ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಪತ್ನಿಗೆ ಊಟದಲ್ಲಿ ನಿದ್ದೆಮಾತ್ರೆ ಬೆರೆಸಿ, ಕಿಲಾಡಿ ಗಂಡ ಕೆಲಸದವಳೊಂದಿಗೆ ರಾಸಲೀಲೆ!

Posted by Vidyamaana on 2024-01-08 21:09:48 |

Share: | | | | |


ಪತ್ನಿಗೆ ಊಟದಲ್ಲಿ ನಿದ್ದೆಮಾತ್ರೆ ಬೆರೆಸಿ, ಕಿಲಾಡಿ ಗಂಡ ಕೆಲಸದವಳೊಂದಿಗೆ ರಾಸಲೀಲೆ!

ಬೆಂಗಳೂರು : ನಿತ್ಯ ಪತ್ನಿಗೆ ನಿದ್ರೆ ಮಾತ್ರೆ ಹಾಕಿ ಮಲಗಿಸಿ ಬಳಿಕ ಕೆಲಸದವಳ ಜೊತೆ ಸರಸದಲ್ಲಿ ತೊಡಗುತ್ತಿದ್ದ ಪತಿಯ ವಿರುದ್ದ ಪತ್ನಿ ಕೊಲೆಯತ್ನ ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ.ಪತಿ ಸುನೀಲ್​, ವಿರುದ್ದ ಚಂದ್ರಲೇಔಟ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.ಆರೋಪಿ ಪತಿ ವಿಪರೀತ ಬೆಟ್ಟಿಂಗ್ ಚಟಕ್ಕೆ ಬಿದ್ದು ನಿತ್ಯ ಕುಡಿದು ಬಂದು ಮನಸೋ ಇಚ್ಚೆ ಪತ್ನಿಯ ಮೇಲೆ ಹಲ್ಲೆ ಮಾಡುತ್ತಿದ್ದ ಅಷ್ಟೆ ಅಲ್ಲದೆ ಕೆಲಸದವಳೊಂದಿಗೆ ಸೇರಿ ಊಟದಲ್ಲಿ ನಿದ್ದೆ ಮಾತ್ರೆಯನ್ನು ಬೆರೆಸಿ ತಿನ್ನಿಸಿ ಮಲಗಿಸುತ್ತಿದ್ದ. ಬಳಿಕ ಕೆಲಸದವಳೊಂದಿಗೆ ರಾಸಲೀಲೆಯಲ್ಲಿ ತೊಡಗುತ್ತಿದ್ದ ಈ ದೃಶ್ಯಗಳನ್ನು ತಾನೇ ಕಣ್ಣಾರೆ ಕಂಡಿರುವುದಾಗಿ ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.ಜ.3 ರಂದು ಪತಿ ಊಟದಲ್ಲಿ ನಿದ್ದೆ ಮಾತ್ರೆ ಬೆರೆಸಿ ತಿನ್ನಿಸಿದ್ದಾರೆ. ಪ್ರಜ್ಞೆ ಬಂದು ಎದ್ದು ನೋಡಿದಾಗ ಪತಿ ಹಾಗೂ ಮನೆಕೆಲಸದವಳು ಒಂದೇ ಹಾಸಿಗೆಯಲ್ಲಿ ಅಶ್ಲೀಲವಾಗಿದ್ದನ್ನ ಕಂಡಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಪತಿ ಕೆಲಸದವಳೊಂದಿಗೆ ಸೇರಿ ಅಮಾನಷವಾಗಿ ಹಲ್ಲೆ ಮಾಡಿದ್ದಾರೆ. ಭಯದಿಂದ ಇಲ್ಲಿನ ಚಂದ್ರಾ ಲೇಔಟ್​ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಪತಿಯ ವಿರುದ್ದ ವರದಕ್ಷಿಣೆ ಕಿರುಕುಳ, ಕೊಲೆಯತ್ನ ಹಾಗು ಮನೆ ಕೆಲಸದಾಕೆ ವಿರುದ್ದ ಜೀವಬೆದರಿಕೆ ಅರಿ ಪತ್ನಿ FIR ದಾಖಲಿಸಲಾಗಿದೆ.

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ದೃಢ : FSL ತನಿಖೆ ವೇಳೆ ಬಹಿರಂಗ

Posted by Vidyamaana on 2024-03-02 09:29:59 |

Share: | | | | |


ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ದೃಢ : FSL ತನಿಖೆ ವೇಳೆ ಬಹಿರಂಗ

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘೋಷಣೆ ಕೂಗಿದ್ದು ದೃಢ ಎಂದು FSL ವರದಿಯಲ್ಲಿ ಬಹಿರಂಗವಾಗಿದೆ.ಕಳೆದ ಕೆಲವು ದಿನಗಳ ಹಿಂದೆ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವು ದಾಖಲಿಸಿದ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಹಾಕಿದ್ದರು.ನಾಸೀರ್ ಸಾಬ್ ಜಿಂದಾಬಾದ್ ಮತ್ತು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವ ಮಾಹಿತಿ ಇದೀಗ ಬಹಿರಂಗವಾಗಿದೆ ಎಂದು ಹೇಳಲಾಗುತ್ತಿದೆ.


FSL ಪರಿಶೀಲನೆ ವೇಳೆ ಆಡಿಯೋ ಮತ್ತು ವಿಡಿಯೋ ಎಡಿಟ್ ಮಾಡಿಲ್ಲ. FSL ವರದಿ ಅನ್ವಯ ಪೊಲೀಸರು ಈಗ ತನಿಖೆಯನ್ನು ಚುರುಕುಗೊಳಿಸುತ್ತಿದ್ದು, ವಶಕ್ಕೆ ಪಡೆದಿದ್ದ ಅನುಮಾನಾಸ್ಪದ ವ್ಯಕ್ತಿಗಳ ವಾಯ್ಸ್ ಗಳನ್ನು ರವಾನೆ ಮಾಡಲಾಗಿತ್ತು.ಪೊಲೀಸರ ತನಿಖೆಯ ವೇಳೆ ಅನುಮಾನಿತ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿತ್ತು.ಅನುಮಾನಿತರ ಪೈಕಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.ಎಫ್ ಎಸ್ ಎಲ್ ನಿಂದ ವಾಯ್ಸ್ ಮ್ಯಾಚ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ವಾಯ್ಸ್ ಮ್ಯಾಚ್ ಆದ ಕೂಡಲೇ ಅಧಿಕೃತವಾಗಿ ಬಂಧನ ಮಾಡಲು ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಉಪ್ಪಿನಂಗಡಿ : ಜ.13, 14 ರಂದು ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಾಹಿತ್ಯೋತ್ಸವ

Posted by Vidyamaana on 2024-01-11 20:59:54 |

Share: | | | | |


ಉಪ್ಪಿನಂಗಡಿ : ಜ.13, 14 ರಂದು ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಾಹಿತ್ಯೋತ್ಸವ

ಉಪ್ಪಿನಂಗಡಿ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಾಹಿತ್ಯೋತ್ಸವವು 2024 ಜನವರಿ 13, 14ರಂದು ಉಪ್ಪಿನಂಗಡಿಯ ಸರಳಿಕಟ್ಟೆಯ ಮಸೀದಿ ಸಭಾಂಗಣದಲ್ಲಿ ನಡೆಯಲಿದೆ. ಶಾಖೆ, ಸೆಕ್ಟರ್, ಡಿವಿಷನ್ ಸಾಹಿತ್ಯೋತ್ಸವ ಈಗಾಗಲೇ ಮುಕ್ತಾಯಗೊಂಡಿದ್ದು, ಡಿವಿಷನ್ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಸ್ಪರ್ಧಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ನಡೆಯುವ ಸಾಹಿತ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ. 5 ವೇದಿಕೆಗಳಲ್ಲಿ ಜೂನಿಯರ್, ‌ಸೀನಿಯರ್, ಜನರಲ್, ಹಾಗೂ ಕ್ಯಾಂಪಸ್ ವಿಭಾಗಗಳಲ್ಲಿ ನಡೆಯುವ ಕಲಾ ಸಾಹಿತ್ಯ ಸ್ಪರ್ಧೆಯಲ್ಲಿ 6 ಡಿವಿಷನ್ ನಿಂದ ಸುಮಾರು 900 ಸ್ಪರ್ಧಾರ್ಥಿಗಳು ತಮ್ಮ ಪ್ರತಿಭೆಯನ್ನು ಅಲಂಕರಿಸಲಿದ್ದಾರೆ ಎಂದು ಸಂಘಾಟಕರು ತಿಳಿಸಿದ್ದಾರೆ.

ವಿದ್ಯಾಮಾತಾ ಅಕಾಡೆಮಿಯ ಮುಕುಟಕ್ಕೆ ಮತ್ತೊಂದು ರಾಜ್ಯ ಪ್ರಶಸ್ತಿಯ ಗರಿ

Posted by Vidyamaana on 2024-01-22 21:36:16 |

Share: | | | | |


ವಿದ್ಯಾಮಾತಾ ಅಕಾಡೆಮಿಯ ಮುಕುಟಕ್ಕೆ ಮತ್ತೊಂದು ರಾಜ್ಯ ಪ್ರಶಸ್ತಿಯ ಗರಿ

ಪುತ್ತೂರು /ಸುಳ್ಯ :ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯತೆಗಳ ತರಬೇತಿಗಳ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಗೆ 2024ರ ಸಾಲಿನ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವತಿಯಿಂದ ಕೊಡಲ್ಪಡುವ "ರಾಜ್ಯ ಯುವ ಸಾಂಘಿಕ" ಪ್ರಶಸ್ತಿಯು ಲಭಿಸಿದೆ.

ಸವಣೂರಿನಲ್ಲಿ ನಡೆಯುತ್ತಿರುವ ಯುವಜನ ಮೇಳದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಮತ್ತು ಸುಳ್ಯ ಶಾಸಕಿ ಕುಮಾರಿ ಭಾಗೀರತಿ ಮುರುಳ್ಯ ರವರು ಪ್ರಶಸ್ತಿಯನ್ನು ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರಿಗೆ ಪ್ರಧಾನ ಮಾಡಿದರು. ಹತ್ತು ಹಲವಾರು ಪ್ರಶಸ್ತಿಗಳೊಂದಿಗೆ ಕಳೆದ 2023ರ ಸಾಲಿನ "ರಾಜ್ಯ ಶಿಕ್ಷಣ ಸೇವಾ ರತ್ನ", "ಮಂದಾರ", ಪ್ರಶಸ್ತಿಗಳೊಂದಿಗೆ ರಾಜ್ಯಮಟ್ಟದ "ರಾಜ್ಯ ಯುವ  ಸಾಂಘಿಕ" ಪ್ರಶಸ್ತಿಯನ್ನು ವಿದ್ಯಾಮಾತಾ ಅಕಾಡೆಮಿಯು ಮುಡಿಗೇರಿಸಿಕೊಂಡಿದೆ. ಕರಾವಳಿ ಭಾಗದಲ್ಲಿ 5 ವರ್ಷದಿಂದ 40 ವರ್ಷದ ವರೆಗಿನವರಿಗೆ ಉದ್ಯೋಗ ಕೌಶಲ್ಯತೆ,  ಶಿಕ್ಷಣ ಮೌಲ್ಯ, ವಿವಿಧ ನೇಮಕಾತಿಗಳಿಗೆ ತರಬೇತಿ,  ಖಾಸಗಿ ಉದ್ಯೋಗಗಳ ನೇರ ಸಂದರ್ಶನಗಳನ್ನು ಒಂದೇ ಸೂರಿನಡಿಯಲ್ಲಿ ಕೊಡುವ ಏಕೈಕ ಸಂಸ್ಥೆ ಎಂಬ ಗರಿಮೆ ವಿದ್ಯಾಮಾತಾ ಅಕಾಡೆಮಿಗೆ ಇದೆ. "ಅತ್ಯಂತ ಕಷ್ಟಪಟ್ಟು ಬೆಳೆಸಿದ ಸಂಸ್ಥೆಯನ್ನು ಸಾಮಾಜಿಕವಾಗಿ ಗುರುತಿಸುತ್ತಿರುವುದು ಅತ್ಯಂತ ಖುಷಿ ಕೊಟ್ಟಿದೆ" ಎಂದು ಭಾಗ್ಯೇಶ್ ರೈ ಅವರು ಸಂತಸವನ್ನು ಹಂಚಿಕೊಂಡಿದ್ದಾರೆ.

ಸುಳ್ಯ; ಐಸ್ ಕ್ರೀಂ ಉದ್ಯಮಿ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣ

Posted by Vidyamaana on 2023-11-09 10:19:08 |

Share: | | | | |


ಸುಳ್ಯ; ಐಸ್ ಕ್ರೀಂ ಉದ್ಯಮಿ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣ

ಸುಳ್ಯ; ಐಸ್ ಕ್ರೀಂ ಉದ್ಯಮಿ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳಿಗೆ ಬೆಂಗಳೂರಿನ ಸಿಟಿ ಏಳನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.


ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಶ್ವರ್ಯಾ ಮಾವ ಗಿರಿಯರಪ್ಪ ಗೌಡ ಕಾಪಿಲ, ಅತ್ತೆ,ಸೀತಮ್ಮ ಗಂಡ ರಾಜೇಶ್, ಮೈದುನ ವಿಜಯ್, ಮೈದುನನ ಪತ್ನಿ ತಸ್ಮಯ್ ಅವರನ್ನು ಪೊಲೀಸರು ಗೋವಾದಲ್ಲಿ ಬಂಧಿಸಿದ್ದರು. ಇನ್ನುಳಿದ ಆರೋಪಿಗಳಾದ ಐಶ್ವರ್ಯ ತಂದೆಯ ಅಕ್ಕ ಗೀತಾ, ಅವರ ಪತಿ ರವೀಂದ್ರನಾಥ ಕೇವಳ ಹಾಗೂ ಅವರ ಪುತ್ರಿ ಲಿಪಿ ಅವರು ತಲೆಮರೆಸಿಕೊಂಡಿದ್ದರು. ಇದೀಗ ಅವರಿಗೆ ನಿರೀಕ್ಷಣಾ ಜಾಮೀನು ಲಭಿಸಿದೆ.ಆರೋಪಿಗಳ ಪರವಾಗಿ ನ್ಯಾಯವಾದಿ ರಾಜೇಶ್ ಕೆ.ಎಸ್.ಎನ್. ವಾದಿಸಿದ್ದರು

ಭರ್ಜರಿ ಪ್ರಚಾರ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

Posted by Vidyamaana on 2024-04-16 11:38:03 |

Share: | | | | |


ಭರ್ಜರಿ ಪ್ರಚಾರ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಮಂಗಳೂರು: ದಕ್ಷಿಣ ಕನ್ನಡವನ್ನು ದೇಶದ ಬಲಿಷ್ಠ ಜಿಲ್ಲೆಯಾಗಿ ರೂಪಿಸಲು ಶ್ರಮಿಸುವುದಾಗಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.

ಅಡ್ಡೂರಿನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದರು.

ಜಿಲ್ಲೆಯನ್ನು ಎಲ್ಲಾ ರೀತಿಯಲ್ಲೂ ಅಭಿವೃದ್ಧಿ ಮಾಡಲು ಬೇಕಾದ ಮೂಲಸೌಕರ್ಯಗಳು ಇವೆ. ಇದರ ಜೊತೆಗೆ ಹೂಡಿಕೆ, ಉದ್ದಿಮೆಗೆ ಪ್ರೋತ್ಸಾಹ ನೀಡಿ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಪೂರಕ ವಾತಾವರಣ ನಿರ್ಮಿಸಲಾಗುವುದು. ಇದರಿಂದ ಉದ್ಯೋಗ ಸೃಷ್ಟಿಯೂ ಸಾಧ್ಯ. ಮಾತ್ರವಲ್ಲ ಎಂದರು.



Leave a Comment: