ಮೊಬೈಲ್‌ ಬಳಕೆದಾರರೇ ಗಮನಿಸಿ : ನಿಮ್ಮ ಫೋನ್ ನಲ್ಲಿರುವ ಈ ಸಣ್ಣ ರಂಧ್ರದ ಉಪಯೋಗವೇನು ಗೊತ್ತಾ?

ಸುದ್ದಿಗಳು News

Posted by vidyamaana on 2024-07-25 13:38:46 |

Share: | | | | |


ಮೊಬೈಲ್‌ ಬಳಕೆದಾರರೇ ಗಮನಿಸಿ : ನಿಮ್ಮ ಫೋನ್ ನಲ್ಲಿರುವ ಈ ಸಣ್ಣ ರಂಧ್ರದ ಉಪಯೋಗವೇನು ಗೊತ್ತಾ?

      ನಾವೆಲ್ಲರೂ ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ಫೋನ್ಗಳನ್ನು ಬಳಸುತ್ತೇವೆ, ಇದು ನಮ್ಮ ಜೀವನದ ಪ್ರಮುಖ ಭಾಗವಾಗಿದೆ, ಆದರೆ ನಿಮ್ಮ ಸ್ಮಾರ್ಟ್ಫೋನ್ ಅಡಿಯಲ್ಲಿ ಸಣ್ಣ ರಂಧ್ರವನ್ನು ನೀವು ಎಂದಾದರೂ ಗಮನಿಸಿದ್ದೀರಾ, ಆದರೆ ಅದು ಏನು ಬಳಸುತ್ತದೆ ಎಂಬುದರ ಬಗ್ಗೆ ನೀವು ಯೋಚಿಸಿದ್ದೀರಾ, ಜನರು ಇದನ್ನು ಮೈಕ್ರೊಫೋನ್ ಎಂದು ಪರಿಗಣಿಸುತ್ತಾರೆ, ಇದನ್ನು ಮೈಕ್ರೊಫೋನ್ ಗ್ರಿಲ್ ಎಂದು ಕರೆಯಲಾಗುತ್ತದೆ, ಇದು ನಿರ್ದಿಷ್ಟವಾಗಿ ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಗಳನ್ನು ಒಳಗೊಂಡಿದೆ.ಶಬ್ದವನ್ನು ಕಡಿಮೆ ಮಾಡುವ ಮೂಲಕ ನಿಮ್ಮ ಫೋನ್ ಕರೆಗಳ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ, ಅದರ ಬಗ್ಗೆ ಸಂಪೂರ್ಣ ಮಾಹಿತಿಯ ಬಗ್ಗೆ ತಿಳಿದುಕೊಳ್ಳೋಣ

ಇದು ಹೇಗೆ ಕಾರ್ಯನಿರ್ವಹಿಸುತ್ತದೆ

ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ನಿಮ್ಮ ಫೋನ್ನ ಪ್ರಾಥಮಿಕ ಮೈಕ್ರೊಫೋನ್ನೊಂದಿಗೆ ಕಾರ್ಯನಿರ್ವಹಿಸುತ್ತದೆ, ಇದು ಸಾಮಾನ್ಯವಾಗಿ ಮುಂಭಾಗ ಅಥವಾ ಮೇಲ್ಭಾಗದಲ್ಲಿದೆ. ಕರೆ ಸಮಯದಲ್ಲಿ, ಮುಖ್ಯ ಮೈಕ್ರೊಫೋನ್ ನಿಮ್ಮ ಧ್ವನಿಯನ್ನು ಸೆರೆಹಿಡಿಯುತ್ತದೆ, ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಸುತ್ತಮುತ್ತಲಿನ ಶಬ್ದಗಳನ್ನು ತೆಗೆದುಕೊಳ್ಳುತ್ತದೆ.

ಮೈಕ್ರೊಫೋನ್ ಗ್ರಿಲ್ ನ ಪ್ರಾಮುಖ್ಯತೆ

ಮೈಕ್ರೊಫೋನ್ ಗ್ರಿಲ್ ಶಬ್ದವನ್ನು ತೆಗೆದುಹಾಕುವುದು ಅಥವಾ ತಿರುಚುವುದು ನಿಮ್ಮ ಕರೆಯ ಗುಣಮಟ್ಟದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. ಈ ಘಟಕವಿಲ್ಲದೆ, ಹಿನ್ನೆಲೆ ಶಬ್ದಗಳು ಹೆಚ್ಚು ಸ್ಪಷ್ಟವಾಗುತ್ತವೆ, ಸಂವಹನವನ್ನು ಕಷ್ಟಕರವಾಗಿಸುತ್ತದೆ.ಎಲ್ಲೆಲ್ಲೂ ಇಲ್ಲ

ಎಲ್ಲಾ ಸ್ಮಾರ್ಟ್ಫೋನ್ಗಳು ಶಬ್ದ-ರದ್ದುಗೊಳಿಸುವ ಮೈಕ್ರೊಫೋನ್ ಅನ್ನು ಹೊಂದಿಲ್ಲ ಎಂಬುದನ್ನು ಗಮನಿಸುವುದು ಮುಖ್ಯ. ನಿಮ್ಮ ಸಾಧನವು ಈ ವೈಶಿಷ್ಟ್ಯವನ್ನು ಹೊಂದಿದೆಯೇ ಎಂದು ನಿಮಗೆ ಖಚಿತವಿಲ್ಲದಿದ್ದರೆ, ನಿಮ್ಮ ಫೋನ್ನ ಕೈಪಿಡಿಯನ್ನು ನೀವು ನೋಡಿಕೊಳ್ಳಬಹುದು.

 Share: | | | | |


ಕಾರವಾರ ; ಜ್ಯೋತಿಷಿ ಸಲಹೆ, ಮೊದಲ ಬಾರಿಗೆ ಗೋಕರ್ಣದಲ್ಲಿ ಪಿತೃಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬ

Posted by Vidyamaana on 2023-10-07 18:44:40 |

Share: | | | | |


ಕಾರವಾರ ; ಜ್ಯೋತಿಷಿ ಸಲಹೆ,  ಮೊದಲ ಬಾರಿಗೆ ಗೋಕರ್ಣದಲ್ಲಿ ಪಿತೃಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬ

ಕಾರವಾರ: ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ಪಿತೃಕಾರ್ಯ ನೆರವೇರಿಸಲಾಗುತ್ತದೆ. ಆದರೆ ಮುಸ್ಲಿಂ ಕುಟುಂಬವೊಂದು ಗೋಕರ್ಣದಲ್ಲಿ ಪಿತೃಪಕ್ಷದ ಪರ್ವಕಾಲದಲ್ಲಿ ಪಿತೃಕಾರ್ಯ ನೆರವೇರಿಸಿದೆ. ಧಾರವಾಡ ಧಾನೇಶ್ವರಿ ನಗರದ ಶಂಸಾದ್ ಎಂಬುವರು ಜ್ಯೋತಿಷಿಯೊಬ್ಬರ ಸಲಹೆ ಮೇರೆಗೆ ನಾರಾಯಣ ಬಲಿ, ತ್ರಿಪಿಂಡಿ ಶ್ರಾದ್ಧ ಮತ್ತು ತಿಲಹವನವನ್ನು ಇಲ್ಲಿನ ಪಿತೃಶಾಲೆಯಲ್ಲಿ ಪೂರೈಸಿದರು.


ಹಾರ್ಟ್ ಅಟ್ಯಾಕ್ - ಹಾರ್ಟ್ ಫೈಲ್ಯೂರ್ - ಕಾರ್ಡಿಯಾಕ್ ಅರೆಸ್ಟ್: ಏನಿದೆ ವ್ಯತ್ಯಾಸ?


ಈ ಬಗ್ಗೆ ಪ್ರತಿಕ್ರಿಯಿಸಿರುವ ಶಂಸಾದ್​, ನಾವು ಮೊದಲಿನಿಂದಲೂ ಕುಂಡಲೀ, ಜಾತಕ, ಹಿಂದೂ ಸಂಪ್ರದಾಯದ ಮೇಲೆ ನಂಬಿಕೆ ಉಳ್ಳವರು. ನಮ್ಮ ತಂದೆ ಗದಗಿನ ವೀರನಾರಾಯಣ ದೇವಸ್ಥಾನದ ಹತ್ತಿರ ಬ್ರಾಹ್ಮಣ ಮತ್ತು ಲಿಂಗಾಯತ ಸಮುದಾಯದವರ ಜೊತೆಯಲ್ಲಿಯೇ ಬೆಳೆದವರು. ತಮ್ಮನಿಗೆ ಮದುವೆ ಸಂಬಂಧ ಸರಿಯಾಗಿ ಹೆಣ್ಣು ಸಿಗದೇ ಇದ್ದಾಗ ಜ್ಯೋತಿಷಿಯ ಬಳಿ ಹೋಗಿದ್ದೆವು. ಅವರು ತಿಳಿಸಿದಂತೆ ತಮ್ಮನ ಮದುವೆ, ಮಾನಸಿಕ ಶಾಂತಿ ಹಾಗೂ ಉದ್ಯೋಗದಲ್ಲಿ ಏಳ್ಗೆ ಸಿಗಲಿ ಎಂಬ ಉದ್ದೇಶದಿಂದ ಈ ಪಿತೃ ಕಾರ್ಯ ಮಾಡಿಸಿದ್ದೇವೆ ಎಂದು ತಿಳಿಸಿದ್ದಾರೆ.


ಜ್ಯೋತಿಷಿಗಳ ಮಾರ್ಗದರ್ಶನದಂತೆ ಗೋಕರ್ಣಕ್ಕೆ ಬಂದು ಕ್ಷೇತ್ರ ಪುರೋಹಿತರಾದ ನಾಗರಾಜ ಭಟ್ ಗುರ್ಲಿಂಗ್ ಹಾಗೂ ಸುಬ್ರಹಣ್ಯ ಚಿತ್ರಿಗೆಮಠ ಇವರ ನೇತೃತ್ವದಲ್ಲಿ ಎಲ್ಲಾ ಪೂಜಾ ಕಾರ್ಯ ನೆರವೇರಿಸಿದ್ದಾರೆ. ಗೋಕರ್ಣದಲ್ಲಿ ಕ್ರಿಶ್ಚಿಯನ್ ಸಮುದಾಯದವರು, ವಿದೇಶಿಗರು ಇಂತಹ ಪಿತೃ ಕಾರ್ಯ ನೆರವೇರಿಸಿದ ಅನೇಕ ಉದಾಹರಣೆಗಳಿವೆ. ಆದರೆ ಮುಸ್ಲಿಂ ಕುಟುಂಬವೊಂದು ಪಿತೃಕಾರ್ಯ ನೆರವೇರಿಸಿದ್ದು, ಇದೇ ಮೊದಲು ಎಂದು ಹೇಳಲಾಗಿದೆ.

ಲೋಕಸಭಾ ಚುನಾವಣೆ : ಪುತ್ತೂರು ವಿಧಾನಸಭಾ ಕ್ಷೇತ್ರದ ನಗರ ಕಾಂಗ್ರೆಸ್ ವ್ಯಾಪ್ತಿಯ ಚುನಾವಣಾ ಉಸ್ತುವಾರಿಗಳಾಗಿ ರಂಜಿತ್ ಬಂಗೇರ, ಮಹಮ್ಮದ್ ರಿಯಾಜ್, ರೋಶನ್ ರೈ ನೇಮಕ

Posted by Vidyamaana on 2024-04-11 04:38:26 |

Share: | | | | |


ಲೋಕಸಭಾ ಚುನಾವಣೆ : ಪುತ್ತೂರು ವಿಧಾನಸಭಾ ಕ್ಷೇತ್ರದ ನಗರ ಕಾಂಗ್ರೆಸ್ ವ್ಯಾಪ್ತಿಯ ಚುನಾವಣಾ ಉಸ್ತುವಾರಿಗಳಾಗಿ ರಂಜಿತ್ ಬಂಗೇರ, ಮಹಮ್ಮದ್ ರಿಯಾಜ್, ರೋಶನ್ ರೈ ನೇಮಕ

ಪುತ್ತೂರು :ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಲೋಕಸಭಾ ಚುನಾವಣೆ ಉಸ್ತುವಾರಿಗಳಾಗಿ ರಂಜಿತ್ ಬಂಗೇರ ಕೆ., ಮಹಮ್ಮದ್ ರಿಯಾಜ್, ರೋಶನ್ ರೈ ಅವರನ್ನು ನೇಮಕ ಮಾಡಲಾಗಿದೆ.

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Posted by Vidyamaana on 2023-05-03 11:57:19 |

Share: | | | | |


ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರ ಪರವಾಗಿ ಸಂಜಯ ನಗರ, ರೆಂಕೆದ ಗುತ್ತು ವಾರ್ಡ್‌ನಲ್ಲಿ ಮಹಿಳಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತ ಯಾಚಿಸಿದರು.

"ಬೆಳ್ತಂಗಡಿಯ ಸರ್ವಾಂಗೀಣ ಅಭಿವೃದ್ಧಿಗೆ ಈ ಬಾರಿಯ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಗೆ ನೀಡುವ ಮೂಲಕ ಅವರನ್ನು ಬಹುಮತದಿಂದ ಗೆಲ್ಲಿಸಬೇಕಾಗಿ ಕೇಳಿಕೊಳ್ಳುತ್ತೇನೆ.” ಎಂದು ಅಕ್ಬರ್ ಬೆಳ್ತಂಗಡಿ ಅವರ ಪತ್ನಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ನಗರ ವ್ಯಾಪ್ತಿಯ ಎಸ್‌ಡಿಪಿಐ ಪಕ್ಷದ ಮಹಿಳಾ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಛತ್ರಿ ಹಿಡಿದು ಬಸ್ ಚಾಲನೆ: ಚಾಲಕ ಮತ್ತು ನಿರ್ವಾಹಕ ಅಮಾನತು

Posted by Vidyamaana on 2024-05-24 21:16:57 |

Share: | | | | |


ಛತ್ರಿ ಹಿಡಿದು ಬಸ್ ಚಾಲನೆ: ಚಾಲಕ ಮತ್ತು ನಿರ್ವಾಹಕ ಅಮಾನತು

ಧಾರವಾಡ: ಮಳೆ ಸುರಿಯುವಾಗ ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ ಸ್ಟೀರಿಂಗ್‌ ಹಿಡಿದು ಬಸ್‌ ಚಲಾಯಿಸಿದ ಚಾಲಕ ಮತ್ತು ಬಸ್ಸಿನ ನಿರ್ವಾಹಕರನ್ನು ಅಮಾನತು ಮಾಡಲಾಗಿದೆ.

ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ ಸ್ಟೀರಿಂಗ್‌ ಹಿಡಿದು ಬಸ್‌ ಚಲಾಯಿಸಿದ ಮೊಬೈಲ್‌ನಲ್ಲಿ ವಿಡಿಯೊ ಮಾಡಿದ್ದ ಪ್ರಕರಣಕ್ಕೆ

ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಆದಿಲ್ !

Posted by Vidyamaana on 2024-08-29 15:00:45 |

Share: | | | | |


ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಆದಿಲ್ !

ತುಮಕೂರು: ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಯುವಕನೊರ್ವ ಚಾಕು (Attempt To murder) ಇರಿದಿದ್ದಾನೆ. ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದಲ್ಲಿ ಘಟನೆ ನಡೆದಿದೆ.

ಹನೀಷಾ (21) ಚಾಕುವಿನಿಂದ ಇರಿತಕ್ಕೊಳಗಾದ ಮಂಗಳಮುಖಿಯಾಗಿದ್ದಾರೆ. ಮಂಡ್ಯದ ಆದಿಲ್‌ (23) ಚಾಕು ಇರಿದ ಆರೋಪಿಯಾಗಿದ್ದಾನೆ. ಇವರಿಬ್ಬರು ಕಳೆದ ಆರು ತಿಂಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಹನೀಷಾ ಲಿಂಗತ್ವ ಅಲ್ಪಸಂಖ್ಯಾತರ ಕಾರ್ಯಕ್ರಮಗಳ ನಿಮಿತ್ತ ಪರ ಊರುಗಳಿಗೆ ಆಗಾಗ ಹೋಗುತ್ತಿದ್ದರು.

BREAKING : ಬೆಂಗಳೂರಲ್ಲಿ ನಾಯಿ ಮಾಂಸ ಮಾರಾಟ ಆರೋಪ : ಲ್ಯಾಬ್ ರಿಪೋರ್ಟ್‌ ಬಿಡುಗಡೆ ಮಾಡಿದ ಆಹಾರ ಇಲಾಖೆ

Posted by Vidyamaana on 2024-07-31 20:48:56 |

Share: | | | | |


BREAKING : ಬೆಂಗಳೂರಲ್ಲಿ ನಾಯಿ ಮಾಂಸ ಮಾರಾಟ ಆರೋಪ : ಲ್ಯಾಬ್ ರಿಪೋರ್ಟ್‌ ಬಿಡುಗಡೆ ಮಾಡಿದ ಆಹಾರ ಇಲಾಖೆ

ಬೆಂಗಳೂರು : ಕುರಿ ಮಾಂಸದ ಜೊತೆ ನಾಯಿ ಮಾಂಸ ಬೆರೆಸಿದ ಆರೋಪ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಲ್ಯಾಬ್ ರಿಪೋರ್ಟ್ ನಲ್ಲಿ ಮೇಕೆ ಮಾಂಸ ಅನ್ನೋದು ಇದೀಗ ದೃಢವಾಗಿದೆ. ಈ ಕುರಿತು ಆಹಾರ ಇಲಾಖೆಯು ಮಾಂಸದ ಸ್ಯಾಂಪಲ್ ಟೆಸ್ಟಿಂಗ್ ವರದಿಯನ್ನು ಪ್ರಕಟಿಸಿದೆ.

ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ನಾಯಿ ಮಾಂಸ ಸರಬರಾಜು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.ಈ ಹಿನ್ನೆಲೆಯಲ್ಲಿ ಮಾಂಸ ವಶಕ್ಕೆ ಪಡೆದು ಪರಿಶೀಲನೆ ಮಾಡಿದ ಆಹಾರ ಸುರಕ್ಷತಾ ಇಲಾಖೆಯು ಎಲ್ಲ ಬಾಕ್ಸ್‌ನಲ್ಲಿರುವುದು ಕುರಿ ಮಾಂಸ ಎಂದು ಪರೀಕ್ಷಾ ವರದಿ ನೀಡಿದೆ.

Recent News


Leave a Comment: