ಭೀಕರ ರಸ್ತೆ ಅಪಘಾತ ಪ್ರಕರಣ : ಸಾವಿನ ಸಂಖ್ಯೆ 13ಕ್ಕೆ ಏರಿಕೆ,ಇಬ್ಬರ ಸ್ಥಿತಿ ಗಂಭೀರ

ಸುದ್ದಿಗಳು News

Posted by vidyamaana on 2024-06-28 19:01:49 |

Share: | | | | |


ಭೀಕರ ರಸ್ತೆ ಅಪಘಾತ ಪ್ರಕರಣ : ಸಾವಿನ ಸಂಖ್ಯೆ 13ಕ್ಕೆ ಏರಿಕೆ,ಇಬ್ಬರ ಸ್ಥಿತಿ ಗಂಭೀರ

ಹಾವೇರಿ : ಇಂದು ಬೆಳ್ಳಂಬೆಳಗ್ಗೆ ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಹತ್ತಕ್ಕೂ ಹೆಚ್ಚು ಜನರು ಸಾವನಪ್ಪಿದು ಇದೀಗ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಎಂದು ಹಾವೇರಿಯ ಎಸ್ ಪಿ ಅಂಶಿ ಕುಮಾರ್ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಇಬ್ಬರು ಮಕ್ಕಳು ಇಬ್ಬರು ಪುರುಷರು ಸೇರಿದಂತೆ 9 ಮಹಿಳೆಯರು ಸಾವನಪ್ಪಿದ್ದಾರೆ.

ಹೌದು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಅಪಘಾತ ನಡೆದಿದೆ. ಚಿಂಚೋಳಿಯ ಮಾಯಮ್ಮ ದೇವಿ ದರ್ಶನ ಪಡೆದು ವಾಪಸಾಗುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 13 ಜನ ಸಾವನ್ನಪಪ್ಪಿದ್ದಾರೆ ಎಂದು ಎಸ್ ಪಿ ಅಂಶಿ ಕುಮಾರ್ ಮಾಹಿತಿ ನೀಡಿದ್ದಾರೆ.ಮೃತರು ಶಿವಮೊಗ್ಗ ಜಿಲ್ಲೆಯ ಮೂಲದವರು ಎಂದು ತಿಳಿದು ಬಂದಿದೆ. ಪರಶುರಾಮ, ಭಾಗ್ಯ, ನಾಗೇಶ್, ವಿಶಾಲಾಕ್ಷಿ,ಅರ್ಪಿತ,ಸುಭದ್ರ, ಬಾಯಿ, ಪುಣ್ಯ, ಮಂಜುಳಾಬಾಯಿ, ಆದರ್ಶ, ಮಾನಸ, ಅಪರೂಪ, ಮಂಜುಳಾ ಮೃತಪಟ್ಟವರ ಎಂದು ಗುರುತಿಸಲಾಗಿದೆ.

ಟಿಟಿಯಲ್ಲಿ ಸುಮಾರು 16 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಇದೀಗ 13 ಜನರು ಸಾವನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ ಎನ್ನಲಾಗಿದೆ.ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮೃತ ದೇಹಗಳನ್ನು ಹೊರ ತೆಗೆಯಲು ಹರಸಾಹಸ ಪಡುತ್ತಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಂತವರನ್ನು ಹಾವೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾಸ್ಥಳಕ್ಕೆ ಬ್ಯಾಡಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

 Share: | | | | |


ಉಜಿರೆ: ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾಲೇಜು ವಿದ್ಯಾರ್ಥಿ

Posted by Vidyamaana on 2023-11-24 04:38:20 |

Share: | | | | |


ಉಜಿರೆ: ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾಲೇಜು ವಿದ್ಯಾರ್ಥಿ

ಬೆಳ್ತಂಗಡಿ : ವಿದ್ಯಾರ್ಥಿಯ  ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಉಜಿರೆಯ ಕಾಲೇಜು ರಸ್ತೆಯ ಬಳಿ ನ.23 ರಂದು(ಇಂದು) ನಡೆದಿದ್ದು ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸಂಜೆ ಸಾವನ್ನಪ್ಪಿದ್ದಾನೆ.


ಕಾಲೇಜಿನಲ್ಲಿ ಕಾರ್ಯಕ್ರಮ ಇದ್ದ ಕಾರಣ ಮಧ್ಯಾಹ್ನ ಊಟ ಮಾಡಿ ವಾಪಸ್ ಬರುವಾಗ ಬೈಕ್ ಸ್ಟ್ಯಾಂಡ್ ತೆಗೆಯದೆ ಚಲಾಯಿಸಿಕೊಂಡು ಬರುವಾಗ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡಿದ್ದ ಉಜಿರೆಯ ಎಸ್.ಡಿ.ಎಮ್ ಖಾಸಗಿ ಕಾಲೇಜಿನ ಮ್ಯಾಕಾನಿಕಲ್ ಕೋರ್ಸ್ ಡಿಪ್ಲೋಮಾ ವಿದ್ಯಾರ್ಥಿ ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿ ದಿಕ್ಷೀತ್(20) ಚಿಕಿತ್ಸೆ ಫಲಿಸದೆ ಸಂಜೆ ಮಂಗಳೂರು ಕೆ.ಎಮ್.ಸಿ ಅತ್ತಾವರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಭಟ್ಕಳ | ಕಾರು-ಲಾರಿ ಮುಖಾಮುಖಿ ಢಿಕ್ಕಿ: ಉಡುಪಿ ಮೂಲದ ಮಹಿಳೆ ಮೃತ್ಯು; ಇಬ್ಬರಿಗೆ ಗಾಯ

Posted by Vidyamaana on 2023-10-17 20:18:24 |

Share: | | | | |


ಭಟ್ಕಳ | ಕಾರು-ಲಾರಿ ಮುಖಾಮುಖಿ ಢಿಕ್ಕಿ: ಉಡುಪಿ ಮೂಲದ ಮಹಿಳೆ ಮೃತ್ಯು; ಇಬ್ಬರಿಗೆ ಗಾಯ

ಭಟ್ಕಳ, ಅ 17: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಭಟ್ಕಳ ತಾಲೂಕಿನ ಮೂಡ್ ಭಟ್ಕಳ ಬೈಪಾಸ್ ಬ್ರಿಡ್ಜ್ ಸಮೀಪ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ನಡೆದಿದೆ.ಮೃತರನ್ನು ಉಡುಪಿ ಜಿಲ್ಲೆಯ ಬೇಳೂರು ಗ್ರಾಮದ ರೀಟಾ ಕ್ಸೇವಿಯರ್ ಡಿಸೋಜ(51) ಎಂದು ಗುರುತಿಸಲಾಗಿದೆ.ರೀಟಾರ ಪತಿ ಕ್ಸೇವಿಯರ್ ರಾಜ್ ಡಿಸೋಜ ಮತ್ತು ಪುತ್ರಿ ಇನ್ರಿಕಾ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.


ಕ್ಸೇವಿಯರ್ ರಾಜ್ ಕುಟುಂಬವು ಕಾರಿನಲ್ಲಿ ಉಡುಪಿ ಕಡೆಯಿಂದ ಗೋವಾ ಕಡೆಗೆ ತೆರಳುತ್ತಿತ್ತು. ಇವರ ಕಾರು ಭಟ್ಕಳ ಬೈಪಾಸ್ ಬ್ರಿಡ್ಜ್ ಸಮೀಪ ತಲುಪಿದಾಗ ಮುರ್ಡೇಶ್ವರ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಮುಖಾಮುಖಿ ಢಿಕ್ಕಿಯಾಗಿದೆ ಎಂದು ಹೇಳಲಾಗಿದೆ.


ಗಂಭೀರ ಗಾಯಗೊಂಡಿದ್ದ ರೀಟಾ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ರಕ್ಷಿಸಿ ಭಟ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.


ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಕಬ್ಬಡಿ ಸ್ಪರ್ಧಿಗಳ ನಡುವೆ ಮಾರಾಮಾರಿ: ಬೆಚ್ಚಿಬೀಳಿಸುವ ವಿಡಿಯೋ ವೈರಲ್!

Posted by Vidyamaana on 2023-10-09 12:10:54 |

Share: | | | | |


ಕಬ್ಬಡಿ ಸ್ಪರ್ಧಿಗಳ ನಡುವೆ ಮಾರಾಮಾರಿ: ಬೆಚ್ಚಿಬೀಳಿಸುವ ವಿಡಿಯೋ ವೈರಲ್!

ಲಕ್ನೋ ಅಕ್ಟೋಬರ್ 9: ಕಾನ್ಪುರದಲ್ಲಿ ಕಬ್ಬಡಿ ಆಡುವ ಸ್ಪರ್ಧಿಗಳ ನಡುವೆ ಭಯಾನಕವಾಗಿ ಘರ್ಷಣೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೋಡುಗರನ್ನು ಬೆಚ್ಚಿ ಬೀಳಿಸಿದೆ.ಕಾನ್ಪುರದಲ್ಲಿ ನಡೆದ ಕಬಡ್ಡಿ ಪಂದ್ಯವು ತೀವ್ರ ಹಿಂಸಾಚಾರಕ್ಕೆ ತಿರುಗಿದ್ದು ಕಂಡು ಬಂದಿದೆ.ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದರಲ್ಲಿ ವಿದ್ಯಾರ್ಥಿಗಳು ಕುರ್ಚಿಗಳನ್ನು ಎಸೆಯುವ ಮೂಲಕ ಪರಸ್ಪರ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ.


ವಿಡಿಯೋ ನೋಡಲು ಕ್ಲಿಕ್ ಮಾಡಿ

ಬೆಚ್ಚಿಬೀಳಿಸುವ ವಿಡಿಯೋ ವೈರಲ್!


ಈ ವಿಡಿಯೋ ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸೆರೆಹಿಡಿಯಲಾಗಿದೆ ಎಂದು ಹೇಳಲಾಗುತ್ತಿದೆ.ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಘರ್ಷಣೆಗೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಆದರೆ ಹಿಂಸಾಚಾರದಿಂದಾಗಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಹೋರಾಟವನ್ನು ನಿಲ್ಲಿಸಲು ಯಾವುದೇ ಭದ್ರತೆಯಿಲ್ಲದೆ, ಅದು ಅನಿಯಂತ್ರಿತವಾಗಿ ಬೆಳೆದಿದೆ.


ಕೆಂಪು ಆಟದ ಉಡುಪು ಧರಿಸಿದ ಸ್ಪರ್ಧಿಗಳು ಪರಸ್ಪರ ಖುರ್ಚಿಗಳಿಂದ ಬಲವಾಗಿ ದಾಳಿ ಮಾಡಿದ್ದಾರೆ. ಕೆಲ ಸ್ಪರ್ಧಿಗಳು ಆತಂಕದಲ್ಲಿ ಸ್ಥಳದಿಂದ ಓಡಿಹೋಗುತ್ತಿರುವುದು ದೃಶ್ಯದಲ್ಲಿ ಕಂಡು ಬಂದಿದೆ. ಸ್ಥಳಿಯರು ವಿಡಿಯೋವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಜನ ಪ್ರತಿನಿಧಿ ಎಂಬ ಕಾರಣಕ್ಕೆ ಠಾಣೆ ಮುಂದೆ ಹೋಗಿ ಪ್ರತಿಭಟನೆ ನಡೆಸುವುದು ಎಷ್ಟು ಸರಿ?

Posted by Vidyamaana on 2024-05-31 14:17:34 |

Share: | | | | |


ಜನ ಪ್ರತಿನಿಧಿ ಎಂಬ ಕಾರಣಕ್ಕೆ ಠಾಣೆ ಮುಂದೆ ಹೋಗಿ ಪ್ರತಿಭಟನೆ ನಡೆಸುವುದು ಎಷ್ಟು ಸರಿ?

ಬೆಂಗಳೂರು : ಪರವಾನಿಗೆ ಪಡೆಯದೆ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಗಳ ಅಕ್ರಮ ದಾಸ್ತಾನು ಮಾಡಿದ್ದ ವ್ಯಕ್ತಿಯ ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕ್ರಮಕ್ಕೆ ಮೇ.31 ರಂದು(ಇಂದು) ಹೈಕೊರ್ಟ್ ತೀವ್ರ ತರಾಟೆ ತೆಗೆದು ಕೊಂಡಿದೆ.ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಲ್ಲಿ ನಿಂಧಿಸಿದ ಹಾಗೂ ಪ್ರತಿಭಟನೆ ಮೂಲಕ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ದಾಖಲಾಗಿದ್ದ ಎರಡು ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಇಂದು ನಡೆಸಿದ ನ್ಯಾಯಮೂರ್ತಿ ಕೃಷ್ಣ ಧೀಕ್ಷಿತ್ ಅವರಿದ್ದ ನ್ಯಾಯಪೀಠ, ಶಾಸಕರ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಬಹುದು. ಅಕ್ರಮ ಬಂಧನ ಮಾಡಿದಲ್ಲಿ ಹೆಬಿಯಾಸ್ ಕಾರ್ಪಸ್ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ಆದರೆ, ಜನ ಪ್ರತಿನಿಧಿ ಎಂಬ ಕಾರಣಕ್ಕೆ ಠಾಣೆ ಮುಂದೆ ಹೋಗಿ ಪ್ರತಿಭಟನೆ ನಡೆಸುವುದು ಎಷ್ಟು ಸರಿ ?, ಅಲ್ಲದೆ, ಶಾಸಕರು ಕಾನೂನು ಮಾಡುವ ಕೆಲಸವನ್ನು ಮಾಡಬೇಕು. ಅದರ ಬದಲಾಗಿ ನ್ಯಾಯಾಲಯದ ಕೆಲಸದಲ್ಲಿ ಮಾಡುವುದಕ್ಕೆ ಮುಂದಾಗುವದು ಎಷ್ಟು ಸರಿ ಎಂದು ಪ್ರಶ್ನಿಸಿದರು.ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರಿದ್ದಾರೆ, ನ್ಯಾಯಾಲಯದ ಕಾರ್ಯವನ್ನು ನೀವು ಮಾಡುವುದಕ್ಕೆ ಮುಂದಾಗಬೇಡಿ. ನಿಮ್ಮ ಕೆಲಸ ಕಾನೂನು ಮಾಡುವುದನ್ನು ಮಾಡಿ, ನ್ಯಾಯಾಲಯ ತನ್ನ ಕಾರ್ಯ ಕಾಡುವುದಕ್ಕೆ ಬಿಡಿ ಎಂದು ಪೀಠ ಸಲಹೆ ನೀಡಿತು.ಮುಂದೊಂದು ದಿನ ನ್ಯಾಯಾಧೀಶರು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ನಮ್ಮ ಹಿಂದೆ ಬಂದು ಕೂತರೆ ನಾವೆಲ್ಲರೂ ಹೆಗೆ ಕೆಲಸ ಮಾಡಬೇಕು. ಈ ರೀತಿಯ ವರ್ತನೆಯನ್ನು ಸಹಿಸಲಾಗುವುದಿಲ್ಲ ಎಂದು ಪೀಠ ತಿಳಿಸಿತು.

ಪುತ್ತೂರು ಮಹಿಳೆಯರಿಬ್ಬರ ಮೇಲೆ ವ್ಯಕ್ತಿಯಿಂದ ಹಲ್ಲೆ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

Posted by Vidyamaana on 2023-08-23 07:32:14 |

Share: | | | | |


ಪುತ್ತೂರು  ಮಹಿಳೆಯರಿಬ್ಬರ ಮೇಲೆ ವ್ಯಕ್ತಿಯಿಂದ ಹಲ್ಲೆ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಪುತ್ತೂರು: ಮಹಿಳೆಯರಿಬ್ಬರ ಮೇಲೆ ವ್ಯಕ್ತಿಯೋರ್ವ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಎಂಬಲ್ಲಿ ನಡೆದಿದ್ದು, ಹಲ್ಲೆಯಿಂದ ಅಸ್ವಸ್ಥಗೊಂಡ ಮಹಿಳೆಯರಿಬ್ಬರನ್ನು ಪುತ್ತೂರು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬಡಗನ್ನೂರು ನಿವಾಸಿ ಸುಲೇಖ ಮತ್ತು ಅವರ ಮನೆಗೆ ಕೆಲಸಕ್ಕೆ ಬಂದ ಗಿರಿಜಾ ಹಲ್ಲೆಗೊಳಗಾದವರು. ಸುರೇಶ್ ನಾಯ್ಕ ಎಂಬಾತ ಹಲ್ಲೆ ಮಾಡಿದ ಆರೋಪಿ.

ಮಹಿಳೆಯರಿಬ್ಬರು ಗುಡ್ಡೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಸುಲೇಖ ಅವರ ದೂರದ ಸಂಬಂಧಿ ಸುರೇಶ್ ನಾಯ್ಕ ಬಂದು ಸುಲೇಖ ಅವರ ಕುತ್ತಿಗೆ ಬಟ್ಟೆ ಸುತ್ತಿ ಕೊಲೆಗೆ ಯತ್ನಿಸಿದ್ದಾರೆನ್ನಲಾಗಿದೆ. ಇದನ್ನು ನೋಡಿದ ಕೆಲಸಾಕೆ ಗಿರಿಜಾ ಅವರಿಗೂ ಆತ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

ಇನ್ನು ಗಾಯಾಳುಗಳಿಬ್ಬರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದ್ದು, ಇಬ್ಬರಿಗೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹೊಸ ಭಾಷ್ಯ ಬರೆದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ರೋಡ್ ಶೋ

Posted by Vidyamaana on 2023-05-09 04:07:38 |

Share: | | | | |


ಹೊಸ ಭಾಷ್ಯ ಬರೆದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ರೋಡ್ ಶೋ

ಪುತ್ತೂರು: ಈ ಬಾರಿಯ ಚುಣಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ, ಸಮಾಜ ಸೇವೆಯ ಉದ್ದೇಶಕ್ಕೋಸ್ಕರ ನಾನು ರಾಜಕಾರಣಕ್ಕೆ ಬಂದಿದ್ದು ಬಡವರ ಪರವಾಗಿ ಕೆಲಸ ಮಾಡಲು ಕ್ಷೇತ್ರದ ಜನತೆ ನನಗೊಂದು ಅವಕಾಶ ಮಾಡಿಕೊಡಬೇಕು, ನಾನು ಈ ಕ್ಷೇತ್ರದ ಒಬ್ಬ ವ್ಯಕ್ತಿಯ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳುವೆ, ನನ್ನನ್ನು ಬಹುಮತದಿಂದ ಗೆಲ್ಲಿಸಿಕೊಡಬೇಕು ಎಂದು ನೆರೆದಿದ್ದ ಸಹಸ್ರಾರು ಕಾರ್ಯಕರ್ತರ ಮುಂದೆ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೈ ಮುಗಿದು ಬೇಡಿಕೊಂಡರು.

ಮೇ.೮ರಂದು ಬೊಳ್ವಾರಿನಿಂದ ದರ್ಬೆ ತನಕ ನಡೆದ ಕಾಂಗ್ರೆಸ್ ರೋಡ್ ಶೋ ಕಾರ್ಯಕ್ರಮ ದರ್ಬೆಯಲ್ಲಿ ಸಮಾಪ್ತಿಗೊಂಡಿತು. ದಭೆಯಲ್ಲಿ ನೆರೆದಿದ್ದ ಕಾರ್ಯಕರ್ತರನ್ನುದ್ದೇಶಿಸಿ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮಾತನಾಡಿದರು.



Leave a Comment: