ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಸುದ್ದಿಗಳು News

Posted by vidyamaana on 2024-07-03 11:16:18 |

Share: | | | | |


ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು.

ವಿಶ್ವ ಹಿಂದೂ ಪರಿದ್ ನ ಜಿಲ್ಲಾ ಉಪಾಧ್ಯಕ್ಷ ಸತೀಶ್ ಬಿ.ಎಸ್., ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸೇವಾ ಪ್ರಮುಖ್ ಸೀತಾರಾಮ ಭಟ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

 Share: | | | | |


ಅಡಕೆ ಬೆಳೆಗಾರರಿಗೆ ಶಾಕ್ : ಶ್ರೀಲಂಕಾದಿಂದ 5 ಲಕ್ಷ ಟನ್‌ ಆಮದಿಗೆ ಕಂಪನಿ ಒಪ್ಪಂದ

Posted by Vidyamaana on 2024-03-09 14:40:53 |

Share: | | | | |


ಅಡಕೆ ಬೆಳೆಗಾರರಿಗೆ ಶಾಕ್ : ಶ್ರೀಲಂಕಾದಿಂದ 5 ಲಕ್ಷ ಟನ್‌ ಆಮದಿಗೆ ಕಂಪನಿ ಒಪ್ಪಂದ

ನವದೆಹಲಿ: ಅಡಕೆ ಮಾರಾಟ ಹಂಗಾಮು ಆರಂಭವಾಗಿರುವ ಸಂದರ್ಭದಲ್ಲೇ ಶ್ರೀಲಂಕಾದಿಂದ ಭರ್ಜರಿ 5 ಲಕ್ಷ ಟನ್‌ ಅಡಕೆಯನ್ನು ಆಮದು ಮಾಡಿಕೊಳ್ಳಲು ಕಂಪನಿಯೊಂದು ಮುಂದಾಗಿದೆ. ಇದರಿಂದಾಗಿ ಅಡಕೆ ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಶ್ರೀಲಂಕಾದಿಂದ ಅಡಕೆ ಆಮದು ಸಂಬಂಧ ಬ್ರಿಟನ್‌ ಮೂಲದ ಎಸ್‌ರಾಂ ಅಂಡ್‌ ಎಂರಾಂ ಗ್ರೂಪ್‌ ಒಪ್ಪಂದ ಮಾಡಿಕೊಂಡಿದೆ.ಶ್ರೀಲಂಕಾ ಮೂಲದ ವ್ಯಾಪಾರಿ ಸಂಸ್ಥೆ ಪ್ರೈಮ್‌ ಸ್ಟಾರ್ ಪ್ರೈವೇಟ್‌ ಲಿಮಿಟೆಡ್‌ ಜತೆ ಅಡಕೆ ಆಮದು ಒಪ್ಪಂದ ಮಾಡಿಕೊಂಡಿರುವುದಾಗಿ ಎಸ್‌ರಾಂ ಅಂಡ್‌ ಎಂರಾಂ ಗ್ರೂಪ್‌ ಶುಕ್ರವಾರ ತಿಳಿಸಿದೆ.


2022ರ ಏಪ್ರಿಲ್‌-ಡಿಸೆಂಬರ್‌ ಅವಧಿಯಲ್ಲಿ ಭಾರತ 53.71 ಕೋಟಿ ರು. ಮೌಲ್ಯದ ಅಡಕೆ ಆಮದು ಮಾಡಿಕೊಂಡಿತ್ತು. ಆದರೆ 2023ರ ಏಪ್ರಿಲ್‌-ಡಿಸೆಂಬರ್‌ ಅವಧಿಯಲ್ಲಿ ಇದು 4.04 ಕೋಟಿ ರು.ಗೆ ಕುಸಿದಿತ್ತು. ಇದೀಗ ಲಂಕಾದಿಂದ ಭಾರಿ ಪ್ರಮಾಣದಲ್ಲಿ ಆಮದಿಗೆ ಬ್ರಿಟನ್‌ ಕಂಪನಿ ಮುಂದಾಗಿರುವುದರಿಂದ ಸಹಜವಾಗಿಯೇ ಅಡಕೆ ಬೆಳೆಗಾರರುಕಂಗಾಲಾಗುವಂತಾಗಿದೆ. ದೇಶದಲ್ಲಿ ಅಡಕೆ ಸಾಂಸ್ಕೃತಿಕ ಮಹತ್ವ ಹೊಂದಿದ್ದು, ದೇಶದ ಹಲವು ಸಂಪ್ರದಾಯ ಹಾಗೂ ಸಮಾರಂಭಗಳಲ್ಲಿ ಇದನ್ನು ವ್ಯಾಪಕವಾಗಿ ಬಳಸಲಾಗುತ್ತದೆ..ಇಂಡೋನೇಷ್ಯಾ, ಬಾಂಗ್ಲಾದೇಶ ಹಾಗೂ ಶ್ರೀಲಂಕಾದಿಂದ ಭಾರತ ಅಡಕೆ ಆಮದು ಮಾಡಿಕೊಳ್ಳುತ್ತದೆ. ಗುಣಮಟ್ಟ ಕಾಯ್ದುಕೊಳ್ಳುವ ಸಲುವಾಗಿ ಕೇಜಿಗೆ 351 ರು.ಗಿಂತ ಕಡಿಮೆ ಇಲ್ಲದ ಅಡಕೆ (ಸುಪಾರಿ) ಆಮದಿಗೆ ಮಾತ್ರವೇ ಅವಕಾಶವಿದೆ ಎಂದುದು ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯ ತಿಳಿಸಿದೆ.

ಚೈತ್ರಾ ಕುಂದಾಪುರ ಅರೆಸ್ಟ್ ಬೆನ್ನಲ್ಲೇ ಅಭಿನವ ಹಾಲಶ್ರೀ ಎಸ್ಕೇಪ್!

Posted by Vidyamaana on 2023-09-13 15:58:40 |

Share: | | | | |


ಚೈತ್ರಾ ಕುಂದಾಪುರ ಅರೆಸ್ಟ್ ಬೆನ್ನಲ್ಲೇ ಅಭಿನವ ಹಾಲಶ್ರೀ ಎಸ್ಕೇಪ್!

ವಿಜಯನಗರ: ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 7 ಕೋಟಿ ರುಪಾಯಿ ವಂಚಿಸಿರುವ ಆರೋಪದ ಮೇರೆಗೆ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರಾಳನ್ನು ಮಂಗಳವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ಚೈತ್ರಾ ಜೊತೆಗೆ ಪ್ರಸಾದ್, ಗಗನ್ ಕಡೂರು, ಪ್ರಜ್ವಲ್ ಶೆಟ್ಟಿ ಆರ್ ಎಸ್ ಧನರಾಜ್, ರಮೇಶ್, ಶ್ರೀಕಾಂತ್ ನನ್ನೂ ಕೂಡಾ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.



ಸ್ವಾಮೀಜಿಯೊಬ್ಬರ ಹೆಸರು ಕೇಳಿಬಂದಿದೆ. ಹಗಡಲಿ ತಾಲೂಕಿನ ಹಿರೇಹಡಗಲಿ ಹಾಲು ಮಠದ ಅಭಿನವ ಹಾಲಶ್ರೀ ಆರೋಪಿಯಾಗಿದ್ದು, ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಹಾಲಶ್ರೀ ಯಾರ ಕೈಗೂ ಸಿಗದೇ ಅಜ್ಞಾತ ಸ್ಥಳಕ್ಕೆ ತರಳಿದ್ದಾರೆ.



ಉದ್ಯಮಿ ಗೋವಿಂದ್ ಬಾಬು ಕಡೆದಿಂದ ಕೋಟ್ಯಂತರ ರೂಪಾಯಿ ಪಡೆದು ವಂಚನೆ ಕೇಸ್ ನಲ್ಲಿ ಮೂರು ಆರೋಪಿಗಳ ಬಂಧನವಾಗುತ್ತಿದ್ದಂತೆಯೇ 3ನೇ ಆರೋಪಿಯಾಗಿರುವ ಹಿರೇಹಡಗಲಿ ಹಾಲ ಮಠದ ಅಭಿನವ ಹಾಲಶ್ರೀ ನಾಪತ್ತೆಯಾಗಿದ್ದಾರೆ. ಹಾಲ ಮಠಕ್ಕೂ ಬಾರದೇ, ಯಾರ ಸಂಪರ್ಕಕ್ಕೂ ಸಿಗದ ಅಜ್ಞಾತ ಸ್ಥಳಕ್ಕೆ ತರಳಿದ್ದಾರೆ. ಇನ್ನು ಬೆಳಗಿನಿಂದ ಹಾಲಶ್ರೀ ಮೊಬೈಲ್ ಸ್ವೀಚ್ ಆಫ್ ಆಗಿದೆ.

ಕರಾವಳಿಯ ಸಾರಿಗೆ ಕ್ಷೇತ್ರದಲ್ಲಿ 50 ವರ್ಷಗಳ ಬಸ್ ಸಂಚಾರ ಸೇವೆಯ ಸಾಧನೆ

Posted by Vidyamaana on 2023-10-01 21:28:45 |

Share: | | | | |


ಕರಾವಳಿಯ ಸಾರಿಗೆ ಕ್ಷೇತ್ರದಲ್ಲಿ 50 ವರ್ಷಗಳ ಬಸ್ ಸಂಚಾರ ಸೇವೆಯ ಸಾಧನೆ

ಮಂಗಳೂರು, ಅ.1: ಮಂಗಳೂರಿನಲ್ಲಿ ಮಹೇಶ್ ಬಸ್ ಟ್ರಾವೆಲ್ಸ್ ಉದ್ಯಮದ ಮೂಲಕ ಹೆಸರು ಮಾಡಿದ್ದ ಪ್ರಕಾಶ್ ಶೇಖ (43) ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 


50 ವರ್ಷಗಳ ಹಿಂದೆಯೇ 1972ರ ವೇಳೆಗೆ ಜಯರಾಮ ಶೇಖ ಅವರು ಮಹೇಶ್ ಬಸ್ ಟ್ರಾವೆಲ್ಸ್ ಉದ್ಯಮ ಆರಂಭಿಸಿದ್ದರು. ಮೊದಲಿಗೆ ಜ್ಯೋತಿ ಎಂದಿದ್ದ ಹೆಸರನ್ನು ಬಳಿಕ ಎರಡನೇ ಮಗ ಮಹೇಶ್ ಹೆಸರಿಗೆ ಬದಲಿಸಿದ್ದರು.‌  ಆರಂಭದಿಂದಲೇ ಮಂಗಳೂರಿನಿಂದ ಕೊಣಾಜೆ ರೂಟಿನಲ್ಲಿ ಬಸ್ ಉದ್ಯಮ ಆರಂಭಿಸಿದ್ದರು. ಆನಂತರ ಇತರ ರೂಟಿನಲ್ಲೂ ಮಹೇಶ್ ಬಸ್ ಸಂಚಾರ ಆರಂಭಿಸಿತ್ತು. ಮೂರನೇ ಮಗ ಪ್ರಕಾಶ್ ಶೇಖ ಉದ್ಯಮದಲ್ಲಿ ತೊಡಗಿಸಿಕೊಂಡ ಬಳಿಕ ವ್ಯವಹಾರ ವಿಸ್ತರಣೆಯಾಗಿತ್ತು.‌


ಕಳೆದ 15 ವರ್ಷಗಳಲ್ಲಿ ಮಹೇಶ್ ಹೆಸರಲ್ಲಿ ಟೂರಿಸ್ಟ್ ಉದ್ಯಮ, ಟಿಪ್ಪರ್, ಸಿಮೆಂಟ್ ಮಿಕ್ಸರ್ ಲಾರಿ ಹೀಗೆ ಹಲವಾರು ವ್ಯವಹಾರ ಮಾಡಿಕೊಂಡಿದ್ದರು. ಹಿರಿಯ ಪುತ್ರರಿಬ್ಬರು ಬೆಂಗಳೂರು, ಮುಂಬೈನಲ್ಲಿ ನೆಲೆಸಿದ ಬಳಿಕ ಪೂರ್ತಿ ಬಸ್ ಉದ್ಯಮದ ವ್ಯವಹಾರವನ್ನು ಪ್ರಕಾಶ್ ಅವರೇ ನೋಡಿಕೊಂಡಿದ್ದರು. ಆಪ್ತರ ಪ್ರಕಾರ, ನೂರಕ್ಕೂ ಹೆಚ್ಚು ಬಸ್ ಗಳು ಅವರ ಒಡೆತನದಲ್ಲಿದ್ದವು. ಹಲವಾರು ಬಸ್ ಗಳನ್ನು ಬೇರೆ ಬೇರೆ ಕಡೆ ಖಾಸಗಿಯಾಗಿ ಕಾಂಟ್ರಾಕ್ಟ್ ಕೊಟ್ಟಿದ್ದರು. ಪ್ರಕಾಶ್ ಅವರು ಪತ್ನಿ ಮಕ್ಕಳ ಜೊತೆಗೆ ಕದ್ರಿಯ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿದ್ದರು. 80ರ ಹರೆಯದ ಜಯರಾಮ ಶೇಖ ಕುಲಶೇಖರದ ನಿವಾಸದಲ್ಲಿಯೇ ನೆಲೆಸಿದ್ದಾರೆ. 


ಇಂದು ಬೆಳಗ್ಗೆ ಹೊರಗೆ ಹೋಗಿ ಬಂದಿದ್ದ ಪ್ರಕಾಶ್ ಮತ್ತೆ ಬೆಡ್ ರೂಮಿಗೆ ತೆರಳಿದ್ದರು. ಮಧ್ಯಾಹ್ನ ನೋಡಿದರೆ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ ಎನ್ನುವ ಮಾಹಿತಿ ಇದೆ. ಈ ಬಗ್ಗೆ ಪತ್ನಿ ಕದ್ರಿ ಠಾಣೆಗೆ ದೂರು ನೀಡಿದ್ದಾರೆ. ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ.

ಬಸ್ ಮಾಲಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಜೀಜ್ ಪರ್ತಿಪ್ಪಾಡಿ ಪ್ರತಿಕ್ರಿಯಿಸಿ, ಪ್ರಕಾಶ್ ತುಂಬ ಒಳ್ಳೆಯ ವ್ಯಕ್ತಿಯಾಗಿದ್ದರು. ಅವರ ತಂದೆಯ ಕಾಲದಿಂದಲೂ ಒಡನಾಟ ಇದೆ. ಜಿಲ್ಲಾ ಬಸ್ ಮಾಲಕರ ಸಂಘ ಗಾಢ ಶೋಕ ವ್ಯಕ್ತಪಡಿಸುತ್ತದೆ ಎಂದಿದ್ದಾರೆ


ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್‌, ಮಾಜಿ ಅಧ್ಯಕ್ಷರಾದ ಜಯಶೀಲ ಅಡ್ಯಂತಾಯ, ದಿಲ್‌ರಾಜ್‌ ಆಳ್ವ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.


ಅಂತ್ಯಕ್ರಿಯೆ ಅ.2ರಂದು ಸಂಜೆ 4ಕ್ಕೆ ಕುಲಶೇಖರದಲ್ಲಿರುವ ಅವರ ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪಾದಸ್ವಾಮಿ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆ

Posted by Vidyamaana on 2024-04-12 14:41:18 |

Share: | | | | |


ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪಾದಸ್ವಾಮಿ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆ

ಮೈಸೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪಾದಸ್ವಾಮಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಇಂದು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಅವರಿಂದ ಬೃಹತ್ ಪಾದಯಾತ್ರೆ ಮತಯಾಚನೆ.

Posted by Vidyamaana on 2023-05-08 02:58:56 |

Share: | | | | |


ಇಂದು  ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಅವರಿಂದ ಬೃಹತ್ ಪಾದಯಾತ್ರೆ ಮತಯಾಚನೆ.

ಉಪ್ಪಿನಂಗಡಿ : ಕಾರ್ಯಕರ್ತರೊಂದಿಗೆ ಉಪ್ಪಿನಂಗಡಿ ಬಸ್ಸು ನಿಲ್ದಾಣದಿಂದ ಗಾಂದೀ ಪಾರ್ಕ್ ವರೆಗೆ  ಮೇ 08 ಸೊಮವಾರ ಮಧ್ಯಾಹ್ನ 12-30  ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅಶೋಕ್ ರೈ ಯವರಿಂದ  ಬೃಹತ್ ಪಾದಯಾತ್ರೆ  ನಡೆಯಲಿದೆ.

   ಈ ಪಾದಯಾತ್ರೆಯಲ್ಲಿ  ಮಾಜಿ ಶಾಸಕಿ ಶಕುಂತಲಾ ಶೆಟ್ಟಿ,ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ   ಡಾ.ರಾಜರಾಂ ಕೆ.ಬಿ. 

ಎಂ.ಎಸ್ ಮಹಮ್ಮದ್,ರಾಜ್ಯ ಹಾಗೂ ಜಿಲ್ಲಾ ಮಟ್ಟದ ನಾಯಕರು ಗಳು ಭಾಗವಹಿಸಲಿದ್ದಾರೆ ಹಾಗೂಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ರೋಡ್ ಶೋದಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಉಪ್ಪಿನಂಗಡಿಯಲ್ಲಿ ಇಂದು ಶಾಸಕರ ಅಧ್ಯಕ್ಷತೆಯಲ್ಲಿ ಪ್ರಾಕೃತಿಕ ವಿಕೋಪ ತಡೆ ಸಭೆ

Posted by Vidyamaana on 2023-06-06 07:41:54 |

Share: | | | | |


ಉಪ್ಪಿನಂಗಡಿಯಲ್ಲಿ ಇಂದು ಶಾಸಕರ ಅಧ್ಯಕ್ಷತೆಯಲ್ಲಿ ಪ್ರಾಕೃತಿಕ ವಿಕೋಪ ತಡೆ ಸಭೆ

ಪುತ್ತೂರು: ಪ್ರಾಕೃತಿಕ ವಿಕೋಪದಿಂದಾಗುವ ಹಾನಿಯನ್ನು ತಡೆಗಟ್ಟುವ ಸಲುವಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಜೂನ್ 6ರಂದು ಮಧ್ಯಾಹ್ನ 3.30ಕ್ಕೆ ಪೂರ್ವಭಾವಿ ಸಭೆ ನಡೆಯಲಿದೆ.



Leave a Comment: