ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

ಸುದ್ದಿಗಳು News

Posted by vidyamaana on 2024-07-24 22:11:50 |

Share: | | | | |


ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

‌ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್ ಯು.ಆರ್. ಗಿರೀಶ್ ಮಳಲಿ ಹಾಗೂ ಶಿವಶಂಕರ್ ನೆರವಾಗಿದ್ದರು

ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಂದ ಪತ್ರಕರ್ತರ ಮಾಹಿತಿ ಪಡೆದು ಕಚೇರಿಯಲ್ಲಿ ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಜಿಲ್ಲಾಧಿಕಾರಿಯವರಿಗೆ ಪತ್ರಕರ್ತರ ಪರಿಚಯ ಮಾಡಿಕೊಟ್ಟರು.


ಬಳಿಕ ಮಾತಾಡಿದ ಜಿಲ್ಲಾಧಿಕಾರಿ ಅವರು, ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ. ಮುಂದೆಯೂ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ, ಏನಾದರೂ ಅಗತ್ಯ ನೆರವು ಬೇಕಾದಲ್ಲಿ ಜಿಲ್ಲಾಡಳಿತ ನಿಮ್ಮ ಜೊತೆಗಿದೆ. ನಿಮ್ಮಂತಹ ಉತ್ಸಾಹಿ ತರುಣರ ಅವಶ್ಯಕತೆ ಸಮಾಜಕ್ಕೆ ಇದೆ ಎಂದು ಬೆನ್ನುತಟ್ಟಿದರು. ಅಲ್ಲದೇ ಶಿರೂರು ಮತ್ತು ಉಳುವರೆ ಗ್ರಾಮದ ಸದ್ಯದ ಸ್ಥಿತಿಗತಿಯ ಬಗ್ಗೆ ಪತ್ರಕರ್ತರಿಂದ ಮಾಹಿತಿ ಪಡೆದರು

 Share: | | | | |


ಯು ಕೆ ಎಲೆಕ್ಷನ್ ನಲ್ಲಿ ಹೀನಾಯ ಸೋಲು; ರಿಶಿ ಸುನಕ್ ಫಸ್ಟ್ ರಿಯಾಕ್ಷನ್

Posted by Vidyamaana on 2024-07-05 12:01:03 |

Share: | | | | |


ಯು ಕೆ ಎಲೆಕ್ಷನ್ ನಲ್ಲಿ ಹೀನಾಯ ಸೋಲು; ರಿಶಿ ಸುನಕ್ ಫಸ್ಟ್ ರಿಯಾಕ್ಷನ್

ಲಂಡನ್ : ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ(UK Election) ಫಲಿತಾಂಶ ಹೊರಬಿದ್ದಿದ್ದು, ಬರೋಬ್ಬರಿ 14ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್‌ ಪಕ್ಷ 360 ಸ್ಥಾನಗಳನ್ನು ಗಳಿಸಿ ಮ್ಯಾಜಿಕ್‌ ನಂಬರ್‌ 320 ಅನ್ನು ದಾಟುವ ಮೂಲಕ ಸರ್ಕಾರ ರಚನೆಗೆ ಮುಂದಾಗಿದೆ.

ಹಾಲಿ ಪ್ರಧಾನಿ ರಿಷಿ ಸುನಕ್‌(Rishi Sunak) ಅವರ ಪಕ್ಷ ಕನ್ಸರ್ವೇಟಿವ್‌ ಪಕ್ಷ ಭಾರೀ ಹಿನ್ನಡೆ ಅನುಭವಿಸಿದ್ದು, ಲೇಬರ್‌ ಪಕ್ಷದ ಕೀರ್‌ ಸ್ಟಾರ್ಮರ್‌(Keir Starmer) ಅವರಿಗೆ ಪ್ರಧಾನಿ ಗಿಟ್ಟಿದೆ. ಇನ್ನು


ಫಲಿತಾಂಶ ಹೊರ ಬೀಳುತ್ತಿದ್ದಂತೆ ರಿಶಿ ಸುನಕ್‌ ಪ್ರತಿಕ್ರಿಯಿಸಿದ್ದು, ಈ ಸೋಲಿನ ಜವಾಬ್ದಾರಿಯನ್ನು ತಾವು ಹೊತ್ತುಕೊಳ್ಳುವುದಾಗಿ ಹೇಳಿದ್ದಾರೆ. ಅಲ್ಲದೇ ಲೇಬರ್‌ ಪಕ್ಷದ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲೇಬರ್ ಪಕ್ಷವು ಈ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದಿದೆ ಮತ್ತು ಅವರ ವಿಜಯಕ್ಕಾಗಿ ಅಭಿನಂದಿಸಲು ನಾನು ಸರ್ ಕೀರ್ ಸ್ಟಾರ್ಮರ್‌ಗೆ ಕರೆ ಮಾಡಿದ್ದೇನೆ. ಇಂದು, ಅಧಿಕಾರವು ಶಾಂತಿಯುತವಾಗಿ ಮತ್ತು ಕ್ರಮಬದ್ಧವಾಗಿ ಅಧಿಕಾರ ಹಸ್ತಾಂತರಗೊಂಡಿದೆ. ಎಲ್ಲಾ ಕಡೆಯಿಂದಲೂ ಸದ್ಭಾವನೆ ಇರುತ್ತದೆ. ಇದು ನಮ್ಮ ದೇಶದ ಸ್ಥಿರತೆ ಮತ್ತು ಭವಿಷ್ಯದ ಬಗ್ಗೆ ನಮಗೆಲ್ಲರಿಗೂ ವಿಶ್ವಾಸವನ್ನು ನೀಡುವ ವಿಷಯವಾಗಿದೆ ಎಂದು ಹೇಳಿದ್ದಾರೆ.

ಸರಕಾರಿ ಹುದ್ದೆಗಳ ಪರೀಕ್ಷೆಗೆ ತರಬೇತಿ ಆರಂಭ

Posted by Vidyamaana on 2023-07-29 23:32:30 |

Share: | | | | |


ಸರಕಾರಿ ಹುದ್ದೆಗಳ ಪರೀಕ್ಷೆಗೆ ತರಬೇತಿ ಆರಂಭ

ಪುತ್ತೂರು: ಇಲ್ಲಿನ IRCMD ಸ್ಪರ್ಧಾತ್ಮಕ ತರಬೇತಿ ಸಂಸ್ಥೆಯಿಂದ ಮುಂಬರುವ ಸರಕಾರಿ ಹುದ್ದೆಗಳಿಗೆ ತರಬೇತಿ ಆರಂಭಗೊಂಡಿದೆ.

ಕೆ.ಡಿ. ಸಿಂಧೆ ವಿಜಯಪುರ ಇವರ ಸಾರಥ್ಯದಲ್ಲಿ FDA, SDA, PSI, PC, PDO ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಯಲಿದೆ. 4 ತಿಂಗಳು ನಡೆಯುವ ಈ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಕೇವಲ 3500 ರೂ. ಶುಲ್ಕ ನಿಗದಿ ಪಡಿಸಲಾಗಿದೆ.

250ಕ್ಕೂ ಅಧಿಕ ಗಂಟೆಗಳ ಪೂರ್ವಭಾವಿ ಪರೀಕ್ಷೆಯ ತೀವ್ರ ಕಲಿಕಾ ತರಗತಿ, ವಾರದಲ್ಲಿ ಒಂದು ಬಾರಿ ಅಧಿಕಾರಿಗಳಿಂದ ಸ್ಪರ್ಧಾರ್ಥಿಗಳ ಜೊತೆ ಚರ್ಚೆ, ಅತೀ ಕಡಿಮೆ ಶುಲ್ಕದಲ್ಲಿ ಅತ್ಯುನ್ನತ ತರಬೇತಿ, 15 ದಿನಗಳಿಗೊಮ್ಮೆ ಮಾದರಿ ಪರೀಕ್ಷೆ, ಸಾಮಾನ್ಯ ಜ್ಞಾನ, ಸಾಮಾನ್ಯ ಕನ್ನಡ / ಇಂಗ್ಲೀಷ್ ಅಣುಕು ಪರೀಕ್ಷೆಗಳು, ಸುಸಜ್ಜತವಾದ ತರಗತಿ ಕೋಣೆಗಳನ್ನು IRCMD ಸಂಸ್ಥೆ ಹೊಂದಿದೆ.

PGCET, AMCAT ಮತ್ತು ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಯಲ್ಲಿ ವರ್ಷದಲ್ಲಿ 200ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಜೀವನ ರೂಪಿಸಿ ಕೊಡುವಲ್ಲಿ ಯಶಸ್ವಿಯಾಗಿರುವ ಹೆಸರಾಂತ ಸಂಸ್ಥೆಯಾಗಿರುವ IRCMD, ಅನುಭವಿ ಮತ್ತು ತಜ್ಞ ವ್ಯಕ್ತಿಗಳಿಂದ ಬೋಧನೆಯ ಕೆಲಸ ನಿರ್ವಹಿಸುತ್ತಿದೆ. ಇದೀಗ ಮುಂಬರುವ ಸರಕಾರಿ ಹುದ್ದೆಗಳಿಗೆ ತರಬೇತಿ ನೀಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ವಿವಿಧ ಹುದ್ದೆಗಳಿಗೆ ತಯಾರಿಗೊಳಿಸುವ ನಿಟ್ಟಿನಲ್ಲಿ IRCMD ಸಂಸ್ಥೆ ಯೋಜನೆ ರೂಪಿಸಿದೆ. ಈ ತರಬೇತಿಯ ಸದುಪಯೋಗ ಪಡೆಯಲಿಚ್ಚಿಸುವವರು 9632320477, 9945988118 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಬಿ.ಸಿ.ರೋಡ್‌ ತಲಪಾಡಿ ಬಳಿ ಕಾರು ಅಪಘಾತ:ನವವಿವಾಹಿತೆ ಸಹಿತ ಇಬ್ಬರು ಸ್ಥಳದಲ್ಲೇ ಮೃತ್ಯು

Posted by Vidyamaana on 2024-09-07 15:20:35 |

Share: | | | | |


ಬಿ.ಸಿ.ರೋಡ್‌ ತಲಪಾಡಿ ಬಳಿ ಕಾರು ಅಪಘಾತ:ನವವಿವಾಹಿತೆ ಸಹಿತ ಇಬ್ಬರು ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ನವ ದಂಪತಿಗಳು ಇಬ್ಬರು ಪ್ರಯಾಣಿಸುತ್ತಿದ್ದ ಕಾರು ಬೀಕರ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ.

ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ

ಜು.26 – ನಾಳೆಯಿಂದ ಎಂ ಸಂಜೀವ ಶೆಟ್ಟಿಯಲ್ಲಿ ವಸ್ತ್ರ ಮೇಳ

Posted by Vidyamaana on 2023-07-25 15:47:47 |

Share: | | | | |


ಜು.26 – ನಾಳೆಯಿಂದ ಎಂ ಸಂಜೀವ ಶೆಟ್ಟಿಯಲ್ಲಿ ವಸ್ತ್ರ ಮೇಳ


ಪುತ್ತೂರು: ಮನೆಮಾತಾಗಿರುವ ಎಂ.ಸಂಜೀವ ಶೆಟ್ಟಿ ಜವುಳಿ ಮಳಿಗೆಯಲ್ಲಿ ಜುಲೈ 26ರಿಂದ ಆಟಿ ಸೇಲ್ ಆರಂಭಗೊಳ್ಳಲಿದೆ.

ಪುತ್ತೂರಿನವರಷ್ಟೇ ಅಲ್ಲ, ಹತ್ತೂರಿನ ಮಂದಿಯೂ ಮೆಚ್ಚುವ ಹೆಸರಾಂತ ವಸ್ತ್ರ ಮಳಿಗೆ ಪುತ್ತೂರಿನ ಎಂ.ಸಂಜೀವ ಶೆಟ್ಟಿ. ಹಾಗಾಗಿ ಎಂ. ಸಂಜೀವ ಶೆಟ್ಟಿಯ ಆಟಿ ಸೇಲ್’ಗೆ ಗ್ರಾಹಕರು ಕಾತರದಿಂದ ಕಾಯುತ್ತಿದ್ದು, ಇದೀಗ ಆ ದಿನ ಹತ್ತಿರ ಬಂದಿದೆ.

ಪ್ರಖ್ಯಾತ ಮಿಲ್’ಗಳಲ್ಲಿ ತಯಾರಾದ ವಸ್ತ್ರಗಳನ್ನು ನೇರವಾಗಿ ಖರೀದಿಸುವುದೇ ಎಂ. ಸಂಜೀವ ಶೆಟ್ಟಿಯ ವಿಶೇಷತೆ. ಹಾಗಾಗಿ ಕಡಿಮೆ ಲಾಭಾಂಶವನ್ನಿಟ್ಟುಕೊಂಡು, ಅತೀ ಕಡಿಮೆ ದರದಲ್ಲಿ ಗ್ರಾಹಕರ ಕೈಗೆ ನೀಡಲಾಗುತ್ತದೆ. ಸಾರಿ ಸೇರಿದಂತೆ ಇನ್ನಿತರ ಜವುಗಳಿಗಳು ಆಟಿ ಸೇಲ್’ನಲ್ಲಿ ಮಾರಾಟಗೊಳ್ಳಲಿದೆ.

ಎಂ. ಸಂಜೀವ ಶೆಟ್ಟಿಯ ಆಟಿ ಸೇಲ್’ನಲ್ಲಿ ಪುತ್ತೂರು, ಸುಳ್ಯ, ಬೆಳ್ತಂಗಡಿ, ಮಡಿಕೇರಿ, ಮೈಸೂರು, ಬೆಂಗಳೂರಿನ ಜನರು ಪಾಲ್ಗೊಳ್ಳುತ್ತಾರೆ.

ರಝಾಕ್ ಬಿ.ಎಚ್ ನೇತೃತ್ವದಲ್ಲಿ ನಡೆಯುವ ಅಮರ್ ಅಕ್ಟರ್ ಅಂತೋನಿ ಟ್ರೋಫಿ ಉದ್ಘಾಟನೆ

Posted by Vidyamaana on 2023-12-21 12:24:54 |

Share: | | | | |


ರಝಾಕ್ ಬಿ.ಎಚ್ ನೇತೃತ್ವದಲ್ಲಿ ನಡೆಯುವ ಅಮರ್ ಅಕ್ಟರ್ ಅಂತೋನಿ ಟ್ರೋಫಿ ಉದ್ಘಾಟನೆ

ಪುತ್ತೂರು: ಜಾತಿ-ಜಾತಿ ಮಧ್ಯೆ ಸೌಹಾರ್ದತೆಯ ಸಾಮರಸ್ಯ ಮೂಡಿಸುವ ಅಮರ್ ಅಕ್ಟ‌ರ್ ಅಂತೋನಿ ಸೌಹಾರ್ದ ರೋಲಿಂಗ್ ಟ್ರೋಫಿ-2023 ಡಿ.19 ರಿಂದ 24ರ ತನಕ ಆರು ದಿನಗಳ ಕಾಲ ಕಿಲ್ಲೆ ಮೈದಾನದಲ್ಲಿ ಜರಗಲಿದ್ದು, ಈ ಕ್ರೀಡಾಕೂಟದ ಉದ್ಘಾಟನೆಯು ಡಿ.19 ರಂದು ಸಂಜೆ ನೆರವೇರಿತು.



ಸಿಟಿ ಫ್ರೆಂಡ್ಸ್ ಆರ್ಟ್ಸ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ಪುತ್ತೂರು, ಟೆನ್ ಗೈಯ್ಸ್ ಆರ್ಟ್ಸ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ಅಬುಧಾಬಿ, ಕ್ಲಾಸಿಕ್ ಫ್ರೆಂಡ್ಸ್ ಪುತ್ತೂರು, ಸೌದಿ ಅರೇಬಿಯಾ, ತುಳುನಾಡು ಫ್ರೆಂಡ್ಸ್ ಸೌದಿ ಅರೇಬಿಯಾ ಇವುಗಳ ಜಂಟಿ ಆಶ್ರಯದಲ್ಲಿ ಜರಗಲಿರುವ 11 ಜನರ ಅಂಡರ್ ಆರ್ಮ್ ಈ ಕ್ರಿಕೆಟ್ ಪಂದ್ಯಾಟಕ್ಕೆ ಪ್ರಸ್ತುತ 13ನೇ ವರ್ಷವಾಗಿದ್ದು ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ ಆಂಜನೇಯ ರೆಡ್ಡಿರವರು ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ನಗರಸಭಾ ಪೌರಾಯುಕ್ತ ಮಧು ಎಸ್.ಮನೋಹರ್, ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಮುಖ್ಯಸ್ಥ ಚೇತನ್ ಕಜೆ, ಬಾಂಧವ್ಯ ಟ್ರೋಫಿಯ ಸಂಯೋಜಕರಾದ ಸ್ಕರಿಯ ಯಂ ಎ - ಫಾರೂಕ್ ಶೇಖ್ , ಭರತ್ ಪ್ರಿಂಟರ್ಸ್ ನ ಭರತ್ ಕುಮಾರ್, ಪಿಪಿಎಲ್ ಆಯೋಜಕರಾದ ಭಾನುಪ್ರಕಾಶ್, ಸಾದಿಕ್ ಬಪ್ಪಳಿಗೆ, ಇಸ್ಮಾಯಿಲ್ ಎಂ.ಬಿ ಬಲ್ನಾಡು, ಜನತಾ ಸ್ಟೇಲ್ ಬಜಾರ್ ಆಶಿಕ್, ಶಾಫಿ ಮುಹಾದ್, ಅಬ್ಬಾಸ್ ಮದರ್ ಇಂಡಿಯ, ಇಬ್ರಾಹಿಂ ಇಬ್ಬ ಸಂಘಟಕ ಅರುಣ್ ಬಪ್ಪಳಿಗೆ ಸಾದಿಕ್ ಸಹಿತ ಹಲವರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಎಸ್.ಐ ಆಂಜನೇಯ ರೆಡ್ಡಿ, ನಗರಸಭಾ ಪೌರಾಯುಕ್ತ ಮಧು ಎಸ್.ಮನೋಹ‌ರ್, ಧನ್ವಂತರಿ ಕ್ಲಿನಿಕಲ್‌ ಲ್ಯಾಬೋರೇಟರಿ ಮುಖ್ಯಸ್ಥ ಚೇತನ್ ಕಜೆ, ಬಾಂಧವ್ಯ ಟ್ರೋಫಿಯ ಸಂಯೋಜಕರಾದ ಸ್ಕರಿಯ ಯಂ ಎ ಹಾಗೂ ಫಾರೂಕ್ ಶೇಖ್ , ಭರತ್ ಪ್ರಿಂಟರ್ಸ್ ನ ಭರತ್ ಗೌಡ, ಕೇಬಲ್ ಆಪರೇಟರ್ ಪ್ರವೀಣ್ ಪ್ರಭು, ಇತ್ತೀಚೆಗೆ ಕಥೋಲಿಕ್ ಸಭಾ ಮಂಗಳೂರು ಇವರಿಂದ ಮಂಗಳೂರಿನ ಕಥೋಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ.ವಂ.ಡಾ.ಪೀಟರ್ ಪಾವ್‌ ಸಲ್ದಾನ್ಹಾರವರಿಂದ ಸನ್ಮಾನಿತರಾದ ಪತ್ರಕರ್ತ ಸುದ್ದಿ ಬಿಡುಗಡೆಯ ವರದಿಗಾರ ಸಂತೋಷ್ ಮೊಟ್ಟೆತ್ತಡ್ಕರವರುಗಳನ್ನು ಗುರುತಿಸಿ ಸನ್ಮಾನಿಸಲಾಯಿತು.


ಪಂದ್ಯಾಕೂಟದಲ್ಲಿ ಹಳ್ಳಿ ಹುಡುಗ್ರು ಪೇಟೆ ಕಪ್ ಹೆಸರಿನಲ್ಲಿ 60 ತಂಡಗಳು, ಅಮರ್ ಅಕ್ಟರ್ ಅಂತೋನಿ ಸೌಹಾರ್ದ ರೋಲಿಂಗ್ ಟ್ರೋಫಿಗೆ 24 ತಂಡಗಳು, ಸ್ನೇಹ ಸೌಹಾರ್ದ ಟ್ರೋಫಿ ಹೆಸರಿನಲ್ಲಿ ವಿವಿಧ ಇಲಾಖೆಗಳ 12 ಕ್ರಿಕೆಟ್ ತಂಡಗಳು, ಕಿಲ್ಲೆ ಕಪ್‌ನಲ್ಲಿ 4 ತಂಡಗಳು ತೀವ್ರ ಹಣಾಹಣಿ ನಡೆಸಲಿದೆ.


ರಝಾಕ್ ಬಿ.ಎಚ್ ನೇತೃತ್ವದಲ್ಲಿ ನಡೆಯುವ ಈ ಕ್ರೀಡಾಕೂಟದಲ್ಲಿ ಪುತ್ತೂರಿನ ವೈದ್ಯರುಗಳು, ಪೊಲೀಸ್ ಇಲಾಖೆ,ಸುದ್ದಿ ಪುತ್ತೂರು ವಕೀಲರು, ಮೆಸ್ಕಾಂ ಉದ್ಯೋಗಿಗಳು, ಬ್ಯಾಂಕ್ ಉದ್ಯೋಗಿಗಳು, ದೈಹಿಕ ಶಿಕ್ಷಣ ಶಿಕ್ಷಕರು, ಭಾಗವಹಿಸುತ್ತಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿಗೆ ಕೊಕ್

Posted by Vidyamaana on 2023-07-29 05:34:32 |

Share: | | | | |


ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿಗೆ ಕೊಕ್

ಹೊಸದಿಲ್ಲಿ: ಲೋಕಸಭೆ ಮತ್ತು ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಭಾರತೀಯ ಜನತಾ ಪಕ್ಷವು ಆಡಳಿತಾತ್ಮಕ ಬದಲಾವಣೆ ಮಾಡಿದೆ. ಪಕ್ಷವು ಇಂದು ಕೇಂದ್ರ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕರ್ನಾಟಕದ ಸಿ.ಟಿ ರವಿ ಅವರಿಗೆ ಕೊಕ್ ನೀಡಿದೆ.ತೆಲಂಗಾಣದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಬಂಡಿ ಸಂಜಯ್ ಅವರನ್ನು ಇತ್ತೀಚೆಗೆ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಲಾಗಿತ್ತು.


ಇತರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳೆಂದರೆ ಅರುಣ್ ಸಿಂಗ್, ಕೈಲಾಶ್ ವಿಜಯ್ ವರ್ಗೀಯ, ದುಷ್ಯಂತ ಕುಮಾರ್ ಗೌತಮ್, ತರುಣ್ ಚುಗ್, ವಿನೋದ್ ತಾವ್ಡೆ, ಸುನಿಲ್ ಬನ್ಸಲ್, ರಾಧಾಮೋಹನ್ ಅಗರ್ವಾಲ್.


ಬಿ.ಎಲ್ ಸಂತೋಷ್ ಅವರು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ಮುಂದುವರಿದಿದ್ದಾರೆ. ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಹುದ್ದೆಯಲ್ಲಿ ಶಿವ ಪ್ರಕಾಶ್ ಅವರನ್ನು ಮುಂದುವರಿಸಲಾಗಿದೆ.



Leave a Comment: