ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ಆರೋಪಿಗಳಿಗೆ ಪೊಲೀಸ್ ದೌರ್ಜನ್ಯದ ಆರೋಪ

Posted by Vidyamaana on 2023-05-18 13:25:46 |

Share: | | | | |


ಆರೋಪಿಗಳಿಗೆ ಪೊಲೀಸ್ ದೌರ್ಜನ್ಯದ ಆರೋಪ


ಪುತ್ತೂರು: ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿರುವ ಆರೋಪಿಗಳಿಗೆ ಡಿವೈಎಸ್‌ಪಿ ಕಚೇರಿಯಲ್ಲಿ ದೌರ್ಜನ್ಯ ನಡೆಯಲು, ಬಾಸುಂಡೆ ಬರುವ ರೀತಿಯಲ್ಲಿ ಹಲ್ಲೆಯಾಗಲು ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ, ಯಾರೆಲ್ಲಾ ಅಧಿಕಾರಿಗಳಿಗೆ ಕರೆ ಮಾಡಿ ಒತ್ತಡ ಹಾಕಿದ್ದಾರೋ ಅವರ ಹೆಸರನ್ನು ಎರಡು ದಿನದಲ್ಲಿ ಬಹಿರಂಗಪಡಿಸುವೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಬ್ಯಾನರ್ ಹಾಕಿದ ಆರೋಪಿಗಳಿಗೆ ಹಲ್ಲೆ ನಡೆಸಿದ್ದು ಕಾಂಗ್ರೆಸ್ಸಿನವರೇ, ಕಾಂಗ್ರೆಸ್ ಸರಕಾರ ಬಂದರೆ ಹೀಗೆಲ್ಲಾ ಆಗುತ್ತದೆ ಎಂದು ಪುತ್ತೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ ಭಟ್ ಆರೋಪಕ್ಕೆ ಖಾರವಾಗಿಯೇ ಉತ್ತರಿಸಿದ ಶಾಸಕ ಅಶೋಕ್ ರೈ ನನ್ನ ಕ್ಷೇತ್ರದಲ್ಲಿ ಅನ್ಯಾಯವಾದವರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ, ಪ್ರಕರಣದ ತನಿಖೆ ನಡೆಸಿ ತಪ್ಪತಸ್ಥರ ವಿರುದ್ದ ಎಫ್‌ಐಆರ್ ದಾಖಲಿಸಿ ಅಮಾನತು ಮಾಡುವಂತೆ ಸೂಚಿಸಿದ್ದೆ ಅದರಂತೆ ತನಿಖೆ ನಡೆಸಿ ತಪ್ಪತಸ್ಥರ ವಿರುದ್ದ ಕ್ರಮ ಜರುಗಿಸಲಾಗಿದೆ. ಅಧಿಕಾರಿಗಳ ಮೇಲೆ ಒತ್ತಡ ಹಾಕಿದವರ ಕಾಲ್ ಲಿಸ್ಟ್ ತೆಗೆದು ಅದನ್ನು ಎರಡು ದಿನದೊಳಗೆ ಬಹಿರಂಗಪಡಿಸುವೆ ಆವಾಗ ಪುತ್ತೂರಿನ ಜನತೆಗೆ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದರು.ಬೆಳ್ತಂಗಡಿ ಶಾಸಕ ಹರೀಶ್‌ಪೂಂಜರವರು ಪುತ್ತೂರಿಗೆ ಬಂದು ಈ ವಿಚಾರದಲ್ಲಿ ಮತನಾಡುವ ಅಗತ್ಯವಿಲ್ಲ. ನನ್ನ ಕ್ಷೇತ್ರದಲ್ಲಿ ಆಗಿರುವ ಘಟನೆಗೆ ನ್ಯಾಯ ಕೊಡಿಸುವ ಶಕ್ತಿ ನನಗಿದೆ ಎಂದು ಹೇಳಿದರು.

ಹಾಸನ ಶಿಕ್ಷಕಿ ಕಿಡ್ನಾಪ್ ಪ್ರಕರಣ ಸುಖಾಂತ್ಯ ಅತ್ತೆ ಮಗಳ ಅಪಹರಿಸಿದವನನ್ನು ಮಾವನಮನೆ ಗೆ ಕಳಿಸಿದ ಪೊಲೀಸರು!

Posted by Vidyamaana on 2023-12-01 08:29:57 |

Share: | | | | |


ಹಾಸನ ಶಿಕ್ಷಕಿ ಕಿಡ್ನಾಪ್ ಪ್ರಕರಣ ಸುಖಾಂತ್ಯ ಅತ್ತೆ ಮಗಳ ಅಪಹರಿಸಿದವನನ್ನು ಮಾವನಮನೆ ಗೆ ಕಳಿಸಿದ ಪೊಲೀಸರು!

ಕಡಬ: ಹಾಸನದಲ್ಲಿ ನಡೆದಿದ್ದ ಶಾಲಾ ಶಿಕ್ಷಕಿ ಕಿಟ್ರ್ಯಾಪ್ ಪ್ರಕರಣವನ್ನು ಪೊಲೀಸರು ಭೇಧಿಸಿದ್ದಾರೆ.


ಕಡಬ ತಾಲೂಕಿನ ನೆಲ್ಯಾಡಿ ಬಳಿ ಅಪಹರಣಕಾರರನ್ನು ಪತ್ತೆ ಹಚ್ಚಿರುವ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿವಾಹ ಮಾಡಿ ಕೊಡಲು ಒಪ್ಪದ ಕಾರಣಕ್ಕೆ ಹಾಸನ ನಗರದ ಹೊರ ವಲಯದ ಬಿಟ್ಟಗೌಡನಹಳ್ಳಿ ಬಳಿ ಖಾಸಗಿ ಶಾಲೆ ಶಿಕ್ಷಕಿಯನ್ನು ರಾಮು ಎಂಬಾತ ಅಪಹರಣ ಮಾಡಿದ್ದನು.

ನೆಲ್ಯಾಡಿ ಬಳಿ ಕಿಟ್ರ್ಯಾಪ್ ಮಾಡಿದ ಆರೋಪಿಗಳನ್ನು ಪತ್ತೆ ಹಚ್ಚಿದ ಹಾಸನ ಪೊಲೀಸರು ವಶಕ್ಕೆ ಪಡೆದು, ಅಪಹರಣಕ್ಕೊಳಗಾದ ಶಾಲಾ ಶಿಕ್ಷಕಿಯನ್ನು ಹಾಸನಕ್ಕೆ ಕರೆದೊಯ್ದಿದ್ದಾರೆ.

ಮದುವೆಗೆ ಒಪ್ಪದ ಅತ್ತೆ ಮಗಳನ್ನು ಸಂಬಂಧಿ ರಾಮು ಎಂಬಾತ ತನ್ನ ಗೆಳೆಯರ ಜೊತೆ ಸೇರಿ ಇನ್ನೋವಾ ಕಾರಿನಲ್ಲಿ ಕಿಟ್ರ್ಯಾಪ್ ಮಾಡಿದ್ದನು.

ಹಾಸನ ನಗರ ಪೊಲೀಸ್‌ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು.

ಅಂದು ನಾನು ಉಚ್ಚಾಟಿತ ವಿದ್ಯಾರ್ಥಿನಿ, ಇಂದು ನೀವು ಉಚ್ಚಾಟಿತ ವ್ಯಕ್ತಿ

Posted by Vidyamaana on 2024-05-29 05:52:26 |

Share: | | | | |


ಅಂದು ನಾನು ಉಚ್ಚಾಟಿತ ವಿದ್ಯಾರ್ಥಿನಿ, ಇಂದು ನೀವು ಉಚ್ಚಾಟಿತ ವ್ಯಕ್ತಿ

ಉಡುಪಿ, ಮೇ 28: ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಪಟ್ಟು ಸಡಿಲಿಸದೇ ಸುಪ್ರೀಂ ಕೋರ್ಟ್ ವರೆಗೂ ಹೋಗಿದ್ದ ಉಡುಪಿಯ ವಿದ್ಯಾರ್ಥಿನಿ ಅಲಿಯಾ ಅಸ್ಸಾದಿ, ಟ್ವಿಟರ್ ನಲ್ಲಿ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಪ್ರಶ್ನೆ ಮಾಡಿ ಅಣಕಿಸಿದ್ದಾರೆ.‌ 

ಟ್ವಿಟ್ಟರ್​ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಆಲಿಯಾ ಅಸ್ಸಾದಿ, ಅಂದು ಹಿಜಾಬ್‌ ಕಾರಣಕ್ಕಾಗಿ ನನ್ನನ್ನು ಕಾಲೇಜಿನಿಂದ ಹೊರದಬ್ಬಿದ್ರಿ. ಆ ಕಾರಣಕ್ಕಾಗಿ ನೀವು ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದ್ದೀರಿ. ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವುದನ್ನು ನೋಡುತ್ತಿದ್ದೇನೆ. ಅಂದು ನಾನು ಉಚ್ಚಾಟಿತ ವಿದ್ಯಾರ್ಥಿನಿ, ಇಂದು ನೀವು ಉಚ್ಚಾಟಿತ ವ್ಯಕ್ತಿ ಎಂದು ಮಾಜಿ ಶಾಸಕ ರಘುಪತಿ ಭಟ್ ಅವರ ಕಾಲೆಳೆಯುವ ಮೂಲಕ ಟಾಂಗ್ ಕೊಟ್ಟಿದ್ದಾರೆ.

ಜುಲೈ 31 ರಂದು ಸಿಎಂ ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

Posted by Vidyamaana on 2023-07-26 12:59:51 |

Share: | | | | |


ಜುಲೈ 31 ರಂದು ಸಿಎಂ ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

ಬೆಂಗಳೂರು: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ, ಜುಲೈ 31 ಕ್ಕೆ ವಿವಿಧ ಜಿಲ್ಲೆಗಳ ಪ್ರವಾಸ ಕೈಗೊಂಡು ಮಳೆ ಹಾನಿ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.


ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಜನರನ್ನು ಭೇಟಿಯಾಗಿ ಅವರ ಕಷ್ಟಗಳನ್ನು ಆಲಿಸಲಾಗುವುದು ಎಂದು ತಿಳಿಸಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇಕಡಾ 100 ರಷ್ಟು ಬಿತ್ತನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ

ಇಂದು (ಜೂನ್ 30)ಹಾಜಿ ಮುಸ್ತಫಾ ಕೆಂಪಿ ಅವರಿಗೆ ಹುಟ್ಟೂರ ಸಂತಾಪ

Posted by Vidyamaana on 2023-06-30 04:42:52 |

Share: | | | | |


ಇಂದು (ಜೂನ್ 30)ಹಾಜಿ ಮುಸ್ತಫಾ ಕೆಂಪಿ ಅವರಿಗೆ ಹುಟ್ಟೂರ ಸಂತಾಪ

ಉಪ್ಪಿನಂಗಡಿ: ಇತ್ತೀಚೆಗಷ್ಟೇ ನಿಧನರಾದ ಮುಸ್ತಫಾ ಕೆಂಪಿ ಹಾಜಿ ಅವರಿಗೆ ಶ್ರದ್ಧಾಂಜಲಿ ಕೋರಿ ಜೂನ್ 30ರಂದು ಸಂಜೆ 4.30ಕ್ಕೆ ಉಪ್ಪಿನಂಗಡಿ ಎಚ್.ಎಂ. ಹಾಲ್ ನಲ್ಲಿ ಹುಟ್ಟೂರ ಸಂತಾಪ ಆಯೋಜಿಸಲಾಗಿದೆ.

ನಾಡಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಅವಿಶ್ರಾಂತ ದುಡಿದ ಉಪ್ಪಿನಂಗಡಿಯ ಹೆಮ್ಮೆಯ ಪುತ್ರ ಮುಸ್ತಫಾ ಕೆಂಪಿ ಅವರಿಗೆ ಉಪ್ಪಿನಂಗಡಿ ನಾಗರಿಕರ ವತಿಯಿಂದ ಹುಟ್ಟೂರ ಸಂತಾಪ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಚಿಕ್ಕಮಗಳೂರು : ಮರಕ್ಕೆ ಕಾರು ಡಿಕ್ಕಿ ಶ್ರೀನಿವಾಸ್ ಶ್ವೇತಾ ದಂಪತಿ ಸ್ಥಳದಲ್ಲೇ ಸಾವು

Posted by Vidyamaana on 2023-04-21 17:37:05 |

Share: | | | | |


ಚಿಕ್ಕಮಗಳೂರು : ಮರಕ್ಕೆ ಕಾರು ಡಿಕ್ಕಿ ಶ್ರೀನಿವಾಸ್ ಶ್ವೇತಾ ದಂಪತಿ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು : ಮರಕ್ಕೆ ಕಾರು ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಗ್ರಾಮದ ಬಳಿ ನಡೆದಿದೆ. ಶ್ರೀನಿವಾಸ್ ಹಾಗೂ ಶ್ವೇತಾ ಮೃತ ದಂಪತಿ. ಘಟನೆಯಲ್ಲಿ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಟುಂಬಸ್ಥರ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ದಂಪತಿ ಮಕ್ಕಳೊಂದಿಗೆ ಬೆಂಗಳೂರಿನಿಂದ ಭದ್ರಾವತಿಗೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Leave a Comment: