ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು

ಸುದ್ದಿಗಳು News

Posted by vidyamaana on 2024-07-25 16:34:52 |

Share: | | | | |


ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು

ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಲಾಗುತ್ತದೆ. ಹೀಗಾಗಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಕರ್ನಾಟಕ ವಿದ್ಯುತ್ ನಿಗಮದ ಕಾರ್ಯ ನಿರ್ವಾಹಕ ಎಂಜಿನಿಯರ್ ಬುಧವಾರ ಮುನ್ನೆಚ್ಚರಿಕೆ ನೀಡಿದ್ದಾರೆ

ಕಾರ್ಗಲ್ ನ ಲಿಂಗನಮಕ್ಕಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಜಲಾಶಯಕ್ಕೆ ಸದ್ಯ 60 ಸಾವಿರ ಕ್ಯುಸೆಕ್ ಒಳಹರಿವು ಇದೆ.

Additional Image


ಜಲಾಶಯದ ಗರಿಷ್ಠ ಮಟ್ಟ 1819 ಅಡಿಗಳು ಇದ್ದು, ಜಲಾಶಯದಲ್ಲಿ ಈಗ 1801. 20 ಅಡಿ ನೀರಿನ ಸಂಗ್ರಹ ಇದೆ. ಮಳೆ ಹೆಚ್ಚಿರುವುದರಿಂದ ಜಲಾಶಯದ ಮಟ್ಟ ಶೀಘ್ರವೇ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ.


ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಬಹುದು ಎಂದು ಕೆಪಿಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

 Share: | | | | |


ಸಸಿಹಿತ್ಲು ಕಡಲತೀರದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿಶ್ವ ಯೋಗ ದಿನಾಚರಣೆ

Posted by Vidyamaana on 2024-06-22 16:21:31 |

Share: | | | | |


ಸಸಿಹಿತ್ಲು ಕಡಲತೀರದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿಶ್ವ ಯೋಗ ದಿನಾಚರಣೆ

ಮಂಗಳೂರು, ಜೂನ್.21: ಯೋಗ ಮತ್ತು ಯೋಗ್ಯತೆ ಎರಡೂ ಕೂಡಿ ಬಂದಾಗ ಮಾತ್ರ ವಿಕಾಸ ಸಾಧ್ಯ. ಆದರೆ ಎರಡೂ ಫಲಿಸಬೇಕೆಂದರೆ ಅತ್ಯಗತ್ಯ ನಮ್ಮ ಪ್ರಯತ್ನ. ದಕ್ಷಿಣ ಕನ್ನಡ ಎಂಬ ಸಾಧ್ಯತೆಗಳ ಸಾಗರದಲ್ಲಿ ಅಭಿವೃದ್ಧಿಯ ಒಂದು ನವಯುಗ ಪ್ರಾರಂಭಿಸಲು ನಾವೆಲ್ಲ ಸೇರಿ ಈ ನವಪಥದಲ್ಲಿ ನವ ಪ್ರಯತ್ನಗಳನ್ನು ಮಾಡಬೇಕು. ಇಡಿ ವಿಶ್ವವೇ ನಮ್ಮ ದಕ್ಷಿಣ ಕನ್ನಡದತ್ತ ನೋಡುವಂತೆ ಮಾಡಬೇಕು ಎಂಬ ಆಶಯದಿಂದ ಈಗಾಗಲೇ ಸಾಹಸ ಕ್ರೀಡೆಗಳ ಮೂಲಕ ಅಂತರಾಷ್ಟ್ರೀಯ ಪ್ರವಾಸೋದ್ಯಮದ ನಕ್ಷೆಯಲ್ಲಿ ತನ್ನ ಸ್ಥಾನವನ್ನು ಕಲ್ಪಿಸಿದ ಸಸಿಹಿತ್ಲು ಕಡಲ ತೀರದಲ್ಲಿ ಇಂದು ಯೋಗ ವಿದ್ ಯೋಧ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ. 

ಸಸಿಹಿತ್ಲು ಬೀಚಿನಲ್ಲಿ ನಡೆದ ಯೋಗ ವಿದ್ ಯೋಧ ವಿಶ್ವ ಯೋಗ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಪ್ರಮುಖ ಕ್ರೀಡಾಪಟುಗಳು, ನಿವೃತ್ತ ಸೇನಾಧಿಕಾರಿಗಳು, ಚಲನಚಿತ್ರ ನಟರು, ಸಮಾಜ ಸೇವಕರು ಮತ್ತು ಇತರ ಗಣ್ಯರು ಸೇರಿ ಸಮುದ್ರ ತಟದ ಪ್ರಶಾಂತ ವಾತಾವರಣದಲ್ಲಿ ಯೋಗಾಭ್ಯಾಸ ಮಾಡಿದರು.

ಶಾರ್ಜಾಕ್ಕೆ 154 ಪ್ರಯಾಣಿಕರನ್ನು ಹೊತ್ತ ವಿಮಾನ ತಿರುವನಂತಪುರದಲ್ಲಿ ತುರ್ತು ಭೂಸ್ಪರ್ಶ

Posted by Vidyamaana on 2023-07-31 08:10:48 |

Share: | | | | |


ಶಾರ್ಜಾಕ್ಕೆ 154 ಪ್ರಯಾಣಿಕರನ್ನು ಹೊತ್ತ ವಿಮಾನ ತಿರುವನಂತಪುರದಲ್ಲಿ ತುರ್ತು ಭೂಸ್ಪರ್ಶ

ತಿರುವನಂತಪುರಂ: 154 ಪ್ರಯಾಣಿಕರನ್ನು ಹೊತ್ತು ತಿರುಚ್ಚಿಯಿಂದ – ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.


ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ 613 ತಮಿಳುನಾಡಿನ ತಿರುಚಿರಾಪಳ್ಳಿ ವಿಮಾನ ನಿಲ್ದಾಣದಿಂದ ಶಾರ್ಜಾಕ್ಕೆ ಬೆಳಿಗ್ಗೆ 10:45 ಕ್ಕೆ ಹೊರಟಿತು. ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು 12.03ಕ್ಕೆ ವಿಮಾನವನ್ನು ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.


ತುರ್ತು ಭೂಸ್ಪರ್ಶದಿಂದ ವಿಮಾನ ನಿಲ್ದಾಣದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಅಲ್ಲದೆ ಪ್ರಯಾಣಿಕರು ಪರದಾಡುವಂತಾಯಿತು. ಸದ್ಯ ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನಯಾನ ಪ್ರಾಧಿಕಾರ ಹೇಳಿಕೆ ನೀಡಿದೆ.

ಸೋಮವಾರ ಮಧ್ಯಾಹ್ನದ ಬಳಿಕ ಪುತ್ತೂರಿನ ಶಾಲೆ- ಕಾಲೇಜುಗಳಿಗೆ ರಜೆ

Posted by Vidyamaana on 2023-07-24 08:36:45 |

Share: | | | | |


ಸೋಮವಾರ ಮಧ್ಯಾಹ್ನದ ಬಳಿಕ ಪುತ್ತೂರಿನ ಶಾಲೆ- ಕಾಲೇಜುಗಳಿಗೆ ರಜೆ


ಪುತ್ತೂರು: ಭಾರೀ ಮಳೆ ಕಾರಣದಿಂದ ಪುತ್ತೂರು ತಾಲೂಕಿನ ಶಾಲಾ - ಕಾಲೇಜುಗಳಿಗೆ ಸೋಮವಾರ ಮಧ್ಯಾಹ್ನದ ಬಳಿಕ ರಜೆ ನೀಡಲಾಗಿದೆ.

ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆಯಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. 

ನಾಳೆ ಅಂದರೆ ಮಂಗಳವಾರದ ಮಳೆ ಪರಿಸ್ಥಿತಿ ನೋಡಿ ನಿರ್ಧಾರ ಮಾಡುವಂತೆಯೂ ಶಾಸಕರು‌ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಬೆಂಗಳೂರು: ಸಹಜೀವನ ಸಾಗಿಸುತ್ತಿದ್ದ ಪ್ರೇಮಿಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

Posted by Vidyamaana on 2023-11-07 16:34:52 |

Share: | | | | |


ಬೆಂಗಳೂರು: ಸಹಜೀವನ ಸಾಗಿಸುತ್ತಿದ್ದ ಪ್ರೇಮಿಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಬೆಂಗಳೂರು: ಕೊತ್ತನೂರು ಠಾಣೆ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ ಸಮುಚ್ಚಯವೊಂದರ ಫ್ಲ್ಯಾಟ್‌ನಲ್ಲಿ ಬೆಂಕಿ ಹಚ್ಚಿಕೊಂಡು ಸೌಮಿನಿ ದಾಸ್ (20) ಹಾಗೂ ಅಬಿಲ್ ಅಬ್ರಾಹಂ (29) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


‘ಪಶ್ಚಿಮ ಬಂಗಾಳದ ಸೌಮಿನಿ ದಾಸ್ ಹಾಗೂ ಕೇರಳದ ಅಬಿಲ್, ಪರಸ್ಪರ ಪ್ರೀತಿಸುತ್ತಿದ್ದರೆಂದು ಗೊತ್ತಾಗಿದೆ. ಒಂದೇ ಫ್ಲ್ಯಾಟ್‌ನಲ್ಲಿ ಸಹಜೀವನ ನಡೆಸುತ್ತಿದ್ದ ಇಬ್ಬರೂ ಭಾನುವಾರ ಸಂಜೆ ಬೆಂಕಿ ಹಚ್ಚಿಕೊಂಡು ಮೃತಪಟ್ಟಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.ವಿವಾಹಿತರಾಗಿದ್ದ ಸೌಮಿನಿ, ನರ್ಸಿಂಗ್ ವ್ಯಾಸಂಗ ಮಾಡಲು ನಗರಕ್ಕೆ ಬಂದಿದ್ದರು. ನರ್ಸಿಂಗ್ ಮುಗಿಸಿದ್ದ ಅಬಿಲ್, ಸ್ಥಳೀಯ ಏಜೆನ್ಸಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರಿಗೂ ಪರಸ್ಪರ ಪರಿಚಯವಾಗಿತ್ತು’ ಎಂದು ತಿಳಿಸಿವೆ.


‘ಮೂರು ತಿಂಗಳ ಹಿಂದೆಯಷ್ಟೇ ತಮ್ಮೂರಿಗೆ ಹೋಗಿದ್ದ ಸೌಮಿನಿ, ಪುನಃ ಬೆಂಗಳೂರಿಗೆ ವಾಪಸು ಬಂದಿದ್ದರು. ಇತ್ತೀಚೆಗೆ ಪತಿ ಜೊತೆ ಮಾತನಾಡಿದ್ದ ಅವರು, ‘ಮದುವೆಯಾದ ದಿನದಿಂದಲೂ ನೀನು ನನಗೆ ಕಿರುಕುಳ ನೀಡುತ್ತಿದ್ದಿಯಾ. ನಿನ್ನ ಜೊತೆ ನಾನು ಇರುವುದಿಲ್ಲ. ನನ್ನ ತಂಟೆಗೆ ಬರಬೇಡ. ನಾನು ಊರಿಗೂ ಬರುವುದಿಲ್ಲ’ ಎಂದಿದ್ದರೆಂದು ಹೇಳಲಾಗುತ್ತಿದೆ.’


‘ಸೌಮಿನಿ ಬಗ್ಗೆ ಅನುಮಾನಗೊಂಡಿದ್ದ ಪತಿ, ಅವರ ಬಗ್ಗೆ ವಿಚಾರಿಸಿದ್ದರು. ಅಬಿಲ್ ಜೊತೆ ಸೌಮಿನಿ ಸಹಜೀವನ ನಡೆಸುತ್ತಿದ್ದ ಸಂಗತಿ ಗೊತ್ತಾಗಿತ್ತು. ಈ ಬಗ್ಗೆ ಪತ್ನಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ‘ನಮ್ಮ ಪ್ರೀತಿಯ ವಿಷಯ ಬೇರೆಯವರಿಗೆ ಗೊತ್ತಾಗಿದೆ. ನಮ್ಮನ್ನು ಬದುಕಲು ಬಿಡುವುದಿಲ್ಲ’ ಎಂದು ತಿಳಿದ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.


‘ಬೆಂಕಿ ಹಚ್ಚಿಕೊಂಡಿದ್ದ ಸಂದರ್ಭದಲ್ಲಿ ಇಬ್ಬರೂ ಕೂಗಾಡಿದ್ದರು. ಸ್ಥಳೀಯರು ಸಹಾಯಕ್ಕೆ ಹೋಗಿದ್ದರು. ಅಷ್ಟರಲ್ಲೇ ಇಬ್ಬರ ದೇಹ ಬಹುಪಾಲು ಸುಟ್ಟಿತ್ತು. ಸೌಮಿನಿ ದಾಸ್ ಸ್ಥಳದಲ್ಲೇ ಮೃತಪಟ್ಟಿದ್ದರು. ಉಸಿರಾಡುತ್ತಿದ್ದ ಅಬಿಲ್ ಅವರನ್ನು ಸ್ಥಳೀಯರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಯೇ ಅವರು ಮೃತಪಟ್ಟರು’ ಎಂದು ತಿಳಿಸಿವೆ.

ಕುಕ್ಕೆ ಸುಬ್ರಹ್ಮಣ್ಯಕ್ಕೆ ನೂತನ ಆಡಳಿತಾಧಿಕಾರಿ ಯೇಸುರಾಜ್ ಧರ್ಮದ ಬಗ್ಗೆ ಅಪಪ್ರಚಾರ

Posted by Vidyamaana on 2024-05-03 07:21:29 |

Share: | | | | |


ಕುಕ್ಕೆ ಸುಬ್ರಹ್ಮಣ್ಯಕ್ಕೆ ನೂತನ ಆಡಳಿತಾಧಿಕಾರಿ ಯೇಸುರಾಜ್ ಧರ್ಮದ ಬಗ್ಗೆ ಅಪಪ್ರಚಾರ

ಮಂಗಳೂರು, ಮೇ.2: ರಾಜ್ಯದ ಮುಜರಾಯಿ ಇಲಾಖೆಗೊಳಪಟ್ಟ ಶ್ರೀಮಂತ ದೇಗುಲ ಎಂದು ಹೆಸರಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಎಸ್.ಜೆ. ಯೇಸುರಾಜ್ ಎಂಬವರನ್ನು ನೇಮಕ ಮಾಡಲಾಗಿತ್ತು. ರಾಮನಗರ ಜಿಲ್ಲಾ ಮುಜರಾಯಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೇಸುರಾಜ್ ಅವರನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಎಇಓ ಆಗಿ ನೇಮಕ ಮಾಡಿರುವುದು ಚರ್ಚೆಗೂ ಕಾರಣವಾಗಿತ್ತು.


ಯೇಸುರಾಜ್ ಎನ್ನುವ ಹೆಸರಿನ ಕಾರಣಕ್ಕೆ ಅನ್ಯ ಧರ್ಮದವರನ್ನು ಹಿಂದುಗಳ ದೇವಸ್ಥಾನಕ್ಕೆ ನೇಮಕ ಮಾಡಿದ್ದಾರೆಂದು ಹಿಂದು ಸಂಘಟನೆಗಳ ನಾಯಕರು ಆಕ್ಷೇಪಿಸಿದ್ದರು. ಅವರ ಧರ್ಮದ ಹಿನ್ನೆಲೆಯ ಬಗ್ಗೆ ಪ್ರಶ್ನೆಯನ್ನೂ ಮಾಡಿದ್ದರು. ಈ ವಿಚಾರ ಆಕ್ಷೇಪಕ್ಕೆ ಗುರಿಯಾದ ಬೆನ್ನಲ್ಲೇ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದು, ಯೇಸುರಾಜ್ ಅವರ ಹಿನ್ನೆಲೆ, ಗೋತ್ರಗಳ ದಾಖಲೆಯನ್ನು ಟ್ವಿಟರ್ ನಲ್ಲಿ ಬಿಡುಗಡೆ ಮಾಡಿದ್ದಾರೆ.

ಬೆಂಗಳೂರು ಕಂಬಳ: ಓಟದಲ್ಲಿ ಚಿನ್ನದ ಪದಕ ಗೆದ್ದ ಕಾಂತಾರ ಕೋಣಗಳು

Posted by Vidyamaana on 2023-11-26 19:39:25 |

Share: | | | | |


ಬೆಂಗಳೂರು ಕಂಬಳ: ಓಟದಲ್ಲಿ ಚಿನ್ನದ ಪದಕ ಗೆದ್ದ ಕಾಂತಾರ ಕೋಣಗಳು

ಬೆಂಗಳೂರಿನಲ್ಲಿ ನಡೆದ ಕಂಬಳದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದಲ್ಲಿ ಬಳಸಿಕೊಂಡಿದ್ದ ಕೋಣಗಳಿಗೆ ಚಿನ್ನದ ಪದಕ ಗೆದ್ದಿವೆ. ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಕಂಬಳದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದಲ್ಲಿ ಬಳಸಿಕೊಂಡಿದ್ದ ಕೋಣಗಳಿಗೆ ಚಿನ್ನದ ಪದಕ ಗೆದ್ದಿವೆ.ಪರಮೇಶ್ವರ ಭಟ್ ಮಾಲೀಕತ್ವದ ಕೋಣಗಳು ಇಂದು 6.5 ಕೋಲು ನೀರು ಎತ್ತರಕ್ಕೆ ನೀರು ಚಿಮ್ಮಿಸಿ ಚಿನ್ನದ ಪದಕ ಪಡೆದಿವೆ. ಬಾನೆತ್ತರಕ್ಕೆ ನೀರು ಚಿಮ್ಮಿಸುತ್ತಾ ಈ ಕೋಣಗಳ ಓಟವನ್ನು ಅಲ್ಲಿ ನೆರೆದಿದ್ದವರು ಕಣ್ತುಂಬಿಕೊಂಡರು.ಅರಮನೆ ಮೈದಾನದಲ್ಲಿ ನಿರ್ಮಿಸಿರುವ ರಾಜ-ಮಹಾರಾಜ ಕೆರೆಯಲ್ಲಿ ಬೆಂಗಳೂರು ಕಂಬಳದ ಮೊದಲ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಅಪ್ಪು, ಕಿಟ್ಟು ಜೋಡಿ ಕೋಣಗಳು ಇತಿಹಾಸ ಬರೆದಿವೆ.ಏಳು ಬಲಿಷ್ಠ ಕೋಣಗಳ ಹಿಂದಿಕ್ಕಿದ ಕಾಂತಾರ ಜೋಡಿ ಕೋಣವು ಒಂದು ಲಕ್ಷ ನಗದು ಹಾಗೂ 16 ಗ್ರಾಂ ಚಿನ್ನ ತನ್ನದಾಗಿಸಿಕೊಂಡಿತು

Recent News


Leave a Comment: