ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ಸ್ವೀಕರಿಸಿದ ಪ್ರಧಾನಿ ಮೋದಿ

Posted by Vidyamaana on 2024-03-22 22:08:17 |

Share: | | | | |


ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ಸ್ವೀಕರಿಸಿದ ಪ್ರಧಾನಿ ಮೋದಿ

ಥಿಂಪು ಮಾರ್ಚ್ 22: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ ಭೂತಾನ್‌ನ (Bhutan) ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋವನ್ನು (Order of the Druk Gyalpo) ಸ್ವೀಕರಿಸಿದ್ದು, ಈ ಗೌರವವನ್ನು ಪಡೆದ ಮೊದಲ ಭೂತನ್ ದೇಶದ ಹೊರಗಿನ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಿ ಮೋದಿ ಭೂತಾನ್‌ನ ಪ್ರತಿಷ್ಠಿತ ನಾಗರಿಕ ಗೌರವವನ್ನು ಪಡೆದ ಮೊದಲ ವಿದೇಶಿ ಸರ್ಕಾರದ ಮುಖ್ಯಸ್ಥರಾಗಿದ್ದಾರೆ. ಉಭಯ ನಾಯಕರು ರಾಜಧಾನಿಯಲ್ಲಿ ಭೇಟಿಯಾದ ನಂತರ ಭೂತಾನ್‌ನ ರಾಜ ಜಿಗ್ಮೆ ಅವರು ಪಿಎಂ ಮೋದಿಯವರಿಗೆ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ಪ್ರಶಸ್ತಿಯನ್ನು ನೀಡಿದರು. ಸ್ಥಾಪಿತವಾದ ಶ್ರೇಯಾಂಕ ಮತ್ತು ಪ್ರಾಶಸ್ತ್ಯದ ಪ್ರಕಾರ, ಆರ್ಡರ್ ಆಫ್ ದ ಡ್ರುಕ್ ಗ್ಯಾಲ್ಪೋ ಅನ್ನು ಜೀವಮಾನದ ಸಾಧನೆಗಾಗಿ ನೀಡುವ ಪ್ರಶಸ್ತಿಯಾಗಿ ಸ್ಥಾಪಿಸಲಾಯಿತು. ಇದು ಭೂತಾನ್‌ನಲ್ಲಿ ಅತ್ಯುನ್ನತ ಗೌರವವಾಗಿದೆ.

ಚೆಕ್‌ ತಿದ್ದಿದ ರಿಯಲ್ ಎಸ್ಟೇಟ್‌ ಮಧ್ಯವರ್ತಿ

Posted by Vidyamaana on 2023-08-07 12:43:44 |

Share: | | | | |


ಚೆಕ್‌ ತಿದ್ದಿದ ರಿಯಲ್ ಎಸ್ಟೇಟ್‌ ಮಧ್ಯವರ್ತಿ

ದೊಡ್ಡಬಳ್ಳಾಪುರ:   ಜಮೀನು ಖರೀದಿಸಿದವರು ನೀಡಿದ್ದ₹5 ಲಕ್ಷ ಮೊತ್ತದ ಚೆಕ್‌ನಲ್ಲಿ ₹65 ಲಕ್ಷ ಎಂದು ತಿದ್ದಿ ಹಣ ಪಡೆಯಲು ಹೋಗಿದ್ದ ರಿಯಲ್‌ ಎಸ್ಟೇಟ್‌ ಮಧ್ಯವರ್ತಿಯೊಬ್ಬರು ಬ್ಯಾಂಕ್‌ ಸಿಬ್ಬಂದಿ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ನಗರದಲ್ಲಿ ನಡೆದಿದೆ. 

ಚೆಕ್‌ ತಿದ್ದಿದ ಆರೋಪದ ಮೇಲೆ ಕಳೆದ ವಾರ ಗ್ರಾಮಾಂತರ ಪೊಲೀಸ್‌ ಠಾಣೆ ಪೊಲೀಸರು ಬಂಧಿಸಿದ್ದ ನಗರದ ರಿಯಲ್‌ ಎಸ್ಟೇಟ್‌ ಮಧ್ಯವರ್ತಿ ಎಂ.ಸಿ.ಚಂದ್ರಶೇಖರ್‌ ಶನಿವಾರ ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ.ಎರಡು ಎಕರೆ ಜಮೀನು ವ್ಯವಹಾರದಲ್ಲಿ ಮಧ್ಯವರ್ತಿಯಾಗಿದ್ದ ಎಂ.ಸಿ.ಚಂದ್ರಶೇಖರ್ ಅವರಿಗೆ ಕಮಿಷನ್ ರೂಪದಲ್ಲಿ ಆಂಜಿನಪ್ಪ ಎಂಬುವರು ತಲಾ ₹5 ಲಕ್ಷದ ಎರಡು ಚೆಕ್ ನೀಡಿದ್ದರು. ಮೊದಲ ಚೆಕ್ ಡ್ರಾ ಮಾಡಿಕೊಂಡಿದ್ದ ಚಂದ್ರಶೇಖರ್, ಎರಡನೇ ಚೆಕ್ ಡ್ರಾ ಮಾಡಿಕೊಳ್ಳುವಾಗ ₹5 ಲಕ್ಷವನ್ನು ₹65 ಲಕ್ಷ ಎಂದು ತಿದ್ದಿದ್ದರು. 


ಚೆಕ್ ನೋಡಿ ಅನುಮಾನಗೊಂಡ ಬ್ಯಾಂಕ್ ಸಿಬ್ಬಂದಿ, ಚೆಕ್‌ ನೀಡಿದ್ದ ಆಂಜಿನಪ್ಪ ಅವರಿಗೆ ಕರೆ ಮಾಡಿ ಕೇಳಿದಾಗ ವಿಷಯ ಬೆಳಕಿಗೆ ಬಂದಿದೆ. ಚಂದ್ರಶೇಖರ್ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಆಂಜಿನಪ್ಪ ದೂರು ದಾಖಲಿಸಿದ್ದಾರೆ.


ಪೊಲೀಸರು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಚೆಕ್‌ ಕಳಿಸಿ ವರದಿ ಕೋರಿದ್ದರು. ಚೆಕ್ ತಿದ್ದಿರುವುದು ಸಾಬೀತಾದ ಕಾರಣ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಮಾಣಿ_ಪುತ್ತೂರು ರಾ. ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣ

Posted by Vidyamaana on 2023-06-07 12:46:08 |

Share: | | | | |


ಮಾಣಿ_ಪುತ್ತೂರು ರಾ. ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣ

ಪುತ್ತೂರು; ಮಾಣಿ-ಮೈಸೂರು ರಾ. ಹೆದ್ದಾರಿ ೨೫೭ರ ಮಾಣಿಯಿಂದ ಪುತ್ತೂರು ತನಕ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ರಾ. ಹೆದ್ದಾರಿ ವಿಭಾಗದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಅಧಿಕಾರಿಗಳ ಮೂಲಕ ಕೇಂದ್ರ ಸರಕಾರಕ್ಕೆ ಮನವಿಯನ್ನು ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ದಕ್ಷಿಣ ಭಾರತ ಪ್ರಾಂತೀಯ (ನ್ಯಾಷನಲ್ ಹೈವೇ ಸೌತ್ ಇಂಡಿಯಾ ಝೋನ್) ಅಧಿಕಾರಿ ಮಹೇಂದ್ರ ಶರ್ಮ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಾನಿಯಿಂದ ಪುತ್ತೂರು ತನಕ ಚತುಷ್ಪಥ ಕಾಮಗಾರಿ ಆರಂಭದಲ್ಲಿ ನಡೆಸುವಂತೆ ಮತ್ತು ಕಾಮಗಾರಿಯನ್ನು ಪ್ರಸಕ್ತ ಸಾಲಿನ ವಾರ್ಷಿಯ ಯೋಜನೆಯಲ್ಲಿ ಸೇರಿಸಿಕೊಳ್ಳುವಂತೆಯೂ ಮನವಿ ಮಾಡಿದ್ದಾರೆ. ಪ್ರಸಕ್ತ ಸಾಲಿನ ವಾರ್ಷಿಕ ಯೋಜನೆಯಲ್ಲಿ ಸೇರಿಸಿಕೊಂಡಲ್ಲಿ ಮಾತ್ರ ಮುಂದಿನ ಅವಧಿಗೆ ಈ ಕಾಮಗಾರಿಗೆ ಚಾಲನೆ ದೊರೆಯಬಹುದಾಗಿದ್ದು ಇಲ್ಲವಾದಲ್ಲಿ ಇನ್ನಷ್ಟು ದಿನ ಕಾಯಬೇಕಾದ ಅನಿವಾರ್ಯತೆ ಉಂಟಾಗಬಹುದು. ಈ ಕಾರಣಕ್ಕೆ ಪ್ರಸಕ್ತ ಸಾಲಿನಲ್ಲೇ ಈ ಬೇಡಿಕೆಯನ್ನು ಮಂಡಿಸುವಂತೆ ಶಾಸಕರು ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಶಾಸಕರ ಮನವಿಯನ್ನು ಸ್ವೀಕರಿಸಿದ ಅಧಿಕಾರಿ ಮಹೇಂದ್ರ ಶರ್ಮ ಅವರು ತಮ್ಮ ಬೇಡಿಕೆಯನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡುವುದಾಗಿಯೂ , ಕಾಮಗಾರಿಯ ಬೇಡಿಕೆಯ ಬಗ್ಗೆ ವಿವರಣೆ ನೀಡುವುದಾಗಿಯೂ ಶಾಸಕರಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕರು ಮಾಣಿಯಿಂದ ಪುತ್ತೂರು ತನಕ ಚತುಷ್ಪಥ ರಸ್ತೆ ನಿರ್ಮಾಣವಾದಲ್ಲಿ ಜನರಿಗೆ ಹೆಚ್ಚು ಪ್ರಯೋಜನಕಾರಿಯಾಗಲಿದೆ. ರಾ. ಹೆದ್ದಾರಿಯಾಗಿ ಮಾಣಿ ಮೈಸೂರು ರಸ್ತೆ ಮೇಲ್ದರ್ಜೆಗೇರಿದ್ದರಿಂದ ಚತುಷ್ಪಥ ರಸ್ತೆ ಕಾಮಗಾರಿ ಬೇಡಿಕೆಯನ್ನು ಕೇಂದ್ರ ಸರಕರ ಈಡೇರಿಸಲಿದೆ ಎಂಬ ನಂಬಿಕೆ ಇದೆ. ರಸ್ತೆ ನಿರ್ಮಾಣವಾದಲ್ಲಿ ಈ ಭಾಗದ ಬಹುಕಾಲದ ಬೇಡಿಕೆಯೂ ಈಡೇರಲಿದೆ. ರಸ್ತೆ ನಿರ್ಮಾಣ ಕುರಿತು ಅಧಿಕಾರಿಗಳ ಜೊತೆ ಮಾತನಾಡಿ ಮನವಿಯನ್ನು ನೀಡಿದ್ದೇನೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ನಕಲಿ ದಾಖಲೆ ಪತ್ರ ಜಾಲ ಪತ್ತೆ: ಪುತ್ತೂರು ಮೂಲದ ಆರೋಪಿ ಸಿಸಿಬಿ ಬಲೆಗೆ

Posted by Vidyamaana on 2023-10-06 20:36:38 |

Share: | | | | |


ನಕಲಿ ದಾಖಲೆ ಪತ್ರ ಜಾಲ ಪತ್ತೆ: ಪುತ್ತೂರು ಮೂಲದ ಆರೋಪಿ ಸಿಸಿಬಿ ಬಲೆಗೆ

ಮಂಗಳೂರು, ಅ.6: ಆಧಾರ್, ರೇಶನ್ ಕಾರ್ಡ್, ಅಂಕಪಟ್ಟಿ ಮತ್ತಿತರ ಅತ್ಯಮೂಲ್ಯ ದಾಖಲೆ ಪತ್ರಗಳನ್ನೇ ಸೃಷ್ಟಿಸಿ ಹಣಕ್ಕಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಹಾರ್ಟ್ ಅಟ್ಯಾಕ್ - ಹಾರ್ಟ್ ಫೈಲ್ಯೂರ್ - ಕಾರ್ಡಿಯಾಕ್ ಅರೆಸ್ಟ್: ಏನಿದೆ ವ್ಯತ್ಯಾಸ?



ಮಂಗಳೂರು ನಗರದ ಕಂಕನಾಡಿ– ಪಂಪ್ವೆಲ್ ಹಳೆ ರಸ್ತೆಯ ವಿಶ್ವಾಸ್ ಕ್ರೌನ್ ಅಪಾರ್ಟ್ಮೆಂಟಿನ ನೆಲ ಅಂತಸ್ತಿನಲ್ಲಿ ‘’ಹೆಲ್ಪ್ ಲೈನ್ ಮಂಗಳೂರು” ಎಂಬ ಹೆಸರಿನ ಶಾಪ್ ಇಟ್ಟುಕೊಂಡು ನಕಲಿ ದಾಖಲಾತಿಗಳನ್ನು ತಯಾರಿಸಿಕೊಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಕರ್ನಕಟ್ಟೆ ನಿವಾಸಿ ಬರ್ನಾಡ್ ರೋಶನ್ ಮೆಸ್ಕರೇನಸ್ (41) ಮೂಲತ ಪುತ್ತೂರು ತಾಲೂಕಿನ ದರ್ಬೆ ಕಾವೇರಿ ಕಟ್ಟೆ ನಿವಾಸಿ 

 ಹಾರ್ಟ್ ಅಟ್ಯಾಕ್ - ಹಾರ್ಟ್ ಫೈಲ್ಯೂರ್ - ಕಾರ್ಡಿಯಾಕ್ ಅರೆಸ್ಟ್: ಏನಿದೆ ವ್ಯತ್ಯಾಸ?


ಈತನ ಕಚೇರಿಯಲ್ಲಿ ಆಧಾರ್ ಕಾರ್ಡ್, ಪಡಿತರ ಚೀಟಿ, ನಕಲಿ ಶೈಕ್ಷಣಿಕ ದಾಖಲೆ ಪತ್ರಗಳು, ಜನನ ಪ್ರಮಾಣಪತ್ರ ಇತ್ಯಾದಿ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ ಅವುಗಳನ್ನು ಬಳಸಿಕೊಂಡು ಇತರೇ ದಾಖಲಾತಿಗಳನ್ನು ಮಾಡಿಕೊಡುತ್ತಿದ್ದ. ಅವನ್ನೇ ನೈಜ ದಾಖಲಾತಿಗಳೆಂದು ನಂಬಿಸಿ ಸಾರ್ವಜನಿಕರಿಗೆ ಮತ್ತು ಸರಕಾರಕ್ಕೆ ವಂಚಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ  ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.

 

ದಾಳಿ ಸಂದರ್ಭದಲ್ಲಿ ವಿವಿಧ ಹೆಸರುಗಳಲ್ಲಿ ತಯಾರಿಸಿಟ್ಟಿದ್ದ ನಕಲಿ ಆಧಾರ್ ಕಾರ್ಡ್ ಗಳು, ನಕಲಿ ರೇಷನ್ ಕಾರ್ಡ್, ನಕಲಿ ಉದ್ದಿಮೆ ಪರವಾನಿಗೆ ಪತ್ರ, ನಕಲಿ ಎಸ್ಎಸ್ಎಲ್ಸಿ ಅಂಕಪಟ್ಟಿ, ನಕಲಿ ಜನನ ಪ್ರಮಾಣ ಪತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಕಳೆದ ಮೂರು ವರ್ಷಗಳಿಂದ ಈತನಿಂದ ನಕಲಿ ದಾಖಲಾತಿಗಳನ್ನು ಪಡೆದವರು ಬ್ಯಾಂಕ್ ಇನ್ನಿತರ ಕಚೇರಿಗಳಿಗೆ ಸಾಲ ಸೌಲಭ್ಯಕ್ಕಾಗಿ ಮತ್ತು ಸರಕಾರಿ ಸೌಲಭ್ಯಗಳನ್ನು ಪಡೆಯಲು ಉಪಯೋಗಿಸಿದ್ದಾರೆ. ಆಮೂಲಕ ಸರಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂ. ನಷ್ಟ ಉಂಟು ಮಾಡಿದ್ದಾನೆ.

 ಹಾರ್ಟ್ ಅಟ್ಯಾಕ್ - ಹಾರ್ಟ್ ಫೈಲ್ಯೂರ್ - ಕಾರ್ಡಿಯಾಕ್ ಅರೆಸ್ಟ್: ಏನಿದೆ ವ್ಯತ್ಯಾಸ?


ನಕಲಿ ಪ್ರಮಾಣ ಪತ್ರಗಳನ್ನು ತಯಾರಿಸಲು ಬಳಸುತ್ತಿದ್ದ ಲ್ಯಾಪ್ ಟಾಪ್, ಕಲರ್ ಪ್ರಿಂಟರ್, ಲ್ಯಾಮಿನೇಟರ್ ಮೆಶಿನ್, ಬಯೋಮೆಟ್ರಿಕ್ ಡಿವೈಸ್ ಗಳನ್ನು ವಶಪಡಿಸಲಾಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಕಲಿ ದಾಖಲೆ ಪತ್ರ ತಯಾರಿ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ. 


ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಸಿಸಿಬಿ ಎಸಿಪಿ ಪಿಎ ಹೆಗಡೆ ಮಾರ್ಗದರ್ಶನದಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮಸುಂದರ್, ತಂಡದ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

45 ಕೋಟಿ ರೂ. ಬಹುಮಾನವೆಂಬ ಸುಳ್ಳು ಸುದ್ದಿ

Posted by Vidyamaana on 2023-06-24 16:36:52 |

Share: | | | | |


45 ಕೋಟಿ ರೂ. ಬಹುಮಾನವೆಂಬ ಸುಳ್ಳು ಸುದ್ದಿ

ಪುತ್ತೂರು: ಸುಳ್ಯದ ಯುವಕನೋರ್ವನಿಗೆ ಲಾಟರಿಯಲ್ಲಿ 45 ಕೋಟಿ ರೂ. ಬಹುಮಾನ ಬಂದಿದೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಅಬುದಾಬಿಯಲ್ಲಿರುವ ಸುಳ್ಯ ಮೂಲದ ಯುವಕನಿಗೆ ಲಾಟರಿಯಲ್ಲಿ ದೊಡ್ಡ ಮೊತ್ತ ಬಂದಿದೆ ಎಂದು ಹೇಳಲಾಗುತ್ತಿದೆ. ಮೊದಲಿಗೆ ಬೆಳ್ತಂಗಡಿಯ ಯುವಕನೋರ್ವನ ಫೊಟೋ ಬಳಸಿಕೊಂಡು ಇಂತಹ ಫೇಕ್ ಸುದ್ದಿಯನ್ನು ರವಾನಿಸಲಾಗುತ್ತಿತ್ತು. ಬಳಿಕ ಸುಳ್ಯದ ಯುವಕನೋರ್ವನ ಫೊಟೋವನ್ನು ಬಳಸಕೊಳ್ಳಲಾಯಿತು. ಒಟ್ಟಿನಲ್ಲಿ ಇದು ರಾಜ್ಯದಲ್ಲಿ ಬ್ಯಾನ್ ಆಗಿರುವ ಲಾಟರಿಗೆ ಪ್ರೋತ್ಸಾಹ ನೀಡುವ ಕ್ರಮ ಇದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ:ಆರೋಪಿ ಪ್ರವೀಣ್‌ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

Posted by Vidyamaana on 2023-12-01 15:58:50 |

Share: | | | | |


ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ:ಆರೋಪಿ ಪ್ರವೀಣ್‌ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪ್ರವೀಣ್ ನನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿದೆ. ಉಡುಪಿ ಸಬ್ ಜೈಲಿನಿಂದ ಆರೋಪಿ ಪ್ರವೀಣ್‌ ಚೌಗಲೆಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಾಗಿದೆ.


ನ್ಯಾಯಾಂಗ ಬಂಧನದಲ್ಲಿರುವ ಪ್ರವೀಣ್ ನನ್ನು ಉಡುಪಿಯ ಸಬ್ ಜೈಲಿಗೆ ರವಾನಿಸಲಾಗಿತ್ತು. ಆದರೆ ಈ ಜೈಲಿನಲ್ಲಿ ಈತನಿಗೆ ಭದ್ರತೆ ನೀಡುವುದು ಸವಾಲಾಗಿದೆ. ಸಹಕೈದಿಗಳೇ ಈತ ಮಾಡಿದ ಹೀನ ಕೆಲಸಕ್ಕೆ ಆತನಿಗೆ ಹಲ್ಲೆ ಮಾಡುವ ಸಾಧ್ಯತೆ ಇದೆ. ಹಾಗಾಗಿ ಸೀಮಿತ ವ್ಯವಸ್ಥೆಯಲ್ಲಿ ಪ್ರತ್ಯೇಕ ಸೆಲ್ ನಲ್ಲಿ ಇರಿಸುವುದು ಕಷ್ಟಸಾಧ್ಯ. ಈ ಹಿನ್ನೆಲೆ ಸದ್ಯ ಆರೋಪಿಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಡಿಸೆಂಬರ್ 5ರ ತನಕ ಈತನಿಗೆ ನ್ಯಾಯಾಂಗ ಬಂಧನವಿದ್ದು, ವಿಡಿಯೋ ಕಾನ್ನರೆನ್ಸ್ ಮೂಲಕವೇ ವಿಚಾರಣೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Recent News


Leave a Comment: