ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


ಭೀಕರ ರಸ್ತೆ ಅಪಘಾತ ; ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಮುಕ್ವೆ ನಿವಾಸಿ ಸಫ್ವಾನ್ ನಿಧನ

Posted by Vidyamaana on 2024-02-22 06:28:44 |

Share: | | | | |


ಭೀಕರ ರಸ್ತೆ ಅಪಘಾತ ; ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಮುಕ್ವೆ ನಿವಾಸಿ ಸಫ್ವಾನ್ ನಿಧನ

ಪುತ್ತೂರು : ಸಂಪ್ಯ ಕಲ್ಲಾರ್ಪೆ ಸಮೀಪ  ಬುಧವಾರ ಸಂಜೆ ಟಿಪ್ಪರ್ ಹಾಗೂ ಬೈಕ್  ಮಧ್ಯೆ ಢಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಮುಕ್ವೆ ನಿವಾಸಿ  ಸಫ್ವಾನ್  ಅವರು ಚಿಕಿತ್ಸೆ ಫಲಕಾರಿಯಾಗದೆ ಫೆ 22 ರಂದು ಬೆಳಗ್ಗೆ ನಿಧಾನರಾದರು.

ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಕ್ವೆ ನಿವಾಸಿ ಅಬ್ದುಲ್ಲಾ ರವರ ಮಗ ಸಫ್ವಾನ್ ಗಂಭೀರ ಗಾಯಗೊಂಡಿದ್ದರು ಕೊಡಲೇ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆ ಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗೆ  ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ  ಸಾವನ್ನಪ್ಪಿದ್ದಾರೆ.

 ಸಂಪ್ಯ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಹ್ಲಿ ಆಕರ್ಷಕ ಶತಕ: ಟೀಮ್ ಇಂಡಿಯಾಕ್ಕೆ ಶರಣಾದ ಬಾಂಗ್ಲಾ

Posted by Vidyamaana on 2023-10-19 21:40:35 |

Share: | | | | |


ಕೊಹ್ಲಿ ಆಕರ್ಷಕ ಶತಕ: ಟೀಮ್ ಇಂಡಿಯಾಕ್ಕೆ ಶರಣಾದ ಬಾಂಗ್ಲಾ

ಪುಣೆ :ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಗುರುವಾರ ನಡೆಯುತ್ತಿರುವ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಬಾಂಗ್ಲಾದೇಶ ದ ವಿರುದ್ಧ ಭಾರತ 7 ವಿಕೆಟ್ ಗಳ ಅಮೋಘ ಗೆಲುವು ಸಾಧಿಸಿದೆ. ವಿರಾಟ್ ಕೊಹ್ಲಿ ಅವರ ಅಮೋಘ ಶತಕ ಪಂದ್ಯದ ಆಕರ್ಷಣೆಯಾಗಿತ್ತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾ ಗೆಲ್ಲಲು 257 ರನ್ ಗಳ ಗುರಿ ಭಾರತಕ್ಕೆ ನೀಡಿತ್ತು. ಗುರಿ ಬೆನ್ನಟ್ಟಿದ ಭಾರತಕ್ಕೆ ನಾಯಕ ರೋಹಿತ್ ಶರ್ಮ ಮತ್ತು ಶುಭಮನ್ ಗಿಲ್ ಉತ್ತಮ ಆರಂಭ ಒದಗಿಸಿಕೊಟ್ಟರು. 48 ರನ್ ಗಳಿಸಿದ್ದ ಶರ್ಮ ಹಸನ್ ಮಹಮೂದ್ ಎಸೆದ ಚೆಂಡನ್ನು ದೊಡ್ಡ ಹೊಡೆತಕ್ಕೆ ಮುಂದಾಗಿ ಬೌಂಡರಿ ಲೈನ್ ನಲ್ಲಿ ಹೃದೋಯ್ ಕ್ಯಾಚಿತ್ತು ನಿರ್ಗಮಿಸಿದರು. ಅರ್ಧ ಶತಕದಿಂದ ವಂಚಿತರಾದರು. ಗಿಲ್ 53 ರನ್ ಗಳಿಸಿ ಔಟಾದರು. ಶ್ರೇಯಸ್ ಅಯ್ಯರ್ 19 ರನ್ ಗಳಿಸಿ ಔಟಾದರು.


ಅಮೋಘ ಆಟವಾಡಿದ ಕೊಹ್ಲಿ ಭರ್ಜರಿ ಆಟವಾಡಿ ಅಜೇಯ ಶತಕ ಸಿಡಿಸಿದರು. 97 ಎಸೆತಗಳಲ್ಲಿ 103 ರನ್ ಗಳಿಸಿದರು. 6ಬೌಂಡರಿ ಮತ್ತು 4 ಸಿಕ್ಸರ್ ಅವರ ಇನ್ನಿಂಗ್ಸ್ ನಲ್ಲಿ ಒಳಗೊಂಡಿತ್ತು. ಕೊಹ್ಲಿ ಅವರಿಗೆ ಶತಕ ಸಂಭ್ರಮಿಸಲು ನೇರವಾದ ರಾಹುಲ್ ಔಟಾಗದೆ 34 ರನ್ ಗಳಿಸಿದರು.


ಬಾಂಗ್ಲಾ ಉತ್ತಮ ಆರಂಭ ಪಡೆಯಿತು. ತಂಜಿದ್ ಹಸನ್ ಮತ್ತು ಲಿಟ್ಟನ್ ದಾಸ್ ಮೊದಲ ವಿಕೆಟ್ ಗೆ 93 ರನ್ ಗಳ ಜತೆಯಾಟವಾಡಿದರು. ತಂಜಿದ್ ಹಸನ್ 51 ರನ್ ಮತ್ತು ಲಿಟ್ಟನ್ ದಾಸ್ 66 ರನ್ ಗಳಿಸಿ ಔಟಾದರು. ನಜ್ಮುಲ್ ಹೊಸೈನ್ ಶಾಂಟೊ 8, ಮೆಹಿದಿ ಹಸನ್ ಮಿರಾಜ್ 3 ರನ್ ಗಳಿಸಿ ಬೇಗನೆ ನಿರ್ಗಮಿಸಿದರು. ತೌಹಿದ್ ಹೃದಯ್ 16 ,ಮುಶ್ಫಿಕರ್ ರಹೀಮ್ 38, ನಸುಮ್ ಅಹ್ಮದ್ 14, ಮಹಮುದುಲ್ಲಾ 46 ರನ್ ಗಳಿಸಿ ಔಟಾದರುಭಾರತದ ಪರ ಬುಮ್ರಾ, ಸಿರಾಜ್ ಮತ್ತು ಜಡೇಜಾ ತಲಾ 2 ವಿಕೆಟ್ ಪಡೆದರು. ಶಾರ್ದೂಲ್ ಮತ್ತು ಕುಲದೀಪ್ ಒಂದೊಂದು ವಿಕೆಟ್ ಪಡೆಯುವಲ್ಲಿ ಯಶಸ್ವಿ ಯಾದರು

ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ

Posted by Vidyamaana on 2024-02-15 13:02:04 |

Share: | | | | |


ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ

ಬಂಟ್ವಾಳ : ಚಲಿಸುತ್ತಿರುವ ರೈಲಿನಿಂದ ಯುವತಿಯೋರ್ವಳು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿ.ಸಿ.ರೋಡ್ ಸಮೀಪದ ಕೈಕುಂಜೆ ಎಂಬಲ್ಲಿ ಗುರುವಾರ ಬೆಳಿಗ್ಗೆ 6. 30 ರ ವೇಳೆಗೆ ನಡೆದಿದೆ.


    ಈಕೆ ತುಮಕೂರು ಜಿಲ್ಲೆಯ ನಯನ್ ಎಂ.ಜಿ.(27) ಆಗಿರಬಹುದು ಎಂದು ಅವಳ ಬ್ಯಾಗ್ ನಲ್ಲಿ ಸಿಕ್ಕಿರುವ ಆಧಾರ್ ಕಾರ್ಡ್ ನ ಮಾಹಿತಿಯಂತೆ ಅಂದಾಜಿಸಲಾಗಿದೆ.


    ಆಧಾರ್ ಕಾರ್ಡ್ ನಲ್ಲಿ c/o ಎಮ್. ಗೋವಿಂದರಾಜು ಪಡಸಾಲೆಹಟ್ಟಿ, ಮಿಡಿಗೇಶಿ, ಮಧುಗಿರಿ ತಾಲೂಕು ತುಮಕೂರು ಜಿಲ್ಲೆ ಹೊಸಕರೆ ಎಂಬ ವಿಳಾಸವಿದ್ದು ಆಕೆ ಕಣ್ಣೂರು-ಬೆಂಗಳೂರು- ಮಂಗಳೂರು ರೈಲಿನಲ್ಲಿ ಬಂದಿದ್ದಾಳೆ.

ಅವಳು ಕುಳಿತು ಕೊಂಡಿದ್ದ ಸೀಟಿನಲ್ಲಿದ್ದ ಬ್ಯಾಗ್ ನ್ನು ರೈಲ್ವೆ ಸಿಬ್ಬಂದಿಗಳು ಬಿ.ಸಿ.ರೋಡಿನ ಕಚೇರಿಗೆ ನೀಡಿ ವಿಚಾರ ತಿಳಿಸಿದ್ದಾರೆ.

ಆಕೆಯ ಸ್ಪಷ್ಟ ವಿಳಾಸ ಮತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಯೇ ಅಥವಾ ಆಕಸ್ಮಿಕವಾಗಿ ಕೈತಪ್ಪಿ ಬಿದ್ದಿರಬಹುದೇ ಎಂದು ಇನ್ನೂ ಖಚಿತಗೊಂಡಿಲ್ಲ.

    ರೈಲಿನಲ್ಲಿದ್ದ ಪ್ರಯಾಣಿಕರು ರೈಲಿನಿಂದ  ಹಾರಿದ ಬಗ್ಗೆ ಮಾಹಿತಿ ನೀಡಿದ್ದಾರೆ. ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿದ್ದ ಮಹಿಳೆಯ ಮೃತದೇಹವನ್ನು ಗೂಡಿನಬಳಿಯ   ಮಹಮ್ಮದ್ ಮಮ್ಮು ನೇತ್ರತ್ವದ ಜೀವರಕ್ಷಕ ತಂಡದ ಇರ್ಶಾದ್ ಡ್ರೀಮ್ಸ್, ಮನ್ಸೂರ್ ವಝೀರ್ ಅವರು ಮೇಲಕ್ಕೆತ್ತಿದ್ದಾರೆ. ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

    ರೈಲ್ವೇ ಪೊಲೀಸರು ಹಾಗೂ ಬಂಟ್ವಾಳ ನಗರ ಪೋಲೀಸ್ ಠಾಣೆಯ ಸಹಾಯಕ ಉಪ ನಿರೀಕ್ಷಕ 

ದೇವಪ್ಪ, ಸಿಬ್ಬಂದಿ ವಿಜಯ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಕೆ

Posted by Vidyamaana on 2023-04-18 09:30:48 |

Share: | | | | |


ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಕೆ

ಸುಳ್ಯ: ಸುಳ್ಯ ವಿಧಾನಸಭಾ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮಂಗಳವಾರ ನಾಮಪತ್ರ ಸಲ್ಲಿಸಿದರು.

ಸುಳ್ಯದ ಶ್ರೀರಾಮ ಪೇಟೆಯಲ್ಲಿ ಮಾಜಿ ಸಚಿವ ಡಿ.ವಿದಾನಂದ ಗೌಡ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ನೂರಾರು ಬಿಜೆಪಿ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ತೆರಳಿ ಸುಳ್ಯ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವ ಅಂಗಾರ, ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಮೊದಲಾದವರು ಉಪಸ್ಥಿತರಿದ್ದರು.

ಪುತ್ತೂರು : ಅಡಿಕೆ ಕಳವು ಪ್ರಕರಣ : ಸೊತ್ತು ಸಹಿತ ಇಬ್ಬರು ಆರೋಪಿಗಳ ಬಂಧನ

Posted by Vidyamaana on 2023-08-30 23:02:37 |

Share: | | | | |


ಪುತ್ತೂರು : ಅಡಿಕೆ ಕಳವು ಪ್ರಕರಣ : ಸೊತ್ತು ಸಹಿತ ಇಬ್ಬರು ಆರೋಪಿಗಳ ಬಂಧನ

ಪುತ್ತೂರು : ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಸಮೀಪದ ನೆಕ್ಕರೆ ಕಾರ್ಮಿನ್ ಮಿರಾಂದ ಅವರ ಮನೆಯಿಂದ ಮೂರು ದಿನದ ಹಿಂದೆ ಲಕ್ಷ ರೂ. ಮೌಲ್ಯದ ಅಡಿಕೆ ಕಳವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಬ್ಬರನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.


ಮರೀಲು ನಿವಾಸಿ ಉಬೈದ್ ಮತ್ತು ಜಿಡೆಕಲ್ಲು ನಿವಾಸಿ ಮಹಮ್ಮದ್‌ ಇಝಾರ್ ಬಂಧಿತ ಆರೋಪಿಗಳು.



ಕಾರ್ಮಿನ್ ಮಿರಾಂದ ಅವರ ಮನೆಯ ಅಂಗಳದಲ್ಲಿ ಅವರ ತಾಯಿಗೆ ಸಂಬಂಧಿಸಿದ ಅಡಿಕೆ ಒಣಗಿಸಿ, ಅಡಿಕೆಯನ್ನು ಸುಲಿದು ತೂಕ ಮಾಡಿ ಇಟ್ಟಿದ್ದರು. ಸುಲಿದ 276 ಕೆ.ಜಿ. ಅಡಿಕೆಯನ್ನು 6 ಗೋಣಿಗಳಲ್ಲಿ ತುಂಬಿಸಿ ಮನೆಯ ಎದುರಿನ ಹಾಲ್‌ನಲ್ಲಿ ಇಡಲಾಗಿತ್ತು. ಆದರೇ ಸುಲಿದ ಅಡಿಕೆ ಮತ್ತು ಕೆಲಸಗಾರರಿಗೆ ನೀಡಲೆಂದು ಮನೆಯ ಬೆಡ್ ರೂಮಿನ ಕಪಾಟಿನಲ್ಲಿಟ್ಟಿದ್ದ 10 ಸಾವಿರ ರೂ. ಹಣ ಕಳವಾಗಿತ್ತು.


ಈ ಕುರಿತು ಕಾರ್ಮಿನ್ ಮಿರಾಂದ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.


ಆರೋಪಿಗಳನ್ನು ಕಾವೇರಿಕಟ್ಟೆಯ ಬಳಿಯಿಂದ ಆ.28 ರಂದು ರಾತ್ರಿ ವಶಕ್ಕೆ ಪಡೆದು ಅವರು ಕೃತ್ಯಕ್ಕೆ ಉಪಯೋಗಿಸಿದ ಬೈಕ್ ಮತ್ತು ಮೊಬೈಲ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕಳವು ಮಾಡಿ

ಕಾವೇರಿಕಟ್ಟೆ ಬಳಿಯ ಬಾಡಿಗೆ ಮನೆಯ ಕೊಠಡಿಯಲ್ಲಿ ದಾಸ್ತಾನು ಮಾಡಿದ್ದರೆನ್ನಲಾದ ಅಡಿಕೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ತಾತನ ಅಂತ್ಯಕ್ರಿಯೆಗೆ ಬರ್ತಿದ್ದ ಪುಳ್ಳಿ ಅಪಘಾತಕ್ಕೆ ಬಲಿ

Posted by Vidyamaana on 2023-11-29 11:38:52 |

Share: | | | | |


ತಾತನ ಅಂತ್ಯಕ್ರಿಯೆಗೆ ಬರ್ತಿದ್ದ ಪುಳ್ಳಿ ಅಪಘಾತಕ್ಕೆ ಬಲಿ

ಕುಂದಾಪುರ: ಇಲ್ಲಿನ ಶೇಡಿಮನೆ ಗ್ರಾಮದ ಪಾಟ್ಲಮಕ್ಕಿಯಲ್ಲಿನ ನಾರಾಯಣ ಪೂಜಾರಿ (70) ಅವರು ಮೃತಪಟ್ಟ ಸುದ್ದಿ ಕೇಳಿ

ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಬೈಕಿನಲ್ಲಿ ಆಗಮಿಸುತ್ತಿದ್ದ ಮೊಮ್ಮಗ ಅಪಘಾತದಲ್ಲಿ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ. ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಸಿಸ್ಟೆಂಟ್‌ ಜನರಲ್‌ ಮ್ಯಾನೇಜರ್‌, ಆಜ್ರಿ ಗ್ರಾಮದ ಚೌಕುಳಮಕ್ಕಿ ನಿವಾಸಿ ಚೆನ್ನ ಪೂಜಾರಿ ಹಾಗೂ ಇಂದಿರಾ ಅವರ ಏಕೈಕ ಪುತ್ರ ನಿತೀಶ್‌ ಪೂಜಾರಿ (20) ಮೃತ ಯುವಕ.



ಚಾಮರಾಜನಗರದ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ 2ನೆ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು ತಾಯಿ ಮನೆಯಲ್ಲಿ ಅಜ್ಜ ಮೃತಪಟ್ಟ ಸುದ್ದಿ ಕೇಳಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಆಗಮಿಸುವುದಾಗಿ ಹೇಳಿದ್ದ. ಅವಸರದಲ್ಲಿ ಊರಿಗೆ ಬರುವುದು ಬೇಡ ಎಂದು ಮನೆಯವರು ಹೇಳಿದ್ದರೂ ಎತ್ತಿ ಆಡಿಸಿದ ಅಜ್ಜನ ಮೇಲಿನ ಮೋಹದಿಂದ ತನ್ನ ಬೈಕಿನಲ್ಲಿ ಕುಂದಾಪುರಕ್ಕೆ ಹೊರಟಿದ್ದರು.


ರಸ್ತೆಗೆ ಬಿದ್ದು ಸಾವು

ಈ ಸಂದರ್ಭ ಚಾಮರಾಜನಗರ ತಾಲೂಕಿನ ಪಣ್ಯದಹಂಡಿ ಬಳಿ ರಸ್ತೆ ಮಧ್ಯದ ಹಂಪ್‌ ಅನ್ನು ಗಮನಿಸದೇ ಅಕಸ್ಮಾತ್ತಾಗಿ ರಸ್ತೆಗೆ ಬಿದ್ದು ಮೃತಪಟ್ಟಿದ್ದರು.


ಚಾಮರಾಜನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಳಿಕ ಯುವಕನ ಮೃತದೇಹವನ್ನು ತಂದು ಶೇಡಿ ಮನೆಯಲ್ಲಿ (ತಾಯಿಯ ತಂದೆ ಮನೆ)ಅಜ್ಜ ಮೊಮ್ಮಗನ ಶವಸಂಸ್ಕಾರವನ್ನು ಜತೆಯಾಗಿ ನಡೆಸಲಾಯಿತು.



Leave a Comment: