ಉಡುಪಿ: ನಾಳೆ (ಜು.09)ರಂದು ಶಾಲಾ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿಗಳು News

Posted by vidyamaana on 2024-07-08 17:22:55 |

Share: | | | | |


ಉಡುಪಿ: ನಾಳೆ (ಜು.09)ರಂದು ಶಾಲಾ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ಜು.09 ರಂದು ರೆಡ್ ಅಲರ್ಟ್ ಘೋಷಿಸಿದ್ದು ಅದರಂತೆ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಮಂಗಳವಾರ ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜು.9ರಂದು ರಜೆ ಘೋಷಿಸಿ ಉಡುಪಿ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ

 Share: | | | | |


ಲೋಕ ಸಮರಕ್ಕೆ ಕಮಲ ನಾಯಕರ ಭರ್ಜರಿ ತಯಾರಿ

Posted by Vidyamaana on 2024-03-30 21:05:11 |

Share: | | | | |


ಲೋಕ ಸಮರಕ್ಕೆ ಕಮಲ ನಾಯಕರ ಭರ್ಜರಿ ತಯಾರಿ

ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶವು ಏ.2ರಂದು ಮಧ್ಯಾಹ್ನ ಗಂಟೆ 2ಕ್ಕೆ ತೆಂಕಿಲ ಬೈಪಾಸ್‌ ರಸ್ತೆಯ ಸ್ವಾಮಿ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ ಹೇಳಿದರು.

ಕೆದಿಲದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

Posted by Vidyamaana on 2024-04-12 21:06:29 |

Share: | | | | |


ಕೆದಿಲದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಯೋಜನೆಯಿಂದ ಅರ್ಹ ಪ್ರತೀ ಕುಟುಂಬಕ್ಕೆ 30 ಸಾವಿರ ಹಣ ಬಂದಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.

ಕೆದಿಲ ಗ್ರಾಮದ ಬೀಟಿಗೆಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಇದುವರೆಗೆ ರಾಜ್ಯ ಮತ್ತು ದೇಶವನ್ನಾಳಿದ ಯಾವುದೇ ಸರಕಾರ ಜನರ ಖಾತೆಗೆ ಹಣ ನೀಡಿಲ್ಲ. ರಾಜ್ಯದ ಸಿದ್ದರಾಮಯ್ಯ ನೇತೃತ್ಬದ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಯಿಂದ ಅನೇಕ ಕುಟುಂಬಗಳಿಗೆ ನೆಮ್ಮದಿಯ ಬದುಕು ನೀಡಿದೆ. ಮಹಿಳೆ ಸ್ವಾವವಲಂಬಿ ಬದುಕು ಕಟ್ಟಿದ್ದಾರೆ. ತೀರಾ ಬಡತನದಲ್ಲಿದ್ದ ಕುಟುಂಬಗಳು ಈಗ ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ. ರಾಜ್ಯದ ಪ್ರತೀಯೊಬ್ಬ ಮಹಿಳೆಯರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಚುನಾವಣೆಯ ಸಂದರ್ಬದಲ್ಲಿ ಹಿಂದುತ್ಬ ಎಂದು ಹೇಳಿ ಜನರ ಮನಸ್ಸನ್ನು ಕೆರಳಿಸಿ ಅಧಿಕಾರಕ್ಕೆ ಬರುವ ಬಿಜೆಪಿ ಜನತೆಗೆ ಏನು ಕೊಟ್ಟಿದೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ

Posted by Vidyamaana on 2023-07-06 07:04:55 |

Share: | | | | |


ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ

ಬೆಂಗಳೂರು: ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಂಕಾಳ ವೈದ್ಯ ಅವರಿಗೆ ಸಿಎಂ ಸೂಚನೆ ನೀಡಿದ್ದಾರೆ.


ಮಳೆ ಹಾನಿ ಕುರಿತು ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಆದೇಶಿಸಿದ್ದಾರೆ.

ಪರಶುರಾಮ ಥೀಂ ಪಾರ್ಕ್ ಹಗರಣ ಸಿಐಡಿ ತನಿಖೆಗೆ ಸಿದ್ದರಾಮಯ್ಯ ಆದೇಶ; ಬಿಜೆಪಿ ಶಾಸಕನಿಗೆ ಎದುರಾಗುತ್ತಾ ಸಂಕಷ್ಟ?

Posted by Vidyamaana on 2024-02-09 07:41:42 |

Share: | | | | |


ಪರಶುರಾಮ ಥೀಂ ಪಾರ್ಕ್ ಹಗರಣ ಸಿಐಡಿ ತನಿಖೆಗೆ ಸಿದ್ದರಾಮಯ್ಯ ಆದೇಶ; ಬಿಜೆಪಿ ಶಾಸಕನಿಗೆ ಎದುರಾಗುತ್ತಾ ಸಂಕಷ್ಟ?

ಉಡುಪಿ : ಕಾರ್ಕಳದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ಅಕ್ರಮ ಕಾಮಗಾರಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.


ಪರಶುರಾಮ‌ ಥೀಮ್‌ ಪಾರ್ಕ್‌ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ, ಜೊತೆಗೆ ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರವಾಗಿರುವ ಸಂಬಂಧ ಸಾರ್ವಜನಿಕರಿಂದ ದೂರು ಕೇಳಿ ಬಂದಿತ್ತು.


ಆದೇಶದಲ್ಲೇನಿದೆ..!??


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಫೆ.2 ರಂದು ಬರೆದ ಪತ್ರದಲ್ಲಿ ಪರಶುರಾಮ ಥೀಂ ಪಾರ್ಕ್‌ ಕಾಮಗಾರಿಯಲ್ಲಿ ಭ್ರಷ್ಟಾಚಾರ ಹಾಗೂ ಕಳಪೆ ಕಾಮಗಾರಿ ನಡೆದ ಹಾಗೂ ಜನರ ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ಕುರಿತು ದೃಶ್ಯ ಮಾಧ್ಯಮ ಮತ್ತು ದಿನ ಪತ್ರಿಕೆಗಳು ವರದಿ ಮಾಡಿರುವುದು ತಿಳಿದುಬಂದಿದೆ. ಈ ಕುರಿತು ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಲು ಸಿಒಡಿ ಅಥವಾ ಉನ್ನತ ಮಟ್ಟದ ತನಿಖೆ ನಡೆದಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿನಂತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಒಡಿ ತನಿಖೆಗೆ ಆದೇಶಿಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಡಿಸಿರುವ ಆದೇಶದಲ್ಲಿ ಹೇಳಲಾಗಿದೆ.

ಮಂಗಳೂರು ಕಥೋಲಿಕ್ ಸಭಾ ಕೇಂದ್ರೀಯ ಸಮಿತಿಯಿಂದ ಕ್ರೈಸ್ತ ಪತ್ರಕರ್ತರ ಸಹಮಿಲನ

Posted by Vidyamaana on 2023-10-24 12:44:17 |

Share: | | | | |


ಮಂಗಳೂರು ಕಥೋಲಿಕ್ ಸಭಾ ಕೇಂದ್ರೀಯ ಸಮಿತಿಯಿಂದ ಕ್ರೈಸ್ತ ಪತ್ರಕರ್ತರ ಸಹಮಿಲನ

ಪುತ್ತೂರು: ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿನ ಧರ್ಮಾಧ್ಯಕ್ಷರ ನಿವಾಸದಲ್ಲಿ ಕಾರ್ಯಾಚರಿಸುತ್ತಿರುವ ಕಥೋಲಿಕ್ ಸಭಾ ಮಂಗಳೂರು ಪ್ರದೇಶ ಇದರ ವತಿಯಿಂದ ಕ್ರೈಸ್ತ ಪತ್ರಕರ್ತರ ಸಹಮಿಲನ ಹಾಗೂ ಸನ್ಮಾನ ಕಾರ್ಯಕ್ರಮ ಅ.22ರಂದು ಸಂಜೆ ಜೆಪ್ಪು ಸಂತ ಅಂತೋನಿ ಆಶ್ರಮದಲ್ಲಿನ ಸಂಭ್ರಮ ಸಭಾಭವನದಲ್ಲಿ ನಡೆಯಿತು.

ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ 12 ವಲಯಗಳಲ್ಲಿನ ವಿವಿಧ ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಸಂಸ್ಥಾಪಕರಾಗಿ, ಸಂಪಾದಕರಾಗಿ, ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೊಂಕಣಿ ಕ್ರೈಸ್ತ ಪತ್ರಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಚರಿತ್ರೆಯಲ್ಲಿ ಮೊದಲ ಬಾರಿಗೆ ಹಮ್ಮಿಕೊಳ್ಳಲಾಗಿತ್ತು. ಅದರಂತೆ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಕಳೆದ 14 ವರ್ಷಗಳಿಂದ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಪುತ್ತೂರು ತಾಲೂಕು ಜರ್ನಲಿಸ್ಟ್ ಯೂನಿಯನ್ ಪ್ರಧಾನ ಕಾರ್ಯದರ್ಶಿಯಾಗಿರುವ ಸಂತೋಷ್ ಮೊಟ್ಟೆತ್ತಡ್ಕ ಸೇರಿದಂತೆ ಮಂಗಳೂರು ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 43 ಮಂದಿ ಕ್ರೈಸ್ತ ಪತ್ರಕರ್ತರನ್ನು ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ.ವಂ|ಡಾ|ಪೀಟರ್ ಪಾವ್ಲ್ ಸಲ್ದಾನ್ಹಾರವರು ಶಾಲು ಹೊದಿಸಿ ಸನ್ಮಾನಿಸಿದರು. 

ಕಥೋಲಿಕ್ ಸಭಾ ಕೇಂದ್ರ ಸಮಿತಿ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರುರವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಕಥೋಲಿಕ್ ಸಭಾ ಕೇಂದ್ರಿಯ ಅಧ್ಯಾತ್ಮಿಕ ನಿರ್ದೇಶಕ ವಂ|ಡಾ|ಜೆ.ಬಿ ಸಲ್ದಾನ್ಹಾ, ಜೆಪ್ಪು ಸಂತ ಅಂತೋನಿ ಆಶ್ರಮದ ನಿರ್ದೇಶಕ ವಂ|ಜೆ.ಬಿ ಕ್ರಾಸ್ತಾ, ದಾಯ್ಜಿವಲ್ಡ್೯ ಮೀಡಿಯಾ ಲಿಮಿಟೆಡ್ ನ ಸಂಸ್ಥಾಪಕ ವಾಲ್ಟರ್ ನಂದಳಿಕೆ, ಮಹಾರಾಷ್ಟ್ರ ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ, ಕರಾವಳಿ ಸುದ್ದಿ ವಾರಪತ್ರಿಕೆಯ ಸಂಪಾದಕ ಹಾಗೂ ಪ್ರಕಾಶಕ ಭೊನಿಪಾಸ್ ರೋಶನ್ ಮಾರ್ಟಿಸ್, ಕಥೋಲಿಕ್ ಸಭಾ ಕೇಂದ್ರ ಸಮಿತಿಯ ಕಾರ್ಯದರ್ಶಿ ವಿಲ್ಮಾ ಮೊಂತೇರೊ, ಪತ್ರಕರ್ತರ ಸಹಮಿಲನ ಹಾಗೂ ಸನ್ಮಾನ ಕಾರ್ಯದ ಸಂಚಾಲಕ ಪಾವ್ಲ್ ರೋಲ್ಫಿ ಡಿಕೋಸ್ಟರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಸನ್ಮಾನದ ಸಂದರ್ಭದಲ್ಲಿ ಸಂತೋಷ್ ಮೊಟ್ಟೆತ್ತಡ್ಕರವರ ತಾಯಿ ಐರಿನ್ ಮೊರಾಸ್, ಪತ್ನಿ ಪ್ರಮೀಳಾ ಸಿಕ್ವೇರಾ, ಪುತ್ರಿ ಸಿಯೋನಾ ಮೊರಾಸ್, ಪುತ್ರ ಸೇವಿಯನ್ ಮೊರಾಸ್, ತಂಗಿ ಮಗಳು ಕ್ಯಾರಲ್ ಸಿಕ್ವೇರಾ ಉಪಸ್ಥಿತರಿದ್ದರು.

ಪುತ್ತೂರು ತಾಲೂಕಿನ ಕ್ರೈಸ್ತ ಧರ್ಮದ, ಸಂಘ-ಸಂಸ್ಥೆಯ ವರದಿಗಳನ್ನು ಸಕಾಲದಲ್ಲಿ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಭಿತ್ತರಿಸಿದ್ದಕ್ಕೆ ಪುತ್ತೂರು ಮಾಯಿದೆ ದೇವುಸ್ ಚರ್ಚ್ ಸಮುದಾಯ ದಿನದಂದು ಡೊನ್ ಬೊಸ್ಕೊ ಕ್ಲಬ್ ನಿಂದ, ಕ್ರಿಶ್ಚಿಯನ್ ಲೈಫ್ ಕಮ್ಯೂನಿಟಿಯಿಂದ, ಚರ್ಚ್ ನ ಹಲವಾರು ವಾಳೆಗಳಿಂದ ಸನ್ಮಾನ ಜೊತೆಗೆ ಮೊಟ್ಟೆತ್ತಡ್ಕ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಿಂದ, ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ, ಆರ್ಯಾಪು ಶ್ರೀ ಮಾರಿಯಮ್ಮ ದೇವಸ್ಥಾನದಿಂದ ಸನ್ಮಾನ ಜೊತೆಗೆ ಹಲವು ಸಂಘ ಸಂಸ್ಥೆಗಳಿಂದ ಗೌರವ ಪುರಸ್ಕಾರ ಪಡೆದಿರುವ ಸಂತೋಷ್ ಮೊಟ್ಟೆತ್ತಡ್ಕ  ಅವರು ತುಳು ನಾಟಕಗಳಾದ ತಪ್ಪುಗು ತಕ್ಕ ಶಿಕ್ಷೆ, ದೇವೆರೆ ತೀರ್ಪು ಜೊತೆಗೆ ಹಲವಾರು ಕೊಂಕಣಿ ಪ್ರಹಸನಗಳಲ್ಲಿ ಅಭಿನಯಿಸಿ ಗಮನ ಸೆಳೆದಿದ್ದಾರೆ.

BIG BREAKING: ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

Posted by Vidyamaana on 2024-06-06 15:59:17 |

Share: | | | | |


BIG BREAKING: ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಒಂದು ಒಂದು ವರ್ಷ ಕಳೆದಿದೆ. ಇದೇ ಹೊತ್ತಿನಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದೆ. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದಾರೆ.

ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಗೆ ಆಗಮಿಸಿದಂತ ಸಚಿವ ಬಿ.ನಾಗೇಂದ್ರ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ನೀಡಿದರು.



Leave a Comment: