ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ಮೋದಿ ಪ್ರಮಾಣವಚನಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಗೆ ಆಹ್ವಾನ

Posted by Vidyamaana on 2024-06-08 17:26:58 |

Share: | | | | |


ಮೋದಿ ಪ್ರಮಾಣವಚನಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಗೆ ಆಹ್ವಾನ

ಮಾಲೆ: ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆಯೂ ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರನ್ನು ಆಹ್ವಾನಿಸಲಾಗಿದೆ.

ಭಾರತ ಸರ್ಕಾರದ ಮಂತ್ರಿಗಳ ಪರಿಷತ್ ನೀಡಿದ ಆಹ್ವಾನವನ್ನು ಸ್ವೀಕರಿಸಲಾಗಿದೆ ಎಂದು ಮಾಲ್ಡೀವ್ಸ್ ಅಧ್ಯಕ್ಷರ ಕಚೇರಿ ಪ್ರಕಟಣೆ ಮೂಲಕ ತಿಳಿಸಿದೆ.

ತಾಳಿ ಕಟ್ಟುವ ವೇಳೆ ನನಗೆ ಮದುವೆ ಬೇಡ ಎಂದು ಹಸೆಮಣೆಯಿಂದ ಮೇಲೆದ್ದ ವಧು ದಿವ್ಯಾ

Posted by Vidyamaana on 2023-08-27 12:54:47 |

Share: | | | | |


ತಾಳಿ ಕಟ್ಟುವ ವೇಳೆ ನನಗೆ ಮದುವೆ ಬೇಡ  ಎಂದು ಹಸೆಮಣೆಯಿಂದ ಮೇಲೆದ್ದ ವಧು ದಿವ್ಯಾ

ತುಮಕೂರು: ಮದುವೆ ನಡೆಯುತ್ತಿದ್ದ ವೇಳೆ ವರ ವಧುವಿಗೆ ತಾಳಿ ಕಟ್ಟುವ ಸಂದರ್ಭದಲ್ಲಿ ವಧು ನನಗೆ ಮದುವೆ ಬೇಡ ಎಂದು ಹಸೆಮಣೆಯಿಂದ  ಮೇಲೆದ್ದಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಕೋಳಾಲ ಗ್ರಾಮದಲ್ಲಿ ಆ.27ರ ಭಾನುವಾರ ನಡೆದಿದೆ.ಸಾಲಾ ಸೋಲಾ ಮಾಡಿ ಮದುವೆಯ ಸಿದ್ಧತೆ ಮಾಡಿ ನೆಂಟರಿಷ್ಟರು, ಬಂಧು ಬಳಗ  ಎಲ್ಲಾ ಸೇರಿ ಕಳೆದ ರಾತ್ರಿಯಿಂದ ಆರತಕ್ಷತೆ, ಮದುವೆಯ ವಿವಿಧ ಶಾಸ್ತ್ರಗಳು ಸರಗಾವಾಗಿ ನಡೆದಿದ್ದು ಭಾನುವಾರ  ಬೆಳಗ್ಗೆ ಮದುವೆಯ ಮಂಟಪದಲ್ಲಿ ವರ ವಧುವಿಗೆ ಮಾಂಗಲ್ಯ ಧಾರಣೆ ಮಾಡುವ ವೇಳೆ ನನಗೆ ಈ ಮದುವೆಯೇ ಬೇಡ ಎಂದು ವಧು ಮದುವೆ ಮಂಟಪದಿಂದ ಹೊರ ನಡೆದಿದ್ದಾರೆ.


ತಾಳಿ ಕಟ್ಟೋ ವೇಳೆ ಹಸೆ‌ಮಣೆಯಿಂದ ವಧು ಎದ್ದು ಹೊರನಡೆದ ಹಿನ್ನೆಲೆ ಮದುವೆ ಅರ್ಧಕ್ಕೆ ಮುರಿದು ಬಿದ್ದಿದೆ ಮದುವೆ.


ಮದುವೆ ಬೇಡ ಎಂದು ಮೇಲೆದ್ದ ವಧು ದಿವ್ಯಾ


ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ. ಹೀಗಾಗಿ ಮದುವೆ ಬೇಡ ಎಂದು ವಧು ಮದುವೆ ಕ್ಯಾನ್ಸಲ್ ಮಾಡಿದ್ದಾರೆ. ಕೋಳಾಲ ಗ್ರಾಮದ ಕೆ.ಸಿ.ಎನ್. ಕನ್ವೆನ್ಷನ್ ಹಾಲ್ ನಲ್ಲಿ ನಡೆಯುತ್ತಿದ್ದ ಮದುವೆಯಲ್ಲಿ ಈ ಘಟನೆ ನಡೆದಿದೆ.



ರಾತ್ರಿ ರಿಸೆಪ್ಷನ್ ನಲ್ಲಿ ಹುಡುಗ ವೆಂಕಟೇಶ್ ನೊಂದಿಗೆ ದಿವ್ಯ ನಗುನಗುತ್ತಲೇ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಭಾನುವಾರ ವೆಂಕಟೇಶ್ ಎಂಬವರ ಜೊತೆ ದಿವ್ಯ ಮದುವೆ ನಡೆಯುತ್ತಿದ್ದು, ಬೆಳಗ್ಗೆ ಮುಹೂರ್ತಕ್ಕೆ ಬರುತ್ತಿದ್ದಂತೆ ಮದುವೆ ಬೇಡ ಎಂದ ದಿವ್ಯಾ ಹೇಳಿದ್ದಾರೆ.


ದೊಡ್ಡಬಳ್ಳಾಪುರದ ತಾಲೂಕಿನ ಮೂಡ್ಲಕಾಳೇನಹಳ್ಳಿಯ ಸಿದ್ದಮ್ಮ ಮತ್ತು  ಗೋವಿಂದರಾಜು ಪುತ್ರ ವೆಂಕಟೇಶ್ ಅವರ ವಿವಾಹ ಸಮಾರಂಭವು ನೆಲಮಂಗಲ ತಾಲೂಕಿನ ದೊಡ್ಡಬೆಲೆ ಗ್ರಾಮದ ಅಂಜನಮ್ಮ ನರಸಿಂಹಮೂರ್ತಿ ಪುತ್ರಿ ದಿವ್ಯಾ ನಡುವೆ ಮದುವೆ ನಡೆಯುತ್ತಿತ್ತು.


ಹುಡುಗಿ ಉಲ್ಟಾ ಹೊಡೆಯುತ್ತಿದ್ದಂತೆ ಕಲ್ಯಾಣ ಮಂಟಪದಲ್ಲಿ ಗದ್ದಲ ಉಂಟಾಗಿದೆ. ಎರಡು ಕಡೆಯವರಿಂದ ಮಾತಿನ ಚಕಮಕಿ ನಡೆದಿದ್ದು, ಕೋಳಾಲ‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಹುಡುಗನ ಕಡೆಯವರಿಂದ ಆಕ್ರೋಶ  ವ್ಯಕ್ತವಾಗಿದೆ. ಹುಡುಗಿ ಬೇರೆಯವರನ್ನು ಪ್ರೀತಿ ಮಾಡುತ್ತಿದ್ದಾಳೆ ಎಂದು ಗೊತ್ತಿದ್ದರೂ ಪೋಷಕರು ಈ ಮದುವೆ ನಿಶ್ಚಯ ಮಾಡಿರುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಪುತ್ತೂರು : ನಗರ ಸಭಾ ಸದಸ್ಯ ಶಕ್ತಿ ಸಿನ್ಹಾ ಹೃದಯಾಘಾತದಿಂದ ನಿಧನ

Posted by Vidyamaana on 2023-10-17 10:10:52 |

Share: | | | | |


ಪುತ್ತೂರು : ನಗರ ಸಭಾ ಸದಸ್ಯ ಶಕ್ತಿ ಸಿನ್ಹಾ ಹೃದಯಾಘಾತದಿಂದ   ನಿಧನ

ಪುತ್ತೂರು : ನಗರ ಸಭಾ ಸದಸ್ಯ, ನೆಲ್ಲಿಕಟ್ಟೆ ನಿವಾಸಿ ಶಕ್ತಿ ಸಿನ್ಹಾ ರವರು ಹೃದಯಾಘಾತದಿಂದ ಇಂದು ನಿಧನರಾದರು.



ತನ್ನ ಕಿರಿಯ ಮಗಳ ಜೊತೆ ವಾಸವಿದ್ದ ಶಕ್ತಿ ಸಿನ್ಹಾ ರವರಿಗೆ ಇಂದು ಮುಂಜಾನೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಸಾವನ್ನಪ್ಪಿದ್ದರು ಎಂದು ವರದಿಯಾಗಿದೆ.


ಮೃತರು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ..

ಬೆಳ್ತಂಗಡಿ : ಉಜಿರೆ ಎಮ್.ಎಸ್.ಎಸ್ ಲಾಡ್ಜ್ ಮೇಲೆ ದಾಳಿ; ಐದು ಮಂದಿ ಯುವತಿಯರು ಸೇರಿ ಏಳು ಜನ ವಶಕ್ಕೆ.

Posted by Vidyamaana on 2023-02-07 15:06:22 |

Share: | | | | |


ಬೆಳ್ತಂಗಡಿ : ಉಜಿರೆ ಎಮ್.ಎಸ್.ಎಸ್  ಲಾಡ್ಜ್ ಮೇಲೆ ದಾಳಿ; ಐದು ಮಂದಿ ಯುವತಿಯರು ಸೇರಿ ಏಳು ಜನ ವಶಕ್ಕೆ.

ಬೆಳ್ತಂಗಡಿ : ಉಜಿರೆ ಎಂ.ಎಸ್.ಎಸ್ ಲಾಡ್ಜ್ ಮೇಲೆ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ನೇತೃತ್ವದಲ್ಲಿ ತಂಡದ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ.ಉಜಿರೆ ಚಾರ್ಮಾಡಿ ರಸ್ತೆಯಲ್ಲಿರುವ ಸುರೇಶ್ ಪೂಜಾರಿ ಎಂಬಾತ ಬಾಡಿಗೆ ಪಡೆದ ಎಮ್.ಎಸ್.ಎಸ್ ಲಾಡ್ಜ್ ಮೇಲೆ ಫೆ.7 ರಂದು ಸಂಜೆ ದಾಳಿ ವೇಳೆ ದಾಖಲೆಗಳಿಲ್ಲದೆ ರೂಂಗಳಲ್ಲಿ ಐದು ಮಂದಿ ಯುವತಿಯರನ್ನು ಮತ್ತು ಇಬ್ಬರು ಲಾಡ್ಜ್ ಸಿಬ್ಬಂದಿಯನ್ನು ವಶಕ್ಕೆ ಪಡೆದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಬೇಕಾಗಿದೆ.

SDPI ಅಭ್ಯರ್ಥಿ ಶಾಫಿ ಬೆಳ್ಳಾರೆ ಪರ ತಾಲೂಕಿನಾದ್ಯಂತ ಮತಯಾಚನೆ

Posted by Vidyamaana on 2023-04-29 02:51:42 |

Share: | | | | |


SDPI ಅಭ್ಯರ್ಥಿ ಶಾಫಿ ಬೆಳ್ಳಾರೆ ಪರ ತಾಲೂಕಿನಾದ್ಯಂತ ಮತಯಾಚನೆ

ಪುತ್ತೂರು: ಉಪ್ಪಿನಂಗಡಿ, ನೆಲ್ಯಾಡಿ, ಪುತ್ತೂರು, ವಿಟ್ಲ, ಕೂರ್ನಡ್ಕ ಪರಿಸರದಲ್ಲಿ SDPI ಅಭ್ಯರ್ಥಿ ಶಾಫಿ ಬೆಳ್ಳಾರೆ ಪರವಾಗಿ ಕಾರ್ಯಕರ್ತರು ಗುಂಪು ಗುಂಪಾಗಿ ಮತಯಾಚನೆ ನಡೆಸಿದರು.

ಕರಾವಳಿಗೆ ರೆಡ್ ಅಲರ್ಟ್ ಘೋಷಣೆ

Posted by Vidyamaana on 2023-07-04 21:16:49 |

Share: | | | | |


ಕರಾವಳಿಗೆ ರೆಡ್ ಅಲರ್ಟ್ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.5ರ ವರೆಗೆ ರೆಡ್ ಅಲಟ್೯ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.5ರಂದು ರಜೆ ಘೋಷಿಸಲಾಗಿದೆ.


ಇದಲ್ಲದೆ, ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.



Leave a Comment: