ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಗುಜರಾತ್‌ : ಆರ್ಥಿಕ ಸಮಸ್ಯೆ ಸಾಮೂಹಿಕ ಆತ್ಮಹತ್ಯೆ

Posted by Vidyamaana on 2023-10-28 20:16:31 |

Share: | | | | |


ಗುಜರಾತ್‌ : ಆರ್ಥಿಕ ಸಮಸ್ಯೆ ಸಾಮೂಹಿಕ ಆತ್ಮಹತ್ಯೆ

ಸೂರತ್, ಅ 28: ಮೂವರು‌ ‌ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಶವವಾಗಿ ಪತ್ತೆಯಾಗಿರುವ ಘಟನೆ ಗುಜರಾತ್‌ ನ ಸೂರತ್‌ನಲ್ಲಿ ಶನಿವಾರ ನಡೆದಿದೆ.


ಸೂರತ್‌ನ ಪಾಲನ್‌ಪುರ ಜಕತ್ನಾಕ್ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಹೇಳಿದ್ದಾರೆ.


6 ಮಂದಿ ವಿಷ ಸೇವಿಸಿ ಪ್ರಾಣ ಕಳೆದುಕೊಂಡಿದ್ದು, ಒಬ್ಬರು ನೇಣುಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆಂದು ಪೊಲೀಸರು ಹೇಳಿದ್ದಾರೆ.


ಮನೀಶ್ ಸೋಲಂಕಿ, ಅವರ ಪತ್ನಿ ರೀಟಾ, ಅವರ ತಂದೆ ಕಾನು, ಅವರ ತಾಯಿ ಶೋಭಾ ಮತ್ತು ಮೂವರು ಮಕ್ಕಳಾದ ದಿಶಾ, ಕಾವ್ಯ ಮತ್ತು ಕುಶಾಲ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.


ಕುಟುಂಬವು ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿತ್ತು ಎಂದು ಬರೆದಿರುವ ಪತ್ರವನ್ನು ಪೊಲೀಸರು ಘಟಾನ ಸ್ಥಳದಿಂದ ವಶಕ್ಕೆ ಪಡೆದುಕೊಂಡಿದ್ದಾರೆ.


ಆರ್ಥಿಕ ಸಮಸ್ಯೆಯಿಂದಲೇ ಈ ಹೆಜ್ಜೆಯನ್ನಿಟ್ಟಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆ ಹಿಂದಿನ ನಿಖರ ಕಾರಣ ತನಿಖೆ ಬಳಿಕವಷ್ಟೇ ತಿಳಿದು ಬರಬೇಕಿದೆ.


ಫರ್ನಿಚರ್‌ ವ್ಯವಹಾರವನ್ನು ಮಾಡುತ್ತಿದ್ದ ಮನೀಶ್ ಸೋಲಂಕಿ ಅವರಿಗೆ ಶನಿವಾರ ಮುಂಜಾನೆ ಕೆಲಸಗಾರರು ಕರೆ ಮಾಡಿದ್ದಾರೆ. ಆದರೆ ಕರೆ ಸ್ವೀಕರಿಸದಿದ್ದಾಗ ಮನೆಯ ಬಳಿಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.


ಮಧ್ಯರಾತ್ರಿಯೇ ಕುಟುಂಬದ ಎಲ್ಲರಿಗೂ ವಿಷ ನೀಡಿ ಮನೀಶ್ ನೇಣು ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವರದಿ ಬಂದ ಬಳಿಕ ಅವರ ಸಾವಿನ ಸಮಯ ಹಾಗೂ ಕಾರಣಗಳು ಸ್ಪಷ್ಟವಾಗಲಿದೆ

PSI ನೇಮಕಾತಿ ಹಗರಣದ ಬೆನ್ನಲ್ಲೇ ಕಾನ್ಸ್ ಟೇಬಲ್ ಪರೀಕ್ಷೆಯಲ್ಲೂ ಅಕ್ರಮ : ನಾಲ್ವರು ಸಿಸಿಬಿ ವಶಕ್ಕೆ

Posted by Vidyamaana on 2023-09-11 09:47:24 |

Share: | | | | |


PSI ನೇಮಕಾತಿ ಹಗರಣದ ಬೆನ್ನಲ್ಲೇ ಕಾನ್ಸ್ ಟೇಬಲ್ ಪರೀಕ್ಷೆಯಲ್ಲೂ ಅಕ್ರಮ : ನಾಲ್ವರು ಸಿಸಿಬಿ ವಶಕ್ಕೆ

ಬೆಂಗಳೂರು : ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು. ಈ ಬೆನ್ನಲ್ಲೇ ಸಶಸ್ತ್ರಮೀಸಲು ಪೊಲೀಸ್ ಪಡೆಯ ) ಕಾನ್ ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯಲ್ಲೂ ಅಕ್ರಮ ಎಸಗಲಾಗಿದೆ ಎಂಬ ಆರೋಪ ಕೇಳಿಬಂದಿದೆ.ಅಕ್ರಮ ಎಸಗಲು ಕೆಲ ಅಭ್ಯರ್ಥಿಗಳನ್ನು ಸಂಪರ್ಕಿಸಿದ್ದ ಆರೋಪದಡಿ ನಾಲ್ವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕೊಪ್ಪಳ ಜಿಲ್ಲೆ ಕುಷ್ಠಗಿ ಮೂಲದ ಬಸವರಾಜ್, ದಿಲೀಪ್, ತಿಮ್ಮೇಗೌಡ ಮತ್ತು ತುಮಕೂರು ಚಿಕ್ಕನಾಯಕನಹಳ್ಳಿ ಮೂಲದ ಹರಿಪ್ರಸಾದ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.ಪರೀಕ್ಷೆಗೆ ಒಂದು ದಿನ ಮುನ್ನ ಆರೋಪಿಗಳು ಅಭ್ಯರ್ಥಿಗಳನ್ನ ಒಂದೆಡೆ ಸೇರಲು ಹೇಳಿದ್ದರು. ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆ ನೀಡಲು ಏಜೆಂಟರು ತಯಾರಾಗಿದ್ದರು. ಇದೀಗ ಸಿಸಿಬಿ ಅಧಿಕಾರಿಗಳು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಲು ಮುಂದಾಗಿದ್ದ ನಾಲ್ವರು ಏಜೆಂಟ್​​ಗಳನ್ನ ಬಂಧಿಸಿದ್ದಾರೆ


ಈ ಆರೋಪಿಗಳು 2018ರಲ್ಲಿ ನಡೆದಿದ್ದ ಕಾನ್ ಸ್ಟೇಬಲ್ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿದ್ದರು. ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿತ್ತು, ನಂತರ ಜಾಮೀನು ಪಡೆದು ಬಿಡುಗಡೆಗೊಂಡಿದ್ದರು. ಬಳಿಕ ಭಾನುವಾರ ರಾಜ್ಯದಲ್ಲಿ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗುವ ಸಂಬಂಧ ಆರೋಪಿಗಳು ಕೆಲದಿನಗಳ ಹಿಂದೆ ಕೆಲ ಅಭ್ಯರ್ಥಿಗಳನ್ನು ಸಂಪರ್ಕಿಸಿದ್ದರು ಎನ್ನಲಾಗಿದೆ

ಬೆಳ್ತಂಗಡಿ ಪಟಾಕಿ ಘಟಕದಲ್ಲಿ ಸ್ಫೋಟ ಪ್ರಕರಣ

Posted by Vidyamaana on 2024-01-29 09:52:17 |

Share: | | | | |


ಬೆಳ್ತಂಗಡಿ ಪಟಾಕಿ ಘಟಕದಲ್ಲಿ ಸ್ಫೋಟ ಪ್ರಕರಣ

ಬೆಳ್ತಂಗಡಿ : ಪಟಾಕಿ ಗೋಡೌನ್ ನಲ್ಲಿ ಪಟಾಕಿ ತಯಾರಿಕೆ ವೇಳೆ ಜ.28 ರಂದು ಸಂಜೆ ಸ್ಟೋಟ ನಡೆದಿದ್ದು. ಈ ವೇಳೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ‌.


ಘಟನೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡದ ದೂರಿನ ಮೇಲೆ ಮಾಲೀಕ ಬಶೀರ್‌  ಮೇಲೆ ಎಫ್ಐಆರ್ ದಾಖಲಾಗಿದೆ‌.


ಪ್ರಕರಣ ಸಂಬಂಧ ಜಾಗ ಹಾಗೂ ಪಟಾಕಿ ತಯಾರಿಕಾ ಮಾಲೀಕ ಸೈಯದ್ ಬಶೀರ್ ಘಟನೆ ಬಳಿಕ ವೇಣೂರಿನಿಂದ ಪರಾರಿಯಾಗಿದ್ದಾಗ ಖಚಿತ ಮಾಹಿತಿ ಮೇರೆ ಸುಳ್ಯದಲ್ಲಿ ವಶಕ್ಕೆ ಪಡೆದುಕೊಂಡು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.



ಪುತ್ತೂರು : ಟಿಪ್ಪರ್-ಬೈಕ್ ನಡುವೆ ಡಿಕ್ಕಿ : ದ್ವಿಚಕ್ರ ವಾಹನ ಸವಾರ ಮುಕ್ವೆ ನಿವಾಸಿ ಸಫ್ಘಾನ್‌ ಗಂಭೀರ

Posted by Vidyamaana on 2024-02-21 18:08:47 |

Share: | | | | |


ಪುತ್ತೂರು : ಟಿಪ್ಪರ್-ಬೈಕ್ ನಡುವೆ ಡಿಕ್ಕಿ : ದ್ವಿಚಕ್ರ ವಾಹನ ಸವಾರ ಮುಕ್ವೆ ನಿವಾಸಿ ಸಫ್ಘಾನ್‌ ಗಂಭೀರ

ಪುತ್ತೂರು : ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕಲ್ಲರ್ಪೆ ಸಮೀಪ ನಡೆದ ಬಗ್ಗೆ ವರದಿಯಾಗಿದೆ.

ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಮುಕ್ವೆ ನಿವಾಸಿ   ಅಬ್ದುಲ್ಲಾ ರವರ ಮಗ ಸಫ್ಫಾನ್   ಗಂಭೀರ ಗಾಯಗೊಂಡಿದ್ದು, ಪುತ್ತೂರು ಖಾಸಗಿ ಕರೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.


ಘಟನೆಯಿಂದಾಗಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಇನ್ನೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದೆ ಎನ್ನಲಾಗಿದೆ.

ಪುತ್ತೂರು : ಇಂದು (ಜು 13) ತಾಲೂಕಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ

Posted by Vidyamaana on 2023-07-12 23:15:01 |

Share: | | | | |


ಪುತ್ತೂರು : ಇಂದು (ಜು 13) ತಾಲೂಕಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಮತ್ತೂರ ವಿದ್ಯುತ್‌ ಕೇಂದ್ರದಿಂದ ರಾಮಕುಂಜ ಫೀಡರ್‌ನಲ್ಲಿ ಮತ್ತು 33/11 ಕೆವಿ ಕ್ಯಾಂಪೋ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಮುಕ್ರಂಪಾಡಿ, ಮುಕ್ವೆಮುಂಡೂರು ಫೀಡರ್‌ಗಳಲ್ಲಿ ಜು.13ರಂದು ಪೂರ್ವಾಹ ಗಂಟೆ 10ರಿಂದ ಅಪರಾಹ್ನ 5ರವರೆಗೆ ವಿದ್ಯುತ್‌ ನಿಲುಗಡೆ ಮಾಡಲಾಗುವುದು ಆದುದರಿಂದ, 10/33/11 ಕೆವಿ ಪುತ್ತೂರು ವಿದ್ಯುತ್‌ ಕೇಂದ್ರದಿಂದ ಮತ್ತು 33/11ಕೆಎ ಕ್ಯಾಂಪ್ಕೋ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್ ಗಳಿ೦ದ ವಿದ್ಯುತ್‌ ಸರಬರಾಜಾಗುವ ರಾಮಕು೦ಜ, ಹಿರೇಬಂಡಾಡಿ, ಬೆಳ್ಳಿಪ್ಪಾಡಿ ಕೋಡಿಂಬಾಡಿ, ಕೂರ್ನಡ್ಕ, ಕೆಮ್ಮಿಂಜೆ, ಮರೀಲ್‌, ಮುಕ್ರಂಪಾಡಿ, ಮೊಟ್ಟೆತ್ತಡ ಮುಂಡೂರು ಮತ್ತು ಸಂಪ್ಯ ಪರಿಸರದ ವಿದ್ಯುತ್‌ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಇಟ್ಟ ಬೇಡಿಕೆ ಏನು?: ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್!

Posted by Vidyamaana on 2023-12-20 09:51:04 |

Share: | | | | |


ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಇಟ್ಟ ಬೇಡಿಕೆ ಏನು?: ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್!

ಬೆಂಗಳೂರು : ರಾಜ್ಯದಲ್ಲಿರುವ ಬರ ಸಮಸ್ಸೆಗೆ ಪರಿಹಾರ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಅವರು, ಪ್ರಧಾನಿಗೆ ಕರ್ನಾಟಕ ಸರ್ಕಾರದ ಮನವಿ ಪತ್ರ ನೀಡಿ, ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.ರಾಜ್ಯದಲ್ಲಿ 236 ತಾಲೂಕುಗಳ ಪೈಕಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಎನ್‌.ಡಿ.ಆರ್‌.ಎಫ್. ನಿಂದ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ. ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ.


ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನುಪರಿಗಣಿಸುವಂತೆ ಮನವಿ ಮಾಡಿದ್ದೇನೆ. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದ್ದೇನೆ.



Leave a Comment: