ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಬಿಲ್ಲವ ಯವ ಸಮಾಜ ವತಿಯಿಂದ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Posted by Vidyamaana on 2023-08-28 14:48:05 |

Share: | | | | |


ಬಿಲ್ಲವ ಯವ ಸಮಾಜ ವತಿಯಿಂದ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಬಿಲ್ಲವ ಯುವ ಸಮಾಜ ಪುತ್ತೂರು ಇದರ ವತಿಯಿಂದ ಪುತ್ತೂರು ಶಾಸಕರಾದ ಅಶೋಕ್ ರೈಯವರಿಗೆ ಅಭಿನಂದನೆ ಸಲ್ಲಿಸಲಾಯಿತು. ಶಾಸಕರ ನೂತನ ಕಚೇರಿ ಶುಭಾರಂಭ ಕಾರ್ಯಕ್ರಮದ ಬಳಿಕ ಯುವ ವೇದಿಕೆಯ ವತಿಯಿಂದ ಶಾಸಕರ ಕಚೇರಿಯಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಕ್ಷೇತ್ರದ ಅಭಿವೃದ್ದಿಗೆ ಇನ್ನಷ್ಟು ಒತ್ತು ನೀಡುವ ಮೂಲಕ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಡವರ ಕೆಲಸಗಳು ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ಕೆಲಸ ನಿಮ್ಮಿಂದಾಗಲಿ ಎಂದು ಬಿಲ್ಲವ ಯುವ ಸಮಾಜದ ಮುಖಂಡರು ಶಾಸಕರಲ್ಲಿ ವಿನಂತಿಸಿದರು. ಈ ಸಂದರ್ಭದಲ್ಲಿ ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಕಿರಣ್‌ಬಸಂತಕೋಡಿ, ದಿನೇಶ್ ಕರ್ಕೆರಾ ಕೋಲಾಡಿ, ಚಂಧ್ರಶೇಖರ್ ಕಲ್ಲಗುಡ್ಡೆ, ಚಂದ್ರಕಲಾ ಮುಕ್ವೆ, ಮೋಹನ್ ಗುರ್ಜಿನಡ್ಕ, ಕೇಶವ ಅರ್ಕ, ಮೋಹನ್ ಪೂಜಾರಿ ಪುಣಚ, ಅಶೋಕ್ ಪೂಜಾರಿ ಬೊಳ್ಳಾಡಿ, ಕೃಷ್ಣಪ್ಪ ಕಲಾವಿದ, ಎಲ್ಯಣ್ಣ ಪೂಜಾರಿ ಮಿರುಂಡ, ನಾರಾಯಣ ಪೂಜಾರಿ ಬದಿಗುಡ್ಡೆ ಮೊದಲಾದವರು ಉಪಸ್ತಿತರಿದ್ದರು. ನೆನಪಿನ ಕಾಣಿಕೆಯಾಗಿ ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರವನ್ನು ಕೊಡುಗೆಯಾಗಿ ನೀಡಿದರು.

ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ ಇಲ್ಯಾಸ್ ತುಂಬೆ

Posted by Vidyamaana on 2023-03-16 16:35:24 |

Share: | | | | |


ಚುನಾವಣಾ  ಕಣದಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ ಇಲ್ಯಾಸ್ ತುಂಬೆ

ಬಂಟ್ವಾಳ: ಕಳೆದ ಬಾರಿ ರಾಜಕೀಯ ಪ್ರಬುದ್ಧತೆಯ ಕೊರತೆಯಿಂದ ಕಾಂಗ್ರೆಸ್ ಪಕ್ಷವನ್ನು ನಂಬಿ ಸೋತಿದ್ದೇವೆ, ಈ ಬಾರಿ ಅಂತಹ ಮಹಾ ತಪ್ಪು ಮಾಡುವುದಿಲ್ಲ, 2023 ರ ವಿಧಾನಸಭಾ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಎಸ್. ಡಿ.ಪಿ.ಐ.ಪಕ್ಷದ ಅಭ್ಯರ್ಥಿ ಇಲ್ಯಾಸ್ ತುಂಬೆ ತಿಳಿಸಿದ್ದಾರೆ.ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ನ ಹಿರಿಯ ಪ್ರಭಾವಿ ನಾಯಕರ ವಿನಂತಿಯಂತೆ ಎರಡು ಶರತ್ತಿನ ಮೇಲೆ ಒಪ್ಪಂದ ವಾಗಿತ್ತು. ಮೂರು ಕ್ಷೇತ್ರದಲ್ಲಿ ಮಾತ್ರ ಎಸ್.ಡಿ.ಪಿ.ಐ ಅಭ್ಯರ್ಥಿಗಳು ಸ್ಪರ್ಧೆ ಮಾಡುವುದು, ಉಳಿದ ಎಲ್ಲಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಸಹಕಾರ ನೀಡುವ ಒಪ್ಪಂದವಾಗಿತ್ತು. ಆದರೆ ಚುನಾವಣೆಯ ಸಂದರ್ಭದಲ್ಲಿ ಅವರು ನೀಡಿದ ಮಾತನ್ನು ಪಾಲಿಸಿಲ್ಲ, ಅದೇ ನಾಯಕನ ಸೂಚನೆಯಂತೆ ಗೇಮ್ ಪ್ಲಾನ್ ನಂತೆ ಕಾಂಗ್ರೇಸಿಗರು ಬಿಜೆಪಿಗೆ ಸೇರಿ ಬಿಜೆಪಿ ಅಧಿಕಾರಕ್ಕೆ ಬರುವಂತಾಯಿತು. ಇದು ಕಾಂಗ್ರೆಸ್ ವಿಶ್ವಾಸ ದ್ರೋಹದ ಕೆಲಸ ಎಂದು ಟೀಕಿಸಿದರು.ಇನ್ನು ಕಳೆದ ಬಾರಿ ಪಕ್ಷದ ತಪ್ಪು ನಿರ್ಧಾರದಿಂದ ಪಕ್ಷದ ಸಂಘಟನೆಗೆ ಬಲಬಾದ ಹೊಡೆದ ಬಿದ್ದಿದೆ. ಹೀಗಾಗಿ ಈ ಬಾರಿ ಅಂತಹ ತಪ್ಪು ಮರುಕಳಿಸದಂತೆ ಮತ್ತು ತಲಮಟ್ಟದಿಂದ ಪಕ್ಷ ಸಂಘಟನೆಗೆ ವಿಶೇಷ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದರು.

ಗಾಂಧಿ ಜಯಂತಿ ದಿನ 1 ಗಂಟೆ ಶ್ರಮದಾನ ಮಾಡಿ : ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

Posted by Vidyamaana on 2023-09-25 14:38:42 |

Share: | | | | |


ಗಾಂಧಿ ಜಯಂತಿ ದಿನ 1 ಗಂಟೆ ಶ್ರಮದಾನ ಮಾಡಿ : ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ನವದೆಹಲಿ: ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆಯ ಅಂಗವಾಗಿ ಅಕ್ಟೋಬರ್ 1 ರಂದು ಬೆಳಿಗ್ಗೆ 10 ಗಂಟೆಗೆ ಸ್ವಚ್ಛತೆಗಾಗಿ ಒಂದು ಗಂಟೆ ಶ್ರಮದಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಈ ಸೇವಾ ಕಾರ್ಯಕ್ರಮದಲ್ಲಿ ಎಲ್ಲಾ ಜನರು ಭಾಗವಹಿಸಬೇಕೆಂದು ಅವರು ಒತ್ತಾಯಿಸಿದರು.ಮನ್ ಕಿ ಬಾತ್ ಮತ್ತು ವಂದೇ ಭಾರತ್ ರೈಲುಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ವಿಷಯವನ್ನು ಪ್ರಸ್ತಾಪಿಸಿದರು. “ನಿಮ್ಮ ಬೀದಿಯಲ್ಲಿ ಅಥವಾ ನಿಮ್ಮ ನೆರೆಹೊರೆಯಲ್ಲಿ, ಉದ್ಯಾನವನ, ನದಿ, ಸರೋವರ ಅಥವಾ ಇತರ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ನೀವು ಈ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಬಹುದು. ಅಮೃತ ಸರೋವರ ನಿರ್ಮಾಣವಾಗುವ ಎಲ್ಲೆಡೆ ಸ್ವಚ್ಛತೆ ಕಾಪಾಡಬೇಕು” ಎಂದು ಪ್ರಧಾನಿ ಹೇಳಿದರು.


ಆದರೆ.. ಏಕ್ ತಾರೀಖ್ ಏಕ್ ಘಂಟಾ ಏಕ್ ಸಾಥ್ (ಒಂದು ದಿನಾಂಕ ಒಂದು ಗಂಟೆ ಒಟ್ಟಿಗೆ) ಎಂದು ಕರೆಯಲ್ಪಡುವ ಅಭಿಯಾನದ ಭಾಗವಾಗಲು ಅವರು ಬಯಸುತ್ತಾರೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಮಾರುಕಟ್ಟೆ ಸ್ಥಳಗಳು, ರೈಲ್ವೆ ಹಳಿಗಳು, ಜಲಮೂಲಗಳು, ಪ್ರವಾಸಿ ಸ್ಥಳಗಳು, ಧಾರ್ಮಿಕ ಸ್ಥಳಗಳು ಮುಂತಾದ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸುವ ಚಟುವಟಿಕೆಗಳಲ್ಲಿ ಭಾಗವಹಿಸಲು ಎಲ್ಲಾ ವರ್ಗದ ನಾಗರಿಕರನ್ನು ಕೇಳಲಾಗಿದೆ. ಗ್ರಾಮ ಪಂಚಾಯತ್, ನಾಗರಿಕ ವಿಮಾನಯಾನ, ರೈಲ್ವೆ, ಮಾಹಿತಿ ಮತ್ತು ತಂತ್ರಜ್ಞಾನ, ಸರ್ಕಾರಿ ಸಂಸ್ಥೆಗಳು ಸೇರಿದಂತೆ ಸರ್ಕಾರದ ಎಲ್ಲಾವಲಯಗಳು ನಾಗರಿಕರ ನೇತೃತ್ವದ ಸ್ವಚ್ಚತಾ ಕಾರ್ಯಕ್ರಮಗಳಿಗೆ ಅನುಕೂಲ ಮಾಡಿಕೊಡಲಿವೆ ಎಂದು ಅದು ಹೇಳಿದೆ.


ಅಭಿಯಾನಕ್ಕಾಗಿ swachhtahiseva.com ವೆಬ್ಸೈಟ್ ಅನ್ನು ಸಹ ರಚಿಸಲಾಗಿದೆ, ಅಲ್ಲಿ ಎಲ್ಲಾ ಕಾರ್ಯಕ್ರಮಗಳು ಲಭ್ಯವಿರುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್ಜಿಒಗಳು, ಆರ್ಡಬ್ಲ್ಯೂಎಗಳು ಮತ್ತು ಖಾಸಗಿ ಸಂಸ್ಥೆಗಳು ಸಹ ಇಂತಹ ಕಾರ್ಯಕ್ರಮಗಳನ್ನು ನಡೆಸಲು ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಬಹುದು. ಸ್ವಯಂಸೇವಕರು ತಮ್ಮ ಚಟುವಟಿಕೆಗಳ ಫೋಟೋಗಳನ್ನು ತೆಗೆದುಕೊಳ್ಳಬಹುದು ಮತ್ತು ಅವುಗಳನ್ನು ಸೈಟ್ನಲ್ಲಿ ಅಪ್ಲೋಡ್ ಮಾಡಬಹುದು.


ಆದರೆ.. ಈ ಅಭಿಯಾನವನ್ನು ಸಾಮಾಜಿಕ ಮಾಧ್ಯಮಗಳು, ಇನ್ಪುಟ್ಗಳು ಮತ್ತು ಬ್ರಾಂಡ್ ಅಂಬಾಸಿಡರ್ಗಳಂತಹ ಸರ್ಕಾರಿ ಸಂಸ್ಥೆಗಳು ಉತ್ತೇಜಿಸುತ್ತವೆ. ಮನೆಯ ತ್ಯಾಜ್ಯವನ್ನು ಸಂಗ್ರಹಿಸಲು ಬಳಸುವ ಕಸದ ವ್ಯಾನ್ ಗಳು ಈ ಕಾರ್ಯಕ್ರಮವನ್ನು ಉತ್ತೇಜಿಸಲು ಜಾಹೀರಾತುಗಳು ಮತ್ತು ಜಿಂಗಲ್ಸ್ ಗಳನ್ನು ನುಡಿಸುತ್ತವೆ. ಜನರನ್ನುಸಂವೇದನಾಶೀಲಗೊಳಿಸಲು ವಿಶೇಷ ಮೊಬೈಲ್ ಕಾಲರ್ ಟ್ಯೂನ್ ಗಳನ್ನು ಸ್ಥಾಪಿಸಲು ಅಧಿಕಾರಿಗಳು ಸಜ್ಜಾಗಿದ್ದಾರೆ. ಈ ಮಧ್ಯೆ.. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದ ಸ್ವಚ್ಛ ಭಾರತ ಅಭಿಯಾನದ ಒಂಬತ್ತನೇ ವಾರ್ಷಿಕೋತ್ಸವವನ್ನು ಅಕ್ಟೋಬರ್ 2 ರಂದು ಆಚರಿಸಲಾಗುವುದು.

ಪ್ರದ್ವಿನ್ ಪರಿಸರ ಪ್ರೇಮಕ್ಕೆ ಬರ್ತ್ ಡೇ ಗಿಫ್ಟ್ ಕೊಟ್ಟ ಮರ

Posted by Vidyamaana on 2023-06-26 10:43:10 |

Share: | | | | |


ಪ್ರದ್ವಿನ್ ಪರಿಸರ ಪ್ರೇಮಕ್ಕೆ ಬರ್ತ್ ಡೇ  ಗಿಫ್ಟ್ ಕೊಟ್ಟ ಮರ

ಪುತ್ತೂರು: ಎರಡು ವರ್ಷದ ಹಿಂದೆ ತನ್ನ ಹುಟ್ಟುಹಬ್ಬದಂದು ನೆಟ್ಟ ಗಿಡದ ಅಡಿಯಲ್ಲೇ ಈ ಬಾರಿ ಮತ್ತೆ ಹುಟ್ಟು ಹಬ್ಬ ಆಚರಿಸುವ ಮೂಲಕ ಪುತ್ತೂರು ಅಂಬಿಕಾ ವಿದ್ಯಾಲಯದ ನಾಲ್ಕನೇ ತರಗತಿ ವಿದ್ಯಾರ್ಥಿ ಪ್ರದ್ವಿನ್ ಎಲ್ಲರಿಗೂ ಮಾದರಿಯಾಗಿದ್ದಾನೆ.

ತನ್ನ ಹುಟ್ಟುಹಬ್ಬದಂದು ಪ್ರತೀ ವರ್ಷವೂ ಒಂದು ಗಿಡ ತನ್ನ ಮನೆಯ ಬಳಿ ನೆಡುವ ಮೂಲಕ ಬರ್ತ್‌ಡೇ ಆಚರಣೆ ಮಾಡುತ್ತಿದ್ದಾನೆ. ತನ್ನ ಏಳನೇ ವರ್ಷದ ಹುಟ್ಟುಹಬ್ಬದಂದು ಮನೆಯ ಅಂಗಳದಲ್ಲಿ ನೆಟ್ಟಿದ್ದ ಕದಂಬ ಗಿಡದ ಬುಡದಲ್ಲೇ ಈ ಬರಿ ತನ್ನ ೯ ನೇ ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದು ಪರಿಸರ ಪ್ರೇಮಿಗಳಿಗೆ ಈ ಮೂಲಕ ತನ್ನ ಹುಟ್ಟುಹಬ್ಬದ ಸಂಭ್ರಮವನ್ನು ಹಂಚಿಕೊಂಡಿದ್ದಾನೆ.

ತಾನು ನೆಟ್ಟ ಗಿಡವನ್ನೇ ಹಬ್ಬಕ್ಕಾಗಿ ಬಲೂನ್ ಕಟ್ಟಿ ಶೃಂಗಾರ ಮಾಡಿ ಅದರ ಅಡಿಯಲ್ಲೇ ಕೇಕ್ ಕತ್ತರಿಸುವ ಮೂಲಕ ಹುಟ್ಟು ಹಬ್ಬ ಆಚರಣೆ ಮಾಡಿ ಈ ಬಾರಿಯ ಹುಟ್ಟುಹಬ್ಬದಂದು ಇನ್ನೊಂದು ಗಿಡವನ್ನು ನೆಟ್ಟಿದ್ದಾನೆ. ಪ್ರದ್ವಿನ್ ಕೋಡಿಂಬಾಡಿ ಗ್ರಾಮದ ಬದಿನಾರು ನಿವಾಸಿ ಜಯಪ್ರಕಾಶ್ ಮತ್ತು ವಿನುತಾ ದಂಪತಿಗಳ ಪುತ್ರ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜಯಪ್ರಕಾಶ್ ಬದಿನಾರ್ ಪರಿಸರದ ಬಗ್ಗೆ ಮಕ್ಕಳಿಗೆ ಎಳೆಯ ಪ್ರಾಯದಲ್ಲೇ ಪ್ರೀತಿ ಹುಟ್ಟುವಂತೆ ಮಾಡುವ ಏಕೈಕ ಉದ್ದೇಶದಿಂದ ತನ್ನ ಎರಡೂ ಮಕ್ಕಳ ಹುಟ್ಟು ಹಬ್ಬದಂದು ಪ್ರತೀ ವರ್ಷವೂ ಗಿಡ ನೆಡುವ ಮೂಲಕವೇ ಆಚರಣೆ ಮಾಡುತ್ತೇವೆ. ಇದು ಇನ್ನೊಬ್ಬರಿಗೆ ಪ್ರೇರಣೆಯಗಿ ಯಾರಾದರೂ ಒಂದು ಗಿಡ ನೆಟ್ಟರೂ ನಮಗೆ ಅದುವೇ ದೊಡ್ಡ ಸಂತೋಷ ಎಂದು ಹೇಳುತ್ತಾರೆ.

ಪುತ್ತೂರು: ಸದಾಶಿವ ಪೈ ಗೆ ಚೂರಿ ಇರಿತ - ಗುಣಶೇಖರ್ ಶೆಟ್ಟಿಗೂ ಹಲ್ಲೆ ಆಸ್ಪತ್ರೆಗೆ ದಾಖಲು

Posted by Vidyamaana on 2024-06-13 16:10:46 |

Share: | | | | |


ಪುತ್ತೂರು:  ಸದಾಶಿವ ಪೈ ಗೆ  ಚೂರಿ ಇರಿತ - ಗುಣಶೇಖರ್ ಶೆಟ್ಟಿಗೂ ಹಲ್ಲೆ ಆಸ್ಪತ್ರೆಗೆ ದಾಖಲು

ಪುತ್ತೂರು : ಹಿರಿಯ ನಾಗರಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಓರ್ವರಿಗೆ ಚೂರಿಯಿಂದ ಇರಿದ ಘಟನೆ ಕೋರ್ಟ್ ರಸ್ತೆಯಲ್ಲಿ ಗುರುವಾರ ನಡೆದಿದೆ.

ಪಾರ್ಕಿಂಗ್ ವಿಚಾರಕ್ಕೆ ಸಂಬಂಧಪಟ್ಟಂತೆ ವಾಗ್ವಾದ ನಡೆದಿದೆ ಎನ್ನಲಾಗಿದೆ.

ಸುಬ್ರಹ್ಮಣ್ಯ: ಭಾರೀ ಮಳೆಗೆ ಬೃಹತ್ ಮರ ಉರುಳಿ ಬಿದ್ದು ಮಹಿಳೆ ಮೃತ್ಯು

Posted by Vidyamaana on 2024-05-15 21:52:07 |

Share: | | | | |


ಸುಬ್ರಹ್ಮಣ್ಯ: ಭಾರೀ ಮಳೆಗೆ ಬೃಹತ್ ಮರ ಉರುಳಿ ಬಿದ್ದು ಮಹಿಳೆ ಮೃತ್ಯು

ಸುಬ್ರಹ್ಮಣ್ಯ: ಭಾರೀ ಮಳೆಯಿಂದಾಗಿ ಮರ ಬಿದ್ದು ತೋಟಕ್ಕೆ ತೆರಳಿದ್ದ ವೃದ್ಧೆ ಸಾವನ್ನಪ್ಪಿರುವ ದುರ್ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.

ಸುಬ್ರಹ್ಮಣ್ಯ ಸಮೀಪದ ಕುಲ್ಕುಂದದ ಬಸವನಮೂಲೆ ನಿವಾಸಿ ಶೇಷಪ್ಪ ಎಂಬವರ ಪತ್ನಿ ಮೀನಾಕ್ಷಿ (65) ಮೃತ ದುರ್ದೈವಿಯಾಗಿದ್ದಾರೆ.



Leave a Comment: