ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ - ಇಂದು ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ

ಸುದ್ದಿಗಳು News

Posted by vidyamaana on 2024-07-09 08:24:41 |

Share: | | | | |


ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ - ಇಂದು ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ

ಪುತ್ತೂರು: ಅಂತರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಹರಾ ಅರ್ಥಮೂವರ್ ಮತ್ತು ಬೋರ್ ವೆಲ್ ಮಾಲಕ ಪಿ.ಎಂ ಅಶ್ರಫ್, ಕಾರ್ಯದರ್ಶಿಯಾಗಿ ಕೊಂಕಣ್ ಗ್ಯಾಸ್ ನಲ್ಲಿ 22 ವರ್ಷ ಸೀನಿಯರ್ ಎಕೌಂಟೆಂಟ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ವಸಂತ್ ಶಂಕರ್, ಕೋಶಾಧಿಕಾರಿಯಾಗಿ ಯುನೈಟೆಡ್ ಇನ್ಸೂರೆನ್ನ ನಿವೃತ್ತ ಉದ್ಯೋಗಿ ನವೀನ್‌ಚಂದ್ರ  ರವರು ಆಯ್ಕೆಯಾಗಿದ್ದಾರೆ.

ಉಳಿದಂತೆ ಜೊತೆ ಕಾರ್ಯದರ್ಶಿ ಯಾಗಿ ನವ್ಯಶ್ರೀ , ನಿಯೋಜಿತ ಅಧ್ಯಕ್ಷರಾಗಿ ಚಂದ್ರಹಾಸ ರೈ ಬಿ, ಉಪಾಧ್ಯಕ್ಷರಾಗಿ ಪ್ರದೀಪ್‌ ಪೂಜಾರಿ, ನಿಕಟಪೂರ್ವ ಅಧ್ಯಕ್ಷರಾಗಿ ಡಾ.ರಾಜೇಶ್ ಬೆಜ್ಜಂಗಳ, ಕ್ಲಬ್ ಸರ್ವಿಸ್ ನಿರ್ದೇಶಕರಾಗಿ ಜಯಪ್ರಕಾಶ್ ಎ.ಎಲ್, ಕಮ್ಯೂನಿಟಿ ಸರ್ವಿಸ್ ನಿರ್ದೇಶಕರಾಗಿ ಬಿ.ಟಿ ಮಹೇಶ್ಚಂದ್ರ ಸಾಲಿಯಾನ್, ವೊಕೇಶನಲ್ ಸರ್ವಿಸ್ ನಿರ್ದೇಶಕರಾಗಿ ಲೋಕೇಶ್

ಎಂ.ಎಚ್, ಇಂಟರ್‌ನ್ಯಾಷನಲ್ ಸರ್ವಿಸ್ ನಿರ್ದೇತಕರಾಗಿ ಸನತ್ ರೈ, ಯೂತ್ ಸರ್ವಿಸ್ ನಿರ್ದೇಶಕರಾಗಿ ಜಗನ್ನಾಥ್ ಆರಿಯಡ್ಕ, ಸಾರ್ಜಂಟ್ ಎಟ್ ಆರ್ಮ್ಸ್ ಶಿವರಾಂ ಎಂ.ಎಸ್. ಚೀರ್‌ಮ್ಯಾನ್‌ಗಳಾಗಿ ಡಾ.ರಾಮಚಂದ್ರ ಕೆ(ವೆಬ್), ಡಾ.ನಮಿತಾ(ಪೋಲಿಯೋ ಪ್ಲಸ್),ಭಾರತಿ ಎಸ್.ರೈ(ಟೀಚ್), ಜಯಪ್ರಕಾಶ್ಅಮೈ(ಟಿಆ‌ರ್ ಎಫ್), ಲಾವಣ್ಯ  (ಮೆಂಬರ್‌ಶಿಪ್ ಡೆವಲಪ್‌ಮೆಂಟ್). ಪದ್ಮನಾಭ ಶೆಟ್ಟಿ(ಜಿಲ್ಲಾ ಪ್ರಾಜೆಕ್ಟ್), ಸಂತೋಷ್ ಶೆಟ್ಟಿ(ಕ್ರೀಡೆ), ಪ್ರಮೋದ್ ಕುಮಾರ್ ಕೆ.ಕೆ(ಸಾಂಸ್ಕೃತಿಕ), ಪ್ರದೀಪ್ ಬೊಳ್ಳಾರ್ (ಫೆಲೋಶಿಪ್), ಶಾಂತಕುಮಾರ್(ಹಾಜರಾತಿ ಸಮಿತಿ), ಮೊಹಮ್ಮದ್ ರಫೀಕ್ ದರ್ಜೆ (ಸಿಎಲ್‌ಸಿಸಿ), ಅಮಿತಾ ಶೆಟ್ಟಿ(ಎಥಿಕ್ಸ್), ಸಂತೋಷ್ ಶೆಟ್ಟಿ(ಕ್ಲಬ್ ಫೆಸಿಲಿಟೇಟರ್ )ರವರು ಆಯ್ಕೆಯಾಗಿದ್ದಾರೆ.

ಇಂದು ಪದ ಪ್ರದಾನ: ಜು.9 ರಂದು ಪರ್ಲಡ್ಕ-ಬೈಪಾಸ್ ಆಫ್ರಿ ಕಂಫರ್ಟ್‌ನಲ್ಲಿ ಕ್ಲಬ್‌ನ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ ಜರಗಲಿದ್ದು, ರೋಟರಿ ಜಿಲ್ಲೆ 3181 ಇದರ ಪಿಡಿಜಿ ರಂಗನಾಥ್ ಭಟ್ ರವರು ನೂತನ ಪದಾಧಿಕಾರಿಗಳಿಗೆ ಪದ ಪ್ರದಾನವನ್ನು ನೆರವೇರಿಸಲಿದ್ದಾರೆ. ವಲಯ ಐದರ ಅಸಿಸ್ಟಂಟ್ ಗವರ್ನರ್ ಸೂರ್ಯನಾಥ ಆಳ್ವ, ವಲಯ ಸೇನಾನಿ ಮೊಹಮದ್ ರಫೀಕ್ ದರ್ಬೆ, ಮಾತೃಸಂಸ್ಥೆ ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಅಧ್ಯಕ್ಷ ಸುರೇಶ್ ಪಿ.ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 Share: | | | | |


ಲವರ್ ಜೊತೆ ಪತ್ನಿಯ ರಾಸಲೀಲೆ - ಕಣ್ಣಾರೆ ಕಂಡ ಪತಿ ಮೇಲೆ ಕಲ್ಲು ಎತ್ತಿಹಾಕಿ ಕೊಲೆ!

Posted by Vidyamaana on 2024-01-14 16:09:48 |

Share: | | | | |


ಲವರ್ ಜೊತೆ ಪತ್ನಿಯ ರಾಸಲೀಲೆ - ಕಣ್ಣಾರೆ ಕಂಡ ಪತಿ ಮೇಲೆ ಕಲ್ಲು ಎತ್ತಿಹಾಕಿ ಕೊಲೆ!

ಬೆಂಗಳೂರು :- ತಮ್ಮ ರಾಸಲೀಲೆ ಕಂಡ ಪತಿಯನ್ನು ರುಬ್ಬುವ ಕಲ್ಲು ಎತ್ತಿ ಹಾಕಿ ಹತ್ಯೆಗೈದು, ಬಳಿಕ ಆಯ ತಪ್ಪಿ ಬಿದ್ದು ಮೃತಪಟ್ಟಿದ್ದಾರೆ ಎಂದು ಕಥೆ ಸೃಷ್ಟಿಸಿದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಎಚ್‌ಎಸ್‌ಆರ್‌ ಲೇಔಟ್‌ ಠಾಣೆ ಪೊಲೀಸರಿಂದ ಬಂಧಿಸಿದ್ದಾರೆ.ಎಚ್‌ಎಸ್‌ಆರ್‌ ಲೇಔಟ್‌ 2ನೇ ಸೆಕ್ಟರ್‌ನ ನಂದಿನಿ ಬಾಯಿ (22) ಮತ್ತು ಆಕೆಯ ಪ್ರಿಯಕರ ನಿತೀಶ್‌ ಕುಮಾರ್‌ (22) ಬಂಧಿತರು. ಆರೋಪಿಗಳು ಜ.9ರಂದು ರಾತ್ರಿ ವೆಂಕಟರಮಣ ನಾಯಕ್‌ (30) ಎಂಬಾತನ ಮೇಲೆ ರುಬ್ಬುವ ಕಲ್ಲು ಎತ್ತಿ ಹಾಕಿ ಕೊಲೆಗೈದಿದ್ದರು. ಈ ಸಂಬಂಧ ಮೃತನ ತಂದೆ ಲಕ್ಷ್ಮೀ ನಾಯಕ್‌ ಎಂಬುವರು ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.


ಮದುವೆಯ ಆರಂಭದಲ್ಲಿ ದಂಪತಿ ಅನೋನ್ಯವಾಗಿದ್ದರು. ಆ ಬಳಿಕ ಪತ್ನಿ ನಂದಿನಿ ಸಣ್ಣ-ಪುಟ್ಟ ವಿಚಾರಗಳಿಗೆ ಜಗಳ ತೆಗೆದು ತವರು ಮನೆಗೆ ಹೋಗುತ್ತಿದ್ದಳು. ಅಲ್ಲದೆ, ತನ್ನ ಮೂರು ವರ್ಷದ ಮಗಳನ್ನು ತನ್ನ ತವರು ಮನೆಯಲ್ಲೇ ಬಿಟ್ಟಿದ್ದಳು. ಈ ಮಧ್ಯೆ ತನ್ನ ವಿದ್ಯಾರ್ಥಿ ಜೀವನದ ಗೆಳೆಯನ ಜತೆ ಮೊಬೈಲ್‌ ನಲ್ಲಿ ಹೆಚ್ಚು ಮಾತನಾಡುತ್ತಿದ್ದಳು. ಈ ವಿಚಾರ ತಿಳಿದ ಪತಿ ವೆಂಕಟರಮಣ ಪತ್ನಿ ಜತೆ ಜಗಳ ಮಾಡಿದ್ದ.ಬಳಿಕ ಇಬ್ಬರ ಕುಟುಂಬದ ಹಿರಿಯರು ರಾಜೀಸಂಧಾನ ಮಾಡಿದ್ದರು ಎಂಬುದು ಗೊತ್ತಾಗಿದೆ.


ಪತಿ ಹಾಗೂ ಹಿರಿಯರು ಎಚ್ಚರಿಕೆ ನೀಡಿದರೂ ನಂದಿನಿ, ಪ್ರಿಯಕರ ಜತೆಗಿನ ಮಾತುಕತೆ ಮುಂದುವರಿಸಿದ್ದಳು. ಅಲ್ಲದೆ, ಬೆಂಗಳೂರಿಗೆ ಕರೆಸಿಕೊಂಡು ದೈಹಿಕ ಸಂಪರ್ಕ ಬೆಳೆಸುತ್ತಿದ್ದಳು. ಜ.9ರಂದು ರಾತ್ರಿ 8ರ ಸುಮಾರಿಗೆ ತನ್ನ ಪ್ರಿಯಕರನನ್ನು ಮನೆಗೆ ಕರೆಸಿಕೊಂಡು ರಾಸಲೀಲೆಯಲ್ಲಿ ತೊಡಗಿದ್ದಾಳೆ. ಅದೇ ವೇಳೆ ಪತಿ ವೆಂಕಟರಮಣ ಮನೆಗೆ ಬಂದಿದ್ದು, ಇಬ್ಬರು ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದಾರೆ. ಈ ವೇಳೆ ಮೂವರ ನಡುವೆ ಜೋರು ಜಗಳವಾಗಿದೆ. ಮದ್ಯ ಸೇವಿಸಿ ಬಂದಿದ್ದ ವೆಂಕಟರಮಣನ ಮೇಲೆ ನಿತೀಶ್‌ ಕುಮಾರ್‌ ಹಲ್ಲೆ ನಡೆಸಿ, ಕೆಳಗೆ ಬಿದ್ದಾಗ ಆತನ ತಲೆಗೆ ರುಬ್ಬುವ ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ಮೃತದೇಹವನ್ನು ಇಬ್ಬರು ಸೆಕ್ಯೂರಿಟಿ ಗಾರ್ಡ್‌ ಕೊಠಡಿಯ ಬಳಿಯ ಶೌಚಾಲಯಕ್ಕೆ ಎಳೆದೊಯ್ದು ಮಲಗಿಸಿದ್ದಾರೆ.ಆರೋಪಿ ನಿತೀಶ್‌ ಕುಮಾರ್‌ ಆಂಧ್ರಪ್ರದೇಶಕ್ಕೆ ಪರಾರಿಯಾಗಿದ್ದ ಎಂದು ಪೊಲೀಸರು ಹೇಳಿದರು.


ಆ ನಂತರ ಪೊಲೀಸ್‌ ಸಹಾಯವಾಣಿ 112ಗೆ ಕರೆ ಮಾಡಿದ ನಂದಿನಿ, ಪತಿ ಶೌಚಾಲಯದಲ್ಲಿ ಕಾರು ಜಾರಿ ಬಿದ್ದಿದ್ದಾರೆ ಎಂದು ಕರೆ ಮಾಡಿದ್ದಾಳೆ. ಸ್ಥಳಕ್ಕೆ ಬಂದ ಪೊಲೀಸರಿಗೆ, ವೆಂಕಟರಮಣನ ಮೃತದೇಹ ಗಮನಿಸಿದಾಗ ಬಿದ್ದು ಮೃತಪಟ್ಟಿರಲು ಸಾಧ್ಯವಿಲ್ಲ. ಯಾರೋ ಹಲ್ಲೆ ನಡೆಸಿಯೇ ಮೃತಪಟ್ಟಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿತ್ತು.

ಲಂಡನ್ ಡಾಕ್ಟರ್ ಎಂದು ಹೇಳಿ ಮಲ್ಪೆಯ ಮಹಿಳೆಗೆ 4.96 ಲಕ್ಷ ವಂಚನೆ

Posted by Vidyamaana on 2024-02-24 04:42:25 |

Share: | | | | |


ಲಂಡನ್ ಡಾಕ್ಟರ್ ಎಂದು ಹೇಳಿ ಮಲ್ಪೆಯ ಮಹಿಳೆಗೆ 4.96 ಲಕ್ಷ ವಂಚನೆ

ಉಡುಪಿ, : ಲಂಡನ್ ಮೂಲದ ಡಾಕ್ಟರ್ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ಮಲ್ಪೆಯ ಮಹಿಳೆಯೊಬ್ಬರನ್ನು ಯಾಮಾರಿಸಿ 4.96 ಲಕ್ಷ ರೂಪಾಯಿ ಪೀಕಿಸಿದ ಘಟನೆ ನಡೆದಿದೆ. ಹಣ ಕಳಕೊಂಡ ಮಹಿಳೆ ಮಲ್ಪೆ ಪೊಲೀಸರಿಗೆ ದೂರು ನೀಡಿದ್ದಾರೆ.


ಮಲ್ಪೆ ನಿವಾಸಿ ವಿನಿತಾ ಎಂಬ ಮಹಿಳೆಗೆ ಜನವರಿ 24ರಂದು ವಾಟ್ಸಪ್ ನಲ್ಲಿ ವ್ಯಕ್ತಿಯೊಬ್ಬ ಪರಿಚಯ ಆಗಿದ್ದು ನಿಮ್ಮ ಬಿಸಿನೆಸ್ನಲ್ಲಿ ಪಾಲುದಾರಿಕೆ ಮಾಡ್ತೀನಿ ಎಂದಿದ್ದ. ಅಲ್ಲದೆ, ತಾನು ಲಂಡನ್ನಲ್ಲಿ ಡಾಕ್ಟರ್ ಆಗಿದ್ದು, ಸದ್ಯದಲ್ಲೇ ಭಾರತಕ್ಕೆ ಬರಲು ಪ್ಲಾನ್ ಮಾಡಿಕೊಂಡಿದ್ದೇನೆ ಎಂದು ಹೇಳಿಕೊಂಡಿದ್ದ. ಫೆ.2ರಂದು ಬೇರೊಂದು ನಂಬರಲ್ಲಿ ಫೋನ್ ಬಂದಿತ್ತು. ದೆಹಲಿ ಏರ್ಪೋರ್ಟ್ ಕಚೇರಿಯಿಂದ ಫೋನ್ ಮಾಡುತ್ತಿದ್ದೇನೆಂದು ಹೇಳಿದ್ದ ಆ ವ್ಯಕ್ತಿ, ಲಂಡನ್ ಡಾಕ್ಟರಿನ ಫ್ರೆಂಡ್ ಎಂದು ಹೇಳಿದ್ದ. ಡಾಕ್ಟರನ್ನು ಏರ್ಪೋರ್ಟ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಅವರನ್ನು ಬಿಡಿಸಿ ತರಲು ದಂಡ ಕಟ್ಟಬೇಕಾಗಿದೆ ಎಂದಿದ್ದ.


ಆನಂತರವೂ ಫೋನ್ ಬಂದಿದ್ದು, ಡಾಕ್ಟರ್ ಏರ್ಪೋರ್ಟಲ್ಲಿ ಸಿಕ್ಕಿಬಿದ್ದಿದ್ದಾರೆ. ದಂಡ ಕಟ್ಟಲು ಹಣ ಇಲ್ಲ, ಸಹಾಯ ಮಾಡಬಹುದೇ ಎಂದು ಆ ವ್ಯಕ್ತಿ ಕೇಳಿಕೊಂಡಿದ್ದ. ಅದರಂತೆ, ವಿನಿತಾ ಅವರು ಫೆ.16ರಿಂದ 20ರ ನಡುವೆ ತನ್ನ ಕೆನರಾ ಬ್ಯಾಂಕ್ ಖಾತೆಯಿಂದ ಫೋನ್ ಪೇ ಮೂಲಕ 4.96 ಲಕ್ಷ ರೂ. ಹಣ ಕಳಿಸಿದ್ದರು. ಹಣ ಕಳಿಸಿದ ಬಳಿಕ ಫೋನ್ ಸಂಪರ್ಕ ಕಡಿತ ಆಗಿತ್ತು. ಇದರಿಂದ ಮೋಸದ ಅರಿವಾದ ಮಹಿಳೆ ಮಲ್ಪೆ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಡಬದಲ್ಲಿ ವಿದ್ಯಾರ್ಥಿನಿಯರ ಮೇಲೆ ಆಸಿಡ್‌ ದಾಳಿ ಪ್ರಕರಣ

Posted by Vidyamaana on 2024-03-12 11:25:53 |

Share: | | | | |


ಕಡಬದಲ್ಲಿ ವಿದ್ಯಾರ್ಥಿನಿಯರ ಮೇಲೆ ಆಸಿಡ್‌ ದಾಳಿ ಪ್ರಕರಣ

ಕಡಬ : ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಇನ್ನಿಬ್ಬರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪ್ರಧಾನ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ ನನ್ನು ಮಾ.5 ರಂದು ಬಂಧಿಸಲಾಗಿತ್ತು. ಉಪ್ಪಿನಂಗಡಿ ವೃತ್ತ ನಿರೀಕ್ಷಕರ ನೇತೃತ್ವದ ತಂಡ ಪ್ರಧಾನ ಆರೋಪಿ ಜೊತೆ ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಮತ್ತೂರಿನ ಪ್ರದೇಶಕ್ಕೆ ತೆರಳಿ ತನಿಖೆ ನಡೆಸಿದ್ದು, ಇದೀಗ ಕೇರಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ಕಡಬಕ್ಕೆ ಕರೆತಂದಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿ ಅಬಿನ್ ಆ್ಯಸಿಡ್ ದಾಳಿ ನಡೆಸಿದ ದಿನ ಕಾಲೇಜಿನ ಸಮವಸ್ತ್ರ ಹೋಲುವ ಡ್ರೆಸ್ ಹಾಕಿದ್ದು, ಇದನ್ನು ಹೊಲಿದುಕೊಟ್ಟ ವ್ಯಕ್ತಿ ಹಾಗೂ ಆ್ಯಸಿಡ್ ನೀಡಿದ ವ್ಯಕ್ತಿಗಳಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.


ಬೆಳಗಾವಿ ಕೋರ್ಟ್ ಹಾಲ್ ನಲ್ಲೇ ಪಾಕ್ ಪರ ಘೋಷಣೆ ಕೂಗಿದ ಜೈಲು ಕೈದಿ ಪುತ್ತೂರು ಮೂಲದ ಜಯೇಶ್ ಪೂಜಾರಿ

Posted by Vidyamaana on 2024-06-12 16:27:10 |

Share: | | | | |


ಬೆಳಗಾವಿ ಕೋರ್ಟ್ ಹಾಲ್ ನಲ್ಲೇ ಪಾಕ್ ಪರ ಘೋಷಣೆ ಕೂಗಿದ ಜೈಲು ಕೈದಿ ಪುತ್ತೂರು ಮೂಲದ ಜಯೇಶ್ ಪೂಜಾರಿ

ಬೆಳಗಾವಿ, ಜೂನ್ 12: ಮಂಗಳೂರು ಮೂಲದ ನಟೋರಿಯಸ್ ಪಾತಕಿ ಜಯೇಶ್ ಪೂಜಾರಿ ಬೆಳಗಾವಿಯ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ.‌ ಪಾಕಿಸ್ತಾನ್ ಪರ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರು ಸೇರಿ ಕೋರ್ಟ್ ಒಳಗಡೆಯೇ ಧರ್ಮದೇಟು ನೀಡಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಒಡ್ಡಿರುವ ಪ್ರಕರಣ ಸೇರಿದಂತೆ ಹಲವಾರು ಕೇಸುಗಳನ್ನು ಎದುರಿಸುತ್ತಿರುವ ಜಯೇಶ್ ಪೂಜಾರಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದು ಇಂದು ಕೋರ್ಟಿಗೆ ಹಾಜರುಪಡಿಸಲು ಕರೆತಂದಿದ್ದಾಗ ಕೃತ್ಯ ನಡೆದಿದೆ. ಕೋರ್ಟ್ ಒಳ ಭಾಗದಲ್ಲೇ ವಕೀಲರು, ಸಾರ್ವಜನಿಕರು ಪೊಲೀಸರ ಸಮ್ಮುಖದಲ್ಲಿಯೇ ಥಳಿಸಿದ್ದಾರೆ. ಏಟು ಬೀಳುತ್ತಿದ್ದಂತೆ ಆರೋಪಿಯನ್ನು ರಕ್ಷಣೆ ಮಾಡಿ ಪೊಲೀಸರು ಹೊರಗಡೆ ಕರೆದುಕೊಂಡು ಹೋಗಿದ್ದಾರೆ.

ಯುವತಿ ನಾಪತ್ತೆ

Posted by Vidyamaana on 2024-02-29 04:29:14 |

Share: | | | | |


ಯುವತಿ ನಾಪತ್ತೆ

ಕಾರ್ಕಳ; ಮನೆಯಿಂದ ಹೊರಗೆ ಹೋದ ಯುವತಿ ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದಲ್ಲಿ ನಡೆದಿದೆ. ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ಫೆಬ್ರವರಿ 24 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿರುವ ಪ್ರಮೀಳಾ, ಕನ್ನಡ, ತುಳು, ಇಂಗ್ಲೀಷ್ ಹಾಗೂ ಕುಡುಬಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಅಜೆಕಾರು ಪೊಲೀಸ್ ಠಾಣೆ A.: 08253-271100, ಸಂಖ್ಯೆ 9480805470, 9480805471, ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕರು A.: 08258-231083, .: 9480805435, ಜಿಲ್ಲಾ ಪೊಲೀಸ್‌ ಕಚೇರಿ ದೂ.ಸಂಖ್ಯೆ: 0820-2534777 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಜೆಕಾರು ಪೊಲೀಸ್‌ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದರ್ಬೆ ಲಿಟ್ಲ್ ಫ್ಲವರ್ ಶಾಲೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024

Posted by Vidyamaana on 2024-01-14 15:24:25 |

Share: | | | | |


ದರ್ಬೆ ಲಿಟ್ಲ್ ಫ್ಲವರ್ ಶಾಲೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಶಾಲೆಯ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ನೇತೃತ್ವದಲ್ಲಿ ನೀವು ರಸ್ತೆ ಸುರಕ್ಷತಾ ಹೀರೋ ಆಗಿರಿ ಎನ್ನುವ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024 ನಡೆಯಿತು.

ಶಾಲಾ ಮುಖ್ಯಶಿಕ್ಷಕಿ ಭಗಿನಿ ವೆನಿಶಾ ಬಿ.ಎಸ್. ಅಧ್ಯಕ್ಷತೆ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಪುತ್ತೂರು ನಗರ ಠಾಣೆ ಪೊಲೀಸ್ ಉಪನಿರೀಕ್ಷಕ ಆಂಜನೇಯ ರೆಡ್ಡಿ ಮಾತನಾಡಿ, ನಿಮ್ಮ ಆಟೋದಲ್ಲಿ ಬರುವ ಒಂದು ಮಗು ಮುಂದಿನ ಮುಖ್ಯ ಮಂತ್ರಿ, ಪ್ರಧಾನ ಮಂತ್ರಿ ಅಥವಾ ರಾಷ್ಟ್ರಪತಿ  ಆಗಿರಬಹುದು. ಆದ್ದರಿಂದ ಪೋಷಕರು ಮಕ್ಕಳನ್ನು ಕರೆತರುವ ವಾಹನದ ಚಾಲಕರ ಮೇಲೆ ಇಟ್ಟಿರುವ ನಂಬಿಕೆಗೆ ಚ್ಯುತಿ ಬಾರದಂತೆ ವಾಹನವನ್ನು ರಸ್ತೆ ನಿಯಮ ಉಲ್ಲಂಘನೆ ಮಾಡದೆ ಚಲಾಯಿಸಿ ನಿಮ್ಮನ್ನು, ನಿಮ್ಮನ್ನು ನಂಬಿರುವ ಕುಟುಂಬವನ್ನು ರಕ್ಷಿಸಿ ಎಂದರು.

ಶಾಲಾ ಸಂಚಾಲಕ ವಂದನೀಯ ಭಗಿನಿ ಪ್ರಶಾಂತಿ ಬಿ.ಎಸ್, ಪುತ್ತೂರು ನಗರ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸ್ಕರಿಯ, ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪುರಸ್ಕೃತ ವಿದೂಷಿ ನಯನಾ ವಿ ರೈ, ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ರಾಮಚಂದ್ರ ಭಟ್, ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷರಾದ ಸತೀಶ್ ಆರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಅಸ್ಮಾ ಹಾಗೂ ಗೈಡ್ ಶಿಕ್ಷಕಿ ವಿಲ್ಮಾ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಬೆಥನಿ ಶಿಕ್ಷಣ ಸಂಸ್ಥೆಯ ಅಮೃತ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ವಾಮಂಜೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಿಟ್ಲ್ ಫ್ಲವರ್ ಹಾಗೂ ಬೆಥನಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮಕ್ಕಳ ವತಿಯಿಂದ ನಡೆದ ನೃತ್ಯ ರೂಪಕವನ್ನು ರಚಿಸಿ ನಿರ್ದೇಶಿಸಿದ ಶಾಲಾ ಶಿಕ್ಷಕರಾದ ಬಾಲಕೃಷ್ಣ ಪೊರ್ದಾಲ್, ನೃತ್ಯ ಸಂಯೋಜನೆ ಮಾಡಿದ ವಿದೂಷಿ ಸ್ವಸ್ತಿಕಾ ಆರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಹಾಡು ರಚಿಸಿದ ಸಾಹಿತಿ, ಸಂಜಯ ನಗರ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ರಮೇಶ್ ಉಳಯ ಅವರನ್ನು ಅವರ ಶಾಲೆಗೆ ತೆರಳಿ ಸನ್ಮಾನಿಸಲಾಯಿತು. ಬಳಿಕ ಜನಸ್ನೇಹಿ ಪೊಲೀಸ್ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರನ್ನು ಸನ್ಮಾನಿಸಲಾಯಿತು.

ಶಾಲಾ ಗೈಡ್ಸ್ ವಿದ್ಯಾರ್ಥಿನಿಯರಾದ ದ್ರಿಶಾ, ಆರಾಧನಾ, ತನ್ವಿ ಹಾಗೂ ಬೃಂದಾ ಪ್ರಾರ್ಥಿಸಿ, ಶಾಲಾ ಮುಖ್ಯಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ರವರು ಸ್ವಾಗತಿಸಿದರು. ಕಬ್ ಶಿಕ್ಷಕಿ ದಿವ್ಯ ವಂದಿಸಿ, ಸ್ಕೌಟ್ ಶಿಕ್ಷಕರಾದ ಬಾಲಕೃಷ್ಣ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು.



Leave a Comment: