ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ವಿಶಿಷ್ಟ ಕ್ಯಾಂಪೇನ್ ಕಾರ್ ಬಿಟ್ಟು ರಿಕ್ಷಾ ಏರಿ ಪ್ರಚಾರ ನಡೆಸಿದ ಕೈ ಅಭ್ಯರ್ಥಿ

Posted by Vidyamaana on 2024-04-15 08:36:00 |

Share: | | | | |


ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ವಿಶಿಷ್ಟ ಕ್ಯಾಂಪೇನ್ ಕಾರ್ ಬಿಟ್ಟು ರಿಕ್ಷಾ ಏರಿ ಪ್ರಚಾರ ನಡೆಸಿದ ಕೈ ಅಭ್ಯರ್ಥಿ

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ಉಳ್ಳಾಲ ವಿಧಾನಸಭಾ ಕ್ಷೇತ್ರದ ವಿವಿದೆಡೆ ಪ್ರಚಾರ ಕಾರ್ಯ ನಡೆಯಿತು.


ಪದ್ಮರಾಜ್ ಆರ್. ಪೂಜಾರಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮನೆ, ಅಂಗಡಿಗಳಿಗೆ ತೆರಳಿ, ಮತ ಯಾಚನೆ ನಡೆಸಿದರು.

ಕೋಟೆಕಾರ್, ಕಾಪಿಕಾಡ್, ತಲಪಾಡಿಯ ಕೆ.ಸಿ. ರೋಡ್ ಜಂಕ್ಷನ್, ಕುಂಪಲಕ್ರಾಸ್, ಕುಂಪಲ ಆಶ್ರಯ ಕಾಲನಿ, ಪಿಲಾರು, ಕುತ್ತಾರು, ಅಂಬ್ಲಮೊಗರು, ಅಸೈಗೋಳಿ, ಕೊಣಾಜೆ, ಗ್ರಾಮಚಾವಡಿ ಮೊದಲಾದೆಡೆ ಪ್ರಚಾರ ಕಾರ್ಯ ನಡೆಸಲಾಯಿತು.

ಅಮಿತ್‌ ಶಾ ಭೇಟಿಯಾದ ಹೆಚ್‌ಡಿಕೆ, ಮಂಜುನಾಥ್

Posted by Vidyamaana on 2024-03-17 13:57:09 |

Share: | | | | |


ಅಮಿತ್‌ ಶಾ ಭೇಟಿಯಾದ ಹೆಚ್‌ಡಿಕೆ, ಮಂಜುನಾಥ್

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy), ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ (CN Manjunath) ಭೇಟಿಯಾಗಿ ಮಾತುಕತೆ ನಡೆಸಿದರು.ಲೋಕ ಸಭಾ ಚುನಾವಣೆಗೆ ಇನ್ನೇನೂ ಕೆಲವೇ ದಿನಗಳು ಬಾಕಿಯಿದೆ. ಈ ಬೆನ್ನಲ್ಲೇ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ಈ ವೇಳೆ ಕೆಲಕಾಲ ಮಾತುಕತೆ ನಡೆಸಿದರು.


ಈ ವೇಳೆ ರಾಜ್ಯ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್, ಅನಸೂಯ ಮಂಜುನಾಥ್ ಇದ್ದರು.

ವಂಚನೆ ಪ್ರಕರಣ ; ಆರೋಪಿ ಚೈತ್ರಾ ಜೊತೆಗೆ ಕುಂದಾಪುರ ಸ್ಥಳನಾಮ ಬಳಸದಂತೆ ಮಾಧ್ಯಮಗಳಿಗೆ ಕೋರ್ಟ್​​ ತಡೆಯಾಜ್ಞೆ

Posted by Vidyamaana on 2023-09-24 07:16:32 |

Share: | | | | |


ವಂಚನೆ ಪ್ರಕರಣ ; ಆರೋಪಿ ಚೈತ್ರಾ ಜೊತೆಗೆ ಕುಂದಾಪುರ ಸ್ಥಳನಾಮ ಬಳಸದಂತೆ ಮಾಧ್ಯಮಗಳಿಗೆ ಕೋರ್ಟ್​​ ತಡೆಯಾಜ್ಞೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಟಿಕೆಟ್​ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಾಂತರ ರೂ. ವಂಚನೆ ನಡೆಸಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಹೆಸರಿನ ಜೊತೆಗೆ ‘ಕುಂದಾಪುರ’ ಎಂಬ ಸ್ಥಳನಾಮ ಬಳಸದಂತೆ ಬೆಂಗಳೂರು ನಗರದ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.


ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಆರೋಪಿ ಜೊತೆಗಿನ ಕುಂದಾಪುರ ಹೆಸರು ತೆಗೆದುಹಾಕುವಂತೆ ಕೋರಿ ನ್ಯಾಯಾಲಯಕ್ಕೆ ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಉದ್ಯಮಿ, ಪ್ರಸ್ತುತ ಬೆಂಗಳೂರು ಹನುಮಂತ ನಗರದ ನಿವಾಸಿ ಗಣೇಶ್​ ಶೆಟ್ಟಿ ಅರ್ಜಿ ಸಲ್ಲಿಸಿದ್ದರು.


ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಅವರ ಸುದ್ದಿ ಪ್ರಸಾರ ಮಾಡುವಾಗ ಹೆಸರಿನ ಜೊತೆಗೆ ಕುಂದಾಪುರ ಹೆಸರನ್ನು ಬಳಸುವುದರಿಂದ ಕುಂದಾಪುರ ಊರಿನ ಹೆಸರಿಗೆ ಘಾಸಿಯಾಗುತ್ತದೆ. ಈ ಒಂದು ಘಟನೆಯಿಂದ ಭವಿಷ್ಯದ ಪೀಳಿಗೆಯನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಬಹುದು. ಕುಂದಾಪುರ ದೇವಾಲಯಗಳಿರುವ ಮತ್ತು ಪ್ರಕೃತಿ ಸೊಬಗಿನ ಊರು. ಈ ಊರಿನ ಹೆಸರು ಆರೋಪಿಯೊಬ್ಬರ ಹೆಸರಿನ ಜೊತೆಗೆ ಥಳುಕು ಹಾಕಿದ ಕಾರಣಕ್ಕೆ ಹಾಳಾಗಬಾರದು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.


ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಮತ್ತು ತಂಡದ ವಿಚಾರಣೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದು ಈ ನಡುವೆ ಚೈತ್ರಾ ಪ್ರಕರಣದಲ್ಲಿ ಕುಂದಾಪುರ ಹೆಸರನ್ನು ಪದೇ ಪದೇ ಬಳಸುತ್ತಿರುವುದರಿಂದ ಅಲ್ಲಿನ ನಿವಾಸಿಗಳ, ಸ್ಥಳೀಯರ ಭಾವನೆಗೆ ಧಕ್ಕೆಯಾಗುತ್ತಿರುವುದರಿಂದ ಮಾದ್ಯಮಗಳಿಗೆ ಕುಂದಾಪುರ ಹೆಸರನ್ನು ಬಳಸದಂತೆ ನಿರ್ಬಂಧ ನೀಡುವಂತೆ ಕೋರ್ಟ್​ ಮೊರೆ ಹೋಗಿದ್ದರು. ಅದರಂತೆ ಕೋರ್ಟ್ ತಡೆಯಾಜ್ಞೆ ವಿಧಿಸಿದ್ದು, ಹೆಸರಿನ ಜೊತೆಗೆ ಸ್ಥಳನಾಮ ಬಳಸದಂತೆ ಸಮನ್ಸ್ ನೀಡಿದೆ, ಅಲ್ಲದೆ, ವಿಚಾರಣೆಯನ್ನು ಡಿಸೆಂಬರ್ 5ಕ್ಕೆ ಕಾಯ್ದಿರಿಸಿದೆ. ಈ ಬಗ್ಗೆ ಹೈಕೋರ್ಟ್ ವಕೀಲರಾದ ಎಚ್. ಪವನಚಂದ್ರ ಶೆಟ್ಟಿ ವಾದಿಸಿದ್ದರು.

ಬಿಜೆಪಿ ಟಿಕೇಟ್ ಡೀಲ್ ಪ್ರಕರಣ : ವಜ್ರಾದೇಹಿ ಸ್ವಾಮಿಜೀಗೆ ಸಿಸಿಬಿ ನೋಟೀಸ್

Posted by Vidyamaana on 2023-10-10 16:50:37 |

Share: | | | | |


ಬಿಜೆಪಿ ಟಿಕೇಟ್ ಡೀಲ್ ಪ್ರಕರಣ : ವಜ್ರಾದೇಹಿ ಸ್ವಾಮಿಜೀಗೆ ಸಿಸಿಬಿ ನೋಟೀಸ್

ಬೆಂಗಳೂರು: ಬಿಜೆಪಿ ಟಿಕೆಟ್ ಡೀಲ್ ವಿಷಯವಾಗಿ


ಹಿಂದೂ ಮುಖಂಡೆ ಚೈತ್ರ ಕುಂದಾಪುರ (Chaithra


Kundapura) ಹಾಗೂ ಹಾಲಶ್ರೀ ಸ್ವಾಮಿಜಿ


ಬಂಧನವಾಗಿ ತಿಂಗಳು ಕಳೆದ ನಂತರ ದಕ್ಷಿಣ ಕನ್ನಡದ ಪ್ರಮುಖ ಹಿಂದೂ ಪರ ಇರುವ ಸ್ವಾಮಿಜೀಗೆ ವಿಚಾರಣೆಗೆ ಹಾಜರಾಗಲು ನೋಟಿಸ್


ಜಾರಿಯಾಗಿದೆ.ಉದ್ಯಮಿ ಗೋವಿಂದ ಬಾಬು ಪೂಜಾರಿಗೆ


ಬೈಂದೂರಿನ ಬಿಜೆಪಿ ಟಿಕೇಟ್ ನೀಡುವ ವಿಚಾರವಾಗಿ ಡೀಲ್ ನಡೆದು ಚೈತ್ರ ಕುಂದಾಪುರ ಬಂಧನ ಆದ ನಂತರ ಚೈತ್ರ ಇಡಿ ಗೆ ಬರೆದ ಪತ್ರದಲ್ಲಿ ವಜ್ರಾದೇಹಿ ಶ್ರೀ, ಚಕ್ರವರ್ತಿ ಸೂಲಿಬೆಲೆ, ಹಾಗೂ ಸಿಟಿ ರವಿ ಹೆಸರು ಉಲ್ಲೇಖವಾಗಿತ್ತು.ಇದೀಗ ಸಿಸಿಬಿ ಮಂಗಳೂರು ಗುರುಪುರ ವಜ್ರಾದೇಹಿ ಮಠದ ರಾಜಶೇಖರಾನಂದ ಸ್ವಾಮಿಜೀಗೇ ನೋಟಿಸ್ ಜಾರಿ ಮಾಡಿದೆಬೆಂಗಳೂರು ನಗರ ಸಿಸಿಬಿ ಮಹಿಳಾ ಸಂರಕ್ಷಣಾ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ

ಬೆಂಗಳೂರು ಸಿಸಿಬಿ ಸಹಾಯಕ ಪೊಲೀಸ್ಕಮಿಷನರ್ ರವರಾದ ರೀನಾ ಸುವರ್ಣ ಅವರು ವಜ್ರಾದೇಹಿ ಶ್ರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಕಾಸರಗೋಡು: ಅಪಘಾತದ ಗಾಯಾಳು ಇಬ್ರಾಹಿಂ ಖಲೀಲ್ ಮೃತ್ಯು

Posted by Vidyamaana on 2023-10-03 13:42:04 |

Share: | | | | |


ಕಾಸರಗೋಡು: ಅಪಘಾತದ ಗಾಯಾಳು ಇಬ್ರಾಹಿಂ ಖಲೀಲ್ ಮೃತ್ಯು

ಕಾಸರಗೋಡು: ಸ್ಕೂಟರ್ ಮತ್ತು ಖಾಸಗಿ ಬಸ್ಸು ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದ ಸವಾರನೋರ್ವ ಮೃತಪಟ್ಟಿದ್ದಾರೆ ಉಪ್ಪಳ ಸೊಂಕಾಲ್ ನ ಇಬ್ರಾಹಿಂ ಖಲೀಲ್ (23) ಮೃತ ಪಟ್ಟವರು.

Readmore...

ಪಡೀಲ್ ಕೆಪುಳು ಬಳಿ ಬೈಕ್ ಸ್ಕೂಟರ್ ನಡುವೆ ನಡೆದ ಅಪಘಾತದ ಸಿ ಸಿ ಟಿವಿ ದೃಶ್ಯ!


ಅ 01 ರಂದು ಭಾನುವಾರ ರಾತ್ರಿ ಕುಂಬಳೆ ಭಾಸ್ಕರ ನಗರದಲ್ಲಿ ಅಪಘಾತ ನಡೆದಿತ್ತು. ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ಖಲೀಲ್ ಅ 03 ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಜೊತೆಗಿದ್ದ ಉಪ್ಪಳ ಮಣಿಮುಂಡದ ಮುಹಮ್ಮದ್ ಮಾಝ್ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ಖಲಿಸ್ತಾನ್ ಉಗ್ರ ನಿಜ್ಜರ್‌ ಹತ್ಯೆ : ಭಾರತದ ವಿರುದ್ಧ ಸೇಡು ತೀರಿಸಲು ಮುಂದಾದ ಕೆನಡಾ ಪ್ರಧಾನಿ

Posted by Vidyamaana on 2023-09-19 11:19:46 |

Share: | | | | |


ಖಲಿಸ್ತಾನ್ ಉಗ್ರ ನಿಜ್ಜರ್‌ ಹತ್ಯೆ : ಭಾರತದ ವಿರುದ್ಧ ಸೇಡು ತೀರಿಸಲು ಮುಂದಾದ ಕೆನಡಾ ಪ್ರಧಾನಿ

ಒಟ್ಟಾವ: ಜಿ-20 ಶೃಂಗಸಭೆಗೆ ಬಂದು ಖಲಿಸ್ತಾನಿ ಪರ ಮಾತನಾಡಿದ್ದ ಕೆನಡಾ ಸಿಎಂ ಜಸ್ಟೀನ್ ಟ್ರುಡೋ ನಂತರ ನಡೆದ ಕೆಲ ವಿದ್ಯಮಾನಗಳಿಂದ ತೀವ್ರ ಮುಜುಗರಕ್ಕೊಳಗಾಗಿದ್ದು, ಇದರ ವಿರುದ್ಧ ಸೇಡು ತೀರಿಸಿಕೊಳ್ಳಲು ಈಗ ಭಾರತದ ವಿರುದ್ಧ ಕತ್ತಿ ಮಸೆಯಲು ಮುಂದಾಗಿದ್ದಾರೆ. ಖಲಿಸ್ತಾನಿಗಳನ್ನು ಮಟ್ಟ ಹಾಕಲಾಗದು, ಅವರ ಪ್ರತಿಭಟನೆಯನ್ನು ನಿಲ್ಲಿಸಲಾಗದು ಎಂದು ಭಾರತಕ್ಕೆ ಬಂದಿದ್ದ ವೇಳೆ ಹೇಳಿಕೆ ನೀಡಿದ್ದ ಜಸ್ಟೀನ್ ಟ್ರುಡೋ ಅವರ ಸರ್ಕಾರ ಈಗ ಖಲಿಸ್ತಾನಿ ಉಗ್ರನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾದಲ್ಲಿರುವ ಭಾರತದ ಉನ್ನತ ರಾಜತಾಂತ್ರಿಕ ಅಧಿಕಾರಿಯನ್ನು ವಜಾ ಮಾಡಿದೆ. ಭಾರತದ ಮೋಸ್ಟ್ ವಾಂಟೆಂಡ್ ಲಿಸ್ಟ್‌ನಲ್ಲಿದ್ದ ಖಲಿಸ್ತಾನ್ ಉಗ್ರ ಹರ್‌ದೀಪ್‌ ಸಿಂಗ್ ನಿಜ್ಜರ್‌ನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.


ಕಳೆದ ಜೂನ್‌ನಲ್ಲಿ  ಖಲಿಸ್ತಾನಿ ಉಗ್ರ ಖಲಿಸ್ತಾನ್ ಉಗ್ರ ಹರ್‌ದೀಪ್‌ ಸಿಂಗ್ ನಜ್ಜರ್‌ನ ಹತ್ಯೆಯಾಗಿದ್ದು, ಈ ಹತ್ಯೆಯಲ್ಲಿ ಭಾರತದ ಪ್ರಮುಖ ಪಾತ್ರವಿದೆ ಎಂದು ಕೆನಡಾ ಆರೋಪಿಸಿದ್ದು, ಇದಕ್ಕೆ ಪ್ರತೀಕಾರವಾಗಿ ಒಟ್ಟವಾದಲ್ಲಿರುವ ಭಾರತದ ಗುಪ್ತಚರ ಇಲಾಖೆ ಮುಖ್ಯಸ್ಥನ್ನು ತೆಗೆದು ಹಾಕಿದೆ.  ಜಿ-20 ಶೃಂಗಸಭೆಯ ನಂತರ ಕೆನಡಾ ಹಾಗೂ ಭಾರತದ ನಡುವಿನ ಸಂಬಂಧ ಮತ್ತಷ್ಟು ಹಳಸಿದೆ. ಈ ಮಧ್ಯೆ ಕೆನಡಾದ ಈ ನಿರ್ಧಾರ ಈಗ ಈ ಸಂಬಂಧವನ್ನು ಮತ್ತಷ್ಟು ಕೆಡಿಸಿದೆ.


ಕಳೆದ ಜೂನ್‌ನಲ್ಲಿ ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿ ಖಲಿಸ್ತಾನಿ ಭಯೋತ್ಪಾದಕ (Khalistani terrorist) ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar)ಹತ್ಯೆ ನಡೆದಿತ್ತು. ಈ ಹತ್ಯೆಗೂ ಭಾರತೀಯ ಏಜೆಂಟರಿಗೆ ಸಂಬಂಧವಿದೆ ಎಂದು ತಮ್ಮ ಸರ್ಕಾರವು ವಿಶ್ವಾಸಾರ್ಹ ಮೂಲಗಳಿಂದ ಆರೋಪಗಳನ್ನು ಹೊಂದಿದೆ ಎಂದು ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಕೆನಡಾ ಸಂಸತ್ತಿನ ವಿರೋಧ ಪಕ್ಷದ ತುರ್ತು ಅಧಿವೇಶನದಲ್ಲಿ ಹೇಳಿದ್ದಾರೆ. ಅಲ್ಲದೇ ಈ ವಿಚಾರದಲ್ಲಿ ಭಾರತ ತನ್ನ ನಿಲುವು ಸ್ಪಷ್ಟಪಡಿಸುವಂತೆ ಅವರು ಪ್ರಬಲವಾಗಿ ಆಗ್ರಹಿಸಿದ್ದಾರೆ.


ಕೆನಡಾ ವಿದೇಶಾಂಗ ಸಚಿವೆ (Foreign Minister) ಮೆಲಾನಿ ಜೋಲಿ (Melanie Jolie) ಅವರು ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು, ಟ್ರುಡೊ ಸರ್ಕಾರವು ಈ ವಿಚಾರದಲ್ಲಿ ತಕ್ಷಣ ಕ್ರಮ ಕೈಗೊಂಡಿದೆ. ಇಂದು ನಾವು ಕೆನಡಾದಲ್ಲಿರುವವ ಭಾರತದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಕಿತ್ತು ಹಾಕಿದ್ದೇವೆ ಎಂದು ಹೇಳಿದ ಮೆಲಾನಿ ಅಧಿಕಾರಿಯ ಹೆಸರು ಹೇಳಿಲ್ಲ.  ಸೇವೆಯಿಂದ ತೆಗೆದು ಹಾಕಲ್ಪಟ್ಟ ಭಾರತೀಯ ಅಧಿಕಾರಿ ಕೆನಡಾದಲ್ಲಿ ಭಾರತದ ವಿದೇಶಿ ಗುಪ್ತಚರ ಸಂಸ್ಥೆಯಾದ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW)ನ ಮುಖ್ಯಸ್ಥರಾಗಿದ್ದಾರೆ ಎಂದು ಸಚಿವೆ ಮೆಲಾನಿ ಜೋಲಿ ಹೇಳಿದ್ದಾರೆ.


 ಜೂನ್‌ನಲ್ಲಿ ಹತ್ಯೆಯಾದ ಖಲಿಸ್ತಾನ್ ಉಗ್ರ ಹರ್‌ದೀಪ್‌ ಸಿಂಗ್ ನಿಜ್ಜರ್‌ನನ್ನು ಭಾರತವೂ ಮೋಸ್ಟ್ ವಾಂಟೆಡ್‌ ಭಯೋತ್ಪಾದಕ (Most wanted terrorist) ಎಂದು ಘೋಷಿಸಿತ್ತು.  ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಪ್ರಮುಖ ಸಿಖ್ ಸಮುದಾಯದ (Sikh community) ನೆಲೆಯಾಗಿರುವ ವ್ಯಾಂಕೋವರ್‌ನ ( Vancouver) ಉಪನಗರವಾದ ಸರ್ರೆಯಲ್ಲಿ ಜೂನ್‌ 18 ರಂದು ಈತನ ಹತ್ಯೆ ನಡೆದಿತ್ತು. ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸಿದ ಆರೋಪ ಈತನ ಮೇಲಿತ್ತು.


ಭಾರತ ಮತ್ತು ಕೆನಡಾ ನಡುವೆ ಈ ಹತ್ಯೆ ಉದ್ವಿಗ್ನತೆಗೆ ಕಾರಣವಾಗಿದೆ. ಕೆನಡಾದಲ್ಲಿ ಖಲಿಸ್ತಾನಿ ಉಗ್ರರನ್ನು ಕೆನಡಾ ಸರ್ಕಾರ ಬೆಂಬಲಿಸುತ್ತಿರುವ ಬಗ್ಗೆ ಭಾರತೀಯರು ಅಸಮಾಧಾನಗೊಂಡಿದ್ದಾರೆ. ಖಲಿಸ್ತಾನಿ ಬೆಂಬಲಿಗರ ಚಟುವಟಿಕೆಗಳ (activities of Khalistani) ಬಗ್ಗೆ ಕಣ್ಣುಮುಚ್ಚಿ ಕುಳಿತಿದೆ ಎಂಬುದು ಭಾರತದ ಆರೋಪವಾಗಿದೆ.



ಕೆನಡಾದ ಈ ಆರೋಪವೂ ಜಗತ್ತಿನಾದ್ಯಂತ ಹೊಸ ಸಂಚಲನ ಸೃಷ್ಟಿಸಲಿದೆ ಎಂದು ಕೆನಡಾ ಪ್ರಧಾನಿ ಟ್ರುಡೊ ಅವರ ಮಾಜಿ ಸಲಹೆಗಾರ ಜೋಸೆಲಿನ್ ಕೌಲನ್ (Jocelyn Coulo) ಹೇಳಿದ್ದಾರೆ. 2018 ರಲ್ಲಿ ಟರ್ಕಿಯಲ್ಲಿ ಪತ್ರಕರ್ತ ಜಮಾಲ್ ಖಶೋಗಿ (amal Khashoggi Murder) ಹತ್ಯೆಯನ್ನು ಸೌದಿ ಅರೇಬಿಯಾ (Saudi Arabia)ಸರ್ಕಾರ ಯೋಜಿಸಿದಂತೆ ವಿದೇಶದಲ್ಲಿ ರಾಜಕೀಯ ವಿರೋಧಿಗಳನ್ನು ಹತ್ಯೆ ಮಾಡುವ ರಾಷ್ಟ್ರಗಳ ಗುಂಪಿಗೆ ಭಾರತ ಸೇರುತ್ತದೆ ಎಂದು ಈಗ ಸ್ವತಂತ್ರ ಸಂಶೋಧಕರಾಗಿರುವ ಜೋಸೆಲಿನ್ ಕೌಲನ್  ಆರೋಪಿಸಿದ್ದಾರೆ.  ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಭಾರತ ಈವರೆಗೂ ಪ್ರತಿಕ್ರಿಯಿಸಿಲ್ಲ.


ಭಾರತದಲ್ಲಿ ತೀವ್ರ ಮುಜುಗರಕ್ಕೊಳಗಾಗಿದ್ದ ಟ್ರುಡೋ

ಕೆಲ ದಿನಗಳ ಹಿಂದಷ್ಟೇ ಭಾರತದಲ್ಲಿ ನಡೆದ ಜಿ-20 ಶೃಂಗ ಸಭೆಗೆ ಬಂದಿದ್ದ ಕೆನಡಾ ಪ್ರಧಾನಿ ಜಸ್ಟೀನ್ ಟ್ರುಡೋಗೆ ಪ್ರಧಾನಿ ನರೇಂದ್ರ ಮೋದಿ ಖಲಿಸ್ತಾನ್ ಉಗ್ರರನ್ನು ಮಟ್ಟ ಹಾಕುವಂತೆ ಕೇಳಿದ್ದರು. ಖಲಿಸ್ತಾನಿ  ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ  ನೀಡಿದ್ದರು. ತಮ್ಮ ಮತಬ್ಯಾಂಕ್‌ಗಾಗಿ ಖಲಿಸ್ತಾನ ಪರ ಹೇಳಿಕೆ ನೀಡುತ್ತಾ, ಭಾರತವನ್ನು ದೂಷಿಸುವ ಜಸ್ಟಿನ್ ಟ್ರುಡೋ, ಭಾರತದ ಪ್ರಧಾನಿ  ಎಚ್ಚರಿಕೆ ಬಳಿಕವೂ ಮೃಧು ಧೋರಣೆ ತಳೆದಿದ್ದರು. ಇತ್ತ ಸಭೆ ಮುಗಿಸಿ ಕೆನಡಾ  ತೆರಳಲು ಮುಂದಾದ ಜಸ್ಟಿನ್ ಟ್ರುಡೋ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಇದರ ಬೆನ್ನಲ್ಲೇ ಭಾರತ ಏರ್ ಇಂಡಿಯಾ ವಿಮಾನ ಸೇವೆ ಒದಗಿಸಲು ಮುಂದಾಗಿತ್ತು. ಏರ್ ಇಂಡಿಯಾದಲ್ಲಿ ಪ್ರಯಾಣ ಮಾಡುವಂತೆ ಭಾರತ ಸೂಚಿಸಿತ್ತು. ಆದರೆ ದರ್ಪದಿಂದಲೇ ನಿರಾಕರಿಸಿದ ಜಸ್ಟಿನ್ ಟ್ರುಡೋ, ತಾಂತ್ರಿಕ ತಂಡ ಕೆಲವೇ ಸಮಯದಲ್ಲಿ ದುರಸ್ಥಿ  ಮಾಡಲಿದ್ದಾರೆ ಎಂದಿದ್ದರು. ಆದರೆ ಕೆಲವೇ ಸಮಯ  ಬರೋಬ್ಬರಿ 36 ಗಂಟೆ ತೆಗೆದುಕೊಂಡಿತ್ತು. ಇದರಿಂದ ಟ್ರುಡೋ ಮತ್ತಷ್ಟು ಮುಜುಗರಕ್ಕೆ ಒಳಗಾಗಿದ್ದರು.

Recent News


Leave a Comment: