ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು

ಸುದ್ದಿಗಳು News

Posted by vidyamaana on 2024-07-25 16:34:52 |

Share: | | | | |


ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು

ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಲಾಗುತ್ತದೆ. ಹೀಗಾಗಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಕರ್ನಾಟಕ ವಿದ್ಯುತ್ ನಿಗಮದ ಕಾರ್ಯ ನಿರ್ವಾಹಕ ಎಂಜಿನಿಯರ್ ಬುಧವಾರ ಮುನ್ನೆಚ್ಚರಿಕೆ ನೀಡಿದ್ದಾರೆ

ಕಾರ್ಗಲ್ ನ ಲಿಂಗನಮಕ್ಕಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಜಲಾಶಯಕ್ಕೆ ಸದ್ಯ 60 ಸಾವಿರ ಕ್ಯುಸೆಕ್ ಒಳಹರಿವು ಇದೆ.

Additional Image


ಜಲಾಶಯದ ಗರಿಷ್ಠ ಮಟ್ಟ 1819 ಅಡಿಗಳು ಇದ್ದು, ಜಲಾಶಯದಲ್ಲಿ ಈಗ 1801. 20 ಅಡಿ ನೀರಿನ ಸಂಗ್ರಹ ಇದೆ. ಮಳೆ ಹೆಚ್ಚಿರುವುದರಿಂದ ಜಲಾಶಯದ ಮಟ್ಟ ಶೀಘ್ರವೇ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ.


ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಬಹುದು ಎಂದು ಕೆಪಿಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

 Share: | | | | |


ಮುಂಬೈ : ನೆಲಕ್ಕುರುಳಿದ ಮೋದಿ ಉದ್ಘಾಟಿಸಿದ್ದ ಛತ್ರಪತಿ ಶಿವಾಜಿ ಪ್ರತಿಮೆ

Posted by Vidyamaana on 2024-08-26 22:02:19 |

Share: | | | | |


ಮುಂಬೈ : ನೆಲಕ್ಕುರುಳಿದ ಮೋದಿ ಉದ್ಘಾಟಿಸಿದ್ದ ಛತ್ರಪತಿ ಶಿವಾಜಿ ಪ್ರತಿಮೆ

ಮುಂಬೈ : ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದ 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜ್‌ ಪ್ರತಿಮೆ ಸೋಮವಾರ ನೆಲಕ್ಕುರುಳಿದೆ.

ಇಂದು (ಸೋಮವಾರ) ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್‌ ಕೋಟೆಯ ಬಳಿ ನಿರ್ಮಿಸಿದ್ದ ಪ್ರತಿಮೆ ನೆಲಕ್ಕುರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪುತ್ತೂರು : ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ : ಚಾಲಕನಿಗೆ ಗಾಯ

Posted by Vidyamaana on 2023-10-19 07:22:53 |

Share: | | | | |


ಪುತ್ತೂರು : ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ : ಚಾಲಕನಿಗೆ ಗಾಯ

ಪುತ್ತೂರು: ಮಂಗಳೂರುನಿಂದ ಸುಳ್ಯದ ಕಡೆಗೆ ಪಾಮ್‌ ಆಯಿಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರೊಂದು ಪಲ್ಟಿಯಾಗಿ ಪಾಮ್ ಆಯಿಲ್‌ ಸೋರಿಕೆ ರಸ್ತೆಯಲ್ಲೆಲ್ಲಾ ಹರಿದು ಹೋದ ಘಟನೆ ಅ.18ರ ರಾತ್ರಿ ಇಲ್ಲಿನ ಬೈಪಾಸ್‌ ರಸ್ತೆ ಉರ್ಲಂಡಿಯಲ್ಲಿ ನಡೆದಿದೆ.


ರಾತ್ರಿ 10.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ.ಟ್ಯಾಂಕ‌ ಪಲ್ಟಿಯಾದ ಶಬ್ದ ಕೇಳುತ್ತಲೇ ಸ್ಥಳೀಯರು ಆಗಮಿಸಿ ಇತರರಿಗೆ ಮಾಹಿತಿ ನೀಡಿದ್ದರುಘಟನೆಯಿಂದ ವಿದ್ಯುತ್‌ ತಂತಿ ತುಂಡರಿಸಲ್ಪಟ್ಟಿದ್ದು ಸಂಪರ್ಕ ಕಡಿತಗೊಂಡಿದೆ.ಟ್ಯಾಂಕರ್‌ ವಿದ್ಯುತ್‌ ಕಂಬ, ತಂತಿಗಳಿಗೆ ತಾಗಿತ್ತಾದರೂ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರೊಂದಕ್ಕೆ ಅಪಘಾತವಾಗುವುದನ್ನು ತಪ್ಪಿಸುವ ಯತ್ನದಲ್ಲಿ ಟ್ಯಾಂಕ‌ ಪಲ್ಟಿಯಾಗಿದೆ ಎನ್ನಲಾಗಿದೆ. ಟ್ಯಾಂಕರ್ ಚಾಲಕನಿಗೆ ಗಾಯವಾಗಿದ್ದು ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರು ಗಾಯಾಳು ಚಾಲಕನನ್ನು ತಮ್ಮ ಕಾರಿನಲ್ಲಿ ಕರೆದೊಯ್ದು ಮಹಾವೀರ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.ಅಗ್ನಿ ಶಾಮಕ ದಳದವರು ಹಾಗೂ ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಮುನ್ನೆಚ್ಚರಿಕಾ ಕ್ರಮಕೈಗೊಂಡಿದ್ದಾರೆ.ಘಟನಾಸ್ಥಳದಲ್ಲಿ ಹಲವು ಮಂದಿ ಜಮಾಯಿಸಿದ್ದರು.


10 ಸಾವಿರ ಲೀ ಪಾಮ್ ಆಯಿಲ್ ಸೋರಿಕೆ: ಟ್ಯಾಂಕರ್‌ನಲ್ಲಿ 30 ಸಾವಿರ ಲೀ. ಪಾಮ್ ಆಯಿಲ್ ತುಂಬಿಸಲಾಗಿದ್ದು, ಅದರಲ್ಲಿದ್ದ 10 ಸಾವಿರ ಲೀ. ಪಾಮ್ ಆಯಿಲ್ ಸೋರಿಕೆಯಾಗಿ ಹೋಗಿದೆ ಎಂದು ತಿಳಿದು ಬಂದಿದೆ.

ಸುರತ್ಕಲ್: ವಾಹನ ಕಳ್ಳರ ಬಂಧನ ವಾಹನಗಳ ಜಪ್ತಿ ಪ್ರಕರಣ

Posted by Vidyamaana on 2023-07-25 09:59:16 |

Share: | | | | |


ಸುರತ್ಕಲ್: ವಾಹನ ಕಳ್ಳರ ಬಂಧನ ವಾಹನಗಳ ಜಪ್ತಿ ಪ್ರಕರಣ

ಮಂಗಳೂರು: ಮಂಗಳೂರು ಹಾಗೂ ಆಸುಪಾಸು ವಾಹನ ಕದಿಯುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುರತ್ಕಲ್ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ತಂಡ ಯಶಸ್ವಿಯಾಗಿದೆ.

ಆರೋಪಿಯನ್ನು ಮಹಮ್ಮದ್ ಶಫೀಕ್ ಯಾನೆ ಶಫೀಕ್ ಎಂದು ಗುರುತಿಸಲಾಗಿದೆ. ಈತ ಕಳವುಗೈದ ವಾಹನಗಳ ಮೊತ್ತು ಸುಮಾರು 15.50 ಲಕ್ಷ ರೂ. ಮೌಲ್ಯ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 3 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಘಟನೆಯ ವಿವರ:

2023ರ ಜುಲೈ 12ರಂದು ರಾತ್ರಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟಿನ ಕಾರ್ ಮಾರ್ಟ್ `ಎಂಬ ಹೆಸರಿನ ಹಳೆಯ ವಾಹನಗಳ ಖರೀದಿ ಮತ್ತು ಮಾರಾಟದ ಶೋರಂಗ ದ್ವಿ ಚಕ್ರದಲ್ಲಿ ಬಂದ ಕಳ್ಳರು ಶೋರೂಂನ ಕಛೇರಿಯ ಗ್ಲಾಸ್ ನ ಡೋರನ್ನು ಸುತ್ತಿಗೆಯಿಂದ ಜಖಂಗೊಳಿಸಿ ಸಂಪೂರ್ಣ ಪುಡಿ ಮಾಡಿ ಒಳಪ್ರವೇಶಿಸಿ ಕಛೇರಿಯೊಳಗೆ ಟೇಬಲ್ ಮೇಲೆ ಇದ್ದ ಒನ್ ಪ್ಲಾಸ್ ಮೊಬೈಲ್ ಫೋನ್ HP ಕಂಪೆನಿಯ ಲ್ಯಾಪ್ ಟಾಪ್ ಹಾಗೂ HP ಕಂಪಿನಿಯ ಪ್ರಿಂಟರ್ ಹಾಗೂ ಶೋರೂಂನ ಪಾರ್ಕ ನಲ್ಲಿ ನಿಲ್ಲಿಸಿದ ಕ್ರೆಟಾ ಹಾಗೂ ಸ್ವಿಫ್ಟ್ ಕಾರನ್ನು ಕಳವು ಮಾಡಿದ್ದರು. ಈ ಬಗ್ಗೆ ಕಾರ್ ಮಾರ್ಟ್ ಮಾಲಕರಾದ ಅಬೀದ್ ಅಹಮ್ಮದ್ ಸೂರಲ್ಪಾಡಿ ಅವರು ದೂರು ನೀಡಿದ್ದು, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಯ ಬಂಧನ, ಸೊತ್ತು ವಶ:

ಜುಲೈ 22ರಂದು ಅಪ್ರಾಪ್ತ ಬಾಲಕನಿಂದ ಕಳವಾದ ಸ್ವಿಫ್ಟ್ ಕಾರನ್ನು ವಶಕ್ಕೆ ಪಡೆಯಲಾಗಿತ್ತು. ಆತ ನೀಡಿದ ಮಾಹಿತಿಯಂತೆ ಮಂಗಳೂರು ತಾಲೂಕಿನ ಕಿನ್ನಿಪದವು ನಿವಾಸಿ ಸುಮಾರು 21 ವರ್ಷದ ಮಹಮ್ಮದ್ ಶಫೀಕ್ ಯಾನೆ ಶಫೀಕ್ ಎಂಬಾತನು ದ್ವಿ ಚಕ್ರದಲ್ಲಿ ಬರುವಾಗ ಮರಕಡ ಬಸ್ ನಿಲ್ದಾಣದ ಬಳಿ ಬಂಧಿಸಿ, ಆತನು ತೋರಿಸಿಕೊಟ್ಟಂತ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿಯಲ್ಲಿ ಕ್ರೆಟಾ ಕಾರನ್ನು ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಸುತ್ತಿಗೆ, ಕೃತ್ಯದ ಸಮಯ ತಲೆಗೆ ದರಿಸಿ, ಹೆಲೈಟ್ ಮೈ ಮೇಲೆ ಧರಿಸಿದ ರೈನ್ ಕೋಟ್, ಕೈಗೆ ಧರಿಸಿದ ಗೌಸ್, ಮುಖಕ್ಕೆ ಹಾಕಿದ ಮಾಸ್ಕ್ ನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿ ಮಹಮ್ಮದ್ ಶಫೀಕ್ ಯಾನೆ ಶಫೀಕ್ ಒಂದು ವರ್ಷದ ಹಿಂದೆ ಮೂಡಬಿದ್ರಿ ಠಾಣಾ ವ್ಯಾಪ್ತಿಯ ಹೆಸರುಗದ್ದೆ ಎಂಬಲ್ಲಿ ಮನೆಯಿಂದ ಕಳತನ ಮಾಡಿದ ದ್ವಿ ಚಕ್ರ ವಾಹನವನ್ನು ಇದೇ ಸಂದರ್ಭ ಆತನಿಂದ ವಶಪಡಿಸಿಕೊಳ್ಳಲಾಯಿತು ಎಂದು ಹೇಳಲಾಗಿದೆ.

ಪೊಲೀಸ್ ತಂಡ:

ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರ ಮಾರ್ಗದರ್ಶನದಲ್ಲಿ ಉಪ ಪೊಲೀಸ್ ಆಯುಕ್ತರಾದ ಅಂಶು ಕುಮಾರ್ ಮತ್ತು ಬಿ.ಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ನಾಯ್ಕ ಅವರ ಮಾರ್ಗದರ್ಶನದಲ್ಲಿ ಸುರತ್ಕಲ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್, ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ. ತಂಡದಲ್ಲಿ ಪಿಎಸ್ಐಗಳಾದ ರಘು ನಾಯಕ್, ಅರುಣ್ ಕುಮಾರ್, ಎಎಸ್ಐ, ತಾರನಾಥ ಹೆಡ್ ಕಾನ್ಸಟೇಬಲ್ ಗಳಾದ ಅಣ್ಣಪ್ಪ, ಉಮೇಶ್, ಕಾನ್ಸಟೇಬಲ್ ಗಳಾದ ಕಾರ್ತೀಕ್, ಸುನೀಲ್, ಮಂಜುನಾಥ, ನಾಗರಾಜ ಇದ್ದರು.

14 ಟಿವಿ ಆ್ಯಂಕರ್‌ಗಳನ್ನು ಬಹಿಷ್ಕರಿಸಿದ INDIA ಮೈತ್ರಿಕೂಟ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

Posted by Vidyamaana on 2023-09-15 09:06:27 |

Share: | | | | |


14 ಟಿವಿ ಆ್ಯಂಕರ್‌ಗಳನ್ನು ಬಹಿಷ್ಕರಿಸಿದ INDIA ಮೈತ್ರಿಕೂಟ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಮುಂಬೈ: ವಿರೋಧ ಪಕ್ಷದ ಮೈತ್ರಿಕೂಟ ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್ (INDIA) ಈಗ ಕೆಲವು ಟಿವಿ ಆ್ಯಂಕರ್‌ಗಳನ್ನು ಬಹಿಷ್ಕರಿಸಿದೆ.  


ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ಬುಧವಾರ ನಡೆದ ಸಮನ್ವಯ ಸಮಿತಿಯ ಮೊದಲ ಸಭೆಯಲ್ಲಿ INDIA ಮೈತ್ರಿಕೂಟ ಈ ನಿರ್ಧಾರವನ್ನು ತೆಗೆದುಕೊಂಡಿದೆ.


ವಾಸ್ತವವಾಗಿ, ಮಾಧ್ಯಮದ ಒಂದು ವಿಭಾಗವು ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ ಎಂದು ವಿರೋಧ ಪಕ್ಷಗಳು ಹಲವು ಬಾರಿ ಆರೋಪಿಸಿವೆ. ರಾಹುಲ್ ಗಾಂಧಿಯವರ ಭಾರತ್ ಜೋಡೋ ಭೇಟಿಗೆ ಮಾಧ್ಯಮಗಳು ಅಗತ್ಯ ಪ್ರಸಾರವನ್ನು ನೀಡಲಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.ಮೈತ್ರಿಕೂಟದ ಸಮನ್ವಯ ಸಮಿತಿಯ ಮೊದಲ ಸಭೆಯು ದೆಹಲಿಯ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ನಡೆಯಿತು. ಶರದ್ ಪವಾರ್ ಹೊರತುಪಡಿಸಿ, ಕಾಂಗ್ರೆಸ್‌ನ ಕೆಸಿ ವೇಣುಗೋಪಾಲ್, ಡಿಎಂಕೆಯ ಟಿಆರ್ ಬಾಲು, ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್, ಜನತಾ ದಳದ (ಯುನೈಟೆಡ್) ಸಂಜಯ್ ಝಾ, ಆಮ್ ಆದ್ಮಿ ಪಕ್ಷದ ರಾಘವ್ ಚಡ್ಡಾ, ಶಿವಸೇನೆಯ (ಯುಬಿಟಿ) ಸಂಜಯ್ ರಾವತ್, ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಿದ್ದರು.


ಭಾರತ ಮೈತ್ರಿಯಿಂದ ಬಹಿಷ್ಕರಿಸಿದ ಆಂಕರ್‌ಗಳು:

* ಅದಿತಿ ತ್ಯಾಗಿ

* ಅಮನ್ ಚೋಪ್ರಾ

* ಅಮಿಶ್ ದೇವಗನ್

* ಆನಂದ ನರಸಿಂಹನ್

* ಅರ್ನಾಬ್ ಗೋಸ್ವಾಮಿ

* ಅಶೋಕ್ ಶ್ರೀವಾಸ್ತವ

* ಚಿತ್ರಾ ತ್ರಿಪಾಠಿ

* ಗೌರವ್ ಸಾವಂತ್

* ನಾವಿಕ ಕುಮಾರ್

* ಪ್ರಾಚಿ ಪರಾಶರ

* ರೂಬಿಕಾ ಲಿಯಾಕತ್

* ಶಿವ ಆರೂರ್

* ಸುಧೀರ್ ಚೌಧರಿ

* ಸುಶಾಂತ್ ಸಿನ್ಹಾ

ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವಂತೆ ಗೃಹ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

Posted by Vidyamaana on 2023-06-06 05:24:39 |

Share: | | | | |


ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವಂತೆ ಗೃಹ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:ಪುತ್ತೂರು ವಿಧಾನ ಸಭಾಕ್ಷೇತ್ರಕ್ಕೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನಲ್ಲಿ ಪೋಲಿಸ್ ಅಧೀಕ್ಷರರ ಕಛೇರಿಯನ್ನು ಪ್ರಾರಂಭಿಸುವ ಬಗ್ಗೆ ಸರಕಾರದ ಹಂತದಲ್ಲಿ ಈಗಾಗಲೇ ಅನುಮೋದನೆಯಾಗಿದ್ದು ,ಕಂದಾಯ ಇಲಾಖೆಯಿಂದಲೂ ಸ್ಥಳ ಕಾಯ್ದಿರಿಸಲಾಗಿದೆ ,ಅನುದಾನವೂ ಅನುಮೋದನೆಯಾಗಿರುತ್ತದೆ . ಸರಕಾರವು ಈ ವಿಚಾರವನ್ನು ಪರಿಗಣಿಸಿ ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವಂತೆ ಶಾಸಕರು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

ಪುತ್ತೂರಿಗೆ ಉಪವಿಭಾಗಕ್ಕೆ ಎಸ್ ಪಿ ಕಚೇರಿಯನ್ನು ಸ್ಥಳಾಂತರ ಮಾಡುವಂತೆ ಹಲವು ವರ್ಷಗಳಿಂದ ಸರಕಾರದ ಮೂಲಕ ಒತ್ತಡ ತರಲಾಗುತ್ತದೆ. ಆದರೆ ಪೂರ್ಣ ಪ್ರಮಾಣದಲ್ಲಿ ಇದರ ಕಾರ್ಯ ನಡೆದಿರುವುದಿಲ್ಲ. ಮಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶ ವ್ಯಾಪ್ತಿ‌ಮಂಗಳೂರು ಕಮಿಷನರ್ ಸುಪರ್ದಿಗೆ ಒಳಪಡುವ ಕಾರಣ  ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವುದಕ್ಕೆ ಇಲಾಖಾ ಮಟ್ಟದಲ್ಲಿ ಹಲವು ವರ್ಷಗಳಿಂದ ಪ್ರಯತ್ನಗಳು ನಡೆಯುತ್ತಿದೆ. ಶಾಸಕ ಅಶೋಕ್ ರೈ ಮುಂದಾಳುತ್ವದಲ್ಲಿ ಈ ಬಾರಿ ಎಸ್ ಪಿ ಕಚೇರಿ ಪುತ್ತೂರಿಗೆ ಸ್ಥಳಾಂತರವಾಗುವ ಸಾಧ್ಯತೆ ಇದ್ದು ಈಗಾಗಲೇ ರಾಜ್ಯ ಗೃಹ ಸಚಿವ ಪರಮೇಶ್ವರ್ ಜೊತೆ ಮಾತುಕತೆಯನ್ನು ನಡೆಸಿದ್ದಾರೆ. ಈ ಮೂಲಕ ಪುತ್ತೂರು ಉಪ ವಿಭಾಗ ವ್ಯಾಪ್ತಿಯ ಬಹು ವರ್ಷದ ಕನಸು ಈ ಬಾರಿ ನನಸಾಗುವ ಸಾಧ್ಯತೆ ಇದೆ.

ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ,ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಈ ವೇಳೆ ಉಪಸ್ಥಿತರಿದ್ದರು.

ಮಣಿಪುರ -ಜೈಪುರ ಸಹಿತ ಹಲವೆಡೆ ಬೆಳ್ಳಂಬೆಳಗ್ಗೆ ಕಂಪಿಸಿದ ಭೂಮಿ

Posted by Vidyamaana on 2023-07-21 03:52:22 |

Share: | | | | |


ಮಣಿಪುರ -ಜೈಪುರ  ಸಹಿತ ಹಲವೆಡೆ ಬೆಳ್ಳಂಬೆಳಗ್ಗೆ ಕಂಪಿಸಿದ ಭೂಮಿ

ಜೈಪುರ: ಶುಕ್ರವಾರ ಮುಂಜಾನೆ ರಾಜಸ್ಥಾನದ ಜೈಪುರದ ಮೂರು ಭಾಗಗಳಲ್ಲಿ ಭೂಕಂಪಗಳು ಸಂಭವಿಸಿವೆ ಎಂದು ವರದಿಯಾಗಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಮೂರು ಕಂಪನಗಳು ಕೇವಲ 30 ನಿಮಿಷಗಳ ಅವಧಿಯಲ್ಲಿ ಸಂಭವಿಸಿದೆ ಎಂದು ಹೇಳಿದ್ದಾರೆ.

ಶುಕ್ರವಾರ ನಸುಕಿನ ಜಾವಾ 4 ಗಂಟೆಯಿಂದ 4;30 ನಿಮಿಷಗಳ ಅವಧಿಯಲ್ಲಿ ಮೂರು ಕಂಪನಗಳು ಸಂಭವಿಸಿದೆ ಎಂದು ಹೇಳಲಾಗಿದೆ ಅದರಲ್ಲಿ 4.09ರ ಸುಮಾರಿಗೆ 4.4ರ ತೀವ್ರತೆ ಹೊಂದಿದ್ದರೆ, 4.22ರ ಸುಮಾರಿಗೆ 3.1 ರ ತೀವ್ರತೆ ಹಾಗೂ 4.25 ರ ಸುಮಾರಿಗೆ 3.4ರ ತೀವ್ರತೆಯ ಭೂಕಂಪನದ ಅನುಭವಾಗಿದೆ ಎಂದು ಹೇಳಲಾಗಿದೆ.


ಕಂಪನದ ಅನುಭವವಾಗುತ್ತಿದ್ದಂತೆ ಜನ ಭಯಭೀತರಾಗಿ ಮನೆಯಿಂದ ಹೊರಬಂದಿದ್ದಾರೆ ಎನ್ನಲಾಗಿದೆ, ಭೂಕಂಪನದಿಂದ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.


ಮಣಿಪುರದಲ್ಲೂ 3.5 ತೀವ್ರತೆಯ ಕಂಪನ:

ಶುಕ್ರವಾರ ಮುಂಜಾನೆ ಸುಮಾರು 5.01ಕ್ಕೆ ಮಣಿಪುರದ ಉಖ್ರುಲ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಭೂಕಂಪವು 20 ಕಿಲೋಮೀಟರ್ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.



Leave a Comment: