ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಸುದ್ದಿಗಳು News

Posted by vidyamaana on 2024-07-25 06:35:41 |

Share: | | | | |


ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ನಗರದ ಕಂಠಿ ಸರ್ಕಲ್ ಬಳಿ ತ್ರಿಬಲ್ ರೈಡ್ ನಲ್ಲಿ ಬಂದ ಯುವಕರಿಗೆ ಪಿಎಸ್ ಐ ಬುದ್ದಿವಾದ ಹೇಳಿದ ಘಟನೆ ನಡೆದಿದೆ. ತ್ರಿಬಲ್ ರೈಡ್ ಮೂಲಕ ಕಾಲೇಜ್ ಅಡ್ಮಿಷನ್ ಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಇಳಕಲ್ ನಗರ ಠಾಣಾ ಮಹಿಳಾ ಪಿಎಸ್‌ಐ ಎಸ್.ಆರ್.ನಾಯಕ್ ಎಂಬವರು ಬಾಲಕನಿಗೆ ದಂಡ ಕಟ್ಟುವಂತೆ ಒತ್ತಾಯಿಸಿದ್ದರು.

ಆದ್ರೆ, ಕಣ್ಣೀರಿಟ್ಟ ಬಾಲಕ, ನನ್ನ ಬಳಿ ಹಣವಿಲ್ಲ ಆದರೆ, ಕಾಲೇಜು ಶುಲ್ಕ ಕಟ್ಟಲೆಂದು ಇಟ್ಟುಕೊಂಡಿರುವ ದುಡ್ಡಿದೆ ಅಷ್ಟೇ. ಅದನ್ನೇ ತಗೆದುಕೊಳ್ಳಿ ಎಂದು ಅಳುತ್ತ ದುಡ್ಡು ಕೊಟ್ಟಿದ್ದಾನೆ.

ಬಾಲಕನ ಹೇಳಿಕೆಯನ್ನು ಪರಿಶೀಲಿಸಿದ ಬಳಿಕ ಮಹಿಳಾ ಪಿಎಸ್‌ಐ ಅಪ್ಪಿಕೊಂಡು ಸಾಂತ್ವನ ತಿಳಿಸಿ, ತಮ್ಮ ಬಳಿಯಿದ್ದ ದಂಡದ ಹಣವನ್ನು ವಾಪಸ್ ಕೊಟ್ಟು, ಧೈರ್ಯ ತುಂಬಿದ್ದಾರೆ. ಪೋಷಕರು ಮಕ್ಕಳಿಗೆ ಬೈಕ್, ಸ್ಕೂಟರ್ ಕೊಡುವ ಮುನ್ನ ಹತ್ತು ಬಾರಿ ಎಚ್ಚರ ವಹಿಸಿ ಎಂದು ಮಹಿಳಾ ಪಿಎಸ್‌ಐ ಹೇಳಿದ್ದಾರೆ.

 Share: | | | | |


ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

Posted by Vidyamaana on 2024-08-21 03:43:06 |

Share: | | | | |


ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಬಂಟ್ವಾಳ: ಮಹಿಳೆಯೋರ್ವರ ಮೃತದೇಹ ನೇತ್ರಾವತಿ ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ.

ಶಂಭೂರು ಗ್ರಾಮದ ಎ.ಎಮ್.ಆರ್. ಪವ‌ರ್ ಲಿಮಿಟೆಡ್ ಡ್ಯಾಂ ನ 6ನೇ ಗೇಟ್ ನ ಬಳಿ ಸುಮಾರು 40 ರಿಂದ 50 ವರ್ಷದ ಅಪರಿಚಿತ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇರುವುದು ಕಂಡು ಬಂದಿದ್ದು, ಸುಮಾರು 15 ದಿನಗಳ ಹಿಂದೆ ಮಹಿಳೆ ನೀರಿಗೆ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು: ಇಬ್ಬರು ವೈದ್ಯರು ಮೃತ್ಯು

Posted by Vidyamaana on 2023-10-02 18:58:07 |

Share: | | | | |


ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು: ಇಬ್ಬರು ವೈದ್ಯರು ಮೃತ್ಯು

ಕೊಚ್ಚಿ: ಕಾರೊಂದು ಪೆರಿಯಾರ್ ನದಿಗೆ ಬಿದ್ದು ಇಬ್ಬರು ವೈದ್ಯರು ಮೃತಪಟ್ಟಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ.


ಇದೇ ವೇಳೆ ಇನ್ನೂ ಮೂವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಮೃತರನ್ನು ಅದ್ವೈತ್ (29) ಮತ್ತು ಅಜ್ಮಲ್ (29) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಆಸ್ಪತ್ರೆಯ ವೈದ್ಯರಾಗಿದ್ದರು.

ಡಾ.ಅದ್ವೈತ್ ಕಾರು ಚಾಲನೆ ಮಾಡುತ್ತಿದ್ದು, ಮೊಬೈಲ್ ನ ಗೂಗಲ್ ಮ್ಯಾಪ್ ಆನ್ ಮಾಡಿದ್ದರು ಎಂದು ಹೇಳಲಾಗುತ್ತಿದೆ.


ಗೋತುರುತ್‌ನಲ್ಲಿ ಭಾರೀ ಮಳೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗೋಚರತೆ ಕೂಡ ತುಂಬಾ ಕಡಿಮೆ ಇತ್ತು. ಕಾರು ಚಲಾಯಿಸುತ್ತಿದ್ದ ಯುವಕ ಗೂಗಲ್ ಮ್ಯಾಪ್ ತೋರಿಸಿದ ಮಾರ್ಗದಲ್ಲಿ ಹೋಗುತ್ತಿದ್ದ. ಎಡ ತಿರುವಿನಲ್ಲಿ ಕಾರನ್ನು ತಿರುಗಿಸಬೇಕಾಗಿದ್ದರೂ ಆಕಸ್ಮಿಕವಾಗಿ ಮುಂದೆ ಹೋಗಿದ್ದರಿಂದ ಕಾರು ನದಿಗೆ ಬಿದ್ದಿದೆ.

ರಾಜಸ್ಥಾನದಲ್ಲಿ ಪತನಗೊಂಡ MiG-21 ಯುದ್ಧ ವಿಮಾನ: ಇಬ್ಬರು ಸ್ಥಳೀಯರ ಸಾವು

Posted by Vidyamaana on 2023-05-08 05:52:44 |

Share: | | | | |


ರಾಜಸ್ಥಾನದಲ್ಲಿ ಪತನಗೊಂಡ MiG-21 ಯುದ್ಧ ವಿಮಾನ: ಇಬ್ಬರು ಸ್ಥಳೀಯರ ಸಾವು

ಜೈಪುರ: ರಾಜಸ್ಥಾನದ ಹನುಮಾನ್‌ ಗಢ್ ಬಳಿ ಮಿಗ್-21 ಯುದ್ಧ ವಿಮಾನ ಪತನಗೊಂಡು ಇಬ್ಬರು ಸ್ಥಳೀಯರು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.ವಿಮಾನದಲ್ಲಿದ್ದ ಪೈಲಟ್ ಸುರಕ್ಷಿತವಾಗಿದ್ದಾರೆ. ಐಎಎಫ್ ಮೂಲಗಳ ಪ್ರಕಾರ, ಯುದ್ಧವಿಮಾನವು ಸೂರತ್‌ಗಢದಿಂದ ಹೊರಟಿತ್ತು.

ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡುವ ಗಡುವು ಜೂನ್ 30ರ ವರೆಗೆ ವಿಸ್ತರಣೆ

Posted by Vidyamaana on 2023-03-28 10:04:26 |

Share: | | | | |


ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡುವ ಗಡುವು ಜೂನ್ 30ರ ವರೆಗೆ ವಿಸ್ತರಣೆ

ಪುತ್ತೂರು : ಪಾನ್ ಕಾರ್ಡ್ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡಲು ವಿಧಿಸಲಾಗಿದ್ದ ಗಡುವನ್ನು ಕೇಂದ್ರ ಸರಕಾರ ಮುಂದೂಡಿದೆ.ಜೂನ್ 30ರವರೆಗೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು ಜುಲೈ 1ರಿಂದ ಲಿಂಕ್ ಕಡ್ಡಾಯವೆಂದು ಕೇಂದ್ರ ಹಣಕಾಸು ಇಲಾಖೆ ಸೂಚನೆ ನೀಡಿದೆ..

ಜೂನ್ 22ರ ಕರ್ನಾಟಕ ಬಂದ್ ಗೊಂದಲ

Posted by Vidyamaana on 2023-06-21 01:33:22 |

Share: | | | | |


ಜೂನ್ 22ರ ಕರ್ನಾಟಕ ಬಂದ್ ಗೊಂದಲ

ಪುತ್ತೂರು: ವಿದ್ಯುತ್ ದರ ಏರಿಕೆ ಸಂಬಂಧ ನಡೆಯಲಿದೆ ಎಂದು ಸುದ್ದಿಯಾಗಿದ್ದ ಬಂದ್ ಇದೀಗ ಗೊಂದಲಕ್ಕೆ ಎಡೆ ನೀಡಿದೆ.

ಜೂನ್ 22ರಂದು ಬಂದ್ ನಡೆಯಲಿದ್ದು, ಎಫ್.ಕೆ.ಸಿ.ಸಿ.ಐ. ಕರೆ ನೀಡಿದೆ ಎಂದು ಮೊದಲಿಗೆ ಸುದ್ದಿಯಾಗಿತ್ತು. ಈ ಬಂದ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ನೈತಿಕ ಬೆಂಬಲವನ್ನು ಸೂಚಿಸಿದ್ದರು. ನಂತರದ ಬೆಳವಣಿಗೆಯಲ್ಲಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ, ಈ ಬಂದ್ಗೆ ತಮ್ಮ ಬೆಂಬಲವಿಲ್ಲ ಎಂದು ಘೋಷಿಸಿದರು. ಈ ಎಲ್ಲಾ ಗೊಂದಲಗಳ ನಡುವೆ ಎಚ್ಚೆತ್ತುಕೊಂಡ ಎಫ್.ಕೆ.ಸಿ.ಸಿ.ಐ. ರಾಜ್ಯಾಧ್ಯಕ್ಷರು ಬಿ.ವಿ. ಗೋಪಾಲ್ ರೆಡ್ಡಿ ಅವರು ತಾವು ಬಂದ್ಗೆ ಕರೆಯನ್ನೇ ಕೊಟ್ಟಿಲ್ಲ ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದರು.

ಹಾಗಾದರೆ ಬಂದ್ಗೆ ಕರೆ ನೀಡಿದವರು ಯಾರು? ಈ ಗೊಂದಲ ಸಾರ್ವಜನಿಕ ವಲಯದಲ್ಲಿ‌ ಹರಿದಾಡುತ್ತಿದೆ.


ಬಿಜೆಪಿ ರಾಜ್ಯಾಧ್ಯಕ್ಷರು ಏನಂದರು?

ವಿದ್ಯುತ್ ದರ ಎರಿಕೆ ಖಂಡಿಸಿ ಎಫ್​ಕೆಸಿಸಿಐ ಕರೆ ನೀಡಿರುವ ರಾಜ್ಯ ಬಂದ್​​ಗೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ. ರಾಜ್ಯ ಸರ್ಕಾರದ ಹಠಮಾರಿ ಧೋರಣೆ ಕೈಬಿಡಬೇಕು, ಉದ್ಯಮಶೀಲರಿಗೆ ಅವಕಾಶ ಕೊಡಬೇಕು. ವಿದ್ಯುತ್ ದರದ ಬಗ್ಗೆ ಉದ್ಯಮಿಗಳ ಸಮಸ್ಯೆ ಆಲಿಸಿ, ನ್ಯಾಯ ಕೊಡಿಸುವ ಹಾಗೂ ಉದ್ಯಮಶೀಲತೆಗೆ ಅವಕಾಶ ಮಾಡಿಕೊಡುವ ಕಾರ್ಯ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರುಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ತಿಳಿಸಿದರು.


ವರ್ತಕ ಸಂಘ 

ಕರ್ನಾಟಕ ಛೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಜೂ. 22ರಂದು ಕರೆ ನೀಡಿದ ಕರ್ನಾಟಕ ಬಂದ್ ಗೆ ಬೆಂಬಲವಿಲ್ಲ. ವಿದ್ಯುತ್ ದರ ಏರಿಕೆಯಾಗಿರುವುದಕ್ಕೆ ನಮ್ಮ ವಿರೋಧವಿದೆ. ಒಂದೆಡೆ ಉಚಿತ ಇನ್ನೊಂದೆಡೆ ದರ ಏರಿಕೆ ಮಾಡಿರುವುದು ಸರಿಯಲ್ಲ. ಆದರೆ ಬಂದ್ ಮಾಡುವುದರಿಂದ ಕೈಗಾರಿಕೋದ್ಯಮಿಗಳಿಗೆ ಹಾಗೂ ವರ್ತಕರಿಗೇ ನಷ್ಟ. ಈ ನಿಟ್ಟಿನಲ್ಲಿ ಮಂಗಳೂರು ಛೇಂಬರ್ಸ್ ಆಫ್ ಕಾಮರ್ಸ್‍ & ಇಂಸ್ಟ್ರೀಸ್ ಸಲಹೆಯಂತೆ ಬಂದ್ ಗೆ ನಾವು ಬೆಂಬಲ ನೀಡುವುದಿಲ್ಲ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಧ್ಯಕ್ಷ ಜಾನ್ ಕುಟಿನ್ಹಾ, ಉಪಾಧ್ಯಕ್ಷ ಪಿ. ವಾಮನ್ ಪೈ, ನಿರ್ದೆಶಕ ಶ್ರೀಕಾಂತ್ ಕೊಳತ್ತಾಯ, ಪ್ರ.ಕಾರ್ಯದರ್ಶಿ ಉಲ್ಲಾಸ್ ಪೈ, ಮಾಜಿ ಅಧ್ಯಕ್ಷ ಕೇಶವ ಪೈ ತಿಳಿಸಿದ್ದಾರೆ.


ಎಫ್.ಕೆ.ಸಿ.ಸಿ.ಐ. ಸ್ಪಷ್ಟನೆ ಏನು?

ವಿದ್ಯುತ್ ದರ ಏರಿಕೆ ವಿರೋಧಿಸಿ ಜೂನ್ 22 ರಂದು ಬಂದ್ ಗೆ ಕರೆ ನೀಡಿಲ್ಲ ಎಂದು ತಿಳಿಸಿರುವ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರೀ (ಎಫ್ ಕೆಸಿಸಿಐ) ಅಧ್ಯಕ್ಷ ಬಿ.ವಿ. ಗೋಪಾಲರೆಡ್ಡಿ, ನಮಗೂ ಕರ್ನಾಟಕ ಬಂದ್ ಗೂ ಸಂಬಂಧವಿಲ್ಲ. ವಿದ್ಯುತ್ ದರ ಇಳಿಕೆ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇವೆ. ತೆರಿಗೆಯನ್ನು ಶೇ. 9ರಿಂದ ಶೇ.3ಕ್ಕೆ ಇಳಿಕೆ ಮಾಡಲು ಮನವಿ ಮಾಡಿದ್ದೇವೆ. ಸರ್ಕಾರ ಏನು ಮಾಡಲಿದೆ ಎಂಬುದನ್ನು ಕಾದು ನೋಡುತ್ತೇವೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಯಾರೂ ಫ್ಲೆಕ್ಸ್, ಬ್ಯಾನರ್ ಹಾಕುವಂತಿಲ್ಲ; 50,000 ರೂ ದಂಡ ವಿಧಿಸುತ್ತೇವೆ: ಡಿಕೆ ಶಿವಕುಮಾರ್

Posted by Vidyamaana on 2023-08-08 13:14:14 |

Share: | | | | |


ಬೆಂಗಳೂರಿನಲ್ಲಿ ಯಾರೂ ಫ್ಲೆಕ್ಸ್, ಬ್ಯಾನರ್ ಹಾಕುವಂತಿಲ್ಲ; 50,000 ರೂ ದಂಡ ವಿಧಿಸುತ್ತೇವೆ: ಡಿಕೆ ಶಿವಕುಮಾರ್

ಬೆಂಗಳೂರು: ಬೆಂಗಳೂರಿನಲ್ಲಿ ಯಾರೂ ಫ್ಲೆಕ್ಸ್, ಬ್ಯಾನರ್ ಹಾಕುವಂತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.


ನಗರದ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ” ಸಾರ್ವಜನಿಕ ಸ್ಥಳಗಳಲ್ಲಿ ಇನ್ನು ಮುಂದೆ ಯಾರೂ ಫ್ಲೆಕ್ಸ್ ಕಟೌಟ್ ಹಾಕುವಂತಿಲ್ಲ ” ಎಂದು ಸೂಚನೆ ನೀಡಿದರು.



ಆಗಸ್ಟ್ 15 ರ ಒಳಗಡೆ ಫ್ಲೆಕ್ಸ್ ಹಾಕುವುದನ್ನು ಬ್ಯಾನ್ ಮಾಡುತ್ತೇವೆ. ಈ ಬಗ್ಗೆ ನ್ಯಾಯಾಲಯದ ಆದೇಶವೂ ಇದೆ. ಯಾವದೇ ಪಕ್ಷದ ಫ್ಲೆಕ್ಸ್ ಬೋರ್ಡಿಂಗ್ ಇರಲಿ ಅದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಯಾರಾದರೂ ಫ್ಲೆಕ್ಸ್ ಹಾಕಿದರೆ 50,000 ದಂಡ ಹಾಕಲು ನ್ಯಾಯಾಲಯದ ಆದೇಶ ಈಗಾಗಲೇ ಇದೆ. ಸಿಎಂ ಆಗಲಿ ನನ್ನದೇ ಆಗಲಿ ಯಾವುದೇ ಫ್ಲೆಕ್ಸ್ ಹಾಕುವ ಹಾಗಿಲ್ಲ. ಸರ್ಕಾರ ಕಾರ್ಯಕ್ರಮದ ಬಗ್ಗೆ ಏನಾದರೂ ಫ್ಲೆಕ್ಸ್ ಹಾಕಬೇಕಾದಲ್ಲಿ ಅದಕ್ಕೆ ಅನುಮತಿ ಪಡೆದುಕೊಳ್ಳುತ್ತೇವೆ ಎಂದರು.

Recent News


Leave a Comment: