ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಸುದ್ದಿಗಳು News

Posted by vidyamaana on 2024-07-23 21:09:49 |

Share: | | | | |


ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ  ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಬೆಂಗಳೂರು : ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ಪರವಾನಗಿ ಹಾಗೂ ಅದೇ ಶಾಲೆಯ ತರಬೇತುದಾರನ ಚಾಲನಾ ಪರವಾನಗಿಯನ್ನು (ಡಿಎಲ್‌) ಸಾರಿಗೆ ಮತ್ತು ರಸ್ತೆ ಸುರಕ್ಷತಾ ಇಲಾಖೆ ರದ್ದುಗೊಳಿಸಿದೆ. 

ಯುವತಿಗೆ ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಅಡಿ ಕಾರು ತರಬೇತಿದಾರನ ವಿರುದ್ಧ ಬಸವೇಶ್ವರನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆಯಂತೆ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ.

ನಗರದ ಯಾವುದೇ ಡ್ರೈವಿಂಗ್ ಶಾಲೆಯಲ್ಲೂ ಈ ರೀತಿಯ ಘಟನೆಗಳು ನಡೆಯಬಾರದು. ಈ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಹಾಲಕ್ಷ್ಮೀಪುರದ 18 ವರ್ಷದ ಯುವತಿ ನೀಡಿದ್ದ ದೂರು ಆಧರಿಸಿ, ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ತರಬೇತುದಾರ ಅಣ್ಣಪ್ಪ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?:‌

ದೂರು ನೀಡಿದ್ದ ಯುವತಿ ಕಾರು ಚಾಲನೆ ಕಲಿಯಲು ಮಾರುತಿ ಡ್ರೈವಿಂಗ್‌ ಸ್ಕೂಲ್‌ಗೆ ಸೇರಿದ್ದರು. ಅಣ್ಣಪ್ಪ ಎಂಬಾತ ಕಾರು ಚಾಲನೆ ಬಗ್ಗೆ ತರಬೇತಿ ನೀಡಿದ್ದರು. ಒಂದು ತಿಂಗಳ ಕೋರ್ಸ್‌ ಮುಕ್ತಾಯವಾದ ಮೇಲೆ ಅಣ್ಣಪ್ಪ, ನಿಮ್ಮ ಮನೆಯ ಕಾರಿನಲ್ಲೇ ಪರಿಪೂರ್ಣವಾಗಿ ಚಾಲನೆ ಬಗ್ಗೆ ಹೇಳಿಕೊಡುತ್ತೇನೆ. ಒಂದು ಗಂಟೆಯ ವಿಶೇಷ ಕ್ಲಾಸ್‌ಗೆ ₹750 ಕೊಡಬೇಕು ಎಂದು ಯುವತಿಯನ್ನು ಕೇಳಿಕೊಂಡಿದ್ದರು. ಯುವತಿ 15 ದಿನಗಳ ವಿಶೇಷ ಕ್ಲಾಸ್‌ಗೆ ಅಣ್ಣಪ್ಪ ಅವರಿಗೆ ₹10,500 ಪಾವತಿಸಿದ್ದರು. ಅದರಂತೆ ಅಣ್ಣಪ್ಪ ವಿಶೇಷ ತರಬೇತಿ ಆರಂಭಿಸಿದ್ದರು ಎಂದು ಪೊಲೀಸರು ಹೇಳಿದರು.

ಪ್ರತಿದಿನ ಯುವತಿಯ ಮನೆ ಬಳಿ ಬಂದು ಆಕೆಯ ಕಾರಿನಲ್ಲೇ ಅಣ್ಣಪ್ಪ ಚಾಲನೆ ತರಬೇತಿ ನೀಡುತ್ತಿದ್ದರು. ಜುಲೈ 7ರಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಯುವತಿ ಮನೆ ಬಳಿ ಬಂದಿದ್ದ ಅಣ್ಣಪ್ಪ, ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಚಾಲನೆ ಬಗ್ಗೆ ಹೇಳಿಕೊಡಲು ಮುಂದಾಗಿದ್ದರು. ಬಸವೇಶ್ವರ ನಗರದ ನ್ಯಾಷನಲ್‌ ಶಾಲೆಯ ಮೇಲ್ಸೇತುವೆಯಲ್ಲಿ ತೆರಳುವಾಗ, ಯುವತಿ ಕಾರು ಚಾಲನೆ ಮಾಡುತ್ತಿದ್ದರು. ಆಗ ಅಣ್ಣಪ್ಪ ಅಸಭ್ಯವಾಗಿ ವರ್ತಿಸಿದ್ದರು ಎಂದು ಪೊಲೀಸರು ತಿಳಿಸಿದರು.

ತರಬೇತುದಾರನ ಅಸಭ್ಯ ವರ್ತನೆಯಿಂದ ಗಾಬರಿಗೊಂಡಿದ್ದ ಯುವತಿ ಕಾರನ್ನು ಮನೆಯತ್ತ ತಿರುಗಿಸಿದ್ದರು. ಅದಾದ ಮೇಲೆ ತರಬೇತುದಾರ ಸುಮ್ಮನಾಗಿದ್ದರು. ಅಣ್ಣಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಯುವತಿ ಪೊಲೀಸರಿಗೆ ದೂರು ನೀಡಿದ್ದರು.

 Share: | | | | |


ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳ ರಾತ್ರಿ ಕಾರ್ಯಾಚರಣೆ: ಬಾಕ್ಸ್‌ಗಳಲ್ಲಿ ಕಂತೆ ಕಂತೆ ಹಣ ಪತ್ತೆ..!

Posted by Vidyamaana on 2023-10-13 08:32:15 |

Share: | | | | |


ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳ ರಾತ್ರಿ ಕಾರ್ಯಾಚರಣೆ: ಬಾಕ್ಸ್‌ಗಳಲ್ಲಿ ಕಂತೆ ಕಂತೆ ಹಣ ಪತ್ತೆ..!

ಬೆಂಗಳೂರು : ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳ ರಾತ್ರಿ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿ ವೇಳೆ ಫ್ಲ್ಯಾಟ್‌ವೊಂದರಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿದೆ. ಹೌದು, ಒಂದಲ್ಲಾ.. ಎರಡಲ್ಲಾ.. ಬರೋಬ್ಬರಿ 25 ಬಾಕ್ಸ್ ಗಳಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ. ಐನೂರು ಮುಖಬೆಲೆಯ ಕಂತೆ ಕಂತೆ ಹಣ ಪತ್ತೆಯಾಗಿದೆ.ಭ್ರಷ್ಟರು ಕಾರಿನಲ್ಲಿ ಹಣ ಸಾಗಾಟ ಮಾಡಲು ತಯಾರಿ ನಡೆಸಿದ್ದರು ಎಂದು ತಿಳಿದು ಬಂದಿದೆ. ವಿಷಯ ಅರಿತ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ನಿನ್ನೆ(ಗುರುವಾರ) ಸಂಜೆ 6ಗಂಟೆಗೆ ಪೊಲೀಸ್ ಸಿಬ್ಬಂದಿಗಳ ಭದ್ರತೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಕಕಾಲದಲ್ಲಿ ಆರ್ ಟಿ ನಗರದ ಎರಡು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಆತ್ಮಾನಂದ ಕಾಲೋನಿಯ ಫ್ಲ್ಯಾಟ್‌ವೊಂದರ ಮೇಲೆ ದಾಳಿ ನಡೆಸಲಾಗಿದೆ. ಫ್ಯಾಟ್‌ನಲ್ಲಿ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಪತ್ತೆಯಾದ ಹಣದ ಒಟ್ಟಾರೆ ಮೊತ್ತವನ್ನ ಐಟಿ ಅಧಿಕಾರಿಗಳು ಎಣಿಕೆ ಮಾಡಿದ್ದಾರೆ ಅಂತ ತಿಳಿದು ಬಂದಿದೆ. ಎಷ್ಟು ಹಣ ಪತ್ತೆಯಾಗಿದೆ ಎಂದು ಇನ್ನಷ್ಟೇ ತಿಳಿದು ಬರಬೇಕಿದೆ. ಇದೇ ವೇಳೆ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ನಿವಾಸದ ಮೇಲೂ ಐಟಿ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.

ಪುತ್ತೂರು : ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿದ್ದ ಹೋರಿ ನಾಪತ್ತೆ

Posted by Vidyamaana on 2024-05-04 21:54:38 |

Share: | | | | |


ಪುತ್ತೂರು : ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿದ್ದ ಹೋರಿ ನಾಪತ್ತೆ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿರುತ್ತಿದ್ದ ಸಾಧು ಸ್ವಭಾವದ ‘ಅಣ್ಣು’ ಎಂಬ ಹೆಸರಿನ ಹೋರಿಯೊಂದು ನಾಪತ್ತೆಯಾಗಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ರವಾನೆಯಾಗುತ್ತಿದೆ.ಎ.30ರಿಂದ ಈ ಹೋರಿ ನಾಪತ್ತೆಯಾಗಿದೆ ಎನ್ನಲಾಗುತ್ತಿದೆ.

77ನೇ ಸ್ವಾತಂತ್ರ್ಯೋತ್ಸವ : ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

Posted by Vidyamaana on 2023-08-15 03:26:47 |

Share: | | | | |


77ನೇ ಸ್ವಾತಂತ್ರ್ಯೋತ್ಸವ : ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

ಹೊಸದಿಲ್ಲಿ: ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ದೆಹಲಿಯ ಕೆಂಪು ಕೋಟೆಯಲ್ಲಿ ಇಂದು (ಮಂಗಳವಾರ) ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು.


77ನೇ ಸ್ವಾತಂತ್ರ್ಯ ದಿನದಂದು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಪುತ್ಥಳಿಗೆ ಪ್ರಧಾನಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಕೆಂಪು ಕೋಟೆ ಕಡೆ ಆಗಮಿಸಿದರು.


ಕೆಂಪುಕೋಟೆ ತಲುಪಿದ ಪ್ರಧಾನಿ ಮೋದಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ರಕ್ಷಣಾ ಕಾರ್ಯದರ್ಶಿ ಗಿರಿಧರ್ ಆರಾಮ್ನೆ ಸ್ವಾಗತಿಸಿದರು. ಬಳಿಕ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಐಎಎಫ್ ಹೆಲಿಕಾಪ್ಟರ್ ತ್ರಿವರ್ಣ ಧ್ವಜಕ್ಕೆ ಪುಷ್ಪವೃಷ್ಟಿ ಮಾಡಿತು.


ಹಿಂದಿನ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿಗಳನ್ನು ಆಹ್ವಾನಿಸಲಾಗಿದ್ದು, ದೇಶಾದ್ಯಂತ ವಿವಿಧ ವೃತ್ತಿಗೆ ಸೇರಿದ 1800 ಮಂದಿಯನ್ನು ತಮ್ಮ ಸಂಗಾತಿಯ ಜೊತೆಗೆ ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ.

ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ನಿಧನ

Posted by Vidyamaana on 2024-06-30 16:12:44 |

Share: | | | | |


ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ನಿಧನ

ಬೆಂಗಳೂರು ,ಜೂ.30- ಮಾಜಿ ಮುಖ್ಯಮಂತ್ರಿವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ (50) ಅನಾರೋಗ್ಯದಿಂದ ನಿಧನವಾಗಿದ್ದಾರೆ.ಅನಾರೋಗ್ಯದಿಂದಾಗಿ ಏಕಾಏಕಿ ಬಳಲಿದ್ದ ಅವರು, ನಿನ್ನೆ ಸಂಜೆ ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಅಗ್ನಿವೀರ್ ಗೆ ಆಯ್ಕೆಯಾದ ಭವೀಶ್ ಗೆ ಮುಳಿಯ ಜ್ಯುವೆಲ್ಲರ್ಸ್‌ ವತಿಯಿಂದ ಅಭಿನಂದನೆ

Posted by Vidyamaana on 2024-06-18 13:17:16 |

Share: | | | | |


ಅಗ್ನಿವೀರ್ ಗೆ ಆಯ್ಕೆಯಾದ ಭವೀಶ್ ಗೆ ಮುಳಿಯ ಜ್ಯುವೆಲ್ಲರ್ಸ್‌ ವತಿಯಿಂದ ಅಭಿನಂದನೆ

ಪುತ್ತೂರು: ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯ ಮೂಲಕ ಯುವಕರಿಗೆ ಸೇನೆಯಲ್ಲಿ ಸೇವೆ ನೀಡುವ ಅವಕಾಶವನ್ನು ಕಲ್ಪಿಸಿದೆ. ದೇಶ ಭಕ್ತಿ ಅಂತರಾಳದಲ್ಲಿ ಇದ್ದ ಕಾರಣದಿಂದ ಅಗ್ನಿವೀರನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ. ಎಲ್ಲರಿಗೂ ಮಾದರಿಯಾಗಿರುವ ಯುವಕ ಬೇರೆ ಯುವಕರನ್ನು ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಸಾಮಥ್ಯವನ್ನು ಹೊಂದಿದ್ದಾನೆ ಎಂದು ಮುಳಿಯ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಕೃಷ್ಣ ಮುಳಿಯ ಹೇಳಿದರು.

ಪುತ್ತೂರು ಮುಳಿಯ ಜ್ಯುವೆಲ್ಸ್ ನ ಶಾಖೆಯಲ್ಲಿ ಮುಳಿಯ ಜ್ಯುವೆಲ್ಸ್ ನ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮೆಸ್ಕಾಂ ತುರ್ತು ಕಾಮಗಾರಿ: ಇಂದು (ಜೂನ್ 8) ವಿದ್ಯುತ್ ನಿಲುಗಡೆ

Posted by Vidyamaana on 2023-06-08 00:43:16 |

Share: | | | | |


ಮೆಸ್ಕಾಂ ತುರ್ತು ಕಾಮಗಾರಿ: ಇಂದು (ಜೂನ್ 8) ವಿದ್ಯುತ್ ನಿಲುಗಡೆ

ಪುತ್ತೂರು: ತಂತಿ ಬದಲಾವಣೆ, ಜೆಒಎಸ್‌ ದುರಸ್ತಿ ಮತ್ತು ರಸ್ತೆ ಅಗಲೀಕರಣ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್‌ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್‌ಪ್ರೆಸ್, ಕಾಂಚನ, ಉಪ್ಪಿನಂಗಡಿ ಓಲ್ಡ್, ರಾಮಕುಂಜ ವಾಟರ್‌ಸಭೆ ಫೀಡರ್‌ನಲ್ಲಿ ಜೂ.8ರಂದು ಬೆಳಿಗ್ಗೆ 10ರಿಂದ ಅಪರಾಹ್ನ 5ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಅದುದರಿಂದ 110/33/11 ಕೆಇ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಫೀಡರ್‌ನಿಂದ ವಿದ್ಯುತ್‌ ಸರಬರಾಜಾಗುವ ಬೆಳ್ಳಿಪ್ಪಾಡಿ, ಚಿಕ್ಕಮುನ್ನೂರು, ಕೋಡಿಂಬಾಡಿ, ಬನ್ನೂರು, ಹಿರೇಬಂಡಾಡಿ, ರಾಮಕುಂಜ, ನೆಕ್ಕಿಲಾಡಿ, ಬಜತ್ತೂರು ಮತ್ತು ಕೊಯಿಲ ಗ್ರಾಮದ ವಿದ್ಯುತ್‌ ಬಳಕೆದಾರರು ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.



Leave a Comment: