ಮಂಗಳೂರು: ವಿದ್ಯಾರ್ಥಿಗಳಿಗೆ ನೈಟ್ ಪಾರ್ಟಿ ಆಯೋಜನೆ, ಪಬ್ ಮಾಲೀಕರ ವಿರುದ್ಧ ಪೊಲೀಸ್ ಪ್ರಕರಣ

ಸುದ್ದಿಗಳು News

Posted by vidyamaana on 2024-07-27 02:11:24 |

Share: | | | | |


ಮಂಗಳೂರು: ವಿದ್ಯಾರ್ಥಿಗಳಿಗೆ ನೈಟ್ ಪಾರ್ಟಿ ಆಯೋಜನೆ, ಪಬ್ ಮಾಲೀಕರ ವಿರುದ್ಧ ಪೊಲೀಸ್ ಪ್ರಕರಣ

ಮಂಗಳೂರು : ವಿದ್ಯಾರ್ಥಿಗಳಿಗೆ ನೈಟ್ ಪಾರ್ಟಿ ಆಯೋಜನೆ ಮಾಡಿದ ಆರೋಪದ ಮೇರೆಗೆ ಮಂಗಳೂರಿನ ಪಬ್ ವಿರುದ್ಧ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮಂಗಳೂರು ನಗರದ ದೇರೆಬೈಲ್‌ ಕೊಂಚಾಡಿಯಲ್ಲಿರುವ ಬಾರ್‌ ಮತ್ತು ಪಬ್ ಒಂದರಲ್ಲಿ ಸ್ಟೂಡೆಂಟ್ಸ್‌ ವೆಡ್ನೆಸ್ ಡೇ ನೈಟ್‌ ಎಂಬ ಕಾರ್ಯಕ್ರಮವನ್ನು ಆಯೋಜಿಸಿ ವಿದ್ಯಾರ್ಥಿಗಳನ್ನು ಮುಕ್ತವಾಗಿ ಆಹ್ವಾನಿಸಿದ್ದಾರೆ.

ಸಂಜೆ 7ಗಂಟೆಯಿಂದ ಮಧ್ಯರಾತ್ರಿ ವರೆಗೆ ಈ ಕಾರ್ಯಕ್ರಮವನ್ನು ಆಯೋಜಿಸಲು ಸಮಯ ನಿಗದಿಪಡಿಸಲಾಗಿತ್ತು. 

ಕಾರ್ಯಕ್ರಮದಲ್ಲಿ ಆಹಾರ, ಮದ್ಯ, ಮ್ಯೂಸಿಕ್‌, ಮನೋರಂಜನಾ ಕಾರ್ಯಕ್ರಮಗಳಿರುವುದಾಗಿ ಪ್ರಚಾರ ಮಾಡಲಾಗಿತ್ತು. ಇಷ್ಟು ಮಾತ್ರವಲ್ಲದೆ ವಿದ್ಯಾರ್ಥಿಗಳು ಸ್ಕೂಲ್‌ ಐಡಿ (ಗುರುತು ಕಾರ್ಡ್‌) ತೋರಿಸಿದರೆ ಬಿಲ್‌ನಲ್ಲಿ ಶೇ.15ರಷ್ಟು ಕಡಿತದ ಆಫರ್‌ ನೀಡಲಾಗಿತ್ತು. ಈ ಇವೆಂಟ್‌ಗೆ ವಿದ್ಯಾರ್ಥಿನಿಯರು (ಹುಡುಗಿಯರು) ಬಂದರೆ ಅವರಿಗೆ ಫ್ರೀ ಶೂಟರ್ಸ್ (ಸ್ಪೆಷಲ್‌ ಆಫರ್‌) ನೀಡುವ ಭರವಸೆಯನ್ನು ನೀಡಲಾಗಿತ್ತು.

ಇದೀಗ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಮಂಗಳೂರು ಪೊಲೀಸರು ಕಾರ್ಯಕ್ರಮ ಆಯೋಜನೆ ಮಾಡಿದ್ದ ಪಬ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಅಬಕಾರಿ ಇಲಾಖೆ ಅಧಿಕಾರಿಗಳ ಮತ್ತು ಮಂಗಳೂರು ಪೊಲೀಸ್ ಅಧಿಕಾರಿಗಳು ಇದೀಗ ಪಬ್ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಮಾಹಿತಿ ನೀಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರವಾದ ಮಂಗಳೂರಿನ ದೇರೆಬೈಲ್‌ನಲ್ಲಿರುವ ಹೋಟೆಲ್ ಲಾಲ್‌ಬಾಗ್ ಇನ್ (ಲಿಕ್ಕರ್ ಲಾಂಜ್ ಬಾರ್) ಪಬ್‌ನ ಪ್ರಚಾರದ ಪೋಸ್ಟರ್ ಆಧಾರದ ಮೇಲೆ ದೂರು ದಾಖಲಿಸಿಕೊಳ್ಳಲಾಗಿದೆ.

ಇಲಾಖೆಗೆ ಈ ಸಂಬಂಧ ಸಾಕಷ್ಟು ಕರೆಗಳು ಬಂದಿದ್ದು, ಪಬ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಬಳಿಕ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಸೂಚಿಸಲಾಗಿದೆ. ಅಲ್ಲದೆ ಇದಕ್ಕೆ ಕಾರಣರಾದವರ ವಿರುದ್ಧ ಅಬಕಾರಿ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಮಾಲೀಕರಿಗೆ ನೋಟಿಸ್‌, ಎಪಿಪಿಗೆ ಪತ್ರ:

ವಿದ್ಯಾರ್ಥಿಗಳಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಬಾರ್‌ನ ಮಾಲೀಕರಿಗೆ ಕಾವೂರು ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದಾರೆ. ಇದು ಮಾತ್ರವಲ್ಲದೆ ಜಿಲ್ಲಾನ್ಯಾಯಾಲಯದ ಅಸಿಸ್ಟೆಂಟ್‌ ಪಬ್ಲಿಕ್‌ ಪ್ರಾಸಿಕ್ಯೂಟರ್‌(ಎಪಿಪಿ)ಗೆ ಪತ್ರ ಬರೆದು ಈ ಘಟನೆಗೆ ಯಾವ ಸೆಕ್ಷನ್‌ನಡಿ ಪ್ರಕರಣ ದಾಖಲಿಸಬಹುದೆಂದು ಪೊಲೀಸ್‌ ಮೂಲಗಳು ಸಲಹೆ ಕೇಳಿದ್ದಾರೆಂದು ತಿಳಿದು ಬಂದಿದೆ.

ಎಪಿಪಿ ಪ್ರತಿಕ್ರಿಯೆ ಬಳಿಕ ಸೂಕ್ತ ಕ್ರಮ

ವಿದ್ಯಾರ್ಥಿಗಳನ್ನು ಬಾರ್‌ಗೆ ಆಹ್ವಾನಿಸಿ ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ಹಾಕಿದ್ದಕ್ಕಾಗಿ ಅಬಕಾರಿ ಇಲಾಖೆ ಈಗಾಗಲೇ 7ಸಾವಿರ ರೂ. ದಂಡ ವಿಧಿಸಿದೆ. ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಜಿಲ್ಲಾನ್ಯಾಯಾಲಯದ ಅಸಿಸ್ಟೆಂಟ್‌ ಪಬ್ಲಿಕ್‌ ಪ್ರಾಸಿಕ್ಯೂಟರ್‌ಗೆ ಪತ್ರ ಬರೆದಿದ್ದು, ಈ ಘಟನೆಗೆ ಯಾವ ಸೆಕ್ಷನ್‌ನಡಿ ಪ್ರಕರಣ ದಾಖಲಿಸಬಹುದೆಂದು ಮಾಹಿತಿ ಕೇಳಿದ್ದೇವೆ. ಅವರ ಉತ್ತರ ಬಂದ ಕೂಡಲೇ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ತಿಳಿಸಿದ್ದಾರೆ.

ಕಾರ್ಯಕ್ರಮದ ಬಗ್ಗೆ ಜಾಹೀರಾತು ಪ್ರಚಾರ ಮಾಡಿದ್ದಾರೆ, ಆದರೆ ಕಾರ್ಯಕ್ರಮ ರದ್ದಾಗಿದೆ. ಹೀಗಿರುವಾಗ ಯಾವ ಸೆಕ್ಷನ್‌ನಡಿ ಪ್ರಕರಣ ದಾಖಲಿಸುವುದು ಎಂಬ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದೇವೆ. ಪಬ್ಲಿಕ್‌ ಪ್ರಾಸಿಕ್ಯೂಟರ್‌ ನಿರ್ದೇಶನ ಮೇಲೆ ಕ್ರಮಕೈಗೊಳ್ಳಲಾಗುವುದು, ಕಾನೂನಿನಲ್ಲಿಅವಕಾಶವಿದ್ದರೆ ಪರವಾನಗಿ ರದ್ದು ಮಾಡಲು ಪತ್ರ ಬರೆಯಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.

ಪಬ್ ವಿರುದ್ಧ ಅಬಕಾರಿ ಕಾಯ್ದೆ 1965 ರ ಸಂಬಂಧಿತ ಸೆಕ್ಷನ್ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

 Share: | | | | |


ಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ!!

Posted by Vidyamaana on 2024-02-29 12:28:33 |

Share: | | | | |


ಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ!!

ಪುತ್ತೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಅವರ ಮುಂದಿನ ನಡೆಯನ್ನು ಬಿಚ್ಚಿಟ್ಟಿದ್ದಾರೆ.

ಬಿಜೆಪಿಯ ಟಿಕೇಟ್ ಆಕಾಂಕ್ಷಿಯಾಗಿರುವ ಅರುಣ್ ಕುಮಾರ್ ಪುತ್ತಿಲ ಅವರು ವಿಧಾನಸಭಾ ಚುನಾವಣೆಯಲ್ಲಿ ಸಣ್ಣ ಮತಗಳ ಅಂತರದಿಂದ ಪರಾಭವ ಹೊಂದಿದರೂ, ರಾಜ್ಯ ರಾಜಕಾರಣವೇ ಹಿಂದಿರುಗಿ ನೋಡುವಂತೆ ಮಾಡಿದ್ದರು. ಇದೀಗ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೊಮ್ಮೆ ಪುತ್ತಿಲ ಸ್ಪರ್ಧೆಯ ವಿಚಾರ ಮುನ್ನೆಲೆಗೆ ಬಂದಿದೆ.

ಪತ್ರಿಕಾಗೋಷ್ಠಿಯಲ್ಲಿ ಪುತ್ತಿಲ ಪರಿವಾರದ ಪ್ರಸನ್ನ ಮಾರ್ತಾ, ಶ್ರೀಕೃಷ್ಣ ಉಪಾಧ್ಯಾಯ, ಉಮೇಶ್ ಗೌಡ ಕೋಡಿಬೈಲು, ಅನಿಲ್ ತೆಂಕಿಲ, ಮಹೇಂದ್ರ ವರ್ಮಾ ಮಾತನಾಡಿ, ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧಿಸಲಿದೆ ಎಂದು ತಿಳಿಸಿದರು.

ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರು ಸ್ಪರ್ಧಿಸುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಬೈಕ್ ಸ್ಕಿಡ್ ನಲ್ಲಿ ಗಂಭೀರ ಗಾಯಗೊಂಡಿದ್ದ ಪ್ರಸಾದ್ - ಚಿಕಿತ್ಸೆ ಫಲಕಾರಿಯಾಗದೆ ನಿಧನ

Posted by Vidyamaana on 2024-03-06 16:35:52 |

Share: | | | | |


ಬೈಕ್ ಸ್ಕಿಡ್ ನಲ್ಲಿ ಗಂಭೀರ   ಗಾಯಗೊಂಡಿದ್ದ ಪ್ರಸಾದ್ - ಚಿಕಿತ್ಸೆ ಫಲಕಾರಿಯಾಗದೆ ನಿಧನ

ಪುತ್ತೂರು : ಪರ್ಲಡ್ಕ ಬೈಪಾಸ್ ಬಳಿ ಫೆ.29 ರಂದು ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಮೆಕ್ಯಾನಿಕ್ ಶಾಂತಿಗೋಡಿನ ಯುವಕ ಪ್ರಸಾದ್ ಚಿಕಿತ್ಸೆ ಫಲಕಾರಿಯಾಗದೆ ಮಾ 06 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಶಾಂತಿಗೋಡು ಗ್ರಾಮದ ಬೀರ್ಮಕಜೆ ನಿವಾಸಿ ಪುತ್ತೂರು ಬೈಪಾಸ್‌ ರಸ್ತೆಯ ಗ್ಯಾರೆಜೊಂದರಲ್ಲಿ ಮೆಕಾನಿಕ್ ಆಗಿರುವ ಪ್ರಸಾದ್ (27) ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದರು.

ಅದು ಪ್ರೀತಿ, ಕಾಮವಲ್ಲ : ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಹೈಕೋರ್ಟ್ ಜಾಮೀನು!

Posted by Vidyamaana on 2024-01-15 09:21:03 |

Share: | | | | |


ಅದು ಪ್ರೀತಿ, ಕಾಮವಲ್ಲ : ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಹೈಕೋರ್ಟ್ ಜಾಮೀನು!

ಮುಂಬೈ : 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿದ್ದ 26 ವರ್ಷದ ವ್ಯಕ್ತಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ.ಅಮರಾವತಿ ನಿವಾಸಿಯಾಗಿರುವ ಆರೋಪಿ ಮೂರು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಅವನನ್ನು ಜೈಲಿಗೆ ಹಾಕಲಾಯಿತು.ಲೈಂಗಿಕ ಕಿರುಕುಳದ ಯಾವುದೇ ದೂರು ಇಲ್ಲದೆ ಅವಳು ಆ ವ್ಯಕ್ತಿಯೊಂದಿಗೆ ಹಲವಾರು ಸ್ಥಳಗಳಲ್ಲಿ ವಾಸಿಸಿದ್ದಾಳೆ ಎಂದು ನ್ಯಾಯಾಲಯ ಗಮನಿಸಿದೆ.


ಬಾಲಕಿ ತನ್ನ ಹೇಳಿಕೆಯನ್ನು ಅಧಿಕಾರಿಗೆ ನೀಡಿದ್ದಾಳೆ, ಇದು ಬಾಲಕಿ ಪುಸ್ತಕ ಖರೀದಿಸುವ ನೆಪದಲ್ಲಿ ಆಗಸ್ಟ್ 23, 2020 ರಂದು ಮನೆಯಿಂದ ಹೊರಟು ಸ್ವಯಂಪ್ರೇರಿತವಾಗಿ ಆರೋಪಿಯೊಂದಿಗೆ ವಾಸಿಸಿದ್ದಾಳೆ ಎಂದು ತೋರಿಸುತ್ತದೆ ಎಂದು ನ್ಯಾಯಮೂರ್ತಿ ಊರ್ಮಿಳಾ ಜೋಶಿ-ಫಾಲ್ಕೆ ಗಮನಿಸಿದರು.


ನಾಗ್ಪುರ ಪೀಠದ ನ್ಯಾಯಮೂರ್ತಿ ಜೋಶಿ-ಫಾಲ್ಕೆ ಅವರು ಅರ್ಜಿದಾರ ಆರೋಪಿಗಳೊಂದಿಗೆ ಇದ್ದರು ಮತ್ತು ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದರು. ಲೈಂಗಿಕ ಸಂಬಂಧದ ಘಟನೆಯು ಇಬ್ಬರ ನಡುವಿನ ಆಕರ್ಷಣೆಯಿಂದಾಗಿ ಎಂದು ತೋರುತ್ತದೆ, ಮತ್ತು ಅರ್ಜಿದಾರರು ಕಾಮದಿಂದ ಸಂತ್ರಸ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೇಳಲಾಗುವುದಿಲ್ಲ ನ್ಯಾಯಪೀಠ ಅಭಿಪ್ರಾಯಪಟ್ಟಿದೆ

ಸಬ್ ರಿಜಿಸ್ಟ್ರಾರ್ ಕಚೇರಿಯಿಂದ ಆಧಾರ್ ಸೋರಿಕೆ ಪ್ರಕರಣ

Posted by Vidyamaana on 2023-10-29 17:18:52 |

Share: | | | | |


ಸಬ್ ರಿಜಿಸ್ಟ್ರಾರ್ ಕಚೇರಿಯಿಂದ ಆಧಾರ್ ಸೋರಿಕೆ ಪ್ರಕರಣ

ಮಂಗಳೂರು, ಅ.29: ಸಬ್ ರಿಜಿಸ್ಟ್ರಾರ್ ಕಚೇರಿಯಿಂದ ಆಧಾರ್ ಕಾರ್ಡ್ ಮತ್ತು ಬೆರಳಚ್ಚು ನಕಲಿ ಮಾಡಿಸಿ ವಂಚನೆಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮೂವರು ಬಿಹಾರ ಮೂಲದ ಆರೋಪಿಗಳನ್ನು ಬಂಧಿಸಿದ್ದಾರೆ.‌


ದೀಪಕ್ ಕುಮಾರ್ ಹೆಂಬ್ರಮ್ (33), ವಿವೇಕ್ ಕುಮಾರ್ ಬಿಶ್ವಾಸ್ (24) ಮತ್ತು ಮದನ್ ಕುಮಾರ್ (24) ಬಂಧಿತರು. ಇವರನ್ನು ಬಿಹಾರ ರಾಜ್ಯದ ಪೂರ್ನಿಯಾ ಜಿಲ್ಲೆಯಿಂದ ವಶಕ್ಕೆ ಪಡೆಯಲಾಗಿದೆ. ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಸೂಚನೆಯಂತೆ ಸೈಬರ್ ಅಪರಾಧ ಬಗ್ಗೆ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ತಾಂತ್ರಿಕ ಸಾಕ್ಷ್ಯ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬಿಹಾರದಲ್ಲಿ ಅಡಗಿಕೊಂಡಿದ್ದ ಮೂವರನ್ನು ಬಂಧಿಸಿ ಕರೆತಂದಿದ್ದಾರೆ.‌


ಆರೋಪಿಗಳಿಗೆ ಸಂಬಂಧಪಟ್ಟ ಹತ್ತು ಬ್ಯಾಂಕ್ ಖಾತೆಗಳಿಂದ 3,60,242 ರುಪಾಯಿಗಳನ್ನು ಸೀಜ್ ಮಾಡಲಾಗಿದೆ. ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದು ತಾಂತ್ರಿಕ ಸಾಕ್ಷ್ಯಗಳ ತನಿಖೆ ನಡೆಸಲಾಗುತ್ತಿದೆ. ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿ ಒಂದು ಸಾವಿರಕ್ಕೂ ಹೆಚ್ಚು ಪಿಡಿಎಫ್ ದಾಖಲಾತಿ ಪ್ರತಿಗಳನ್ನು ಹಾಗೂ ಆಂಧ್ರಪ್ರದೇಶ ಸೇರಿ ಇತರ ರಾಜ್ಯಗಳಿಗೆ ಸಂಬಂಧಪಟ್ಟ 300 ಕ್ಕೂ ಹೆಚ್ಚು ಪಿಡಿಎಫ್ ದಾಖಲಾತಿಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಮಂಗಳೂರಿನಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಕಾವೇರಿ 2.0 ವೆಬ್ ಸೈಟ್ ನಿಂದ ಹ್ಯಾಕ್ ಮಾಡಿ, ಗ್ರಾಹಕರ ಆಧಾರ್ ಮಾಹಿತಿಗಳನ್ನು ಸಂಗ್ರಹಿಸಿ ಅವರ ಬ್ಯಾಂಕ್ ಖಾತೆಗಳಿಂದ ಹಣವನ್ನು ಅಕ್ರಮವಾಗಿ ಪಡೆದುಕೊಂಡಿದ್ದರು.


ಈ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ 15ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದ್ದವು. ವಿಶೇಷ ತನಿಖೆಗಾಗಿ ಸಾರ್ವಜನಿಕರ ಒತ್ತಾಯ ಕೇಳಿಬರುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದರು. ಇತ್ತೀಚೆಗೆ ಎಎಸ್ಐ ಒಬ್ಬರ ಖಾತೆಯಿಂದಲೂ ಸಬ್ ರಿಜಿಸ್ಟ್ರಾರ್ ಕಚೇರಿಯಿಂದಲೇ ಆಧಾರ್ ಮಾಹಿತಿ ಸೋರಿಕೆಯಾಗಿ ಹಣ ಕಳೆದುಹೋಗಿತ್ತು. ಇದೇ ರೀತಿಯ ಅಕ್ರಮ ಬೆಂಗಳೂರು, ಹೈದರಾಬಾದ್ ಸೇರಿದಂತೆ ಹಲವು ಕಡೆ ಆಗಿದ್ದು ಪ್ರಕರಣ ದಾಖಲಾಗಿತ್ತು.

ಕಡಬ: ಸರಕಾರಿ ಶಾಲೆಯ ಮೇಲ್ಟಾವಣಿ ಕುಸಿತ – ನಾಲ್ವರು ವಿದ್ಯಾರ್ಥಿಗಳಿಗೆ ಗಾಯ - ತಪ್ಪಿದ ಭಾರಿ ಅನಾಹುತ

Posted by Vidyamaana on 2024-08-27 15:39:23 |

Share: | | | | |


ಕಡಬ: ಸರಕಾರಿ ಶಾಲೆಯ ಮೇಲ್ಟಾವಣಿ  ಕುಸಿತ – ನಾಲ್ವರು ವಿದ್ಯಾರ್ಥಿಗಳಿಗೆ ಗಾಯ -  ತಪ್ಪಿದ ಭಾರಿ ಅನಾಹುತ

ಕಡಬ, ಆ.27. ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಬಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಮಧ್ಯಾಹ್ನ ಕುಂತೂರಿನಲ್ಲಿ ನಡೆದಿದೆ.

ನಮ್ಮೂರಿನ ನಮ್ಮ ಅಭ್ಯರ್ಥಿ -ಇಂದು ಸಂಜೆ ತವರೂರಲ್ಲಿ ಅಶೋಕ್ ರೈ ಭರ್ಜರಿ ಪ್ರಚಾರಕ್ಕೆ ಸಿದ್ಧತೆ

Posted by Vidyamaana on 2023-05-04 10:01:41 |

Share: | | | | |


ನಮ್ಮೂರಿನ ನಮ್ಮ ಅಭ್ಯರ್ಥಿ -ಇಂದು ಸಂಜೆ ತವರೂರಲ್ಲಿ ಅಶೋಕ್ ರೈ ಭರ್ಜರಿ ಪ್ರಚಾರಕ್ಕೆ ಸಿದ್ಧತೆ

ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಶೋಕ್ ಕುಮಾರ್ ರೈ ಅವರ ತವರೂರು ಕೋಡಿಂಬಾಡಿ, ಬೆಳ್ಳಾಪ್ಪಾಡಿಯಲ್ಲಿ ಭರ್ಜರಿ ಪ್ರಚಾರಕ್ಕೆ ಸಿದ್ಧತೆ ನಡೆಯುತ್ತಿದೆ.

ಕೋಡಿಂಬಾಡಿ ಮತ್ತು ಬೆಳ್ಳಿಪ್ಪಾಡಿ ಗ್ರಾಮ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಶೋಕ್ ಕುಮಾರ್ ರೈ ಅವರ ಹಿತೈಷಿಗಳು ಈ ಕಾರ್ಯಕ್ರಮ ಆಯೋಜಿಸಿದ್ದಾರೆ.

ಕೋಡಿಂಬಾಡಿ ಹೋಟೆಲ್ ತುಳುನಾಡ್ ಹತ್ತಿರ ಮೇ ೪ರಂದು ಸಂಜೆ ೬ರಿಂದ ಪ್ರಚಾರ ಸಭೆ ನಡೆಯಲಿದೆ. ಅಶೋಕ್ ಕುಮಾರ್ ರೈ ಅವರ ಮನೆಯಿರುವ ಕೋಡಿಂಬಾಡಿ ಪ್ರದೇಶದಲ್ಲಿ ಈ ಸಭೆ ಆಯೋಜನೆಯಾಗಿರುವುದರಿಂದ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.



Leave a Comment: