ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಸುದ್ದಿಗಳು News

Posted by vidyamaana on 2024-07-25 09:34:49 |

Share: | | | | |


ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಬೆಂಗಳೂರು : ಕೋರಮಂಗಲದ ಲೇಡಿಸ್ ಪಿಜಿ ಒಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದ್ದು, ಈ ಬಗ್ಗೆ ಪೊಲೀಸರು ಮಹತ್ವದ ಮಾಹಿತಿ ನೀಡಿದ್ದಾರೆ. ಮೃತ ಯುವತಿಯನ್ನು ಬಿಹಾರದ ಕೃತಿ ಕುಮಾರಿ‌ (24) ಎಂದು ಗುರುತಿಸಲಾಗಿದ್ದು, ಆಕೆಯ ಪ್ರಿಯತಮನೇ ಕೊಲೆಗಾರ ಎಂದು ಪೊಲೀಸರು ತಿಳಿಸಿದ್ದಾರೆ .

ಕೃತಿ ಕುಮಾರಿ ತಾನು ಪ್ರೀತಿಸುತ್ತಿದ್ದ ಯುವಕನಿಂದಲೇ ಕೊಲೆಯಾಗಿದ್ದಾರೆ. ರಾತ್ರಿ 11:30ಕ್ಕೆ ಕೃತಿ ಕುಮಾರಿಯೇ ಯುವಕನನ್ನು ಕರೆದುಕೊಂಡು ಬಂದಿರುವ ಬಗ್ಗೆ ಮೇಲ್ನೋಟಕ್ಕೆ ಮಾಹಿತಿ ಸಿಕ್ಕಿದೆ. ಪಿಜಿಯಿಂದ ಹೊರ ಬಂದ ಕೃತಿ ತನ್ನ ಪ್ರಿಯತಮನ ಜತೆ ರಾತ್ರಿ ಊಟ ಮಾಡಿದ್ದರು. ಊಟ ಮುಗಿಸಿದ ಕೃತಿ ತನ್ನೊಂದಿಗೆ ಯುವಕನ್ನು ಪಿಜಿಗೆ ಕರೆತಂದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೃತಿಯ ರೂಂಗೆ ಆಗಮಿಸಿದ್ದ ವೇಳೆ ಇಬ್ಬರ ಮಧ್ಯೆ ಗಲಾಟೆಯಾಗಿ ಕೊಲೆಯಾಗಿರುವ ಶಂಕೆ ಇದೆ.

ಪಿಜಿಯ ಸಿಸಿಟಿವಿ ಎಲ್ಲವನ್ನು ಕೂಡ ಪರಿಶೀಲನೆ ನಡೆಸಿದ್ದೇವೆ. ಪಿಜಿಯ ನಿರ್ಲಕ್ಷ್ಯತನದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಿ ಪತ್ತೆಗಾಗಿ ಪೊಲೀಸರ ವಿಶೇಷ ತಂಡವನ್ನ ರಚನೆ ಮಾಡಲಾಗಿದೆ ಎಂದಿದ್ದಾರೆ

 Share: | | | | |


ಬಂಟ್ವಾಳ: ದ್ವಿಚಕ್ರವಾಹನದಲ್ಲಿ ಇರಿಸಲಾಗಿದ್ದ ಹಣದಲ್ಲಿ ಲಕ್ಷ ರೂಪಾಯಿ ಮಾತ್ರ ಎಗರಿಸಿದ ಕಳ್ಳರು

Posted by Vidyamaana on 2023-10-07 20:22:31 |

Share: | | | | |


ಬಂಟ್ವಾಳ: ದ್ವಿಚಕ್ರವಾಹನದಲ್ಲಿ ಇರಿಸಲಾಗಿದ್ದ ಹಣದಲ್ಲಿ ಲಕ್ಷ ರೂಪಾಯಿ ಮಾತ್ರ ಎಗರಿಸಿದ ಕಳ್ಳರು

ಬಂಟ್ವಾಳ : ದ್ವಿಚಕ್ರ ವಾಹನದಲ್ಲಿ ಇರಿಸಲಾಗಿದ್ದ ಲಕ್ಷಾಂತರ ರೂ.ನಗದು ಕಳವಾಗಿರುವ ಬಗ್ಗೆ ಬಿಸಿರೋಡಿನಲ್ಲಿ ವರದಿಯಾಗಿದೆ.


    ನರಿಕೊಂಬು ನಿವಾಸಿ ಪ್ರಕಾಶ್ ಕೋಡಿಮಜಲು ಎಂಬವರ ರೂಪಾಯಿ ಒಂದು ಲಕ್ಷ ಹಣ ಕಳವಾಗಿದೆ ಎಂದು ಅವರು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.


   ಅವರು ಶುಕ್ರವಾರ ಬೆಳಿಗ್ಗೆ ರೂ.1.40 ಲಕ್ಷ ಹಣವನ್ನು ಬ್ಯಾಂಕಿನಿಂದ ಡ್ರಾ ಮಾಡಿ ಬಳಿಕ ಬಿಸಿರೋಡಿನ ಮಿನಿವಿಧಾನ ಸೌಧದ ಕಚೇರಿಯ ಮುಂಭಾಗದಲ್ಲಿ ಇರಿಸಲಾಗಿದ್ದ, ದ್ವಿಚಕ್ರವಾಹನದ ಸೀಟಿನಡಿ ಇರುವ ಬಾಕ್ಸ್ ನಲ್ಲಿ ಇರಿಸಿದ್ದರು.


ಬಳಿಕ ಬೇರೆಬೇರೆ ಕೆಲಸ ನಿಮಿತ್ತ ಅಲ್ಲಿಂದ ತೆರಳಿದ್ದರು.


ಮಧ್ಯಾಹ್ನ ಬಳಿಕ ಬಂದು ಸೀಟು ಲಾಕ್ ತೆರೆದಾಗ ಅದರೊಳಗೆ ಇರಿಸಲಾಗಿದ್ದ 1.40 ಲಕ್ಷದಲ್ಲಿ 40 ಸಾವಿರ ಮಾತ್ರ ಇದ್ದು ಉಳಿದ 1ಲಕ್ಷ ಹಣ ಕಳವಾಗಿದೆ ಎಂದು ತಿಳಿಸಿದ್ದಾರೆ.


ಬಂಟ್ವಾಳ ನಗರ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಬಿರುಕುಬಿಟ್ಟ ಅರಿಯಡ್ಕ ಹಿಪ್ರಾ ಶಾಲೆ ಕಟ್ಟಡ: ವಿದ್ಯಾರ್ಥಿಗಳ ಸ್ಥಳಾಂತರ

Posted by Vidyamaana on 2023-07-24 07:43:45 |

Share: | | | | |


ಬಿರುಕುಬಿಟ್ಟ ಅರಿಯಡ್ಕ ಹಿಪ್ರಾ ಶಾಲೆ ಕಟ್ಟಡ: ವಿದ್ಯಾರ್ಥಿಗಳ ಸ್ಥಳಾಂತರ

ಪುತ್ತೂರು: ಭಾರೀ ಮಳೆಗೆ ಅರಿಯಡ್ಕ ಸರಕಾರಿ ಹಿ ಪ್ರಾ ಶಾಲಾ ಕಟ್ಟಡದ ಗೋಡೆ ಬಿರುಕುಬಿಟ್ಟಿದ್ದು ಕುಸಿಯುವ ಭೀತಿಯಲ್ಲಿದ್ದು ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಲಾಗಿದೆ.


ಶತಮಾನಗಳ ಇತಿಹಾಸ ಹೊಂದಿರುವ ಅರಿಯಡ್ಕ ಶಾಲೆಯಲ್ಲಿ ಒಂದರಿಂದ ಏನೇ ತರಗತಿ ತನಕ ವಿದ್ಯಾರ್ಥಿಗಳಿದ್ದು ಒಂದೇ ಕಟ್ಟಡದಲ್ಲಿ ೩ ೭ ನೇ ತರಗತಿ ತನಕ ಕ್ಲಾಸ್‌ಗಳು ನಡೆಯುತ್ತಿದ್ದು ಅದೇ ಕಟ್ಟಡದ ಗೋಡೆ ಬಿರುಕುಬಿಟ್ಟಿದೆ. ಗೋಡೆ ಬಿರುಕುಬಿಟ್ಟಿರುವ ಕಾರಣ ಕಟ್ಟಡದ ಮಾಡು, ಪಕ್ಕಾಸುಗಳು ಕುಸಿತಗೊಂಡಿದ್ದು ಮುರಿದು ಬೀಳುವ ಹಂತದಲ್ಲಿದೆ. ಭಾನುವಾರ ಈ ಘಟನೆ ನಡೆದಿದ್ದು ಇಂದು ತರಗತಿಗೆ ವಿದ್ಯಾರ್ಥಿಗಳು ಬಂದಾಗ ವಿಷಯ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಿದರೂ ಅವರಿಗೆ ಅಲ್ಲಿ ಬದಲಿ ವ್ಯವಸ್ಥೆಗೆ ಯಾವುದೇ ತರಗತಿ ಕೋಣೇಗಳಿರುವುದಿಲ್ಲ. ರಂಗಮಂಟಪದಲ್ಲಿ ವಿದ್ಯಾರ್ಥಿಗಳನ್ನು ಕೂರಿಸಿ ಪಾಠ ಮಾಡಲಾಗುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಟ್ಟಡ ಶಿಥಿಲಗೊಂಡಿರುವ ಕಾರಣ ಕೆಲವು ಪೋಷಕರು ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಿರುವುದಾಗಿ ಕೆಲವು ಪೋಷಕರು ಮಾಹಿತಿ ನೀಡಿದ್ದಾರೆ.

ಶಾಸಕರಿಗೆ ತಿಳಿಸಲಾಗಿದೆ: ಎಸ್‌ಡಿಎಂಸಿ

ಕಟ್ಟಡ ಬಿರುಕುಬಿಟ್ಟಿರುವ ಕಾರಣ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದು ಸದ್ಯ ತರಗತಿ ಕೋಣೆಗಳು ಇಲ್ಲದೇ ಇರುವುದರಿಂದ ಒಂದೇ ಹಾಲ್ ಮತ್ತು ರಂಗಮಂಟಪದಲ್ಲಿ ವಿದ್ಯಾರ್ಥಿಗಳನ್ನು ಕೂರಿಸಿ ಪಾಠ ಮಾಡಲಾಗುತ್ತಿದೆ. ಘಟನೆಯ ಬಗ್ಗೆ ಶಾಸಕರಿಗೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗೆ ಮಾಹಿತಿ ನೀಡಲಾಗಿದೆ. ಇನ್ನುಳಿದ ಹಳೆಯ ಕಟ್ಟಡವೂ ಶಿಥಿಲಗೊಂಡಿದ್ದು ಈ ಬಗ್ಗೆ ಈ ಹಿಂದೆಯೇ ಸಂಬಂಧಿಸಿದವರಿಗೆ ಮಾಹಿತಿ ನೀಡಲಾಗಿದೆ. ಮಾಡು ದುರಸ್ಥಿಗೆ ಮಾತ್ರ ಅನುದಾನ ನೀಡಲಾಗಿದ್ದು ಅದರಲ್ಲಿ ಮಾಡು ದುರಸ್ಥಿ ಮಾಡಲಾಗಿದೆ. ಕಟ್ಟಡದ ಗೋಡೆಗಳು ತುಂಬಾ ಹಳೆಯದಾಗಿರುವ ಕಾರಣ ಮಳೆಗೆ ಕುಸಿತವಾಗುತ್ತಿದೆ ಎಂದು ಎಸ್‌ಡಿಎಂಸಿ ಅಧ್ಯಕ್ಷರಾದ ಹನೀಫ್‌ರವರು ಮಾಹಿತಿ ನೀಡಿದ್ದಾರೆ. ಕಟ್ಟಡ ಬಿರುಕುಬಿಟ್ಟ ವಿಷಯ ತಿಳಿದು ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಇಕ್ಬಾಲ್ ಹುಸೇನ್, ಒಳಮೊಗ್ರು ವಲಯ ಅಧ್ಯಕ್ಷ ಅಶೋಕ್‌ಪೂಜಾರಿ, ರಫೀಕ್ ದರ್ಖಾಸ್, ಮಹಮ್ಮದ್ ಬೊಳ್ಳಾಡಿ ಮೊದಲಾದವರು ಭೇಟಿ ನೀಡಿ ಸಹಕರಿಸಿದ್ದಾರೆ.

ಕೇಂದ್ರ ಸಚಿವ HDK ಸಹಿ ಹಾಕಿದ್ದ ಮೊದಲ ಕಡತಕ್ಕೆ ವಿಘ್ನ : ದೇವದಾರಿ ಮೈನಿಂಗ್ ಗೆ ಬ್ರೇಕ್

Posted by Vidyamaana on 2024-06-23 08:15:43 |

Share: | | | | |


ಕೇಂದ್ರ ಸಚಿವ HDK ಸಹಿ ಹಾಕಿದ್ದ ಮೊದಲ ಕಡತಕ್ಕೆ ವಿಘ್ನ : ದೇವದಾರಿ ಮೈನಿಂಗ್ ಗೆ ಬ್ರೇಕ್

ಬೆಂಗಳೂರು ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಹಿ ಹಾಕಿದ್ದ ಮೊದಲ ಕಡತಕ್ಕೆ ವಿಘ್ನ ಉಂಟಾಗಿದ್ದು, ದೇದಾರಿ ಮೈನಿಂಗ್‌ ಗೆ ರಾಜ್ಯ ಸರ್ಕಾರ ಬ್ರೇಕ್‌ ಹಾಕಿದೆ.

ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಮೊದಲಿಗೆ ಸಹಿ ಹಾಕಿದ್ದ ರಾಜ್ಯಕ್ಕೆ ಸಂಬಂಧಿಸಿದ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆಯ ಗಣಿಗಾರಿಕೆಗೆ ಸಂಬಂಧಿಸಿದ ಯೋಜನೆಗೆ ರಾಜ್ಯ ಸರ್ಕಾರ ತಡೆ ನೀಡಿದೆ.

ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಚಾಲಕ ಚಿರ ನಿದ್ರೆಗೆ

Posted by Vidyamaana on 2023-12-29 16:22:57 |

Share: | | | | |


ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಚಾಲಕ ಚಿರ ನಿದ್ರೆಗೆ

ಉಪ್ಪಿನಂಗಡಿ: ರಾತ್ರಿ ಲಾರಿ ನಿಲ್ಲಿಸಿ ಮಲಗಿದ್ದ ಚಾಲಕ ಲಾರಿಯಲ್ಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯ ಉಪ್ಪಿನಂಗಡಿಯಲ್ಲಿ ನಡೆದಿದೆ.


ಮೈಸೂರು ಜಿಲ್ಲೆಯ ಚೆನ್ನಪಟ್ಟಣದ ಖಲೀಲ್ ಖಾನ್ (58) ಮೃತ ವ್ಯಕ್ತಿ ಮೈಸೂರಿನಿಂದ ಬಿ.ಸಿ.ರೋಡಿಗೆ ಹಾಸಿಗೆಯ ಲೋಡನ್ನು ಲಾರಿಯಲ್ಲಿ ತಂದಿದ್ದ ಖಲೀಲ್, ಲೋಡ್ ಖಾಲಿ ಮಾಡಿ ಎರಡು ದಿನಗಳ ಹಿಂದೆ ರಾತ್ರಿ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದರು.ಲಾರಿಯ ಕ್ಯಾಬಿನ್‍ನ ಬಾಗಿಲು ಹಾಕಿದ್ದರಿಂದ ಚಾಲಕ ಲಾರಿಯೊಳಗೆ ಮೃತಪಟ್ಟಿದ್ದು, ಯಾರ ಗಮನಕ್ಕೂ ಬಂದಿರಲಿಲ್ಲ. ಆದರೆ ಡಿ.29ರಂದು ಲಾರಿಯಿಂದ ವಾಸನೆ ಬರಲಾರಂಭಿಸಿದ್ದು, ಸಂಶಯಗೊಂಡ ಸ್ಥಳೀಯರು ಪರಿಶೀಲಿಸಿದಾಗ ಲಾರಿ ಚಾಲಕ ಮಲಗಿದ್ದಲ್ಲೇ ಮೃತಪಟ್ಟ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಲಾರಿಯಿಂದ ಲಾರಿ ಚಾಲಕನ ಮೃತದೇಹವನ್ನು ತೆಗೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ನಾಡಿನ ಶಿಕ್ಷಕರಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಸ್ವರ್ಣ ನಮನ

Posted by Vidyamaana on 2023-09-04 23:00:18 |

Share: | | | | |


ನಾಡಿನ ಶಿಕ್ಷಕರಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಸ್ವರ್ಣ ನಮನ

ಪುತ್ತೂರು: ಸದಾ ಹೊಸತನಗಳನ್ನು, ವಿನೂತನ ಆಫರ್ ಗಳನ್ನು ತನ್ನ ಗ್ರಾಹಕರಿಗೆ ಪರಿಚಯಿಸುವಲ್ಲಿ ಮುಂಚೂಣಿಯಲ್ಲಿರುವ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಸ್ಪೆಷಲ್ ಆಫರ್ ಒಂದನ್ನು ಪರಿಚಯಿಸಲಾಗಿದೆ.

ಸೆ.05 ರಿಂದ ಸೆ.12ರವರೆಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನ ಪುತ್ತೂರು, ಸುಳ್ಯ, ಹಾಸನ ಮತ್ತು ಕುಶಾಲನಗರ ಶಾಖೆಗಳಲ್ಲಿ ಶಿಕ್ಷಕರು ಖರೀದಿಸುವ ಚಿನ್ನಾಭರಣದ ಮೇಲೆ ಪ್ರತೀ ಗ್ರಾಂಗೆ 100 ರೂಪಾಯಿ ರಿಯಾಯಿತಿ, ಬೆಳ್ಳಿ ಎಂ.ಆರ್.ಪಿ. ಆಭರಣಗಳ ಮೇಲೆ ಶೇ.5ರ ರಿಯಾಯಿತಿ, ಬೆಳ್ಳಿ ಆಭರಣ ಹಾಗೂ ಸಾಮಾಗ್ರಿಗಳ ಮೇಲೆ ಶೇ.3ರ ರಿಯಾಯಿತಿ ಸಿಗಲಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ. 

ಸೆ. 5ರಿಂದ 12ರವರೆಗೆ ಶಿಕ್ಷಕರಿಗಾಗಿ ಈ ವಿಶೇಷ ಕೊಡುಗೆಗಳು ಲಭ್ಯವಿರಲಿದೆ. ಇದಕ್ಕಾಗಿ ಶಿಕ್ಷಕರು ಮಾಡಬೇಕಾಗಿರುವುದಿಷ್ಟೇ..

- ಶಿಕ್ಷಕರು ತಮ್ಮ ಶಾಲೆ ಅಥವಾ ಕಾಲೇಜಿನ ಐಡಿ ಕಾರ್ಡನ್ನು ತಮ್ಮೊಂದಿಗೆ ತರತಕ್ಕದ್ದು

- ಈ ಕೊಡುಗೆ ಚಿನ್ನದ ಗಟ್ಟಿ ಮತ್ತು ನಾಣ್ಯಗಳಿಗೆ ಅನ್ವಯವಾಗುವುದಿಲ್ಲ.

- ಈ ಕೊಡುಗೆಗಳು ಇನ್ನಿತರ ಯಾವುದೇ ಯೋಜನೆಗಳು ಮಾಸಿಕ ಕಂತಿನ ಯೋಜನೆಯೊಂದಿಗೆ ಸೇರಿಸಲಾಗುವುದಿಲ್ಲ

ಫೆ 11.ಶಾರ್ಜಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಮಹಬ್ಬ ಫ್ಯಾಮಿಲಿ ಫೆಸ್ಟ್ -24

Posted by Vidyamaana on 2024-02-03 17:37:33 |

Share: | | | | |


ಫೆ 11.ಶಾರ್ಜಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಮಹಬ್ಬ ಫ್ಯಾಮಿಲಿ ಫೆಸ್ಟ್ -24

ದುಬೈ: ಶಾರ್ಜಾದ ಅಲ್ ಬತ್ತೆಯ್ಯ ಪಾರ್ಕ್ ನಲ್ಲಿ ನಡೆಯುವ ಮಹಬ್ಬ ಫ್ಯಾಮಿಲಿ ಫೆಸ್ಟ್ -24ಕ್ಕೆ

ನಫೀಸ್ ಗ್ರೂಪ್ ನ ಚೈರ್ಮನ್ ಜನಾಬ್ ಅಬುಸ್ವಾಲಿ ಹಾಜಿ ಅವರಿಗೆ ಆಮಂತ್ರಣ ನೀಡಿ ಆಹ್ವಾನಿಸಲಾಯಿತು.

ಜನಾಬ್ ಅಬುಸ್ವಾಲಿ ಹಾಜಿ ಅವರ ದುಬೈ ನಿವಾಸದಲ್ಲಿ ಕೆ.ಸಿ.ಎಫ್. ನಾಯಕರು ಊರಿನ ಹಾಗೂ ದುಬೈಯಲ್ಲಿರುವ ಎಲ್ಲಾ ಉದ್ಯಮಿಯವರಿಗೆ ಆಮಂತ್ರಣ ಪತ್ರಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಯು.ಎ.ಇ ಕರ್ನಾಟಕ ಕಲ್ಚರಲ್ ಫೌಂಡೇಶನಿನ  ದಶಮಾನೋತ್ಸವ ಪ್ರಯುಕ್ತ ಫೆಬ್ರವರಿ 11ರಂದು ಮಹಬ್ಬ ಫ್ಯಾಮಿಲಿ ಫೆಸ್ಟ್ -24 ನಡೆಯಲಿದೆ.

ಕೆ.ಸಿ.ಎಫ್ ಯು.ಎ.ಇ  ಮಹಬ್ಬ ಸ್ವಾಗತ ಸಮಿತಿ ಅಧ್ಯಕ್ಷ ಝಐನುದ್ದೀನ್ ಹಾಜಿ ಬೆಳ್ಳಾರೆ,

ಕೆ.ಸಿ.ಎಫ್ ಯು.ಎ.ಇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೂಸಹಾಜಿ ಬಸರ, ಕೆ.ಸಿ.ಎಫ್ ಮಹಬ್ಬ ಸ್ವಾಗತ ಸಮಿತಿ ಕೋಶಾಧಿಕಾರಿ ಶುಕೂರ್ ಹಾಜಿ ಉಳ್ಳಾಲ, ಉದ್ಯಮಿಗಳಾದ ಜನಾಬ್ ಅಬುಸ್ವಾಲಿ ಹಾಜಿ, ಜನಾಬ್ ಮನ್ಸೂರ್ ಆಝದ್, ಜನಾಬ್ ಮಮ್ತಾಜ್ ಆಲಿ, ಬ್ಯಾರಿ ಕಲ್ಚರಲ್ ಫೋರಂ ಅಧ್ಯಕ್ಷ ಡಾಕ್ಟರ್ ಯೂಸುಫ್, ಜನಾಬ್ ಲತೀಫ್ ಮುಲ್ಕಿ, ಜನಾಬ್ ಇಬ್ರಾಹಿಂ ಹಾಜಿ ಗಡಿಯಾರ್, ಜನಾಬ್ ಅಬ್ದುಲ್ ಸಮದ್ ಹಾಜಿ, ಜನಾಬ್ ಜಾವೀದ್ ಹಾಜಿ, ಖಯಿರತ್ ಅಲ್ ಶಮ್ಸ್ ಕಾಂಟ್ರಾಕ್ಟ್ಯಿಂಗ್ ಕಂಪನಿ ದುಬೈ ಇದರ ಮಾಲೀಕ ಜನಾಬ್ ಆಶ್ರಫ್ ಶಾ ಮಂತೂರ್ ಉಪಸ್ಥಿತರಿದ್ದರು.



Leave a Comment: