ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಕ್ರಿದ್ ಸಡಗರ

Posted by Vidyamaana on 2024-06-17 21:21:40 |

Share: | | | | |


ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಕ್ರಿದ್ ಸಡಗರ

ಪುತ್ತೂರು : ಈದ್-ಉಲ್-ಅಝ್‌ಹಾ ಬಕ್ರಿದ್ ಹಬ್ಬವನ್ನು ಜಿಲ್ಲೆಯಾದ್ಯಂತೆ ಸಡಗರದಿಂದ ಆಚರಿಸಲಾಯಿತು 

ಪುತ್ತೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಸೀದಿ, ಈದ್ಗಾಗಳಲ್ಲಿ ನಡೆದ ಸಾಮೂಹಿಕ ನಮಾಜ್‌ ಭಕ್ತಿ-ಭಾವದ ಅಲೆಯನ್ನು ಎಬ್ಬಿಸಿತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Posted by Vidyamaana on 2023-07-23 12:44:06 |

Share: | | | | |


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಮಂಗಳೂರು : ಹವಾಮಾನ ಇಲಾಖೆಯು ಮುಂದಿನ 24 ಗಂಟೆಗಳಲ್ಲಿ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಈ 11 ಜಿಲ್ಲೆಯಲ್ಲಿ ಶಿವಮೊಗ್ಗ ಜಿಲ್ಲೆಯೂ ಸೇರ್ಪಡೆಗೊಂಡಿದೆ.ಬೆಳಗಾವಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಸಂಭವ್ಯವಿದೆ.ಬಾಗಲಕೋಟೆ, ಚಿತ್ರದುರ್ಗ, ಗದಗ ಮತ್ತು ಮೈಸೂರಿನಲ್ಲಿ ಚದುರಿದ ಮಳೆ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯನಗರ ರಾಯಚೂರು, ಚಾಮರಾಜ್ ನಗರ ಮತ್ತು ಮಂಡ್ಯದಲ್ಲಿ ತುಂತುರು ಮಳೆ ಬೀಳುವ ಸಾಧ್ಯತೆ ಇದೆ. ಕಲ್ಬುರ್ಗಿಯಲ್ಲಿ ಅತಿಸಾಧಾರಣ ಮಳೆ ಬೀಳುವ ಸಂಭವವಿದೆ.


ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಆಗುಂಬೆ, ಹೊಸನಗರದ ಸೊನಾಲೆ, ತ್ರಿಣಿವೆ, ಸುಳಗೋಡು, ಮೇಲಿನ ಬೆಸಿಗೆ, ನಗರ, ಮುಂಬಾರು ತೀರ್ಥಹಳ್ಳಿಯ ಹಾದಿಗಲ್ಲು, ಬಿದರಗೋಡು, ಹೊನ್ನೆತಾಳುವಿನಲ್ಲಿ ಉತ್ತಮ ಮಳೆಯಾಗಿದೆ.ಜಿಲ್ಲೆಯ ಪ್ರಮುಖ ಜಲಾಶಯಗಳ ಮಟ್ಟ

ಚಿಕ್ಕಮಗಳೂರಿನ 10 ಗ್ರಾಮಪಂಚಾಯಿತಿಗಳಲ್ಲಿ ಉತ್ತಮ ಮಳೆತಾಗಿದ್ದು ಇದರಿಂದ ತುಂಗ ಜಲಾಶಯದಲ್ಲಿ ಒಳಹರಿವು ಹೆಚ್ಚಳವಾಗಿದೆ. ನಿನ್ನೆ ರಾತ್ರಿ 35 ಸಾವಿರ ಕ್ಯೈಸೆಕ್ ನೀರು ಹರಿಬರುತ್ತಿದ್ದು ಬೆಳಗಿನ ಜಾವದ ಸಮಯದಲ್ಲಿ ಮಳೆ ಕಡಿಮೆಯಾದ ಕಾರಣ ಜಲಾಶಯಕ್ಕೆ 20 ಸಾವಿರ ಕ್ಯೂಸೆಕ್ ನೀರು ಹರಿದು ಬಂದಿತ್ತು.


ಈಗ ಮಳೆ ಹೆಚ್ಚಾದ ಕಾರಣ 40 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ತುಂಗ ನದಿಯ ಗಾಜನೂರು ಜಲಾಶಯದಲ್ಲಿ 21 ಗೇಟು ತೆರೆದು ಹರಿಬಿಡಲಾಗುತ್ತಿದೆ.ಅದರಂತೆ ಭದ್ರೆಯ ಒಖಹರಿವು ಹೆಚ್ಚಳವಾಗಿದೆ. 186 ಅಡಿ ಎತ್ತರದ ಜಲಾಶಯದಲ್ಲಿ ಪ್ರಸ್ತುತ 145ಅಡಿ ನೀರು ಸಂಗ್ರಹವಾಗಿದೆ. 12165 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಇಷ್ಟು ಹೊತ್ತಿಗೆ ಭದ್ರ ಡ್ಯಾಂ ತುಂಬಿ ಗೇಟ್ ಓಪನ್ ಮಾಡಲಾಗಿತ್ತು. 184 ಅಡಿ ನೀರು ಸಂಗ್ರಹವಾಗಿತ್ತು. ಜು.18, 2022 ರಂದು ಜಲಾಶಯದಿಂದ ನದಿಗೆ ನೀರು ಹರಿಸಲಸಗಿತ್ತು.


ಅದರಂತೆ ಲಿಂಗನ ಮಕ್ಕಿ ಜಲಾಶಯದಲ್ಲಿ 52,374 ಕ್ಯೂಸೆಕ್ ನೀರು ಹರಿದು ಬರುತ್ತಿದೆ. 1819 ಅಡಿ ಎತ್ತರದ ಜಲಾಶಯದಲ್ಲಿ ಸಧ್ಯಕ್ಕೆ 1770.70 ಅಡಿ ನೀರು ಸಂಗ್ರಹವಾಗಿದೆ. ನಿನ್ನೆ 1767.30 ಅಡಿ ನೀರು ಸಂಗ್ರಹವಾಗಿತ್ತು. ಒಳಹರಿವು ಹೆಚ್ಚಳದಿಂದ ಮೂರು ಅಡಿ ಹೆಚ್ಚಳವಾಗಿದೆ. ಕಳೆದ ವರ್ಷ ಈ ದಿನ 1797 ಅಡಿ ನೀರು ಸಂಗ್ರಹವಾಗಿದೆ.

ಪ್ರವೀಣ್‌ ನೆಟ್ಟಾರು ಪತ್ನಿ ನೂತನ ಕುಮಾರಿಯವರಿಗೆ ಉದ್ಯೋಗದಿಂದ ಬಿಡುಗಡೆ

Posted by Vidyamaana on 2023-05-26 23:22:57 |

Share: | | | | |


ಪ್ರವೀಣ್‌ ನೆಟ್ಟಾರು ಪತ್ನಿ ನೂತನ ಕುಮಾರಿಯವರಿಗೆ ಉದ್ಯೋಗದಿಂದ ಬಿಡುಗಡೆ

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ವರದಿಯಾಗಿದೆ.

ಕಳೆದ ಜುಲೈ 26ರಂದು ರಾತ್ರಿ ಪ್ರವೀಣ್ ನೆಟ್ಟಾರು ಅವರ ಹತ್ಯೆಯಾಗಿತ್ತು.ಈ ಹಿಂದೆ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮಾನವೀಯ ನೆಲೆಯಲ್ಲಿ ಮುಖ್ಯ ಮಂತ್ರಿ ವಿಶೇಷಾಧಿಕಾರ ಬಳಸಿ ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ದ.ಕ.ಸಂಸದ ನಳಿನ್‌ ಕುಮಾರ್ ಕಟೀಲ್‌ ಅವರು ಭರವಸೆ ನೀಡಿದ್ದರು.ಅದರಂತೆ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವಾಲಯದಲ್ಲಿ ಹಿರಿಯ ಸಹಾಯಕಿ(ಗ್ರೂಪ್ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ 2022ರ ಸೆಪ್ಟೆಂಬರ್ 22ರಂದು ಆದೇಶ ಹೊರಡಿಸಲಾಗಿತ್ತು.ನೂತನ ಕುಮಾರಿ ಅವರ ವಿನಂತಿ ಮೇರೆಗೆ ಅವರಿಗೆ ದ.ಕ.ಜಿಲ್ಲಾಧಿಕಾರಿ ಕಚೇಳುಯಲ್ಲಿಯೇ ಕೆಲಸ ನೀಡಲಾಗಿತ್ತು.ಕಳೆದ ಅಕ್ಟೋಬರ್ 14ರಂದು ಅವರು ಕರ್ತವ್ಯಕ್ಕೆ ಹಾಜರಾಗಿದ್ದರು.

ಪ್ರಸಕ್ತ ಮುಖ್ಯಮಂತ್ರಿ ಇರುವ ತನಕ ಇಲ್ಲವೇ ಮುಂದಿನ ಆದೇಶದವರೆಗೆ ಎಂದು ಅವರನೇಮಕಾತಿ ಆದೇಶದಲ್ಲಿ ನಮೂದಿಸಲಾಗಿತ್ತು ಎನ್ನಲಾಗಿದೆ.ಇದೀಗ ಸರಕಾರ ಬದಲಾಗಿದ್ದು, ನೂತನ ಕುಮಾರಿ ಅವರನ್ನು ಕೆಲಸದಿಂದ ಬಿಡುಗಡೆಗೊಳಿಸಲಾಗಿದೆ ಎಂದು ವರದಿಯಾಗಿದೆ.

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್

Posted by Vidyamaana on 2024-03-01 12:20:35 |

Share: | | | | |


ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್

ಬೆಂಗಳೂರು : ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್ ಲೀಸ್ಗೆ ಪಡೆದಿದ್ದರು. ಮೂರು ತಿಂಗಳು ಕಳೆಯುತ್ತಿದ್ದಂತೆ ಅವ್ರಿಗೆ ಕಾದಿತ್ತು ಮುಂದೆ ಶಾಕ್. ಬಾಗಿಲಿಗೆ ಬಂದ ಬ್ಯಾಂಕಿ ನೋಟಿಸ್ ನೋಡಿ ಶಾಕ್ ಆಗಿದ್ರು.ಏಕಾಏಕಿ ಬ್ಯಾಂಕಿನವರು ಮನೆಗೆ ಬೀಗ ಜಡಿದಿದ್ದು, ಪ್ಲಾಟ್ ಲೀಸ್ಗೆ ಪಡೆದವರು ಅತ್ತ ಇರಲು ಮನೆ ಇಲ್ಲದೆ, ಇತ್ತ ಕೊಟ್ಟ ಹಣವು ಇಲ್ಲದ ಬೀದಿ ಪಾಲಾಗಿದ್ದಾರೆ.. ಅಷ್ಟಕ್ಕೂ ಈ ಘಟನೆ ನಡೆದಿದಾದ್ರು ಎಲ್ಲಿ ಅಂತೀರಾ ನೋಡಿ ಈ ರಿಪೋರ್ಟ್ ನಲ್ಲಿ..


ಹೀಗೆ ಫೋಟೋದಲ್ಲಿ ಪೋಸ್ ಕೋಡುತ್ತಿರುವ ಇವ್ರು ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ನಿವಾಸಿಗಳಾದ ಅಜಿತ್ ಕುಮಾರ್ ಮತ್ತು ಸುಜತಾ. ವಂಚನೆಯನ್ನೆ ಕಾಯಕ ಮಾಡಿಕೊಂಡಿರುವ ಇವ್ರು ಆನೇಕಲ್ ಪೊಲೀಸರ ಅತಿಥಿಯಾಗಿದ್ದಾರೆ. ಹೌದು ಚಂದಾಪುರ ರಸ್ತೆಯಲ್ಲಿನ ಯುಬಿಎಚ್ಸಿ ಅಪಾರ್ಟ್ಮೆಂಟ್ನಲ್ಲಿನ ತಮ್ಮ ಎರಡು ಪ್ಲಾಟ್ಗಳ ಮೇಲೆ ಬರೋಬ್ಬರಿ ಐವತ್ತು ಲಕ್ಷ ಲೋನ್ ಪಡೆದ ಅಸಾಮಿಗಳು ಅದೇ ಪ್ಲಾಟ್ ಗಳನ್ನು ಲೀಜ್ಗೆ ನೀಡಿ ಲಕ್ಷ ಲಕ್ಷ ವಸೂಲಿ ಮಾಡಿದ್ದಾರೆ. ಬಳಿಕ ಬ್ಯಾಂಕ್ ಲೋನ್ ಕಟ್ಟದೇ ಎಸ್ಕೇಪ್ ಆಗಿದ್ದಾರೆ. ಮೂರ್ನಾಲ್ಕು ನೋಟಿಸ್ ಕೊಟ್ಟ ಬ್ಯಾಂಕಿನವರು ಪ್ಲಾಟ್ ವಾಸಿಗಳನ್ನು ಉಟ್ಟಬಟ್ಟೆಯಲ್ಲಿ ಹೊರ ಹಾಕಿ ಬೀಗ ಜಡಿದಿದ್ದಾರೆ.ಇನ್ನೂ ರಿಯಲ್ ಎಸ್ಟೇಟ್ ಹೆಸರಲ್ಲಿ ರೀಲ್ ಬಿಟ್ಟು ಯಾಮಾರಿಸುವ ಅಜಿತ್ ಮತ್ತು ಸುಜತಾ ದಂಪತಿ ತಾವು ರಿಯಲ್ ಎಸ್ಟೇಟ್ ನಲ್ಲಿ ಒಳ್ಳೆಯ ಬಿಸಿನೆಸ್ ಮಾಡುತ್ತಿದ್ದೆವೆ. ತಮ್ಮದು ಸಾಕಷ್ಟು ಪ್ಲಾಟ್, ವಿಲ್ಲಾ ಮತ್ತು ನಿವೇಶನಗಳಿದ್ದು, ಕಡಿಮೆ ಬೆಲೆಗೆ ಲೀಜ್ ಮತ್ತು ಮಾರಾಟ ಮಾಡುತ್ತೆವೆ ಎಂದು ಜಾಹಿರಾತು ನೀಡುತ್ತಾರೆ. ಇವರ ಬಿಲ್ಡ್ ಅಪ್ ಕಂಡು ಇಂದು ಪ್ಲಾಟ್ ಲೀಜ್ ಪಡೆದವರು ಅಕ್ಷರಶಃ ಹಣ ಮತ್ತು ಮನೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಇನ್ನೂ ಸಾಕಷ್ಟು ಮಂದಿಗೆ ಅಜಿತ್ ದಂಪತಿ ಮಕ್ಮಲ್ ಟೋಪಿ ಹಾಕಿದ್ದು, ನಮಗೆ ನ್ಯಾಯ ಕೊಡಿಸಿ ಎಂದು ವಂಚನೆಗಳೊಗಾದ ಗ್ರಾಹಕರು ಆನೇಕಲ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.


ಇನ್ನೂ ಆನೇಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಂಚಕ ದಂಪತಿಯನ್ನ ಬಂಧಿಸಿ ಜೈಲಿಗೆ ಕಳುಹಿಸಿದ್ದು, ಲಕ್ಷಾಂತರ ರೂಪಾಯಿ ಹಣ ನೀಡಿ ಮನೆ ಲೀಸ್ಗೆ ಪಡೆದಿದ್ದ ಗ್ರಾಹಕರು ಅತ್ತ ನೀಡಿದ ಹಣವೂ ಕೈ ಸೇರದೆ ಇತ್ತ ಇರಲು ಮನೆಯು ಸಹ ಇಲ್ಲದೆ ಬೀದಿಗೆ ಬೀಳುವಂತಾಗಿದ್ದು ಮಾತ್ರ ವಿಪರ್ಯಾಸ ಸಂಗತಿ.

ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಎದುರು ಬಿಜೆಪಿ ಪ್ರತಿಭಟನೆ

Posted by Vidyamaana on 2024-02-07 14:56:48 |

Share: | | | | |


ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಎದುರು ಬಿಜೆಪಿ ಪ್ರತಿಭಟನೆ

ಬೆಂಗಳೂರು: ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಬಿಜೆಪಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು.


ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಿದರು. ‘ರೈತರಿಗೆ ಬರ ಪರಿಹಾರ ನೀಡದ, ಅಭಿವೃದ್ಧಿ ವಿರೋಧಿ, ಜನ ವಿರೋಧಿ ರಾಜ್ಯ ಸರ್ಕಾರವಿದು. ಶಾಸಕರಿಗೆ ಅನುದಾನ ನೀಡುವ ವಿಚಾರದಲ್ಲೂ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಸಮಾಲೋಚನಾ ಸಭೆಯಲ್ಲಿ ಸೋಲು – ಗೆಲುವಿನ ಲೆಕ್ಕಾಚಾರ

Posted by Vidyamaana on 2023-05-30 09:10:06 |

Share: | | | | |


ಕಾಂಗ್ರೆಸ್ ಸಮಾಲೋಚನಾ ಸಭೆಯಲ್ಲಿ ಸೋಲು – ಗೆಲುವಿನ ಲೆಕ್ಕಾಚಾರ

ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಸೋಲು – ಗೆಲುವಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಂಗಳೂರು ಜಿಲ್ಲಾ ಕಚೇರಿಯಲ್ಲಿ ಸಮಾಲೋಚನಾ ಸಭೆ ನಡೆಯಿತು.

ಜಿಲ್ಲಾ  ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಸೋಲು – ಗೆಲುವಿನ ಬಗ್ಗೆ ವಿಮರ್ಶೆ ನಡೆಯಿತು.

ಪುತ್ತೂರು ಶಾಸಕ ಅಶೋಕ್ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಸಹಿತ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.



Leave a Comment: