲ್ಲರೂ ಪ್ರೀತಿಸಬೇಕು.. ಯಾರೂ ಕೂಡ ಹಿಂಜರಿಕೆ ಮಾಡಬಾರದು ಸರ್ಕಾರ ಪ್ರೇಮಿಗಳಿಗೆ ಪ್ರೋತ್ಸಾಹ ನೀಡಬೇಕು, ಭದ್ರತೆ ಕೊಡಬೇಕುಕಾನೂನಿನಲ್ಲಿ ಬದಲಾವಣೆ ಮಾಡಿ ಪ್ರೇಮಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು


ಪ್ರೇಮಿಗಳ ಭದ್ರತೆಗಾಗಿ ಸರ್ಕಾರದ ಕಾನೂನು ಜಾರಿ ಮಾಡಬೇಕು ಕಾಯಿದೆ ರೂಪಿಸಬೇಕು.. ಪ್ರೇಮಿಗಳಿಗೆ ಸರ್ಕಾರವೇ ಉತ್ತೇಜನ ಕೊಡಬೇಕು ಪ್ರತಿ ತಿಂಗಳಿಗೆ ಪ್ರೇಮಿಗಳಿಗೆ 1.50 ಲಕ್ಷ ರೂಪಾಯಿ ಪ್ರೋತ್ಸಾಹನ ಧನ ನೀಡಬೇಕುಯಾವುದೇ ಸಂಘಟನೆಗಳು ಪ್ರೇಮಿಗಳಿಗೆ ತೊಂದರೆ ಕೊಟ್ಟರೆ ಸಹಿಸಿಕೊಳ್ಳಲು ಆಗಲ್ಲ ಪ್ರೇಮಿಗಳಿಗೆ ತೊಂದರೆ ಕೊಡುವ ಸಂಘಟನೆಗಳ ವಿರುದ್ಧ ಸರ್ಕಾರ ಕ್ರಮ ತಗೋಬೇಕು ಎಂದು ಹೇಳಿದರು.



Leave a Comment: