ಪುತ್ತೂರು: ಲಾರಿ ಟಯರ್ ಜೋಡಣೆ ವೇಳೆ ಅಪಘಾತ- ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ಜನತಾ ಕಾಲೋನಿ ರಶೀದ್ ಗಂಭೀರ

ಸುದ್ದಿಗಳು News

Posted by vidyamaana on 2024-07-22 23:30:36 |

Share: | | | | |


ಪುತ್ತೂರು: ಲಾರಿ ಟಯರ್ ಜೋಡಣೆ ವೇಳೆ ಅಪಘಾತ- ಟಯರ್‌ ಸಮೇತ ಎಸೆಯಲ್ಪಟ್ಟ   ಕರಾಯ ಜನತಾ ಕಾಲೋನಿ ರಶೀದ್ ಗಂಭೀರ

ಪುತ್ತೂರು: ಲಾರಿಯೊಂದರ ಟಯರ್ ಜೋಡಣೆ ವೇಳೆ ಟಯ‌ರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಜು.22ರಂದು ರಾತ್ರಿ ನಡೆದಿದೆ.

ಲಾರಿಯೊಂದು ಟಯರ್ ಪಂಚರ್ ಆಗಿ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಅದರ ಚಾಲಕ ಕರಾಯಕ್ಕೆ ಹೋಗಿ ಟಯರ್ ಪಂಚರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯ‌ರ್ ತಂದಿದ್ದರು. ಟಯರ್ ಜೋಡಣೆ ಮಾಡಲು ಕರಾಯದಿಂದಲೇ ಬಂದ ಟಯರ್ ಕಾರ್ಮಿಕ ಜೋಡಣೆ ವೇಳೆ ಟಯರ್‌ನ ರಿಂಗ್ ಹೊರಚಿಮ್ಮಿದ ರಭಸಕ್ಕೆ ಟಯರ್‌ ಸಮೇತ  ಕರಾಯ ಜನತಾ ಕಾಲೋನಿ ಕರೀಂ ರವರ ಮಗ ರಶೀದ್ ತುಸು ದೂರ ಎಸೆಯಲ್ಪಟ್ಟಿದ್ದಾರೆ. ತಕ್ಷಣ ತೀವ್ರ ಗಾಯಗೊಂಡ ಕಾರ್ಮಿಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

 Share: | | | | |


ಮೊಬೈಲ್‌ಗ‌ಳಿಗೆ ಅ. 12ರಂದು ಬರಲಿದೆ ಬೀಪ್‌ ಶಬ್ದ- ಭಯ ಬೇಡ

Posted by Vidyamaana on 2023-10-12 01:26:40 |

Share: | | | | |


ಮೊಬೈಲ್‌ಗ‌ಳಿಗೆ ಅ. 12ರಂದು ಬರಲಿದೆ ಬೀಪ್‌ ಶಬ್ದ- ಭಯ ಬೇಡ

ಬೆಂಗಳೂರು: ಮುಂಬರುವ ದಿನದಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಟೆಲಿಕಮ್ಯುನಿಕೇಶನ್‌ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಹಯೋಗದಲ್ಲಿ ಸಕಾಲಿಕ ಮುನ್ನೆಚ್ಚರಿಕೆ (ವಿಭಿನ್ನ ಧ್ವನಿ ಮತ್ತು ಕಂಪನ) ನೀಡಲು ಮುಂದಾಗಿದೆ. ಅದರ ಭಾಗವಾಗಿ ರಾಜ್ಯದಲ್ಲಿ ಅ. 12ರಂದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ.ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್‌) ಸೆಲ್‌ ಬ್ರಾಡ್‌ ಕಾಸ್ಟಿಂಗ್‌ ಮೂಲಕ ಸ್ಮಾರ್ಟ್‌ಫೋನ್‌ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ. ಈಗಾಗಲೇ ಮೊಬೈಲ್‌ ಬಳಕೆದಾರರಿಗೆ ಸಂದೇಶಗಳು ರವಾನೆಯಾಗಿದೆ. ಫೋನ್‌ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್‌ ಶಬ್ದದೊಂದಿಗೆ ಸಂದೇಶ ಫ್ಲಾಶ್‌ ಆಗಲಿದೆ. ಬಳಕೆದಾರರು ಸರಿ ಎಂದು ಒತ್ತುವವರೆಗೂ ಈ ಬೀಪ್‌ ಬರುತ್ತಲೇ ಇರುತ್ತದೆ. ಇದು ಎಚ್ಚರಿಕೆ ಸಂದೇಶವನ್ನು ಓದಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಆ ಮೂಲಕ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷೆ ನಡೆಯಲಿದೆ.

ಸಂದೇಶದಲ್ಲಿ ಏನಿರಲಿದೆ?

ಸಂದೇಶದಲ್ಲಿ ದೂರಸಂಪರ್ಕ ಇಲಾಖೆಯ ಸೆಲ್‌ ಬ್ರಾಡ್‌ಕಾಸ್ಟಿಂಗ್‌ ಸಿಸ್ಟಮ್‌ ಮೂಲಕ ಕಳುಹಿಸಿದ ಸ್ಯಾಂಪಲ್‌ ಪರೀಕ್ಷಾ ಸಂದೇಶವಾಗಿದ್ದು, ಇದನ್ನು ನಿರ್ಲಕ್ಷಿಸಿ. ನೀವು ಯಾವುದೇ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಈ ಸಂದೇಶವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರವು ಜಾರಿಗೆ ತರುತ್ತಿರುವ ಪ್ಯಾನ್‌ – ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸುವ ಸಲುವಾಗಿ ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ಮತ್ತು ತುರ್ತು ಸಂದರ್ಭಗಳಲ್ಲಿ ಸಮಯೋಚಿತ ಎಚ್ಚರಿಕೆಗಳನ್ನು ನೀಡುವ ಗುರಿಯನ್ನು ಹೊಂದಿದೆ ಎನ್ನುವುದಾಗಿ ಉಲ್ಲೇಖವಾಗಲಿದೆ.


ಪ್ರಯೋಜನ ಏನು?

ಭೂಕಂಪ, ಸುನಾಮಿ, ಅಗ್ನಿ ದುರಂತ ಮತ್ತು ಹಠಾತ್‌ ಪ್ರವಾಹ, ಯುದ್ಧಗಳಂತಹ ವಿಪತ್ತುಗಳ ಸಂದರ್ಭಗಳಲ್ಲಿ ವಿಪತ್ತು ನಿರ್ವಹಣ ಪ್ರಾಧಿಕಾರವನ್ನು ಸನ್ನದ್ಧರಾಗಿಸಲು ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಈ ವ್ಯವಸ್ಥೆ ಸಹಕಾರ ನೀಡಲಿದೆ. ಮುಂದಿನ ದಿನದಲ್ಲಿ ವಿಕೋಪಗಳು ಸಂಭವಿಸಬಹುದಾದ ಸ್ಥಳಗಳಲ್ಲಿನ ಮೊಬೈಲ್‌ ಬಳಕೆದಾರರಿಗೆ ಈ ಫ್ಲಾಶ್‌ ಸಂದೇಶದ ಮೂಲಕ ಎಚ್ಚರಿಸಲಾಗುತ್ತದೆ.


ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ಅ. 12ರಂದು ರಾಜ್ಯದಲ್ಲಿ ನಡೆಯಲಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಮುಂದಿನ ದಿನದಲ್ಲಿ ವಿಕೋಪವನ್ನು ಮುಂಚಿತವಾಗಿ ಗ್ರಹಿಸಿ, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಅನುಕೂಲವಾಗಲಿದೆ. ಪ್ರವಾಹಗಳಂತ ವಿಕೋಪ ಘಟಿಸುವ ಮುನ್ಸೂಚನೆ ನೀಡಲಿದೆ.

– ರಾಜಕುಮಾರ್‌, ಸಹಾಯಕ ನಿರ್ದೇಶಕ (ಟೆಕ್ನಾಲಜಿ), ದೂರಸಂಪರ್ಕ ಇಲಾಖೆ.

ಶಿರಾಡಿಘಾಟ್‌ನಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ

Posted by Vidyamaana on 2024-08-08 08:17:14 |

Share: | | | | |


ಶಿರಾಡಿಘಾಟ್‌ನಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ

ಹಾಸನ: ಶಿರಾಡಿಘಾಟ್‌ನಲ್ಲಿ ಗುಡ್ಡ ಕುಸಿದಿದ್ದ ಸ್ಥಳದಲ್ಲಿ ಮಣ್ಣನ್ನು ತೆರವು ಮಾಡಿರುವ ಅಧಿಕಾರಿಗಳು, ಇದೀಗ ಎಲ್ಲಾ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಕೊಂಚ ಮಳೆ ಕಡಿಮೆಯಾದ ಹಿನ್ನೆಲೆ ದಿನದ 24 ಗಂಟೆ ಕಾಲ ವಾಹನಗಳ ಓಡಾಟಕ್ಕೆ ಜಿಲ್ಲಾಡಳಿತ ಅವಕಾಶ ಮಾಡಿಕಟ್ಟಿದೆ.

ಪಾಪೆತ್ತಡ್ಕ: ಜೀಪ್ ಬೈಕ್ ಗೆ ಡಿಕ್ಕಿ ಬೈಕ್ ಸವಾರ ಲೊಕೇಶ್ ಮೃತ್ಯು : ಇಬ್ಬರು ಮಕ್ಕಳು ಗಂಭೀರ

Posted by Vidyamaana on 2024-04-17 23:05:31 |

Share: | | | | |


ಪಾಪೆತ್ತಡ್ಕ: ಜೀಪ್ ಬೈಕ್ ಗೆ ಡಿಕ್ಕಿ ಬೈಕ್ ಸವಾರ ಲೊಕೇಶ್ ಮೃತ್ಯು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿ ನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ.

ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್(48) ಮೃತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ 

ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಡವಟ್ಟು ಮಾತ್ರೆಗಳನ್ನ ಹಿಂಪಡೆದ ಡಿಎಚ್ಓ

Posted by Vidyamaana on 2023-09-23 07:45:36 |

Share: | | | | |


ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಡವಟ್ಟು ಮಾತ್ರೆಗಳನ್ನ ಹಿಂಪಡೆದ ಡಿಎಚ್ಓ

ಉಳ್ಳಾಲ: ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜ್ವರಕ್ಕೆ ಚಿಕಿತ್ಸೆಗೆಂದು ತೆರಳಿದ್ದ ತಾಯಿ, ಮಗಳಿಗೆ ಶಿಲೀಂದ್ರ ಲೇಪಿತ ಮಾತ್ರೆಗಳನ್ನು ನೀಡಿದ ಘಟನೆ ನಡೆದಿದ್ದು, ದೂರಿಗೆ ಸ್ಪಂದಿಸಿದ ಜಿಲ್ಲಾ ಆರೋಗ್ಯಾಧಿಕಾರಿ ತಕ್ಷಣ ಅಲ್ಲಿಗೆ ನೀಡಿರುವ ಪ್ಯಾರಾ ಸಿಟಮಾಲ್ ಮಾತ್ರೆಗಳನ್ನ ಹಿಂಪಡೆದಿದ್ದಾರೆ. 


ಕೋಟೆಕಾರು, ಬೀರಿ ಬಳಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಿನ್ನೆ ಮಧ್ಯಾಹ್ನ ಕೆ.ಸಿ ನಗರ ನಿವಾಸಿ ಮಹಿಳೆಯೊಬ್ಬರು ತನ್ನ ಆರನೇ ತರಗತಿಯ ಮಗಳು‌ ರಾಫಿಯಾ ಜೊತೆ ಜ್ವರಕ್ಕೆ ಚಿಕಿತ್ಸೆ ಪಡೆಯಲು ತೆರಳಿದ್ದರು. ಇಬ್ಬರನ್ನೂ ಪರೀಕ್ಷೆ ನಡೆಸಿದ ವೈದ್ಯರು ಎರಡು‌ ದಿವಸಗಳ ಔಷಧಿಗಳನ್ನ ನೀಡಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದೊಳಗೆ ಔಷಧಿ ಸೇವಿಸಲು ಮುಂದಾದಾಗ ಪ್ಯಾರಾ ಸಿಟಮಾಲ್ ಮಾತ್ರೆಯ ಬಣ್ಣ ಬದಲಾಗಿ ಶಿಲೀಂದ್ರ ಆವರಿಸಿತ್ತು. ಈ ಬಗ್ಗೆ ವಿಚಾರಿಸಿದಾಗ ಆರೋಗ್ಯ ಕೇಂದ್ರದ ಸಿಬ್ಬಂದಿ ಎಲ್ಲಾ ಮಾತ್ರೆಗಳು ಹೀಗೇ  ಇವೆ, ಏನಾಗುವುದಿಲ್ಲವೆಂದು ಬಾಲಿಶ ಉತ್ತರ ನೀಡಿದ್ದರಂತೆ.


ಆನಂತರ ಮಾಜಿ ಗ್ರಾಮ ಪಂಚಾಯತ್ ಸದಸ್ಯರೋರ್ವರು ಶಿಲೀಂದ್ರ ಆವರಿಸಿದ್ದ ಮಾತ್ರೆಯ ವೀಡಿಯೋ ತೆಗೆದು ಜಿಲ್ಲಾ ಆರೋಗ್ಯಾಧಿಕಾರಿಯ ವಾಟ್ಸಪ್ ಕಳಿಸಿದ್ದಾರೆ. ತಕ್ಷಣ ಸ್ಪಂದನೆ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ಎಚ್‌.ಆರ್ ತಿಮ್ಮಯ್ಯ, ಕೋಟೆಕಾರು ಆರೋಗ್ಯ ಕೇಂದ್ರಕ್ಕೆ ನೀಡಿರುವ ಪ್ಯಾರಸೆಟಮೋಲ್ ಮಾತ್ರೆಗಳನ್ನು ಹಿಂದಕ್ಕೆ ತರಿಸಿಕೊಂಡಿದ್ದಾರೆ. 


ಹೆಡ್ ಲೈನ್ ಕರ್ನಾಟಕಕ್ಕೆ ಪ್ರತಿಕ್ರಿಯೆ ನೀಡಿದ ಅವರು ಎರಡು ಬ್ಯಾಚ್ ನ ಪ್ಯಾರಾಸೆಟಮೋಲ್ ಮಾತ್ರೆಗಳಲ್ಲಿ ಕೆಲವು ಸ್ಟ್ರಿಪ್ ಗಳ ಮಾತ್ರೆಗಳಿಗೆ ಶಿಲೀಂದ್ರ ಆವರಿಸಿದೆ. 2025 ರ ಜನವರಿ ತಿಂಗಳ ವರೆಗೆ ಮಾತ್ರೆಗಳು ಬಳಕೆಗೆ ಯೋಗ್ಯವಾಗಿದ್ದರೂ ಮಾತ್ರೆಗಳ ವಿತರಣೆಯನ್ನ ನಿಲ್ಲಿಸಿ ಎಲ್ಲವನ್ನು ಹಿಂಪಡೆದಿದ್ದು ಅದನ್ನ ಬೆಂಗಳೂರಿಗೆ ಪರೀಕ್ಷೆಗೆ ಕಳಿಸಲಾಗುವುದು. ಜಿಲ್ಲೆಯ ಉಳಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ಯಾರ ಸೆಟಮೋಲ್ ಮಾತ್ರೆಗಳನ್ನ ಹಿಂಪಡೆದು ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಉಪ್ಪಿನಂಗಡಿ: ಭೀಕರ ರಸ್ತೆ ಅಪಘಾತಕ್ಕೆ ಕಳಂಜಿಬೈಲ್ ನಿವಾಸಿ ಜಾಫರ್ ಮೃತ್ಯು.

Posted by Vidyamaana on 2023-04-22 11:58:16 |

Share: | | | | |


ಉಪ್ಪಿನಂಗಡಿ: ಭೀಕರ ರಸ್ತೆ ಅಪಘಾತಕ್ಕೆ  ಕಳಂಜಿಬೈಲ್ ನಿವಾಸಿ ಜಾಫರ್ ಮೃತ್ಯು.

ಉಪ್ಪಿನಂಗಡಿ: ಭೀಕರ ರಸ್ತೆ ಅಪಘಾತಕ್ಕೆ ವ್ಯಕ್ತಿಯೋರ್ವರು ಬಲಿಯಾದ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಇದೀಗ ಸಂಭವಿಸಿದೆ.ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಕಳಂಜಿಬೈಲ್ ನಿವಾಸಿ ಜಾಫರ್ (35) ಎಂದು ಗುರುತಿಸಲಾಗಿದೆ.



ಈದುಲ್ ಫಿತ್ರ್ ಸಂಭ್ರಮದಲ್ಲಿ ನೆಂಟರಸ್ಥರ ಮನೆಗೆ ತನ್ನೆರೆಡು ಮಕ್ಕಳ ಜತೆ ತೆರಳುತ್ತಿದ್ದ ಜಾಫರ್ ರವರ ಸ್ಕ್ಯೂಟರ್ ಗೆ ರಾಂಗ್ ಸೈಡ್ ನಲ್ಲಿ ಬಂದ ಕಾರೊಂದು ಢಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಜಾಫರ್ ರವರ ಸ್ಕ್ಯೂಟರ್ ಪೊದೆಗೆ ಹೋಗಿ ಬಿದ್ದಿದ್ದು ಜಾಫರ್ ರವರು ಸ್ಥಳದಲ್ಲೇ ಅಸು ನೀಗಿದ್ದಾರೆ.ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದಾರೆ.ಹಬ್ಬದ ಸಂಭ್ರಮದಲ್ಲಿ ಈ ಅಪಘಾತ ನಿಜಕ್ಕೂ ಆಘಾತ ಮೂಡಿಸಿದೆ.

ಕಂಠಪೂರ್ತಿ ಕುಡಿದು ನಡುರಸ್ತೆಯಲ್ಲಿ ಮಲಗಿದ ಭೂಪ

Posted by Vidyamaana on 2024-01-11 16:52:09 |

Share: | | | | |


ಕಂಠಪೂರ್ತಿ ಕುಡಿದು ನಡುರಸ್ತೆಯಲ್ಲಿ ಮಲಗಿದ ಭೂಪ

ಕೊಟ್ಟಿಗೆಹಾರ: ಕಂಠಪೂರ್ತಿ ಕುಡಿದು ರಸ್ತೆಯ ಮಧ್ಯೆ ಮಲಗಿ ವಾಹನ ಸವಾರರು ಬೆಚ್ಚಿ ಬಿದ್ದಿರುವ ಘಟನೆ ಮೂಡಿಗೆರೆಯಿಂದ ಜನ್ನಾಪುರಕ್ಕೆ ಹೋಗುವ ರಸ್ತೆ ಹಳಸೆ ಗ್ರಾಮದ ತಿರುವಿನಲ್ಲಿ ಬುಧವಾರ ರಾತ್ರಿ ನಡೆದಿದೆ.ವಾಹನ ಚಾಲಕರು ಎಷ್ಟೇ ಬಾರಿ ಹಾರ್ನ್ ಮಾಡಿದರು ಮೇಲಕ್ಕೆ ಏಳದ ವ್ಯಕ್ತಿ, ಮಧ್ಯ ರಾತ್ರಿ ರಸ್ತೆಯಲ್ಲಿ ಮಲಗಿರುವುದನ್ನು ನೋಡಿ ವಾಹನ ಸವಾರರು ಬೆಚ್ಚಿ ಬಿದ್ದಿದ್ದಾರೆ. ಕೆಲ ಹೊತ್ತಿನ ಬಳಿಕ ಎದ್ದ ವ್ಯಕ್ತಿ ಮತ್ತೆ ರಸ್ತೆ ಮಧ್ಯದಲ್ಲೇ ಮಲಗಿದ್ದಾನೆ ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ. ಎಣ್ಣೆ ಮತ್ತಿನಲ್ಲಿ ವ್ಯಕ್ತಿಯ ಚಲ್ಲಾಟ, ವಾಹನ ಸವಾರರಿಗೆ ಪರದಾಟ ಎಂಬಂತಾಗಿದೆ.

Recent News


Leave a Comment: