2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಸುದ್ದಿಗಳು News

Posted by vidyamaana on 2024-07-23 07:07:38 |

Share: | | | | |


2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಪುತ್ತೂರು: ರಾಜ್ಯದಲ್ಲಿ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಪ್ರಯತ್ನ ಕೈಗೂಡುವ ವಿಶ್ವಾಸವಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ಇವರ ಸಹಯೋಗದಲ್ಲಿ ಪುತ್ತೂರಿನ ರೋಟರಿ ಮನೀಷಾ ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ - ಉಪನ್ಯಾಸ- ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಶ್ಚಿಮ ಬಂಗಾಳ ಸೇರಿದ ಅನೇಕ ರಾಜ್ಯಗಳಲ್ಲಿ ೨ನೇ ರಾಜ್ಯಭಾಷೆ ಘೋಷಣೆ ಸಂದರ್ಭ ಯಾವೆಲ್ಲ ಮಾನದಂಡ ಅನುಸರಿಸಲಾಗಿದೆ ಎಂಬುದರ ಅಧ್ಯಯನ ನಡೆಸಿ ವರದಿ ತಯಾರಿಸಲಾಗಿದೆ. ಇದನ್ನು ಸರಕಾರ ಪರಿಶೀಲಿಸಿ ಶೀಘ್ರದಲ್ಲೇ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯನ್ನಾಗಿ ಘೋಷಣೆ ಮಾಡುವ ಸಂಬAಧ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡ ಮೇಲೆ ಗೆಜೆಟ್ ನೋಟಿಫೀಕೇಶನ್ ಹೊರಡಿಸಲಾಗುವುದು. ಅದೇ ರೀತಿ ತುಳು ಭಾಷೆಯನ್ನು ಸಂವಿಧಾನದ ೮ನೇ ಪರಿಚ್ಛೇದದಲ್ಲಿ ಸೇರಿಸುವ ವಿಚಾರದಲ್ಲೂ ಕೇಂದ್ರದ ಮೇಲೆ ರಾಜ್ಯದಿಂದ ಒತ್ತಡ ತರುವ ಕೆಲಸ ಮಾಡಲಾಗುತ್ತದೆ. ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರಕಾರದ ಮೇಲೆ ಒತ್ತಡ ಹೇರುತ್ತಿದ್ದೇನೆ. ಮುಂದಿನ ಬಜೆಟ್‌ನಲ್ಲಿ ಘೋಷಣೆಯ ಆಶಾವಾದ ಇದೆ ಎಂದವರು ಹೇಳಿದರು.

ಸೋಷಿಯಲ್ ಮೀಡಿಯಾದ ಅಬ್ಬರದ ನಡುವೆಯೇ ಜನ ಪತ್ರಿಕೆ ಓದುವುದು ಕಡಿಮೆ ಮಾಡಿಲ್ಲ. ಪತ್ರಿಕಾ ರಂಗದಲ್ಲಿ ಪ್ರಾಮಾಣಿಕತೆ ಬೇಕು. ಅದಿರುವ ಕಾರಣವೇ ದಕ್ಷಿಣಕನ್ನಡದ ಪತ್ರಕರ್ತರು ಎಲ್ಲಿ ಹೋದರೂ ಛಾಪು ಮೂಡಿಸುತ್ತಾರೆ ಎಂದು ಹೇಳಿದರು.

ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭ ಅಭಿವ್ಯಕ್ತಿ ಸ್ವಾತಂತ್ರö್ಯ ಮತ್ತು ಪತ್ರಿಕಾ ಸ್ವಾತಂತ್ರö್ಯ ದಮನ ಮಾಡಲಾಗಿತ್ತು. ಆಗ ಧೀಮಂತ ಪತ್ರಿಕೆಗಳು ಭೂಗತರಾಗಿದ್ದುಕೊಂಡೇ ಪತ್ರಿಕೆ ನಡೆಸಿ ಜನಜಾಗೃತಿ ಮೂಡಿಸಿದ್ದರು. ದೇಶ ಕಟ್ಟುವಲ್ಲಿ ಪತ್ರಿಕೆಗಳ ಪಾತ್ರ ಬಹಳಷ್ಟು ದೊಡ್ಡದು. ಸೋಷಿಯಲ್ ಮೀಡಿಯಾದಿಂದ ಉಪಯೋಗವಿದೆಯಾದರೂ ಅಷ್ಟೇ ಕೆಟ್ಟದೂ ಇದೆ ಎಂದರು.


ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಉಪನ್ಯಾಸ ನೀಡಿದರು. ಮಾಧ್ಯಮ ವರದಿ ಇವತ್ತು ಪ್ರತಿಯೊಬ್ಬರ ಕೈಗೂ ಬಂದಿದೆ. ಜಗತ್ತಿನಲ್ಲಿ ಜೀವರಕ್ಷಕ ಔಷಧಿ ಮೊದಲ ಸ್ಥಾನದಲ್ಲಿದ್ದರೆ, ೨ನೇ ಸ್ಥಾನದಲ್ಲಿ ಮುದ್ರಣ ಮಾಧ್ಯಮಗಳಿವೆ. ಇಷ್ಟಾದರೂ ಮಾಧ್ಯಮಗಳು ಕೆಲವೊಂದು ಅಪವಾದಗಳನ್ನು ಕೂಡ ಎದುರಿಸುತ್ತಿವೆ. ಆರೋಪಿಯೊಬ್ಬನನ್ನು ನ್ಯಾಯಾಲಯ ವಿಚಾರಣೆ ನಡೆಸುವ ಮೊದಲೇ ಮಾಧ್ಯಮಗಳು ವಿಚಾರಣೆ ನಡೆಸಿ ತಪ್ಪಿತಸ್ಥನೆಂದು ಘೋಷಿಸುವುದು ಆತಂಕಕಾರಿ ಬೆಳವಣಿಗೆ. ಅದೇ ರೀತಿ ಪೀತ ಪತ್ರಿಕೋದ್ಯಮದ ಬಗ್ಗೆಯೂ ಜಾಗೃತಿ ಅಗತ್ಯ ಎಂದರು. ಪ್ರತಿಯೊಬ್ಬ ಪತ್ರಕರ್ತರಿಗೂ ವೃತ್ತಿಪರತೆ ಮತ್ತು ನೈತಿಕತೆ ಅಗತ್ಯವಾಗಿ ಬೇಕು ಎಂದವರು ನುಡಿದರು. ಮಾಹಿತಿ ಎಂಬುದು ನೀರಿನ ಥರ. ಕಡಿಮೆಯಾದರೂ ಕಷ್ಟ, ಜಾಸ್ತಿಯಾದರೂ ಕಷ್ಟ. ಇದನ್ನು ಪತ್ರಕರ್ತರು ಅರ್ಥಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.


ಇದೇ ಸಂದರ್ಭದಲ್ಲಿ ಶೇಟ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಕೊಡುಗೆಯಾಗಿ ನೀಡಿದ ಸಿಸಿ ಕ್ಯಾಮೆರಾವನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪತ್ರಕರ್ತರಿಗೆ ಹಸ್ತಾಂತರ ಮಾಡಿದರು.


ಪತ್ರಿಕಾ ವಿತರಕರಾದ ವಿಶ್ವನಾಥ್ ಪುತ್ತೂರು ಅವರನ್ನು ಶಾಸಕರು ಪತ್ರಕರ್ತರ ಸಂಘದ ಪರವಾಗಿ ಸನ್ಮಾನಿಸಿದರು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಾದ ಹಷೇಂದ್ರ ಪ್ರಸಾದ್, ಮಹೇಶ್ ಪ್ರಸಾದ್, ದೀಪ್ತಿ ಭಟ್, ಎ.ಯು. ಅವನೀಶ್ ಕುಮಾರ್, ಸಮ್ಯಕ್, ಸಿಹಾ ಶಮ್ರಾ, ಪುಣ್ಯಶ್ರೀ ಪಿ. ಅವರನ್ನು ಸಂಘದ ಪರವಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಸನ್ಮಾನಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಸಿದ್ಧಿಕ್ ನೀರಾಜೆ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್,ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ,ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವನಿಕೃಷ್ಣ, ಎಸೋಸಿಯೇಶನ್ ಆಫ್ ಸಿವಿಲ್ ಎಂಜಿನಿರ‍್ಸ್ (ಎಸಿಸಿಇ-ಐ) ಪುತ್ತೂರು ಸೆಂಟರ್ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಕೆ.ಕೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸುಧಾಕರ ಸುವರ್ಣ, ಕಾರ್ಯಕಾರಿ ಸಮಿತಿ ಸದಸ್ಯ ಮೇಘಾ ಪಾಲೆತ್ತಾಡಿ ಮತ್ತು ರೋಟರಿ ಯುವ ಸಂಸ್ಥೆಯ ಕಾರ್ಯದರ್ಶಿ ವಚನಾ ಜಯರಾಂ,ಪ್ರಧಾನ ಕಾರ್ಯದರ್ಶಿ ಶಶಿಧರ ರೈ ಕುತ್ಯಾಳ, ಕೋಶಾಧಿಕಾರಿ ಸಂಶುದ್ದೀನ್ ಸಂಪ್ಯ,ಕಾರ್ಯಕಾರಿ ಸಮಿತಿ ಸದಸ್ಯರಾದ ಐ. ಬಿ. ಸಂದೀಪ್,ಕುಮಾರ್,ಪ್ರಸಾದ್ ಬಲ್ನಾಡ್, ಸಂಘದ ಕಾರ್ಯದರ್ಶಿ ಅಜಿತ್ ಕುಮಾರ್, ಸದಸ್ಯರಾದ ಅನಿಶ್ ಕುಮಾರ್ ಮರೀಲ್,ಶರತ್, ರಾಜೇಶ್ ಪಟ್ಟೆ, ಪಾರೂಕ್ ಶೇಕ್ , ಮತ್ತಿತ್ತರರು ಉಪಸ್ಥಿತರಿದ್ದರು.

 Share: | | | | |


ಆನ್ಲೈನ್ ಮೋಸ : ಪುತ್ತೂರಿನ ಪ್ರಖ್ಯಾತ ಡಾಕ್ಟರನ್ನೇ ಯಾಮಾರಿಸಿದ ದುಷ್ಕರ್ಮಿಗಳು

Posted by Vidyamaana on 2024-03-30 04:52:56 |

Share: | | | | |


ಆನ್ಲೈನ್ ಮೋಸ : ಪುತ್ತೂರಿನ ಪ್ರಖ್ಯಾತ ಡಾಕ್ಟರನ್ನೇ ಯಾಮಾರಿಸಿದ ದುಷ್ಕರ್ಮಿಗಳು

ಪುತ್ತೂರು: ಪ್ರಖ್ಯಾತ ಡಾಕ್ಟರ್ ಒಬ್ಬರಿಗೆ ಕರೆ ಮಾಡಿ ಆನ್ಲೈನ್ ಮೂಲಕ 16 ಲಕ್ಷಕ್ಕೂ ಅಧಿಕ ಹಣ ದೋಚಿದ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ.ಪುತ್ತೂರಿನ ಬೊಳ್ವಾರು ನಿವಾಸಿ ಡಾ.ಚಿದಂಬರ ಅಡಿಗ ವಂಚನೆಗೊಳದವರು.ಅವರು ನೀಡಿದ ದೂರಿನಂತೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಹಣ ಡಬ್ಬಲ್ ಆಗುತ್ತೆ ಎಂದು ಆ್ಯಪ್ ನಲ್ಲಿ ಹೂಡಿಕೆ ; 21 ಲಕ್ಷ ಹಣ ಕಳಕೊಂಡ ಬಂಟ್ವಾಳ ಮೂಲದ ವೀಟಾ ಮರೀನಾ ಆತ್ಮಹತ್ಯೆ

Posted by Vidyamaana on 2023-12-25 07:08:26 |

Share: | | | | |


ಹಣ ಡಬ್ಬಲ್ ಆಗುತ್ತೆ ಎಂದು ಆ್ಯಪ್ ನಲ್ಲಿ ಹೂಡಿಕೆ ; 21 ಲಕ್ಷ ಹಣ ಕಳಕೊಂಡ ಬಂಟ್ವಾಳ ಮೂಲದ ವೀಟಾ ಮರೀನಾ  ಆತ್ಮಹತ್ಯೆ

ಬಂಟ್ವಾಳ: ಹಣ ಡಬ್ಬಲ್ ಆಗುತ್ತೆ ಎಂದು ದಲ್ಲಾಳಿಗಳ ಮಾತು ನಂಬಿ ಆ್ಯಪ್ ಒಂದಕ್ಕೆ ಹೂಡಿಕೆ ಮಾಡಿ ಸುಮಾರು 21 ಲಕ್ಷ ರೂಪಾಯಿ ಕಳಕೊಂಡಿದ್ದ ಮಹಿಳೆಯೊಬ್ಬರು ಸಂಗಬೆಟ್ಟು ಸಮೀಪದ ಪುಚ್ಚಮೊಗರು ಎಂಬಲ್ಲಿ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 


ಕುಕ್ಕಿಪಾಡಿ ಗ್ರಾಮದ ಏರೋಡಿಯ ಜಾನ್ ಸಂತೋಷ್ ಡಿಸೋಜ ಎಂಬವರ ಪತ್ನಿ ವೀಟಾ ಮರಿನಾ ಡಿಸೋಜ (32) ಮೃತರು. ವೀಟಾ ಮರೀನಾ ಅವರು ಈ ಹಿಂದೆ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು ಬಳಿಕ ಹುದ್ದೆ ತೊರೆದು ವಿಮಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದರು. ಈ ನಡುವೆ ಯಾವುದೋ ಮೊಬೈಲ್ ಆ್ಯಪ್ ನಲ್ಲಿ ಹಣ ಹೂಡಿದರೆ ಡಬಲ್ ಆಗುತ್ತದೆ ಎಂದು ನಂಬಿ, ಸುಮಾರು 21 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡಿದ್ದರು. ಈ ಬಗ್ಗೆ ಅವರು ಬಂಟ್ವಾಳ ಪೊಲೀಸರಿಗೂ ದೂರು ನೀಡಿದ್ದರು.


ಡಿ.23ರ ಶನಿವಾರ ರಾತ್ರಿ 9 ಗಂಟೆಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ ವೀಟಾ ಬಳಿಕ ನಾಪತ್ತೆಯಾಗಿದ್ದರು. ವಿಷಯ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದ್ದು ಫಲ್ಗುಣಿ ಸೇತುವೆಯಲ್ಲಿ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಅಗ್ನಿಶಾಮಕದಳದ ಸಿಬ್ಬಂದಿ ಭಾನುವಾರ ಬೆಳಗ್ಗೆ ನದಿಯಲ್ಲಿ ಹುಡುಕಾಡಿದ್ದು ಶವ ಪತ್ತೆಯಾಗಿದೆ. 


ಬಹುಗ್ರಾಮ ಕುಡಿಯುವ ನೀರು ಪೂರೈಕೆಗಾಗಿ ನಿರ್ಮಿಸಿರುವ ಅಣೆಕಟ್ಟೆ ಬಳಿ ಭಾನುವಾರ ಮೃತದೇಹ ಪತ್ತೆಯಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆ ಮಹಿಳಾ ಎಸ್ ಐ ಭಾರತಿ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೇ ಭೇಟಿ ನೀಡಿ, ಮಹಜರು ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದೆ

ವಾಹನ ಸವಾರರೇ ಗಮನಿಸಿ : ರಿಯಾಯಿತಿ ದರದಲ್ಲಿ ಟ್ರಾಫಿಕ್ ದಂಡ ಪಾವತಿಗೆ ಇಂದೇ ಕೊನೆಯ ದಿನ

Posted by Vidyamaana on 2023-09-09 08:40:11 |

Share: | | | | |


ವಾಹನ ಸವಾರರೇ ಗಮನಿಸಿ : ರಿಯಾಯಿತಿ ದರದಲ್ಲಿ ಟ್ರಾಫಿಕ್ ದಂಡ  ಪಾವತಿಗೆ ಇಂದೇ ಕೊನೆಯ ದಿನ

ಗಳೂರು : ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿ ಮಾಡಲು ಶೇ. 50 ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಇಂದು ಕೊನೆಯ ದಿನಾಂಕವಾಗಿದ್ದು, ಇಂದು ಸೆಪ್ಟೆಂಬರ್ 9 ರೊಳಗೆ ವಾಹನ ಸವಾರರು ರಿಯಾಯಿತಿ ದರದಲ್ಲಿ ದಂಡ ಕಟ್ಟಬೇಕು.ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಿದೆ.ಸೆಪ್ಟೆಂಬರ್ 9 ರೊಳಗೆ ವಾಹನ ಸವಾರರು ರಿಯಾಯಿತಿ ದರದಲ್ಲಿ ದಂಡ ಕಟ್ಟಬಹುದಾಗಿದೆ. ಸಂಚಾರಿ ಪೊಲೀಸ್ ಇಲಾಖೆಯ ಇ-ಚಲನ್ನಲ್ಲಿ ಫೆಬ್ರವರಿ 11, 2023ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಈ ಅವಕಾಶ ನೀಡಲಾಗಿದೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.


ರಿಯಾಯಿತಿ ದರದಲ್ಲಿ ದಂಡ ಕಟ್ಟೋದು ಹೇಗೆ..?


1) ಕರ್ನಾಟಕ ರಾಜ್ಯ ಪೊಲೀಸ್ ಅಧಿಕೃತ ಮೊಬೈಲ್ ಅಪ್ಲಿಕೇಶನ್ ಮೂಲಕ ಪಾವತಿ ಮಾಡಬಹುದು.

2) ಪೇಟಿಎಂ ಅಪ್ಲಿಕೇಶನ್ ಮುಖಾಂತರವು ಉಲ್ಲಂಘನೆಯ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ.

3) ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ವೆಬ್ ಸೈಟ್ ಗೆ ಲಾಗ್ ಇನ್ ಆಗಿ ವಾಹನದ ನೋಂದಣಿ ಸಂಖ್ಯೆ ನಮೂದಿಸುವ ಮೂಲಕ ಬಾಕಿ ಪಾವತಿ ಮಾಡಬಹುದು.

4) ಸಂಚಾರ ನಿರ್ವಹಣ ಕೇಂದ್ರದ ಮೊದಲನೆ ಮಹಡಿಯಲ್ಲೂ ಸಹ ದಂಡ ಪಾವತಿಸಬಹುದಾಗಿದೆ.

5 ) ಹತ್ತಿರ ಸಂಚಾರ ಪೊಲೀಸ್ ಠಾಣೆಗಳಲ್ಲಿ ನಿಮ್ಮ ವಾಹನದ ನೋಂದಣಿ ಸಂಖ್ಯೆಯ ವಿವರಗಳನ್ನು ಒದಗಿಸಿ ಪಡೆಯಬಹುದು. ದಂಡವನ್ನು ಮೊತ್ತವನ್ನು ಪಾವತಿಸಿ ರಶೀದಿ ಪಡೆಯಬಹುದು..

ಕುದ್ರೋಳಿ ದೇವಸ್ಥಾನದಲ್ಲಿ ವಿಶೇಷ ಅರ್ಚನೆಯಲ್ಲಿ ಪಾಲ್ಗೊಂಡು ಪ್ರಚಾರ ಕಾರ್ಯ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

Posted by Vidyamaana on 2024-03-31 11:17:03 |

Share: | | | | |


ಕುದ್ರೋಳಿ ದೇವಸ್ಥಾನದಲ್ಲಿ ವಿಶೇಷ ಅರ್ಚನೆಯಲ್ಲಿ ಪಾಲ್ಗೊಂಡು ಪ್ರಚಾರ ಕಾರ್ಯ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

ಮಂಗಳೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾನುವಾರ ಬೆಳಗ್ಗೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ಪ್ರಚಾರ ಕಾರ್ಯ ಆರಂಭಿಸಿದರು.

ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಮಾಡ್ಯುಲರ್ ಆಪರೇಷನ್ ಥಿಯೇಟರಿನಲ್ಲಿ ಮೊದಲ ಯಶಸ್ವಿ ಶಸ್ತ್ರಚಿಕಿತ್ಸೆ

Posted by Vidyamaana on 2023-02-20 06:19:00 |

Share: | | | | |


ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಮಾಡ್ಯುಲರ್ ಆಪರೇಷನ್ ಥಿಯೇಟರಿನಲ್ಲಿ ಮೊದಲ ಯಶಸ್ವಿ ಶಸ್ತ್ರಚಿಕಿತ್ಸೆ

ಪುತ್ತೂರು: ಬೆಂಗಳೂರು, ಮಂಗಳೂರಿನಲ್ಲಿ ಲಭ್ಯವಿರುವ ಅತ್ಯಾಧುನಿಕ ಶಸ್ತ್ರಚಿಕಿತ್ಸೆಯ ಮಾದರಿಯ ಶಸ್ತ್ರಚಿಕಿತ್ಸೆಯನ್ನು ಪುತ್ತೂರಿನ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫೆ. 25ರ ಮಹಾಶಿವರಾತ್ರಿಯ ಶುಭಗಳಿಗೆಯಲ್ಲಿ ನೆರವೇರಿಸಲಾಯಿತು.

ಉತ್ತಮ, ಅತ್ಯಾಧುನಿಕ ಪರಿಕರಗಳನ್ನು ಒಳಗೊಂಡ ಮಾಡ್ಯುಲರ್ ಆಪರೇಷನ್ ಥಿಯೇಟರ್ ಇತ್ತೀಚೆಗಷ್ಟೇ ಪುತ್ತೂರಿನ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿತ್ತು.ಜಿಲ್ಲಾ ಕೇಂದ್ರದ ಸಿದ್ಧತೆಯಲ್ಲಿರುವ ಪುತ್ತೂರಿಗೆ ಮಾಡ್ಯುಲರ್ ಆಪರೇಷನ್ ಥಿಯೇಟರ್ ಪ್ರಮುಖ ಆದ್ಯತೆಗಳಲ್ಲೊಂದು. ರೋಗಿಗಳ ದೇಹಸೂಕ್ಷ್ಮತೆಗೆ ಅನುಗುಣವಾಗಿ ಆಪರೇಷನ್ ಥಿಯೇಟರ್ ಅನ್ನು ರಚಿಸಲಾಗಿರುತ್ತದೆ. ಅತ್ಯಾಧುನಿಕ ಯಂತ್ರೋಪಕರಣಗಳ ಮೂಲಕ ಆಪರೇಷನ್ ನಡೆಸುವುದು ಇಲ್ಲಿನ ವಿಶೇಷತೆ

ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ - 7ಮಂದಿಗೆ ಗಾಯ

Posted by Vidyamaana on 2024-04-15 13:37:24 |

Share: | | | | |


ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ - 7ಮಂದಿಗೆ ಗಾಯ

ವಿಟ್ಲ: ಪುಣಚ ಗ್ರಾಮದ ಬರೆಂಜ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತು ಕುಸಿತವಾಗಿ 7ಮಂದಿಗೆ ಗಾಯವಾಗಿದೆ.

ಸೇತುವೆಯ ಕೊನೆಯ ಹಂತದ ಕಾರ್ಯವಾಗಿ ಕಾಂಗ್ರಿಂಟ್ ಮಿಕ್ಸ್ ಹಾಕುತ್ತಿದ್ದ ಸಮಯ ತಳಭಾಗದಿಂದ ನೀಡಿದ ರಾಡ್ ಜಾರಿದ ಹಿನ್ನಲೆಯಲ್ಲಿ ಮೇಲ್ಭಾಗದ ಸಂಪೂರ್ಣ ಕಾಂಗ್ರೀಟ್ ವ್ಯವಸ್ಥೆ ಕುಸಿತವಾಗಿದೆ.

Recent News


Leave a Comment: