ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಸುದ್ದಿಗಳು News

Posted by vidyamaana on 2024-07-03 19:23:39 |

Share: | | | | |


ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.

 Share: | | | | |


ರಾಜ್ಯದ APL-BPL ಕುಟುಂಬಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ಆರೋಗ್ಯ ಕಾರ್ಡ್ನಡಿ ದೇಶಾದ್ಯಂತ ಚಿಕಿತ್ಸೆಗೆ ಅವಕಾಶ

Posted by Vidyamaana on 2023-12-07 08:41:00 |

Share: | | | | |


ರಾಜ್ಯದ APL-BPL ಕುಟುಂಬಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ಆರೋಗ್ಯ ಕಾರ್ಡ್ನಡಿ ದೇಶಾದ್ಯಂತ ಚಿಕಿತ್ಸೆಗೆ ಅವಕಾಶ

ಬೆಳಗಾವಿ : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಆಯುಷ್ಮಾನ್‌ ಭಾರತ್‌ ಪ್ರಧಾನಮಂತ್ರಿ ಜನಾರೋಗ್ಯ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯಡಿ ದೇಶಾದ್ಯಂತ ಚಿಕಿತ್ಸೆ ಪಡೆಯಬಹುದು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ನೀಡಿದ್ದಾರೆ.ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳಿಗೆ ಹೊಸ ರೂಪ ನೀಡಲಾಗಿದೆ. ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಹೆಸರಲ್ಲಿ ಇನ್ಮುಂದೆ ಹೆಲ್ತ್ ಕಾರ್ಡ್‌ಗಳು ರಾಜ್ಯದ ಜನಸಾಮಾನ್ಯರಿಗೆ ತಲುಪಲಿವೆ.‌


ರಾಜ್ಯದ ಬಿಪಿಎಲ್ ಕಾರ್ಡುದಾರರು ₹5 ಲಕ್ಷ ಹಾಗೂ APL ಕಾರ್ಡುದಾರರಿಗೆ ಗರಿಷ್ಠ ₹1.50 ಲಕ್ಷ ಮೌಲ್ಯದ ಚಿಕಿತ್ಸಾ ವೆಚ್ಚವನ್ನ ಸರ್ಕಾರ ಭರಿಸಲಿದೆ. ಯೋಜನೆಗೆ ಕೇಂದ್ರದಿಂದ ಶೇ. 34ರಷ್ಟು ಅನುದಾನ ದೊರೆಯಲಿದ್ದು, ರಾಜ್ಯ ಸರ್ಕಾರ ಶೇ.66ರಷ್ಟು ಅನುದಾನವನ್ನ ಒದಗಿಸಲಿದೆ. ರಾಜ್ಯದ ಆಸ್ಪತ್ರೆಗಳ ಜೊತೆಗೆ ದೇಶದ ಇತರ ರಾಜ್ಯಗಳ ಆಸ್ಪತ್ರೆಗಳಲ್ಲೂ ಹೆಚ್ಚಿನ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಕಾರಿನ ಮೇಲೆ ಮರ, ವಿದ್ಯುತ್‌ ತಂತಿ ಬಿದ್ದು ಜಖಂ..ಇಬ್ಬರಿಗೆ ಗಾಯ

Posted by Vidyamaana on 2024-05-21 21:04:10 |

Share: | | | | |


ಕಾರಿನ ಮೇಲೆ ಮರ, ವಿದ್ಯುತ್‌ ತಂತಿ ಬಿದ್ದು ಜಖಂ..ಇಬ್ಬರಿಗೆ ಗಾಯ

ವಿಟ್ಲ : ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಜಖಂಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಕುಕ್ಕರೆಬೆಟ್ಟು ಎಂಬಲ್ಲಿ ನಡೆದಿದೆ.ಘಟನೆಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ಇತರ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

ಕಾಂಗ್ರೆಸ್‌ನ ಗ್ಯಾರಂಟಿ ಸೂತ್ರ ದೇಶವನ್ನು ದಿವಾಳಿ ಮಾಡುತ್ತದೆ: ಮೋದಿ ವಾಗ್ದಾಳಿ

Posted by Vidyamaana on 2023-05-31 15:50:19 |

Share: | | | | |


ಕಾಂಗ್ರೆಸ್‌ನ ಗ್ಯಾರಂಟಿ ಸೂತ್ರ ದೇಶವನ್ನು ದಿವಾಳಿ ಮಾಡುತ್ತದೆ: ಮೋದಿ ವಾಗ್ದಾಳಿ

ನವದೆಹಲಿ :ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಉದ್ದೇಶದಿಂದ ಕಾಂಗ್ರೆಸ್‌ ಅನುಸರಿಸುತ್ತಿರುವ ಗ್ಯಾರಂಟಿ ಸೂತ್ರ ದೇಶವನ್ನು ದಿವಾಳಿ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಒಂಬತ್ತು ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯಸ್ಥಾನದಲ್ಲಿ ನಡೆದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇದೇ ತಿಂಗಳ ಆರಂಭದಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ವಿಚಾರ ಉಲ್ಲೇಖಿಸಿದರು.ಕಾಂಗ್ರೆಸ್ ಹೊಸ ಗ್ಯಾರಂಟಿ ಸೂತ್ರವನ್ನು ಅನುಸರಿಸುತ್ತಿದೆ. ಆದರೆ, ಅವರು (ಕಾಂಗ್ರೆಸ್ಸಿಗರು) ಕೊಟ್ಟ ಭರವಸೆಗಳನ್ನು ಪೂರೈಸುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ. 

ಕಾಂಗ್ರೆಸ್ ಐವತ್ತು ವರ್ಷಗಳ ಹಿಂದೆ ದೇಶದಲ್ಲಿ ಬಡತನ ನಿರ್ಮೂಲನೆ ಮಾಡಲಾಗುವುದು ಎಂದು ಭರವಸೆ ನೀಡಿತ್ತು. ಆದರೆ, ಇದು ಬಡವರಿಗೆ ಕಾಂಗ್ರೆಸ್ಸಿಗರು ಮಾಡಿದ ದೊಡ್ಡ ದ್ರೋಹ ಎಂದು ಕಿಡಿಕಾರಿದ್ದಾರೆ. 

ಬಡವರನ್ನು ದಾರಿ ತಪ್ಪಿಸುವುದು, ಅವರನ್ನು ವಂಚಿತರನ್ನಾಗಿ ಮಾಡುವುದು ಕಾಂಗ್ರೆಸ್‌ನ ನೀತಿಯಾಗಿದೆ. ಇದರಿಂದ ರಾಜಸ್ಥಾನದ ಜನರು ಸಹ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ರಾಜಸ್ಥಾನಕ್ಕೆ ಏನು ಸಿಕ್ಕಿದೆ? ಮುಖ್ಯಮಂತ್ರಿ, ಸಚಿವರು, ಶಾಸಕರು ತಮ್ಮ ತಮ್ಮಲ್ಲೇ ಜಗಳವಾಡುತ್ತಾರೆ ಎಂದು ಗುಡುಗಿದ್ದಾರೆದೇಶದಲ್ಲಿ 2014ಕ್ಕೂ ಮೊದಲು ಭ್ರಷ್ಟಾಚಾರದ ವಿರುದ್ಧ ಜನರು ಬೀದಿಗಿಳಿದಿದ್ದರು. ಪ್ರಮುಖ ನಗರಗಳಲ್ಲಿ ಭಯೋತ್ಪಾದಕ ದಾಳಿಗಳು ನಡೆದಿದ್ದವು. ಆದರೆ, ಕಾಂಗ್ರೆಸ್ ರಿಮೋಟ್ ಕಂಟ್ರೋಲ್ ಮೂಲಕ ಸರ್ಕಾರವನ್ನು ನಡೆಸುತ್ತಿತ್ತು ಎಂದು ಮೋದಿ ದೂರಿದ್ದಾರೆ.

ಕಳೆದ ಒಂಬತ್ತು ವರ್ಷಗಳಲ್ಲಿ ತಮ್ಮ ಸರ್ಕಾರವು ಜನರ ಸೇವೆ, ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣಕ್ಕಾಗಿ ಸಮರ್ಪಿತವಾಗಿದೆ ಎಂದು ಅವರು ಹೇಳಿದ್ದಾರೆ. 

ರಾಜಸ್ಥಾನ ವಿಧಾನಸಭೆಗೆ ಮುಂದಿನ ಐದು ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ಈ ವರ್ಷ ಪ್ರಧಾನಿ ಮೋದಿ ಐದು ಭಾರಿ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.

ಫೆ.27ಕ್ಕೆ ಕರ್ನಾಟಕದ 4 ಸ್ಥಾನ ಸೇರಿ 15 ರಾಜ್ಯಗಳ 56 ರಾಜ್ಯಸಭಾ ಸ್ಥಾನ ಗಳಿಗೆ ಚುನಾವಣೆ : ECI ಘೋಷಣೆ

Posted by Vidyamaana on 2024-01-29 15:46:42 |

Share: | | | | |


ಫೆ.27ಕ್ಕೆ ಕರ್ನಾಟಕದ 4 ಸ್ಥಾನ ಸೇರಿ 15 ರಾಜ್ಯಗಳ 56 ರಾಜ್ಯಸಭಾ ಸ್ಥಾನ ಗಳಿಗೆ ಚುನಾವಣೆ : ECI ಘೋಷಣೆ

ನವದೆಹಲಿ : ಇದೇ ಫೆಬ್ರವರಿ 27ರಂದು 15 ರಾಜ್ಯಗಳ 56 ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆ ನಡೆಸಲಾಗುವುದು ಎಂದು ಭಾರತದ ಚುನಾವಣಾ ಆಯೋಗ ಘೋಷಿಸಿದೆ. ನಾಮಪತ್ರ ಸಲ್ಲಿಸಲು ಫೆ.15 ಕೊನೆಯ ದಿನವಾಗಿದ್ದು, ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.ಉತ್ತರಪ್ರದೇಶದಲ್ಲಿ 10, ಬಿಹಾರ ಮತ್ತು ಮಹಾರಾಷ್ಟ್ರದಲ್ಲಿ ತಲಾ 6, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 5, ಗುಜರಾತ್ ಮತ್ತು ಕರ್ನಾಟಕದಲ್ಲಿ ತಲಾ 4, ಒಡಿಶಾ, ಆಂಧ್ರಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ 3 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.


13 ರಾಜ್ಯಗಳ 50 ರಾಜ್ಯಸಭಾ ಸಂಸದರ ಅಧಿಕಾರಾವಧಿ ಏಪ್ರಿಲ್ 2 ರಂದು ಕೊನೆಗೊಳ್ಳಲಿದ್ದು, ಎರಡು ರಾಜ್ಯಗಳ ಉಳಿದ ಆರು ಸದಸ್ಯರ ಅಧಿಕಾರಾವಧಿ ಏಪ್ರಿಲ್ 3 ರಂದು ಪೂರ್ಣಗೊಳ್ಳಲಿದೆ.

ನವವಿವಾಹಿತೆ ಹರ್ಷಿತಾ ಆತ್ಮಹತ್ಯೆ

Posted by Vidyamaana on 2023-04-25 16:39:04 |

Share: | | | | |


ನವವಿವಾಹಿತೆ ಹರ್ಷಿತಾ ಆತ್ಮಹತ್ಯೆ

ಪುತ್ತೂರು: ನವವಿವಾಹಿತೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ಕೆದಿಲದಲ್ಲಿ ನಡೆದಿದೆ.

ಕೆಮ್ಮಿಂಜೆ ನಿವಾಸಿ ಪ್ರಶಾಂತ್ ಎಂಬವರ ಪತ್ನಿ ಹರ್ಷಿತಾ (28)ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.

ಕಳೆದ 2 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬುಳೇರಿಕಟ್ಟೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

Posted by Vidyamaana on 2023-05-01 10:40:09 |

Share: | | | | |


ಬುಳೇರಿಕಟ್ಟೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಬೆಲೆ ಏರಿಕೆಯ ಮೂಲಕ ಬಡವರ ಬದುಕನ್ನು ಮೂರಾಬಟ್ಟೆ ಮಾಡಿದ ಬಿಜೆಪಿ ಸರಕಾರ . ಈ ಪಕ್ಷದ ಕಾರ್ಯಕರ್ತರು ,ಮುಖಂಡರು ಬಡವರ ಮನೆಗೆ ಯಾವ ಮುಖ ಹೊತ್ತು ವೋಟು ಬಡವರ ಮನೆಗೆ ವೋಟು ಕೇಳಲು ಹೋಗುತ್ತಾರೆ ಎಂದು ವಿಟ್ಲ -ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ರಾಜಾರಾಂ ಕೆ ಬಿ ಹೇಳಿದರು.

ಬುಳೇರಿಕಟ್ಟೆಯಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಇದೆ. ದೇಶದಲ್ಲಿ‌ಅಚ್ಚೇದಿನ್ ಕೊಡುವುದಾಗಿ ಹೇಳಿದವರು ಬಡವರ ಅನ್ನಕ್ಕೂ ಕಲ್ಲು ಹಾಕುವ ಕೆಲಸವನ್ನು ಮಾಡಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆ,ಇಂಧನ, ಅಡುಗೆ ಅನಿಲ ಬೆಲೆ ಏರಿಕೆ ಇವೆಲ್ಲವೂ ಜನರನ್ನು ಕಂಗೆಡಿಸಿದೆ. ಬೆಲೆ ಏರಿಕೆಯಿಂದ ನಾಳೆ ಏನಾಗುತ್ತದೋ ಎಂಬ ಭಯ ಜನರಲ್ಲಿ ನಿತ್ಯವೂ ಇದೆ ಎಂದು ಹೇಳಿದರು. 

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದರೆ ಎಲ್ಲಾ‌ಸಮಸ್ಯೆಗಳಿಗೆ ಪರಿಹಾರವಾಗಲಿದೆ. ಬಡವರು ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ಕಾಂಗ್ರೆಸ್ ಜನ ಸ್ನೇಹಿ ಪ್ರಣಾಳಿಕೆಯನ್ನು ಜಾರಿ‌ಮಾಡಿದೆ. ಪುತ್ತೂರಿನಲ್ಲಿ ಅಶೋಕ್ ರೈ ಯವರನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ‌ಮುಂದೆ ಬರುವ ಕಾಂಗ್ರೆಸ್ ಸರಕಾರಕ್ಕೆ ಬಲ‌ಕೊಡುವ ಕೆಲಸವನ್ನು ಮಾಡಬೇಕು. ಪ್ರತೀ ಬೂತ್ ನಲ್ಲೂ ಟಾರ್ಗೆಟ್ ವೋಟು ಎಂಬ ಆಲೋಚನೆಯನ್ನು ಇಟ್ಟುಕೊಂಡು ಹೆಚ್ಚಿನ‌ಮತಗಳು ಈ ಭಾಗದಿಂದ ಕಾಂಗ್ರೆಸ್ ಗೆ ಬೀಳುವಂತೆ  ನಾವು ಕಾರ್ಯಪೃವೃತ್ತರಾಗಬೇಕು ಎಂದು‌ಹೇಳಿದರು.

ಸೈಲೆಂಟ್ ವೋಟು ಕಾಂಗ್ರೆಸ್ ಪಾಲಾಗುವಂತೆ ಪ್ರತೀಯೊಬ್ಬ ಕಾರ್ಯಕರ್ತರು ಒಟ್ಟುಗೂಡಿ ಕೆಲಸ ಮಾಡಬೇಕು. ಬಿಜೆಪಿ ಕಾರ್ಯಕರ್ತರನ್ನು ಪಕ್ಷಕ್ಕೆ ಸೆಳೆಯಬೇಕು ಎಂದು ಅಭ್ಯರ್ಥಿ ಅಶೋಕ್ ರೈ ಹೇಳಿದರು.

ಅಕ್ರನಸಕ್ರಮದಲ್ಲಿ ಪುತ್ತೂರಿನ ಶಾಸಕರು ಭೃಷ್ಟಾಚಾರ ಮಾಡಿದ್ದು ಅದು ಅವರ ದೊಡ್ಡ ಸಾಧನೆಯಾಗಿದೆ. ಯಾರು ಲಕ್ಷಾಂತರ ರೂ ಕೊಟ್ಟಿದ್ದಾರೋ ಅವರಿಗೆಲ್ಲಾ ಅಕ್ರಮ ಸಕ್ರಮ ಮಾಡಿಕೊಡಲಾಗಿದೆ. ನಾನು ಶಾಸಕನಾದರೆ ರಾಜಧರ್ಮ ಪಾಲನೆ ಮಾಡಲಿದ್ದೇನೆ. ಬಿಜೆಪಿಯವರು ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡು ಪಕ್ಷಕ್ಕೆ ಬಲ ಕೊಡುವ ಕೆಲಸವನ್ನು ಮಾಡುವಂತೆ ಮನವಿ ಮಾಡಿದರು. ಯಾವುದೇ ತಾರತಮ್ಯ ಮಾಡದೆ ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸವನ್ನು‌ ಮಾಡಿತೋರಿಸುತ್ತೇನೆ ಎಂದು ಹೇಳಿದರು. ಅಭಿವೃದ್ದಿಯಾಗಬೇಕಾದರೆ ಶಾಂತಿ,ಸೌಹಾರ್ಧತೆ ಮುಖ್ಯ. ಪುತ್ತೂರಿನಲ್ಲಿ ಎಲ್ಲಾ ಧರ್ಮದ ಜನರೂ ಒಂದೇ ತಾಯಿ‌ಮಕ್ಕಳಂತೆ ಬದುಕುವ ವಾತಾವರಣ ಸೃಷ್ಟಿಯಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಪ್ರವೀಣ್ ಚಂದ್ರ ಳ್ವ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.



Leave a Comment: