ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಪ್ರಜ್ವಲ್ ವಿಡಿಯೋ ಪ್ರಕರಣ ; ರೇವಣ್ಣ ಇವತ್ತು ವಿಚಾರಣೆಗೆ ಬರದಿದ್ರೆ ಅರೆಸ್ಟ್ ಮಾಡ್ತೀವಿ: ಗೃಹ ಸಚಿವ ಪರಮೇಶ್ವರ್ ವಾರ್ನಿಂಗ್

Posted by Vidyamaana on 2024-05-02 15:23:46 |

Share: | | | | |


ಪ್ರಜ್ವಲ್ ವಿಡಿಯೋ ಪ್ರಕರಣ ; ರೇವಣ್ಣ ಇವತ್ತು ವಿಚಾರಣೆಗೆ ಬರದಿದ್ರೆ ಅರೆಸ್ಟ್ ಮಾಡ್ತೀವಿ: ಗೃಹ ಸಚಿವ ಪರಮೇಶ್ವರ್ ವಾರ್ನಿಂಗ್

ಕಲಬುರಗಿ, ಮೇ 2:  ಪ್ರಜ್ವಲ್ ರೇವಣ್ಣ ಕುರಿತ ಪ್ರಕರಣವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಯಾರನ್ನೂ ರಕ್ಷಣೆ ಮಾಡೋದಕ್ಕೆ ಸಾಧ್ಯವೇ ಇಲ್ಲ.‌ 41(a) ಸೆಕ್ಷನ್ ಅಡಿಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ. ಇದರಂತೆ, 24 ಗಂಟೆಯ ಒಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಇಲ್ಲದೇ ಇದ್ದಲ್ಲಿ ರೇವಣ್ಣ ಅವರನ್ನು ಬಂಧಿಸಬೇಕಾಗುತ್ತೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. 

ರೇವಣ್ಣ ಇವತ್ತು ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಹಾಜರಾಗದೆ‌ ಇದ್ರೆ ರೇವಣ್ಣ ಅವರನ್ನ ಬಂಧಿಸಬೇಕಾಗುತ್ತೆ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೇರಳಿದ ಹಿನ್ನಲೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಪ್ರಜ್ವಲ್ ಪರ ವಕೀಲರು ಸಮಯ ಕೇಳಿದ್ದಾರೆ. ಈ ಪ್ರಕರಣದಲ್ಲಿ ಸಮಯ ಕೋಡೊದಕ್ಕೆ ಸಾಧ್ಯ ಇಲ್ಲ. ಹಾಗಾಗಿ ಅವರನ್ನು ಅರೆಸ್ಟ್ ಮಾಡಲು ಎಸ್ಐಟಿ ಕ್ರಮ ಕೈಗೊಳ್ಳುತ್ತದೆ ಎಂದರು.‌

ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

Posted by Vidyamaana on 2024-07-24 16:52:02 |

Share: | | | | |


ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ವದೆಹಲಿ : ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯಿಸಿದರು.


ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲಿನ ಸಂಚಾರವನ್ನು ನಿಲ್ಲಿಸಲಾಗಿತ್ತು. ಆನಂತರ, ಬ್ರಾಡ್ ಗೇಜ್ ಹಳಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂದು ಓಡುತ್ತಿದ್ದ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ- ಪುತ್ತೂರು ನಡುವೆ ಓಡಾಟ ನಡೆಸುತ್ತಿದ್ದು, ಅದನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಣೆ ಮಾಡಬೇಕು.

ವೀಸಾ ನಿಯಮಕ್ಕೆ ಸಂಬಂಧಿಸಿ ಅಮೆರಿಕ ಸರ್ಕಾರ ಮಹತ್ವದ ಬದಲಾವಣೆ ಘೋಷಣೆ

Posted by Vidyamaana on 2023-02-16 10:27:04 |

Share: | | | | |


ವೀಸಾ ನಿಯಮಕ್ಕೆ ಸಂಬಂಧಿಸಿ ಅಮೆರಿಕ ಸರ್ಕಾರ ಮಹತ್ವದ ಬದಲಾವಣೆ ಘೋಷಣೆ

ವಾಷಿಂಗ್ಟನ್‌: ವೀಸಾ ನಿಯಮಕ್ಕೆ ಸಂಬಂಧಿಸಿ ಅಮೆರಿಕ ಸರ್ಕಾರ ಮಹತ್ವದ ಬದಲಾವಣೆ ಘೋಷಣೆ ಮಾಡಿದೆ. ಹೆತ್ತವರ ವೀಸಾ ಆಧಾರದಲ್ಲಿ ಅಮೆರಿಕಕ್ಕೆ ಬಂದವರಿಗೆ ದೀರ್ಘ‌ ಕಾಲದ ವೀಸಾ ನೀಡುವ ನಿಟ್ಟಿನಲ್ಲಿ ಇರಬೇಕಾದ ವಯಸ್ಸಿನ ಮಿತಿಯನ್ನು 21ರ ಒಳಗೇ ಇರುವಂತೆ ಆದೇಶ ಮಾಡಿದೆ.

ವೀಸಾ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಮಕ್ಕಳಿಗೆ 21 ದಾಟಿದರೆ ಅಂಥವರಿಗೆ ಹೆತ್ತವರ ಜತೆಗೆ ಅಮೆರಿಕಕ್ಕೆ ವಲಸೆ ಪ್ರಕ್ರಿಯೆ ಪೂರ್ತಿಗೊಳಿಸಲು ಅರ್ಹತೆ ಸಿಗುವುದಿಲ್ಲ.

ವಯಸ್ಸಿನ ಮಿತಿಯನ್ನು 21ರ ಒಳಗೇ ಇರಿಸಿರುವಂತೆ ಮಾಡಿರುವುದರಿಂದ ವಿಶೇಷವಾಗಿ ಭಾರತ ಮೂಲದ ನಾಗರಿಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅನುಕೂಲವಾಗಲಿದೆ. ಅಮೆರಿಕ ಸರ್ಕಾರದ ಮಕ್ಕಳ ಹಕ್ಕುಗಳ ರಕ್ಷಣೆ ಕಾಯ್ದೆ (ಸಿಎಸ್‌ಪಿಎ) ಅನ್ವಯ ಈ ಬದಲಾವಣೆ ಮಾಡಲಾಗಿದೆ. ತಂದೆ ಹಾಗೂ ತಾಯಿ ಉದ್ಯೋಗದಲ್ಲಿ ಇದ್ದು, ಅವರಿಗೆ ಕೌಟುಂಬಿಕ ಅಥವಾ ಉದ್ಯೋಗ ಆಧಾರಿತ ವೀಸಾ ನೀಡಲಾಗುತ್ತದೆ.

ಹೊಸ ವ್ಯವಸ್ಥೆಯಲ್ಲಿ ಅಮೆರಿಕ ವಲಸೆ ಮತ್ತು ಪೌರತ್ವ ಸೇವೆಗಳ ವಿಭಾಗ ಅವಧಿ ಮೀರಿದವರಿಗೆ ಹೊಸತಾಗಿ ಪೌರತ್ವ ನೀಡುವುದರ ಬಗ್ಗೆ ಮನವಿಗಳನ್ನು ಸ್ವೀಕರಿಸಲಿದೆ. ಈ ಮೂಲಕ ತೊಂದರೆಗೆ ಈಡಾಗಿರುವವರ ನೆರವಿಗೆ ಬರಲಿದೆ ಎಂದು ಇಂಪ್ರೂವ್‌ದಡ್ರೀಮ್‌ ಡಾಟ್‌ ಆರ್ಗ್‌ನ (improvethedream.org)ದೀಪ್‌ ಪಟೇಲ್‌ ಹೇಳಿದ್ದಾರೆ.

ಪುತ್ತೂರು ಜಾತ್ರೋತ್ಸವಕ್ಕೆ ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡ ಬಯಸುವವರಿಂದ ಅರ್ಜಿ ಆಹ್ವಾನ

Posted by Vidyamaana on 2024-03-22 08:14:00 |

Share: | | | | |


ಪುತ್ತೂರು ಜಾತ್ರೋತ್ಸವಕ್ಕೆ ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡ ಬಯಸುವವರಿಂದ ಅರ್ಜಿ ಆಹ್ವಾನ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಎ.10 ರಿಂದ 20 ರ ತನಕ ನಡೆಯಲಿದ್ದು, ಈ ಸಂದರ್ಭ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉಚಿತವಾಗಿ ಸೇವಾ ರೂಪದಲ್ಲಿ ನಡೆಸಲು ಇಚ್ಚಿಸುವವರು ದೇವಳದ ಕಚೇರಿಗೆ ಅರ್ಜಿ ನೀಡುವಂತೆ ತಿಳಿಸಲಾಗಿದೆ.ಅರ್ಜಿಯಲ್ಲಿ ಸಂಸ್ಥೆಯ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಕಾರ್ಯಕ್ರಮದ ವಿವರ, ತಂಡದಲ್ಲಿ ಭಾಗವಹಿಸುವ ಸದಸ್ಯರ ಸಂಖ್ಯೆಯನ್ನು ನಮೂದಿಸಬೇಕು. ತಂಡಗಳು ನೀಡುವ ಕಾರ್ಯಕ್ರಮ ಭಾರತೀಯ ಸಂಸ್ಕೃತಿಯದ್ದಾಗಿದ್ದು, ಪಾಶ್ಚಾತ್ಯ ಶೈಲಿಗೆ ಅವಕಾಶವಿರುವುದಿಲ್ಲ. ಆಸಕ್ತರು ಮಾ.25ರ ಒಳಗೆ ಅರ್ಜಿಯನ್ನು ದೇವಳದ ಕಚೇರಿಗೆ ನೀಡುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್‌ ಸಂಖ್ಯೆ 9448732414 ಅನ್ನು ಸಂಪರ್ಕಿಸುವುದು. ಸ್ವೀಕೃತಗೊಂಡ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ತಂಡಗಳಿಗೆ ಮಾತ್ರ ಅವಕಾಶ ನೀಡಲಾಗುವುದೆಂದು ದೇವಳದ ಕಾರ್ಯನಿರ್ವಾಹಣಾಧಿಕಾರಿ ಕೆ.ವಿ.ಶ್ರೀನಿವಾಸ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ: ದಿನೇಶ್ ಗುಂಡೂರಾವ್

Posted by Vidyamaana on 2023-12-18 14:30:37 |

Share: | | | | |


ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ: ದಿನೇಶ್ ಗುಂಡೂರಾವ್

ಮಡಿಕೇರಿ: ರಾಜ್ಯದಲ್ಲಿ ಕೊರೊನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಆದರೆ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ. ಇಂದಿನಿಂದಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಾತಾನಾಡಿದ ಅವರು, ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಮಾತನಾಡಿದ ಅವರು, ಕೊರೊನಾ ರೂಪಾಂತರಿ ಬಗ್ಗೆ ಯಾರೂ ಸಹ ಆತಂಕಪಡಬೇಕಿಲ್ಲ. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಹೃದಯ ಸಂಬಂಧಿ ಸಮಸ್ಯೆ ಇದ್ರೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು.


60 ವರ್ಷ ಮೇಲ್ಪಟ್ಟವರು ಮತ್ತು ಹೃದಯ, ಕಿಡ್ನಿ ಸಂಬಂಧಿತ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ಜ್ವರ, ಕಫ, ಶೀತ ಇರುವಂತಹವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆ ಎಂದರು. ಈಗಾಗಲೇ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜು ಆಗುವಂತೆಯೂ ಸೂಚನೆ ನೀಡಲಾಗಿದೆ. ಕೇರಳದಿಂದ ಬರುವವರ ಮೇಲೆ ಹೆಚ್ಚು ಟೆಸ್ಟ್ ಮಾಡುವಂತೆ ಆದೇಶ ಮಾಡಿದ್ದೇವೆ ಎಂದು ಹೇಳಿದರು.

ಉಡುಪಿ ಹತ್ಯಾಕಾಂಡ: ಜಿಲ್ಲಾ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

Posted by Vidyamaana on 2024-02-13 15:12:16 |

Share: | | | | |


ಉಡುಪಿ ಹತ್ಯಾಕಾಂಡ: ಜಿಲ್ಲಾ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಅನ್ನು ಪೊಲೀಸರು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.


ನವೆಂಬರ್ 12 ರಂದು ಒಂದೇ ಕುಟುಂಬದ ಹಸೀನಾ ಮತ್ತು ಮೂವರು ಮಕ್ಕಳ ಕೊಲೆ ನಡೆದಿದ್ದು, ಆರೋಪಿ ಪ್ರವೀಣ್ ಚೌಗುಲೆಯನ್ನು ಪೊಲೀಸರು ಬಂಧಿಸಿದ್ದರು.


ಈಗಾಗಲೇ ತನಿಖೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಮತ್ತು ಚಾರ್ಜ್ ಶೀಟ್ ಸಲ್ಲಿಸಲು ಫೆ.12 ಕೊನೆಯ ದಿನವಾಗಿರುವುದರಿಂದ ಶನಿವಾರ ಪ್ರಕರಣದ ತನಿಖಾಧಿಕಾರಿಯಾಗಿರುವ ಮಲ್ಪೆ ವೃತ್ತ ನಿರೀಕ್ಷಕರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

Recent News


Leave a Comment: