ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಸಿಟಿ ಬಸ್ ಚಾಲಕ

Posted by Vidyamaana on 2023-12-20 09:53:04 |

Share: | | | | |


ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಸಿಟಿ ಬಸ್ ಚಾಲಕ

ಮಂಗಳೂರು : ಸಿಟಿ ಬಸ್ ಚಾಲಕನೊಬ್ಬ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಮೃತರನನ್ನು ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಎಂದು ಗುರುತಿಸಲಾಗಿದೆಇವರು ಸ್ಟೇಟ್ ಬ್ಯಾಂಕ್ ಕಿನ್ಯಾ ನಡುವೆ ಚಲಿಸುವ ಸಿಟಿ ಬಸ್ ನಲ್ಲಿ ಚಾಲಕರಾಗಿದ್ದ ಇವರು, ಇಂದು ನಸುಕಿನ ಜಾವ ಸೋಮೇಶ್ವರ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೃತ್ಯ ಎಸಗುವ ಮುನ್ನ ಸಮುದ್ರ ತೀರದಲ್ಲಿ ಬೈಕನ್ನು ಇಟ್ಟು ಟವಲೊಂದರಲ್ಲಿ ಬೈಕ್ ಕೀ, ಪರ್ಸ್‌ ಚಪ್ಪಲಿಗಳನ್ನು ಇಟ್ಟು ಸಮುದ್ರಕ್ಕೆ ಹಾರಿದ್ದಾರೆ. ಅವಿವಾಹಿತರಾಗಿರುವ ಜಗದೀಶ್ ಅವರ ಪಸ್೯ನಲ್ಲಿ ಚಿನ್ನ ಅಡವಿಟ್ಟ ಚೀಟಿ, ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿದ ಚೀಟಿಗಳು ಪತ್ತೆಯಾಗಿವೆ.

ಅನೈತಿಕ ಸಂಬಂಧದ ಶಂಕೆ; ಮಾರಕಾಸ್ತ್ರಗಳಿಂದ ಕೊಚ್ಚಿ ಜೋಡಿ ಕೊಲೆ

Posted by Vidyamaana on 2024-03-19 20:24:07 |

Share: | | | | |


ಅನೈತಿಕ ಸಂಬಂಧದ ಶಂಕೆ; ಮಾರಕಾಸ್ತ್ರಗಳಿಂದ ಕೊಚ್ಚಿ ಜೋಡಿ ಕೊಲೆ

ವಿಜಯಪುರ, ಮಾ.19: ಜಿಲ್ಲೆಯ ನಿಡಗುಂದಿ(Nidagundi) ತಾಲೂಕಿನ ಗಣಿ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಓರ್ವ ಮಹಿಳೆ ಮತ್ತು ಪುರಷನನ್ನ ಕೊಲೆ ಮಾಡಲಾಗಿದ್ದು, ಮೃತರನ್ನ ಗ್ರಾಮದ ಸೋಮಲಿಂಗಪ್ಪ ಕುಂಬಾರ ಹಾಗೂ ಪಾರ್ವತಿ ತಳವಾರ ಎಂದು ಗುರುತಿಸಲಾಗಿದೆ. ಇನ್ನು ಸುದ್ದಿ ತಿಳಿದು ನಿಡಗುಂದಿ ಸಿಪಿಐ ಶರಣ ಗೌಡರ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಬ್ಬರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.ಕೆಲ ಗ್ರಾಮಸ್ಥರು ನೀಡಿದ ಮಾಹಿತಿ ಪ್ರಕಾರ ಮೃತ ಪಾರ್ವತಿ ತಳವಾರ ಹಾಗೂ ಸೋಮಲಿಂಗಪ್ಪ ಪೂಜಾರ ಮಧ್ಯೆ ಕೆಳೆದ ಕೆಲ ವರ್ಷಗಳಿಂದಲೂ ಅಕ್ರಮ ಸಂಬಂಧವಿತ್ತಂತೆ. 13 ವರ್ಷಗಳ ಹಿಂದೆ ಬಸವನಬಾಗೇವಾಡಿ ತಾಲೂಕಿನ ಇವಣಗಿ ಗ್ರಾಮದ ಬೋರಮ್ಮ ಜೊತೆಗೆ ಸೋಮಲಿಂಗಪ್ಪ ಮದುವೆಯಾಗಿದ್ದ. ಜೊತೆಗೆ ಇವರಿಗೆ 9 ವರ್ಷದ ಮಗನಿದ್ದಾನೆ. ಇತ ಗಣಿ ಗ್ರಾಮದ ತನ್ನ ಮನೆಯ ಬಳಿ ಹಿಟ್ಟಿನ ಗಿರಣಿ ನಡೆಸುತ್ತಿದ್ದ. ಇತ್ತ ಪಾರ್ವತಿಗೆ, ಭೀಮಪ್ಪ ತಳವಾರ ಜೊತೆಗೆ 22 ವರ್ಷಗಳ ಹಿಂದೆ ಮದುವೆಯಾಗಿತ್ತು. ಇಬ್ಬರು ಗಂಡು ಮಕ್ಕಳು ಹಾಗೂ ಓರ್ವ ಮಗಳಿದ್ದಾಳೆ. ಇಷ್ಟೆಲ್ಲ ಇದ್ದರೂ ಪಾರ್ವತಿ ಹಾಗೂ ಸೋಮಲಿಂಗಪ್ಪ ಮಧ್ಯೆ ಅಕ್ರಮ ಸಂಬಂಧ ಶುರುವಾಗಿದೆ.ಒಬ್ಬರ ಮನೆಗೆ ಒಬ್ಬರು ಬಂದು ಹೋಗುವುದನ್ನು ಮಾಡುತ್ತಿದ್ದರಂತೆ. ನಿನ್ನೆ(ಮಾ.18) ಸೋಮಲಿಂಪ್ಪ, ಕಿಡ್ನಿ ಸ್ಟೋನ್​ ಹಿನ್ನಲೆ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ಪಾರ್ವತಿಯನ್ನು ಕರೆದುಕೊಂಡು ಹೋಗಿದ್ದನಂತೆ. ಆದರೆ, ಸಾಯಂಕಾಲ ಮನೆಗೆ ವಾಪಸ್ ಬಂದಿಲ್ಲ. ಇಂದು(ಮಾ.19) ಬೆಳಿಗ್ಗೆ ಗ್ರಾಮದ ಜನರು ಪಾರ್ವತಿ ಹಾಗೂ ಸೋಮಲಿಂಗಪ್ಪನನ್ನ ಕೊಲೆಯಾದ ಸ್ಥಿತಿಯಲ್ಲಿ ಕಂಡು ಮನೆಯವರಿಗೆ ತಿಳಿಸಿದ್ದಾರೆ. ಆಗಲೇ ಮನೆಯವರಿಗೆ ವಿಚಾರ ಗೊತ್ತಾಗಿದೆಯಂತೆ. ಆದರೆ, ಯಾರು ಕೊಲೆ ಮಾಡಿದರು? ಎಂಬುದು ಗೊತ್ತಿಲ್ಲ ಎಂದಿದ್ದಾರೆ. ಜೊತೆಗೆ ಪಾರ್ವತಿ ಹಾಗೂ ಸೋಮಲಿಂಗಪ್ಪನ ಮಧ್ಯದ ಅಕ್ರಮ ಸಂಬಂಧವೂ ಗೊತ್ತಿಲ್ಲವಂತೆ. ಜೊತೆಗೆ ಯಾರ ಮೇಲೂ ಸಂಶಯವಿಲ್ಲ ಎಂದು ಕೊಲೆಯಾದ ಸೋಮಲಿಂಗಪ್ಪನ ಪತ್ನಿ ಬೋರಮ್ಮ, ಸಹೋದರಿ ಹಾಗೂ ಸಂಬಂಧಿಕರು ಹೇಳಿದ್ದಾರೆ.ಇನ್ನು ಇತ್ತ ಮೃತ ಪಾರ್ವತಿ ಕುಟುಂಬದವರು, ನಿನ್ನೆ ಸೋಮಲಿಂಗಪ್ಪ ಹಾಗೂ ಪಾರ್ವತಿ, ಅನತಿ ದೂರದಲ್ಲಿರುವ ರೈಲ್ವೆ ನಿಲ್ದಾಣಕ್ಕೆ ಬಂದಿದ್ದೇವೆ. ನಮ್ಮನ್ನು ಕರೆದುಕೊಂಡು ಹೋಗಲು ಬಾ ಎಂದು ಪಾರ್ವತಿ ತನ್ನ ಪುತ್ರ ಲಕ್ಷ್ಮಣನಿಗೆ ಕರೆ ಮಾಡಿದ್ದಾಳೆ. ಇವರನ್ನು ಕರೆಯಲು ಪಾರ್ವತಿಯ ಮಗಾ ಲಕ್ಷ್ಮಣ ತಳವಾರ ಹೋಗಿದ್ದಾನೆ. ಆದರೆ, ತಡರಾತ್ರಿ ಕಳೆದರೂ ಯಾರೂ ಮನೆಗೆ ಬಂದಿಲ್ಲ. ಪಾರ್ವತಿ ಮನೆಯವರು ಆಕೆಗೆ ಕರೆ ಮಾಡಿದರೂ ಸ್ವೀಕಾರ ಮಾಡಿಲ್ಲ. ಲಕ್ಷ್ಮಣನ ಮೊಬೈಲ್ ಕೂಡ ಸಹ ಸ್ವಿಚ್ ಆಫ್ ಆಗಿದೆ. ಆದರೆ, ಬೆಳಿಗ್ಗೆ ಗ್ರಾಮದ ಜನರು ಪಾರ್ವತಿ ಹಾಗೂ ಸೋಮಲಿಂಪ್ಪನ ಶವ ಕೊಲೆಯಾದ ಸ್ಥಿತಿಯಲ್ಲಿ ಬಿದ್ದಿವೆ ಎಂದಾಗಲೇ ವಿಚಾರ ತಿಳಿದಿದೆ. ಇಬ್ಬರನ್ನು ಕರೆದುಕೊಂಡು ಬರಲು ಹೋದ ಲಕ್ಷ್ಮಣ ಇನ್ನೂ ಮನೆಗೆ ಬಂದಿಲ್ಲ. ಇದು ಬಿಟ್ಟರೆ ನಮಗೆ ಏನೂ ಗೊತ್ತೇ ಇಲ್ಲ ಎನ್ನುತ್ತಿದ್ದಾರೆ.ಸದ್ಯ ನಿಡಗುಂದಿ ಪೊಲೀಸರು ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಪ್ರಾಥಮಿಕ ತನಿಖೆ ಪೂರ್ಣಗೊಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಶವಗಳನ್ನು ಸಂಬಂಧಿಕರಿಗೆ ಹಸ್ತಾಂತರ ಮಾಡಲಿದ್ದಾರೆ. ಮೇಲ್ಮೋಟಕ್ಕೆ ಪಾರ್ವತಿಯ ಮಗಾ ಲಕ್ಷ್ಮಣ ತನ್ನ ತಾಯಿಯ ಹಾಗೂ ಸೋಮಲಿಂಗಪ್ಪನ ಅಕ್ರಮ ಸಂಬಂಧದಿಂದ ರೋಸಿ ಹೋಗಿದ್ದನಂತೆ. ಹೇಗಾದರೂ ಮಾಡಿ ಇಬ್ಬರನ್ನೂ ಮುಗಿಸಿ ಬಿಡಬೇಕೆಂದು ಪ್ಲ್ಯಾನ್ ಮಾಡಿದ್ದನಂತೆ. ಆತನ ಪ್ಲ್ಯಾನ್ ಗೆ ಪೂರಕವಾಗಿ ನಿನ್ನೆ ಇಬ್ಬರನ್ನು ಕರೆದುಕೊಂಡು ಬರುವ ನೆಪದಲ್ಲಿ ಮಚ್ಚು ಹಾಗೂ ಕೊಡಲಿ ತೆಗೆದುಕೊಂಡು ಹೋಗಿದ್ದಾನೆ. ಇಬ್ಬರೂ ರೈಲು ಇಳಿದ ಬಳಿಕ ಊರಿಗೆ ಕರೆ ತರುವಾಗ ಮಾರ್ಗ ಮಧ್ಯೆ ಯಾರೂ ಇಲ್ಲದ್ದನ್ನು ಕಂಡು ಮಚ್ಚು ಹಾಗೂ ಕೊಡಲಿಯಿಂದ ಇಬ್ಬರನ್ನು ಕೊಚ್ಚಿ ಹಾಕಿದ್ದಾನೆ ಎನ್ನಲಾಗಿದೆ. ಈ ಕುರಿತು ಪೊಲೀಸರ ತನಿಖೆಯಿಂದಷ್ಟೇ ನಿಖರ ಮಾಹಿತಿ ತಿಳಿದು ಬರಲಿದೆ.

ನ್ಯಾಷನಲ್ ಬ್ಯಾಂಕ್ ಗಳಿಗ ಆಯ್ತು – ಈಗ ಸಹಕಾರಿ ಬ್ಯಾಂಕ್ ಗಳಿಗೂ ದೋಖಾ..!?

Posted by Vidyamaana on 2023-09-25 12:32:36 |

Share: | | | | |


ನ್ಯಾಷನಲ್ ಬ್ಯಾಂಕ್ ಗಳಿಗ ಆಯ್ತು – ಈಗ ಸಹಕಾರಿ ಬ್ಯಾಂಕ್ ಗಳಿಗೂ ದೋಖಾ..!?

ಬೆಂಗಳೂರು : ದೇಶದ ವಿವಿಧ ನ್ಯಾಷನಲ್ ಬ್ಯಾಂಕ್ ಗಳಲ್ಲಿ ಕೋಟಿ ಕೋಟಿ ಸಾಲ ಪಡೆದಂತ ಅನೇಕರು ದೇಶದಿಂದಲೇ ಪರಾರಿಯಾಗಿದ್ದಾರೆ. ಈಗ ರಾಜ್ಯದ ವಿವಿಧ ಸಹಕಾರಿ ಬ್ಯಾಂಕ್ ಗಳಲ್ಲಿ ಸಾಲ ಪಡೆದಿದ್ದಂತ 2,888 ಮಂದಿ ನಾಪತ್ತೆಯಾಗಿರೋದಾಗಿ ತಿಳಿದು ಬಂದಿದೆ.ರಾಜ್ಯದ ಪಟ್ಟಣ ಸಹಕಾರಿ ಬ್ಯಾಂಕ್, ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್(DCC) ಸೇರಿದಂತೆ ವಿವಿಧ ಸಹಕಾರಿ ಬ್ಯಾಂಕ್ ಗಳಿಂದ 1,404 ಕೋಟಿ ಸಾಲವನ್ನು ಪಡೆದಿದ್ದಂತ 2,888 ಮಂದಿ ಸಾಲ ತೀರಿಸಲು ಆಗದೇ ನಾಪತ್ತೆಯಾಗಿರೋ ಶಾಕಿಂಗ್ ವಿಚಾರ ಬಯಲಾಗಿದೆ.ಇನ್ನೂ ಹೀಗೆ 1,404 ಕೋಟಿ ಸಾಲ ಪಡೆದು ನಾಪತ್ತೆಯಾಗಿರುವಂತ 2,888 ಮಂದಿಯಲ್ಲಿ ಬೆಂಗಳೂರಿನ ನೆಟ್ಟಕಲ್ಲಪ್ಪ ವೃತ್ತದಲ್ಲಿರುವ ಸಹಕಾರಿ ಬ್ಯಾಂಕಿನದ್ದೇ ಸಿಂಹಪಾಲು ಆಗಿದೆ. ಈ ಹಿನ್ನಲೆಯಲ್ಲಿ ಈ ಬ್ಯಾಂಕ್ ಎವರ್ ಗ್ರೀನ್ ಕ್ರೆಡಿಟ್ ಎಂಬುದಾಗಿ ಹಾಗೂ 1,400 ಕೋಟಿ ರೂ.ಸಾಲವನ್ನು ಅನುತ್ಪಾದಕ ಆಸ್ತಿನಷ್ಟವೆಂದೂ ಘೋಷಿಸಿದೆ.


ರಾಜ್ಯದ ಇತರೆ ಸಹಕಾರಿ ಬ್ಯಾಂಕ್ ಗಳಲ್ಲಿ 25 ರಿಂದ 30 ವರ್ಷಗಳಿಂದ ಸಾಲಗಾರರು, ತಾವು ಪಡೆದಿರುವ ಸಾಲ ಪಾವತಿಸದಿರುವ ಪರಿಣಾಮ ಅಸಲುಗಿಂತ ಬಡ್ಡಿಯೇ ಜಾಸ್ತಿಯಾಗಿದೆ. ಕೆಲವರು ತಪ್ಪು ವಿಳಾಸ ಕೊಟ್ಟು ಸಾಲ ಪಡೆದಿದ್ದರೇ, ಕೆಲವರು ಸಾಲ ಪಡೆದು ಅಸಲು, ಬಡ್ಡಿ ಕಟ್ಟದೇ ನಾಪತ್ತೆಯಾಗಿದ್ದಾರೆ.ಅಂದಹಾಗೇ ಬೆಂಗಳೂರಲ್ಲಿ 2,485 ಮಂದಿಯಿಂದ 1,406 ಕೋಟಿ ರೂ, ಮೈಸೂರಲ್ಲಿ 132 ಸಾಲಗಾರರಿಂದ 57 ಲಕ್ಷ, ಬೆಳಗಾವಿ 15 ಮಂದಿಯಿಂದ 41 ಲಕ್ಷ ರೂ ಸೇರಿದಂತೆ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಗಳಲ್ಲಿ ಒಟ್ಟು 2,632 ಮಂದಿ ಪಟ್ಟಣ ಸಹಕಾರ ಬ್ಯಾಂಕ್ ಗಳಿಂದ ಸಾಲ ಪಡೆದಿದ್ದಾರೆ. ಇವರಲ್ಲಿ ಒಟ್ಟಾರೆ 2,888 ಮಂದಿ ಸಾಲವನ್ನು ತೀರಿಸಲಾಗದೇ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ.

ಕೇರಳದಲ್ಲಿ 10 ಕೋಟಿ ರೂ. ಲಾಟರಿ ಹಣ ಗೆದ್ದ 11 ಪೌರಕಾರ್ಮಿಕ ಮಹಿಳೆಯರು

Posted by Vidyamaana on 2023-07-28 04:23:35 |

Share: | | | | |


ಕೇರಳದಲ್ಲಿ 10 ಕೋಟಿ ರೂ. ಲಾಟರಿ ಹಣ ಗೆದ್ದ 11 ಪೌರಕಾರ್ಮಿಕ ಮಹಿಳೆಯರು

ಮಲಪ್ಪುರಂ:  ಮಲಪ್ಪುರಂ ಜಿಲ್ಲೆಯ ಪರಪ್ಪನಂಗಡಿ ನಗರಸಭೆಯ 11 ಮಂದಿ ಮಹಿಳಾ ಪೌರಕಾರ್ಮಿಕರ ಅದೃಷ್ಟ ಕೈಹಿಡಿದೆ. ಬುಧವಾರ ನಡೆದ ಡ್ರಾ ನಂತರ ಕೇರಳ ಲಾಟರಿ ಇಲಾಖೆಯು 10 ಕೋಟಿ ರೂಪಾಯಿಗಳ ಮಾನ್ಸೂನ್ ಬಂಪರ್ ವಿಜೇತರನ್ನು ಘೋಷಿಸಿದ್ದು 11 ಮಂದಿ ಮಹಿಳಾ ಪೌರ ಕಾರ್ಮಿಕರು ವಿಜೇತರಾಗಿದ್ದಾರೆ.ಪರಪ್ಪಂನಂಗಡಿ ನಗರಸಭೆಯ ‘ಹರಿತ ಕರ್ಮ ಸೇನೆ’ಯ 11 ಮಹಿಳೆಯರು ಅಂದರೆ ಒಬ್ಬೊಬ್ಬರು ತಲಾ 25 ರೂ. ಷೇರು ಹಾಕಿ ಟಿಕೆಟ್ ಖರೀದಿಸಿದ್ದರು. ಕುಟ್ಟಿಮಾಲು, ಬೇಬಿ, ಶೋಭಾ, ಪಾರ್ವತಿ, ರಾಧಾ, ಲಕ್ಷ್ಮಿ, ಲೀಲಾ, ಬಿಂದು, ಶೀಜಾ, ಚಂದ್ರಿಕಾ ಮತ್ತು ಕಾರ್ತ್ಯಾಯನಿ ಮಾನ್ಸೂನ್ ಬಂಪರ್ ಪ್ರಥಮ ಬಹುಮಾನ ಪಡೆದವರು.ಮೊದಲು 9 ಮಂದಿ ಸೇರಿ ಲಾಟರಿ ಟಿಕೆಟ್ ಖರೀಸಲು ನೋಡಿದೆವು, ಆದರೆ ಹಣದ ಕೊರತೆಯಿಂದ ಮತ್ತಿಬ್ಬರು ಕಾರ್ಮಿಕರು ಸೇರಿಕೊಂಡರು. ಕೊನೆಗೆ 11 ಮಂದಿ ಸೇರಿದ 250 ರೂಪಾಯಿಯ ಟಿಕೆಟ್ ಖರೀದಿಸಿದೆವು ಎಂದು ಟಿಕೆಟ್ ಖರೀದಿಸಿದ ರಾಧ ತಿಳಿಸಿದ್ದಾರೆ.ಸಾಲಗಳ ಬಾಕಿ, ಮಕ್ಕಳ ಮದುವೆ, ಆಸ್ಪತ್ರೆ, ಚಿಕಿತ್ಸೆಯ ವೆಚ್ಚ ಸೇರಿ ನಾವೆಲ್ಲರೂ ಆರ್ಥಿಕವಾಗಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದೆವು. ಈಗ ಹಣ ಗೆದ್ದಿರುವುದು ಬದುಕಿನಲ್ಲಿ ಹಲವು ಸಮಸ್ಯೆಗಳ ನಿವಾರಣೆಗೆ ನೆರವಾಗಲಿದೆ’ ಎನ್ನುತ್ತಾರೆ ಪೌರಕಾರ್ಮಿಕ ಮಹಿಳೆಯರು.ಟಿಕೆಟ್ ಸಂಖ್ಯೆ MB 200261 ಮೊದಲ ಬಹುಮಾನ 10 ಕೋಟಿ ರೂ. ಬಹುಮಾನದ ಚೀಟಿಯನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಪರಪ್ಪನಂಗಡಿ ಶಾಖೆಗೆ ಹಸ್ತಾಂತರಿಸಲಾಗಿದೆ

ಹಾಡಹಗಲೇ ಕಾರಿನಲ್ಲಿದ್ದ 13.75 ಲಕ್ಷ ರೂ. ದೋಚಿದ ಕಳ್ಳರು

Posted by Vidyamaana on 2023-10-23 07:39:33 |

Share: | | | | |


ಹಾಡಹಗಲೇ ಕಾರಿನಲ್ಲಿದ್ದ 13.75 ಲಕ್ಷ ರೂ. ದೋಚಿದ ಕಳ್ಳರು

ಬೆಂಗಳೂರು : ಕಾರಿನಲ್ಲಿ ಇದ್ದ 13.75 ಲಕ್ಷ ರೂಪಾಯಿಯನ್ನು ಕಳ್ಳರು ದೋಚಿರುವ ಘಟನೆ ಬೆಂಗಳೂರಿನ (Bengaluru) ಸರ್ಜಾಪುರ (sarjapur) ಬಳಿಯ ಸೋಮ್‌ಪುರದ ಸಬ್‌ ರಿಜಿಸ್ಟರ್ ಕಚೇರಿ ಬಳಿ ಭಾನುವಾರ ನಡೆದಿದೆ.ಇಬ್ಬರು ದರೋಡೆಕೋರರು ಕೇವಲ 58 ಸೆಕೆಂಡ್‌ಗಳಲ್ಲಿ ಬಿಎಂಡಬ್ಲ್ಯೂ ಕಾರನ್ನು ಹಿಂಬಾಲಿಸಿಕೊಂಡು ಬಂದು ಹಣ ದೋಚಿ ಪರಾರಿಯಾಗಿದ್ದಾರೆ.ಇವರ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಾಡಹಗಲೇ ನಡೆದ ಈ ದೃಶ್ಯ ಸ್ಥಳೀಯರ ಆತಂಕಕ್ಕೂ ಕಾರಣವಾಗಿದೆ.

Re

non

more.....

ಸಿಸಿಟಿವಿ ದೃಶ್ಯ ನೋಡಿ 


ಒಬ್ಬ ಕಾರಿನ ಬಳಿ ಬಂದು ಸುತ್ತ ಯಾರಿದ್ದಾರೆ ಎನ್ನುವುದನ್ನು ಗಮನಿಸಿದ್ದಾನೆ. ಇನ್ನೊಬ್ಬ ದ್ವಿಚಕ್ರ ವಾಹನದಲ್ಲಿ ಅವನನ್ನು ಕರೆದುಕೊಂಡು ಹೋಗಲು ಸಿದ್ದವಾಗಿದ್ದ. ಎಲ್ಲವನ್ನು ಗಮನಿಸಿದ ಬಳಿಕ ಕಾರಿನ ಬಳಿ ಬಂದಿದ್ದ ಕಳ್ಳ ಒಂದೇ ಏಟಿಗೆ ಕಾರಿನ ಕಿಟಕಿ ಗಾಜನ್ನು ಪುಡಿ ಮಾಡಿ ಕಾರಿನ ಒಳಗೆ ಜಂಪ್ ಮಾಡಿ ಹಣದ ಬ್ಯಾಗ್ ಎತ್ತಿಕೊಂಡು ಪರಾರಿಯಾಗಿದ್ದಾನೆ.


ಆನೇಕಲ್‌ನ (Anekal) ಕಸಬಾ ನಿವಾಸಿಯಾದ ಮೋಹನ್ ಬಾಬು ಅವರು ಜಮೀನು ನೋಂದಣಿಗಾಗಿ ಸ್ನೇಹಿತರ ಬಳಿ 5 ಲಕ್ಷ ರೂ. ಪಡೆದಿದ್ದರು. ಇದನ್ನು ಸೇರಿಸಿ 13.75 ಲಕ್ಷ ರೂ. ನೊಂದಿಗೆ ಮೋಹನ್ ಬಾಬು ಅವರ ಸಂಬಂಧಿ ರಮೇಶ್ ಬಿಎಂಡಬ್ಲ್ಯೂ ಕಾರಿನಲ್ಲಿ ಸಬ್ ರಿಜಿಸ್ಟರ್ ಕಚೇರಿ ಬಳಿ ಮಧ್ಯಾಹ್ನ ಬಂದಿದ್ದರು. ಅಲ್ಲಿಂದ ಮೋಹನ್ ಬಾಬು ಅವರೊಂದಿಗೆ ಹೊರಡುವವರಿದ್ದರು. ಆದರೆ ಅಷ್ಟರಲ್ಲಿ ಕಳ್ಳರು ಹಣ ದೋಚಿ ಪರಾರಿಯಾಗಿದ್ದಾರೆ.


ಈ ಕುರಿತು ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಪ್ಯ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಉಚಿತ ವೈದ್ಯಕೀಯ ಶಿಬಿರ

Posted by Vidyamaana on 2024-04-13 07:49:36 |

Share: | | | | |


ಸಂಪ್ಯ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಉಚಿತ ವೈದ್ಯಕೀಯ ಶಿಬಿರ

ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಹಾಗೂ ಆರೋಗ್ಯ ರಕ್ಷಾ ಸಮಿತಿಯ ನೇತೃತ್ವದಲ್ಲಿ ನಡೆಯುವ ಉಚಿತ ವೈದ್ಯಕೀಯ ಶಿಬಿರ ೨೫ನೇ ಶಿಬಿರವು ಎ.೭ರಂದು ದೇವಸ್ಥಾನದಲ್ಲಿ ನಡೆಯಿತು.

ಶಿಬಿರವನ್ನು ಡಾ.ಸುರೇಶ್ ಪುತ್ತೂರಾಯರವರ ತಾಯಿ ಸುನಂದ ಪುತ್ತೂರಾಯ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಆರೋಗ್ಯ ರಕ್ಷಾ ಸಮಿತಿ ಗೌರವಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ವೈದ್ಯಕೀಯ ಶಿಬಿರವನ್ನು ಅಧಿಕಾರಕ್ಕಾಗಿ ಮಾಡಿಲ್ಲ.



Leave a Comment: