ಎಡಕುಮೇರಿಯಲ್ಲಿ ಮಣ್ಣು ಕುಸಿತ: ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ

ಸುದ್ದಿಗಳು News

Posted by vidyamaana on 2024-07-27 02:07:09 |

Share: | | | | |


ಎಡಕುಮೇರಿಯಲ್ಲಿ ಮಣ್ಣು ಕುಸಿತ: ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ

ಹಾಸನ, ಸಕಲೇಶಪುರ ಸೇರಿದಂತೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಹಾಗೂ ಎಡಕುಮೇರಿ ಭಾಗದಲ್ಲಿ ಸುರಿಯುತ್ತಿರುವ ಬಾರೀ ಮಳೆಗೆ ಎಡಕುಮೇರಿ ಸಮೀಪದ ಕಡಗರವಳ್ಳಿ ಎಂಬಲ್ಲಿ ರೈಲು ಹಳಿಯ ಕೆಳ ಭಾಗದಲ್ಲಿ ಮಣ್ಣು ಕುಸಿದು ಬಿದ್ದಿದೆ.ಇದರಿಂದಾಗಿ ರೈಲು ಸಂಚಾರ ಸ್ಥಗಿತಗೊಂಡಿದೆ.

ಸುಬ್ರಹ್ಮಣ್ಯ ರೋಡು ರೈಲು ನಿಲ್ದಾಣದಿಂದ ಮುಂದೆ ಎಡಕುಮೇರಿ ಮತ್ತು ಕಡಗರವಳ್ಳಿ ನಡುವೆ ಶುಕ್ರವಾರ ಘಟನೆ ನಡೆದಿದೆ.ಘಟನೆ ಬೆಳಕಿಗೆ ಬಂದ ತಕ್ಷಣ ರೈಲ್ವೆ ಇಲಾಖೆಯು ತಕ್ಷಣ ಈ ಭಾಗದಲ್ಲಿ ರೈಲು ಸಂಚಾರ ಸ್ಥಗಿತಗೊಳಿಸಿತು. ಹೀಗಾಗಿ ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತಗೊಂಡಿದೆ.

ರೈಲ್ವೆ ಇಲಾಖಾಧಿಕಾರಿಗಳು ಸ್ಥಳಕ್ಕೆ ತೆರಳಿದ್ದು ದುರಸ್ತಿ ಕಾರ್ಯ ನಡೆಸುತ್ತಿದ್ದಾರೆ. ಸಂಚಾರ ಸ್ಥಗಿತಗೊಂಡ ಕಾರಣ ಬೆಂಗಳೂರು-ಮಂಗಳೂರು, ಮಂಗಳೂರು- ಬೆಂಗಳೂರು ರೈಲು ಸಂಚಾರಕ್ಕೆ ತಡೆಯಾಯಿತು.

ಬೆಂಗಳೂರು- ಕಾರವಾರ ಪಂಚಗಂಗ ಎಕ್ಸ್‌ಪ್ರೆಸ್‌(16595), ಕಾರವಾರ-ಬೆಂಗಳೂರು ಪಂಚಗಂಗ ಎಕ್ಸ್‌ಪ್ರೆಸ್‌ (16596), ಮುರುಡೇಶ್ವರ-ಎಸ್.ಎಂ.ವಿ.ಟಿ ಬೆಂಗಳೂರು (16586),ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್‌ (16512) ರೈಲುಗಳು ಪಥ ಬದಲಿಸಿ ಚಲಿಸಲಿದೆ ಎಂದು ತಿಳಿದು ಬಂದಿದೆ.

 Share: | | | | |


ದಮಾಮ್‌ನಲ್ಲಿ ಬೆಂಕಿ ಅವಘಡ: ಮೂಡಬಿದಿರೆ ಕೋಟೆಬಾಗಿಲು ಮೂಲದ ಶೇಖ್‌ ಫಹದ್‌ ರವರ ಮಗು ಮೃತ್ಯು

Posted by Vidyamaana on 2024-05-26 20:18:32 |

Share: | | | | |


ದಮಾಮ್‌ನಲ್ಲಿ ಬೆಂಕಿ ಅವಘಡ: ಮೂಡಬಿದಿರೆ ಕೋಟೆಬಾಗಿಲು ಮೂಲದ ಶೇಖ್‌ ಫಹದ್‌ ರವರ ಮಗು ಮೃತ್ಯು

ದಮಾಮ್:‌ ಸೌದಿ ಅರೇಬಿಯಾದ ದಮಾಮ್‌ನಲ್ಲಿ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮೂಡಬಿದಿರೆ ಮಗುವೊಂದು ಮೃತಪಟ್ಟು, ಮಗುವಿನ ತಂದೆ ತಾಯಿ, ಅಣ್ಣ ICU ನಲ್ಲಿ ಚಿಕಿತ್ಸೆಯಲ್ಲಿದ್ದಾರೆ.

ಜನವರಿ 22ಕ್ಕೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಆಹ್ವಾನ ಸ್ವೀಕರಿಸಿದ ಮೋದಿ

Posted by Vidyamaana on 2023-10-25 20:44:19 |

Share: | | | | |


ಜನವರಿ 22ಕ್ಕೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಆಹ್ವಾನ ಸ್ವೀಕರಿಸಿದ ಮೋದಿ

ನವದೆಹಲಿ (ಅ.25): ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಜನವರಿ 22 ಕ್ಕೆ ನಡೆಯಲಿದೆ. ಈ ಬಗ್ಗೆ ಏಷ್ಯಾನೆಟ್‌ ನ್ಯೂಸ್‌ ಆಗಸ್ಟ್‌ನಲ್ಲಿ ಎಕ್ಸ್‌ಕ್ಲೂಸಿವ್‌ ಮಾಹಿತಿಯನ್ನು ನೀಡಿತ್ತು. ಬುಧವಾರ ಅಯೋಧ್ಯೆ ಶ್ರೀರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್‌ ನೀಡಿದ ಆಹ್ವಾನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವೀಕರಿಸಿದ್ದು 2024ರ ಜನವರಿ 22 ರಂದು ಮಂದಿರದ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ.ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಇರಲಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮನ ದೇಗುಲದ ಪ್ರತಿಷ್ಠಾಪನೆಯ ಸಮಯ ಸಮೀಪಿಸಿದೆ. ಮಾಹಿತಿ ಪ್ರಕಾರ, ರಾಮ ಜನ್ಮಭೂಮಿ ತೀರ್ಥ ಪ್ರದೇಶದ ನಿಯೋಗವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬುಧವಾರ ಭೇಟಿ ಮಾಡಿದೆ. ಈ ನಿಯೋಗದಲ್ಲಿ ಕರ್ನಾಟಕದ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಸ್ವಾಮಿ ಗೋವಿಂದದೇವ ಗಿರಿ ಮತ್ತು ನೃಪೇಂದ್ರ ಮಿಶ್ರಾ ಇದ್ದರು. ನಿಯೋಗ ಮತ್ತೊಮ್ಮೆ ಪ್ರಧಾನಿ ಮೋದಿಯವರನ್ನು ಅಯೋಧ್ಯೆಗೆ ಆಹ್ವಾನಿಸಿದ್ದು, ಅದನ್ನು ಪ್ರಧಾನಿ ಮೋದಿ ಸಂತೋಷದಿಂದ ಸ್ವೀಕರಿಸಿದ್ದಾರೆ. ನಿಗದಿತ ವೇಳಾಪಟ್ಟಿಯ ಪ್ರಕಾರ, 22 ಜನವರಿ 2024 ರಂದು ಅಯೋಧ್ಯೆಯ ಭಗವಾನ್ ಶ್ರೀರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಜನವರಿಯಲ್ಲಿ ನಡೆಯಲಿರುವ ಪ್ರಾಣ ಪ್ರತಿಷ್ಠೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ಮಂದಿರ ಟ್ರಸ್ಟ್‌ನ ಚಂಪಕ್ ರೈ ಹೇಳಿದ್ದಾರೆ. ಇವರಲ್ಲದೆ ನಾಡಿನ ಪ್ರಮುಖ ಋಷಿಮುನಿಗಳು, ಸಂತರು ಹಾಗೂ ಇತರ ಗಣ್ಯರನ್ನು ಆಹ್ವಾನಿಸಲಾಗುವುದು. ಮುಖ್ಯ ಕಾರ್ಯಕ್ರಮವನ್ನು ರಾಜಕೀಯ ರಹಿತವಾಗಿಡಲು ಪ್ರಯತ್ನಿಸಲಾಗುವುದು ಎಂದು ಚಂಪಕ್ ರೈ ಹೇಳಿದರು. ವಿವಿಧ ರಾಜಕೀಯ ಪಕ್ಷಗಳ ಅತಿಥಿಗಳನ್ನೂ ಆಹ್ವಾನಿಸಲಾಗುವುದು. ಕಾರ್ಯಕ್ರಮದಲ್ಲಿ ವೇದಿಕೆ ಇರುವುದಿಲ್ಲ, ಸಾರ್ವಜನಿಕ ಸಭೆಯೂ ಇರುವುದಿಲ್ಲ. ಸಮಾರಂಭಕ್ಕೆ 136 ಸನಾತನ ಸಂಪ್ರದಾಯಗಳ 25,000 ಕ್ಕೂ ಹೆಚ್ಚು ಹಿಂದೂ ಧಾರ್ಮಿಕ ಮುಖಂಡರನ್ನು ಆಹ್ವಾನಿಸಲು ಟ್ರಸ್ಟ್ ಯೋಜಿಸಿದೆ.ಜೈ ಸಿಯಾ ರಾಮ್! ಇಂದು ಭಾವನೆಗಳಿಂದ ತುಂಬಿರುವ ದಿನ. ಇತ್ತೀಚೆಗೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧಿಕಾರಿಗಳು ನನ್ನನ್ನು ಭೇಟಿಯಾಗಲು ನನ್ನ ನಿವಾಸಕ್ಕೆ ಬಂದಿದ್ದರು. ಶ್ರೀರಾಮ ಮಂದಿರದ ಶಂಕುಸ್ಥಾಪನೆಯ ಸಂದರ್ಭದಲ್ಲಿ ಅಯೋಧ್ಯೆಗೆ ಬರುವಂತೆ ಅವರು ನನ್ನನ್ನು ಆಹ್ವಾನಿಸಿದ್ದಾರೆ. ನಾನು ತುಂಬಾ ಆಶೀರ್ವಾದ ಪಡೆದಿದ್ದೇನೆ. ನನ್ನ ಜೀವಿತಾವಧಿಯಲ್ಲಿ ಈ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಅದೃಷ್ಟ ಎಂದು ಪ್ರಧಾನಿ ಮೋದಿ ಟ್ರಸ್ಟ್‌ ಅಧಿಕಾರಿಗಳ ಜೊತೆಗಿ ಫೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಕೆಮ್ಮಾರ ವುಮೆನ್ಸ್ ಶರೀಹತ್ ಕಾಲೇಜಿನಲ್ಲಿ ಮೀಲಾದ್ ಪ್ರಯುಕ್ತ ಹಮ್ಮಿಕೊಂಡ ಮನಾರ ಕಲಾ ಸಾಂಸ್ಕೃತಿಕ ಕಾರ್ಯಕ್ರಮ

Posted by Vidyamaana on 2023-10-17 20:10:42 |

Share: | | | | |


ಕೆಮ್ಮಾರ  ವುಮೆನ್ಸ್ ಶರೀಹತ್ ಕಾಲೇಜಿನಲ್ಲಿ ಮೀಲಾದ್ ಪ್ರಯುಕ್ತ ಹಮ್ಮಿಕೊಂಡ ಮನಾರ ಕಲಾ ಸಾಂಸ್ಕೃತಿಕ ಕಾರ್ಯಕ್ರಮ

ಉಪ್ಪಿನಂಗಡಿ; ಪ್ರತೀ ನಿಮಿಷವು ಜಗತ್ತು ಬದಲಾವಣೆಯತ್ತ ದಾಪುಗಾಲು ಹಾಕುತ್ತಿದ್ದು ಒಂದು ಸಮಾಜವು ಈ ಬದಲಾವಣೆಯನ್ನು ಅರ್ಥ ಮಾಡಿಕೊಂಡು ವಿನೂತನ ಆವಿಷ್ಕಾರಗಳ ಮೂಲಕ ಬದಲಾವಣೆಗೆ ಒಡ್ಡಿಕೊಂಡು ತಮ್ಮ ಸಮಾಜವನ್ನು ರಕ್ಷಿಸಿ ಕೊಳ್ಳಬೆಕಾದ ಅನಿವಾರ್ಯತೆ ನಮ್ಮ ಮುಂದಿದೆ ಎಂದು ಕೆಮ್ಮಾರ ಶಂಸುಲ್ ಉಲಮಾ ಎಜುಕೇಶನ್ ಟ್ರಸ್ಟ್ ಇದರ ಅಧ್ಯಕ್ಷ ಎಸ್ ಬಿ ದಾರಿಮಿ ಅಭಿಪ್ರಾಯ ಪಟ್ಟಿದ್ದಾರೆ.

ಅವರು  ಕೆಮ್ಮಾರ ಶಕ್ತಿ ನಗರದ ವುಮೆನ್ಸ್ ಶರೀಹತ್ ಕಾಲೇಜಿನ ವಿಧ್ಯಾರ್ಥಿನಿಯರಿಗಾಗಿ ಮೀಲಾದ್ ಪ್ರಯುಕ್ತ ಹಮ್ಮಿಕೊಂಡ "ಮನಾರ"ಕಲಾ ಸಾಂಸ್ಕೃತಿಕ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತಾನಾಡಿದರು. 

  ಹಿಂದಿನ ಕಾಲದಲ್ಲಿ ನಮ್ಮ ಮಹಿಳೆಯರು ಅಡಿಗೆ ಮನೆಗೆ ಸೀಮಿತವಾಗಿದ್ದರು.ಆದರೆ ಇಂದು ಸಮಸ್ತ ದ ಉಲಮಾಗಳ ಉತ್ತಮ ಕಾರ್ಯವೈಖರಿಯಿಂದಾಗಿ ಮುಸ್ಲಿಂ ಮಹಿಳೆಯರು ಕೂಡಾ ವೈಧ್ಯಕೀಯ ,ಶೈಕ್ಷಣಿಕ, ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಗೈದು ಪ್ರತಿಭಾವಂತರಾಗಿ ಮುಂದಿನ ತಲೆಮಾರನ್ನೂ ವಿದ್ಯಾವಂತರನ್ನಾಗಿಸುವಲ್ಲಿ ಸಫಲರಾಗುತ್ತಿದ್ದಾರೆ.ಇದು ಉತ್ತಮ ಬೆಳವಣಿಗೆಯಾಗಿದ್ದು,

ಮುಸ್ಲಿಮರು ಕಾಲದ ಕರೆಯನ್ನು ಸ್ವೀಕರಿಸುವುದಿಲ್ಲ ಎನ್ನುವವರಿಗೆ ಇದು ತಕ್ಕ ಉತ್ತರ ಕೂಡಾ ಆಗಿದೆ ಎಂದು ನುಡಿದರು.

ಕಾರ್ಯಕ್ರಮವನ್ನು ಪೆರಿಯಡ್ಕ ಖತೀಬರಾದ ಅಬ್ದುಲ್ ರಹಿಮಾನ್ ಪೈಝಿ ಉದ್ಗಾಟಿಸಿದರು.

ಟ್ರಸ್ಟಿ ಸದಸ್ಯರಾದ ಉಮರ್ ಹಾಜಿ ಕೋಡಿಯಾಡಿ,ಬಶೀರ್ ಹಾಜಿ ದಾರಂದಕುಕ್ಕು,ಹಸೈನಾರ್ ಹಾಜಿ ಕೊಯಿಲ,ರಶೀದ್ ಹಾಜಿ ಪರ್ಲಡ್ಕ,ಇಸಾಕ್  ಕೆಮ್ಮಾರ,ಅಬ್ದುಲ್ಲ ಉಸ್ತಾದ್ ಕೆಮ್ಮಾರ,ಇಬ್ರಾಹಿಂ ಬಡಿಲ, ಯುನಿಕ್ ಅಬ್ದುಲ್ ರಹಿಮಾನ್ ಮೊದಲಾದವರು ಉಪಸ್ಥಿತರಿದ್ದರು,ಕೆ ಎಂ ಎ ಕೊಡುಂಗೈ ಸ್ವಾಗತಿಸಿ, ಕೊನೆಗೆ ವಂದಿಸಿದರು.

ವಿಟ್ಲ : ಪತಿ ವಿದೇಶದಲ್ಲಿ..ಪತ್ನಿ, ಮಕ್ಕಳು ತವರಿಗೆ ಹೋಗಿದ್ದಾಗ ಮನೆಗೆ ನುಗ್ಗಿ ಚಿನ್ನಾಭರಣ, ನಗದು ದೋಚಿದ ಖದೀಮರು

Posted by Vidyamaana on 2024-08-06 19:50:09 |

Share: | | | | |


ವಿಟ್ಲ : ಪತಿ ವಿದೇಶದಲ್ಲಿ..ಪತ್ನಿ, ಮಕ್ಕಳು ತವರಿಗೆ ಹೋಗಿದ್ದಾಗ ಮನೆಗೆ ನುಗ್ಗಿ ಚಿನ್ನಾಭರಣ, ನಗದು ದೋಚಿದ ಖದೀಮರು

ವಿಟ್ಲ: ವಿಟ್ಲ ಸಾಲೆತ್ತೂರು ನಿವಾಸಿ ಜಗನ್ನಾಥ್ ರವರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ, ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳವುಗೈದಿದ್ದಾರೆ. ಜಗನ್ನಾಥ್‌ರವರು ಕೆಲಸದ ನಿಮಿತ್ತ ವಿದೇಶದಲ್ಲಿದ್ದು ಮನೆಯಲ್ಲಿ ಅವರ ಪತ್ನಿ ವಿಜಯ ಜಗನ್ನಾಥ್‌ ಹಾಗೂ ಇಬ್ಬರು ಮಕ್ಕಳು ಮಾತ್ರ ವಾಸ ಮಾಡುತ್ತಿದ್ದರು. ಆ.3ರಂದು ವಿಜಯ ತನ್ನ ಮಕ್ಕಳೊಂದಿಗೆ ಈಶ್ವರಮಂಗಲ ಪಂಚೋಡಿಯಲ್ಲಿರುವ ತಮ್ಮ ತವರು ಮನೆಗೆ ತೆರಳಿದ್ದು ಆ.4ರಂದು ವಾಪಾಸು ಹಿಂದಿರುಗಿ ಮನೆಗೆ ಬರುವ ಈ ವೇಳೆ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.

ದೀಪಾವಳಿ ಸೀರೆ ವಿತರಣಾ ಕಾರ್ಯಕ್ರಮ; ಕೊಂಬೆಟ್ಟು ಕ್ರೀಡಾಂಗಣ ವೀಕ್ಷಿಸಿದ ಶಾಸಕರು

Posted by Vidyamaana on 2023-10-19 16:36:35 |

Share: | | | | |


ದೀಪಾವಳಿ ಸೀರೆ ವಿತರಣಾ ಕಾರ್ಯಕ್ರಮ; ಕೊಂಬೆಟ್ಟು ಕ್ರೀಡಾಂಗಣ ವೀಕ್ಷಿಸಿದ ಶಾಸಕರು

ಪುತ್ತೂರು:ನ.13 ರಂದು ದೀಪಾವಳಿ ಪ್ರಯುಕ್ತ ನಡೆಯಲಿರುವ ಬೃಹತ್ ಸೀರೆ ವಿತರಣಾ ಕಾರ್ಯಕ್ರಮವು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು , ಸಮಾವೇಶ ನಡೆಯಲಿರುವ ಕೊಂಬೆಟ್ಟು ಕ್ರೀಡಾಂಗಣಕ್ಕೆ ಭೇಟಿ ನೀಡಿದ ಶಾಸಕರು ಸ್ಥಳ ವೀಕ್ಷಣೆ ಮಾಡಿದರು. ಸುಮಾರು 50 ಸಾವಿರಕ್ಕೂ‌ಮಿಕ್ಕಿ ಜನ ಸೇರುವ ನಿರೀಕ್ಷೆ ಇದ್ದು ಕೈಗೊಂಡಿರುವ ಸಿದ್ದತೆಗಳನ್ನು ಶಾಸಕರು ಪರಿಶೀಲನೆ ಮಾಡಿದರು.

ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ,ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್,ರೈ ಟ್ರಸ್ಟ್ ನ ಮುಖ್ಯಸ್ಥರಾದ ನಿಹಾಲ್ ಶೆಟ್ಟಿ, ನಿವೃತ್ತ ಶಿಕ್ಷಕ ದಯಾನಂದ ರೈ ಕೊರ್ಮಂಡ,ಎನ್ ಎಸ್ ಯು ಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ಯುವ ಕಾಂಗ್ರೆಸ್ ನ ಹನೀಫ್ ಪುಂಚತ್ತಾರ್, ಇಂಜಿನಿಯರ್ ಸಂತೋಷ್ ಶೆಟ್ಡಿ, ರವಿಪ್ರಸಾದ್ ಶೆಟ್ಟಿ ಬನ್ನೂರು, ಯೋಗೀಶ್ ಸಾಮಾನಿ, ಟ್ರಸ್ಟ್ ನ ಪ್ರಮುಖರಾದ ಕೃಷ್ಣಪ್ರಸಾದ್ ಭಟ್ ಬೊಳ್ಳಮೆ ,ದಾಮೋದರ್ ಕೋಡಿಂಬಾಡಿ ಮತ್ತಿತರರು ಉಪಸ್ಥಿತರಿದ್ದರು.

ತರೀಕೆರೆಯಲ್ಲಿ ಮೈತ್ರಿ ಅಭ್ಯರ್ಥಿಗಳದ ಡಾ. ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್. ಎಲ್. ಭೋಜೇಗೌಡರಪರ ಮತಯಾಚನೆ ಮತ್ತು ಪೂರ್ವಭಾವಿ ಸಭೆ

Posted by Vidyamaana on 2024-05-26 14:28:46 |

Share: | | | | |


ತರೀಕೆರೆಯಲ್ಲಿ ಮೈತ್ರಿ ಅಭ್ಯರ್ಥಿಗಳದ ಡಾ. ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್. ಎಲ್. ಭೋಜೇಗೌಡರಪರ ಮತಯಾಚನೆ ಮತ್ತು ಪೂರ್ವಭಾವಿ ಸಭೆ

ತರೀಕೆರೆ : ವಿಧಾನ ಪರಿಷತ್ ನೈರುತ್ಯ ಪದವಿಧರ ಮತ್ತು ನೈರುತ್ಯ ಶಿಕ್ಷಕರ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ತರೀಕೆರೆ ಮಂಡಲದ ವತಿಯಿಂದ ಇಲ್ಲಿನ ಅರಮನೆ ಹೋಟೆಲ್ ಸಭಾಂಗಣದಲ್ಲಿ ಬಿಜೆಪಿ ಕಾರ್ಯಕರ್ತರ ಮತ್ತು ಚುನಾವಣಾ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು. 

ಸಭೆಯಲ್ಲಿ ತರೀಕೆರೆ ಮಂಡಲದ ಬಿಜೆಪಿ ವಾರ್ಡ್ ಅಧ್ಯಕ್ಷರು , ಬೂತ್ ಅಧ್ಯಕ್ಷರು, ಮಹಾಶಕ್ತಿ ಕೇಂದ್ರದ ಪ್ರಮುಖರಿಗೆ ಚುನಾವಣೆಯ ರೂಪುರೇಷೆಗಳನ್ನು ತಿಳಿಸಿ ತಮ್ಮ ವ್ಯಾಪ್ತಿಯ ಮಹಾಶಕ್ತಿ ಕೇಂದ್ರಗಳಲ್ಲಿ ಪದವೀಧರ ಮತದಾರರನ್ನು ತಲುಪಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್. ಎಲ್. ಭೋಜೇಗೌಡರ ಪರವಾಗಿ ಮತಯಾಚಿಸಿ, ಗೆಲ್ಲಿಸುವಂತೆ ಮನವಿ ಮಾಡಲಾಯಿತು. 



Leave a Comment: