ಹಾಸ್ಟೆಲ್‌ನಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ನರ್ಸಿಂಗ್ ವಿದ್ಯಾರ್ಥಿನಿ ದಿಯಾ

ಸುದ್ದಿಗಳು News

Posted by vidyamaana on 2024-07-08 14:36:42 |

Share: | | | | |


ಹಾಸ್ಟೆಲ್‌ನಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ನರ್ಸಿಂಗ್ ವಿದ್ಯಾರ್ಥಿನಿ ದಿಯಾ

ಬೆಂಗಳೂರು : ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.ದಿಯಾ ಮಂಡೋಲ್ ಪಶ್ಚಿಮ ಬಂಗಾಳ‌ ಮೂಲದವಳಾಗಿದ್ದು, ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು.

ಮೂರು ದಿನಗಳ ಹಿಂದೆ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ದಿಯಾ ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಾಸ್ಟೆಲ್​​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಹಪಾಠಿಗಳು ರೂಮಿಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಾಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

 Share: | | | | |


ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್

Posted by Vidyamaana on 2024-03-01 12:20:35 |

Share: | | | | |


ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್

ಬೆಂಗಳೂರು : ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್ ಲೀಸ್ಗೆ ಪಡೆದಿದ್ದರು. ಮೂರು ತಿಂಗಳು ಕಳೆಯುತ್ತಿದ್ದಂತೆ ಅವ್ರಿಗೆ ಕಾದಿತ್ತು ಮುಂದೆ ಶಾಕ್. ಬಾಗಿಲಿಗೆ ಬಂದ ಬ್ಯಾಂಕಿ ನೋಟಿಸ್ ನೋಡಿ ಶಾಕ್ ಆಗಿದ್ರು.ಏಕಾಏಕಿ ಬ್ಯಾಂಕಿನವರು ಮನೆಗೆ ಬೀಗ ಜಡಿದಿದ್ದು, ಪ್ಲಾಟ್ ಲೀಸ್ಗೆ ಪಡೆದವರು ಅತ್ತ ಇರಲು ಮನೆ ಇಲ್ಲದೆ, ಇತ್ತ ಕೊಟ್ಟ ಹಣವು ಇಲ್ಲದ ಬೀದಿ ಪಾಲಾಗಿದ್ದಾರೆ.. ಅಷ್ಟಕ್ಕೂ ಈ ಘಟನೆ ನಡೆದಿದಾದ್ರು ಎಲ್ಲಿ ಅಂತೀರಾ ನೋಡಿ ಈ ರಿಪೋರ್ಟ್ ನಲ್ಲಿ..


ಹೀಗೆ ಫೋಟೋದಲ್ಲಿ ಪೋಸ್ ಕೋಡುತ್ತಿರುವ ಇವ್ರು ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ನಿವಾಸಿಗಳಾದ ಅಜಿತ್ ಕುಮಾರ್ ಮತ್ತು ಸುಜತಾ. ವಂಚನೆಯನ್ನೆ ಕಾಯಕ ಮಾಡಿಕೊಂಡಿರುವ ಇವ್ರು ಆನೇಕಲ್ ಪೊಲೀಸರ ಅತಿಥಿಯಾಗಿದ್ದಾರೆ. ಹೌದು ಚಂದಾಪುರ ರಸ್ತೆಯಲ್ಲಿನ ಯುಬಿಎಚ್ಸಿ ಅಪಾರ್ಟ್ಮೆಂಟ್ನಲ್ಲಿನ ತಮ್ಮ ಎರಡು ಪ್ಲಾಟ್ಗಳ ಮೇಲೆ ಬರೋಬ್ಬರಿ ಐವತ್ತು ಲಕ್ಷ ಲೋನ್ ಪಡೆದ ಅಸಾಮಿಗಳು ಅದೇ ಪ್ಲಾಟ್ ಗಳನ್ನು ಲೀಜ್ಗೆ ನೀಡಿ ಲಕ್ಷ ಲಕ್ಷ ವಸೂಲಿ ಮಾಡಿದ್ದಾರೆ. ಬಳಿಕ ಬ್ಯಾಂಕ್ ಲೋನ್ ಕಟ್ಟದೇ ಎಸ್ಕೇಪ್ ಆಗಿದ್ದಾರೆ. ಮೂರ್ನಾಲ್ಕು ನೋಟಿಸ್ ಕೊಟ್ಟ ಬ್ಯಾಂಕಿನವರು ಪ್ಲಾಟ್ ವಾಸಿಗಳನ್ನು ಉಟ್ಟಬಟ್ಟೆಯಲ್ಲಿ ಹೊರ ಹಾಕಿ ಬೀಗ ಜಡಿದಿದ್ದಾರೆ.ಇನ್ನೂ ರಿಯಲ್ ಎಸ್ಟೇಟ್ ಹೆಸರಲ್ಲಿ ರೀಲ್ ಬಿಟ್ಟು ಯಾಮಾರಿಸುವ ಅಜಿತ್ ಮತ್ತು ಸುಜತಾ ದಂಪತಿ ತಾವು ರಿಯಲ್ ಎಸ್ಟೇಟ್ ನಲ್ಲಿ ಒಳ್ಳೆಯ ಬಿಸಿನೆಸ್ ಮಾಡುತ್ತಿದ್ದೆವೆ. ತಮ್ಮದು ಸಾಕಷ್ಟು ಪ್ಲಾಟ್, ವಿಲ್ಲಾ ಮತ್ತು ನಿವೇಶನಗಳಿದ್ದು, ಕಡಿಮೆ ಬೆಲೆಗೆ ಲೀಜ್ ಮತ್ತು ಮಾರಾಟ ಮಾಡುತ್ತೆವೆ ಎಂದು ಜಾಹಿರಾತು ನೀಡುತ್ತಾರೆ. ಇವರ ಬಿಲ್ಡ್ ಅಪ್ ಕಂಡು ಇಂದು ಪ್ಲಾಟ್ ಲೀಜ್ ಪಡೆದವರು ಅಕ್ಷರಶಃ ಹಣ ಮತ್ತು ಮನೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಇನ್ನೂ ಸಾಕಷ್ಟು ಮಂದಿಗೆ ಅಜಿತ್ ದಂಪತಿ ಮಕ್ಮಲ್ ಟೋಪಿ ಹಾಕಿದ್ದು, ನಮಗೆ ನ್ಯಾಯ ಕೊಡಿಸಿ ಎಂದು ವಂಚನೆಗಳೊಗಾದ ಗ್ರಾಹಕರು ಆನೇಕಲ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.


ಇನ್ನೂ ಆನೇಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಂಚಕ ದಂಪತಿಯನ್ನ ಬಂಧಿಸಿ ಜೈಲಿಗೆ ಕಳುಹಿಸಿದ್ದು, ಲಕ್ಷಾಂತರ ರೂಪಾಯಿ ಹಣ ನೀಡಿ ಮನೆ ಲೀಸ್ಗೆ ಪಡೆದಿದ್ದ ಗ್ರಾಹಕರು ಅತ್ತ ನೀಡಿದ ಹಣವೂ ಕೈ ಸೇರದೆ ಇತ್ತ ಇರಲು ಮನೆಯು ಸಹ ಇಲ್ಲದೆ ಬೀದಿಗೆ ಬೀಳುವಂತಾಗಿದ್ದು ಮಾತ್ರ ವಿಪರ್ಯಾಸ ಸಂಗತಿ.

ಮನೆಯಲ್ಲೇ ನೇಣು ಬಿಗಿದುಕೊಂಡ ಮಹಿಳೆ… ಪ್ರಿಯಕರ ಲಿಂಗರಾಜು ಪೊಲೀಸ್ ವಶಕ್ಕೆ

Posted by Vidyamaana on 2023-10-19 09:50:08 |

Share: | | | | |


ಮನೆಯಲ್ಲೇ ನೇಣು ಬಿಗಿದುಕೊಂಡ ಮಹಿಳೆ…  ಪ್ರಿಯಕರ ಲಿಂಗರಾಜು ಪೊಲೀಸ್ ವಶಕ್ಕೆ

ರಾಮನಗರ: ಮನೆಯಲ್ಲಿ ಯಾರು ಇಲ್ಲದ ವೇಳೆ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕನಕಪುರದ ನಿರ್ವಾಣೇಶ್ವರ ನಗರದಲ್ಲಿ ಮಂಗಳವಾರ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.



ಕಮಲಾಬಾಯಿ (38) ಆತ್ಮಹತ್ಯೆಗೆ ಶರಣಾದ ಮಹಿಳೆ.


ಮಂಗಳವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಮಲಾಬಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಬುಧವಾರ ಬೆಳಿಗ್ಗೆ ಮನೆಯವರಿಗೆ ಗೊತ್ತಾಗಿದೆ ಅಷ್ಟೋತ್ತಿಗಾಗಲೇ ಮಹಿಳೆ ಮೃತಪಟ್ಟಿದ್ದರು ಎನ್ನಲಾಗಿದೆ. ಬಳಿಕ ಮನೆಯವರು ಕನಕಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹಿಳೆಯ ಪ್ರಿಯಕರ ಲಿಂಗರಾಜು ನಾಯಕ(47) ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಪತಿಯಿಂದ ದೂರವಾಗಿದ್ದ ಕಮಲಾಬಾಯಿ ಲಿಂಗರಾಜು ನಾಯಕ್ ಜೊತೆ ಸಂಬಂಧ ಹೊಂದಿರುವ ಬಗ್ಗೆ ಶಂಕೆ ಇತ್ತು, ಅಲ್ಲದೆ ಈ ಹಿಂದೆ ಇಬ್ಬರು ಜೊತೆಯಲ್ಲಿ ವಾಸಿಸುತ್ತಿದ್ದು, ಇಬ್ಬರ ನಡುವೆ ಗಲಾಟೆ ಆಗಿರುವ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತ್ತು. ಮೃತ ಮಹಿಳೆಯ ಮಗ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಲಿಂಗರಾಜು ನನ್ನ ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಲಿಂಗರಾಜುನನ್ನು ವಿಚಾರಣೆ ನಡೆಸುತ್ತಿದ್ದಾರೆ.


ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹಿಳೆಯ ಪ್ರಿಯಕರ ಲಿಂಗರಾಜು ನಾಯಕ(47) ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಡಬ: ಇಚ್ಚಂಪಾಡಿಯಲ್ಲಿ ಕಾಡಾನೆ ದಾಳಿ:ಗಂಭೀರ ಗಾಯಗೊಂಡು ಬಿಜು ಕುಮಾರ್ ಆಸ್ಪತ್ರೆಗೆ ದಾಖಲು

Posted by Vidyamaana on 2023-05-28 13:44:56 |

Share: | | | | |


ಕಡಬ: ಇಚ್ಚಂಪಾಡಿಯಲ್ಲಿ ಕಾಡಾನೆ ದಾಳಿ:ಗಂಭೀರ ಗಾಯಗೊಂಡು ಬಿಜು ಕುಮಾರ್ ಆಸ್ಪತ್ರೆಗೆ ದಾಖಲು

ಕಡಬ : ಕಾಡಾನೆ ದಾಳಿಗೆ ಇಬ್ಬರು ಮೃತಪಟ್ಟ ಘಟನೆ ಬೆನ್ನಿಗೇ ಮತ್ತೆ ಕಾಡಾನೆ ದಾಳಿ ನಡೆದಿದೆ. ಆದರೆ ವ್ಯಕ್ತಿ ಪವಾಡಸದೃಶ ಪಾರಾಗಿದ್ದು, ಗಂಭೀರ ಗಾಯಗೊಂಡಿದ್ದಾರೆ

ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಮೇ 28ರಂದು ಮಧ್ಯಾಹ್ನ ನಡೆದಿದೆ.

ಇಚ್ಲಂಪಾಡಿ ನಿವಾಸಿ ವಿಜುಕುಮಾರ್ ಕಾಡಾನೆ ದಾಳಿಯಿಂದ ಗಾಯಗೊಂಡವರು. ಇವರು ಮಧ್ಯಾಹ್ನ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಇಚ್ಲಂಪಾಡಿ ಗ್ರಾಮದ ನಡುಮನೆ ಕ್ರಾಸ್ ಬಳಿ ಕಾಡಾನೆ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಗಂಭೀರ ಗಾಯಗೊಂಡಿರುವ ವಿಜುಕುಮಾರ್ ಅವರಿಗೆ ಕಡಬದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಪುತ್ತೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಈ ಪ್ರದೇಶದಲ್ಲಿ ಎರಡು ಕಾಡಾನೆಗಳು ಬೀಡು ಬಿಟ್ಟಿವೆ ಎಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.

ಡ್ರೈವಿಂಗ್‌ನಲ್ಲಿರುವಾಗಲೇ ಬಸ್ ಚಾಲಕನಿಗೆ ಹೃದಯಾಘಾತ: ಆಸ್ಪತ್ರೆಯಲ್ಲಿ ನಿಧನ

Posted by Vidyamaana on 2024-02-19 12:22:54 |

Share: | | | | |


ಡ್ರೈವಿಂಗ್‌ನಲ್ಲಿರುವಾಗಲೇ ಬಸ್ ಚಾಲಕನಿಗೆ ಹೃದಯಾಘಾತ: ಆಸ್ಪತ್ರೆಯಲ್ಲಿ ನಿಧನ

ಕುಂಬಳೆ: ಬಸ್‌ ಚಲಾಯಿಸುತ್ತಿದ್ದ ವೇಳೆಯಲ್ಲಿ ಚಾಲಕ ಹೃದಯಾಘಾತದಿಂದ ಸಾವೀಗೀಡಾದ ಘಟನೆ ಚೇವಾರು ಕುಂಟಂಗರಡ್ಕದಲ್ಲಿ ನಡೆದಿದೆ.


ಕಾಸರಗೋಡು-ಧರ್ಮತ್ತಡ್ಕ ಮಾರ್ಗವಾಗಿ ಸಂಚರಿಸುತ್ತಿದ್ದ ಖಾಸಗಿ ಬಸ್‌‌ನ ಚಾಲಕ ಕುಂಟಗರಡ್ಕದ ಅಬ್ದುಲ್‌ ರಹಿಮಾನ್‌ (42) ಮೃತ ವ್ಯಕ್ತಿ. ಧರ್ಮತ್ತಡ್ಕದಿಂದ ಬಸ್ ಕಾಸರಗೋಡಿಗೆ ತೆರಳುತ್ತಿದ್ದು, ಕುಂಟಗರಡ್ಕಕ್ಕೆ ತಲಪಿದಾಗ ಅಬ್ದುಲ್ ರಹಿಮಾನ್‌ಗೆ ಎದೆನೋವು ಕಾಣಿಸಿಕೊಂಡಿದೆ.


ಅಬ್ದುಲ್ ರಹಿಮಾನ್ ತಕ್ಷಣ ಬಸ್‌‌ಅನ್ನು ರಸ್ತೆ ಬದಿ ನಿಲ್ಲಿಸಿ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಆ ಬಳಿಕ ಅವರು ಕುಸಿದು ಬಿದ್ದಿದ್ದಾರೆ.


ಅವರನ್ನು ಬಂದ್ಯೋಡು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ..ಮೃತರು ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ.

ಭಾರತದ ಕನಸಿನ ತೇರು: ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Posted by Vidyamaana on 2023-07-14 09:47:39 |

Share: | | | | |


ಭಾರತದ ಕನಸಿನ ತೇರು: ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

ಶ್ರೀಹರಿಕೋಟಾ: 9.8.7.6.5.4.3…2…1..0 ಅಗ್ನಿ ಜ್ವಾಲೆಯನ್ನು ಉಗುಳುತ್ತಾ ಕೋಟಿ ಕೋಟಿ ಭಾರತೀಯರ ಕನಸಾದ ಚಂದ್ರಯಾನ -3 ಉಪಗ್ರಹವನ್ನು ಹೊತ್ತ ಮಾರ್ಕ್ 3 ನೌಕೆ ನಭಕ್ಕೆ ಹಾರಿದೆ. ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ -3 ಶಶಾಂಕ ದಕ್ಷಿಣ ಧ್ರುವದತ್ತ ಪ್ರಯಾಣ ಬೆಳೆಸಿದೆಚಂದ್ರಯಾನ-3 ಗಗನನೌಕೆಯು ಪ್ರೊಪಲ್ಷನ್‌ ಮಾಡ್ಯೂಲ್‌, ಲ್ಯಾಂಡರ್‌, ರೋವರ್‌ ಹೊತ್ತೊಯ್ದಿದೆ. ಇದರ ಒಟ್ಟು ತೂಕ 3,926 ಕೆಜಿ. ಪ್ರೊಪಲ್ಷನ್‌ ಮಾಡ್ಯೂಲ್‌ ತೂಕವು 2,148 ಕೆಜಿ, ಲ್ಯಾಂಡರ್‌ (ರೋವರ್‌ ಸಹಿತ) 1,752 ಕೆಜಿ, ರೋವರ್‌ 26 ಕೆಜಿ ತೂಕವಿದೆ. ಪ್ರೊಪಲ್ಷನ್‌ ಮಾಡ್ಯೂಲ್‌ 3 ರಿಂದ 6 ತಿಂಗಳ ಜೀವಿತಾವಧಿ ಹೊಂದಿದೆ. ಲ್ಯಾಂಡರ್‌, ರೋವರ್‌ ಜೀವಿತಾವಧಿ 1 ಚಂದ್ರನ ದಿನ (14 ಭೂಮಿ ದಿನಗಳು) ಇರಲಿದೆ (ಚಂದ್ರನ ಹಗಲಿನಲ್ಲಿ ಚಾರ್ಜ್‌ ಆಗಲಿದೆ). ಈ ನೌಕೆ ಚಂದ್ರನಲ್ಲಿ ತಲುಪಲು 42 ದಿನಗಳನ್ನು ತೆಗೆದುಕೊಳ್ಳಲಿದೆ. ಅಂದರೆ ಆಗಸ್ಟ್ 23 ಅಥವಾ 24ರಂದು ಚಂದ್ರನಲ್ಲಿ ಇಳಿಯಲಿದೆ.


ಈವರೆಗೆ ಯಾವುದೇ ಉಪಕರಣಗಳು ಹೋಗದ ಚಂದ್ರನ ದಕ್ಷಿಣ ಧ್ರುವದಲ್ಲಿ ಇಸ್ರೋ ತನ್ನ ನೌಕೆಯನ್ನು ಇಳಿಸುವ ಸಾಹಸಕ್ಕೆ ಮುಂದಾಗಿದೆ. ಚಂದ್ರನ ಅಧ್ಯಯನಕ್ಕೆ 2019ರ ಜು.22ರಂದು ಇಸ್ರೋ ಕೈಗೊಂಡಿದ್ದ ಚಂದ್ರಯಾನ-2 ಯೋಜನೆ ವಿಫಲವಾದ ಕಾರಣ ಮತ್ತೊಂದು ಚಂದ್ರಯಾನ ಯೋಜನೆಯನ್ನು ಇಸ್ರೋ ಕೈಗೆತ್ತಿಕೊಂಡಿದೆ. ಈ ಬಾರಿ ನೌಕೆ ಇಳಿಸಲು 4 ಕಿ.ಮೀ. X 2.5 ಕಿ.ಮೀ.ನ ವಿಶಾಲ ಸ್ಥಳವನ್ನು ಗುರುತಿಸಲಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಉಷ್ಣಾಂಶ -230 ಡಿ.ಸೆ. ಗಿಂತ ಕಡಿಮೆ ಇದ್ದು, ಇಲ್ಲಿ ಬಹುಕಾಲದವರಗೆ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪಳೆಯುಳಿಕೆಗಳು ಇರುವ ಅಂದಾಜಿದೆ. ಅಲ್ಲದೆ, 2008ರಲ್ಲಿ ಕೈಗೊಂಡ ಚಂದ್ರಯಾನ-1 ಚಂದ್ರನ ದಕ್ಷಿಣ ಧ್ರುವದಲ್ಲಿ ನೀರಿದೆ ಎಂಬುದು ಪತ್ತೆ ಹಚ್ಚಿದ ಹಿನ್ನೆಲೆಯಲ್ಲಿ ದಕ್ಷಿಣ ಧ್ರುವವನ್ನೇ ಆಯ್ಕೆ ಮಾಡಿಕೊಳ್ಳಲಾಗಿದೆ. ಅಲ್ಲದೆ, ದಕ್ಷಿಣ ಧ್ರುವದಲ್ಲಿ ಈ ವರೆಗೂ ಬೆಳಕನ್ನೇ ಕಾಣದ ಹಲವು ಪ್ರದೇಶಗಳಿರುವ ಕಾರಣ ಇದು ವಿಜ್ಞಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

ಡಾ.ಸುರೇಶ್ ಪುತ್ತೂರಾಯರಿಗೆ ಅರುಣ್ ಕುಮಾ‌ರ್ ಪುತ್ತಿಲ ಚುನಾವಣಾ ಕಚೇರಿಯಲ್ಲಿ ಅದ್ದೂರಿ ಸ್ವಾಗತ.

Posted by Vidyamaana on 2023-04-26 00:55:19 |

Share: | | | | |


ಡಾ.ಸುರೇಶ್ ಪುತ್ತೂರಾಯರಿಗೆ ಅರುಣ್ ಕುಮಾ‌ರ್ ಪುತ್ತಿಲ ಚುನಾವಣಾ ಕಚೇರಿಯಲ್ಲಿ ಅದ್ದೂರಿ ಸ್ವಾಗತ.

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ. ಅವರನ್ನು ಬೆಂಬಲಿಸುವಂತೆ ಹೇಳಿಕೆ ನೀಡಿದ್ದ. ಪುತ್ತೂರಿನ ಜನಪ್ರಿಯ ವೈದ್ಯ ಡಾ.ಸುರೇಶ್ ಪುತ್ತೂರಾಯರವರು ಏ.25ರಂದು ಸಂಜೆ ಅರುಣ್ ಕುಮಾರ್ ಪುತ್ತಿಲರವರ ಚುನಾವಣಾ ಕಚೇರಿಗೆ ಭೇಟಿ ನೀಡಿದಾಗ ಅವರನ್ನು ಹೂ ಹಾರ ಹಾಕಿ ಸ್ವಾಗತಿಸಲಾಯಿತು.

ಶ್ರೀ ಕೃಷ್ಣ ಉಪಾಧ್ಯಾಯ, ಪ್ರಸನ್ನ ಕುಮಾರ್ ಮಾರ್ತ, ಮನೀಷ್ ಕುಲಾಲ್, ಕೃಷ್ಣ ಪ್ರಸಾದ್ ಶೆಟ್ಟಿ, ಗೋಪಾಲ್ ಎಂ.ಯು., ರೂಪೇಶ್ ನ್ಯಾಕ್ ಮೊದಲಾದವರು ಡಾ.ಸುರೇಶ್ ಪುತ್ತೂರಾಯರವರನ್ನು ಹೂ ಹಾರ ಹಾಕಿ ಸ್ವಾಗತಿಸಿದರು.

Recent News


Leave a Comment: