ಉಡುಪಿ: ನಾಳೆ (ಜು.09)ರಂದು ಶಾಲಾ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿಗಳು News

Posted by vidyamaana on 2024-07-08 17:22:55 |

Share: | | | | |


ಉಡುಪಿ: ನಾಳೆ (ಜು.09)ರಂದು ಶಾಲಾ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ಜು.09 ರಂದು ರೆಡ್ ಅಲರ್ಟ್ ಘೋಷಿಸಿದ್ದು ಅದರಂತೆ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಮಂಗಳವಾರ ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜು.9ರಂದು ರಜೆ ಘೋಷಿಸಿ ಉಡುಪಿ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ

 Share: | | | | |


ಕ್ರಿಕೆಟ್ ಆಡುತ್ತಲೇ ಹೃದಯಾಘಾತ… ಆಸ್ಪತ್ರೆ ದಾರಿಯಲ್ಲೇ ಕೊನೆಯುಸಿರು

Posted by Vidyamaana on 2024-01-10 14:39:27 |

Share: | | | | |


ಕ್ರಿಕೆಟ್ ಆಡುತ್ತಲೇ ಹೃದಯಾಘಾತ… ಆಸ್ಪತ್ರೆ ದಾರಿಯಲ್ಲೇ ಕೊನೆಯುಸಿರು

ನೋಯ್ಡಾ: ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದು ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಪ್ರತಿದಿನ ಹೃದಯಾಘಾತದಿಂದ ಯುವಕರು ಸಾವನ್ನಪ್ಪುತ್ತಿರುವ ವರದಿಗಳು ಬರುತ್ತಿವೆ. ಇದೀಗ ನೋಯ್ಡಾದಿಂದ ಅಂತಹುದೇ ಪ್ರಕರಣವೊಂದು ಬಂದಿದ್ದು, ಕ್ರಿಕೆಟ್ ಮ್ಯಾಚ್ ಆಡುತ್ತಿದ್ದ ವ್ಯಕ್ತಿಯೊಬ್ಬ ರನ್ ತೆಗೆದುಕೊಳ್ಳುವಾಗ ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ನೋಡಲು ಕ್ಲಿಕ್ ಮಾಡಿ

ಈ ವೇಳೆ ಅಲ್ಲಿದ್ದ ಇತರ ಆಟಗಾರರು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆದರೆ ಅಷ್ಟರಲ್ಲಿ ವ್ಯಕ್ತಿ ಮೃತಪಟ್ಟಿದ್ದರು ಎನ್ನಲಾಗಿದೆ.ಈ ಘಟನೆಯು ಥಾನಾ ಎಕ್ಸ್‌ಪ್ರೆಸ್‌ವೇ ಪ್ರದೇಶದ ಸೆಕ್ಟರ್ -135 ರಲ್ಲಿ ನಡೆದಿದ್ದು, ಇಲ್ಲಿನ ಕ್ರೀಡಾಂಗಣದಲ್ಲಿ ಶನಿವಾರ ಕೆಲವು ಮಂದಿ ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಉತ್ತರಾಖಂಡ ಮೂಲದ 36 ವರ್ಷದ ವಿಕಾಸ್ ನೇಗಿ ಬ್ಯಾಟಿಂಗ್‌ಗೆ ಬಂದಿದ್ದರು. ಆಟದ ವೇಳೆ ವಿಕಾಸ್ ರನ್ ತೆಗೆದುಕೊಳ್ಳಲು ಓದಿದ್ದಾರೆ ಆದರೆ ಇದರ ನಡುವೆ ಹೃದಯಾಘಾತಕ್ಕೆ ಒಳಗಾಗಿ ಪಿಚ್ ನಲ್ಲೇ ಕುಸಿದು ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಇತರ ಆಟಗಾರರು ವಿಕಾಸ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಆದರೆ ಅಷ್ಟೊತ್ತಿಗಾಗಲೇ ತಡವಾಗಿತ್ತು. ವಿಕಾಸ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ವಿಕಾಸ್ ರನ್ ತೆಗೆದುಕೊಳ್ಳಲು ಓಡಿ ನಂತರ ಪಿಚ್ ಮೇಲೆ ಬೀಳುವುದು ಕಂಡುಬಂದಿದೆ.

ಆಗುಂಬೆ ಘಾಟ್ ನಲ್ಲಿ ಗುಡ್ಡ ಕುಸಿತ: ಭಾರಿ ವಾಹನಗಳ ಸಂಚಾರ ನಿಷೇಧ

Posted by Vidyamaana on 2024-07-14 14:01:05 |

Share: | | | | |


ಆಗುಂಬೆ ಘಾಟ್ ನಲ್ಲಿ ಗುಡ್ಡ ಕುಸಿತ: ಭಾರಿ ವಾಹನಗಳ ಸಂಚಾರ ನಿಷೇಧ

ಶಿವಮೊಗ್ಗ: ವರುಣಾರ್ಭಟಕ್ಕೆ ಆಗುಂಬೆ ಘಾಟ್ ನಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ 5ನೇ ತಿರುವಿನಲ್ಲಿ ಗುಡ್ಡ ಕುಸಿತವುಂತಾಗಿದ್ದು, ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಪಿ.ಎಚ್.ಡಿ. ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ : ಉಳ್ಳಾಲ ಠಾಣೆಗೆ ಪುತ್ತಿಲ ಭೇಟಿ ; ಠಾಣಾಧಿಕಾರಿಗಳ ಜೊತೆ ಮಾತುಕತೆ

Posted by Vidyamaana on 2024-02-28 07:52:06 |

Share: | | | | |


ಪಿ.ಎಚ್.ಡಿ. ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ : ಉಳ್ಳಾಲ ಠಾಣೆಗೆ ಪುತ್ತಿಲ ಭೇಟಿ ; ಠಾಣಾಧಿಕಾರಿಗಳ ಜೊತೆ ಮಾತುಕತೆ

ಮಂಗಳೂರು : ಪಿಎಚ್ ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಉಳ್ಳಾಲ ಠಾಣೆಗೆ ಭೇಟಿ ನೀಡಿ ಠಾಣಾಧಿಕಾರಿಗಳ ಜೊತೆ ಮಾತುಕತೆ ನಡೆಸಿದರು.ಗಾಂಜಾ ಪ್ರಕರಣದ ಆರೋಪಿ, ಡ್ರಗ್ಸ್ ಪೆಡ್ಲರ್ ಶಾರೂಕ್ ಶೇಕ್ ಎಂಬಾತ ಡ್ರಗ್ಸ್ ಹಾಗೂ ಇನ್ನಿತರ ಮೋಸದಾಟವಾಡಿ ಆಕೆಯನ್ನು ಅಪಹರಿಸಿರುವುದು ಸ್ಪಷ್ಟವಾಗಿದೆ ಎನ್ನಲಾಗುತ್ತಿದೆ.ಎಂಎಸ್ಸಿ ಪೂರೈಸಿದ್ದ ಚೈತ್ರಾ ಹೆಬ್ಬಾರ್ ದೇರಳಕಟ್ಟೆಯ ಖಾಸಗಿ ಯುನಿವರ್ಸಿಟಿಯಲ್ಲಿ ಪಿಎಚ್ ಡಿ ಮಾಡುತ್ತಿದ್ದಳು. ಕೋಟೆಕಾರು ಬಳಿಯ ಮಾಡೂರಿನಲ್ಲಿ ಪಿಜಿ ಒಂದರಲ್ಲಿದ್ದ ಯುವತಿಯನ್ನು ಫೆ.17ರಂದು ರೈಲಿನಲ್ಲಿ ಶಾರೂಕ್ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದು ಇಲಾಖೆ ತೀವ್ರ ತನಿಖೆ ನಡೆಸುತ್ತಿದ್ದು ಇನ್ನು ಕೆಲವೇ ದಿನಗಳಲ್ಲಿ ಆಕೆಯನ್ನು ಕರೆತರಲಾಗುವುದು ಎಂದು ಠಾಣಾಧಿಕಾರಿ ತಿಳಿಸಿದರು.


ಶಾರುಕ್ ಶೇಖ್ ಕತಾರಿನಲ್ಲಿದ್ದಾಗ ಪ್ರಕರಣ ಒಂದರಲ್ಲಿ ಸಿಕ್ಕಿಬಿದ್ದು ಜೈಲು ಪಾಲಾಗಿದ್ದ ಎನ್ನಲಾಗಿದೆ. ಆನಂತರ ಊರಿಗೆ ಬಂದು ಡ್ರಗ್ಸ್ ಪೆಡ್ಲರ್ ಆಗಿ ಹಲವು ಯುವ ಜನತೆಯನ್ನು ಡ್ರಗ್ಸ್ ಜಾಲಕ್ಕೆ ಸಿಲುಕಿಸುತ್ತಿದ್ದ ಎನ್ನಲಾಗಿದೆ.ಯಾವುದೇ ಉದ್ಯೋಗ ಇಲ್ಲದ ಶಾರೂಖ್ ಗಾಂಜಾ ವ್ಯವಹಾರದ ಹಣದಲ್ಲೇ ಬದುಕುತಿದ್ದ ಎನ್ನಲಾಗಿದೆ.


ಠಾಣಾಧಿಕಾರಿ ಜೊತೆ ಮಾತನಾಡಿದ ಪುತ್ತಿಲ, ಡ್ರಗ್ ಪೆಡ್ಲರ್ ಶಾರೂಕ್ ನನ್ನು ಶೀಘ್ರ ಬಂಧಿಸಿ ಈತನ ಜಾಲದ ಹಿಂದಿನ ಕಾಣದ ಕೈಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದರು.ಈಗಾಗಲೇ ಉಳ್ಳಾಲದಲ್ಲಿ ಡ್ರಗ್ಸ್ ಜಾಲದಲ್ಲಿ ಯುವತಿಯರನ್ನು ಸಿಲುಕಿಸಿ ಲವ್ ಜಿಹಾದ್ ಮೂಲಕ ಭಯೋತ್ಪಾದನೆಗೆ ಸಿಲುಕಿಸಿರುವುದು ಗೊತ್ತಿರುವಾಗ ಈ ಪ್ರಕರಣವನ್ನು ಗಂಭೀರ ಪ್ರಕರಣವೆಂದು ಪರಿಗಣಿಸಬೇಕು ಎಂದರು. ಉಳ್ಳಾಲದಲ್ಲಿ ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತಿರುವುದು ಇಡೀ ಜಿಲ್ಲೆಗೆ ಅಪಾಯಕಾರಿ ಬೆಳವಣಿಗೆ, ಇದನ್ನು ಮಟ್ಟ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲೆಗೆ ಮಾರಕವಾಗಲಿದೆ ಎಂದು ಅರುಣ್ ಪುತ್ತಿಲ ಠಾಣಾಧಿಕಾರಿಗಳಲ್ಲಿ ಹೇಳಿದರು.


ಶಿಕ್ಷಣ ಕಾಶಿಯಾಗಿರುವ ತುಳುನಾಡಿನಲ್ಲಿ ಕೆಲಸ ಇಲ್ಲದ ಕೆಲ ಯುವಕರು ಗಾಂಜಾ ಡ್ರಗ್ಸ್ ವ್ಯವಹಾರ ಮೂಲಕ ವಿದ್ಯಾರ್ಥಿಗಳ ಜೀವನವನ್ನೇ ಹಾಳು ಮಾಡುತ್ತಿದ್ದಾರೆ. ಕೆಲಸ ಇಲ್ಲದೆ ಶೋಕಿ ಮಾಡುವ ಕೆಲವರ ಬಗ್ಗೆ ಇಲಾಖೆ ಗಮನಿಸಬೇಕು ಹಾಗೂ ಪಿಜಿಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದರುಪೊಲೀಸ್ ಇಲಾಖೆಯವರು ಇದಕ್ಕೆ ಸೂಕ್ತ ರೀತಿ ಸ್ಪಂದಿಸುವುದಾಗಿ ಭರವಸೆ ನೀಡಿದರು. ಆಕೆ ಆಗಮಿಸಿದ ಕೂಡಲೇ ಸೂಕ್ತ ಹಾಸ್ಟೇಲ್ ವ್ಯವಸ್ಥೆಗೆ ಕುಟುಂಬಸ್ಥರ ಜೊತೆ ಮಾತುಕತೆ ನಡೆಸಬೇಕೆಂದು ಪುತ್ತಿಲರ ಜೊತೆ ಠಾಣಾಧಿಕಾರಿ ಹೇಳಿದರು.


ಉಳ್ಳಾಲದ ಹಿಂದೂ ಮುಖಂಡ ಅರುಣ್ ಉಳ್ಳಾಲ, ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲ್ ಸಹಿತ ಪ್ರಮುಖರು ಉಪಸ್ಥಿತರಿದ್ದರು.

BREAKING : ಕೌಟುಂಬಿಕ ಕಲಹದ ಹಿನ್ನೆಲೆ ಬಾಮೈದನನ್ನು ಭೀಕರವಾಗಿ ಹತ್ಯೆಗೈದ ಭಾವ

Posted by Vidyamaana on 2024-04-09 22:58:30 |

Share: | | | | |


BREAKING : ಕೌಟುಂಬಿಕ ಕಲಹದ ಹಿನ್ನೆಲೆ ಬಾಮೈದನನ್ನು ಭೀಕರವಾಗಿ ಹತ್ಯೆಗೈದ ಭಾವ

ಬೆಂಗಳೂರು : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಭಾವನಿಂದ ಭಾಮೈದನ ಹತ್ಯೆಗೆ ಈಡಗಿರುವ ಘಟನೆ ಬೆಂಗಳೂರಿನ ವೆಂಕಟೇಶಪುರದಲ್ಲಿ ನಡೆದಿದೆ.ಹೌದು ಕಿರಣ್ ಕುಮಾರ್ (32) ಹತ್ಯೆಗೆ ಈಡಾದ ವ್ಯಕ್ತಿಯಾಗಿದ್ದಾನೆ.ಚಾಕುವಿನಿಂದ ಇರಿದು ಭಾಮೈದನನ್ನು ಭಾವ ಲಕ್ಷ್ಮಣ ಎನ್ನುವವರು ಭೀಕರವಾಗಿ ಹತ್ಯೆಗೈದಿದ್ದಾರೆ.

ಕುಟ್ರುಪಾಡಿ: ಕಾಡಾನೆ ದಾಳಿ ಹಾಲು ಸೊಸೈಟಿ ಸಿಬ್ಬಂದಿ ರಂಜಿತಾ ಮತ್ತು ರಮೇಶ್ ರೈ ಮೃತ್ಯು.

Posted by Vidyamaana on 2023-02-20 02:42:04 |

Share: | | | | |


ಕುಟ್ರುಪಾಡಿ: ಕಾಡಾನೆ ದಾಳಿ ಹಾಲು ಸೊಸೈಟಿ ಸಿಬ್ಬಂದಿ ರಂಜಿತಾ ಮತ್ತು ರಮೇಶ್ ರೈ ಮೃತ್ಯು.

ಕಡಬ: ಕುಟ್ರುಪಾಡಿ ಗ್ರಾಮದ ಮೀನಾಡಿ ಸಮೀಪ ಮುಂಜಾನೆ ಆನೆ ದಾಳಿ ನಡೆಸಿದ್ದು ಯುವತಿ ಸಹಿತ ಇಬ್ಬರು ಮೃತಪಟ್ಟಿದ್ದಾರೆ.

ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ ಎಂಬವರು ಸೊಸೈಟಿ ಗೆ ಮನೆಯಿಂದ ಹೋಗುತ್ತಿದ್ದ ವೇಳೆ ಮೀನಾಡಿ ಎಂಬಲ್ಲಿ ಆನೆ ದಾಳಿ ನಡೆಸಿದೆ. ಇದೇ ವೇಳೆ ಸ್ಥಳದಲ್ಲಿದ್ದ ಸ್ಥಳೀಯ ನಿವಾಸಿ ರಮೇಶ್ ರೈ ಎಂಬವರ ಮೇಲೆ ಆನೆ ಅಟ್ಟಹಾಸ ಮೆರೆದಿದೆ. ರಮೇಶ್ ರೈ ಸ್ಥಳದಲ್ಲಿ ಮೃತಪಟ್ಟರೆ ರಂಜಿತ ಅವರು ನೆಲ್ಯಾಡಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ಬರಬೇಕಿದೆ.

ಆಲಂಕಾರಿನ ಉದ್ಯಮಿ ನದಿಗೆ ಹಾರಿ ಆತ್ಮಹತ್ಯೆ

Posted by Vidyamaana on 2023-05-26 06:28:55 |

Share: | | | | |


ಆಲಂಕಾರಿನ ಉದ್ಯಮಿ ನದಿಗೆ ಹಾರಿ ಆತ್ಮಹತ್ಯೆ

ಕಡಬ : ಆಲಂಕಾರಿನ ಉದ್ಯಮಿಯೊಬ್ಬರು ಶುಕ್ರವಾರ ಮುಂಜಾನೆ ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಾಂತಿಮೊಗರಿನಿಂದ ವರದಿಯಾಗಿದೆ.

ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ಕುಮಾರಧಾರ ನದಿಗೆ ಹಾರಿದ ಬಗ್ಗೆ ವರದಿಯಾಗಿದೆ.

ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಚಂದ್ರಶೇಖರ (60) ಆತ್ಮಹತ್ಯೆ ಮಾಡಿಕೊಂಡವರು. ಶಾಂತಿಮೊಗರು ಸೇತುವೆಯ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿ ನೀರಿಗೆ ಹಾರಿದ್ದಾರೆ ಎನ್ನಲಾಗಿದೆ.

ಸ್ಥಳದಲ್ಲಿ ನೂರಾರು ಜನರು ಸೇರಿದ್ದು, ಮೃತ ಶರೀರವನ್ನು ನದಿಯಿಂದ ಮೇಲಕ್ಕೆತ್ತಲಾಗಿದೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮೃತರು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಆಲಂಕಾರು ಶ್ರೀ ದುರ್ಗಾಂಬಾ ಕಲಾ ಸಂಘದಲ್ಲೂ ಸಕ್ರೀಯರಾಗಿದ್ದರು. ಯಕ್ಷಗಾನ ಅರ್ಥದಾರಿಯೂ ಆಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.



Leave a Comment: